Child Kidnapping case: ನರ್ಸ್‌ ರೂಪದಲ್ಲಿ ಬಂದು ಶಿಶು ಕದ್ದವಳು ಠಾಣೆಯಲ್ಲಿ ಪ್ರತ್ಯಕ್ಷ; ಮಕ್ಕಳಾಗದಿರುವುದೇ ಕಿಡ್ನ್ಯಾಪ್‌ಗೆ ಕಾರಣ - Vistara News

ಆರೋಗ್ಯ

Child Kidnapping case: ನರ್ಸ್‌ ರೂಪದಲ್ಲಿ ಬಂದು ಶಿಶು ಕದ್ದವಳು ಠಾಣೆಯಲ್ಲಿ ಪ್ರತ್ಯಕ್ಷ; ಮಕ್ಕಳಾಗದಿರುವುದೇ ಕಿಡ್ನ್ಯಾಪ್‌ಗೆ ಕಾರಣ

Child Kidnapping case: ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ಸೋಗಿನಲ್ಲಿ ಬಂದು ಶಿಶು ಕಳವು ಮಾಡಿದ್ದ ಪ್ರಕರಣವು ಸುಖಾಂತ್ಯವಾಗಿದೆ. ಮಕ್ಕಳಿಲ್ಲದೆ ತಾಯಿಯೊಬ್ಬಳು ಮಗುವನ್ನು ಕಳ್ಳತನ ಮಾಡಿರುವುದು ಗೊತ್ತಾಗಿದೆ.

VISTARANEWS.COM


on

Child Kidnapping case
ಮಗು ಕಳವು ಮಾಡಿದ್ದ ಗೀತಾ ಹಾಗೂ ರಂಜಿತಾ ಕುಂಬಾರರ ಮಗು ಮಡಿಲು ಸೇರಿದ ಕ್ಷಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ತಾಯಿ ಗರ್ಭದಿಂದ ಹೊರಬಂದಿದ್ದ ಆ ಹಸುಗೂಸು ಬೆಚ್ಚಗೆ ತಾಯಿಯ ಮಡಿಲಿನಲ್ಲಿತ್ತು. ಆದರೆ, ಹುಟ್ಟಿದ ಒಂದು ದಿನದ ಮಗುವನ್ನು ನಕಲಿ ದಾದಿಯೊಬ್ಬಳು ಕದ್ದು (Child Kidnapping case) ಪರಾರಿಯಾಗಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆ ಶಿಶುವು ಮತ್ತೆ ಹೆತ್ತವಳ ಮಡಿಲು ಸೇರುವಂತೆ ಮಾಡಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಬ್ಯಾಡಗಿ ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರು ಹೆಣ್ಣು ಮಗುವಿಗೆ ಶುಕ್ರವಾರ ಜನ್ಮ ನೀಡಿದ್ದರು. ನರ್ಸ್‌ ವೇಷದಲ್ಲಿ ಬಂದ ಮಹಿಳೆಯೊಬ್ಬಳು ಶಿಶುವಿನ ಅಜ್ಜಿಯನ್ನು ಕರೆದುಕೊಂಡು ಖಾಸಗಿ ಆಸ್ಪತ್ರೆಗಳಿಗೆ ಸುತ್ತಾಡಿಸಿದ್ದಾಳೆ. ಮಗುವಿಗೆ ಆರೋಗ್ಯದ ತಪಾಸಣೆ ಮಾಡಿಸುತ್ತೇನೆಂದು ನಂಬಿಸಿ ಕರೆದೊಯ್ದಿದ್ದಾಳೆ. ಕೊನೆಗೆ ಖಾಸಗಿ ಆಸ್ಪತ್ರೆಯಿಂದ ವಾಪಸಾಗುವಾಗ ಹಣ್ಣು ತೆಗೆದುಕೊಂಡು ಬರುತ್ತೇನೆಂದು ಮಗುವಿನ ಸಮೇತ ಹೋದವಳು ಅಪಹರಣ ಮಾಡಿದ್ದಳು.

ಎಷ್ಟು ಕಾದರೂ ನರ್ಸ್‌ ಹಾಗೂ ಶಿಶು ಪತ್ತೆ ಆಗದೆ ಇದ್ದಾಗ, ಪೋಷಕರಿಗೆ ಆತಂಕವಾಗಿ ಆಸ್ಪತ್ರೆಯ ಸಿಬ್ಬಂದಿಯನ್ನು ವಿಚಾರಿಸಿದಾಗಲೇ ಶಿಶು ಅಪಹರಣ (Kidnapping) ಆಗಿರುವ ವಿಷಯ ಗೊತ್ತಾಗಿದೆ. ಕೂಡಲೇ ಪೋಷಕರು ಹಾವೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿ ಮಗು ಇರುವುದು ಗೊತ್ತಾಗಿತ್ತು. ಗೀತಾ ಮಾದರ ಎಂಬಾಕೆ ಮಗುವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ. ಗೀತಾಗೆ ಮದುವೆಯಾಗಿ 6 ವರ್ಷ ಕಳೆದರೂ ಮಕ್ಕಳು ಆಗಿಲ್ಲ. ಹೀಗಾಗಿ ಜಿಲ್ಲಾಸ್ಪತ್ರೆಗೆ ಬಂದವಳೇ ನರ್ಸ್‌ ವೇಷಧರಿಸಿ ಹೆಣ್ಣು ಮಗುವನ್ನು ಕಳ್ಳತನ ಮಾಡಿ ಪರಾರಿ ಆಗಿದ್ದಳು.

ಇದನ್ನೂ ಓದಿ: ಮಾಹಿತಿಯನ್ನೇ ಕೊಡದೆ ಪರೀಕ್ಷೆ ಮುಂದೂಡಿದ ಬಾಗಲಕೋಟೆ ತೋಟಗಾರಿಕೆ ವಿವಿ; ಪರೀಕ್ಷಾರ್ಥಿಗಳ ಆಕ್ರೋಶ

ಮಾಧ್ಯಮದಲ್ಲಿ ಮಗು ಕಳುವಿನ ಸುದ್ದಿ ಪ್ರಸಾರವಾಗುತ್ತಿದ್ದಂತೆ ಗೀತಾಳ ಸಹೋದರ ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಮಗುವಿನೊಂದಿಗೆ ಬಂದು ತಪ್ಪೊಪ್ಪಿಕೊಂಡಿದ್ದಾಳೆ. ಸದ್ಯ ಗೀತಾಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಲೈಫ್‌ಸ್ಟೈಲ್

Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

Diabetic Chutney: ಮಧುಮೇಹಿಗಳು ಸಿಹಿ ಪದಾರ್ಥಗಳನ್ನು ಹೆಚ್ಚು ಸೇವಿಸುವಂತಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದರಿಂದ ಯಾವುದೇ ಫಂಕ್ಷನ್ ಗೆ ಹೋದರೂ ಸಿಹಿ ವಸ್ತುಗಳನ್ನು ಸೇವಿಸುವಂತಿಲ್ಲ.ಇನ್ನು ಊಟದಲ್ಲಿಯೂ ಸಾಕಷ್ಟು ನಿಯಂತ್ರಣವಿರಬೇಕು ಎನ್ನುತ್ತಾರೆ. ಹಾಗಾಗಿ ಮಧುಮೇಹಿಗಳಿಗೆ ಸೇವಿಸಬಹುದಾಂತಹ ಚಟ್ನಿಯ ಕುರಿತು ಮಾಹಿತಿ ಇಲ್ಲಿದೆ ನೋಡಿ.

VISTARANEWS.COM


on

Diabetic Chutney
Koo

ಬೆಂಗಳೂರು: ನಮ್ಮಲ್ಲಿ ಹೆಚ್ಚಿನವರು ರಕ್ತ ಪರೀಕ್ಷೆ ಮಾಡಿಸಿದಾಗ ಕಂಡುಬರುವಂತಹ ಮೊದಲ ಕಾಯಿಲೆ ಎಂದರೆ ಅದು ಮಧುಮೇಹ. ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಈ ಸಮಸ್ಯೆ ಕಾಡುತ್ತದೆ. ಒಮ್ಮೆ ಈ ಕಾಯಿಲೆ ಬಂದರೆ ಅದನ್ನು ವಾಸಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಮಧುಮೇಹಿಗಳು ಆಹಾರದ ಬಗ್ಗೆ ಕಾಳಜಿವಹಿಸುವುದು ಅಗತ್ಯ.
ಮಧುಮೇಹಿಗಳು ಸಿಹಿ ಪದಾರ್ಥಗಳನ್ನು ಹೆಚ್ಚು ಸೇವಿಸುವಂತಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದರಿಂದ ಯಾವುದೇ ಫಂಕ್ಷನ್ ಗೆ ಹೋದರೂ ಸಿಹಿ ವಸ್ತುಗಳನ್ನು ಸೇವಿಸುವಂತಿಲ್ಲ. ಹಾಗಾಗಿ ಊಟದ ತಟ್ಟೆಯಲ್ಲಿರುವ ಪಾಯಸ, ಲಾಡು, ಸಿಟ್ಸ್ ಗಳನ್ನು ನೋಡಿ ಬಾಯಿ ಚಪ್ಪರಿಸಬೇಕೆ ವಿನಃ ಸೇವಿಸುವಂತಿಲ್ಲ. ಇದು ಕೆಲವರಿಗೆ ಬೇಸರವನ್ನುಂಟುಮಾಡುತ್ತದೆ. ಹಾಗಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಅದಕ್ಕಾಗಿ ಮಧುಮೇಹಿಗಳು ಚಟ್ನಿಗಳನ್ನು (Diabetic Chutney) ಸೇವಿಸಿ. ಆದರೆ ಚಟ್ನಿ ತಯಾರಿಸುವಾಗ ಈ ಸಲಹೆ ಪಾಲಿಸಿ.

Diabetic Chutney

ಮಧುಮೇಹಿಗಳಿಗೆ ಚಟ್ನಿ ತಯಾರಿಸುವಾಗ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಪದಾರ್ಥಗಳನ್ನು ಹೆಚ್ಚು ಬಳಸಿ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬೇಗನೆ ಹೆಚ್ಚಿಸುವುದಿಲ್ಲ. ಹಸಿರು ಸೊಪ್ಪುಗಳು, ತರಕಾರಿಗಳು, ಟೊಮೆಟೊ ಮತ್ತು ಸೌತೆಕಾಯಿಗಳಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ. ಹಾಗಾಗಿ ಪುದೀನಾ, ಟೊಮೆಟೊ ಚಟ್ನಿ ತಯಾರಿಸಿ ಸೇವಿಸಿ.

ಮಧುಮೇಹಿಗಳು ಸಕ್ಕರೆಯಂಶವಿರುವ ವಸ್ತುಗಳನ್ನು ತರಕಾರಿಯಲ್ಲಿ ಬಳಸುವುದನ್ನು ತಪ್ಪಿಸಬೇಕು. ಕೆಲವು ಆಹಾರ ಪದಾರ್ಥಗಳಲ್ಲಿ ಸಕ್ಕರೆಯಂಶ ಹೆಚ್ಚಾಗಿರುತ್ತದೆ. ಅವುಗಳನ್ನು ಚಟ್ನಿ ತಯಾರಿಸಲು ಬಳಸಲಾಗುತ್ತದೆ. ಉದಾಹರಣೆಗೆ ಮಾವಿನ ಹಣ್ಣು ನೈಸರ್ಗಿಕ ಸಕ್ಕರೆಯಂಶವನ್ನು ಹೊಂದಿದೆ. ಇದನ್ನು ಬಳಸಿ ಚಟ್ನಿ ತಯಾರಿಸುತ್ತಾರೆ. ಮತ್ತು ಈ ಚಟ್ನಿ ಎಲ್ಲರಿಗೂ ಬಹಳ ಪ್ರಿಯವಾದುದು. ಆದರೆ ಮಧುಮೇಹಿಗಳು ಈ ಚಟ್ನಿಯ ಸೇವನೆಯನ್ನು ತಪ್ಪಿಸಿ.

ಮಧುಮೇಹಿಗಳು ಚಟ್ನಿ ತಯಾರಿಸುವಾಗ ನೆನೆಪಿಡಬೇಕಾದ ವಿಚಾರವೆಂದರೆ ನೀವು ಚಟ್ನಿಯಲ್ಲಿ ಫೈಬರ್ ಅಂಶ ಹೆಚ್ಚಿರುವ ಪದಾರ್ಥಗಳನ್ನು ಸೇರಿಸಿಕೊಳ್ಳಿ. ಯಾಕೆಂದರೆ ಇವು ನಿಮ್ಮ ಹೊಟ್ಟೆ ದೀರ್ಘಕಾಲ ತುಂಬಿರುವಂತೆ ಮಾಡುತ್ತವೆ. ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಡೆಯುತ್ತವೆ. ಹೆಚ್ಚಿನ ತರಕಾರಿ ಮತ್ತು ಹಣ್ಣುಗಳಲ್ಲಿ ಫೈಬರ್ ಅಂಶ ಹೆಚ್ಚಾಗಿರುತ್ತದೆಯಂತೆ. ಆದರೆ ಸಕ್ಕರೆಯಂಶ ಹೆಚ್ಚಾಗಿರುವ ತರಕಾರಿ ಹಣ್ಣುಗಳಿಂದ ಬಳಸಬೇಡಿ. ಇದರಿಂದ ಸಮಸ್ಯೆಯಾಗಬಹುದು.

Diabetic Chutney

ಮಧುಮೇಹಿಗಳು ಸಕ್ಕರೆಯಂತೆ ಉಪ್ಪಿನ ಬಳಕೆಯನ್ನು ಕಡಿಮೆ ಮಾಡಿ. ಹಾಗಾಗಿ ಮಧುಮೇಹಿಗಳಿಗೆ ಚಟ್ನಿ ತಯಾರಿಸುವಾಗ ಚಟ್ನಿಗೆ ಹೆಚ್ಚು ಉಪ್ಪನ್ನು ಸೇರಿಸಬೇಡಿ. ಉಪ್ಪು ಚಟ್ನಿಯ ರುಚಿಯನ್ನು ಹೆಚ್ಚಿಸುತ್ತದೆ ನಿಜ. ಆದರೆ ಉಪ್ಪು ಮಧುಮೇಹಿಗಳ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಚಟ್ನಿಗೆ ಉಪ್ಪನ್ನು ಕಡಿಮೆ ಬಳಸಿ ಸೇವಿಸಿ.

ಇದನ್ನೂ ಓದಿ: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

ಮಧುಮೇಹಿಗಳು ಚಟ್ನಿ ಸೇವಿಸಿದ ಮಾತ್ರಕ್ಕೆ ಅವರು ಆರೋಗ್ಯವಾಗಿರುವುದಿಲ್ಲ, ಜೊತೆಗೆ ಅವರು ಪ್ರತಿದಿನ ವ್ಯಾಯಾಮಗಳನ್ನು ಮಾಡಬೇಕು. ತಮ್ಮ ದೇಹ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ಮಧುಮೇಹಿಗಳು ಸೇವಿಸುವ ಕೆಲವು ಆಹಾರದಲ್ಲಿ ಕಾರ್ಬೋಹೈಡ್ರೆಟ್ ಹೆಚ್ಚಾಗಿರುತ್ತದೆ. ಹಾಗಾಗಿ ಇದರಿಂದ ನಿಮ್ಮ ತೂಖ ಹೆಚ್ಚಾಗಬಹುದು. ಹಾಗಾಗಿ ನಿಮ್ಮ ತೂಕವನ್ನು ನಿಯಂತ್ರಿಸಲು ಪ್ರತಿದಿನ ವ್ಯಾಯಾಮವನ್ನು ಮಾಡಬೇಕು.

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Covishield Vaccine: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Covishield vaccine supreme court
Koo

ಹೊಸದಿಲ್ಲಿ: ಬ್ರಿಟನ್‌ನಲ್ಲಿ (UK) ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆ, ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಬಗೆಗೆ ಅಧ್ಯಯನ ನಡೆಸಲು ಆದೇಶಿಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಮನವಿ ಸಲ್ಲಿಸಿದ್ದಾರೆ.

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಮಿತಿಯು ಏಮ್ಸ್‌ ನಿರ್ದೇಶಕರ ನೇತೃತ್ವವನ್ನು ಹೊಂದಿರಬೇಕು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರು ಮೇಲ್ವಿಚಾರಣೆ ಮಾಡಬೇಕು; ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಬೇಕು ಎಂದವರು ಕೋರಿದ್ದಾರೆ.

COVID-19 ಸಮಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನದ ಅಡ್ಡ ಪರಿಣಾಮಗಳಿಂದ ಮರಣ ಹೊಂದಿದ, ತೀವ್ರವಾಗಿ ಅಸ್ವಸ್ಥರಾದ, ಅಂಗವಿಕಲರಾದ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಬೇಕು. ಜನರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮಗಳನ್ನು ಕಾರಣವಾಗಬಹುದು ಎಂದು ಇತ್ತೀಚೆಗೆ ಕಂಪನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಮತ್ತು ಲಸಿಕೆ ಡೆವಲಪರ್ ಆಸ್ಟ್ರಾಜೆನೆಕಾ ಬ್ರಿಟನ್‌ನ ನ್ಯಾಯಾಲಯದಲ್ಲಿ ಇದನ್ನು ತಿಳಿಸಿದೆ. ಇದು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವಿಕೆ ಮತ್ತು ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

“ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ತಯಾರಿಕೆಗಾಗಿ ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ 175 ಕೋಟಿಗೂ ಹೆಚ್ಚು ಜನ ಕೋವಿಶೀಲ್ಡ್ ಅನ್ನು ಪಡೆದರು” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೋವಿಶೀಲ್ಡ್‌ ಜೊತೆಗೆ ಭಾರತೀಯ ತಯಾರಿಕೆಯಾದ Covaxin ಅನ್ನು ಕೂಡ ಭಾರತದಲ್ಲಿ ನೀಡಲಾಗಿತ್ತು.

ಕಳೆದ ವರ್ಷ ಲಂಡನ್‌ನಲ್ಲಿ ಜೇಮೀ ಸ್ಕಾಟ್ ಎಂಬವರು ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಅವರಲ್ಲಿ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೆದುಳಿನಲ್ಲಿ ರಕ್ತಸ್ರಾವವ ಉಂಟಾಗಿತ್ತು. ಶಾಶ್ವತ ಮಿದುಳಿನ ಗಾಯ ಉಂಟಾಗಿತ್ತು. ಇವರೂ ಸೇರಿ UKಯಲ್ಲಿ ಐವತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರು ಮತ್ತು ಸಂಬಂಧಿಕರು ಸುಮಾರು 100 ಮಿಲಿಯನ್ ಪೌಂಡ್‌ ಪರಿಹಾರವನ್ನು ಬಯಸಿದ್ದಾರೆ.

ಭಾರತದಲ್ಲಿ, ಕೋವಿಡ್ -19 ರ ನಂತರ ಹೃದಯಾಘಾತ ಮತ್ತು ವ್ಯಕ್ತಿಗಳ ಹಠಾತ್ ಕುಸಿತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಜನರಲ್ಲಿಯೂ ಹೃದಯಾಘಾತದ ಪ್ರಕರಣಗಳು ಸಂಭವಿಸಿವೆ. ಕೋವಿಶೀಲ್ಡ್‌ ಮಾಲಿಕ ಕಂಪನಿಯ ಮಾಹಿತಿ ದಾಖಲಾತಿಯು ನಮ್ಮಲ್ಲಿಯೂ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯ ಅಪಾಯಗಳ ಬಗ್ಗೆ ಯೋಚಿಸಲು ಒತ್ತಾಯಿಸಿದೆ ಎಂದು ಮನವಿಯಲ್ಲಿ ಹೇಳಿದೆ.

ಈ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಲಸಿಕೆಯ ದುಷ್ಪರಿಣಾಮಗಳಿಗೆ ನಷ್ಟಪರಿಹಾರವನ್ನು ಕೋರಿದ್ದು, ಯುಕೆಯಂತಹ ಕೆಲವು ದೇಶಗಳಲ್ಲಿಯೂ ವ್ಯಾಕ್ಸಿನೇಷನ್‌ನಿಂದ ತೀವ್ರವಾಗಿ ಅಂಗವಿಕಲರಾದ ಜನರಿಗೆ ನಷ್ಟ ಪಾವತಿ ವ್ಯವಸ್ಥೆ ಇದೆ ಎಂದಿದ್ದಾರೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Continue Reading

ಕೊಪ್ಪಳ

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Medical Negligence : ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಪಂಚ ನೋಡುವ ಮೊದಲೇ ಮಗುವೊಂದು ತಾಯಿ ಗರ್ಭದಲ್ಲೇ ಅಸುನೀಗಿದೆ. 9 ತಿಂಗಳ ಕಾಲ ಹೊತ್ತ ತಾಯಿಯು ಹೆರಿಗೆಗೂ ಮುನ್ನವೇ ಕಣ್ಮುಂಚಿದ್ದಾಳೆ. ಸಕಾಲಕ್ಕೆ ಚಿಕಿತ್ಸೆ ಸಿಗದೆ ತಾಯಿ-ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ತಪ್ಪಿತಸ್ಥ ವೈದ್ಯರನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದರು.

VISTARANEWS.COM


on

By

Medical Negligence
Koo

ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಹೆರಿಗೆ ಸಮಯದಲ್ಲಿ ಗರ್ಭಿಣಿ ಮತ್ತು ಶಿಶು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಕುಷ್ಟಗಿ ತಾಲೂಕಿನ ವಿಠಲಾಪುರ ಗ್ರಾಮದ ನಿವಾಸಿ ಲಕ್ಷ್ಮೀ (20) ಮೃತ ದುರ್ದೈವಿ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಿಯಲ್ಲಿ ಈ ಘಟನೆ ನಡೆದಿದೆ.

ಮೊದಲ ಹೆರಿಗೆ ಹಿನ್ನೆಲೆಯಲ್ಲಿ ಲಕ್ಷ್ಮೀಯನ್ನು ಮಂಗಳವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಹೆರಿಗೆ ಆಗುವ ಮೊದಲೇ ಲಕ್ಷ್ಮಿ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಕೂಡಾ ಮೃತಪಟ್ಟಿದ್ದಾರೆ.

ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿಲ್ಲ ಅವರ ನಿರ್ಲಕ್ಷ್ಯಕ್ಕೆ ಸಾವಾಗಿದೆ ಎಂದು ಲಕ್ಷ್ಮೀ ಮೃತ ಕುಟುಂಬಸ್ಥರು ಮತ್ತು ಗ್ರಾಮಸ್ಥರು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ರಾತ್ರಿಯಿಂದ ಧರಣಿ ನಡೆಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯಿಂದಲೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರದ ಡಾ.ಕಾವೇರಿ ಸರಿಯಾದ ಚಿಕಿತ್ಸೆ ಕೊಡಲಿಲ್ಲ. ಹೀಗಾಗಿ ವೈದ್ಯರ ಅಮಾನತ್ತಿಗೆ ಆಗ್ರಹಿಸಿ ಬುಧವಾರವು ಪ್ರತಿಭಟನೆ ಮುಂದುವರಿಸಿದ್ದಾರೆ. ಸಮುದಾಯ ಕೇಂದ್ರದ ಮುಂದೆ 200ಕ್ಕೂ ಹೆಚ್ಚು ಜನರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Covishield Vaccine: ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದು ತಜ್ಞರು ಹೇಳಿದ್ದಾರೆ.

VISTARANEWS.COM


on

Covishield vaccine india
Koo

ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿದ್ದಾರೆ.

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದವರು ತಿಳಿಸಿದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

“ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ. ಆದರೆ, ಭಾರತದಲ್ಲಿ ಮೂರು ಹಂತಗಳ ಲಸಿಕೆ ಅಭಿಯಾನ ವರ್ಷಗಳ ಹಿಂದೆಯೇ ಮುಗಿದಿದ್ದು, ಅಡ್ಡ ಪರಿಣಾಮಗಳ ಪ್ರಕರಣಗಳು ಅತ್ಯಂತ ವಿರಳವಾಗಿ ವರದಿಯಾಗಿವೆ.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

ಕಂಪನಿಯು ನ್ಯಾಯಾಲಯದಲ್ಲಿ ಒಪ್ಪಿಕೊಂಡಂತೆ, ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂಬ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆ ಲಸಿಕೆಗೆ ಇದೆ. ಯುರೋಪ್‌ನಲ್ಲಿ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾದ ತಿಂಗಳೊಳಗೆ ಕೆಲವು ಇಂಥ ಪ್ರಕರಣಗಳು ಬೆಳಕಿಗೆ ಬಂದವು. ಕೆಲವು ದೇಶಗಳು ಅಸ್ಟ್ರಾಜೆನೆಕಾ ಲಸಿಕೆಯ ಬಳಕೆಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಿದವು.

ʼವ್ಯಾಕ್ಸಿನೇಶನ್‌ ಬಳಿಕದ ಪ್ರತಿಕೂಲ ಘಟನೆಗಳ ಕುರಿತು ಸರ್ಕಾರಿ ಸಮಿತಿʼಯು (AEFI) ದೇಶದಲ್ಲಿ TTSನ ಕನಿಷ್ಠ 36 ಪ್ರಕರಣಗಳನ್ನು ಪರಿಶೀಲಿಸಿದೆ. 2021ರಲ್ಲಿ ದೇಶದಲ್ಲಿ ಕೋವಿಡ್-19 ಲಸಿಕೆ ಹಾಕಿದ ಮೊದಲ ವರ್ಷ 18 ಸಾವುಗಳನ್ನು ದೃಢಪಡಿಸಿದೆ. ಆದರೆ ಇದು ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತಿದ್ದು, ಬ್ರಿಟನ್‌ನ ನ್ಯಾಯಾಲಯದಲ್ಲಿ ಆಗಿರುವ ವಾದವನ್ನು ಮಂಡಿಸಿ ನ್ಯಾಯ ಪಡೆಯಲು ಸಾಧ್ಯವಿಲ್ಲ.

ಐರೋಪ್ಯ ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ರೋಗದ ವಿರುದ್ಧ ಲಸಿಕೆ ಹಾಕಲು ಆರಂಭಿಸಿದ ಅವಧಿಯಲ್ಲಿ TTS ವರದಿಯಾಗಿದೆ. ಆದರೆ ಭಾರತದಲ್ಲಿ ಇದು ಬಹಳ ಅಪರೂಪ ಎಂದು ತಜ್ಞರು ಹೇಳುತ್ತಾರೆ. “ಟಿಟಿಎಸ್ ಬಹಳ ಅಪರೂಪದ ಅಡ್ಡ ಪರಿಣಾಮ. ಯುರೋಪಿಯನ್ನರಿಗೆ ಹೋಲಿಸಿದರೆ ಭಾರತೀಯರು ಮತ್ತು ದಕ್ಷಿಣ ಏಷ್ಯಾದವರಲ್ಲಿ ಇನ್ನೂ ಅಪರೂಪ. ವ್ಯಾಕ್ಸಿನೇಷನ್ ಜೀವಗಳನ್ನು ಉಳಿಸಿದೆ. ಅದರ ಪ್ರಯೋಜನಕ್ಕೆ ಹೋಲಿಸಿದರೆ ಅಪಾಯಗಳನ್ನು ಕ್ಷುಲ್ಲಕ” ಎಂದು ತಜ್ಞರು ವಿವರಿಸಿದ್ದಾರೆ.

ಅಡ್ಡ ಪರಿಣಾಮದ ರಿಸ್ಕ್‌ ಮೊದಲ ವ್ಯಾಕ್ಸಿನೇಷನ್ ನಂತರದ ಮೊದಲ ಕೆಲವು ವಾರಗಳಲ್ಲಿ ಮಾತ್ರ ಹೆಚ್ಚು. ಹೆಚ್ಚಿನ ಭಾರತೀಯರು ಈಗಾಗಲೇ ಮೂರು ಡೋಸ್‌ ಪಡೆದಿದ್ದಾರೆ. ಇದಾಗಿ ಬಹಳ ಸಮಯ ಸಂದಿದೆ. “ನಾವೆಲ್ಲರೂ ಲಸಿಕೆಯನ್ನು ಬಹಳ ಹಿಂದೆಯೇ ಯಶಸ್ವಿಯಾಗಿ ಪಡೆದಿದ್ದೇವೆ” ಎಂದು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಗ್ಲೋಬಲ್ ಹೆಲ್ತ್‌ನ ನಿರ್ದೇಶಕ ಡಾ ಗಗನ್‌ದೀಪ್ ಕಾಂಗ್ ಹೇಳಿದ್ದಾರೆ.

“ಜನರು ಈಗ ಪ್ರತಿಕ್ರಿಯಿಸುತ್ತಿರುವುದು ಆಶ್ಚರ್ಯಕರವಾಗಿದೆ. ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದಾಗಲೂ ಸೈಡ್‌ ಎಫೆಕ್ಟ್‌ಗಳನ್ನು ಉತ್ತಮವಾಗಿ ದಾಖಲಿಸಲಾಗಿದೆ ಮತ್ತು ವೈಜ್ಞಾನಿಕವಾಗಿ ಸ್ವೀಕರಿಸಲಾಗಿದೆ. ಸಾಂಕ್ರಾಮಿಕ ರೋಗ ಉತ್ತುಂಗದಲ್ಲಿದ್ದಾಗ ಲಸಿಕೆಯ ಪ್ರಯೋಜನವು ಅಪಾಯವನ್ನು ಮೀರಿಸಿತ್ತು” ಎಂದು ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ ಬಯೋಸೈನ್ಸ್ ಮತ್ತು ಆರೋಗ್ಯ ಸಂಶೋಧನೆಯ ಡೀನ್ ಡಾ. ಅನುರಾಗ್ ಅಗರ್ವಾಲ್ ಹೇಳುತ್ತಾರೆ.

ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್‌ನಲ್ಲಿನ 2022ರ ಅಧ್ಯಯನದ ಪ್ರಕಾರ ಅಸ್ಟ್ರಾಜೆನೆಕಾ ಮೊದಲ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಜನರಲ್ಲಿ 8.1 ಟಿಟಿಎಸ್ ಪ್ರಕರಣಗಳು ಕಂಡುಬಂದಿವೆ. ಎರಡನೇ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಮಂದಿಯಲ್ಲಿ 2.3 ಟಿಟಿಎಸ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಭೌಗೋಳಿಕ ವ್ಯತ್ಯಾಸವಿದೆ. ಹೆಚ್ಚಿನ ಪ್ರಕರಣಗಳು ನಾರ್ಡಿಕ್ ದೇಶಗಳಿಂದ (ನಾರ್ವೆ ಇತ್ಯಾದಿ- ಹತ್ತು ಲಕ್ಷಕ್ಕೆ 17.6) ವರದಿಯಾಗಿವೆ. ಏಷ್ಯಾದ ದೇಶಗಳಲ್ಲಿ ಅತಿ ಕಡಿಮೆ (ಪ್ರತಿ ಹತ್ತು ಲಕ್ಷಕ್ಕೆ 0.2).

ಈಗ ಲಸಿಕೆ ತೆಗೆದುಕೊಳ್ಳಬೇಕೇ?

ಈಗ ಹೆಚ್ಚಿನ ಜನರಲ್ಲಿ ಕೊರೊನಾ ರೋಗನಿರೋಧಕ ಶಕ್ತಿಯಿದ್ದು, ಲಸಿಕೆಯ ಅಗತ್ಯವಿಲ್ಲ ಎಂದು ಡಾ. ಅಗರ್ವಾಲ್ ಹೇಳುತ್ತಾರೆ. “ವೈರಸ್ ಸಂಚರಿಸುತ್ತಿದ್ದರೂ ಈಗ ಭಾರತೀಯರಲ್ಲಿ ಪ್ರತಿಕಾಯ ಮಟ್ಟ ತುಂಬಾ ಹೆಚ್ಚಿವೆ. ಒಮಿಕ್ರಾನ್‌ನಂತಹ ರೂಪಾಂತರಿಗಳಿಂದ ರಕ್ಷಿಸಬಹುದಾದ ಹೊಸ ಲಸಿಕೆಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Continue Reading
Advertisement
Bhajanotsava
ಬೆಂಗಳೂರು3 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ4 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ4 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ5 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ5 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ5 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ5 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ6 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ6 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ6 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌