WPL 2023: ಡೆಲ್ಲಿಗೆ ಸಾಧಾರಣ ಮೊತ್ತದ ಗುರಿ ನೀಡಿದ ಆರ್​ಸಿಬಿ - Vistara News

ಕ್ರಿಕೆಟ್

WPL 2023: ಡೆಲ್ಲಿಗೆ ಸಾಧಾರಣ ಮೊತ್ತದ ಗುರಿ ನೀಡಿದ ಆರ್​ಸಿಬಿ

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ 4 ವಿಕೆಟ್​ಗೆ 150 ರನ್​ ಗಳಿಸಿ ಸವಾಲೊಡ್ಡಿದೆ.

VISTARANEWS.COM


on

WPL 2023: RCB has given a modest target to Delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಸೋಮವಾರದ ಮಹಿಳಾ ಪ್ರೀಮಿಯರ್​ ಲೀಗ್​ನ ಪಂದ್ಯದಲ್ಲಿ ಸ್ಮೃತಿ ಮಂಧಾನಾ ಸಾರಥ್ಯದ ರಾಯಲ್​ ಚಾಲೆಂಜರ್ಸ್ ಬೆಂಗಳೂರು 150 ರನ್​ ಗಳಿಸಿ ಸಾಧಾರಣ ಮೊತ್ತದ ಸವಾಲು ನೀಡಿದೆ.

ನವಿ ಮುಂಬಯಿನ ಡಿ.ವೈ. ಪಾಟೀಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 150 ರನ್​ ಗಳಿಸಿದೆ. ಡೆಲ್ಲಿ ಕ್ಯಾಪಿಟಲ್ಸ್​ ಗೆಲುವಿಗೆ 151 ರನ್​ ಬಾರಿಸಬೇಕಿದೆ.

ಕೂಟದಲ್ಲಿ ದುಬಾರಿ ಮೊತ್ತ ಪಡೆದ ಆಟಗಾರ್ತಿ ಸ್ಮೃತಿ ಮಂಧಾನಾ ಈ ಪಂದ್ಯದಲ್ಲಿಯೂ ಬ್ಯಾಟಿಂಗ್​ ಮಂದಹಾಸ ಮೂಡಿಸುವಲ್ಲಿ ವಿಫಲರಾದರು. ಕೇವಲ 8 ರನ್​ಗೆ ಔಟಾಗುವ ಮೂಲಕ ಆಡಿದ ಐದೂ ಪಂದ್ಯಗಳಲ್ಲಿಯೂ ಘೋರ ಬ್ಯಾಟಿಂಗ್​ ವೈಫಲ್ಯ ಮುಂದುವರಿಸಿದರು.

ಇದನ್ನೂ ಓದಿ WPL 2023: ಗೆಲುವಿನ ನಾಗಾಲೋಟ ಮುಂದುವರಿಸಿದ ಮುಂಬೈ; ಯುಪಿ ವಿರುದ್ಧ 8 ವಿಕೆಟ್‌ ಜಯ

ಆರ್​ಸಿಬಿಗೆ ಆಸರೆಯಾದ ಎಲ್ಲಿಸ್​ ಪೆರ್ರಿ

ಡೆಲ್ಲಿಯ ಫಾತಕ ಬೌಲಿಂಗ್​ಗೆ ರನ್​ ಗಳಿಸಲು ತಿಣುಕಾಡಿದ ಆರ್​ಸಿಬಿ ತಂಡಕ್ಕೆ ಆಸೀಸ್​ ಆಲ್​ರೌಂಡರ್​ ಎಲ್ಲಿಸ್​ ಪೆರ್ರಿ ತಾಳ್ಮೆಯುತ ಬ್ಯಾಟಿಂಗ್​ ನಡೆಸುವ ಮೂಲಕ ಆಸರೆಯಾದರು. ಆರಂಭದಲ್ಲಿ ಎಸೆತವೊಂದಕ್ಕೆ ರನ್​ ಗಳಿಸುತ್ತಿದ್ದ ಅವರು ಅಂತಿಮ 4 ಓವರ್​ಗಳ ಆಟದ ವೇಳೆ ಬಿರುಸಿನ ಬ್ಯಾಟಿಂಗ್​ ನಡೆಸಿದರು. ಇವರ ಈ ಅಜೇಯ ಅರ್ಧಶತಕದ ಬ್ಯಾಟಿಂಗ್​ ಸಾಹಸದಿಂದ ಆರ್​ಸಿಬಿ ನೂರರ ಗಡಿ ದಾಟುವಲ್ಲಿ ಯಶಸ್ಸು ಕಂಡಿತು.

ಎಲ್ಲಿಸ್​ ಪೆರ್ರಿಗೆ ಉತ್ತಮ ಸಾಥ್​ ನೀಡಿದ ರಿಚಾ ಘೋಷ್​ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್​ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ನರೆವಾದರು. ಆದರೆ ಶಿಖಾ ಪಾಂಡೆ ಅವರ ಎಸೆತದಲ್ಲಿ ರಿವರ್ಸ್​ ಸ್ವೀಪ್ ಮಾಡುವ​ ಪ್ರಯತ್ನದಲ್ಲಿ ಎಡವಿದ ಅವರು ಕೀಪರ್​ ತನಿಯಾ ಭಾಟಿಯಾಗೆ ಕ್ಯಾಚ್​ ನೀಡಿ ವಿಕೆಟ್ ಕೈಚೆಲ್ಲಿದರು. 16 ಎಸೆತ ಎದುರಿಸಿದ ಅವರು ತಲಾ ಮೂರು ಸಿಕ್ಸರ್​ ಮತ್ತು ಬೌಂಡರಿ ನೆರವಿನಿಂದ 37 ರನ್​ ಚಚ್ಚಿದರು.

ಎಲ್ಲಿಸ್​ ಪೆರ್ರಿ 52ಎಸೆತ ಎದುರಿಸಿ ಅಜೇಯ 67 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 5 ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಯಿತು. ಡೆಲ್ಲಿ ಪರ ಅನುಭವಿ ಬೌಲರ್​ ಶಿಖಾ ಪಾಂಡೆ 4 ಓವರ್​ಗೆ 23 ರನ್​ ನೀಡಿ 3 ವಿಕೆಟ್​ ಕಿತ್ತು ಮಿಂಚಿದರು. ಕಳೆದ ಪಂದ್ಯದಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿದ ಮರಿಜಾನೆ ಕಾಪ್ ಈ ಪಂದ್ಯದಲ್ಲಿ ವಿಕೆಟ್​ ಪಡೆಯದಿದ್ದರೂ ನಾಲ್ಕು ಓವರ್​ನಲ್ಲಿ ಒಂದು ಮೇಡನ್​ ಸಹಿತ 18 ರನ್​ ಬಿಟ್ಟುಕೊಟ್ಟ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು.

ಸಂಕ್ಷಿಪ್ತ ಸ್ಕೋರ್​: ರಾಯಲ್ ಚಾಲೆಂಜರ್ಸ್​ ಬೆಂಗಳೂರು; 20 ಓವರ್​ಗಳಲ್ಲಿ 4 ವಿಕೆಟ್​ಗೆ 150 (ಎಲ್ಲಿಸ್​ ಪೆರ್ರಿ ಅಜೇಯ 67, ರಿಚಾ ಘೋಷ್​ 37, ಶಿಖಾ ಪಾಂಡೆ 23ಕ್ಕೆ 3)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

T20 World Cup 2024: ರೋಹಿತ್ ಶರ್ಮ ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ

VISTARANEWS.COM


on

T20 World Cup 2024
Koo

ಬೆಂಗಳೂರು: 2007ರಲ್ಲಿ ಆರಂಭಗೊಂಡ ಟಿ20 ವಿಶ್ವ ಕಪ್ (T20 World Cup 2024) ​ನಿಂದ 2022ರ ವಿಶ್ವ ಕಪ್​ವರೆಗೆ ನಡೆದ ಟಿ20 ವಿಶ್ವ ಕಪ್​ನಲ್ಲಿ ಭಾರತ ಕ್ರಿಕೆಟ್​ ತಂಡದ ಆಟಗಾರರು ಎಷ್ಟು ಸಿಕ್ಸರ್​ ಸಾಧನೆ ಮಾಡಿದ್ದಾರೆ ಎನ್ನುವ ಸ್ವಾರಸ್ಯಕರ ಸಂಗತಿ ಇಂತಿದೆ.

ರೋಹಿತ್​ ಶರ್ಮ


ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮ ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ ಉದ್ಘಾಟನ ಆವೃತ್ತಿಯ ವಿಶ್ವಕಪ್​ನಿಂದ ಆಡಿ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ. ಇದೀಗ 2024 ರ ವಿಶ್ವ ಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್​ ತಮ್ಮ ಸಿಕ್ಸರ್​ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. 2007-2022ರ ವಿಶ್ವಕಪ್​ ಆವೃತ್ತಿಯಲ್ಲಿ ರೋಹಿತ್​ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ.


ಯುವರಾಜ್ ಸಿಂಗ್


ಭಾರತ ಕ್ರಿಕೆಟ್​ ಕಂಡ ಅತ್ಯಂತ ಶ್ರೇಷ್ಠ ಆಲ್​ರೌಂಡರ್, ಮಾಜಿ ಆಟಗಾರ, 2007 ವಿಶ್ವಕಪ್​ ಟೂರ್ನಿಯಲ್ಲಿ ಸ್ಟುವರ್ಟ್​ ಬ್ರಾಡ್​ ಓವರ್​ಗೆ ಸತತವಾಗಿ 6 ಸಿಕ್ಸರ್​ ಬಾರಿಸಿದ ಯುವರಾಜ್​ ಸಿಂಗ್ ಈ ಸಾಲಿನಲ್ಲಿ ಸದ್ಯ ದ್ವಿತೀಯ ಸ್ಥಾನದಲ್ಲಿದ್ದಾರೆ. ಯುವಿ ಒಟ್ಟು 31 ವಿಶ್ವ ಕಪ್​ ಪಂದ್ಯಗಳನ್ನು ಆಡಿದ್ದು 33 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಭಾರತ 2007 ಮತ್ತು 2011 ರ ವಿಶ್ವ ಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಆಟಗಾರ ಎನ್ನುವ ಕೀರ್ತಿಯೂ ಇವರದ್ದಾಗಿದೆ.


ವಿರಾಟ್​ ಕೊಹ್ಲಿ


ಕಳೆದ 2 ವರ್ಷಗಳ ಬಳಿಕ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ, ಈ ಆವೃತ್ತಿ ಐಪಿಎಲ್​ನಲ್ಲಿ ಗರಿಷ್ಠ ಮೊತ್ತ ದಾಖಲಿಸಿದ ಕಿಂಗ್ ಖ್ಯಾತಿಯ​ ವಿರಾಟ್​ ಕೊಹ್ಲಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2012ರಿಂದ ಟಿ20 ವಿಶ್ವಕಪ್​ ಆಡುತ್ತಿರುವ ಕೊಹ್ಲಿ ಇದುವರೆಗೆ 27 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 28 ಸಿಕ್ಸರ್​ ಬಾರಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಕೇವಲ 4 ಸಿಕ್ಸರ್​ ಬಾರಿಸಿದರೆ ಯುವರಾಜ್​ ಸಿಂಗ್​ ದಾಖಲೆ ಮುರಿಯಲಿದ್ದಾರೆ.

ಇದನ್ನೂ ಓದಿ T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!


ಎಂ.ಎಸ್​ ಧೋನಿ


ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಈ ಯಾದಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಧೋನಿ 2007ರಿಂದ 2016ರ ತನಕ 33 ಪಂದ್ಯಗಳನ್ನಾಡಿ ಒಟ್ಟು 16 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಆದರೆ ಧೋನಿ ಚೊಚ್ಚಲ ಟಿ20 ವಿಶ್ವಕಪ್​ನಲ್ಲಿಯೇ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ ಖ್ಯಾತಿ ಹೊಂದಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು


ಕೆ.ಎಲ್​ ರಾಹುಲ್​


ಕನ್ನಡಿಗ ಕೆ.ಎಲ್​ ರಾಹುಲ್​ ಅವರು ಇದುವರೆಗೆ 11 ಟಿ20 ವಿಶ್ವಕಪ್​ ಆಡಿದ್ದು 15 ಸಿಕ್ಸರ್​ ಬಾರಿಸಿದ್ದಾರೆ. ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅವರಿಗೆ 5ನೇ ಸ್ಥಾನ. ವಿಪರ್ಯಾಸವೆಂದರೆ ಈ ಬಾರಿ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿಲ್ಲ.

Continue Reading

ಕ್ರೀಡೆ

Team India Coach: ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

Team India Coach: ಮೂಲಗಳ ಪ್ರಕಾರ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌(Team India Coach) ಹುದ್ದೆಗೆ ಈಗಾಗಲೇ 3,000 ಅರ್ಜಿಗಳು ಬಂದಿಗೆ ಎಂದು ಹೇಳಲಾಗಿದೆ. ಇದರಲ್ಲಿ ಬಹುಪಾಲು ನಕಲಿ ಅರ್ಜಿಗಳಾಗಿವೆ.

VISTARANEWS.COM


on

Team India Coach
Koo

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌(Team India Coach) ಹುದ್ದೆಗೆ(Team India Coach Applications) ಯಾರು ಸೂಕ್ತ ಎಂದು ಚಿಂತಿಸುತ್ತಿರುವ ಮಧ್ಯೆ ಬಿಸಿಸಿಐಗೆ ಅಚ್ಚರಿಯೊಂದು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi), ಸಚಿನ್​ ತೆಂಡೂಲ್ಕರ್​(Sachin Tendulkar) , ಎಂ.ಎಸ್​ ಧೋನಿ(MS Dhoni), ಅಮಿತ್ ಶಾ(Amit Shah) ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ. ಅಸಲಿಗೆ ಇವರ್‍ಯಾರು‌ ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಲು ಮೇ 27 ಅಂತಿಮ ಗಡುವಾಗಿತ್ತು. ಹೀಗಾಗಿ ಕೆಲ ನೆಟ್ಟಿಗರು ಮೋದಿ, ಸಚಿನ್​, ಅಮಿತ್ ಶಾ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿ ಬಿಸಿಸಿಐಗೆ ಚಕಮ್​ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ಅನೇಕ ಕ್ರಿಕೆಟ್​ ಅಭಿಮಾನಿಗಳು(Cricket Fans Apply For India’s Head Coach) ಗೂಗಲ್​ ಅರ್ಜಿ ಪಡೆದುಕೊಂಡು ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಟ್ವೀಟ್​ಗಳು ವೈರಲ್​ ಆಗಿತ್ತು. ಮೂಲಗಳ ಪ್ರಕಾರ ಈಗಾಗಲೇ 3,000 ಅರ್ಜಿಗಳು ಬಂದಿಗೆ ಎಂದು ಹೇಳಲಾಗಿದೆ.

ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. 

ಇದನ್ನೂ ಓದಿ Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಫಜೀತಿಗೆ ಸಿಲುಕಿದ ಬಿಸಿಸಿಐ

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್​ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.

ಮೂಲಗಳ ಪ್ರಕಾರ ಗೌತಮ್​ ಗಂಭೀರ್​ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಗೌತಮ್​ ಗಂಭೀರ್​ ತಂಡದ ಮೆಂಟರ್​ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗಂಭೀರ್​ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್​ ಕೋಚ್​ ಆಗುವುದು ಬಹುತೇಖ ಖಚಿತವಾದಂತಿದೆ.

Continue Reading

ಕ್ರೀಡೆ

T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

T20 World Cup 2024: ಪಾಕಿಸ್ತಾನ ತಂಡದ ಮಾಜಿ ಆಟಗಾರ ಅಹ್ಮದ್​ ಶೆಹಜಾದ್​ 2014ರ ಟಿ20 ವಿಶ್ವ ಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 62 ಎಸೆತ ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್​ ನೆರವಿನಿಂದ ಅಜೇಯ 111 ರನ್​ ಗಳಿಸಿದ್ದರು. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ ಶೆಹಜಾದ್ 4ನೇ ಸ್ಥಾನಿಯಾಗಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಕಳೆದ ಮೂರು ತಿಂಗಳುಗಳ ಕಾಲ ಐಪಿಎಲ್​ ಗುಂಗಿನಲ್ಲಿದ್ದ ಕ್ರಿಕೆಟ್​ ಪ್ರೇಮಿಗಳು ಇನ್ನು ಟಿ20 ವಿಶ್ವಕಪ್​(T20 World Cup 2024) ಕಡೆ ತೆರೆದುಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಟಿ20 ವಿಶ್ವಕಪ್​ ನಡೆಯಲಿದ್ದು ಟೂರ್ನಿ ಆರಂಭಕ್ಕೆ ಇನ್ನು ಕೇವಲ 4 ದಿನ ಮಾತ್ರ ಉಳಿದುಕೊಂಡಿದೆ. ಇದುವರೆಗಿನ 8 ಆವೃತ್ತಿಯ ಟಿ20 ವಿಶ್ವ ಕಪ್​ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಅಗ್ರ 5 ಆಟಗಾರರನ್ನು ಪಟ್ಟಿ ಮಾಡಲಾಗಿದ್ದು ಈ ವಿವರ ಇಂತಿದೆ.

ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್‌)


ಟಿ20 ವಿಶ್ವ ಕಪ್ ಕೂಟದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಮಾಡಿದ ದಾಖಲೆ ನ್ಯೂಜಿಲ್ಯಾಂಡ್​ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕಲಮ್(BB McCullum) ಅವರ ಹೆಸರಿನಲ್ಲಿದೆ. ಬಾಂಗ್ಲಾದೇಶದ ವಿರುದ್ಧ 2012ರ ಆವೃತ್ತಿಯ ಆರಂಭಿಕ ಪಂದ್ಯದ ವೇಳೆ ಮೆಕಲಮ್ 58 ಎಸೆತಗಳಲ್ಲಿ 123 ರನ್ ಗಳಿಸಿದ್ದರು. ಈ ಇನಿಂಗ್ಸ್ ವೇಳೆ ಅವರ ಬ್ಯಾಟ್‌ನಿಂದ 11 ಬೌಂಡರಿ ಮತ್ತು ಏಳು ಸಿಕ್ಸರ್​ ಸಿಡಿಯಲ್ಪಟ್ಟಿತು. ಇದು ಸದ್ಯ ದಾಖಲೆಯಾಗಿಯೇ ಉಳಿದಿದೆ.


ಕ್ರಿಸ್​ ಗೇಲ್​ (ವೆಸ್ಟ್‌ ಇಂಡೀಸ್‌)


2007ರ ಟಿ20 ವಿಶ್ವ ಕಪ್‌ನ ಉದ್ಘಾಟನಾ ಆವೃತ್ತಿಯ ಮೊದಲ ಪಂದ್ಯದಲ್ಲಿ “ಯೂನಿವರ್ಸ್ ಬಾಸ್” ಖ್ಯಾತಿಯ ವಿಂಡೀಸ್​ ದೈತ್ಯ ಕ್ರಿಸ್ ಗೇಲ್(Chris Gayl), ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 57 ಎಸೆತಗಳಲ್ಲಿ 7 ಬೌಂಡರಿಗಳು ಮತ್ತು 10 ಸಿಕ್ಸರ್‌ಗಳನ್ನು ಒಳಗೊಂಡ ಇನಿಂಗ್ಸ್​ನಲ್ಲಿ 117 ರನ್ ಗಳಿಸಿದರು. ಗೇಲ್​ ಅವರ ಈ ಸ್ಫೋಟಕ ಇನಿಂಗ್ಸ್​ ವೇಳೆ 88 ರನ್​ ಕೇವಲ ಸಿಕ್ಸರ್​ ಮತ್ತು ಬೌಂಡರಿಯಿಂದ ಒಟ್ಟುಗೂಡಿದ್ದವು.


ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್‌)

ಇಂಗ್ಲೆಂಡ್​ ಕ್ರಿಕೆಟ್​ ತಂಡದ ಬಲಗೈ ದಾಂಡಿಗ ಅಲೆಕ್ಸ್ ಹೇಲ್ಸ್(Alex Hales) ಈ ಯಾದಿಯಲ್ಲಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2014ರ ಟಿ20 ವಿಶ್ವ ಕಪ್​ನಲ್ಲಿ ಶ್ರೀಲಂಕಾ ವಿರುದ್ಧ 64 ಎಸೆತಗಳಲ್ಲಿ ಅಜೇಯ 116 ರನ್ ಗಳಿಸಿದ್ದರು. ಈ ವೇಳೆ 11 ಬೌಂಡರಿ ಮತ್ತು 6 ಸಿಕ್ಸರ್​ ಸಿಡಿಯಲ್ಪಟ್ಟಿತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು


ಅಹ್ಮದ್​ ಶೆಹಜಾದ್​ (ಪಾಕಿಸ್ತಾನ)


ಪಾಕಿಸ್ತಾನ ತಂಡದ ಮಾಜಿ ಆಟಗಾರ ಅಹ್ಮದ್​ ಶೆಹಜಾದ್​ 2014ರ ಟಿ20 ವಿಶ್ವ ಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 62 ಎಸೆತ ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್​ ನೆರವಿನಿಂದ ಅಜೇಯ 111 ರನ್​ ಗಳಿಸಿದ್ದರು. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ ಶೆಹಜಾದ್ 4ನೇ ಸ್ಥಾನಿಯಾಗಿದ್ದಾರೆ.


ರಿಲೀ ರೋಸೊ


ದಕ್ಷಿಣ ಆಫ್ರಿಕಾ ತಂಡದ ಮಧ್ಯಮ ಕ್ರಮಾಂಕದ ಎಡಗೈ ಬ್ಯಾಟರ್​ ರಿಲೀ ರೋಸೊ ಅವರು ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ 5ನೇ ಸ್ಥಾನಿಯಾಗಿದ್ದಾರೆ. ಕಳೆದ 2022ರಲ್ಲಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದಿದ್ದ ಟೂರ್ನಿಯಲ್ಲಿ ರೋಸೊ ಬಾಂಗ್ಲಾದೇಶ ವಿರುದ್ಧ ಸಿಡ್ನಿಯಲ್ಲಿ ನಡೆದಿದ್ದ ಪಂದ್ಯದಲ್ಲಿ 56 ಎಸೆತಗಳಿಂದ 7 ಬೌಂಡರಿ ಮತ್ತು 8 ಸಿಕ್ಸರ್​ ನೆರವಿನಿಂದ 109 ರನ್​ ಬಾರಿಸಿದ್ದರು. ಸದ್ಯ ಈ ಆಟಗಾರರ ಹೆಸರಿನಲ್ಲಿರುವ ದಾಖಲೆಯನ್ನು ಈ ಬಾರಿ ಯಾರು ಮುರಿಯಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು

T20 World Cup 2024: ಭಾರತದ ಸ್ಟಾರ್ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ 2007 ರ ಟಿ20 ವಿಶ್ವ ಕಪ್‌ನಲ್ಲಿ ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್ ಬ್ರಾಡ್ ಅವರ ಓವರ್‌ನಲ್ಲಿ 6 ಸಿಕ್ಸರ್(yuvraj singh 6 sixes) ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

VISTARANEWS.COM


on

T20 World Cup 2024
Koo

ಬೆಂಗಳೂರು: ಚುಟುಕು ಕ್ರಿಕೆಟ್​ ಸಮರವಾದ ಐಸಿಸಿ ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೆ ಇನ್ನು ಕೇವಲ 4 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಬಾರಿ ಗರಿಷ್ಠ 20 ತಂಡಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿವೆ. ಅಮೆರಿಕ ಇದೇ ಮೊದಲ ಬಾರಿಗೆ ವೆಸ್ಟ್​ ಇಂಡೀಸ್​ ಜತೆ ಸೇರಿಕೊಂಡು ಜಂಟಿ ಕ್ರಿಕೆಟ್​ ಟೂರ್ನಿಯ ಆತಿಥ್ಯವಹಿಸಿಕೊಂಡಿದೆ. ಟೂರ್ನಿ ಆರಂಭಕ್ಕೂ ಮುನ್ನ ಇದುವರೆಗಿನ ಟಿ20 ವಿಶ್ವ ಕಪ್ (T20 World Cup 2024)​ ಇತಿಹಾಸದಲ್ಲಿ ಎಂದೂ ಮರೆಯದ ಕೆಲ ಸ್ಮರಣೀಯ ಸನ್ನಿವೇಶಗಳ ಇಣುಕು ನೋಡ ಇಂತಿದೆ.

ಯುವರಾಜ್​ ಸಿಂಗ್​ ಸಿಕ್ಸ್​ ಸಿಕ್ಸರ್​


ಭಾರತದ ಸ್ಟಾರ್ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ 2007 ರ ಟಿ20 ವಿಶ್ವ ಕಪ್‌ನಲ್ಲಿ ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್ ಬ್ರಾಡ್ ಅವರ ಓವರ್‌ನಲ್ಲಿ 6 ಸಿಕ್ಸರ್(yuvraj singh 6 sixes) ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇಂಗ್ಲೆಂಡ್​ ತಂಡದ ಫ್ಲಿಂಟಾಫ್​​ ಅವರು ಯುವಿಯನ್ನು ಕೆಣಕಿದ ಕಾರಣ ಸಿಟ್ಟಿಗೆದ್ದ ಯುವಿ ಮುಂದಿನ ಓವರ್​ನಲ್ಲಿ ಬ್ರಾಡ್​ಗೆ ಸಿಕ್ಸರ್​ಗಳ ರುಚಿ ತೋರಿಸಿದರು. ಈ ಘಟನೆ ಪ್ರತಿ ಟಿ20 ವಿಶ್ವ ಕಪ್​ ಆರಂಭಗೊಂಡಾಗಲೂ ಮುನ್ನಲೆಗೆ ಬಂದೇ ಬರುತ್ತದೆ. ಅದರಂತೆ ಟಿ20 ವಿಶ್ವ ಕಪ್​ ಎಂದರೆ ಯುವಿಯ 6 ಸಿಕ್ಸರ್​​ ಎಂದೇ ಪ್ರಸಿದ್ಧಿ ಹೊಂದಿದೆ. ಯುವರಾಜ್​ ಬಳಿಕ ದಕ್ಷಿಣ ಆಫ್ರಿಕಾ ತಂಡದ ಹರ್ಷಲ್ ಗಿಬ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಕಾರ್ಲೊಸ್ ಬ್ರಾಥ್‌ವೇಟ್ ಅಸಾಮ್ಯಾನ್ಯ ಬ್ಯಾಟಿಂಗ್​


2016ರ ಟಿ20 ವಿಶ್ವ ಕಪ್ ಫೈನಲ್​ನ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡಕ್ಕೆ ಗೆಲ್ಲಲು ಅಂತಿಮ ಓವರ್​ನಲ್ಲಿ 19 ರನ್​ ಬೇಕಿತ್ತು. ಈ ಓವರ್​ ಎಸೆಯಲು ಬಂದ ಬೆನ್​ ಸ್ಟೋಕ್ಸ್​ಗೆ ಕ್ರೀಸ್​ನಲ್ಲಿದ್ದ ಕಾರ್ಲೊಸ್ ಬ್ರಾಥ್‌ವೇಟ್ ಸತತ ನಾಲ್ಕು ಸಿಕ್ಸರ್‌ ಸಿಡಿಸಿ ವೆಸ್ಟ್ ಇಂಡೀಸ್​ಗೆ ಗೆಲುವು ತಂದು ಕೊಟ್ಟರು. ಈ ವೇಳೆ ಕಾಮೆಂಟರಿ ಪ್ಯಾನಲ್​ನಲ್ಲಿದ್ದ ಇಯಾನ್​ ಬಿಷಪ್​ ಕಾರ್ಲೊಸ್ ಬ್ರಾಥ್‌ವೇಟ್, ಹೆಸರನ್ನು ನೆನಪಿಡಿ! (‘Remember the Name’) ಎಂದು ಹೇಳುವ ಮೂಲಕ ವಿಂಡೀಸ್​ ಗೆಲುವಿನ ಸಂಭ್ರಮದಲ್ಲಿ ತಾವೂ ಕೂಡ ಭಾಗಿಯಾದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

ಪಾಕ್​ ವಿರುದ್ಧ ಗೆದ್ದು ಹೀರೊ ಆದ ಜೋಗಿಂದರ್​ ಶರ್ಮಾ


ಟಿ20 ವಿಶ್ವ ಕಪ್‌ನ ಉದ್ಘಾಟನಾ ಋತುವಿನಲ್ಲಿ ಭಾರತದ ಜೋಗಿಂದರ್ ಶರ್ಮಾ ಹೀರೊ ಆಗಿ ಹೊರಹೊಮ್ಮಿದ್ದರು. ಪಾಕಿಸ್ತಾನ ವಿರುದ್ಧದ ಫೈನಲ್​ನಲ್ಲಿ ಅಂತಿಮ ಓವರ್​ ಎಸೆದ ಜೋಗಿಂದರ್​ ಪಾಕ್​ ಬ್ಯಾಟರ್​ ಮಿಸ್ಬಾ-ಉಲ್-ಹಕ್ ಅವರ ನಿರ್ಣಾಯಕ ವಿಕೆಟ್ ಪಡೆದು ಭಾರತಕ್ಕೆ ಗೆಲುವು ತಂದು ಕೊಟ್ಟರು. ಜೋಗಿಂದರ್ ಎಸೆತದಲ್ಲಿ ಎಸ್ ಶ್ರೀಶಾಂತ್ ಅವರಿಗೆ ಮಿಸ್ಬಾ ಕ್ಯಾಚ್ ನೀಡಿದರು. ಈ ಮೂಲಕ ಭಾರತ ಚೊಚ್ಚಲ ಬಾರಿಗೆ ವಿಶ್ವಕಪ್​ ಗೆದ್ದು ಸಂಭ್ರಮಿಸಿತು.

ರಂಗನಾ ಹೆರಾತ್ ಶ್ರೇಷ್ಠ ಬೌಲಿಂಗ್​ ಸಾಧನೆ


ಶ್ರೀಲಂಕಾ ಕ್ರಿಕೆಟ್​ ತಂಡದ ಸ್ಪಿನ್ನರ್​ ರಂಗನಾ ಹೆರಾತ್ ಅವರು ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 3.3 ಓವರ್‌ಗಳಲ್ಲಿ 2 ಮೇಡನ್ ಸಹಿತ ಕೇವಲ 3 ರನ್ ಬಿಟ್ಟುಕೊಟ್ಟು 5 ವಿಕೆಟ್ ಉರುಳಿಸಿದರು. ನ್ಯೂಜಿಲೆಂಡ್ ತಂಡ ಕೇವಲ 15.3 ಓವರ್‌ಗಳಲ್ಲಿ 60 ರನ್‌ಗಳಿಗೆ ಆಲೌಟ್ ಆಯಿತು. ಹೆರಾತ್​ ಅವರ ಈ ಬೌಲಿಂಗ್​ ಸಾಧನೆ ಈ ವರೆಗಿನ ಟಿ 20 ವಿಶ್ವ ಕಪ್​ನಲ್ಲಿ ಶ್ರೇಷ್ಠ ಸಾಧನೆಯಾಗಿ ಉಳಿದಿದೆ.

ಧೋನಿ ರನೌಟ್​


ಭಾರತದ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2016ರ ಟಿ20 ವಿಶ್ವ ಕಪ್​ನ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಅವರ ಕೊನೆಯ ಎಸೆತದಲ್ಲಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೇವಲ 2 ಸೆಕೆಂಡುಗಳಲ್ಲಿ ರನ್ ಔಟ್ ಮಾಡಿ ತಂಡಕ್ಕೆ ಗೆಲುವು ತಂದು ಕೊಟ್ಟರು. ಧೋನಿ ಅವರ ಈ ಚುರುಕಿನ ರನ್ ಔಟ್ ಪ್ರಪಂಚದಾದ್ಯಂತ ಭಾರೀ ಸುದ್ದಿಯಾಗಿತ್ತು. ಉಸೇನ್​ ಬೋಲ್ಟ್​ ಅವರಿಗೆ ಧೋನಿ ಪ್ರತಿಸ್ಪರ್ಧಿ ಎಂದು ಕೆಲವರು ಹೋಲಿಕೆ ಮಾಡಿದ್ದರು.

Continue Reading
Advertisement
T20 World Cup 2024
ಕ್ರೀಡೆ22 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

Viral Video
ವೈರಲ್ ನ್ಯೂಸ್23 mins ago

Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

self harming chandrashekar ವಾಲ್ಮೀಕಿ
ಪ್ರಮುಖ ಸುದ್ದಿ27 mins ago

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

Chetan and Naveen gowda
ಕರ್ನಾಟಕ41 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಚೇತನ್, ನವೀನ್ ಗೌಡ ಎಸ್ಐಟಿ ವಶಕ್ಕೆ

Pushpa 2
ಸಿನಿಮಾ1 hour ago

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Traffic Violation Case filed against driver if petrol runs out and vehicle stops on road
ಬೆಂಗಳೂರು1 hour ago

Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

Aravind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Success Story
ಕೃಷಿ2 hours ago

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

Radhika Pandit
ಸ್ಯಾಂಡಲ್ ವುಡ್2 hours ago

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

chakravarthy sulibele
ಬೆಂಗಳೂರು2 hours ago

Chakravarthy Sulibele: ಮೈಸೂರಿನಲ್ಲಿ ಇಂದು ಸಂಜೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್‌ ಸಮ್ಮಾನ್‌ ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ21 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌