Maharashtra Political Crisis: ಶಿವಸೇನೆ ಬಿಕ್ಕಟ್ಟಿನ ವೇಳೆ ರಾಜ್ಯಪಾಲರ ನಡೆ ಏಕಪಕ್ಷೀಯ ಎಂದ ಸುಪ್ರೀಂ ಕೋರ್ಟ್ - Vistara News

ದೇಶ

Maharashtra Political Crisis: ಶಿವಸೇನೆ ಬಿಕ್ಕಟ್ಟಿನ ವೇಳೆ ರಾಜ್ಯಪಾಲರ ನಡೆ ಏಕಪಕ್ಷೀಯ ಎಂದ ಸುಪ್ರೀಂ ಕೋರ್ಟ್

Maharashtra Political Crisis: ಮಹಾರಾಷ್ಟ್ರದಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಕುರಿತು ಕಳೆದ ವರ್ಷ ರಾಜ್ಯಪಾಲರಾಗಿದ್ದ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಹೊರಡಿಸಿದ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Supreme Court On Article 370
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಮುಖ್ಯಮಂತ್ರಿಯಾಗಿದ್ದ ಉದ್ಧವ್‌ ಠಾಕ್ರೆ ಅವರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಕುರಿತು (Maharashtra Political Crisis) ಆಗ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದ ಭಗತ್‌ ಸಿಂಗ್‌ ಕೋಶ್ಯಾರಿ ಅವರ ಆದೇಶದ ಕುರಿತು ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದೆ. “ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ರಾಜ್ಯಪಾಲರು ತೆಗೆದುಕೊಂಡಿದ್ದು ಪಕ್ಷಪಾತದ ನಿರ್ಧಾರ” ಎಂದು ಜರಿದಿದೆ.

ಶಿವಸೇನೆ ಉದ್ಧವ್‌ ಠಾಕ್ರೆ ಬಣ ಹಾಗೂ ಏಕನಾಥ್‌ ಶಿಂಧೆ ಬಣಗಳ ಪ್ರಕರಣದ ವಿಚಾರಣೆ ನಡೆಸಿದ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು. “ಯಾವುದೇ ಮುಖ್ಯಮಂತ್ರಿಗೆ ವಿಶ್ವಾಸಮತ ಸಾಬೀತುಕಪಡಿಸುವಂತೆ ಆದೇಶಿಸುವ ಮೊದಲು ಆ ಸರ್ಕಾರ ಪತನಗೊಳ್ಳುವ ಕುರಿತು ರಾಜ್ಯಪಾಲರು ಯೋಚಿಸಬೇಕು. ಸರ್ಕಾರ ಪತನಗೊಳ್ಳುವ ಪ್ರದೇಶವನ್ನು ರಾಜ್ಯಪಾಲರು ಪ್ರವೇಶಿಸಬಾರದು. ತೀರಾ ಅಪರೂಪದ ಪ್ರಕರಣಗಳಲ್ಲಿ ಮಾತ್ರ ರಾಜ್ಯಪಾಲರು ತಮ್ಮ ಅಧಿಕಾರ ಬಳಸಬೇಕು” ಎಂದು ಹೇಳಿತು.

ಕಳೆದ ವರ್ಷದ ಜೂನ್‌ನಲ್ಲಿ ಏಕನಾಥ್‌ ಶಿಂಧೆ ಅವರು ಶಿವಸೇನೆಯಿಂದ ಬಂಡಾಯವೆದಿದ್ದರು. ಇದೇ ವೇಳೆ ಅವರು ಒಂದಷ್ಟು ಶಾಸಕರನ್ನು ರೆಸಾರ್ಟ್‌ನಲ್ಲಿ ಇರಿಸಿಕೊಂಡಿದ್ದರು. ಆಗ ರಾಜ್ಯಪಾಲರಾಗಿದ್ದ ಕೋಶ್ಯಾರಿ ಅವರು ಉದ್ಧವ್‌ ಠಾಕ್ರೆ ಅವರಿಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಆದೇಶಿಸಿದ್ದರು. ಇದಾದ ಬಳಿಕ ಮೈತ್ರಿ ಸರ್ಕಾರ ಪತನವಾಗಿತ್ತು. ಬಳಿಕ ಏಕನಾಥ್‌ ಶಿಂಧೆ ಅವರು ಸಿಎಂ ಆದರು.

ಶಿವಸೇನೆ ಶಾಸಕರ ಬಂಡಾಯದ ಕುರಿತು ಕೂಡ ಪ್ರತಿಕ್ರಿಯಿಸಿದ ಕೋರ್ಟ್‌, “ಶಿವಸೇನೆ ಶಾಸಕರಿಗೆ ಮೈತ್ರಿ ಸರ್ಕಾರದಲ್ಲಿ ಮೂರು ವರ್ಷ ಎಲ್ಲವೂ ಚೆನ್ನಾಗಿತ್ತು. ಆದರೆ, ಮೂರು ವರ್ಷದ ಬಳಿಕ ಭಿನ್ನಾಭಿಪ್ರಾಯ ಉಂಟಾಯಿತು. ಅಷ್ಟೊಂದು ಆಕ್ಷೇಪ ಇದ್ದಿದ್ದರೆ ಮೂರು ವರ್ಷ ಏಕೆ ಇದ್ದರು” ಎಂದು ಕೂಡ ಪ್ರಶ್ನಿಸಿದೆ. ಮಹಾರಾಷ್ಟ್ರ ರಾಜ್ಯಪಾಲರ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು.

ಇದನ್ನೂ ಓದಿ: Uddhav Thackeray: ‘ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯ’, ಶಿವಸೇನೆ ಚಿಹ್ನೆ ಕಳೆದುಕೊಂಡ ಬಳಿಕ ಉದ್ಧವ್‌ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Fire Accident:ಗುಜರಾತ್‌ನ ರಾಜ್‌ಕೋಟ್‌ ನಗರದಲ್ಲಿರುವ ಗೇಮಿಂಗ್‌ ಜೋನ್‌ ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ

VISTARANEWS.COM


on

Fire Accident
Koo

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ (Fire Accident) ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 32 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಯನ್ನು ನಂದಿಸಲು ಸಿಬ್ಬಂದಿಯು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದಾಗ್ಯೂ, ಬೆಂಕಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ? ಇನ್ನೂ ಎಷ್ಟು ಜನ ಕಾಣೆಯಾಗಿದ್ದಾರೆ ಎಂಬುದರ ಕುರಿತು ನಿಖರ ಮಾಹಿತಿ ದೊರೆತಿಲ್ಲ.

ಇನ್ನು ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವೇ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್‌ ಮೇಯರ್‌ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್‌ ಸರ್ಟಿಫಿಕೇಟ್‌ ಇಲ್ಲದೆಯೇ ಗೇಮಿಂಗ್‌ ಜೋನ್‌ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

4 ಲಕ್ಷ ರೂ. ಪರಿಹಾರ

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ. ಇನ್ನು ಕಾರ್ಯಾಚರಣೆ ಕ್ಷಿಪ್ರವಾಗಿ ನಡೆಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

ಇನ್ನು ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಎಲ್ಲಾ ಅಗತ್ಯಕ್ರಮಗಳನ್ನು ರಾಜ್ಯ ಸರ್ಕಾರ ನಿರ್ವಹಿಸುತ್ತಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

Continue Reading

ದೇಶ

Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

Accident: ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಭಕ್ತರು ತುಂಬಿದ್ದ ಬಸ್‌ಗೆ ಡಂಪರ್ ಡಿಕ್ಕಿ ಹೊಡೆದಿದೆ.
ಇದಾದ ಬಳಿಕ ಬಸ್‌ ಮೇಲೆ ಡಂಪರ್ ಪಲ್ಟಿಯಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸೀತಾಪುರ ಜಿಲ್ಲೆಯ ನಿವಾಸಿಗಳಾಗಿದ್ದು, ಪೂರ್ಣಗಿರಿ ಮಾತೆಯ ದರ್ಶನಕ್ಕೆ ತೆರಳುತ್ತಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಶಹಜಹಾನ್‌ಪುರದ ಖುತಾರ್ ಪ್ರದೇಶದ ಗೋಲಾ-ಲಖಿಂಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

Accident
Koo

ಉತ್ತರಪ್ರದೇಶ: ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್‌(Bus)ವೊಂದು ಟ್ರಕ್‌(Truck)ಗೆ ಡಿಕ್ಕಿಯಾಗಿ(Accident) 11 ಜನ ಸ್ಥಳದಲ್ಲೇ ದರ್ಮರಣಕ್ಕೀಡಾಗಿದ್ದು, ಸುಮಾರು 10ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಶಹಜಹಾನ್‌ಪುರ ಜಿಲ್ಲೆಯ ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಉತ್ತರಾಖಂಡಕ್ಕೆ ತೆರಳುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿಯಾಗಿದೆ. ಇನ್ನು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಭಕ್ತರು ಸೀತಾಪುರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೇಥಾ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಘಟನೆ ವಿವರ:

ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಭಕ್ತರು ತುಂಬಿದ್ದ ಬಸ್‌ಗೆ ಡಂಪರ್ ಡಿಕ್ಕಿ ಹೊಡೆದಿದೆ.
ಇದಾದ ಬಳಿಕ ಬಸ್‌ ಮೇಲೆ ಡಂಪರ್ ಪಲ್ಟಿಯಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸೀತಾಪುರ ಜಿಲ್ಲೆಯ ನಿವಾಸಿಗಳಾಗಿದ್ದು, ಪೂರ್ಣಗಿರಿ ಮಾತೆಯ ದರ್ಶನಕ್ಕೆ ತೆರಳುತ್ತಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಶಹಜಹಾನ್‌ಪುರದ ಖುತಾರ್ ಪ್ರದೇಶದ ಗೋಲಾ-ಲಖಿಂಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬ್ಯಾಲೆಸ್ಟ್ ತುಂಬಿದ ಡಂಪರ್ ಖಾಸಗಿ ಬಸ್ ಮೇಲೆ ಉರುಳಿದೆ. ಇದರಿಂದ ಬಸ್‌ನಲ್ಲಿ ಕುಳಿತಿದ್ದವರು ಸಮಾಧಿಯಾದರು ಎಂದು ಎಸ್.ಪಿ. ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.

ಇನ್ನು ಇಂದು ಬೆಳ್ಳಂಬೆಳಗ್ಗೆ ಹಾಸನದಲ್ಲೂ ಭೀಕರ ಅಪಘಾತ ಸಂಭಿಸಿದೆ. ಹಾಸನ ಹೊರವಲಯದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ (ಮೇ.26) ಸಂಭವಿಸಿದೆ. ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Koratagere News: ಕೊರಟಗೆರೆ ತಾಲೂಕಿನಲ್ಲಿ ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ: ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ

ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿರುವುದಾಗಿ ತಿಳುದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Continue Reading

ದೇಶ

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

Fire Accident: ಮೂರು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲೆ ವ್ಯಾಪಿಸುತ್ತಲೇ ಹೋಗಿತ್ತು. ತಕ್ಷಣ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆಗೆ ಆರು ಜನ ಮಕ್ಕಳು ಬಲಿಯಾಗಿದ್ದಾರೆ. ಇನ್ನು ಉಳಿದ ಮಕ್ಕಳನ್ನು ರಕ್ಷಿಸಲಾಗಿದೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ ಎಂದು ಡಿಎಸ್‌ಎಫ್‌ ಮುಖ್ಯಸ್ಥ ಅತುಲ್‌ ಗರ್ಗ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Fire accident
Koo

ನವದೆಹಲಿ: ಗುಜರಾತ್‌(Gujarat)ನ ಅಗ್ನಿ ದುರಂತ (Fire Accident)ದ ಬೆನ್ನಲ್ಲೇ ದೆಹಲಿಯಲ್ಲೂ ಭೀಕರ ದುರ್ಘಟನೆಯೊಂದು ನಡೆದಿದೆ. ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 7 ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ದೆಹಲಿಯ ವಿವೇಕ್‌ ವಿಹಾರ್‌ನಲ್ಲಿರುವ ನ್ಯೂ ಬಾರ್ನ್‌ ಬೇಬಿ ಕೇರ್‌ ಆಸ್ಪತ್ರೆ(Hospital)ಯಲ್ಲಿ ಶನಿವಾರ ತಡರಾತ್ರಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ವೆಂಟಿಲೇಟರ್‌ನಲ್ಲಿದ್ದ ಮಗು ಸೇರಿದಂತೆ ಒಟ್ಟು 7 ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 12 ಮಕ್ಕಳನ್ನು ರಕ್ಷಿಸಲಾಗಿದೆ.

ಘಟನೆ ವಿವರ:

ಮೂರು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲೆ ವ್ಯಾಪಿಸುತ್ತಲೇ ಹೋಗಿತ್ತು. ತಕ್ಷಣ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆಗೆ 7 ಜನ ಮಕ್ಕಳು ಬಲಿಯಾಗಿದ್ದಾರೆ. ಇನ್ನು ಉಳಿದ ಮಕ್ಕಳನ್ನು ರಕ್ಷಿಸಲಾಗಿದೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ ಎಂದು ಡಿಎಸ್‌ಎಫ್‌ ಮುಖ್ಯಸ್ಥ ಅತುಲ್‌ ಗರ್ಗ್‌ ಮಾಹಿತಿ ನೀಡಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27ಜನ ಮೃತಪಟ್ಟಿದ್ದರು. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಈಗಲೂ ಅಗ್ನಿ ನಂದಿಸುವ ಕಾರ್ಯವನ್ನು ಅಗ್ನಿಶಾಮಕದ ದಳದ ಸಿಬ್ಬಂದಿಯು ಮುಂದುವರಿಸಿದ್ದಾರೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ನಿರಾಕ್ಷೇಪಣಾ ಪತ್ರವೇ (NOC) ಸಿಕ್ಕಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಇದನ್ನೂ ಓದಿ: Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Continue Reading

ದೇಶ

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Subramanian Swamy:ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

VISTARANEWS.COM


on

subramanian swamy
Koo

ನವದೆಹಲಿ: ಸ್ವಪಕ್ಷ ನಾಯಕರು, ಪ್ರಧಾನಿ ಮೋದಿ(PM Narendra Modi) ವಿರುದ್ಧವೇ ಅಚ್ಚರಿಕೆಯ ಹೇಳಿಕೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಕೇಂದ್ರ ಸಚಿವ ಹಿರಿಯ ಬಿಜೆಪಿ ನಾಯಕ(BJP Leader) ಸುಬ್ರಮಣಿಯನ್‌ ಸ್ವಾಮಿ(Subramanian Swamy) ಮತ್ತೆ ಸದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆ(Lok Sabha Elections 2024)ಯ ಆರನೇ ಹಂತದ ಮತದಾನದ ವೇಳೆ ತಾವು ಯಾವ ಅಭ್ಯರ್ಥಿಗೆ ವೋಟ್‌ ಮಾಡಿರೋದಾಗಿ ಬಹಿರಂಗಪಡಿಸಿದ್ದಾರೆ. ಮತದಾನ ಅನ್ನೋದು ಅತ್ಯಂತ ಗೌಪ್ಯ ವಿಚಾರ. ಅದಾಗ್ಯೂ ಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ತಾವು ಯಾರಿಗೆ ಮತ ಚಲಾಯಿಸಿದ್ದು ಮತ್ತು ಆ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆ ವ್ಯಕ್ತಪಡಿಸುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ. ಮೋದಿಯನ್ನು ಬೈಯುತ್ತಲೇ ಅವರು ಬಿಜೆಪಿ ಪರ ಮತ ಚಲಾಯಿಸಿದ್ದಾರೆ.

ಸ್ವಾಮಿಯ ಟ್ವೀಟ್‌ನಲ್ಲಿ ಏನಿದೆ?

ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

ಮತದಾನಕ್ಕೆ ಎರಡು ದಿನ ಮೊದಲೂ ಇಂತಹದ್ದೇ ಒಂದು ಪೋಸ್ಟ್‌ ಮಾಡಿದ್ದ ಅವರು ಹರ್ಷ್‌ ಮಲ್ಹೋತ್ರಾ ಅವರನ್ನು ಹೊಗಳಿದ್ದರು. “ಇದೇ ಬರುವ ಶನಿವಾರ ಬೆಳಗ್ಗೆ ನಾನು ಮತ ಚಲಾಯಿಸುತ್ತಿದ್ದೇನೆ. ನನ್ನ ಮತ ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ. ಅವರೊಬ್ಬ ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ದಾಖಲೆ ಇದೆ. ಸಂಸದರಾಗುವ ಎಲ್ಲಾ ಅರ್ಹತೆ ಅವರಿಗೆ ಇದೆ. ನಾನು ಪೂರ್ವ ನಿಜಾಮುದ್ಧೀನ್‌ ಪ್ರದೇಶದಲ್ಲಿ ವಾಸವಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದರು.

ಇನ್ನು ಸ್ವಾಮಿಯವರ ಟ್ವೀಟ್‌ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡಿದ್ದು, ಶಾಹಿ ಹಾಕಿರುವ ಬೆರಳಿನೊಂದಿಗೆ ಫೊಟೋ ತೆಗೆದು ಅಪ್‌ಲೋಡ್‌ ಮಾಡಿ ಎಂದು ಅನೇಕ ಮನವಿ ಮಾಡಿದ್ದಾರೆ.

ಈ ಹಿಂದೆ ಸುಬ್ರಮಣಿಯನ್‌ ಸ್ವಾಮಿ, ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು. ನರೇಂದ್ರ ಮೋದಿ ಅವರು ನನ್ನನ್ನು ಸಂಸದನನ್ನಾಗಿ ಮಾಡುವುದಿಲ್ಲ ಎಂದು ಫಾಲೋವರ್‌ಗಳು ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ, ಮೂರ್ಖರಿಗೆ ಇದು ಗೊತ್ತಿಲ್ಲ. ನಾನು ಈಗಾಗಲೇ ಸಂಸತ್ತನ್ನು ಆರು ಬಾರಿ ಪ್ರವೇಶಿಸಿದ್ದೇನೆ. ಮೂರು ಬಾರಿ ಲೋಕಸಭೆ ಸದಸ್ಯನಾಗಿ, ಮೂರು ಬಾರಿ ರಾಜ್ಯಸಭೆ ಸದಸ್ಯನಾಗಿದ್ದೇನೆ. ನಾನು ಮನಸ್ಸು ಮಾಡಿದರೆ ವಾರಾಣಸಿಯಿಂದಲೇ ಸ್ಪರ್ಧಿಸಿ ಏಳನೇ ಬಾರಿ ಲೋಕಸಭೆ ಪ್ರವೇಶಿಸಬಲ್ಲೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Continue Reading
Advertisement
Hardik Pandya
ಕ್ರೀಡೆ24 seconds ago

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ30 mins ago

Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Psycho Killer Girish throws a stone on the head of the sleeping person and kills
ಕ್ರೈಂ36 mins ago

Psycho Killer: ಕುಡಿದು ಬರ್ತಾನೆ, ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸ್ತಾನೆ! ಕಿಲ್ಲರ್‌ ಅಂದರ್‌!

Malaysia Masters final
ಕ್ರೀಡೆ40 mins ago

Malaysia Masters final: ಪ್ರಶಸ್ತಿ ಬರ ನೀಗಿಸುವ ನಿರೀಕ್ಷೆಯಲ್ಲಿ ಪಿ.ವಿ.ಸಿಂಧು; ಇಂದು ಫೈನಲ್​

Accident
ದೇಶ56 mins ago

Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್1 hour ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ1 hour ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ2 hours ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ2 hours ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ2 hours ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌