kyasanur forest disease case detected in Thirthahalli Monkey Fever : ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆ - Vistara News

ಕರ್ನಾಟಕ

Monkey Fever : ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆ

Shivamogga News: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಳ್ಳಿ ಬೈಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ದೃಢಪಟ್ಟಿದೆ.

VISTARANEWS.COM


on

kyasanur forest disease case detected in Thirthahalli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಳ್ಳಿ ಬೈಲು ಗ್ರಾಮದಲ್ಲಿ ಮಂಗನ ಕಾಯಿಲೆ (Monkey fever) ಪ್ರಕರಣ ಪತ್ತೆಯಾಗಿದೆ. 54 ವರ್ಷದ ವ್ಯಕ್ತಿಗೆ ಕೆಎಫ್‌ಡಿ ಪಾಸಿಟಿವ್ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೆಎಫ್‌ಡಿ ಇರುವುದು ಪತ್ತೆಯಾಗಿದೆ. ಇದರಿಂದ ವ್ಯಕ್ತಿ ಇದ್ದ ಸ್ಥಳ ಹಾಗೂ ಸುತ್ತಮುತ್ತಲಿನ ಜನರ ಮೇಲೆ ಆರೋಗ್ಯ ಇಲಾಖೆ ಬಗ್ಗೆ ನಿಗಾ ಇಟ್ಟಿದೆ.

ಮಲೆನಾಡಿನಲ್ಲಿ ಈ ವರ್ಷದ ಮೊದಲ‌ ಮೊದಲ ಮಂಗನಕಾಯಿಲೆ (Kyasanur Forest Disease-KFD) ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಜನವರಿ ತಿಂಗಳಲ್ಲಿ ಪತ್ತೆಯಾಗಿತ್ತು. ಕೊಪ್ಪದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಪರೀಕ್ಷೆ ನಡೆಸಿದಾಗ ಫಲಿತಾಂಶ ಪಾಸಿಟಿವ್‌ ಬಂದಿತ್ತು. ಹೀಗಾಗಿ ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ ಆರಂಭವಾಗಿತ್ತು.

ಇದನ್ನೂ ಓದಿ | KS Eshwarappa : ಅಲ್ಲಾನಿಗೆ ಕಿವಿ ಕೇಳಿಸೋಲ್ವಾ?: ಈಶ್ವರಪ್ಪ ಹೇಳಿಕೆ ವಿರುದ್ಧ ಮುಸ್ಲಿಂ ಸಂಘಟನೆಯಿಂದ ರಾಷ್ಟ್ರಪತಿಗೆ ದೂರು

ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕವಿದ್ದು, ಪ್ರತಿವರ್ಷ ಹಲವಾರು ಮಂದಿಯನ್ನು ಬಾಧಿಸುತ್ತದೆ. ಮಂಗನ ಮೈಯ ಮೇಲಿರುವ ಉಣ್ಣೆಗಳಿಂದ ಮನುಷ್ಯರಿಗೆ ಹರಡುವ ಈ ಕಾಯಿಲೆಯ ವೈರಸ್‌, ತೀವ್ರ ಜ್ವರ ಹಾಗೂ ಮೈಕೈ ನೋವಿನಿಂದ ವ್ಯಕ್ತಿಯನ್ನು ಬಳಲಿಸುತ್ತದೆ. ಸೋಂಕು ರೋಗವಾಗಿರುವ ಇದರಿಂದ ಕೆಲಮಂದಿ ಮೃತಪಟ್ಟಿದ್ದು ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

Hasan Pen Drive Case: ಅಶ್ಲೀಲ ವಿಡಿಯೋ ‌ಪೆನ್‌ಡ್ರೈವ್ ಸೋಶಿಯಲ್‌ ಮೀಡಿಯಾ ಮೂಲಕ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಕೆಲ ಪೆನ್‌ ಡ್ರೈವ್‌ಗಳನ್ನು ಹೊಳೆನರಸೀಪುರ ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಪೆನ್‌ಡ್ರೈವ್‌ಗಳನ್ನು ಎಸ್‌ಐಟಿ‌ ತಂಡಕ್ಕೆ‌ ಹೊಳೆನರಸೀಪುರ ಪೊಲೀಸರು ಹಸ್ತಾಂತರ ಮಾಡಲಿದ್ದಾರೆ.

VISTARANEWS.COM


on

hd revanna prajwal revanna
Koo

ಹಾಸನ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS leader) ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ (Hasan Pen Drive Case) ಇನ್ನೊಬ್ಬ ಆರೋಪಿಯಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿರುವ ಜೆಡಿಎಸ್‌ ಮುಖಂಡ ಹೆಚ್. ಡಿ ರೇವಣ್ಣ (HD Revanna) ಅವರು ಇಂದು ಹೈಕೋರ್ಟ್ (High Court) ಮೊರೆ ಹೋಗುವ ಸಾಧ್ಯತೆ ಇದೆ. ಹಗರಣದಲ್ಲಿ ದಾಖಲಾಗಿರುವ ಎಫ್‌ಐಆರ್ ಕೂಡ ನೂತನವಾಗಿ ರಚನೆಯಾಗಿರುವ ಎಸ್‌ಐಟಿಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಕೆ ಸಿಂಗ್‌ ನೇತೃತ್ವದಲ್ಲಿ ನಿನ್ನೆ ಎಸ್‌ಐಟಿ ರಚನೆಯ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಅದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಎಸ್‌ಐಟಿಗೆ ಎಫ್‌ಐಆರ್ ವರ್ಗಾವಣೆ ಸಾಧ್ಯತೆ ಇದೆ. ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ.

ಮನೆಕೆಲಸದಾಕೆಯೇ ನೀಡಿರುವ ದೂರು ಇದಾಗಿದೆ. ಸಂಸದ ಪ್ರಜ್ವಲ್‌ ರೇವಣ್ಣ ಅವರು ದೇಶ ತೊರೆದು ಜರ್ಮನಿಗೆ ಹೋಗಿದ್ದಾರೆ ಎನ್ನಲಾಗಿದೆ. ಹೆಚ್. ಡಿ ರೇವಣ್ಣ ಇಂದು ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಲೈಂಗಿಕ ಕಿರುಕುಳ ಪ್ರಕರಣ ಗಂಭೀರ ಸ್ವರೂಪದ್ದಾದ್ದರಿಂದ, ಎಫ್‌ಐಆರ್‌ಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಸಂಭಾವ್ಯ ಬಂಧನ ತಪ್ಪಿಸಲು ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅಶ್ಲೀಲ ವಿಡಿಯೋ ‌ಪೆನ್‌ಡ್ರೈವ್ ಸೋಶಿಯಲ್‌ ಮೀಡಿಯಾ ಮೂಲಕ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಕೆಲ ಪೆನ್‌ ಡ್ರೈವ್‌ಗಳನ್ನು ಹೊಳೆನರಸೀಪುರ ಪೊಲೀಸರು ವಶಕ್ಕೆ ‌ಪಡೆದಿದ್ದಾರೆ. ಪೆನ್‌ಡ್ರೈವ್‌ಗಳನ್ನು ಎಸ್‌ಐಟಿ‌ ತಂಡಕ್ಕೆ‌ ಹೊಳೆನರಸೀಪುರ ಪೊಲೀಸರು ಹಸ್ತಾಂತರ ಮಾಡಲಿದ್ದಾರೆ.

ಇನ್ನು ಎಫ್‌ಎಸ್‌ಎಲ್‌ ಪರಿಶೀಲನೆಗೆ ವಿಡಿಯೋ ರೆಕಾರ್ಡ್ ಮಾಡಿರುವ ಮಾಸ್ಟರ್ ಡಿವೈಸ್ ಬೇಕಿರುವ ಹಿನ್ನೆಲೆಯಲ್ಲಿ, ಪ್ರಜ್ವಲ್ ರೇವಣ್ಣ ಅವರ ಫೋನ್‌ ವಶಕ್ಕೆ ಪಡೆಯಬೇಕಿದೆ. ಈ ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಇದಕ್ಕಾಗಿ ಪ್ರಜ್ವಲ್ ರೇವಣ್ಣ ಅವರ ಫೋನ್ ಅನ್ನು ಎಸ್ಐಟಿ ತಂಡ ವಶಕ್ಕೆ ಪಡೆಯಲಿದೆ. ಆದರೆ ಈಗಾಗಲೆ ಪ್ರಜ್ವಲ್ ರೇವಣ್ಣ ನಾಟ್‌ ರೀಚಬಲ್‌ ಆಗಿದ್ದು, ತಮ್ಮ ಮೊಬೈಲ್ ಬದಲಾವಣೆ ಮಾಡಿದ್ದಾರೆ ಎಂಬ ಶಂಕೆ ಇದೆ. ಹೀಗಾಗಿ ವಿಡಿಯೋ ರೆಕಾರ್ಡ್ ಆದ‌‌ ಸಂದರ್ಭದ ಫೋನ್‌ ಐಎಂಇಐ ನಂಬರ್ ಕೂಡ ಎಸ್‌ಐಟಿ ಟ್ರ್ಯಾಕ್ ಮಾಡಲಿದೆ.

ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ತಂದೆ-ಮಗ ಇಬ್ಬರ ಮೇಲೂ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ.

ದೂರಿನಲ್ಲಿ ಏನಿದೆ?

47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರೆಗೆ ಭವಾನಿ ರೇವಣ್ಣ ಸೋದರತ್ತೆ ಮಗಳು. ಎಚ್‌.ಡಿ. ರೇವಣ್ಣ ಶಾಸಕರಾಗಿದ್ದಾಗ ನಾಗಲಾಪುರ ಹಾಲಿನ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ಬಿಸಿಎಂ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2015ರಲ್ಲಿ ರೇವಣ್ಣ ಅವರ ಮನೆಯಲ್ಲೇ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಒಟ್ಟು 6 ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳಿಗೆ ಕೊಠಡಿಗೆ ಬರುವಂತೆ ರೇವಣ್ಣ ಆಹ್ವಾನಿಸಿದ್ದರು.

ಇನ್ನು ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿದ್ದಾಗ ಎಚ್.ಡಿ. ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸ್ಟೋರ್ ರೂಮ್‌ನಲ್ಲಿ ಹಣ್ಣು ಕೊಡೋ ನೆಪದಲ್ಲಿ ಕೈ ಹಿಡಿದು ಎಳೆದಾಡಿದ್ದರು. ಅದೇ ರೀತಿ ಅಡುಗೆ ಮನೆಯಲ್ಲಿ ಇದ್ದಾಗ ಪ್ರಜ್ವಲ್ ರೇವಣ್ಣ ಹಿಂಬದಿಯಿಂದ ಬಂದು ಮೈ‌ಮುಟ್ಟಿ ಹೊಟ್ಟೆ ಜಿಗುಟುತ್ತಿದ್ದರು. ಜೊತೆಗೆ ಎಣ್ಣೆ ಹಚ್ಚಲು ಪದೇ ಪದೇ ಕರೆದು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮನೆಯಲ್ಲಿದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಮಗಳ ಜೊತೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದಕ್ಕೆ ಮಗಳು ಹೆದರಿಕೊಂಡು ನಂಬರ್ ಬ್ಲಾಕ್ ಕೂಡ ಮಾಡಿದ್ದಳು. ಇದರಿಂದ‌ ಮನೆ ಕೆಲಸ ಬಿಟ್ಟು ಹೊರಗಡೆ ಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾಳೆ.

ಈಗ ಕೆಲ ವಿಡಿಯೊಗಳು ವೈರಲ್ ಆಗುತ್ತಿದ್ದು, ನನ್ನ ಗಂಡ ಶೀಲ ಶಂಕಿಸುತ್ತಿದ್ದಾನೆ. ಇದರಿಂದ ಮನನೊಂದು ದೂರು ನೀಡುತ್ತಿರೋದಾಗಿ 47 ವರ್ಷದ ಮಹಿಳೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಮಹಿಳೆ ದೂರಿನನ್ವಯ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Continue Reading

ಕರ್ನಾಟಕ

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Narendra Modi: ನರೇಂದ್ರ ಮೋದಿ ಅವರು ಸೋಮವಾರ ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಹಾಗೆಯೇ, ಭದ್ರತಾ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿದೆ.

VISTARANEWS.COM


on

PM Narendra Modi
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70ರ ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಮೋದಿ ಅವರ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Continue Reading

ಕರ್ನಾಟಕ

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

Tomato Price: ಬಿಸಿಲಿನ ತಾಪಕ್ಕೆ ಹೆಚ್ಚಾಗಿ ಫಸಲು ಬಾರದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚುತ್ತಿದೆ. ಜೊತೆಗೆ ಟೊಮ್ಯಾಟೊ ಬೆಳೆಗೆ ಬಿನುಗು ರೋಗ ತಗುಲಿದ ಹಿನ್ನೆಲೆಯಲ್ಲಿ‌ ನಿರೀಕ್ಷಿತ ಫಸಲು ಕೂಡ ಬಂದಿಲ್ಲ.

VISTARANEWS.COM


on

tomato price rise
Koo

ಚಿಕ್ಕಬಳ್ಳಾಪುರ‌: ಟೊಮ್ಯಾಟೊ ಬೆಲೆ (tomato price) ಪುನಃ ನಾನೂರು ರೂಪಾಯಿ ದಾಟಿದೆ. ಹತ್ತು ಕೆಜಿ ಟೊಮ್ಯಾಟೊ ಬಾಕ್ಸ್ ಬೆಲೆ‌ (tomato price rise) ನಾನೂರು ರೂಪಾಯಿ ತಲುಪಿದ್ದು, ಗ್ರಾಹಕರ ಕೈ ಸುಡಲು ಸಿದ್ಧವಾಗಿದೆ.

ಬಿಸಿಲಿನ ತಾಪಕ್ಕೆ ಹೆಚ್ಚಾಗಿ ಫಸಲು ಬಾರದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚುತ್ತಿದೆ. ಜೊತೆಗೆ ಟೊಮ್ಯಾಟೊ ಬೆಳೆಗೆ ಬಿನುಗು ರೋಗ ತಗುಲಿದ ಹಿನ್ನೆಲೆಯಲ್ಲಿ‌ ನಿರೀಕ್ಷಿತ ಫಸಲು ಕೂಡ ಬಂದಿಲ್ಲ. ಆ ಬಾರಿ ಬಿಸಿಲಿನ ಪರಿಣಾಮ ನಿರೀಕ್ಷೆಗಿಂತ ಮೊದಲೇ ನೀರಿನ ಲಭ್ಯತೆ ಕಡಿಮೆಯಾಗಿದೆ. ಬೋರ್ವೆಲ್‌ಗಳಲ್ಲಿಯೂ ನೀರು ಬತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವು ರೈತರು ಟೊಮ್ಯಾಟೋ ಬೆಳೆಯಲು ಮುಂದಾಗಿಲ್ಲ.

ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಟೊಮ್ಯಾಟೊಗೆ ನಾನೂರು ರೂಪಾಯಿ ನಿಗದಿ ಮಾಡಲಾಗಿದೆ. ನಾಳೆ ನಾಡಿದ್ದರಲ್ಲಿ ಮತ್ತಷ್ಟು ಏರಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಲೆ ಏರಿಕೆಗೆ ಕಾರಣ

ಉತ್ಪಾದನೆಯಲ್ಲಿ ಕುಸಿತ, ಹವಾಮಾನ ವೈಪರೀತ್ಯ, ಅತಿಯಾದ ಬಿಸಿಲು ಹಾಗೂ ಉಷ್ಣ ವಾತಾವರಣದಿಂದ ಬೆಳೆ ಕಡಿಮೆಯಾಗಿ ಬೆಲೆ ಏರಿಕೆಯಾಗಿದೆ. ಒಂದು ಅಧ್ಯಯನದ ಪ್ರಕಾರ ಗ್ರಾಹಕ ಕೊಂಡುಕೊಳ್ಳುವ ಬೆಲೆಯಲ್ಲಿ ರೈತನಿಗೆ ಕೇವಲ ಶೇಕಡಾ 32ರಷ್ಟು ಮಾತ್ರ ದಕ್ಕುತ್ತದೆ.

ಟೊಮೆಟೊ ಹೆಚ್ಚು ಬೆಳೆಯುವುದು ಎಲ್ಲಿ?

ಆಂಧ್ರಪ್ರದೇಶ, ಕರ್ನಾಟಕದ, ಒಡಿಶಾ, ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಪ್ರಮುಖವಾಗಿ ಬೆಳೆಯಲಾಗುತ್ತದೆ. ಈ ರಾಜ್ಯಗಳು ದೇಶದ ಒಟ್ಟು ಉತ್ಪಾದನೆಯು ಶೇಕಡಾ ಐವತ್ತರಷ್ಟು ಕೊಡುಗೆ ನೀಡುತ್ತವೆ. ಛತ್ತೀಸ್ ಗಢ, ಉತ್ತರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ ತೆಲಂಗಾಣ ಶೇಕಡಾ 40 ರಷ್ಟು ಟೊಮೆಟೊ ಉತ್ಪಾದನೆ ಮಾಡುತ್ತವೆ. ಮುಂಗಾರು ಮತ್ತು ಹಿಂಗಾರು ಬೆಳೆಯಾಗಿ ಟೊಮ್ಯಾಟೊ ಬೆಳೆಯಲಾಗುತ್ತದೆ. ಸಾಮಾನ್ಯವಾಗಿ ಮಾರ್ಚ್‌ನಿಂದ ಆಗಸ್ಟ್ ನಡುವೆ ಹಿಂಗಾರು ಬೆಳೆಯಲಾಗುತ್ತದೆ. ಮುಂಗಾರು ಬೆಳೆ ಸೆಪ್ಟಂಬರ್ ತಿಂಗಳಿನಿಂದ ಕೊಯ್ಲಿಗೆ ಬರುತ್ತದೆ. ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆಗಾಲದಲ್ಲಿ ಟೊಮ್ಯಾಟೊ ಬೆಳೆಯುತ್ತಾರೆ. ಬೇಸಿಗೆಯ ಉತ್ಪಾದನೆಯ ಶೇಕಡಾ 90ರಷ್ಟು ಬೆಳೆಯನ್ನು ಆಂಧ್ರ ಪ್ರದೇಶದ ಮದನಪಲ್ಲಿಯಲ್ಲಿ ಬೆಳೆಯುತ್ತಾರೆ.

ಮಾಹಿತಿಗಳ ಪ್ರಕಾರ 2020ರಿಂದ ಟೊಮ್ಯಾಟೊ ಉತ್ಪಾದನೆ ಕಡಿಮೆಯಾಗುತ್ತಿದೆ. 2019-2 0ರಲ್ಲಿ 21.187 ಮಿಲಿಯನ್ ಟನ್ ಗಳಷ್ಟು ಟೊಮ್ಯಾಟೊ ಉತ್ಪಾದನೆ ಆಗಿದ್ದರೆ 2020-21ರಲ್ಲೂ 20.69ಮಿಲಿಯನ್ ಟನ್ ಗೆ ಇಳಿದಿದೆ. 2022-23ರಲ್ಲೂ 20.62 ಮಿಲಿಯನ್ ಟನ್ ಗೆ ಕುಸಿದಿದೆ.

ಇದನ್ನೂ ಓದಿ: Sugar Price: ಟೊಮ್ಯಾಟೊ ‘ಹುಳಿ’ಯಾದ ಬೆನ್ನಲ್ಲೇ ಸಕ್ಕರೆ ‘ಕಹಿ’; ಜನರ ಹಬ್ಬದ ಖುಷಿಗೆ ಬೆಲೆಯೇರಿಕೆ ಬಿಸಿ

Continue Reading

ಪ್ರಮುಖ ಸುದ್ದಿ

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಪ್ರಸಾದ್ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ನಿರಂತರ ಜನಸೇವೆ ಸಲ್ಲಿಸಿದ್ದರು. ಕಳೆದ ಬಾರಿ ಬಿಜೆಪಿ ಸೇರಿ ಸಂಸದರಾಗಿದ್ದ ಅವರು ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು.

VISTARANEWS.COM


on

srinivasa prasad
Koo

ಬೆಂಗಳೂರು: 7 ಬಾರಿ ಸಂಸದರಾಗಿದ್ದ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ ಎಂದೇ ಖ್ಯಾತರಾಗಿದ್ದ ಹಿರಿಯ ರಾಜಕಾರಣಿ, ಮುತ್ಸದ್ಧಿ ವಿ.ಶ್ರೀನಿವಾಸ್ ಪ್ರಸಾದ್ (Srinivasa Prasad) ಇಂದು ಮುಂಜಾನೆ ನಿಧನರಾಗಿದ್ದಾರೆ (Srinivasa Prasad). ಚಾಮರಾಜನಗರ ಸಂಸದರಾಗಿ (Chamarajanagar MP) ಬಹು ದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿದ್ದ ಪ್ರಸಾದ್ ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು.

ಈ ಹಿರಿಯ ನಾಯಕ, ಸಂಸದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ನಿರಂತರ ಜನಸೇವೆ ಅವರದಾಗಿತ್ತು.

ಕಾಲೇಜು ದಿನಗಳಲ್ಲಿ ಫುಟ್ಬಾಲ್ ಆಟಗಾರನಾಗಿದ್ದ ಶ್ರೀನಿವಾಸ ಪ್ರಸಾದ್‌, ಶಾರದಾ ವಿಲಾಸ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದವರು. ಯೌವನದಲ್ಲೇ ಮುಂಚೂಣಿ ನಾಯಕನಾಗಿದ್ದು ಫುಟ್ಬಾಲ್ ಟೀಮ್​ ಜತೆಗೆ ಏರಿಯಾ ಹುಡುಗರ ಕ್ಯಾಪ್ಟನ್ ಆಗಿದ್ದರು. ಬಲ್ಲಾಳ್ ಸರ್ಕಲ್‌ ನಲ್ಲಿ ಪಡ್ಡೆ ಹುಡುಗರ ಜತೆ ಇರುತ್ತಿದ್ದ ಪ್ರಸಾದ್ ಆಜಾನುಬಾಹುವಾಗಿದ್ದರಲ್ಲದೆ, ಹುಡುಗಿಯರ ಗಮನ ಸೆಳೆಯುತ್ತಿದ್ದರು.

ಅವರ ಪೂರ್ತಿ ಹೆಸರು ವೆಂಕಟಯ್ಯ ಶ್ರೀನಿವಾಸ ಪ್ರಸಾದ್. ಮೈಸೂರಿನ ಅಶೋಕಪುರಂನಲ್ಲಿ 1947ರ ಆಗಸ್ಟ್‌ 6ರಂದು ಜನಿಸಿದ ಇವರ ತಂದೆ ವೆಂಕಟಯ್ಯ, ಪತ್ನಿ ಭಾಗ್ಯಲಕ್ಷ್ಮಿ. ಮೂವರು ಮಕ್ಕಳಿದ್ದಾರೆ. ಮಗಳು ಪ್ರತಿಮಾ ಪ್ರಸಾದ್ ಐ.ಆರ್​.ಎಸ್. ಅಧಿಕಾರಿ, ಪೂರ್ಣಿಮಾ ಪ್ರಸಾದ್ ಮಾಜಿ ಶಾಸಕ ಹರ್ಷವರ್ಧನ್ ಪತ್ನಿ ಹಾಗೂ ಪೂನಂ ಪ್ರಸಾದ್ ಬಿಜೆಪಿ ಮುಖಂಡ ಡಾ.ಮೋಹನ್ ಪತ್ನಿ.

ಅವರು ಜನಪ್ರತಿನಿಧಿಯಾಗಿದ್ದ ಅವಧಿಗಳು:

ಬಿಜೆಪಿ: 2019- 2024
ಕಾಂಗ್ರೆಸ್​: 1983-1996, 1997-1998, 2006-2017
ಜೆಡಿಎಸ್​: 2004-2006
ಜೆಡಿಯು: 1999-2004
ಸಂಯುಕ್ತ ಪಾರ್ಟಿ: 1998-1999
ಪಕ್ಷೇತರ: 1996-1997
ಕಾಂಗ್ರೆಸ್: 1979-1983
ಜನತಾ ಪಾರ್ಟಿ: 1977-1979

ದಲಿತರ ದನಿ

ಶ್ರೀನಿವಾಸ ಪ್ರಸಾದ್ ರಾಜ್ಯದ ಅಗ್ರಮಾನ್ಯ ದಲಿತ ನಾಯಕರಾಗಿದ್ದರಲ್ಲದೆ, ಎಲ್ಲಿಯೇ ದಲಿತರ ಮೇಲೆ ದೌರ್ಜನ್ಯ ನಡೆದರೂ ಮೊದಲು ಖಂಡಿಸುತ್ತಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳ ಪ್ರಖರ ವಾಗ್ಮಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ದಲಿತ ಪ್ರಜ್ಞೆ ಮೂಡಿಸಿದ ನಾಯಕ. ಸಂವಿಧಾನ ಬದಲಾವಣೆ ಸಂಬಂಧ ಅನಂತಕುಮಾರ್ ಹೆಗಡೆ ಮಾತನಾಡಿದ್ದ ಬಗ್ಗೆ ವೇದಿಕೆ ಮೇಲೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದರು.

Srinivasa Prasad

ಸ್ವಾಭಿಮಾನಿ ಶ್ರೀನಿವಾಸ ಪ್ರಸಾದ್

2013ರಿಂದ 2018ರ ಅವಧಿಗೆ ನಂಜನಗೂಡು ಶಾಸಕರಾಗಿದ್ದ ಪ್ರಸಾದ್ ಅವರನ್ನು 2017ರ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಕೈಬಿಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಶ್ರೀನಿವಾಸ ಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿದ್ದರು. ಸ್ವಾಭಿಮಾನಿ ಸಮಾವೇಶ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ಸಂಘಟಿಸಿ ನಂಜನಗೂಡು, ವರುಣ, ತಿ.ನರಸೀಪುರ, ಚಾಮರಾಜನಗರದಲ್ಲಿ ಸಮಾವೇಶ ಮಾಡಿದ್ದರು.

ಬೂಸಾ ಚಳವಳಿಯಲ್ಲಿ ಮೂಡಿದ ಬಂಡಾಯ ನಾಯಕ

1974ನೇ ಇಸವಿಯಲ್ಲಿ ಆಗ ಸಚಿವರಾಗಿದ್ದ ಬಿ.ಬಸವಲಿಂಗಪ್ಪ ಹೇಳಿಕೆಯಿಂದ ಬೂಸಾ ಚಳವಳಿಯೇ ನಡೆದು ಹೋಯ್ತು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಬಿ.ಬಸವಲಿಂಗಪ್ಪ ರಾಜೀನಾಮೆ ಪಡೆದಿದ್ದರು. ನೇರ, ನಿಷ್ಠುರ ನಡೆ-ನುಡಿಗೆ, ದಕ್ಷ ಆಡಳಿತಕ್ಕೆ ಹೆಸರಾಗಿದ್ದ ಸ್ವಾಭಿಮಾನಿ ನಾಯಕ ಬಿ.ಬಸವಲಿಂಗಪ್ಪ ಅವರಿಂದ ರಾಜೀನಾಮೆ ಪಡೆದದ್ದು ದಲಿತರನ್ನು ರೊಚ್ಚಿಗೆಬ್ಬಿಸಿತ್ತು. ಆಗ ಫುಟ್ಬಾಲ್ ಆಡಿಕೊಂಡಿದ್ದ ಅಶೋಕಪುರಂನ 26ರ ಹರೆಯದ ಯುವಕನ ರಕ್ತವೂ ಕುದಿಯಿತು. ಆ ಕುದಿಯ ಕಾರಣಕ್ಕೆ ರಾಜಕೀಯಕ್ಕೆ ಎಂಟ್ರಿಯಾದವರು ಶ್ರೀನಿವಾಸ ಪ್ರಸಾದ್.

ಕೃಷ್ಣರಾಜ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಯುವಕ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿ ಆ ಮೂಲಕ ಜಿಲ್ಲೆಯ ನಾಯಕ ದೇವರಾಜ ಅರಸುಗೆ ಮುಖಭಂಗ ಮಾಡಿದ್ದ. ರಾಜಕೀಯವಾಗಿ ಗಮನ ಸೆಳೆದಿದ್ದ. 1978ರ ವಿಧಾನಸಭೆ ಚುನಾವಣೆಗೆ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು. 1980ರಲ್ಲಿ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿ, 33 ಹರೆಯದಲ್ಲೇ ಸಂಸತ್ ಪ್ರವೇಶ ಮಾಡಿದರು. 9 ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, 7 ಸಲ ಗೆಲುವು ಕಂಡರು.

ರಾಜಕೀಯದ ಏಳುಬೀಳು

  • ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದ.
  • ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕ.
  • 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ
  • 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವ
  • 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ
  • 2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸೋಲು
  • 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.
  • 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ
  • ಇದನ್ನೂ ಓದಿ: Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ
Continue Reading
Advertisement
Gurucharan Singh soon to get married faced financial crunch
ಸಿನಿಮಾ20 mins ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ25 mins ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್41 mins ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ48 mins ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ59 mins ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್1 hour ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ2 hours ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ2 hours ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ2 hours ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

ವೈರಲ್ ನ್ಯೂಸ್2 hours ago

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202418 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202420 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202422 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202422 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌