ಪಾಪ್‌ಕಾರ್ನ್‌ ಪ್ರಿಯರೇ ಎಚ್ಚರ; ಬಾಯಿಂದ ಎಣ್ಣೆ ಪ್ಯಾಕೆಟ್‌ ಓಪನ್‌ ಮಾಡುತ್ತಿದ್ದವ ಅಂದರ್‌ - Vistara News

ಕರ್ನಾಟಕ

ಪಾಪ್‌ಕಾರ್ನ್‌ ಪ್ರಿಯರೇ ಎಚ್ಚರ; ಬಾಯಿಂದ ಎಣ್ಣೆ ಪ್ಯಾಕೆಟ್‌ ಓಪನ್‌ ಮಾಡುತ್ತಿದ್ದವ ಅಂದರ್‌

ಬೆಂಗಳೂರಿನ ಲಾಲ್‌ಬಾಗ್‌ ಬಳಿ ಬಾಯಲ್ಲಿ ಎಣ್ಣೆ ಪ್ಯಾಕೆಟ್‌ ತೆಗೆದು ಪಾಪ್‌ಕಾರ್ನ್‌ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

popcorn
ಪ್ರಾತಿನಿಧಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಯಲ್ಲಿ ಎಣ್ಣೆ ಪ್ಯಾಕೆಟ್‌ ಹರಿದು ಆ ಎಣ್ಣೆಯನ್ನೇ ಪಾಪ್‌ ಕಾರ್ನ್‌ ಮಾಡಲು ಬಳಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.

21 ವರ್ಷದ ನಯಾಜ್‌ ಪಾಷಾ ಬಿನ್‌ ರಿಯಾಜ್‌ ಪಾಷಾ ಎಂಬಾತ ಲಾಲ್‌ಬಾಗ್‌ ರಸ್ತೆಯಲ್ಲಿ ಪಾಪ್‌ ಕಾರ್ನ್‌ ಮಾರಾಟ ಮಾಡ್ತಿದ್ದ. ಈತ ಎಣ್ಣೆ ಪ್ಯಾಕೆಟ್‌ನ್ನು ಬಾಯಲ್ಲಿ ಹರಿಯುತ್ತಿದ್ದ. ಆ ಎಣ್ಣೆಯನ್ನೇ ಹಾಕಿ ಪಾಪ್‌ಕಾರ್ನ್‌ ತಯಾರಿ ಮಾಡುತ್ತಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು, ಎಂಜಲು ಮಾಡಿದ ಪಾಪ್‌ಕಾರ್ನ್‌ ಮಾರಾಟ ಮಾಡುತ್ತೀಯ ಎಂದು ಆತನ ಜತೆ ಗಲಾಟೆ ಮಾಡಿದ್ದರು.

ಇದನ್ನು ಓದಿ| PSI Scam | ಫಸ್ಟ್ ರ‍್ಯಾಂಕ್‌ ಕುಶಾಲ್‌ ಅರೆಸ್ಟ್‌

ಈ ವೇಳೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಆಗ ಸಾರ್ವಜನಿಕರು, ಈತ ಪಾಪ್‌ಕಾರ್ನ್‌ ಮಾಡಲು ಬಳಸುವ ಎಣ್ಣೆಯಲ್ಲಿ ಎಂಜಲು ಹಾಕಿ ಸಾರ್ಜಜನಿಕರಿಗೆ ಮಾರಾಟ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಬಳಿಕ ಆತನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ಯದಿದ್ದಾರೆ.

ಘಟನೆ ಸಂಬಂಧ ಸಾರ್ವಜನಿಕರು ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ದೂರಿನ್ವಯ ಸಿದ್ದಾಪುರ ಪೊಲೀಸರು ನಯಾಜ್‌ನನ್ನು ಬಂಧನಕ್ಕೆ ಪಡೆದಿದ್ದಾರೆ. ಆತನ ವಿರುದ್ದ ಎಫ್‌ಐಆರ್‌ ದಾಖಲಾಗಿದೆ. ಆತ ಪಾಪ್‌ ಕಾರ್ನ್‌ ಮಾಡಲು ಬಳಸುತ್ತಿದ್ದ ಯಂತ್ರವನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

Road Accident : ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Chitradurga News
Koo

ಚಿತ್ರದುರ್ಗ : ಶನಿವಾರ ಮುಂಜಾನೆ ವೇಳೆಗೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ(Road Accident) ನಡೆದಿದೆ. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ನಿಗದಿತ ಕಾರ್ಯಕ್ರಮವನ್ನು ಉದ್ದೇಶವಾಗಿಟ್ಟುಕೊಂಟು ಅವರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದರೆ ಯಮಧರ್ಮರಾಯನಂತೆ ನುಗ್ಗಿದ ಲಾರಿಯು ಹಿಂಬದಿಂದ ಜೋರಾಗಿ ಗುದ್ದಿದೆ. ದೊಡ್ಡ ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಡಿವೈಡರ್ ಕಲ್ಲುಗಳಿಗೆ ಬಡಿದು ಕಾರು ಪಲ್ಟಿ

ರಸ್ತೆ ಮಧ್ಯೆ ಇಟ್ಟಿದ್ದ ಕಲ್ಲಿಗೆ ಕಾಣದೇ ಗುದ್ದಿದ ಕಾರೊಂದು ಪಲ್ಟಿಯಾ ಘಟನೆ ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ;ಮಧ್ಯಾಹ್ನ1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ

ಮಣಿಪಾಲದಿಂದ ಉಡುಪಿಯತ್ತ ಬರುತ್ತಿದ್ದ ಫೋರ್ಡ್ ಫಿಗೊ ಕಾರು ರಸ್ತೆ ಮಧ್ಯದಲ್ಲಿ ನಿರ್ಲಕ್ಷ್ಯದಿಂದ ಇಡಲಾಗಿದ್ದ ಕಲ್ಲಿಗೆ ಗುದ್ದಿದೆ. ಕಾರು ಡಿವೈಡರ್ ಕಲ್ಲಿಗೆ ಡಿಕ್ಕಿ ಹೊಡೆದ ತಕ್ಷಣ ಕಲ್ಲಿನ ತುಂಡೊಂದು ಹಾರಿ ಸಮೀಪದಲ್ಲಿ ಹೋಗುತ್ತಿದ್ದ ಹಾರಿ ಬೈಕ್ ಗೂ ತೀವ್ರ ಹಾನಿಯಾಗಿದೆ. ಆದರೆ, ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ.

ರಸ್ತೆ ಮಧ್ಯೆ ವಿಭಜಕವನ್ನು ನಿರ್ಮಿಸಲು ಬಳಸುತ್ತಿದ್ದ ಕಲ್ಲುಗಳನ್ನು ಎಲ್ಲೆಂದರಲ್ಲಿ ಇಡಲಾಗಿತ್ತು. ಮುಂಜಾನೆ ವೇಳೆ ಹೆಡ್​ ಲೈಟ್ ಪ್ರಭಾವಕ್ಕೆ ಕಲ್ಲುಗಳು ಇರುವುದನ್ನು ಅರಿಯದ ಚಾಲಕ ಅದಕ್ಕೆ ಡಿಕ್ಕಿ ಹೊಡೆದಿದ್ದಾನೆ.

Continue Reading

ಪ್ರಮುಖ ಸುದ್ದಿ

Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ;ಮಧ್ಯಾಹ್ನ1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ

Namma Metro: ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಲಭ್ಯ ಲಭ್ಯವಿರುವುದಿಲ್ಲ. ರೈಲು ಸೇವೆಗಳು ಮಧ್ಯಾಹ್ನ 1 ಗಂಟೆಯ ನಂತರ ವೇಳಾಪಟ್ಟಿಯ ಪ್ರಕಾರ ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ಲಭ್ಯವಿರುತ್ತವೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೊದಲ್ಲಿನ (Namma Metro) ನೇರಳೆ ಮಾರ್ಗದ ಚಲ್ಲಘಟ್ಟ ನಿಲ್ದಾಣದಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ಶನಿವಾರ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮಟ್ರೊ ರೈಲುಗಳು ಸಂಚರಿಸುವುದಿಲ್ಲ. ಈ ಮಾರ್ಗದ ರೈಲುಗಳನ್ನು ಅವಲಂಬಿಸಿರುವ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಂಡರೆ ಉತ್ತಮ. ಈ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು ದುರಸ್ತಿಗಾಗಿ ನಮ್ಮ ಮೆಟ್ರೊ ರೈಲು ಪ್ರಾಧಿಕಾರ ಸೇವೆಯನ್ನು ನಿಲ್ಲಿಸುವುದಾಗಿ ಹೇಳಿದೆ. ಶನಿವಾರವಾಗಿರುವ ಕಾರಣ ಐಟಿ ಕ್ಷೇತ್ರವನ್ನು ಹೊರತುಪಡಿಸಿ ಉಳಿದವರಿಗೆ ಇಂದು ಕಚೇರಿ ಕೆಲಸಗಳು ಇರುತ್ತವೆ. ಹೀಗಾಗಿ ಈ ಮಾರ್ಗವನ್ನು ಅತಿ ಹೆಚ್ಚು ನಂಬಿಕೊಂಡವರು ಆದ್ಯತೆ ಮೇರೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ.

ನಮ್ಮ ಮೆಟ್ರೊ ಕೊಟ್ಟಿರುವ ಪ್ರಕಟಣೆ ಈ ರೀತಿ ಇದೆ; ನೇರಳೆ ಮಾರ್ಗದಲ್ಲಿರುವ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ದಿನಾಂಕ 17ನೇ ಜೂನ್ 2024 (ಸೋಮವಾರ) ರಂದು ನಿರ್ವಹಣೆ ಕೆಲಸ ನಡೆಯಲಿದೆ. ಹೀಗಾಗಿ ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಲಭ್ಯ ಲಭ್ಯವಿರುವುದಿಲ್ಲ. ರೈಲು ಸೇವೆಗಳು ಮಧ್ಯಾಹ್ನ 1 ಗಂಟೆಯ ನಂತರ ವೇಳಾಪಟ್ಟಿಯ ಪ್ರಕಾರ ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ಲಭ್ಯವಿರುತ್ತವೆ. ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ವೇಳಾಪಟ್ಟಿಯ ಪ್ರಕಾರ ಚಲಿಸುತ್ತವೆ. ಪ್ರಯಾಣಿಕರ ಅನಾನುಕೂಲಕ್ಕೆ ವಿಷಾದಿಸುತ್ತೇವೆ.

ನಮ್ಮ ಮೆಟ್ರೊ ರೈಲುಗಳ ವ್ಯಾಪ್ತಿ ವಿಸ್ತರಣೆಗೊಂಡಿರುವ ಜತೆಯಾಗಿ ತಾಂತ್ರಿಕ ಸಮಸ್ಯೆಯೂ ಹೆಚ್ಚಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಮೆಟ್ರೊ ರೈಲು ತಾಂತ್ರಿಕ ದೋಷದಿಂದ ನಿಂತು ಪ್ರಯಾಣಕರು ಅರ್ಧದಾರಿಯಲ್ಲೇ ಪರಿತಪಿಸಿದ್ದರು.

ಅಂದು ಏನಾಗಿತ್ತು?

ಜೂ.13ರಂದು ಬೆಳಗ್ಗೆ ಹಲವೆಡೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ರೈಲು ಬರುವುದು ತಡವಾಗಿದ್ದವು. ಎಂಜಿ ರಸ್ತೆ, ಟ್ರಿನಿಟಿ, ಹಲಸೂರು ಸೇರಿದಂತೆ ಹಲವೆಡೆ ಪ್ರಯಾಣಿಕರು ನಿಲ್ದಾಣಗಳಲ್ಲಿ ಕಾದು ನಿಂತಿದ್ದರು. ಸುಮಾರು 15 ನಿಮಿಷಕ್ಕೂ ಹೆಚ್ಚು ಸಮಯದಿಂದ ರೈಲು ಬಾರದೇ ಪ್ರಯಾಣಿಕರು ಕಿರಿಕಿರಿ ಅನುಭವಿಸಿದ್ದರು.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

ಎಕ್ಸ್‌ ಮೂಲಕ ಬಿಎಂಆರ್‌ಸಿಎಲ್‌ಗೆ ಟ್ಯಾಗ್‌ ಮಾಡಿ ಮೆಟ್ರೋ ರೈಲು ವಿಳಂಬಕ್ಕೆ ಕಾರಣವೇನು? ಎಂದು ಪ್ರಶ್ನಿಸಿದ್ದರು. ಸದ್ಯ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಹೇಳಲಾಗಿತ್ತು.

ಮೆಟ್ರೋ ಸೇವೆಯಲ್ಲಿ ವ್ಯತ್ಯಯ ವಿಚಾರ ಕುರಿತು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿತ್ತು. ಗುರುವಾರ ಬೆಳಗ್ಗೆ 9.58 ಕ್ಕೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಮೆಜೆಸ್ಟಿಕ್‌ನಲ್ಲಿ ದೋಷಯುಕ್ತ ರೈಲನ್ನು ಪಾಕೆಟ್ ಟ್ರ್ಯಾಕ್ಗೆ ಸ್ಥಳಾಂತರಿಸಲಾಗಿದೆ. ರೈಲು ಸೇವೆಗಳನ್ನು ಪುನಃಸ್ಥಾಪಿಸಲಾಗಿದ್ದು, ಸಾಮಾನ್ಯ ಸ್ಥಿತಿಗೆ ಮರಳಲು ಕನಿಷ್ಠ ಒಂದು ಗಂಟೆ ತೆಗೆದುಕೊಳ್ಳಬಹುದು. ಆದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಕೋರಿತ್ತು.

Continue Reading

ಕರ್ನಾಟಕ

Actor Darshan: ಇಂದು ನಟ ದರ್ಶನ್‌ ಭವಿಷ್ಯ ನಿರ್ಧಾರ; ಕೋರ್ಟ್‌ ತೀರ್ಪು ಏನಿರಲಿದೆ?

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು (ಜೂನ್‌ 15) ನಿರ್ಧಾರವಾಗಲಿದೆ. ಕೊಲೆ ಪ್ರಕರಣದ ಆರೋಪದಲ್ಲಿ ಪೊಲೀಸರು ದರ್ಶನ್‌ ಮತ್ತು ಅವರ ಸಹಚರರನ್ನು ಜೂನ್ 11ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದಿದ್ದರು. ಇಂದು ಮಧ್ಯಾಹ್ನ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು (ಜೂನ್‌ 15) ನಿರ್ಧಾರವಾಗಲಿದೆ. ಕೊಲೆ ಪ್ರಕರಣದ ಆರೋಪದಲ್ಲಿ ಪೊಲೀಸರು ದರ್ಶನ್‌ ಮತ್ತು ಅವರ ಸಹಚರರನ್ನು ಜೂನ್ 11ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದಿದ್ದರು. ಇಂದು ಮಧ್ಯಾಹ್ನ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಕೋರ್ಟ್‌ ತೀರ್ಪು ನೀಡಲಿದೆ. ಹೀಗಾಗಿ ದರ್ಶನ್‌ ಅವರಿಗೆ ಇಂದಿನ ದಿನ ನಿರ್ಣಾಯಕವಾಗಲಿದೆ.

ಮಧ್ಯಾಹ್ನದ ವೇಳೆಗೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಹುತೇಕ ದರ್ಶನ್ ಮತ್ತು ಸಹಚರರು ಜೈಲು ಸೇರುವ ಸಾಧ್ಯತೆ ಎನ್ನಲಾಗಿದೆ.

ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈಗಾಗಲೇ ಮಹಿಳಾ ಸಾಂತ್ವನ ಕೇಂದ್ರದಿಂದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆ ತರಲಾಗಿದೆ. ಇವರನ್ನೂ ಇಂದೇ ಪರಪ್ಪನ ಅಗ್ರಹಾರಕ್ಕೆ ಇಂದೇ ಶಿಫ್ಟ್ ಸಾಧ್ಯತೆ ಇದ್ದು, ಬಟ್ಟೆ, ಬ್ಯಾಗ್ ಸಮೇತ ಠಾಣೆಗೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಬ್ಬ ವ್ಯಕ್ತಿ ಪೊಲೀಸ್‌ ವಶಕ್ಕೆ

ಈ ಮಧ್ಯೆ ಪೊಲೀಸರು ತಡರಾತ್ರಿ ದರ್ಶನ್‌ ಮತ್ತು ಸಹಚರರಿಗೆ ಸಹಾಯ ಮಾಡಿದ್ದ ಇನ್ನೋರ್ವ ವ್ಯಕ್ತಿಯನ್ನೂ ವಶಕ್ಕೆ ಪಡೆದಿದ್ದಾರೆ. ಈತ ಆರೋಪಿಗಳ ಮೊಬೈಲ್ ಡೇಟಾ ಡಿಲೀಟ್ ಮಾಡಲು ಸಹಾಯ ಮಾಡಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಏನಿದು ಪ್ರಕರಣ?

ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಹಲವರ ಹೆಸರು ಕೇಳಿ ಬಂದಿದೆ. ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ಇದನ್ನೂ ಓದಿ: Actor Darshan : Boss ನಿಮ್ಮನ್ನ ಈ ರೀತಿ ನೋಡೊಕೆ ಆಗ್ತಿಲ್ಲ; ಬಿಕ್ಕಿ ಬಿಕ್ಕಿ ಅತ್ತ ದರ್ಶನ್​ ಮಹಿಳಾ ಅಭಿಮಾನಿ!

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಜೂನ್‌ 11ರಂದು ದರ್ಶನ್‌ ಸಹಿತ ಹಲವರನ್ನು ಪೊಲೀಸರು ಬಂಧಿಸಿದ್ದರು.

Continue Reading

ಮಳೆ

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Rain News : ವಾರಾಂತ್ಯದಲ್ಲಿ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಕೊಂಚ ತಗ್ಗಿದ್ದರೆ, ಕರಾವಳಿ-ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆಯು (Karnataka Weather Forecast) ಜೋರಾಗಿ ಇರಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ (Karnataka Weather Forecast) ಸಾಮಾನ್ಯವಾಗಿದೆ. ವಾರಾಂತ್ಯದಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿ ಬೀಸಲಿದೆ. ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಲ್ಲಿ ಮೋಡ ಕವಿ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಸೂರ್ಯ ತನ್ನ ದರ್ಶನ ಕೊಡಲಿದ್ದಾನೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 40-50 ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Chitradurga News
ಪ್ರಮುಖ ಸುದ್ದಿ2 mins ago

Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

Namma Metro
ಪ್ರಮುಖ ಸುದ್ದಿ21 mins ago

Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ;ಮಧ್ಯಾಹ್ನ1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ

G7 Summit
ಪ್ರಮುಖ ಸುದ್ದಿ40 mins ago

G7 Summit : ನಿಮ್ಮ ಭೇಟಿಯಿಂದ ಸಂತೋಷವಾಗಿದೆ; ಅಮೆರಿಕ ಅಧ್ಯಕ್ಷ ಬೈಡೆನ್​ ಭೇಟಿ ಬಗ್ಗೆ ಮೋದಿ ಉತ್ಸಾಹ

Actor Darshan
ಕರ್ನಾಟಕ48 mins ago

Actor Darshan: ಇಂದು ನಟ ದರ್ಶನ್‌ ಭವಿಷ್ಯ ನಿರ್ಧಾರ; ಕೋರ್ಟ್‌ ತೀರ್ಪು ಏನಿರಲಿದೆ?

Euro 2024
ಪ್ರಮುಖ ಸುದ್ದಿ1 hour ago

Euro 2024 : ಸ್ಕಾಟ್ಲೆಂಡ್​ ವಿರುದ್ಧ ಜರ್ಮನಿಗೆ 5-1 ಗೋಲ್​ಗಳ ಭರ್ಜರಿ ವಿಜಯ

Head Shave
Latest1 hour ago

Head Shave: ಪೋಷಕರು ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ದಲಿತ ಹುಡುಗನ ತಲೆ ಬೋಳಿಸಿದರು!

Accident Case
Latest2 hours ago

Accident Case: ಕಾರು ಡಿಕ್ಕಿ ರಭಸಕ್ಕೆ ಹತ್ತಾರು ಅಡಿ ದೂರ ಹಾರಿ ಬಿದ್ದ ಮಹಿಳೆ; ಭಯಾನಕ ವಿಡಿಯೊ

karnataka weather forecast
ಮಳೆ2 hours ago

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Life Insurance
ಮನಿ-ಗೈಡ್2 hours ago

Life Insurance: ಜೀವ ವಿಮೆ ನಿಯಮಗಳಲ್ಲಿ ಹಲವು ಬದಲಾವಣೆ; ಐಆರ್‌ಡಿಎಐಯಿಂದ ಗ್ರಾಹಕಸ್ನೇಹಿ ಕ್ರಮ

Betel leaves health benefits
ಆರೋಗ್ಯ2 hours ago

Betel Leaves Health Benefits: ರಾತ್ರಿ ಊಟದ ಬಳಿಕ ವೀಳ್ಯದೆಲೆ ಸೇವನೆ ಆರೋಗ್ಯಕ್ಕೆ ಉತ್ತಮ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ14 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು15 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು16 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ16 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌