Spanish Para-Badminton: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ - Vistara News

ಕ್ರೀಡೆ

Spanish Para-Badminton: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ

ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಅದರಲ್ಲೂ ದೇಶಕ್ಕಾಗಿ ಪದಕ ಗೆಲ್ಲುವುದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ ಎಂದು ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ಸುಹಾಸ್ ಯತಿರಾಜ್ ಹೇಳಿದ್ದಾರೆ.

VISTARANEWS.COM


on

Spanish Para-Badminton: Bronze medalist Kannadiga Suhas returns home
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ, ಕನ್ನಡಿಗ ಸುಹಾಸ್ ಯತಿರಾಜ್(Suhas Lalinakere Yathiraj) ಅವರು ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಇಂಟರ್‌ನ್ಯಾಶನಲ್‌ನಲ್ಲಿ(Spanish Para-Badminton) ಕಂಚಿನ ಪದಕ ಗೆದ್ದು ಮಂಗಳವಾರ (ಫೆ.28) ಬೆಳಗ್ಗೆ ಸ್ವದೇಶಕ್ಕೆ ಮರಳಿದ್ದಾರೆ.

ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ ಸುಹಾಸ್‌ ಹಾಸನ ಮೂಲದ ಐಎಎಸ್ ಅಧಿಕಾರಿಯಾಗಿದ್ದಾರೆ. ಸ್ಪ್ಯಾನಿಷ್ ಪ್ಯಾರಾ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದ ಅವರು ಮಂಗಳವಾರ(ಫೆ.28) ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಇದೇ ವೇಳೆ ಮಾತನಾಡಿದ ಸುಹಾಸ್, “ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಅದರಲ್ಲೂ ದೇಶಕ್ಕಾಗಿ ಪದಕ ಗೆಲ್ಲುವುದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ. ಯಾವಾಗಲೂ ಅತ್ಯುತ್ತಮ ಆಟ ಪ್ರದರ್ಶನಕ್ಕೆ ಪ್ರಯತ್ನ ನಡೆಸುತ್ತಿರುತ್ತೇನೆ” ಎಂದು ಹೇಳಿದರು.

ಎಸ್‌ಎಲ್‌4 ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಕರ್ನಾಟಕ ಮೂಲದ ಸುಹಾಸ್‌ ಯತಿರಾಜ್‌ ಅವರು ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಫೈನಲ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್‌ ಪದಕ ಗೆದ್ದ ಮೊದಲ ಐಎಎಸ್‌ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು.

ಇದನ್ನೂ ಓದಿ 20km Race Walk: ಚಿನ್ನ ಗೆದ್ದ ಪ್ರಿಯಾಂಕಾ, ಅಕ್ಷದೀಪ್‌ಗೆ ಒಲಿಂಪಿಕ್ಸ್ ಟಿಕೆಟ್‌

2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸುಹಾಸ್‌, ದುರ್ಬಲ ಕಾಲನ್ನು ಹೊಂದಿದ್ದಾರೆ. ಕಾಲಿನಲ್ಲಿ ತೀವ್ರ ಬಲಹೀನತೆಯಿದ್ದರೆ ಅಂತಹವರನ್ನು ಎಸ್‌ಎಲ್‌4 ವಿಭಾಗಕ್ಕೆ ಸೇರಿಸಲಾಗುತ್ತದೆ. ಇಂತಹ ಸಮಸ್ಯೆಗಳ ಮಧ್ಯೆಯೂ ಸುಹಾಸ್‌ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Shreyanka Patil: ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Shreyanka Patil
Koo

ಬೆಂಗಳೂರು: ಟೀಮ್​ ಇಂಡಿಯಾದ ಹಾಗೂ ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್(shreyanka patil dance)​ ಹಾಕಿದ ವಿಡಿಯೊವೊಂದು ವೈರಲ್​ ಆಗಿದೆ.

ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಶ್ರೇಯಾಂಕಾ ಪಾಟೀಲ್ ಕೂಡ ಭಾಗಿಯಾಗಿದ್ದರು. ಇದೇ ವೇಳೆ ಅವರು ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿ ಮಿಂಚಿದರು. ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಕೂಡಾ ಫಿದಾ ಆಗಿದ್ದರು.

ಈ ನೃತ್ಯದ ವಿಡಿಯೊವನ್ನು ಸಮರ್ಜಿತ್ ಲಂಕೇಶ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಧನ್ಯವಾದ ಕೂಡ ತಿಳಿಸಿದ್ದಾರೆ. “ನಮ್ಮ ಚಿತ್ರದ ಟೀಸರ್ ಬಿಡುಗಡೆಗೆ ತುಂಬಾ ಶಕ್ತಿ ತಂದಿದ್ದಕ್ಕಾಗಿ. ಮೈದಾನದಲ್ಲಿ ಮತ್ತು ಹೊರಗೆ ಅದ್ಭುತವಾದ ಪ್ರದರ್ಶನ ತೋರಿದ್ದಕ್ಕೆ ಈ ನರ್ತಕಿಯನ್ನು ಮರೆಯಬಾರದು… ನಮ್ಮ RCB ರಾಣಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ಚಿತ್ರ ಇದಾಗಿದೆ. ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.


ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

21 ವರ್ಷದ ಶ್ರೇಯಾಂಕಾ ಪಾಟೀಲ್ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಆರ್‌ಸಿಬಿ ಮಹಿಳಾ ತಂಡಕ್ಕೆ ಆಯ್ಕೆಯಾದರು. ಇಲ್ಲಿ ತೋರಿದ ಪ್ರದರ್ಶನದಿಂದ ಅವರು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡುವಂತೆ ಮಾಡಿತ್ತು. ಹಂತ ಹಂತವಾಗಿ ಬೆಳೆದ ಇವರು 2023ರಲ್ಲಿ 21 ವಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವಕಾಶ ಪಡೆದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

Continue Reading

ಕ್ರಿಕೆಟ್

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

India Head Coach: ದೈನಿಕ್ ಜಾಗರಣ್‌ ವರದಿ ಪ್ರಕಾರ, ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಆದರೆ, ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ‘ಒಂದು ಷರತ್ತು’ ಹೊಂದಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ. ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿದ್ಧರಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

India Head Coach
Koo

ಮುಂಬಯಿ: ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್(Dravid ) ಅವರು ಟೀಮ್​ ಇಂಡಿಯಾದ ಕೋಚ್(India Head Coach)​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈಗಾಗಲೇ ಬಿಸಿಸಿಐ ನೂತನ ಕೋಚ್​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಮೇ 27 ಕೊನೆಯ ದಿನವಾಗಿದೆ. ಸದ್ಯ ಕೋಚ್​ ಹುದ್ದೆ ಅಲಂಕರಿಸಲು ಮಾಜಿ ವಿದೇಶಿ ಆಟಗಾರರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಮುಖ್ಯ ಕೋಚ್ ಹುದ್ದೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಹುಡುಕಾಟವನ್ನು ತೀವ್ರಗೊಳಿಸಿದೆ. ಇದರ ಬೆನ್ನಲ್ಲೇ ಗೌತಮ್ ಗಂಭೀರ್(Gautam Gambhir) ತಮ್ಮ ಒಂದು ಷರತ್ತು ಒಪ್ಪಿದರೆ ಕೋಚ್​ ಆಗಲು ಸಿದ್ಧ ಎಂದು ಹೇಳಿದ್ದಾರೆ.

ದೈನಿಕ್ ಜಾಗರಣ್‌ ವರದಿ ಪ್ರಕಾರ, ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಆದರೆ, ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ‘ಒಂದು ಷರತ್ತು’ ಹೊಂದಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ. ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿದ್ಧರಿದ್ದಾರೆ ಎಂದು ವರದಿಯಾಗಿದೆ.

ಕೋಚ್​ ಹುದ್ದೆಗಾಗಿ ಎಷ್ಟು ಅರ್ಜಿಗಳು ಬಂದಿದೆ ಎಂಬುದರ ಬಗ್ಗೆ ಸದ್ಯ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಸಂಪರ್ಕಿಸಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈಗಾಗಲೇ ಹೇಳಿದ್ದಾರೆ. ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದರೆ ಮತ್ತು ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡರೆ, ಕೋಲ್ಕತ್ತಾ ನೈಟ್ ರೈಡರ್ಸ್‌ನ ಮಾರ್ಗದರ್ಶಕ ಸ್ಥಾನವನ್ನು ತೊರೆಯಬೇಕಾಗುತ್ತದೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ India Head Coach: ಕೋಚ್​ ಆಗುವ ಮುನ್ನ ಏನೆಲ್ಲಾ ಕಷ್ಟ ಇದೆ ಎಂದು ರಾಹುಲ್​ ನೀಡಿದ ಸಲಹೆಯನ್ನು ಬಹಿರಂಗಪಡಿಸಿದ ಲ್ಯಾಂಗರ್

ತಿರುಗೇಟು ಕೊಟ್ಟ ಜಯ್​ ಶಾ


ಆಸ್ಟ್ರೇಲಿಯಾದ ಮಾಜಿ ಆಟಗಾರರು ಭಾರತ ತಂಡದ ಕೋಚ್​ ಹುದ್ದೆಯ ಬಗ್ಗೆ ನಿರಾಸಕ್ತಿಕ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಈ ಎಲ್ಲ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರ ಹುದ್ದೆಗೆ ನಾವು ಯಾವುದೇ ಆಸ್ಟ್ರೇಲಿಯಾದವರನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೋಚಿಂಗ್​ ಹುದ್ದೆಯ ಬಗ್ಗೆ ನೀಡುತ್ತಿರುವ ವದಂತಿಗಳನ್ನು ನಂಬಬಾರದು ಎಂದು ತಿಳಿಸಿದ್ದಾರೆ.

“ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಕೋಚಿಂಗ್‌ ಆಫರ್‌ನೊಂದಿಗೆ ಸಂಪರ್ಕಿಸಿಲ್ಲ. ಕೆಲವು ಮಾಧ್ಯಮ ವಿಭಾಗಗಳಲ್ಲಿ ಪ್ರಸಾರವಾಗುವ ವರದಿಗಳು ಸಂಪೂರ್ಣವಾಗಿ ತಪ್ಪಾಗಿದೆ. ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ಒಂದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ” ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

Malaysia Masters Final: ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

Malaysia Masters Final: ಶನಿವಾರ ರಾತ್ರಿ ನಡೆದಿದ್ದ ಮಹಿಳಾ ಸಿಂಗಲ್ಸ್​ ವಿಭಾಗದ ತೀವ್ರ ಪೈಪೋಟಿಯ ಸೆಮಿಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ ಸಿಂಧು ಥಾಯ್ಲೆಂಡ್‌ನ‌ 20ನೇ ಶ್ರೇಯಾಂಕದ ಆಟಗಾರ್ತಿ ಬುಸಾನನ್‌(Busanan Ongbamrungphan) ವಿರುದ್ಧ 13-21, 21-16, 21-12 ಅಂತರದಿಂದ ಗೆಲುವು ಸಾಧಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು.

VISTARANEWS.COM


on

Malaysia Masters Final
Koo

ಕೌಲಾಲಂಪುರ: ಕಳೆದೆರಡು ವರ್ಷಗಳಿಂದ ಪ್ರಶಸ್ತಿ ಬರ ಎದುರಿಸುತ್ತಿದ್ದ ಭಾರತದ ತಾರಾ ಶಟ್ಲರ್ ಪಿ.ವಿ.ಸಿಂಧು(PV Sindhu)ಗೆ ಮತ್ತೆ ನಿರಾಸೆ ಉಂಟಾಗಿದೆ. ಭಾನುವಾರ ಇಲ್ಲಿ ನಡೆದ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್(Malaysia Masters final) ಟೂರ್ನಿಯ ಫೈನಲ್‌ನಲ್ಲಿ ಚೀನಾದ ವಾಂಗ್‌ ಝಿ ಯಿ ವಿರುದ್ಧ ಸೋಲು ಕಂಡಿದ್ದಾರೆ.

ಭಾನುವಾರ ನಡೆದ ಮಹಿಳಾ ಸಿಂಗಲ್ಸ್​ನ ಮೂರು ಗೇಮ್​ಗಳ ಮ್ಯಾರಥಾನ್‌ ಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ, 15ನೇ ರ್‍ಯಾಂಕ್‌ನ ಸಿಂಧು ಚೀನಾದ ದ್ವಿತೀಯ ಶ್ರೇಯಾಂಕದ ಹಾಗೂ 7ನೇ ರ್‍ಯಾಂಕ್‌ನ ವಾಂಗ್‌ ಝಿ ಯಿ ವಿರುದ್ಧ 21-16, 5-21, 21-16 ಗೇಮ್​ಗಳ ಅಂತರದಿಂದ ಸೋಲು ಕಂಡರು. ಇದು ವಾಂಗ್‌ ಝಿ ಯಿ(Wang Zhi Yi) ವಿರುದ್ಧ ಸಿಂಧುಗೆ ಎದುರಾದ 2ನೇ ಸೋಲಾಗಿದೆ. ಒಟ್ಟು 4 ಬಾರಿ ಉಭಯ ಆಟಗಾರ್ತಿಯರು ಮುಖಾಮುಖಿಯಾಗಿದ್ದಾರೆ.

ಇದನ್ನು ಓದಿ ಪಿ.ವಿ ಸಿಂಧು-ನೀರಜ್ ಚೋಪ್ರಾ ಮಧ್ಯೆ ಪ್ರೇಮಾಂಕುರ? ಅನುಮಾನ ಹುಟ್ಟಿಸಿದ​ ಪೋಸ್ಟ್​!

ಮೊದಲ ಗೇಮ್​ನಲ್ಲಿ ಅತ್ಯಂತ ಜೋಶ್​ನಿಂದ ಆಡಿದ ಸಿಂಧು 21-16 ಗೇಮ್​ಗಳ ಅಂತರದಿಂದ ಗೆದ್ದು ಮುನ್ನಡೆ ಸಾಧಿಸಿದರು. ಆದರೆ, ದ್ವಿತೀಯ ಗೇಮ್​ನಲ್ಲಿ ತಿರುಗಿ ಬಿದ್ದ ವಾಂಗ್‌ ಝಿ ತಮ್ಮ ಬಲಿಷ್ಠ ಹೊಡೆತಗಳ ಮೂಲಕ 21-5 ಅಂತರದ ಗೆಲುವು ಸಾಧಿಸಿ ಪಂದ್ಯವನ್ನು 1-1 ಸಮಬಲಕ್ಕೆ ತಂದರು. ಅಂತಿಮ ಹಾಗೂ ನಿರ್ಣಾಯಕ ಗೇಮ್‌ನಲ್ಲಿ ಇವರಿಬ್ಬರ ನಡುವೆ ತೀವ್ರ ಪೈಪೋಟಿಯೇ ನಡೆಯಿತು. ಆರಂಭದಲ್ಲಿ ಭಾರೀ ಹಿನ್ನಡೆಯಲ್ಲಿದ್ದ ವಾಂಗ್‌ ಝಿ ಆ ಬಳಿಕ ಸತತವಾಗಿ ಅಂಕಗಳಿಸಿ 14-13 ಮುನ್ನಡೆ ಕಾಯ್ದುಕೊಂಡರು. ಆನಂತರವೂ ಸತತ ಅಂಕಗಳಿಂದ ಪಂದ್ಯವನ್ನು ಗೆದ್ದು ಬೀಗಿದರು.

ಸಿಂಧು 2022ರಲ್ಲಿ ಸ್ವಿಸ್ ಓಪನ್, ಸಿಂಗಾಪೂರ ಓಪನ್, ಸೆಯ್ಯದ್ ಮೋದಿ ಇಂಟರ್‌ನ್ಯಾಷನಲ್ ಟೂರ್ನಿಯಲ್ಲಿ ಗೆದ್ದಿದ್ದರು. ಆ ಬಳಿಕ ಯಾವುದೇ ಟೂರ್ನಿಯಲ್ಲಿ ಚಾಂಪಿಯನ್ ಆಗಿಲ್ಲ. ಕಳೆದ ವರ್ಷ ಸ್ಪೇನ್ ಮಾಸ್ಟರ್ಸ್ ಫೈನಲ್‌ಗೇರಿ ಸೋತಿದ್ದರು. ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಅವರಿಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಮಲೇಷ್ಯಾ ಮಾಸ್ಟರ್ಸ್ ಮೂಲಕ 2 ವರ್ಷಗಳ ಬಳಿಕ ಪ್ರಶಸ್ತಿಯೊಂದನ್ನು ಗೆಲ್ಲುವ ಇರಾದೆಯಲ್ಲಿದ್ದ ಸಿಂಧುಗೆ ಫೈನಲ್​ನಲ್ಲಿ ವಾಂಗ್‌ ಝಿ ಅಡಗಾಲಿಕ್ಕಿದರು.

ಶನಿವಾರ ರಾತ್ರಿ ನಡೆದಿದ್ದ ಮಹಿಳಾ ಸಿಂಗಲ್ಸ್​ ವಿಭಾಗದ ತೀವ್ರ ಪೈಪೋಟಿಯ ಸೆಮಿಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ ಸಿಂಧು ಥಾಯ್ಲೆಂಡ್‌ನ‌ 20ನೇ ಶ್ರೇಯಾಂಕದ ಆಟಗಾರ್ತಿ ಬುಸಾನನ್‌(Busanan Ongbamrungphan) ವಿರುದ್ಧ 13-21, 21-16, 21-12 ಅಂತರದಿಂದ ಗೆಲುವು ಸಾಧಿಸಿದ್ದರು. ಕ್ವಾರ್ಟರ್​ ಫೈನಲ್‌ ಪಂದ್ಯದಲ್ಲಿ ವಿಶ್ವ ನಂ.6, ಚೀನಾದ ಹ್ಯಾನ್‌ ಯು ವಿರುದ್ಧ ತೀವ್ರ ಹೋರಾಟ ನಡೆಸಿ ಸಿಂಧು 21-13, 14-21, 21-12ಅಂತರದಲ್ಲಿ ಗೆಲುವು ಸಾಧಿಸಿದ್ದರು.

Continue Reading

ಕ್ರೀಡೆ

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

T20 World Cup 2024: “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಜೂನ್​ 1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡದ(Team India) ಮೊದಲ ಬ್ಯಾಚ್ ನ್ಯೂಯಾರ್ಕ್​ಗೆ ಪ್ರಯಾಣಿಸಿದೆ. ಶನಿವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ತಂಡದ ನಾಯಕ ರೋಹಿತ್​, ಶರ್ಮ, ಕೋಚ್ ರಾಹುಲ್​ ದ್ರಾವಿಡ್​, ರವೀಂದ್ರ ಜಡೇಜಾ, ಕುಲ್​ದೀಪ್​ ಯಾದವ್​, ಮೊಹಮ್ಮದ್ ಸಿರಾಜ್​ ಸೇರಿ ಹಲವು ಆಟಗಾರರು ಮತ್ತು ಕೋಚಿಂಗ್​ ಸಿಬ್ಬಂದಿಗಳು ಪ್ರಯಾಣಿಸಿದರು. ಆದರೆ ವಿರಾಟ್​ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ.

ವಿರಾಟ್​ ಕೊಹ್ಲಿ ಅವರು ಮೇ 30ಕ್ಕೆ ಏಕಾಂಗಿಯಾಗಿ ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ, ಜತೆಗೆ ಜೂನ್​ 1ರಂದು ನಡೆಯುವ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಕೊಹ್ಲಿ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೊಹ್ಲಿ ಅಲ್ಲದೆ, ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ದುಬೈನಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ತಂಡ ಸೇರಲು ತಡವಾಗಲಿದೆ ಎಂದು ಸಂಜು ಈಗಾಗಲೇ ಬಿಸಿಸಿಐಗೆ ತಿಳಿಸಿರುವ ಕಾರಣ ಬಿಸಿಸಿಐ ಸ್ಯಾಮ್ಸನ್​ಗೆ ತಡವಾಗಿ ತಂಡ ಸೇರಲು ಅವಕಾಶ ನೀಡಿದೆ. ಭಾರತೀಯ ಆಟಗಾರರ ದ್ವಿತೀಯ ಬ್ಯಾಚ್ ಸೋಮವಾರ ಹೊರಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದ್ನನೂ ಓದಿ T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading
Advertisement
Road Accident
ಕರ್ನಾಟಕ5 mins ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Porsche Car Crash
ದೇಶ6 mins ago

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Electric Scooters
ಪ್ರಮುಖ ಸುದ್ದಿ6 mins ago

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Shreyanka Patil
ಕ್ರೀಡೆ13 mins ago

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Kendall Jenner American model flaunted
ಬಾಲಿವುಡ್36 mins ago

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

How To Get Rid Of Cockroaches
ಲೈಫ್‌ಸ್ಟೈಲ್40 mins ago

How To Get Rid Of Cockroaches: ಜಿರಳೆಗಳು ಮನೆಯೊಳಗೆ ಬರದಂತೆ ಮಾಡುವ ಈ ಉಪಾಯಗಳು ನಿಮಗೆ ತಿಳಿದಿದೆಯೆ?

Lockup Death
ಕರ್ನಾಟಕ42 mins ago

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

theft Case in Raichur
ರಾಯಚೂರು42 mins ago

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Swati Maliwal
ದೇಶ49 mins ago

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

India Head Coach
ಕ್ರಿಕೆಟ್59 mins ago

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌