Shyam Benegal: ತಂದೆ ಕ್ಷೇಮ, ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಶ್ಯಾಮ್ ಬೆನಗಲ್ ಮಗಳು - Vistara News

ಬಾಲಿವುಡ್

Shyam Benegal: ತಂದೆ ಕ್ಷೇಮ, ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಶ್ಯಾಮ್ ಬೆನಗಲ್ ಮಗಳು

ನಿರ್ದೇಶಕ ಶ್ಯಾಮ್ ಬೆನಗಲ್ (Shyam Benegal) ಮನೆಯಲ್ಲಿಯೇ ಡಯಾಲಿಸಿಸ್‌ಗೆ ಒಳಗಾಗಿದ್ದಾರೆ. ಇದೀಗ ಶ್ಯಾಮ್ ಬೆನಗಲ್ ಅವರ ಮಗಳು ಪಿಯಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Shyam Benegal Director Shyam Benegal's daughter says he is 'fine'
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶ್ಯಾಮ್ ಬೆನಗಲ್ (Shyam Benegal) ಅವರ ಎರಡೂ ಕಿಡ್ನಿಗಳೂ ಫೇಲ್‌ ಆಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭಿರಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದೀಗ ಶ್ಯಾಮ್ ಬೆನಗಲ್ ಅವರ ಮಗಳು ಪಿಯಾ (Pia) ʻʻಈ ಸುದ್ದಿ ಸುಳ್ಳು, ತಂದೆ ಕ್ಷೇಮವಾಗಿದ್ದಾರೆ. ರಬ್ಬಿಶ್‌ ರೂಮರ್ಸ್‌ಗಳಿಗೆ ಕಿವಿಗೊಡಬೇಡಿʼʼ ಎಂದು ಹಿಂದೂಸ್ತಾನ್ ಟೈಮ್ಸ್‌ಗೆ ಹೇಳಿಕೆ ನೀಡಿದ್ದಾರೆ.

ಟೈಮ್ಸ್ ನೌ ವರದಿ ಮಾಡಿದಂತೆ, ನಿರ್ದೇಶಕ ಶ್ಯಾಮ್ ಬೆನಗಲ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ. ಮನೆಯಲ್ಲಿಯೇ ಡಯಾಲಿಸಿಸ್‌ಗೆ ಒಳಗಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಕಚೇರಿಗೆ ಭೇಟಿ ನೀಡುತ್ತಿಲ್ಲ ಎಂದು ಸಿಬ್ಬಂದಿ ಹೇಳಿರುವುದು ವರದಿಯಾಗಿತ್ತು. ಇದೀಗ ಹಿಂದೂಸ್ತಾನ್ ಟೈಮ್ಸ್‌ಗೆ ಅವರ ಮಗಳು ಪಿಯಾ ಈ ಸುದ್ದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ʻʻತನ್ನ ತಂದೆ ಕ್ಷೇಮವಾಗಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ ಸುಳ್ಳು. ಕೆಲವೇ ದಿನಗಳಲ್ಲಿ ಅವರು ಆರೋಗ್ಯ ಸುಧಾರಿಸಿಕೊಳ್ಳುತ್ತಾರೆ. ವೈದ್ಯರು ಮನೆಗೆ ಬರುತ್ತಿದ್ದಾರೆ. ತಂದೆ ಮನೆಯಲ್ಲಿಯೇ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಗೆ ಹೋಗಲಾರದಷ್ಟು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬುದು ಸುಳ್ಳುʼʼಎಂದಿದ್ದಾರೆ.

ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆಯೇ ಎಂಬ ಪ್ರಶ್ನೆಗೆ ಪಿಯಾ ಅವರು ʻʻನಾನು ಈಗ ನಿಮಗೆ ಏನು ಹೇಳಲು ಸಾಧ್ಯವಿಲ್ಲ. ಸದ್ಯದಲ್ಲೇ ಅವರು ಕಚೇರಿಗೆ ಹಿಂದಿರುಗುತ್ತಾರೆ. ಅವರಿಗೆ ಸ್ವಲ್ಪ ವಿಶ್ರಾಂತಿ ಬೇಕು. 88ನೇ ವಯಸ್ಸಿನಲ್ಲಿ ಅವರಿಗೆ ನಿವೃತ್ತಿಯ ಸಮಯ. ಇದನ್ನು ಈ ರೀತಿ ಏಕೆ ಯೋಚಿಸುತ್ತಿಲ್ಲ?ಎಂದು ಹೇಳಿದ್ದಾರೆ.

Shyam Benegal

ಶ್ಯಾಮ್ ಅವರು ʻʻಮುಜೀಬ್: ದಿ ಮೇಕಿಂಗ್ ಆಫ್ ಎ ನೇಷನ್ʼʼ (Mujeeb: The Making of a Nation) ಎಂಬ ಚಿತ್ರದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ಚಿತ್ರವು ಬಾಂಗ್ಲಾದೇಶದ ಮೊದಲ ಅಧ್ಯಕ್ಷ ಶೇಖ್ ಮುಜಿಬುರ್ ರೆಹಮಾನ್ ಅವರ ಜೀವನಾಧರಿತ ಕಥೆಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Shyam Benegal: ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಎರಡೂ ಕಿಡ್ನಿ ಫೇಲ್‌, ಆರೋಗ್ಯ ಸ್ಥಿತಿ ಗಂಭೀರ

ಶ್ಯಾಮ್ ಬೆನಗಲ್ ತಮ್ಮ ವೃತ್ತಿಜೀವನದಲ್ಲಿ ಎಂಟು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಮೊದಲ ರಾಷ್ಟ್ರೀಯ ಪ್ರಶಸ್ತಿಯು ಅವರ ಅಂಕುರ್ ( Ankur) (1974) ಚಿತ್ರಕ್ಕಾಗಿ, ಇದು ಶಬಾನಾ ಅಜ್ಮಿ ಮತ್ತು ಅನಂತ್ ನಾಗ್ ಅವರ ಚೊಚ್ಚಲ ಚಿತ್ರವಾಗಿದೆ. ನಿಶಾಂತ್ (Nishant) (1975), ಮಂಥನ್ (Manthan ) (1976), ಭೂಮಿಕಾ: ದಿ ರೋಲ್ ( Bhumika: The Role ) (1977), ಜುನೂನ್ (Junoon) (1978), ಆರೋಹನ್ Arohan) (1982), ನೇತಾಜಿ ಸುಭಾಸ್ ಚಂದ್ರ ಬೋಸ್: ದಿ ಫಾರ್ಗಾಟನ್ ಹೀರೋ (Netaji Subhas Chandra Bose: The Forgotten Hero) (2004) ಮತ್ತು ವೆಲ್ ಡನ್‌ ಅಬ್ಬಾ (Well Done Abba)ಗಾಗಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: Neena Gupta: ನಿರ್ದೇಶಕ ಶ್ಯಾಮ್ ಬೆನಗಲ್ ಬಗ್ಗೆ ಅಸಮಾಧಾನ ಹೊರ ಹಾಕಿದ ನಟಿ ನೀನಾ ಗುಪ್ತಾ

ಪ್ರಶಸ್ತಿಗಳು

ರಾಷ್ಟ್ರಪ್ರಶಸ್ತಿಗಳನ್ನು ಗೆಲ್ಲುವುದರ ಜತೆಗೆ, ಶ್ಯಾಮ್ ಅವರು ಕೆಲವು ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ. ಇವುಗಳಲ್ಲಿ 1976ರಲ್ಲಿ ಪದ್ಮಶ್ರೀ, 1991 ರಲ್ಲಿ ಪದ್ಮಭೂಷಣ ಮತ್ತು 2005 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿವೆ. ಚಲನಚಿತ್ರ ನಿರ್ಮಾಣದ ಜತೆಗೆ, ಶ್ಯಾಮ್ ಬೆನಗಲ್ ಅವರ ಬರವಣಿಗೆಯ ಕೆಲಸಕ್ಕೂ ಹೆಸರುವಾಸಿಯಾಗಿದ್ದಾರೆ. ಅವರು ಮೂರು ಜನಪ್ರಿಯ ಪುಸ್ತಕಗಳನ್ನು ಬರೆದಿದ್ದಾರೆ, ದಿ ಚರ್ನಿಂಗ್ ವಿತ್ ವಿಜಯ್ ತೆಂಡೂಲ್ಕರ್ (The Churning with Vijay Tendulkar ೦ (1984), ಸತ್ಯಜಿತ್ ರೇ ( Satyajit Ray ) (1988) ಮತ್ತು ದಿ ಮಾರ್ಕೆಟ್‌ಪ್ಲೇಸ್ ( The Marketplace ) (1989).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

Sonakshi Sinha: ಸೋನಾಕ್ಷಿ ಸಿನ್ಹಾ ಅವರು ಮನೆಯವರ ಒಪ್ಪಿಗೆ ಪಡೆಯುವುದು ಬಿಡಿ, ಕನಿಷ್ಠ ಮಾಹಿತಿಯನ್ನೂ ನೀಡದೆ ಮದುವೆ ದಿನಾಂಕ ಫಿಕ್ಸ್‌ ಮಾಡಿರುವುದು ಆಕೆಯ ತಂದೆ ಶತ್ರುಘ್ನ ಸಿನ್ಹಾ ಮಾತ್ರವಲ್ಲ, ತಾಯಿ ಹಾಗೂ ಸಹೋದರನಿಗೂ ಬೇಸರ ತಂದಿತ್ತು. ಇದರಿಂದಾಗಿ ಶತ್ರುಘ್ನ ಸಿನ್ಹಾ ಮಾತ್ರವಲ್ಲದೆ ತಾಯಿ, ಸಹೋದರನೂ ಸೋನಾಕ್ಷಿ ಮದುವೆಗೆ ಹೋಗುವುದಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಶತ್ರುಘ್ನ ಮುನಿಸು ಕೂಡ ಶಮನವಾಗಿದೆ. ಇದರ ಮಧ್ಯೆಯೇ, ಸೋನಾಕ್ಷಿ ಸಿನ್ಹಾಗೆ ಮೆಹಂದಿ ಹಾಕುವ ಶಾಸ್ತ್ರವು ಅದ್ಧೂರಿಯಾಗಿ ನೆರವೇರಿದೆ.

VISTARANEWS.COM


on

Sonakshi Sinha
Koo

ಮುಂಬೈ: ಬಾಲಿವುಡ್ ನಟಿ (Bollywood Actress) ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಮುಸ್ಲಿಂ ಯುವಕ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ಮದುವೆಯಾಗುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಮುಂಬೈನಲ್ಲಿ ಸೋನಾಕ್ಷಿ ಸಿನ್ಹಾ ಅವರು ಜೂನ್‌ 23ರಂದು ಮದುವೆಯಾಗಲಿದ್ದು, ಶುಕ್ರವಾರ (ಜೂನ್‌ 21) ಮೆಹಂದಿ ಶಾಸ್ತ್ರವೂ ಅದ್ಧೂರಿಯಾಗಿ ನೆರವೇರಿದೆ. ಮೆಹಂದಿ ಶಾಸ್ತ್ರದ ಮೊದಲ ಫೋಟೊ ಕೂಡ ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮುಂಬೈನಲ್ಲಿ ನಡೆದ ಮೆಹಂದಿ ಶಾಸ್ತ್ರದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಭಾಗವಹಿಸಿದ್ದಾರೆ. ಸೋನಾಕ್ಷಿ ಸಿನ್ಹಾ ಅವರು ಜಹೀರ್‌ ಇಕ್ಬಾಲ್‌ ಹಾಗೂ ಗೆಳೆಯರೊಂದಿಗೆ ನಿಂತಿರುವ ಫೋಟೊ ಲಭ್ಯವಾಗಿದೆ. ಜಹೀರ್‌ ಇಕ್ಬಾಲ್‌ ಅವರ ಸಹೋದರಿ ಸನಮ್‌ ರತಾನ್ಸಿ ಅವರು ಇನ್‌ಸ್ಟಾಗ್ರಾಂನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಜಹೀರ್‌ ಇಕ್ಬಾಲ್‌ ಕೂಡ ಕುರ್ತಾ ಧರಿಸಿ ಭಾವಿ ಪತ್ನಿಯೊಂದಿಗೆ ಮಿಂಚಿದ್ದಾರೆ. ಸೋನಾಕ್ಷಿ ಸಿನ್ಹಾ ಅವರ ಫೋಟೊ ವೈರಲ್‌ ಆಗುತ್ತಲೇ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಹಾಜರ್‌ ಎಂದ ಶತ್ರುಘ್ನ ಸಿನ್ಹಾ

ಮುಸ್ಲಿಂ ಯುವಕನ ಜತೆ ಮದುವೆಯಾಗುತ್ತಿರುವುದಕ್ಕೆ, ಅದರಲ್ಲೂ ಮದುವೆ ದಿನಾಂಕವನ್ನೂ ಹೇಳದಿರುವುದಕ್ಕೆ ಮೊದಲು ನಟ, ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಇದಕ್ಕೂ ಮೊದಲು ಅಸಮಾಧಾನ ವ್ಯಕ್ತಪಡಿಸಿದ್ದರು. ಶತ್ರುಘ್ನ ಸಿನ್ಹಾ, ನಟಿಯ ತಾಯಿ ಹಾಗೂ ಸಹೋದರ ಕೂಡ ಭಾಗಿಯಾಗುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ವದಂತಿಗಳಿಗೆಲ್ಲ ಶತ್ರುಘ್ನ ಸಿನ್ಹಾ ಅವರು ತೆರೆ ಎಳೆದಿದ್ದಾರೆ. “ಮೊದಲು ಸಣ್ಣಪುಟ್ಟ ಗೊಂದಲಗಳು ಸೃಷ್ಟಿಯಾಗಿದ್ದವು. ಈಗ ಎಲ್ಲವೂ ಬಗೆಹರಿದಿದೆ. ಜೂನ್‌ 23ರಂದು ನಾವೆಲ್ಲ ಮದುವೆಗೆ ಹೋಗಲಿದ್ದೇವೆ” ಎಂದು ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು. ನಂತರ ಎಲ್ಲವೂ ಸರಿಹೋಗಿದೆ.

ಇದನ್ನೂ ಓದಿ: Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

Continue Reading

ಬಾಲಿವುಡ್

Isha Koppikar: ಖ್ಯಾತ ನಟ ನನಗೆ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದ ʻಸೂರ್ಯವಂಶʼ ನಟಿ!

Isha Koppikar: ಸ್ಟಾರ್‌ ಹೀರೋಗಳ ಜತೆಗೆ ನೀನು ಯಾವಾಗಲೂ ಕ್ಲೋಸ್‌ ಆಗಿ ಮೂವ್‌ ಆಗಬೇಕು. ನಮ್ಮಗಳ ಸ್ನೇಹವನ್ನು ನೀನು ಹೊಂದಿರಬೇಕು ಎನ್ನುತ್ತಲೇ ಭುಜ ಹಿಸುಕಿ, ಅನುಚಿತವಾಗಿ ಆ ಸ್ಟಾರ್‌ ನಟ ನನ್ನ ಜೊತೆ ವರ್ತಿಸಿದ್ದ ಎಂದೂ ಹೇಳಿಕೊಂಡಿದ್ದಾರೆ. ಕನ್ನಡದ ನಟ ವಿಷ್ಣುವರ್ಧನ್ ನಟನೆಯ ‘ಸೂರ್ಯವಂಶ’, ರವಿಚಂದ್ರನ್ ಜೊತೆ ‘ಓ ನನ್ನ ನಲ್ಲೆ’, ‘ಹೂ ಅಂತೀಯಾ ಊಹೂ ಅಂತೀಯಾ’ ಚಿತ್ರಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Isha Koppikar recalls casting couch experience
Koo

ಬೆಂಗಳೂರು: ಅನೇಕ ಸೌತ್ ಚಿತ್ರಗಳಲ್ಲಿ ನಟಿಸಿ, ತೆಲುಗು ಚಿತ್ರದ ಮೂಲಕ ಚಿತ್ರರಂಗವನ್ನ ಪ್ರವೇಶಿಸಿ, ಕನ್ನಡದ ʻಸೂರ್ಯವಂಶʼ ಸಿನಿಮಾದಿಂದ ಕನ್ನಡಿಗರ ಹೃದಯ ಗೆದ್ದ ಇಶಾ ಕೊಪ್ಪಿಕರ್ (Isha Koppikar) ತಮ್ಮ ಬದುಕಿನ ಕಹಿ ಅನುಭವ ಹಂಚಿಕೊಂಡಿದ್ದಾರೆ. ʻಫಿಜಾʼ ಚಿತ್ರದ ಮೂಲಕ ಹಿಂದಿ ಚಲನಚಿತ್ರಕ್ಕೆ ಪದಾರ್ಪಣೆ ಮಾಡಿದ್ದರು ಇಶಾ ಕೊಪ್ಪಿಕರ್. ಸಂದರ್ಶನದಲ್ಲಿ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದಾರೆ.

ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ, ಇಶಾ ಮಾತನಾಡಿ ʻʻಆಗೆಲ್ಲ ಮಿ ಟೂ ಭಿಯಾನ ಇರಲಿಲ್ಲ. ನನ್ನ ಕಾಲದಲ್ಲಿ ಅನೇಕ ನಟಿಯರು ಇಂಡಸ್ಟ್ರಿ ತೊರೆದರು. ಕೆಲವೇ ಕೆಲವರು ಇಂಡಸ್ಟ್ರಿಯಲ್ಲಿ ಇದ್ದರು. ಅದರಲ್ಲಿ ನಾನೂ ಒಬ್ಬಳು. ನಾನು 18 ವರ್ಷವನಿದ್ದಾಗ ನಟ ಕಾಸ್ಟಿಂಗ್ ಕೌಚ್‌ಗಾಗಿ ಸಂಪರ್ಕಿಸಿದರು. ಕೆಲಸ ಸಿಗಬೇಕಾದರೆ ನಟರ ಜೊತೆ ‘ಫ್ರೆಂಡ್ಲಿ’ ಆಗಬೇಕು ಅಂತ ಹೇಳಿದ್ರು. ನೀವು ಯಾವ ಅರ್ಥದಲ್ಲಿ ‘ಫ್ರೆಂಡ್ಲಿ’ ಆಗಿರಬೇಕು ಎಂದು ಹೇಳುತ್ತಿದ್ದೀರಿ ಅಂತ ಅವರಿಗೆ ಮರು ಪ್ರಶ್ನೆ ಮಾಡಿದ್ದೆ ಎಂದಿದ್ದಾರೆ. ಇನ್ನೂ.. ಇದೊಂದೇ ಅಲ್ಲ. ಮತ್ತೊಮ್ಮೆ.. ಮತ್ತೊಬ್ಬ ಸ್ಟಾರ್‌ ನನಗೆ ಸಿಂಗಲ್ ಆಗಿ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದಿದ್ದಾರೆ. ಡ್ರೈವರ್ ಅಥವಾ ಬೇರೆ ಯಾರನ್ನೂ ಜತೆಗೆ ಕರೆದುಕೊಂಡು ಬರಬಾರದು ಎಂಬ ಷರತ್ತನ್ನೂ ಹಾಕಿದ್ದ ಎಂದಿರುವ ಇಶಾ ಕೊಪ್ಪಿಕರ್, ಆ ಕಾಲಕ್ಕೆ ಆತ ಹಿಂದಿ ಚಿತ್ರರಂಗದ ‘ಎ’ ದರ್ಜೆಯ ನಾಯಕನಾಗಿದ್ದ ಎಂದು ಕೂಡ ಹೇಳಿದ್ದಾರೆ. ನನ್ನ ಜೊತೆ ಚಿತ್ರರಂಗದ ಬಂದ ಹಲವಾರು ನಾಯಕಿಯರು ಈ ಕಾಸ್ಟಿಂಗ್ ಕೌಚ್ ಕಾರಣಕ್ಕೆ ಚಿತ್ರರಂಗದಿಂದ ದೂರ ಸರೆದರು ಎಂದು ಹೇಳಿಕೊಂಡಿದ್ದಾರೆ.

ಸ್ಟಾರ್‌ ಹೀರೋಗಳ ಜತೆಗೆ ನೀನು ಯಾವಾಗಲೂ ಕ್ಲೋಸ್‌ ಆಗಿ ಮೂವ್‌ ಆಗಬೇಕು. ನಮ್ಮಗಳ ಸ್ನೇಹವನ್ನು ನೀನು ಹೊಂದಿರಬೇಕು ಎನ್ನುತ್ತಲೇ ಭುಜ ಹಿಸುಕಿ, ಅನುಚಿತವಾಗಿ ಆ ಸ್ಟಾರ್‌ ನಟ ನನ್ನ ಜೊತೆ ವರ್ತಿಸಿದ್ದ ಎಂದೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಅಂದಹಾಗೆ, ತೆಲುಗಿನ ‘ಚಂದ್ರಲೇಖಾ’ ಸಿನಿಮಾದಲ್ಲಿ ನಾಗಾರ್ಜುನಗೆ (Nagarjuna) ನಾಯಕಿಯಾಗಿ ಇಶಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಬಳಿಕ ಕನ್ನಡದ ನಟ ವಿಷ್ಣುವರ್ಧನ್ ನಟನೆಯ ‘ಸೂರ್ಯವಂಶ’, ರವಿಚಂದ್ರನ್ ಜೊತೆ ‘ಓ ನನ್ನ ನಲ್ಲೆ’, ‘ಹೂ ಅಂತೀಯಾ ಊಹೂ ಅಂತೀಯಾ’ ಚಿತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Anupam Kher: ಅನುಪಮ್ ಖೇರ್ ಕಚೇರಿಗೆ ನುಗ್ಗಿ ಕಳ್ಳರಿಂದ ಲೂಟಿ!

Anupam Kher: ಅನುಪಮ್ ಖೇರ್ ಶೀಘ್ರದಲ್ಲೇ ಕಂಗನಾ ರಣಾವತ್‌ ನಿದೇಶನದ ಏಮರ್ಜೆನ್ಸಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರು ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅನುಪಮ್ ಖೇರ್‌ (Anupam Kher) ತಮ್ಮ 538ನೇ ಚಿತ್ರವನ್ನು ಘೋಷಿಸಿದ್ದಾರೆ.

VISTARANEWS.COM


on

Anupam Kher Men Stole Safe From Office
Koo

ಬೆಂಗಳೂರು: ಬುಧವಾರ (ಜೂನ್ 19) ರಾತ್ರಿ ಅನುಪಮ್ ಖೇರ್ (Anupam Kher) ಅವರ ಮುಂಬೈ ಕಚೇರಿಗೆ ನುಗ್ಗಿ ಕಳ್ಳರು ಲೂಟಿ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅನುಪಮ್ ಖೇರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜತೆಗೆ ಕಳ್ಳತನ ಆಗಿರೋ ವಸ್ತುಗಳು ಯಾವವು ಎನ್ನುವುದರ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.ಬಾಗಿಲಿನ ಚಿಲಕವೂ ಮುರಿದಿದೆ ಎಂದು ಹೇಳಿಕೊಂಡಿದ್ದಾರೆ.

ಇಬ್ಬರು ಕಳ್ಳರು ಕದ್ದ ವಸ್ತುಗಳೊಂದಿಗೆ ಆಟೋರಿಕ್ಷಾಕ್ಕೆ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ. ಖೇರ್ ಅವರ ಕಚೇರಿ ಬಾಗಿಲು ಕೂಡ ಮುರಿದಿದ್ದು ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ಅನುಪಮ್ ಖೇರ್ ಎಕ್ಸ್‌ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ʻಕಳೆದ ರಾತ್ರಿ ಇಬ್ಬರು ಕಳ್ಳರು ವೀರ ದೇಸಾಯಿ ರಸ್ತೆಯಲ್ಲಿರುವ ನನ್ನ ಕಚೇರಿಯ ಎರಡು ಬಾಗಿಲುಗಳನ್ನು ಮುರಿದಿದ್ದಾರೆ. ಮನೆಯ ಬಾಗಿಲನ್ನು ಒಡೆದು ಕಳ್ಳರು ಕಚೇರಿ ಒಳಗೆ ಎಂಟ್ರಿ ಪಡೆದಿದ್ದಾರೆ. ಕಚೇರಿ ಪೂರ್ತಿಯಾಗಿ ಅವರು ಹುಡುಕಾಡಿದ್ದಾರೆ. ಆ ಬಳಿಕ ಅವರು ಸಿನಿಮಾದ ನೆಗೆಟಿವ್​ಗಳನ್ನು ಕದ್ದೊಯ್ದಿದ್ದಾರೆ. ಇನ್ನು, ಅವರು ಹಣ ಇಟ್ಟ ಬೀರುನ ಓಪನ್ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಎಫ್‌ಐಆರ್ ದಾಖಲಾಗಿದೆ ಮತ್ತು ಶೀಘ್ರದಲ್ಲೇ ಕಳ್ಳರನ್ನು ಹಿಡಿಯಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಏಕೆಂದರೆ ಸಿಸಿಟಿವಿ ಕ್ಯಾಮೆರಾದಲ್ಲಿ, ಇಬ್ಬರೂ ಆಟೋದಲ್ಲಿ ಕುಳಿತಿರುವುದನ್ನು ಕಾಣಬಹುದು, ”ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಅನುಪಮ್ ಖೇರ್ ಶೀಘ್ರದಲ್ಲೇ ಕಂಗನಾ ರಣಾವತ್‌ ನಿದೇಶನದ ಏಮರ್ಜೆನ್ಸಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರು ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅನುಪಮ್ ಖೇರ್‌ (Anupam Kher) ತಮ್ಮ 538ನೇ ಚಿತ್ರವನ್ನು ಘೋಷಿಸಿದ್ದಾರೆ. ಜುಲೈ 8ರಂದು ಅನುಪಮ್ ಖೇರ್ ಇನ್‌ಸ್ಟಾಗ್ರಾಮ್‌ ಮೂಲಕ ರವೀಂದ್ರನಾಥ ಟ್ಯಾಗೋರ್ ಪಾತ್ರವನ್ನು ಮಾಡುತ್ತಿರುವುದಾಗಿ ಹಂಚಿಕೊಂಡಿದ್ದಾರೆ. ಚಿತ್ರದ ಹೆಸರನ್ನು ಬಹಿರಂಗಪಡಿಸಿಲ್ಲ. ಶೀಘ್ರದಲ್ಲೇ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

Continue Reading

Latest

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

Amithab Bacchan: ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ತಮ್ಮ ಮಗ ಅಭಿಷೇಕ್ ಬಚ್ಚನ್ ಅಭಿನಯದ ‘ರಾವಣ್’ ಚಿತ್ರ 14ನೇ ವರ್ಷಕ್ಕೆ ಕಾಲಿಟ್ಟ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಷೇಕ್ ಅವರ ನಟನೆಯನ್ನು ಹೊಗಳಿದ್ದಾರೆ. ಆದರೆ ಅದರಲ್ಲಿ ನಟಿಸಿದ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಉಲ್ಲೇಖ ಮಾಡಲಿಲ್ಲ. ಇದರಿಂದ ಅಮಿತಾಬ್ ಬಚ್ಚನ್ ಅವರ ಕುಟುಂಬದಲ್ಲಿ ಸಮಸ್ಯೆ ಇರಬೇಕು. ಹಾಗಾಗಿ ಅವರು ತಮ್ಮ ಸೊಸೆಯ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

Amithab Bacchan
Koo

ಮುಂಬೈ: ಬಾಲಿವುಡ್‌ ಖ್ಯಾತ ನಟ ಅಮಿತಾಭ್‌ ಬಚ್ಚನ್ (Amithab Bacchan) ತಮ್ಮ ನಟನೆಯ ಮೂಲಕ ಎಲ್ಲರ ಮನ ಸೆಳೆದವರು. ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡುವ ಮೂಲಕ ಜನಪ್ರಸಿದ್ಧರಾಗಿದ್ದಾರೆ. ಇನ್ನು ಬಿಗ್‌ ಬಿ ಕುಟುಂಬವು ಕೂಡ ಸಿನಿಮಾ ರಂಗದಲ್ಲಿ ಹೆಸರು ಮಾಡಿದೆ. ಮಗ ಅಭಿಷೇಕ್ ಬಚ್ಚನ್, ಪತ್ನಿ ಜಯಾ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರು ಕೂಡ ಸಿನಿಮಾ ರಂಗದಲ್ಲಿ ಮಿಂಚಿದವರೇ. ಆದರೆ ಇದೀಗ ನಟ ಅಮಿತಾಭ್ ಬಚ್ಚನ್ ಅವರನ್ನು ಜನರು ಸೋಶಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ.

ಇತ್ತೀಚೆಗೆ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ತಮ್ಮ ಮಗ ಅಭಿಷೇಕ್ ಬಚ್ಚನ್ ಅಭಿನಯದ ‘ರಾವಣ್’ ಚಿತ್ರ 14ನೇ ವರ್ಷಕ್ಕೆ ಕಾಲಿಟ್ಟ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಷೇಕ್ ಅವರ ನಟನೆಯನ್ನು ಹೊಗಳಿದ್ದಾರೆ. ಆದರೆ ಅದರಲ್ಲಿ ನಟಿಸಿದ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಎಲ್ಲೂ ಉಲ್ಲೇಖ ಮಾಡಲಿಲ್ಲ.

ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರನ್ನು ಉಲ್ಲೇಖಿಸದೆ ನಿರ್ಲಕ್ಷ್ಯ ಮಾಡಿದ್ದಕ್ಕೆ ನೆಟ್ಟಿಗರು ಅಮಿತಾಭ್ ಬಚ್ಚನ್ ಅವರನ್ನು ಟ್ರೋಲ್ ಮಾಡಿದ್ದಾರೆ. ಮಣಿರತ್ನಂ ಅವರ ನಿರ್ದೇಶನದ ‌ʼರಾವಣ್ʼ ಚಿತ್ರ ಬಿಡುಗಡೆಯಾಗಿ ಜೂನ್ 18, 2024ಕ್ಕೆ 14 ವರ್ಷ ಪೂರೈಸಿದೆ. ಅಭಿಷೇಕ್ ಬಚ್ಚನ್ ಅಭಿಮಾನಿ ಸಂಘವೊಂದು ಈ ದಿನವನ್ನು ಆಚರಿಸಲು ಪೋಸ್ಟ್ ಅನ್ನು ಹಂಚಿಕೊಂಡಿದೆ. ಆಗ ಅಮಿತಾಭ್ ಬಚ್ಚನ್ ಅವರು ಚಿತ್ರವನ್ನು ಪೋಸ್ಟ್ ಮಾಡಿ, “ಅಭಿಷೇಕ್ ಅಭಿನಯ ಮರೆಯಲಾಗದಂತಹದು. ನಿಮ್ಮ ಇತರ ಚಿತ್ರಗಳಿಗಿಂತ ಈ ಚಿತ್ರ ತುಂಬಾ ಭಿನ್ನವಾಗಿದೆ. ಮತ್ತು ಇದು ಕಲಾವಿದನಿಗೆ ನಿಜವಾದ ಮೌಲ್ಯವನ್ನು ನೀಡುತ್ತದೆ” ಎಂದು‌ ಶ್ಲಾಘಿಸಿ ಬರೆದಿದ್ದಾರೆ.

ಆದರೆ ಈ ಚಿತ್ರದಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಅಭಿಷೇಕ್ ಜೊತೆ ಮುಖ್ಯ ಪಾತ್ರದಲ್ಲಿ ನಟಿಸಿದ್ದರು ಮತ್ತು ಅವರ ಅಭಿನಯವನ್ನು ಅಭಿಮಾನಿಗಳು ಹೊಗಳಿದ್ದರು. ಆದರೆ ಈ ಪೋಸ್ಟ್ ನಲ್ಲಿ ಅಮಿತಾಭ್‌ ಬಚ್ಚನ್ ಅವರು ಎಲ್ಲೂ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಈ ಬಗ್ಗೆ ನೆಟ್ಟಿಗರು ಅಮಿತಾಭ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

Amithab Bacchan

ಈ ಹಿಂದೆ ಕೂಡ ಕಜಾ ರಾರೇ ಹಾಡು 19ನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಅಮಿತಾಭ್ ಅವರು ಅಭಿಷೇಕ್ ಅವರನ್ನು ಹೊಗಳಿ ತಮ್ಮ ಸೊಸೆ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿರಲಿಲ್ಲ. ಕಜಾ ರಾರೇ ಹಾಡಿನಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ಹಾಗೂ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಂಡಿದ್ದರು.
ಇದರಿಂದ ಅಮಿತಾಭ್ ಬಚ್ಚನ್ ಅವರ ಕುಟುಂಬದಲ್ಲಿ ಸಮಸ್ಯೆ ಇರಬೇಕು. ಹಾಗಾಗಿ ಅವರು ತಮ್ಮ ಸೊಸೆಯ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

Continue Reading
Advertisement
Kalki 2898 AD Final Trailer Released
ಕರ್ನಾಟಕ2 hours ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ3 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ3 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ3 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ3 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ7 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌