Central Government has totally 155 lakh crore debt Says Nirmala Sitharaman ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ? - Vistara News ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ?

ದೇಶ

ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ?

Nirmala Sitharaman: ಕೇಂದ್ರ ಸರ್ಕಾರ ಈವರೆಗೆ ಎಷ್ಟು ಸಾಲವನ್ನು ಮಾಡಿದೆ ಎಂಬ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿದೆ. ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರವು ಈ ವರ್ಷದ ಮಾರ್ಚ್ ಹೊತ್ತಿಗೆ ಒಟ್ಟು 155 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Central Government has totally 155 lakh crore debt Says Nirmala Sitharaman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಸರ್ಕಾರ (Indian Government) ಮಾಡಿರುವ ಒಟ್ಟು ಸಾಲ ಎಷ್ಟಾಗಿದೆ ಗೊತ್ತಾ? ಬರೋಬ್ಬರಿ 155.8 ಲಕ್ಷ ಕೋಟಿ ರೂಪಾಯಿ. ಅಂದರೆ, ನಮ್ಮ ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ ಈ ಮೊತ್ತ! ಅಂದ ಹಾಗೆ, ಈ ಮಾಹಿತಿಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಸೋಮವಾರ ಲೋಕಸಭೆಗೆ ನೀಡಿದ್ದಾರೆ.

155.8 ಲಕ್ಷ ಕೋಟಿ ರೂಪಾಯಿ ಸಾಲದ ಪೈಕಿ ಬಾಹ್ಯ ಸಾಲದ ಮೊತ್ತ 7.03 ಲಕ್ಷ ಕೋಟಿ ರೂ. ಇದೆ. ಇದು ಜಿಡಿಪಿಯ ಶೇ.7.03ರಷ್ಟಾಗುತ್ತದೆ. ಕೇಂದ್ರ ಸರ್ಕಾರ ಈವರೆಗೆ ಮಾಡಿರುವ ಸಾಲ ಎಷ್ಟು, ಬಾಹ್ಯ ಸಾಲದ ಪ್ರಮಾಣ ಎಷ್ಟು, ಡಾಲರ್ ಮೌಲ್ಯ ಏರಿಕೆಯಿಂದಾಗಿ ಸಾಲದ ಮೇಲಾಗಿರುವ ಪರಿಣಾಮ ಹಾಗೂ ಸಾಲ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳು ಸೇರಿ ಇತ್ಯಾದಿ ಮಾಹಿತಿಯನ್ನು ಕೋರಿ ಸಂಸದ ನಾಮ ನಾಗೇಶ್ವರ್ ರಾವ್ ಅವರು ವಿತ್ತ ಸಚಿವಾಲಯದಿಂದ ಮಾಹಿತಿ ಕೋರಿದ್ದರು. ಈ ಪ್ರಶ್ನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಉತ್ತರಿಸಿದ್ದಾರೆ.

2023 ಮಾರ್ಚ್ ಹೊತ್ತಿಗೆ ಕೇಂದ್ರ ಸರ್ಕಾರವು ಒಟ್ಟು 155.8 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ. ವಿದೇಶಿಗಳಿಂದ 7.03 ಲಕ್ಷ ಕೋಟಿ ರೂ. ಹಣವನ್ನು ಸಾಲದ ರೂಪದಲ್ಲಿ ಪಡೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಒಟ್ಟು ಸಾಲದ ಪೈಕಿ ಬಾಹ್ಯ ಸಾಲದ ಪ್ರಮಾಣವು ಶೇ.4.5ರಷ್ಟಿದೆ. ಜಿಡಿಪಿಗೆ ಹೋಲಿಸಿದರೆ ಬಾಹ್ಯ ಸಾಲದ ಅನುಪಾತ ಶೇ.3ರಷ್ಟಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಬಾಹ್ಯ ಸಾಲಗಳನ್ನು ಸಾಮಾನ್ಯವಾಗಿ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಏಜೆನ್ಸಿಗಳು ಕಡಿಮೆ ಬಡ್ಡಿದರದಲ್ಲಿ ಒದಗಿಸುತ್ತವೆ. ಹಾಗಾಗಿ ಅಪಾಯ ಕಡಿಮೆ, ಸಾಲ ಸುರಕ್ಷಿತ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಮಾಲೋಚಿಸಿ ವಿದೇಶಿ ವಿನಿಮಯ ಸಂಗ್ರಹದ ಮೂಲವನ್ನು ವಿಸ್ತರಿಸಲು ರಿಸರ್ವ್ ಬ್ಯಾಂಕ್ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Budget 2023 : ನಿಮ್ಮಲ್ಲಿ ಕಿಸಾನ್‌ ಕಾರ್ಡ್‌ ಇದ್ಯಾ?; ಸಿಗುತ್ತೆ 10,000 ರೂ. ಹೆಚ್ಚುವರಿ ಸಬ್ಸಿಡಿ, ಬಡ್ಡಿರಹಿತ ಸಾಲ ಪ್ರಮಾಣ ಹೆಚ್ಚಳ

ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ರೂ. ಸಾಲ?

ಪ್ರಧಾನಿ ನರೇಂದ್ರ ಮೋದಿ ಆಡಳಿತದ ಈ ಎಂಟು ವರ್ಷಗಳಲ್ಲಿ ಸಾಲದ ಪ್ರಮಾಣ ಇನ್ನೂ ಹೆಚ್ಚಾಯಿತೇ? ಹೌದು ಇಂಥದೊಂದು ಪ್ರಶ್ನೆ ಕಾಡತೊಡಗಿದೆ. 2013-14ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತ 58 ಲಕ್ಷ ಕೋಟಿ ರೂ. ಇತ್ತು. ಅಂದರೆ, ಇದು ಜಿಡಿಪಿಯ ಶೇ.52ರಷ್ಟು. ಆದರೆ, 2022-23ರ ವಿತ್ತ ವರ್ಷದ ಮುಕ್ತಾಯದ ಹೊತ್ತಿಗೆ ಈ ಸಾಲದ ಪ್ರಮಾಣದ 155.8 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ. ಅಂದರೆ, ಈ ಎಂಟು ವರ್ಷದ ಅವಧಿಯಲ್ಲಿ ಹೆಚ್ಚು ಕಡಿಮೆ 97 ಲಕ್ಷ ಕೋಟಿ ರೂ. ಸಾಲವನ್ನು ಮಾಡಲಾಗಿದೆ ಎಂಬ ಚರ್ಚೆಗಳು ಶುರುವಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Salman Khan:ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Salman Khan
Koo

ನವದೆಹಲಿ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿ(Police custody)ಯಲ್ಲೇ ಆತ್ಮಹತ್ಯೆ(Suicide)ಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರನ್ನು ಸಿಐಡಿ ತನಿಖೆಗೆ ಹಾಜರು ಪಡಿಸಲಾಗಿದೆ. ಸಾಮಾನ್ಯವಾಗಿ ಲಾಕ್‌ ಅಪ್‌ನಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ತೀವ್ರ ನಿಗಾವಹಿಸುತ್ತಾರೆ. ಹಾಗಿದ್ದರೂ ಕೆಲವು ಆರೋಪಿಗಳು ತಾವು ಧರಿಸಿರುವ ಪೈಜಾಮಾದಿಂದ ಗಂಟು ಹಾಕಿ ಅದರ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದರು. ಇವರನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಲಾಗಿದ್ದು,. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಪೊಲೀಸರು ಘೋಷಿಸಿದ್ದರು.

2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಹೇಳಿದ್ದ.

ಇದನ್ನೂ ಓದಿ:Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ ಎಂದು ಹೇಳಿದ್ದ.

Continue Reading

ಪ್ರಮುಖ ಸುದ್ದಿ

SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

SMART Missile: ಸಾಗರ ಪ್ರದೇಶದಲ್ಲಿ ಹೆಚ್ಚಿನ ನಿಗಾ ಇರಿಸುವ, ಜಲಾಂತರ್ಗಾಮಿ ನೌಕೆಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವ ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (ಸ್ಮಾರ್ಟ್)‌ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇದರಿಂದ ಭಾರತದ ನೌಕಾಪಡೆಗೆ ಹೆಚ್ಚಿನ ಬಲ ಬಂದಂತಾಗಿದೆ.

VISTARANEWS.COM


on

SMART Missile
Koo

ಭುವನೇಶ್ವರ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಬಲ ನೀಡುವ, ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ (Anti-Submarine Missile System) ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (SMART Missile) ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿರುವ ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ ದ್ವೀಪದಲ್ಲಿ ಬುಧವಾರ (ಮೇ 1) ಪರೀಕ್ಷಾರ್ಥವಾಗಿ ಉಡಾವಣೆ ಮಾಡಲಾಯಿತು. ಇದು ಭಾರತದ ನೌಕಾಪಡೆಯ ಬಲವನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ತಿಳಿದುಬಂದಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೇಶೀಯವಾಗಿ ಸ್ಮಾರ್ಟ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಸಾಗರ ಪ್ರದೇಶದಲ್ಲಿ ನೌಕಾಪಡೆಯು ವೈರಿಗಳ ಮೇಲೆ ಇನ್ನಷ್ಟು ನಿಗಾ ಇರಿಸಲು, ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಳ್ಳಲು, ಪ್ರತಿದಾಳಿ ನಡೆಸಲು ನೆರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಎರಡನೇ ಪರೀಕ್ಷಾರ್ಥ ಉಡಾವಣೆಯಾಗಿದೆ. 2020ರ ಅಕ್ಟೋಬರ್‌ 5ರಂದು ಅಬ್ದುಲ್‌ ಕಲಾಂ ದ್ವೀಪದಲ್ಲಿಯೇ ಮೊದಲ ಪರೀಕ್ಷೆ ನಡೆಸಲಾಗಿತ್ತು.

ಕ್ಷಿಪಣಿಯ ವೈಶಿಷ್ಟ್ಯಗಳು

  • ಇದು ಕ್ಯಾನಿಸ್ಟರ್‌ ಆಧಾರಿತ, ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದೆ
  • ಭಾರತೀಯ ನೌಕಾಪಡೆಗಾಗಿ ಡಿಆರ್‌ಡಿಒ ದೇಶೀಯವಾಗಿ ನಿರ್ಮಿಸಿದೆ
  • ಸಾಗರ ಪ್ರದೇಶದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಾಗ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಲಿದೆ
  • ಇದು ಸುಮಾರು 643 ಕಿ.ಮೀ ದೂರದ ಗುರಿಯನ್ನು ಹೊಡೆದುರುಳಿಸುವ ದಕ್ಷತೆ ಹೊಂದಿದೆ
  • 50 ಕೆ.ಜಿ. ಸ್ಫೋಟಕಗಳನ್ನು 20 ಕಿಲೋಮೀಟರ್‌ ದೂರದವರೆಗೆ ಸಾಗಿಸುವ ಸಾಮರ್ಥ್ಯ
  • ಆಗಸದಲ್ಲಿಯೇ ಶತ್ರುಗಳ ಪಡೆಯ ನೌಕೆಗಳನ್ನು ಡಿಟೆಕ್ಟ್‌ ಮಾಡುವ ತಂತ್ರಜ್ಞಾನದ ಅಳವಡಿಕೆ
  • ಆಗಸದಿಂದಲೂ ಉಡಾವಣೆ ಮಾಡುವ ದಕ್ಷತೆ, ಟ್ರಕ್‌ ಆಧಾರಿತ ಕೋಸ್ಟಲ್‌ ಬ್ಯಾಟರಿ ಮೂಲಕವೂ ಉಡಾವಣೆ ಸಾಧ್ಯ
  • ಇದನ್ನೂ ಓದಿ: Gaganyaan Mission: ಗಗನಯಾನಕ್ಕೆ ಇಸ್ರೋ ಸಿದ್ಧತೆ, ಮತ್ತೊಂದು ಮಹತ್ವದ ಪರೀಕ್ಷೆ ಯಶಸ್ವಿ!
Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Covishield Vaccine: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Covishield vaccine supreme court
Koo

ಹೊಸದಿಲ್ಲಿ: ಬ್ರಿಟನ್‌ನಲ್ಲಿ (UK) ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆ, ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಬಗೆಗೆ ಅಧ್ಯಯನ ನಡೆಸಲು ಆದೇಶಿಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಮನವಿ ಸಲ್ಲಿಸಿದ್ದಾರೆ.

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಮಿತಿಯು ಏಮ್ಸ್‌ ನಿರ್ದೇಶಕರ ನೇತೃತ್ವವನ್ನು ಹೊಂದಿರಬೇಕು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರು ಮೇಲ್ವಿಚಾರಣೆ ಮಾಡಬೇಕು; ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಬೇಕು ಎಂದವರು ಕೋರಿದ್ದಾರೆ.

COVID-19 ಸಮಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನದ ಅಡ್ಡ ಪರಿಣಾಮಗಳಿಂದ ಮರಣ ಹೊಂದಿದ, ತೀವ್ರವಾಗಿ ಅಸ್ವಸ್ಥರಾದ, ಅಂಗವಿಕಲರಾದ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಬೇಕು. ಜನರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮಗಳನ್ನು ಕಾರಣವಾಗಬಹುದು ಎಂದು ಇತ್ತೀಚೆಗೆ ಕಂಪನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಮತ್ತು ಲಸಿಕೆ ಡೆವಲಪರ್ ಆಸ್ಟ್ರಾಜೆನೆಕಾ ಬ್ರಿಟನ್‌ನ ನ್ಯಾಯಾಲಯದಲ್ಲಿ ಇದನ್ನು ತಿಳಿಸಿದೆ. ಇದು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವಿಕೆ ಮತ್ತು ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

“ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ತಯಾರಿಕೆಗಾಗಿ ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ 175 ಕೋಟಿಗೂ ಹೆಚ್ಚು ಜನ ಕೋವಿಶೀಲ್ಡ್ ಅನ್ನು ಪಡೆದರು” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೋವಿಶೀಲ್ಡ್‌ ಜೊತೆಗೆ ಭಾರತೀಯ ತಯಾರಿಕೆಯಾದ Covaxin ಅನ್ನು ಕೂಡ ಭಾರತದಲ್ಲಿ ನೀಡಲಾಗಿತ್ತು.

ಕಳೆದ ವರ್ಷ ಲಂಡನ್‌ನಲ್ಲಿ ಜೇಮೀ ಸ್ಕಾಟ್ ಎಂಬವರು ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಅವರಲ್ಲಿ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೆದುಳಿನಲ್ಲಿ ರಕ್ತಸ್ರಾವವ ಉಂಟಾಗಿತ್ತು. ಶಾಶ್ವತ ಮಿದುಳಿನ ಗಾಯ ಉಂಟಾಗಿತ್ತು. ಇವರೂ ಸೇರಿ UKಯಲ್ಲಿ ಐವತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರು ಮತ್ತು ಸಂಬಂಧಿಕರು ಸುಮಾರು 100 ಮಿಲಿಯನ್ ಪೌಂಡ್‌ ಪರಿಹಾರವನ್ನು ಬಯಸಿದ್ದಾರೆ.

ಭಾರತದಲ್ಲಿ, ಕೋವಿಡ್ -19 ರ ನಂತರ ಹೃದಯಾಘಾತ ಮತ್ತು ವ್ಯಕ್ತಿಗಳ ಹಠಾತ್ ಕುಸಿತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಜನರಲ್ಲಿಯೂ ಹೃದಯಾಘಾತದ ಪ್ರಕರಣಗಳು ಸಂಭವಿಸಿವೆ. ಕೋವಿಶೀಲ್ಡ್‌ ಮಾಲಿಕ ಕಂಪನಿಯ ಮಾಹಿತಿ ದಾಖಲಾತಿಯು ನಮ್ಮಲ್ಲಿಯೂ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯ ಅಪಾಯಗಳ ಬಗ್ಗೆ ಯೋಚಿಸಲು ಒತ್ತಾಯಿಸಿದೆ ಎಂದು ಮನವಿಯಲ್ಲಿ ಹೇಳಿದೆ.

ಈ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಲಸಿಕೆಯ ದುಷ್ಪರಿಣಾಮಗಳಿಗೆ ನಷ್ಟಪರಿಹಾರವನ್ನು ಕೋರಿದ್ದು, ಯುಕೆಯಂತಹ ಕೆಲವು ದೇಶಗಳಲ್ಲಿಯೂ ವ್ಯಾಕ್ಸಿನೇಷನ್‌ನಿಂದ ತೀವ್ರವಾಗಿ ಅಂಗವಿಕಲರಾದ ಜನರಿಗೆ ನಷ್ಟ ಪಾವತಿ ವ್ಯವಸ್ಥೆ ಇದೆ ಎಂದಿದ್ದಾರೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Continue Reading

ವೈರಲ್ ನ್ಯೂಸ್

Viral News: ಕೊಲೆಯಾಗಿದ್ದಾರೆ ಎನ್ನಲಾದ ಸಹೋದರಿಯರು ವರ್ಷದ ಬಳಿಕ ಪತ್ತೆ; ಯಾವ ಸಿನಿಮಾಕ್ಕೂ ಕಡಿಮೆ ಇಲ್ಲ ಈ ಘಟನೆ

Viral News: ಕೆಲವೊಮ್ಮೆ ನಿಜ ಜೀವನದಲ್ಲಿ ನಡೆಯುವ ಘಟನೆಗಳು ಯಾವ ಸಿನಿಮಾ ಕಥೆಗಳಿಗಿಂತ ಕಡಿಮೆ ಇರುವುದಿಲ್ಲ. ಜೀವನದಲ್ಲಿ ಘಟಿಸುವ ಕೆಲವು ಸನ್ನಿವೇಶಗಳು ನಾವು ಊಹಿಸದ ರೀತಿಯ ತಿರುವು ಪಡೆದುಕೊಳ್ಳುತ್ತವೆ. ಅದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ. ಉತ್ತರ ಪ್ರದೇಶದ ಗೋರಖ್‌ಪುರ ಮೂಲದ, ದಿಲ್ಲಿಯಲ್ಲಿ ವಾಸವಾಗಿದ್ದ ಸೀತಾ-ಗೀತಾ ಎನ್ನುವ ಸಹೋದರಿಯರ ಜೀವನದ ಕಥೆ ಇದು. ಪಾಲಕರು ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದ ಸೀತಾ (20) ಮತ್ತು ಗೀತಾ (21) ಇಬ್ಬರೂ 2023ರಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ಅಜಯ್ ಪ್ರಜಾಪತಿ ದೂರು ನೀಡಿದ್ದ. ತನ್ನ ಸಹೋದರಿಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದ. ಇದೀಗ ಸಹೋದರಿಯರು ಮನೆಗೆ ಮರಳಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಈ ರೋಚಕ ಘಟನೆಯ ವಿವರ ಇಲ್ಲಿದೆ.

VISTARANEWS.COM


on

Viral News
Koo

ಲಕ್ನೋ: ಕೆಲವೊಮ್ಮೆ ನಿಜ ಜೀವನದಲ್ಲಿ ನಡೆಯುವ ಘಟನೆಗಳು ಯಾವ ಸಿನಿಮಾ ಕಥೆಗಳಿಗಿಂತ ಕಡಿಮೆ ಇರುವುದಿಲ್ಲ. ಜೀವನದಲ್ಲಿ ಘಟಿಸುವ ಕೆಲವು ಸನ್ನಿವೇಶಗಳು ನಾವು ಊಹಿಸದ ರೀತಿಯ ತಿರುವು ಪಡೆದುಕೊಳ್ಳುತ್ತವೆ. ಇಲ್ಲೂ ಆಗಿದ್ದು ಇದೇ. ಕೊಲೆಯಾಗಿದ್ದಾರೆ ಎಂದು ಮನೆಯವರು ಭಾವಿಸಿದ್ದ ಸಹೋದರಿಯರು ಒಂದು ವರ್ಷದ ಬಳಿಕ ಪತ್ತೆಯಾಗಿದ್ದಾರೆ. ಅದು ಕೂಡ ಅವರಿಗೆ ಮದುವೆಯಾಗಿ ಮಕ್ಕಳಿವೆ ಎನ್ನುವುದು ವಿಶೇಷ. ಸದ್ಯ ಈ ರೋಚಕ ಘಟನೆ ವೈರಲ್‌ ಆಗಿದೆ (Viral News).

ಉತ್ತರ ಪ್ರದೇಶದ ಗೋರಖ್‌ಪುರ ಮೂಲದ, ದಿಲ್ಲಿಯಲ್ಲಿ ವಾಸವಾಗಿದ್ದ ಸೀತಾ-ಗೀತಾ ಎನ್ನುವ ಸಹೋದರಿಯರ ಜೀವನದ ಕಥೆ ಇದು. ಪಾಲಕರು ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದ ಸೀತಾ (20) ಮತ್ತು ಗೀತಾ (21) ಇಬ್ಬರೂ 2023ರಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ಅಜಯ್ ಪ್ರಜಾಪತಿ ದೂರು ನೀಡಿದ್ದ. ತನ್ನ ಸಹೋದರಿಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದ. ಇದೀಗ ಸಹೋದರಿಯರು ಮನೆಗೆ ಮರಳಿದ್ದು ಪ್ರಕರಣ ಸುಖಾಂತ್ಯ ಕಂಡಿದೆ.

ಘಟನೆಯ ವಿವರ

ಕಳೆದ ವರ್ಷ ಜನವರಿಯಲ್ಲಿ ಸೀತಾ-ಗೀತಾ ಇಬ್ಬರೂ ನಾಪತ್ತೆಯಾಗುವ ಮೂಲಕ ಕಥೆ ಆರಂಭವಾಗುತ್ತದೆ. ಸಹೋದರಿಯರಿಗಾಗಿ ಹುಡುಕಾಟ ನಡೆಸಿದ ಅಜಯ್ ಪ್ರಜಾಪತಿ ಅವರು ಎಲ್ಲೂ ಪತ್ತೆಯಾಗದಿದ್ದಾಗ ಆತಂಕಕ್ಕೆ ಒಳಗಾಗಿದ್ದ. ಹೀಗಾಗಿ ನಾಪತ್ತೆ ದೂರು ದಾಖಲಿಸಿದ್ದ. ಹೀಗಿದ್ದರೂ ತನ್ನ ಹುಡುಕಾಟವನ್ನು ನಿಲ್ಲಿಸಿರಲಿಲ್ಲ. ಈ ಮಧ್ಯೆ ಸಹೋದರಿಯರ ಪೈಕಿ ಒಬ್ಬಾಕೆಯೊಂದಿಗೆ ಗೆಳೆತನ ಬೆಳೆಸಿದ್ದ ಅದೇ ಗ್ರಾಮದ ಜಯಂತ್‌ ಮೌರ್ಯನನ್ನು ಅಜಯ್ ಪ್ರಜಾಪತಿ ಭೇಟಿಯಾಗಿದ್ದ. ತನ್ನ ಸಹೋದರಿಯರು ಎಲ್ಲಿದ್ದಾರೆಂದು ಪ್ರಶ್ನಿಸಿದಾಗ ರೊಚ್ಚಿಗೆದ್ದಿದ್ದ ಜಯಂತ್‌, ʼʼನಿನ್ನ ಸಹೋದರಿಯರಿಗಾದ ಗತಿ ನಿನಗೂ ಬರುತ್ತದೆʼʼ ಎಂದು ಬೆದರಿಕೆ ಹಾಕಿದ್ದ.

ಇದರಿಂದ ತನ್ನ ಸಹೋದರಿಯರ ಬಗ್ಗೆ ಆತಂಕಗೊಂಡ ಅಜಯ್ ಪ್ರಜಾಪತಿ ಪೊಲೀಸ್‌ ಠಾಣೆಗೆ ತೆರಳಿ ಜಯಂತ್‌ ಮೌರ್ಯ ವಿರುದ್ಧ ಕೊಲೆಯ ಕೇಸ್‌ ದಾಖಲಿಸಿದ್ದ. ಆದರೆ ಸಾಕ್ಷಿಯ ಕೊರತೆಯಿಂದ ಪೊಲೀಸರು ಜಯಂತ್‌ ಮತ್ತು ಆತನ ಮನೆಯವರ ವಿರುದ್ಧ ದೂರು ದಾಖಲಿಸಿರಲಿಲ್ಲ. ಹೀಗಾಗಿ ಅಜಯ್ ಕೋರ್ಟ್ ಮೆಟ್ಟಿಲೇರಿದ್ದ. ಇದಾಗಿ ಸುಮಾರು ಒಂದು ವರ್ಷದ ಬಳಿಕ 2024ರ ಜನವರಿ 8ರಂದು ಕೋರ್ಟ್ ಆದೇಶದ ತರುವಾಯ ಗೋರಖ್‌ಪುರದ ಬೆಲ್ಘಾಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ತನಿಖೆ ಆರಂಭಿಸಿ ನಾಲ್ಕು ತಿಂಗಳ ನಂತರ ಈ ಸಹೋದರಿಯರು ಜೀವಂತ ಇರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ವೇಳೆ ಸಹೋದರಿಯರ ಕಣ್ಮರೆಯ ಹಿಂದಿನ ನಿಜ ಕಾರಣ ಬಯಲಾಗಿತ್ತು. ಸಹೋದರಿಯರಿಬ್ಬರು ತಮ್ಮ ಪ್ರೇಮಿಗಳನ್ನು ಮದುವೆಯಾಗಲು ಮನೆ ಬಿಟ್ಟು ಓಡಿ ಹೋಗಿದ್ದರು. ತಮ್ಮ ಸಹೋದರ ಕೊಲೆ ಪ್ರಕರಣ ದಾಖಲಿಸಿರುವುದನ್ನು ತಿಳಿದ ಇವರು ಅಮಾಯಕರು ಜೈಲು ಪಾಲಾಗುವುದನ್ನು ತಪ್ಪಿಸಲು ಪೊಲೀಸರನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

ಸೀತಾ ಹರಿಯಾಣದ ವಿಜೇಂದರ್ ಎಂಬಾತನನ್ನು ಮದುವೆಯಾಗಿದ್ದಾಳೆ. ತಮ್ಮಿಬ್ಬರಿಗೂ ಈಗ ಐದು ತಿಂಗಳ ಹೆಣ್ಣು ಮಗು ಇದ್ದು, ಸಂತೋಷದಿಂದ ಜೀವನ ನಡೆಸುತ್ತಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ. ಇನ್ನು ಗೀತಾ ಉತ್ತರಾಖಂಡದ ಅಲ್ಮೋರಾದ ನಿವಾಸಿ ಸುರೇಶ್ ರಾಮ್‌ನನ್ನು ಮದುವೆಯಾಗಿದ್ದು, ಈ ದಂಪತಿಗೆ ಆರು ತಿಂಗಳ ಹೆಣ್ಣು ಮಗು ಇದೆ. ಒಟ್ಟಿನಲ್ಲಿ ಕೊಲೆ ಎನ್ನಲಾಗಿದ್ದ ಪ್ರಕರಣ ಶುಭಂಗೊಂಡಿದೆ.

Continue Reading
Advertisement
Hassan Pen Drive case Siddaramaiah writes to PM Modi seeking cancellation of Prajwal Revanna diplomatic passport
ಹಾಸನ8 mins ago

Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

Prajwal Revanna related post By Rashmi Goutham
ಕ್ರೈಂ8 mins ago

Prajwal Revanna: ಮಹಿಳೆ ಹಸಿದಾಗ ಬಾಯಿಗೆ ಆಹಾರ ಹಾಕಿ…ʻಅದಲ್ಲʼ! ನಟಿಯ ಪೋಸ್ಟ್‌ ವೈರಲ್‌!

Diabetic Chutney
ಲೈಫ್‌ಸ್ಟೈಲ್12 mins ago

Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

Bathroom Cleaning Tips
ಲೈಫ್‌ಸ್ಟೈಲ್16 mins ago

Bathroom Cleaning Tips: ಬಾತ್‌ರೂಮ್‌ ಕನ್ನಡಿ ಕೊಳಕಾಗಿದೆಯೇ? ಚಿಂತೆ ಬಿಡಿ, ಈ ಟಿಪ್ಸ್ ಬಳಸಿ

Kalamma Devi Pooja Mahotsava in Kampli
ಧಾರ್ಮಿಕ21 mins ago

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Union Minister Pralhad Joshi election campaign in Sattur
ಕರ್ನಾಟಕ32 mins ago

Lok Sabha Election: 60 ವರ್ಷ ದೇಶವಾಳಿದ ನಕಲಿ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಗೆ ಬರ: ಜೋಶಿ ಲೇವಡಿ

IPL 2024
ಕ್ರೀಡೆ35 mins ago

IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

Salman Khan
ಸಿನಿಮಾ43 mins ago

Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Hassan Pen Drive Case HDK behind Prajwal Pen Drive release DK Brothers allegations
ಹಾಸನ45 mins ago

Hassan Pen Drive Case: ಪ್ರಜ್ವಲ್‌ ಪೆನ್‌ಡ್ರೈವ್‌ ರಿಲೀಸ್‌ ಹಿಂದೆ ಎಚ್‌ಡಿಕೆ? ಡಿಕೆ ಬ್ರದರ್ಸ್‌ ಹೇಳಿದ ಸ್ಫೋಟಕ ಮಾಹಿತಿ ಏನು?

SMART Missile
ಪ್ರಮುಖ ಸುದ್ದಿ47 mins ago

SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌