Healthy Drink: ಹೋಳಿಯ ನಂತರ ಚರ್ಮ ಸರಿಯಾಗಬೇಕಾದರೆ ಕುಡಿಯಲೇ ಬೇಕಾದ ಪೇಯಗಳಿವು! - Vistara News

ಆರೋಗ್ಯ

Healthy Drink: ಹೋಳಿಯ ನಂತರ ಚರ್ಮ ಸರಿಯಾಗಬೇಕಾದರೆ ಕುಡಿಯಲೇ ಬೇಕಾದ ಪೇಯಗಳಿವು!

ಬಣ್ಣಗಳಲ್ಲಿರುವ ರಾಸಾಯನಿಕಗಳಿಂದಾಗಿ ಅನೇಕರು, ಸೂಕ್ಷ್ಮ ಚರ್ಮದ ಮಂದಿಗೆ ಕಜ್ಜಿ, ತುರಿಕೆ, ಮೊಡವೆ, ಕೆಲದಿನಗಳಾದರೂ ಎಷ್ಟು ತೊಳೆದರೂ ಹೋಗದಿರುವ ಬಣ್ಣ ಇತ್ಯಾದಿ ಸಮಸ್ಯೆಗಳು ಎದುರಾಗುತ್ತವೆ. ಕೆಲವೊಂದು ಸುಲಭವಾದ ಡಿಟಾಕ್ಸ್‌ ಡ್ರಿಂಕ್‌ ಮಾಡಿ ಕುಡಿಯಬಹುದು. ಇದರಿಂದ ಚರ್ಮ ಮತ್ತೆ ತನ್ನ ಆರೋಗ್ಯವನ್ನು ಒಳಗಿನಿಂದ ಪಡೆದುಕೊಂಡು ನಳನಳಿಸುತ್ತದೆ.

VISTARANEWS.COM


on

Healthy Drink
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವರ್ಷದಲ್ಲೊಮ್ಮೆ ಬಂದು ಹೋಗುವ ಹೋಳಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದೇನೋ ಆಗಿದೆ. ಆದರೆ, ಹೋಳಿ ಬಿಟ್ಟು ಹೋದ ಕಲೆಯಿಂದ ಚರ್ಮದ ಸಮಸ್ಯೆಗೆ ಒಳಗಾಗುವ ಮಂದಿ ಅನೇಕ. ಬಣ್ಣಗಳಲ್ಲಿರುವ ರಾಸಾಯನಿಕಗಳಿಂದಾಗಿ ಅನೇಕರು, ಸೂಕ್ಷ್ಮ ಚರ್ಮದ ಮಂದಿಗೆ ಕಜ್ಜಿ, ತುರಿಕೆ, ಮೊಡವೆ, ಕೆಲದಿನಗಳಾದರೂ ಎಷ್ಟು ತೊಳೆದರೂ ಹೋಗದಿರುವ ಬಣ್ಣ ಇತ್ಯಾದಿ ಸಮಸ್ಯೆಗಳು ಎದುರಾಗುತ್ತವೆ. ಹಬ್ಬ ತಂದ ಸಂತೋಷವನ್ನೆಲ್ಲ ಈ ಸಮಸ್ಯೆ ಕಸಿದುಕೊಂಡಂತಾಗಿ ಬೇಸರವೂ ಆಗಬಹುದು. ಆದರೆ, ಇದಕ್ಕಾಗಿ ತಲೆಬಿಸಿ ಮಾಡುವ ಅಗತ್ಯವಿಲ್ಲ. ಕೆಲದಿನಗಳಲ್ಲಿ ಈ ಸಮಸ್ಯೆ ಸರಿದಾರಿಗೆ ಬರುತ್ತದೆ. ಆದಷ್ಟು ಬೇಗ ಬರಬೇಕಾದಲ್ಲಿ ಕೆಲವೊಂದು ಸುಲಭವಾದ ಡಿಟಾಕ್ಸ್‌ ಡ್ರಿಂಕ್‌ ಮಾಡಿ ಕುಡಿಯಬಹುದು. ಇದರಿಂದ ಚರ್ಮ ಮತ್ತೆ ತನ್ನ ಆರೋಗ್ಯವನ್ನು ಒಳಗಿನಿಂದ ಪಡೆದುಕೊಂಡು ನಳನಳಿಸುತ್ತದೆ.

1. ಸೋರೆಕಾಯಿ ಜ್ಯೂಸ್‌: ಸೊರೆಕಾಯಿಯಲ್ಲಿ ಅತ್ಯಂತ ಹೆಚ್ಚು ನೀರಿದೆ. ಇದರಲ್ಲಿ ವಿಟಮಿನ್‌, ಸಿ, ಕೆ, ಕ್ಯಾಲ್ಶಿಯಂ, ಝಿಂಕ್ ಕೂಡಾ ಇವೆ. ಮೊಡವೆ ಹಾಗೂ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾದಲ್ಲಿ ಸೊರೆಕಾಯಿ ಜ್ಯೂಸ್‌ ಅತ್ಯಂತ ಒಳ್ಳೆಯದು. ಹಾಗಾಗಿ ಹೋಳಿ ಮುಗಿದ ತಕ್ಷಣ ಸೊರೆಕಾಯಿ ಜ್ಯೂಸ್‌ ಮಾಡಿ ಕುಡಿಯಲು ಶುರು ಮಾಡಿದರೆ ಚರ್ಮವನ್ನು ಎಂದೂ ಇಲ್ಲದಂತೆ ಕಂಗೊಳಿಸುವಂತೆ ಮಾಡುತ್ತದೆ.

2. ಸೌತೆಕಾಯಿ ಜ್ಯೂಸ್‌: ಸೌತೆಕಾಯಿಯು ಆಂಟಿ ಆಕ್ಸಿಡೆಂಟ್‌ನಿಂದಲೂ ಆಂಟಿ ಇನ್‌ಫ್ಲಮೇಟರಿ ಗುಣಗಳಿಂದಲೂ ಸಮೃದ್ಧವಾಗಿರುವುದರಿಂದ ಇದು ಚರ್ಮದ ಮೇಲಿನ ಬಾವು, ಉರಿಯೂತ, ಕಜ್ಜಿ, ಕಲೆ ಎಲ್ಲವನ್ನು ತೆಗೆದು ಹಾಕುತ್ತದೆ. ಚರ್ಮದ ಒಟ್ಟು ಆರೋಗ್ಯವನ್ನು ಕಾಪಾಡು ಶಕ್ತಿ ಇದಕ್ಕಿದೆ. ಹಾಗಾಗಿ ಹೋಳಿಯ ನಂತರ ಸೌತೆಕಾಯಿ ಜ್ಯೂಸ್‌ ಮಾಡಿ ಕುಡಿಯುವುದೂ ಕೂಡಾ ಅತ್ಯಂತ ಒಳ್ಳೆಯದು.

3. ಶುಂಠಿ- ನಿಂಬೆ ಚಹಾ: ನಿಂಬೆಹಣ್ಣು ದೇಹದ ವಿಷಕಾರಕಗಳನ್ನು ಹೊರಕ್ಕೆ ಕಳಿಸುವ ತಾಕತ್ತು ಹೊಂದಿರುವುದರಿಂದ ಹಾಗೂ ಜೀರ್ಣಕ್ರಿಯೆಯನ್ನು ಉತ್ತೇಜಿಸುವುದರಿಂದ ಅದು ಚರ್ಮದ ಮೇಳೆ ಉತ್ತಮ ಪರಿಣಾಮ ಬೀರುತ್ತದೆ. ಶುಂಠಿಯಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು ರಕ್ತಪರಿಚಲನೆಯನ್ನು ಹೆಚ್ಚು ಮಾಡಿ, ಚರ್ಮದ ಆರೋಗ್ಯ ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ.

ಇದನ್ನೂ ಓದಿ: Healthy Nails: ಸುಂದರ ಉಗುರು ಬೇಕಾದರೆ ಇವೆಲ್ಲಾ ತಿನ್ನಬಹುದು!

4. ನಿಂಬೆ ಹಾಗೂ ಪುದಿನ ಜೊತೆ ಎಳನೀರು: ಎಳನೀರು ಬೇಸಿಗೆಯಲ್ಲಿ ಅತ್ಯಂತ ಒಳ್ಳೆಯದು. ವಿಟಮಿನ್‌ ಎ, ಕೆ, ಸಿಗಳಿಂದ ಸಮೃದ್ಧವಾಗಿರುವ ಇದು ಕೊಲಾಜೆನ್‌ ಉತ್ಪಾದನೆಯನ್ನೂ ಉದ್ದೀಪಿಸುತ್ತದೆ. ಕೊಲಾಜೆನ್‌ ಚರ್ಮದ ಆರೋಗ್ಯದ ಪ್ರಮುಖ ಕೀಲಿಕೈಯಾಗಿರುವುದರಿಂದ ಇದು ಚರ್ಮದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದಕ್ಕೆ ಪುದಿನ ಹಾಗೂ ನಿಂಬೆರಸ ಸೇರಿಸಿ ಕುಡಿಯುವುದರಿಂದ ಹೆಚ್ಚು ಉತ್ತಮ ಫಲ ಕಾಣಬಹುದು.

5. ಕಲ್ಲಂಗಡಿ ಜ್ಯೂಸ್‌: ವಿಟಮಿನ್‌ ಎ ಅಧಿಕಾವಾಗಿರುವ ಕಲ್ಲಂಗಡಿ ಹಣ್ಣು ಹೋಳಿಯ ನಂತರ ಸೇವಿಸಬೇಕಾದ ಪ್ರಮುಖ ಹಣ್ಣು. ಇದು ಚರ್ಮವನ್ನು ರಿಪೇರಿ ಮಾಡುವ ಗುಣ ಹೊಂದಿದೆ. ಆರೋಗ್ಯಕರ ಚರ್ಮಕ್ಕೆ ಕಲ್ಲಂಗಡಿ ಹಣ್ಣು ಅತ್ಯಂತ ಮುಖ್ಯ ಕೂಡಾ. ವಿಟಮಿನ್‌ ಸಿ ಕೂಡಾ ಇದರಲ್ಲಿದ್ದು ಇದು ಕೊಲಾಜೆನ್‌ ಉತ್ಪಾದಿಸುವ ಗುಣವನ್ನು ಹೊಂದಿದೆ.

ಇದನ್ನೂ ಓದಿ: Health Tips: ಗ್ಯಾಸ್‌, ಹೊಟ್ಟೆಯುಬ್ಬರ ಸಮಸ್ಯೆಯ ನಿಯಂತ್ರಣಕ್ಕೆ ಸುಲಭೋಪಾಯಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

Covishield Vaccine: ಕೊರೊನಾ ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮವನ್ನು ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಎಂದು ಹೇಳಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

VISTARANEWS.COM


on

Covishield Vaccine
Koo

ನವದೆಹಲಿ: ಕೊರೊನಾ (Covid 19) ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟು ಮಾಡಬಹುದು ಎಂದು ಲಸಿಕೆ ತಯಾರಕರು ಇಂಗ್ಲೆಂಡ್‌ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ನಂತರ ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಇರಬಹುದು ಎಂಬ ಅನುಮಾನ ಕಾಡಿದ್ದು, ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

ವೇಣುಗೋಪಾಲನ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 2021ರಲ್ಲಿ ಇವರ ಪುತ್ರಿ 20 ವರ್ಷದ ಕಾರುಣ್ಯ ಕೋವಿಶೀಲ್ಡ್ ಪಡೆದ ಬಳಿಕ ಸಾವನ್ನಪ್ಪಿದ್ದರು. ಆಸ್ಟ್ರಾಜೆನಿಕಾ ಸಂಸ್ಥೆ ಬಹಳ ತಡವಾಗಿ ಅಂದರೆ ಹಲವರು ಜೀವ ಕಳೆದುಕೊಂಡ ನಂತರ ತನ್ನ ಲಸಿಕೆಯ ಲೋಪದೋಷಗಳನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ದೇಶದಲ್ಲಿ ವ್ಯಾಪಕವಾಗಿ ಹಂಚಿತ್ತು.

ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ನೀಡಿ 15 ಯುರೋಪಿಯನ್ ದೇಶಗಳು ಕೋವಿಶೀಲ್ಡ್‌ ಬಳಕೆಗೆ ನಿಷೇಧ ಹೇರಿದ ಬಳಿಕವಾದರೂ ಸೆರಂ ಇನ್‌ಸ್ಟಿಟ್ಯೂಟ್‌ ಈ ಲಸಿಕೆಯ ಪೂರೈಕೆಯನ್ನು ಸ್ಥಗಿತಗೊಳಿಸಬೇಕಿತ್ತು. ಆದರೆ ಇದರಿಂದ ತೊಂದರೆಗೊಳಗಾಗಿ ತಮ್ಮವರನ್ನು ಕಳೆದುಕೊಂಡ ಅನೇಕ ಪೋಷಕರು ನ್ಯಾಯಾಲಯಗಳಲ್ಲಿ ಹೋರಾಟ ಮಾಡಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ವೇಣುಗೋಪಾಲನ್ ಹೇಳಿದ್ದಾರೆ. ಈಗಾಗಲೇ ಈ ಲಸಿಕೆಯಿಂದ ಜೀವ ಕಳೆದುಕೊಂಡ ಸಂತ್ರಸ್ತರ 8 ಕುಟುಂಬಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಸೆರಮ್ ಇಸ್ಟಿಟ್ಯೂಟ್‌ನ ಪೂನಾವಾಲಾ ಅವರು ತಾವು ಮಾಡಿದ ಪಾಪಗಳಿಗೆ ಉತ್ತರ ನೀಡಬೇಕು. ಅವರ ತಪ್ಪಿನಿಂದ ಬಲಿಯಾದ ಜೀವಗಳಿಗೆ ಉತ್ತರ ನೀಡಬೇಕು ಎಂದು ಗೋವಿಂದನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಈ ಲಸಿಕೆಗೆ ಅನುಮೋದನೆ ನೀಡಿದ ಸರ್ಕಾರಿ ಅಧಿಕಾರಿಗಳ ಬಗ್ಗೆಯೂ ಅವರು ಕಿಡಿ ಕಾರಿದ್ದಾರೆ. ಹಾಗೆಯೇ 2021ರಲ್ಲಿ ರಚನಾ ಗಂಗು ಎಂಬವರು ಕೂಡ ತಮ್ಮ 18 ವರ್ಷದ ಮಗಳು ರಿತೈಕಾಳನ್ನು ಕಳೆದು ಕೊಂಡಿದ್ದು, ಇದಕ್ಕೂ ಕೋವಿಶೀಲ್ಡ್‌ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಈ ಹಿಂದೆಯೂ ಅನುಮಾನ ಮೂಡಿಸಿದ್ದವು. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಂಸ್ಥೆಯು ಈ ವಿವಾದದ ಕುರಿತು ಇನ್ನೂ ಹೇಳಿಕೆ ನೀಡಿಲ್ಲ.

Continue Reading

ಬೆಂಗಳೂರು

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Ambulance Service: ಜನರಿಗೆ ತುರ್ತು ಚಿಕಿತ್ಸೆ ಸಿಗಲೆಂದು ಆರಂಭವಾದ 108 ಆ್ಯಂಬುಲೆನ್ಸ್ (108 ambulance) ಸೇವೆಗೆ ಮಂಕು ಕವಿದಿದೆ. ಪದೇಪದೆ ಆಂಬ್ಯುಲೆನ್ಸ್‌ ಸಿಬ್ಬಂದಿಗೆ ವೇತನ ಸಮಸ್ಯೆಯು ಉದ್ಭವಿಸುತ್ತಿದೆ. ಇದೀಗ 3 ತಿಂಗಳ ಬಾಕಿ ಸಂಬಳ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಸಿಟ್ಟಾಗಿರುವ 108 ಆಂಬ್ಯುಲೆನ್ಸ್‌ ಸಿಬ್ಬಂದಿ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.

VISTARANEWS.COM


on

By

108 ambulance
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್‌ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.

ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿ ಬಿದ್ದಿದ್ದಾರೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದೆ. ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ. ಮತ್ತೊಂದು ಕಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಎಲ್ಲ ಕಾರಣಗಳಿಗೆ ಸೋಮವಾರ ರಾತ್ರಿಯಿಂದ ಆಂಬ್ಯುಲೆನ್ಸ್‌ ಓಡಾಟವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ, ಕೇವಲ 13 ಸಾವಿರ ರೂ. ವೇತನ ನೀಡುತ್ತಿದೆ.

ಇದನ್ನೂ ಓದಿ: Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

ಹೀಗಾಗಿ ನಾಳೆ ಸಂಜೆಯೊಳಗೆ ವೇತನ ಪಾವತಿ ಮಾಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಪಾವತಿ ಮಾಡದಿದ್ದರೆ ಮುಷ್ಕರದ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘ ನೀಡಿದೆ.

ರಸ್ತೆಗಿಳಿಯಲ್ಲ ಆಂಬ್ಯುಲೆನ್ಸ್‌

ಸೋಮವಾರ ರಾತ್ರಿ (ಮೇ 6) 8 ಗಂಟೆಯಿಂದ ರಾಜ್ಯದ 3,500 ಆರೋಗ್ಯ ಕವಚ ಸಿಬ್ಬಂದಿ ಮುಷ್ಕರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 711 ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸುತ್ತಿದೆ. ರಾತ್ರಿಯಿಂದ ಸಂಪೂರ್ಣ ಬಂದ್‌ ಆಗಲಿದ್ದು, ರೋಗಿಗಳಿಗೆ ತೊಂದರೆ ಆದರೆ ಸರ್ಕಾರವೇ ನೇರ ಹೊಣೆ ಎಂದು ಆಂಬ್ಯುಲೆನ್ಸ್‌ ನೌಕರರ ಸಂಘದ ಉಪಾಧ್ಯಕ್ಷ ದಯಾನಂದ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Bood Pressure: ಅತ್ಯಂತ ಅಪಾಯಕಾರಿ ಕಾಯಿಲೆಯಾಗಿ ಪ್ರಸ್ತುತ ರಕ್ತದೊತ್ತಡ ಕಾಣಿಸುತ್ತಿದೆ. ಇದನ್ನು ನಿಯಂತ್ರಿಸಲು ಆಹಾರ ಕ್ರಮದೊಂದಿಗೆ ಜೀವನ ಶೈಲಿಯನ್ನೂ ಬದಲಾಯಿಸಬೇಕಿದೆ. ಯಾವ ಆಹಾರಗಳನ್ನು, ತರಕಾರಿಗಳನ್ನು ಸೇವಿಸಿದರೆ ರಕ್ತದೊತ್ತಡ ಕಡಿಮೆ ಮಾಡಬಹುದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Blood Pressure
Koo

ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲರಲ್ಲೂ ಕಂಡು ಬರುತ್ತಿರುವ ಕಾಯಿಲೆ (Illness) ಮಧುಮೇಹ (diabetes) ಮತ್ತು ಅಧಿಕ ರಕ್ತದೊತ್ತಡ (Blood Pressure). ಇವೆರಡನ್ನೂ ನಿರ್ಲಕ್ಷಿಸಿದರೆ ಅಪಾಯ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡವು (HIGH bp) ಸಾಮಾನ್ಯವಾಗಿ ನಾವು ಯೋಚಿಸುವುದಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುತ್ತದೆ. ಅನಿಯಂತ್ರಿತ ರಕ್ತದೊತ್ತಡವು ಅಪಧಮನಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.


ಇಂದಿನ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಅತಿಯಾದ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆಯು ಅಧಿಕ ರಕ್ತದೊತ್ತಡಕ್ಕೆ ಮುಖ್ಯ ಕಾರಣವಾಗುತ್ತದೆ. ಆರೋಗ್ಯಕರ ರಕ್ತದೊತ್ತಡದ ಸಂಖ್ಯೆಯನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಬಹುಮುಖ್ಯ. ಹಲವಾರು ಸರಳ ಬದಲಾವಣೆಗಳು ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೂ ನೈಸರ್ಗಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಏನು ತಿನ್ನಬೇಕು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿರುವ ತರಕಾರಿಗಳನ್ನು ನಮ್ಮ ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ರಕ್ತದೊತ್ತಡದ ನಿಯಂತ್ರಿಸಿಕೊಳ್ಳಬಹುದು. ಅವುಗಳು ಯಾವುದು ಗೊತ್ತೇ?


ಬೀಟ್ರೂಟ್

ಅಧ್ಯಯನಗಳ ಪ್ರಕಾರ ಬೀಟ್ರೂಟ್ ನಲ್ಲಿರುವ ನೈಟ್ರೇಟ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ರಸವನ್ನು ಕುಡಿಯುವುದು ಅಥವಾ ಸಲಾಡ್, ಸೂಪ್ ಅಥವಾ ಮೇಲೋಗರಗಳಿಗೆ ಸೇರಿಸುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.


ಹಸಿರು ಸೊಪ್ಪು ತರಕಾರಿಗಳು

ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ. ಸೊಪ್ಪು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ತೋರಿಸಿದೆ. ಪಾಲಕ್, ಹಸಿರು ಬಾಳೆ ಮತ್ತು ಸಾಸಿವೆ ಗ್ರೀನ್ಸ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.


ಬೆಳ್ಳುಳ್ಳಿ

ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳಿರುವ ಬೆಳ್ಳುಳ್ಳಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.


ಸಿಹಿ ಆಲೂಗಡ್ಡೆ

ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೇರಳವಾಗಿರುವ ಸಿಹಿ ಆಲೂಗಡ್ಡೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಬ್ರೊಕೊಲಿ

ಬ್ರೊಕೊಲಿಯನ್ನು ಆಹಾರದಲ್ಲಿ ಸೇರಿಸುವುದು ಅಧಿಕ ಬಿಪಿಯನ್ನು ನಿಯಂತ್ರಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಕೋಸುಗಡ್ಡೆಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ವಿಟಮಿನ್ ಕೆ, ಪ್ರೋಟೀನ್ ಮತ್ತು ಫೈಬರ್‌ನಿಂದ ಕೂಡಿದೆ.


ಆಲೂಗಡ್ಡೆ

ಆಲೂಗಡ್ಡೆ ಪೊಟ್ಯಾಸಿಯಮ್‌ನ ರಕ್ತದೊತ್ತಡ ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ. ಆಲೂಗಡ್ಡೆಯನ್ನು ಆಹಾರದಲ್ಲಿ ಹಲವಾರು ವಿಧದಲ್ಲಿ ಸೇರಿಸಿ ರಕ್ತದೊತ್ತಡವನ್ನು ದೂರವಿಡಬಹುದು.


ಇದನ್ನೂ ಓದಿ: Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಕ್ಯಾರೆಟ್

ದೃಷ್ಟಿಯ ಸಮಸ್ಯೆಯನ್ನು ನಿವಾರಿಸುವ ಕ್ಯಾರೆಟ್ ಹಲವಾರು ಪ್ರಯೋಜನಕಾರಿ ಸಸ್ಯ-ಆಧಾರಿತ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ನಿಯಂತ್ರಿತ ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಅಧಿಕ ರಕ್ತದೊತ್ತಡ ಹೊಂದಿದ್ದರೆ ಇದಕ್ಕೆ ಕೇವಲ ಆಹಾರ ಮಾತ್ರ ಸಹಾಯ ಮಾಡುವುದಿಲ್ಲ. ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಅಷ್ಟೇ ಅಗತ್ಯವಾಗಿದೆ. ಉಪ್ಪು ಸೇವನೆ, ಕೆಫೀನ್ ಅನ್ನು ಕಡಿಮೆ ಮಾಡುವುದು ಮತ್ತು ಒತ್ತಡದ ಮಟ್ಟವನ್ನು ನಿರ್ವಹಿಸುವುದು ಕೂಡ ಅತ್ಯಗತ್ಯ. ದೀರ್ಘಕಾಲದ ಅಧಿಕ ರಕ್ತದೊತ್ತಡ ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯ.

Continue Reading

ಆರೋಗ್ಯ

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಬೆಟ್ಟದ ನೆಲ್ಲಿಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ? ಈ (summer Health Tips) ಲೇಖನ ಓದಿ.

VISTARANEWS.COM


on

Summer Health Tips
Koo

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಇದನ್ನೂ ಓದಿ: Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

Continue Reading
Advertisement
Prajwal Revanna Case
ಕರ್ನಾಟಕ18 mins ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ33 mins ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ41 mins ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest55 mins ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ2 hours ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ2 hours ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Al Jazeera
ಪ್ರಮುಖ ಸುದ್ದಿ2 hours ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ2 hours ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest2 hours ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest3 hours ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ5 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ6 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌