Horoscope Today : ದ್ವಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ದ್ವಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷದ ದ್ವಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (04-03-2023)

ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ

ತಿಥಿ: ದ್ವಾದಶಿ 11:42 ವಾರ: ಶನಿವಾರ
ನಕ್ಷತ್ರ: ಪುಷ್ಯ 18:40 ಯೋಗ: ಶೋಭನ 19:34
ಕರಣ: ಬಾಲವ 11:42 ಇಂದಿನ ವಿಶೇಷ: ವಿಶ್ವ ಸ್ಥೂಲಕಾಯ ದಿನ
ಅಮೃತಕಾಲ: ಬೆಳಗ್ಗೆ 11 ಗಂಟೆ 30 ನಿಮಿಷದಿಂದ 01 ಗಂಟೆ 18 ನಿಮಿಷದವರೆಗೆ.

ಸೂರ್ಯೋದಯ : 06:34 ಸೂರ್ಯಾಸ್ತ : 06:29

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠರಾಗುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚು. ಹಳೆಯ ಸ್ನೇಹಿತರ ಜೊತೆ ಕಾಲ ಕಳೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ. ಉದ್ಯೋಗಿಗಳಿಗೆ ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇಂದು ನೀವು ಗಾಬರಿಯಿಂದ ಇರುವ ಸಾಧ್ಯತೆ. ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹದ್ಯೋಗಿಗಳ ಬೆಂಬಲ ದೊರೆಯಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಮಾನಸಿಕ ಆರೋಗ್ಯ ಸದೃಢ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ. ಉದ್ಯೋಗಿಗಳಿಗೆ ಇಂದು ಎಲ್ಲರ ಸಹಕಾರ ದೊರೆಯಲಿದೆ. ಆರೋಗ್ಯ ಉತ್ತಮ. ಕೌಟುಂಬಿಕ ಕಲಹಗಳ ಸಮಯದಲ್ಲಿ ಶಾಂತಿಯಿಂದಿರಿ. ಕೌಟುಂಬಿಕವಾಗಿ ಇಂದು ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಇಂದು ನೀವು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಮಾಡುವಿರಿ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣ. ಹರಟೆಯಿಂದ ಕಾಲ ಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಇಂದು ಪೂರ್ಣವಾಗುವವು. ಸಕರಾತ್ಮಕ ಆಲೋಚನೆಗಳನ್ನು ಮಾಡುವುದರಿಂದ ಇಂದು ಹೆಚ್ಚಿನ ಲಾಭವಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಇಂದು ನಿಮಗೆ ಹಿಡಿದ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಂದಗತಿಯಲ್ಲಿ ಕೆಲಸ ಸಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಇಂದು ಮುಕ್ತಿ ದೊರೆಯಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Astrology Tips : ಮದುವೆಗೆ ಕಂಕಣ ಬಲ ಕೂಡಿ ಬರುತ್ತಿಲ್ಲವೇ?; ಜ್ಯೋತಿಷ್ಯ ಶಾಸ್ತ್ರದಲ್ಲಿದೆ ಪರಿಹಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಐದು ಹಾಗೂ ಜೆಡಿಎಸ್‌ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ.

VISTARANEWS.COM


on

Legislative Council Election
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ (Legislative Council Election) ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS) ಬಿಟ್ಟುಕೊಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ಈಗ ವಿಧಾನ ಪರಿಷತ್‌ ಚುನಾವಣೆಯಲ್ಲೂ ಒಗ್ಗೂಡಿ ಸ್ಪರ್ಧಿಸಲು ತೀರ್ಮಾನಿಸಿವೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಕಣಕ್ಕಿಳಿದಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಈಗ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading

ಮಳೆ

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

Rain News: ಪ್ರತ್ಯೇಕ ಮಳೆ ಅವಘಡಗಳಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರಿಗೆ ಗಾಯಗಳಾಗಿದ್ದು, ಹಲವೆಡೆ ಬೆಳೆಗಳು ಹಾನಿಯಾಗಿವೆ. ಹಲವೆಡೆ ಧಾರಕಾರವಾಗಿ ಸುರಿದ ಮಳೆಯು ಅವಾಂತರ ಸೃಷ್ಟಿಸಿದೆ.

VISTARANEWS.COM


on

Rain News
Koo

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ, ಚಾಮರಾಜನಗರ, ಬೆಳಗಾವಿ, ಧಾರವಾಡ ಸೇರಿ ವಿವಿಧೆಡೆ ಶನಿವಾರವೂ ಭಾರಿ ಮಳೆ (Rain News) ಸುರಿಯಿತು. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಿಡಿಲು ಬಡಿದು ಕಾರ್ಮಿಕ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿದೆ. ಅದೇ ರೀತಿ ಕೊಪ್ಪಳದಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬಾಳೆ ತೋಟ ನೆಲಕಚ್ಚಿದೆ. ಇನ್ನು ಹಲವೆಡೆ ಧಾರಕಾರವಾಗಿ ಸುರಿದ ಮಳೆಯು ಅವಾಂತರ ಸೃಷ್ಟಿಸಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಸಿಡಿಲು ಬಡಿದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಮಂಗಳೂರು: ಸಿಡಿಲು ಬಡಿದು ಕಾರ್ಮಿಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ನದಿ ಬದಿಯ ಶೆಡ್‌ನಲ್ಲಿದ್ದ ವೇಳೆ ಅವಘಡ ನಡೆದಿದೆ. ಮರಳು ತೆಗೆಯುವ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಕೊಪ್ಪಳ: ಸಿಡಿಲು ಬಡಿದು ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಐ ಕುಷ್ಟಗಿ ತಾಲೂಕಿನ ಹಿರೇಮುಕರ್ತಿನಾಳ ಬಳಿ ನಡೆದಿದೆ. ಕನಕರಾಯಪ್ಪ ಕಾಟಾಪುರ (28) ಮೃತ ರೈತ. ತಾವರಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

ಕುಂದಾನಗರಿಯಲ್ಲಿ ‌ಮನೆ, ಮಳಿಗೆಗಳಿಗೆ ನುಗ್ಗಿದ ನೀರು

ಬೆಳಗಾವಿ: ಕುಂದಾನಗರಿಯಲ್ಲಿ ‌ಧಾರಾಕಾರವಾಗಿ ಸುರಿದ ಮೊದಲ‌‌ ಮಳೆ ಭಾರಿ ಅವಾಂತರ ಸೃಷ್ಟಿ ಮಾಡಿದೆ. ಧಾರಾಕಾರ ಮಳೆಯಿಂದ ರಸ್ತೆಗಳು ನದಿಯಂತಾಗಿದ್ದು, ಹಲವೆಡೆ ಮರಗಳು ಧರೆಗುರಳಿವೆ. ಇನ್ನು ಅನೇಕ ಮನೆ, ಮಳಿಗೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಬೆಳಗಾವಿ ನಗರದ ಪಾಂಗೋಲ್‌ ಗಲ್ಲಿ, ಬೆಂಡಿ ಬಜಾರ್‌ ಏರಿಯಾದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಚರಂಡಿ ನೀರು‌ ರಸ್ತೆಗೆ ಬಂದು ಸಂಚಾರಕ್ಕೆ ಅಡಚಣೆಯಾಯಿತು. ಒಂದು ಗಂಟೆಗಳ ಕಾಲ ಸುರಿದ ಭಾರೀ ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹಣ್ಣಿನ ಮಾರುಕಟ್ಟೆಗೂ ನೀರು ನುಗ್ಗಿ ವ್ಯಾಪಾರಿಗಳು ತೊಂದರೆ ಅನುಭವಿಸುವಂತಾಯಿತು. ‌

ಚಿಕ್ಕೋಡಿ ತಾಲೂಕಿನ ವಿವಿಧೆಡೆ ಭಾರಿ ಮಳೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾರಿ ಮಳೆ ಸುರಿದಿದೆ. ಭಾರಿ‌ ಮಳೆಯಿಂದ ರಸ್ತೆಗಳ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯಿತು. ಅಕಾಲಿಕ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ ಮಳೆಗೆ ನೆಲಕಚ್ಚಿದ ಬಾಳೆ ತೋಟ

ಚಾಮರಾಜನಗರ: ಗಾಳಿ ಮಳೆಗೆ ಬಾಳೆ ತೋಟ ನೆಲಕಚ್ಚಿದ ಘಟನೆ ತಾಲೂಕಿನ ಉತ್ತುಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರವಿ ಎಂಬುವವರ ಬಾಳೆ ತೋಟದಲ್ಲಿ ಸಂಜೆ ಸುರಿದ ಗಾಳಿ ಮಳೆಗೆ ಸುಮಾರು 3 ಸಾವಿರ ಬಾಳೆ ಗಿಡ ನಾಶವಾಗಿವೆ. ಇದರಿಂದ ಸುಮಾರು 6 ತಿಂಗಳ ಶ್ರಮ 6 ನಿಮಿಷದಲ್ಲಿ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ತೆಂಗಿನ ಮರಕ್ಕೆ ಬಡಿದ ಸಿಡಿಲು

ಧಾರವಾಡ: ಧಾರಾಕಾರ ಮಳೆ ಹಿನ್ನೆಲೆ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದ ಘಟನೆ ನಗರದ ಎನ್‌ಟಿಟಿಎಫ್ ಬಳಿ ಕಂಡುಬಂತು. ಮತ್ತೊಂದೆಡೆ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಜಿಲ್ಲೆಯ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ.

ಧಾರವಾಡದಲ್ಲಿ ರಸ್ತೆ ಜಲಾವೃತವಾಗಿರುವುದು.

ಸಿಡಿಲುಗೆ ಮೇಕೆ ಬಲಿ, ವ್ಯಕ್ತಿಗೆ ಗಂಭೀರ ಗಾಯ

ರಾಯಚೂರು: ಸಿಡಿಲು ಬಡಿದು ಮೇಕೆ ಮೃತಪಟ್ಟು, ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಜಂಗಿರಾಂಪೂರ ತಾಂಡಾದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಗೆ ಲಿಂಗಸುಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ‌ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಮೇಕೆಗೆ ಪರಿಹಾರ ಹಾಗೂ ಗಾಯಗೊಂಡ ವ್ಯಕ್ತಿ ಚಿಕಿತ್ಸೆಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Continue Reading

ದೇಶ

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Narendra Modi: ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಅವರು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಇದನ್ನೇ ಹೇಳಿದ್ದಾರೆ.

VISTARANEWS.COM


on

Narendra Modi
Koo

ಹೈದರಾಬಾದ್: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿ, ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿ ಹೊರಬರುತ್ತಲೇ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ.

“ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನಾನೊಂದು ವಿಷಯ ತಿಳಿಸುತ್ತೇನೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ಮೂರನೇ ಅವಧಿಯನ್ನು ಅವರು ಪೂರ್ಣಗೊಳಿಸುತ್ತಾರೆ. ಇಂಡಿಯಾ ಒಕ್ಕೂಟವೂ ಅಷ್ಟೇ, ಮೋದಿ ಅವರಿಗೆ 75 ವರ್ಷ ತುಂಬುತ್ತದೆ ಎಂಬ ಖುಷಿ ಬೇಡ. 75 ವರ್ಷ ದಾಟಿದ ನಂತರ ಎಲ್ಲೂ ಪ್ರಧಾನಿಯಾಗಬಾರದು ಎಂಬ ನಿಯಮಗಳು ಬಿಜೆಪಿ ಸಂವಿಧಾನದಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ, ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುವುದು ನಿಶ್ಚಿತ” ಎಂದು ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‌ನಡ್ಡಾ ಕೂಡ ಪ್ರತಿಕ್ರಿಯೆ

ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ನರೇಂದ್ರ ಮೋದಿ ಅವರನ್ನು ಸೋಲಿಸಲಾಗದವರು ಈಗ ವಯಸ್ಸಿನ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಆದರೆ, ಪ್ರಧಾನಿಯಾಗಿ ಮುಂದುವರಿಯಲು ವಯಸ್ಸಿನ ಮಿತಿ ಕುರಿತು ಬಿಜೆಪಿ ಸಂವಿಧಾನದಲ್ಲಿ ಉಲ್ಲೇಖವಾಗಿಲ್ಲ. ನರೇಂದ್ರ ಮೋದಿ ಅವರೇ ನಮ್ಮ ನಾಯಕ ಹಾಗೂ ಭವಿಷ್ಯದಲ್ಲೂ ಅವರೇ ನಾಯಕರಾಗಿ ಇರಲಿದ್ದಾರೆ” ಎಂದಿದ್ದಾರೆ.

ಕೇಜ್ರಿವಾಲ್‌ ನಡೆಸಿದ ವಾಗ್ದಾಳಿ ಹೀಗಿತ್ತು…

ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್‌, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. “ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ಪ್ರಮುಖ ಸುದ್ದಿ

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದು, ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಹಲವರಲ್ಲಿ ಮೂಡಿದೆ. ಆದಾಗ್ಯೂ, ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡದ ವಿರುದ್ಧದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗುವುದು ಎಂದು ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ನಾಯಕ ರಿಷಭ್ ಪಂತ್ ಅವರ ಸೇವೆ ಲಭ್ಯವಿಲ್ಲ. ವಿಕೆಟ್ ಕೀಪರ್-ಬ್ಯಾಟರ್​​ಗೆ ಭಾರತದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಪಂದ್ಯದಿಂದ ಅಮಾನತುಗೊಳಿಸಿದೆ. ಹೀಗಾಗಿ ಬದಲಿ ನಾಯಕನನ್ನು ಘೋಷಿಸಿದೆ.

ನಿಧಾನಗತಿಯ ಓವರ್ ರೇಟ್ ಅಪರಾಧದಿಂದಾಗಿ ರಿಷಭ್ ಪಂತ್ ಅವರನ್ನು ಒಂದು ಪಂದ್ಯದಿಂದ ನಿಷೇಧಿಸಲಾಗಿದೆ. ಕೀಪರ್-ಬ್ಯಾಟರ್​ ಮೂರು ಬಾರಿ ಇದೇ ಅಪರಾಧವನ್ನು ಮಾಡಿದ್ದ ಕಾರಣ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲ, 30 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್​​ಗಾಗಿ ಅವರ ಮೇಲೆ ದಂಡ ಹಾಕಲಾಗಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದು, ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಹಲವರಲ್ಲಿ ಮೂಡಿದೆ. ಆದಾಗ್ಯೂ, ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡದ ವಿರುದ್ಧದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗುವುದು ಎಂದು ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.

2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಗೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ನಾಯಕ ರಿಷಭ್ ಪಂತ್ (Rishabh Pant) ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಪಂದ್ಯ ನಿಷೇಧ ಹೇರಿದೆ. ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್​​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸಲಾಗಿದೆ. ಕೀಪರ್-ಬ್ಯಾಟರ್​​ ಒಂದು ಪಂದ್ಯದಿಂದ ಅಮಾನತು ಶಿಕ್ಷೆ ವಿಧಿಸಲಾಗಿದೆ. ಇದಲ್ಲದೆ, ಈ ಅಪರಾಧಕ್ಕಾಗಿ ಅವರಿಗೆ 30 ಲಕ್ಷ ರೂ.ಗಳ ದಂಡವನ್ನೂ ವಿಧಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸುತ್ತಿರುವುದು ಇದು ಮೂರನೇ ಬಾರಿ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ ಕೀಪರ್-ಬ್ಯಾಟರ್​​ಗ ​ಮೊದಲು 12 ಲಕ್ಷ ರೂ.ಗಳ ದಂಡ ವಿಧಿಸಲಾಯಿತು ಮತ್ತು ನಂತರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ 24 ಲಕ್ಷ ರೂ.ಗಳ ದಂಡ ವಿಧಿಸಲಾಯಿತು.

ಎಲ್ಲ ಆಟಗಾರರಿಗೆ ದಂಡ

ರಿಷಭ್ ಪಂತ್ ಮಾತ್ರವಲ್ಲ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಭಾಗವಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್​​ನ ಎಲ್ಲಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದಂಡ ವಿಧಿಸಿದೆ. ನಿಧಾನಗತಿಯ ಓವರ್ ರೇಟ್​​ಗೆ ಆಟಗಾರರಿಗೆ 12 ಲಕ್ಷ ರೂಪಾಯಿ ಅಥವಾ ಆಯಾ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.

ಇದನ್ನೂ ಓದಿ: James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

ಮ್ಯಾಚ್ ರೆಫರಿ ನಿರ್ಧಾರವನ್ನು ಪ್ರಶ್ನಿಸಿದ ರಿಷಭ್ ಪಂತ್ ಗೆ ಪ್ರಯೋಜನ ಸಿಗಲಿಲ್ಲ. ಕ್ಯಾಪಿಟಲ್ಸ್ ನಾಯಕ ಅಧಿಕೃತ ಮೇಲ್ಮನವಿ ಸಲ್ಲಿಸಿದ್ದರು. ನಂತರ ಅದನ್ನು ಪರಿಶೀಲನೆಗಾಗಿ ಬಿಸಿಸಿಐ ಒಂಬುಡ್ಸ್​​ಮನ್​ಗೆ ಕಳುಹಿಸಲಾಗಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿದಿರುವುದು ಡೆಲ್ಲಿ ಕ್ಯಾಪಿಟಲ್ಸ್​ಗೆ ದೊಡ್ಡ ಹೊಡೆತವಾಗಿದೆ. ಫ್ರಾಂಚೈಸಿ ಪಾಯಿಂಟ್ಸ್ ಟೇಬಲ್​​ನಲ್ಲಿ 5 ನೇ ಸ್ಥಾನದಲ್ಲಿದೆ ಮತ್ತು ಪ್ಲೇಆಫ್​ಗೆ ತಮ್ಮ ಸ್ಥಾನ ಬಲಪಡಿಸಲು ಎರಡು ಗೆಲುವುಗಳ ಅಗತ್ಯವಿದೆ.

ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ ಅತ್ಯುತ್ತಮ ಬ್ಯಾಟರ್​​ ಆಗಿದ್ದಾರೆ. ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಅವರು ಆಡಿದ 12 ಪಂದ್ಯಗಳಲ್ಲಿ 413 ರನ್ ಗಳಿಸಿದ್ದಾರೆ. ಹೆಚ್ಚಿನ ಡಿಸಿ ಬ್ಯಾಟರ್​ಗಳು ಬ್ಯಾಟ್​ನೊಂದಿಗೆ ಮುಂದುವರಿಯಲು ಹೆಣಗಾಡುತ್ತಿರುವುದರಿಂದ ಪಂತ್ ಅಲಭ್ಯತೆ ಸಮಸ್ಯೆ ಮಾಡಲಿದೆ.

Continue Reading
Advertisement
Richard Hansen
ಕರ್ನಾಟಕ23 mins ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ26 mins ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ41 mins ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ1 hour ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ1 hour ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ1 hour ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

IPL 2024
ಪ್ರಮುಖ ಸುದ್ದಿ2 hours ago

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

7th Pay Commission
ನೌಕರರ ಕಾರ್ನರ್2 hours ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

James Anderson
ಪ್ರಮುಖ ಸುದ್ದಿ3 hours ago

James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

Sleeping tips
ಆರೋಗ್ಯ3 hours ago

Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು5 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ16 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌