Gold rate : ಬಂಗಾರದ ದರದಲ್ಲಿ 170 ರೂ. ಏರಿಕೆ - Vistara News

ಚಿನ್ನದ ದರ

Gold rate : ಬಂಗಾರದ ದರದಲ್ಲಿ 170 ರೂ. ಏರಿಕೆ

ಬಂಗಾರದ ದರದಲ್ಲಿ 170 ರೂ. ಹೆಚ್ಚಳವಾಗಿದ್ದು, 56,340 ರೂ.ಗೆ ವೃದ್ಧಿಸಿದೆ. ಈ ವರ್ಷ ದರ ( Gold rate) ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

VISTARANEWS.COM


on

gold rate in bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರ ಗುರುವಾರ 170 ರೂ. ಏರಿಕೆಯಾಗಿದೆ. 24 ಕ್ಯಾರಟ್‌ನ 10 ಗ್ರಾಮ್‌ ಚಿನ್ನದ ದರ 56,340 ರೂ.ಗೆ ವೃದ್ಧಿಸಿದೆ. 22 ಕ್ಯಾರಟ್‌ನ ( Gold rate) ಚಿನ್ನದ ದರದಲ್ಲಿ 10 ಗ್ರಾಮ್‌ಗೆ 150 ರೂ. ಹೆಚ್ಚಳವಾಗಿದ್ದು, 51,650 ರೂ.ಗೆ ಏರಿದೆ. ಬೆಳ್ಳಿಯ ದರದಲ್ಲಿ ಪ್ರತಿ ಕೆ.ಜಿಗೆ 1,000 ರೂ. ಹೆಚ್ಚಳವಾಗಿದ್ದು, 70,200 ರೂ.ಗೆ ಹೆಚ್ಚಳವಾಗಿದೆ.

62,000 ರೂ.ಗೆ ಏರಿಕೆ ಸಾಧ್ಯತೆ:

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1950 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಚಿನ್ನದ ದರ

Gold Rate Today: ಕೊನೆಗೂ ಆಭರಣ ಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಳಿಕೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 3) ತುಸು ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದ್ದು, ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 11 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 3) ತುಸು ಇಳಿಕೆಯಾಗಿದೆ (Gold Rate Today). ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದ್ದು, ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 11 ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,760 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,700 ಮತ್ತು ₹ 6,47,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,464 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,580 ಮತ್ತು ₹ 7,05,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,485 ₹ 7,073
ಮುಂಬೈ₹ 6,470 ₹ 7,058
ಬೆಂಗಳೂರು₹ 6,470 ₹ 7,058
ಚೆನ್ನೈ₹ 6,450 ₹ 7,036

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 85.75 ಹಾಗೂ 8 ಗ್ರಾಂಗೆ ₹ 686 ಇದೆ. 10 ಗ್ರಾಂ ₹ 857.50 ಹಾಗೂ 1 ಕಿಲೋಗ್ರಾಂ ₹ 85,750 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Income Tax Returns: ಜುಲೈ 31ರೊಳಗೆ 7.28 ಕೋಟಿ ಐಟಿಆರ್ ಸಲ್ಲಿಕೆ! ಇದು ಹೊಸ ದಾಖಲೆ

Continue Reading

ಕರ್ನಾಟಕ

Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

Gold Rate Today: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,480 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,069 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,840 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,800 ಮತ್ತು ₹ 6,48,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,552 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,690 ಮತ್ತು ₹ 7,06,900 ತಲುಪಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 2) ಮತ್ತೆ ಏರಿಕೆಯಾಗಿದೆ (Gold Rate Today). ಮಂಗಳವಾರ ಕುಸಿದಿದ್ದ ದರ ಬುಧವಾರ ಹೆಚ್ಚಾಗಿತ್ತು. ನಿನ್ನೆ ಮತ್ತೆ ಏರುಗತಿಯಲ್ಲಿ ಸಾಗಿತ್ತು. ಇಂದು ಮತ್ತೆ ಹೆಚ್ಚಾಗಿದ್ದು, 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹30 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 33 ಹೆಚ್ಚಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,480 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,069 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,840 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,800 ಮತ್ತು ₹ 6,48,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,552 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,690 ಮತ್ತು ₹ 7,06,900 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,495₹ 7,084
ಮುಂಬೈ₹ 6,480₹ 7,069
ಬೆಂಗಳೂರು₹ 6,480₹ 7,069
ಚೆನ್ನೈ₹ 6,460₹ 7,047

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆ ಯಾಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ಒಂದು ಗ್ರಾಂಗೆ ₹ 85.50 ಹಾಗೂ 8 ಗ್ರಾಂಗೆ ₹ 684 ಇದೆ. 10 ಗ್ರಾಂ ₹ 855 ಹಾಗೂ 1 ಕಿಲೋಗ್ರಾಂ ₹ 85,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು ‘K’.

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Stock Market: ಷೇರುಪೇಟೆಯಲ್ಲಿ ಭಾರೀ ಕುಸಿತ; ಸೆನ್ಸೆಕ್ಸ್‌ 700 ಅಂಕಗಳಷ್ಟು ಪತನ

Continue Reading

ಚಿನ್ನದ ದರ

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Gold Rate Today: ತಿಂಗಳ ಮೊದಲ ದಿನವೇ ಬಂಗಾರ ಗ್ರಾಹಕರಿಗೆ ಶಾಕ್‌ ಕೊಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 1) ಮತ್ತೆ ಏರಿಕೆಯಾಗಿದೆ. ಮಂಗಳವಾರ ಕುಸಿದಿದ್ದ ದರ ಬುಧವಾರ ಹೆಚ್ಚಾಗಿತ್ತು. ಇಂದು ಮತ್ತೆ ಏರುಗತಿಯಲ್ಲಿ ಸಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 50 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 54 ಹೆಚ್ಚಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ತಿಂಗಳ ಮೊದಲ ದಿನವೇ ಬಂಗಾರ ಗ್ರಾಹಕರಿಗೆ ಶಾಕ್‌ ಕೊಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 1) ಮತ್ತೆ ಏರಿಕೆಯಾಗಿದೆ (Gold Rate Today). ಮಂಗಳವಾರ ಕುಸಿದಿದ್ದ ದರ ಬುಧವಾರ ಹೆಚ್ಚಾಗಿತ್ತು. ಇಂದು ಮತ್ತೆ ಏರುಗತಿಯಲ್ಲಿ ಸಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 50 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 54 ಹೆಚ್ಚಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,450 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,036 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,600 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,500 ಮತ್ತು ₹ 6,45,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,288 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,360 ಮತ್ತು ₹ 7,03,600 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,465 ₹ 7,051
ಮುಂಬೈ₹ 6,450 ₹ 7,036
ಬೆಂಗಳೂರು₹ 6,450 ₹ 7,036
ಚೆನ್ನೈ₹ 6,430₹ 7,015

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 85.50 ಹಾಗೂ 8 ಗ್ರಾಂಗೆ ₹ 684 ಇದೆ. 10 ಗ್ರಾಂ ₹ 855 ಹಾಗೂ 1 ಕಿಲೋಗ್ರಾಂ ₹ 85,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು ‘K’.

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: LPG Price Hike: ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌; ಬೆಂಗಳೂರಿನಲ್ಲಿ ಇಷ್ಟಾಗಿದೆ ದರ

Continue Reading

ಚಿನ್ನದ ದರ

Gold Rate Today: ಆಭರಣ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಶಾಕ್‌; 10 ಗ್ರಾಂಗೆ 800 ರೂ. ಹೆಚ್ಚಳ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 31) ಮತ್ತೆ ಏರಿಕೆಯಾಗಿದೆ. ಮಂಗಳವಾರ ಕುಸಿದಿದ್ದ ದರ ಇಂದು ಮತ್ತೆ ಹೆಚ್ಚಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ದುಬಾರಿಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,400 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,982 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 31) ಮತ್ತೆ ಏರಿಕೆಯಾಗಿದೆ (Gold Rate Today). ಬಜೆಟ್‌ ಮಂಡನೆಯ ಬಳಿಕ ಸತತವಾಗಿ ಇಳಿದಿದ್ದ ದರ ಶನಿವಾರ ಮೊದಲ ಬಾರಿ ಏರಿಕೆಯಾಗಿತ್ತು. ಭಾನುವಾರ ಅದೇ ದರವನ್ನು ಕಾಯ್ದುಕೊಂಡಿದ್ದರೆ ಸೋಮವಾರ ಮತ್ತೆ ಏರಿಕೆಯಾಗಿತ್ತು. ಮಂಗಳವಾರ ಕುಸಿದಿದ್ದ ದರ ಇಂದು ಮತ್ತೆ ಹೆಚ್ಚಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಹೆಚ್ಚಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,400 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,982 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,200 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,000 ಮತ್ತು ₹ 6,40,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 55,856 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 69,820 ಮತ್ತು ₹ 6,98,200 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,415 ₹ 6,997
ಮುಂಬೈ₹ 6,400 ₹ 6,982
ಬೆಂಗಳೂರು₹ 6,400 ₹ 6,982
ಚೆನ್ನೈ₹ 6,425 ₹ 7,009

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 84 ಹಾಗೂ 8 ಗ್ರಾಂಗೆ ₹ 672 ಇದೆ. 10 ಗ್ರಾಂ ₹ 840 ಹಾಗೂ 1 ಕಿಲೋಗ್ರಾಂ ₹ 84,000 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

    ಇದನ್ನೂ ಓದಿ: Aditya Birla Group: ಟಾಟಾ, ಅಂಬಾನಿಯೊಂದಿಗೆ ಸ್ಪರ್ಧೆ: ಆಭರಣ ವ್ಯಾಪಾರಕ್ಕೆ ಬಿರ್ಲಾ ಎಂಟ್ರಿ!

    Continue Reading
    Advertisement
    Rashid Khan
    ಕ್ರಿಕೆಟ್5 mins ago

    Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

    Adivi Sesh Goodachari Turns 6 unveils six stunning looks
    ಟಾಲಿವುಡ್28 mins ago

    Adivi Sesh: ʻಗೂಢಚಾರಿʼಗೆ ಆರು ವರ್ಷದ ಸಂಭ್ರಮ; ನಟ ಅಡಿವಿ ಶೇಷ್ ಹೇಳಿದ್ದೇನು?

    Yadagiri News
    ಯಾದಗಿರಿ36 mins ago

    Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ; ಯಾದಗಿರಿ ಡಿಎಚ್ಒ ಅಮಾನತು

    IND vs SL 2nd ODI:
    ಕ್ರೀಡೆ42 mins ago

    IND vs SL 2nd ODI: ಇಂದು ಭಾರತ-ಲಂಕಾ ದ್ವಿತೀಯ ಏಕದಿನ ಮುಖಾಮುಖಿ; ಪಂದ್ಯಕ್ಕೆ ಮಳೆ ಭೀತಿ

    BSF Chief
    ದೇಶ56 mins ago

    BSF Chief: ಬಿಎಸ್‌ಎಫ್‌ ನೂತನ ಮುಖ್ಯಸ್ಥರಾಗಿ ದಲ್ಜಿತ್‌ ಸಿಂಗ್‌ ಚೌಧರಿ ನೇಮಕ

    Amitabh Bachchan-Sridevi Movies
    Latest59 mins ago

    Amitabh Bachchan-Sridevi Movies: ಅಮಿತಾಭ್ ಬಚ್ಚನ್ – ಶ್ರೀದೇವಿ ಜೊತೆಯಾಗಿ ನಟಿಸಿದ 5 ಸೂಪರ್ ಹಿಟ್ ಚಿತ್ರಗಳಿವು

    Health Tips
    ಆರೋಗ್ಯ59 mins ago

    Health Tips: ಏನ್ ನಿಂಗೆ ಕೊಬ್ಬಾ ಅನ್ನಬೇಡಿ ಕೊಬ್ಬೂ ಇರಬೇಕು!

    Robbery Case
    ಕ್ರೈಂ1 hour ago

    Robbery Case: ಬೆಂಗಳೂರಿನಲ್ಲಿ ಮಿತಿ ಮೀರಿದ ಕಳ್ಳರ ಹಾವಳಿ; ಆನ್‌ಲೈನ್‌ ಡೆಲಿವರಿ ಬಾಯ್‌ಗಳೇ ಇವರ ಟಾರ್ಗೆಟ್‌: Video ಇಲ್ಲಿದೆ

    Paris Olympics
    ಕ್ರೀಡೆ1 hour ago

    Paris Olympics: ಗ್ರೇಟ್​ ಬ್ರಿಟನ್ ಮಣಿಸಿ ಸೆಮಿಫೈನಲ್​ ಪ್ರವೇಶಿಸಲಿ ಭಾರತ ಹಾಕಿ ತಂಡ

    Duniya Vijay Bheema Official Trailer Out
    ಸ್ಯಾಂಡಲ್ ವುಡ್1 hour ago

    Duniya Vijay: ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ ಚಿತ್ರದ  ಟ್ರೈಲರ್‌ ಔಟ್‌; ಕ್ರೇಜ್‌ ಹೆಚ್ಚಿಸಿದ ʻಸಲಗʼ!

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka rain
    ಮಳೆ21 hours ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ3 days ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ3 days ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ3 days ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    karnataka Rain
    ಮಳೆ5 days ago

    Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

    Karnataka Rain
    ಮಳೆ5 days ago

    Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

    Bharachukki falls
    ಚಾಮರಾಜನಗರ5 days ago

    Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

    karnataka Rain
    ಮಳೆ6 days ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ6 days ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ6 days ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    ಟ್ರೆಂಡಿಂಗ್‌