Viral Video: ತಿರುಗುತ್ತಿದ್ದ ಡ್ರಾಪ್​ ಟವರ್​ ಒಮ್ಮೆಲೇ ಕುಸಿದುಬಿತ್ತು; ಅವಘಡದಲ್ಲಿ 11 ಮಂದಿಗೆ ಗಾಯ - Vistara News

ದೇಶ

Viral Video: ತಿರುಗುತ್ತಿದ್ದ ಡ್ರಾಪ್​ ಟವರ್​ ಒಮ್ಮೆಲೇ ಕುಸಿದುಬಿತ್ತು; ಅವಘಡದಲ್ಲಿ 11 ಮಂದಿಗೆ ಗಾಯ

ಒಂದಷ್ಟು ಜನರು ಕೆಳಗೆ ನಿಂತು, ಆ ಡ್ರಾಪ್​ ಟವರ್​​ನ್ನು ನೋಡುತ್ತಿದ್ದರು. ಇದು ಬಿದ್ದ ರಭಸಕ್ಕೆ ಅವರೂ ಸಹ ಬಿದ್ದು ಗಾಯಗೊಂಡಿದ್ದಾರೆ. ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಡ್ರಾಪ್ ಟವರ್​ ಒಮ್ಮೆಲೇ ಕುಸಿದುಬಿದ್ದಾಗ ಅನೇಕರು ಕೂಗಿಕೊಂಡಿದ್ದನ್ನು ಕೇಳಬಹದು

VISTARANEWS.COM


on

11 Injured in Drop Tower Crashes At Rajasthan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಜ್ಮೇರ್​: ಜಾತ್ರೆ, ಉತ್ಸವಗಳು, ಊರ ಹಬ್ಬಗಳಲ್ಲಿ ವಿವಿಧ ಮನರಂಜನೆ, ಆಟಗಳೆಲ್ಲ ಇರುತ್ತವೆ. ಅದರಲ್ಲೂ ಜೇಂಟ್​ ವೀಲ್​, ಡ್ರಾಪ್​ ಟವರ್​, ಕಾರ್ನೀವಲ್ ರೈಡ್​ಗಳೆಲ್ಲ ಸಾಮಾನ್ಯವಾಗಿ ಎಲ್ಲ ಕಡೆ ಬರುತ್ತವೆ. ಇಂಥ ಸಾಹಸಮಯ ಆಟಗಳು ಮಜಾ ಕೊಡುವಷ್ಟೇ ಅಪಾಯ ತಂದೊಡ್ಡಬಲ್ಲವು. ಅಂಥ ಹತ್ತು ಹಲವು ಉದಾಹರಣೆಗಳನ್ನು ಈ ಹಿಂದೆಯೇ ನೋಡಿದ್ದೇವೆ. ಈಗ ರಾಜಸ್ಥಾನದಲ್ಲಿ ಕೂಡ ಅಂಥದ್ದೇ ಒಂದು ಅವಘಡ ನಡೆದಿದೆ. ಅಜ್ಮೇರ್​ ಜಿಲ್ಲೆಯಲ್ಲಿ ಕುಂಡನ್​​ ನಗರ ಏರಿಯಾದಲ್ಲಿ ನಡೆದ ಜಾತ್ರೆಯೊಂದರಲ್ಲಿ ಡ್ರಾಪ್​ ಟವರ್ ಅಪಘಾತವುಂಟಾಗಿ 11 ಮಂದಿ ಗಾಯಗೊಂಡಿದ್ದಾರೆ.

ಈ ಡ್ರಾಪ್​ ಟವರ್​ ಎಂದರೆ, ಉದ್ದನೆಯ ಕಂಬದ ಸುತ್ತಲೂ ಚಕ್ರವೊಂದನ್ನು ಹಾಕಿಡಲಾಗುತ್ತದೆ. ಅದರ ಮೇಲೆಲ್ಲ ಕಬ್ಬಿಣ ಸೀಟ್ ಇರುತ್ತದೆ. ಸೀಟ್​ ಮೇಲೆ ಜನರು ಸುರಕ್ಷಿತವಾಗಿ ಕುಳಿತುಕೊಳ್ಳುವಂತೆ ರೂಪಿಸಿರಲಾಗುತ್ತದೆ. ಆ ದೊಡ್ಡದಾದ ಚಕ್ರ ಕಂಬದ ಸುತ್ತ ತಿರುಗುತ್ತ ಮೇಲಿನಿಂದ ಕೆಳಕ್ಕೂ, ಕೆಳಗಿನಿಂದ ಮೇಲಕ್ಕೂ ಹೋಗುತ್ತದೆ. ಆಟವಾಡಲು ಭಾರಿ ಖುಷಿಕೊಡುತ್ತದೆ. ಆದರೆ ರಾಜಸ್ಥಾನದಲ್ಲಿ ಇದು ಒಮ್ಮೆಲೇ ಕುಸಿದುಬಿದ್ದು 11 ಮಂದಿ ಗಾಯಗೊಂಡಿದ್ದಾರೆ. ಒಂದಷ್ಟು ಜನರು ಕೆಳಗೆ ನಿಂತು, ಆ ಡ್ರಾಪ್​ ಟವರ್​​ನ್ನು ನೋಡುತ್ತಿದ್ದರು. ಇದು ಬಿದ್ದ ರಭಸಕ್ಕೆ ಅವರೂ ಸಹ ಬಿದ್ದು ಗಾಯಗೊಂಡಿದ್ದಾರೆ. ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಡ್ರಾಪ್ ಟವರ್​ ಒಮ್ಮೆಲೇ ಕುಸಿದುಬಿದ್ದಾಗ ಅನೇಕರು ಕೂಗಿಕೊಂಡಿದ್ದನ್ನು ಕೇಳಬಹದು. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.

ಇದನ್ನೂ ಓದಿ: Fire Accident: ಮಾರಿಜಾತ್ರೆಗೆ ಹೋಗುತ್ತಿದ್ದಾಗ ಕಾರಿಗೆ ಬೆಂಕಿ; ಬೆಂಗಳೂರಲ್ಲಿ ಅಗ್ನಿಅವಘಡಕ್ಕೆ ಐಷಾರಾಮಿ ಕಾರುಗಳು ಭಸ್ಮ

ಘಟನೆ ನಡೆದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಜ್ಮೇರ್​​ನ ಹೆಚ್ಚುವರಿ ಎಸ್​​ಪಿ ಸುಶೀಲ್​ ಕುಮಾರ್​ ಪರಿಶೀಲನೆ ನಡೆಸಿದ್ದಾರೆ. ಕೇಬಲ್​ ತುಂಡಾದ ಕಾರಣಕ್ಕೆ ಹೀಗೆ ಟವರ್​​ನಿಂದ ಚಕ್ರ ಕುಸಿದುಬಿತ್ತು ಎಂದು ಹೇಳಲಾಗಿದೆ. ಇನ್ನು ಗಾಯಗೊಂಡವರು ಯಾರಿಗೂ ಜೀವಕ್ಕೆ ಅಪಾಯವಿಲ್ಲ ಎಂದೂ ಮಾಹಿತಿ ಲಭ್ಯವಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

Prajwal Revanna Case: ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ಸದ್ಯ ಪ್ರಜ್ವಲ್‌ ರೇವಣ್ಣ ತಲೆ ಮೇಲೆ ಈ ಲುಕೌಟ್‌ ನೋಟೀಸ್‌ ತೂಗುಗತ್ತಿ ತೂಗುತ್ತಿದೆ.

VISTARANEWS.COM


on

prajwal revanna case lookout notice
Koo

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna case) ಅವರಿಗೆ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲುಕೌಟ್‌ ನೋಟೀಸ್‌ ಎಂದರೇನು, ಅದರ ಪರಿಣಾಮವೇನು, ಅದಕ್ಕೂ ತಡೆ ತರಬಹುದೇ, ಇತ್ಯಾದಿ ವಿವರಗಳು ಇಲ್ಲಿವೆ.

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲಾ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟೀಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ: Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Continue Reading

Lok Sabha Election 2024

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

School Jobs Scam: ಟಿಎಂಸಿಯ ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಂಡ ಕುನಾಲ್ ಘೋಷ್ ಇದೀಗ ಪಕ್ಷದ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಗೆ ಮೊದಲೇ ಶಾಲಾ ನೇಮಕಾತಿ ಹಗರಣದ ಬಗ್ಗೆ ತೃಣಮೂಲ ಕಾಂಗ್ರೆಸ್‌ಗೆ ತಿಳಿದಿತ್ತು ಎಂದು ದೂರಿದ್ದಾರೆ. ಇತ್ತೀಚೆಗೆ (ಏಪ್ರಿಲ್ 22) ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗಾಗಿ ನಡೆಸಿದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ -2016ರ (State Level Selection Test-2016) ನೇಮಕಾತಿ ಪ್ರಕ್ರಿಯೆ ಅನೂರ್ಜಿತ ಎಂದು ಕೋಲ್ಕತ್ತಾ ಹೈಕೋರ್ಟ್ ಘೋಷಿಸಿತ್ತು.

VISTARANEWS.COM


on

School Jobs Scam
Koo

ಕೋಲ್ಕತ್ತಾ: ಟಿಎಂಸಿ (TMC)ಯ ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಂಡ ಕುನಾಲ್ ಘೋಷ್ (Kunal Ghosh) ಇದೀಗ ಪಕ್ಷದ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಗೆ ಮೊದಲೇ ಶಾಲಾ ನೇಮಕಾತಿ ಹಗರಣ (School Jobs Scam)ದ ಬಗ್ಗೆ ತೃಣಮೂಲ ಕಾಂಗ್ರೆಸ್‌ಗೆ ತಿಳಿದಿತ್ತು ಎಂದು ದೂರಿದ್ದಾರೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಆಪ್ತರೆಂದು ಪರಿಗಣಿಸಲ್ಪಟ್ಟ ಕುನಾಲ್ ಘೋಷ್ ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಮಾತ್ರವಲ್ಲ ಲೋಕಸಭಾ ಚುನಾವಣೆಯ ಮಧ್ಯೆ ಈ ಹೇಳಿಕೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಇತ್ತೀಚೆಗೆ (ಏಪ್ರಿಲ್ 22) ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗಾಗಿ ನಡೆಸಿದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ -2016ರ (State Level Selection Test-2016) ನೇಮಕಾತಿ ಪ್ರಕ್ರಿಯೆ ಅನೂರ್ಜಿತ ಎಂದು ಕೋಲ್ಕತ್ತಾ ಹೈಕೋರ್ಟ್ ಘೋಷಿಸಿತ್ತು. ಇದು ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದು ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸಾಕಷ್ಟು ಮುಜುಗರ ತಂದಿತ್ತು.

ಬುಧವಾರ ಬಿಜೆಪಿ ಲೋಕಸಭಾ ಅಭ್ಯರ್ಥಿಯೊಂದಿಗೆ ವೇದಿಕೆ ಹಂಚಿಕೊಂಡ ಕುನಾಲ್ ಘೋಷ್ ಅವರನ್ನು ಟಿಎಂಸಿ ಹುದ್ದೆಯಿಂದ ವಜಾ ಮಾಡಿತ್ತು. ʼʼಶಾಲಾ ಶಿಕ್ಷಣ ಇಲಾಖೆಯಲ್ಲಿ ಅಪಾರ ಪ್ರಮಾಣದ ಭ್ರಷ್ಟಾಚಾರ ಮತ್ತು ಸುಲಿಗೆ ನಡೆಯುತ್ತಿದೆ ಎಂಬ ಅಂಶ ಪಕ್ಷಕ್ಕೆ ಚೆನ್ನಾಗಿ ತಿಳಿದಿತ್ತು. 2021ರ ವಿಧಾನಸಭಾ ಚುನಾವಣೆಗೆ ಮೊದಲೇ ಪಕ್ಷಕ್ಕೆ ಈ ಬಗ್ಗೆ ಅರಿವಿತ್ತು” ಎಂದು ಅವರು ಹೇಳಿದ್ದಾರೆ. “ದೊಡ್ಡ ಪ್ರಮಾಣದ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಹೊಂದಿದ್ದ ಕಾರಣಕ್ಕೆ 2021ರಲ್ಲಿ ಪಕ್ಷವು ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಪಾರ್ಥ ಚಟರ್ಜಿ ಅವರನ್ನು ಶಿಕ್ಷಣ ಸಚಿವಾಲಯದಿಂದ ಕೈಗಾರಿಕಾ ಇಲಾಖೆಗೆ ವರ್ಗಾಯಿಸಿತು” ಎಂದು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ರಾಜ್ಯ ಸರ್ಕಾರ 2016ರಲ್ಲಿ ಮಾಡಿದ್ದ 25,753 ಶಿಕ್ಷಕರ ನೇಮಕಾತಿಯನ್ನು ಹೈಕೋರ್ಟ್‌ ರದ್ದುಗೊಳಿಸಿದ್ದಲ್ಲದೆ ರದ್ದಾದವರು, 2016ರಿಂದ ತಾವು ಪಡೆದ ಸಂಬಳವನ್ನೂ ಬಡ್ಡಿ ಸಹಿತ ವಾಪಸ್‌ ನೀಡಬೇಕು ಎಂಬ ಆದೇಶ ಹೊರಡಿಸಿತ್ತು. ಅಂದು 24,640 ಖಾಲಿ ಹುದ್ದೆಗಳಿಗೆ 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016ಗೆ ಹಾಜರಾದ 25,753 ಮಂದಿಗೆ ನೇಮಕಾತಿ ಪತ್ರ ನೀಡಲಾಗಿತ್ತು. ಇದು 9, 10, 11 ಮತ್ತು 12ನೇ ತರಗತಿಗಳ ಶಿಕ್ಷಕರು ಮತ್ತು ಗುಂಪು-ಸಿ ಮತ್ತು ಡಿ ಸಿಬ್ಬಂದಿ ಹುದ್ದೆಗಳನ್ನು ಒಳಗೊಂಡಿತ್ತು.

ಎಸ್ಎಲ್ಎಸ್‌ಟಿ-2016ರಲ್ಲಿ ಹಾಜರಾಗಿ ಉದ್ಯೋಗ ಸಿಗದ ಕೆಲವು ಅಭ್ಯರ್ಥಿಗಳು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ಪೀಠವು ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿತ್ತು. ಅಕ್ರಮಗಳನ್ನು ಕಂಡುಕೊಂಡ ನಂತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಹಲವಾರು ಉದ್ಯೋಗಗಳನ್ನು ವಜಾಗೊಳಿಸಲು ಹೈಕೋರ್ಟ್ ತೀರ್ಪು ನೀಡಿತ್ತು.

Continue Reading

ದೇಶ

Delhi Lieutenant Governor: ದೆಹಲಿಯ DCW ಗುತ್ತಿಗೆ ನೌಕರರಿಗೆ ಬಿಗ್‌ ಶಾಕ್‌; 220ಕ್ಕೂ ಹೆಚ್ಚು ನೌಕರರು ವಜಾ

Delhi Lieutenant Governor: ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಅವಧಿಯಲ್ಲಿ ಸರ್ಕಾರದ ಯಾವುದೇ ಅನುಮತಿ ಪಡೆಯದೇ, ನಿಯಮಕ್ಕೆ ವಿರುದ್ಧವಾಗಿ ಈ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ. ಇಗೀಗ ಈ ನೌಕರರನ್ನು

VISTARANEWS.COM


on

Delhi Lieutenant Governor
Koo

ನವದೆಹಲಿ: ದೆಹಲಿ ಮಹಿಳಾ ಆಯೋಗ(DCW)ದ 223 ಗುತ್ತಿಗೆ ನೌಕರರನ್ನು(Contractual Employees) ಲೆಫ್ಟಿನೆಂಟ್‌ ಗವರ್ನರ್‌ (Delhi Lieutenant Governor) ವಿ.ಕೆ. ಸಕ್ಸೇನಾ(VK Saxena) ನೌಕರಿಯಿಂದ ವಜಾಗೊಳಿಸಿದೆ. ಮಹಿಳಾ ಮತ್ತು ಮಕ್ಕಳ ಆಯೋಗದ ಮಾಹಿತಿ ಪ್ರಕಾರ, ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್‌ (Swati Maliwal) ಅವಧಿಯಲ್ಲಿ ಸರ್ಕಾರದ ಯಾವುದೇ ಅನುಮತಿ ಪಡೆಯದೇ, ನಿಯಮಕ್ಕೆ ವಿರುದ್ಧವಾಗಿ ಈ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ. ಇಗೀಗ ಈ ನೌಕರರನ್ನು ವಜಾಗೊಳಿಸಿ ಲೆಫ್ಟಿನೆಂಟ್‌ ಗವರ್ನರ್‌ ಆದೇಶ ಹೊರಡಿಸಿದ್ದಾರೆ.

ಮಹಿಳಾ ಆಯೋಗವು ಯಾವುದೇ ನಿಯಮ ಪಾಲಿಸದೇ 223 ಹುದ್ದೆಗಳನ್ನು ಸೃಷ್ಟಿಸುವ ಮೂಲಕ DCW ಕಾಯಿದೆ 1994 ಮತ್ತು ಹಣಕಾಸು & ಯೋಜನೆ ಇಲಾಖೆ, GNCTDಯ ನಿಯಮವನ್ನು ಉಲ್ಲಂಘಿಸಿದೆ. ಅಲ್ಲದೇ ಪ್ರತಿ ಹುದ್ದೆಗಳ ಅಗತ್ಯತೆ ಬಗ್ಗೆ ಯಾವುದೇ ಸೂಕ್ತ ಅಧ್ಯಯನ ಮಾಡದೇ, ನೌಕರರ ಅರ್ಹತೆ ಪರೀಕ್ಷಿಸದೇ, ಆಡಳಿತಾತ್ಮಕ ಅನುಮತಿ ಪಡೆಯದೇ ಈ ನೌಕರರನ್ನು ನೇಮಿಸಿಕೊಳ್ಳಲಾಗಿತ್ತು. ಈ ಹುದ್ದೆಗಳಿಗೆ ಔಪಚಾರಿಕವಾಗಿ ಯಾವುದೇ ಅರ್ಜಿ ಆಹ್ವಾನ ಪ್ರಕ್ರಿಯೆಗಳೂ ನಡೆದಿಲ್ಲ. ಈ ರೀತಿ DCWಯಿಂದ ಅಗಿರುವ ಅಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿರುವ ಲೆಫ್ಟಿನೆಂಟ್‌ ಗವರ್ನರ್‌ ಈ ಬಗ್ಗೆ ಕ್ರಮ ಜರುಗಿಸಲು ಮುಂದಾಗಿದೆ. ಹೀಗಾಗಿ ಸೂಕ್ತ ನಿಯಮಗಳನ್ನು ಪಾಲಿಸದೇ ಹುದ್ದೆಗಳಿಗೆ ನೇಮಕಗೊಂಡಿರುವ ನೌಕರರನ್ನು ಹುದ್ದೆಯಲ್ಲಿ ಮುಂದುವರೆಸಲು ಸಾಧ್ಯವಿಲ್ಲ. ತಕ್ಷಣ ಎಲ್ಲಾ 223 ಗುತ್ತಿಗೆ ನೌಕರರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗಳಿಸುವಂತೆ ಮಹಿಳಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:Gangster Goldy Brar:”ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

ಸ್ವಾತಿ ವಿರುದ್ಧ ಈ ಹಿಂದೆಯೂ ಅಕ್ರಮ ಹಾಗೂ ಹಗರಣಗಳ ಆರೋಪ ಕೇಳಿಬಂದಿತ್ತು. 2015 ಮತ್ತು 2016ರ ನಡುವೆ ತಮಗೆ ಬೇಕಾಗಿದ್ದವರು ಮತ್ತು ಆಪ್‌ಗೆ ಸಂಬಂಧಿಸಿದ ವ್ಯಕ್ತಿಗಳನ್ನು ಆಯೋಗದ ವಿವಿಧ ಹುದ್ದೆಗಳಿಗೆ ನೇಮಕ ಮಾಡಿರುವ ಬಗ್ಗೆ ದಿಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಕೇಸ್‌ ದಾಖಲಿಸಿತ್ತು. ಬಳಿಕ ದಿಲ್ಲಿ ಹೈ ಕೋರ್ಟ್‌ ಅವರ ವಿರುದ್ಧ ವಿಚಾರಣೆಗೆ ತಡೆಯಾಜ್ಞೆ ತಂದಿತ್ತು. ಮಾಜಿ ಶಾಶಕ ಬರ್ಖಾ ಸಿಂಗ್‌ ದೂರ ನೀಡಿದ್ದ ದೂರಿನಾಧಾರದಲ್ಲಿ ಕೇಸ್‌ ದಾಖಲಿಸಲಾಗಿತ್ತು. ಆದರೆ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಸೂಕ್ತ ಸಾಕ್ಷ್ಯಾಧಾರಗಳು ಮತ್ತು ದಾಖಲೆಗಳು ಇಲ್ಲದೇ ಇರುವುದರಿಂದ ಪ್ರಕರಣ ವಿಚಾರಣೆಯನ್ನು ಕೈ ಬಿಡುವುದಾಗಿ ಹೇಳಿತ್ತು. ಇದಾದ ಬಳಿಕ ಸ್ವಾತಿ ಕಳೆದ ಜನವರಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಆಪ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ರಾಜ್ಯಸಭೆ ಚುನಾವಣೆ ತನ್ನ ಅಭ್ಯರ್ಥಿ ಎಂದು ಆಪ್‌ ಘೋಷಿಸಿದ ಬಳಿಕ ಸ್ವಾತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.




Continue Reading

ಪ್ರಮುಖ ಸುದ್ದಿ

New Food Rules: ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಪಾಕ್‌ ಹೈರಾಣ-ಹೊಸ ಭಕ್ಷ್ಯ ನೀತಿ ಜಾರಿ

New Food Rules: ಪಾಕಿಸ್ತಾನದಲ್ಲಂತೂ ಹಣದುಬ್ಬರ ಸಮಸ್ಯೆ ಹೆಚ್ಚಾಗಿದೆ. ಅದರಲ್ಲೂ 1 ಕೆಜಿ ಗೋಧಿ ಹಿಟ್ಟಿನ ಬೆಲೆ 800 PKR ಆಗಿದೆ. ಹೀಗಾಗಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಪಾಕಿಸ್ತಾನದ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ.

VISTARANEWS.COM


on

New Food Rules
Koo

ಪಾಕಿಸ್ತಾನ: ಮದುವೆ ಎಂದ ತಕ್ಷಣ ತಲೆಯಲ್ಲಿ ಒಳ್ಳೆಯ ಊಟದ ಕಲ್ಪನೆ ಬರುವುದು ಸಹಜ. ವಿವಿಧ ರೀತಿಯ ಭಕ್ಷ್ಯ ಭೋಜನಗಳನ್ನು ತಯಾರಿಸುತ್ತಾರೆ. ಆ ವೇಳೆ ಜನರು ತಮಗೆ ಬೇಕಾದಷ್ಟು ಆಹಾರವನ್ನು ಬಡಿಸಿಕೊಂಡು ನಂತರ ಅದನ್ನು ತಿನ್ನದೇ ವ್ಯರ್ಥ ಮಾಡುತ್ತಿರುವುದು ನಾವು ಹಲವು ಮದುವೆ, ಸಮಾರಂಭಗಳಲ್ಲಿ ನೋಡುತ್ತಿರುತ್ತೇವೆ. ಇನ್ನು ಪಾಕಿಸ್ತಾನ(Pakistan)ದಲ್ಲಂತೂ ಹಣದುಬ್ಬರ(Bankruptcy) ಸಮಸ್ಯೆ ಹೆಚ್ಚಾಗಿದೆ. ಅದರಲ್ಲೂ 1 ಕೆಜಿ ಗೋಧಿ ಹಿಟ್ಟಿನ ಬೆಲೆ 800 PKR ಆಗಿದೆ. ಹೀಗಾಗಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಪಾಕಿಸ್ತಾನದ ಸರ್ಕಾರ ಹೊಸ ನಿಯಮವನ್ನು ಜಾರಿಗೆ(New Food Rules)ತಂದಿದೆ.

ಪಾಕಿಸ್ತಾನ ಭಾರತದ ನೆರೆಯ ರಾಷ್ಟ್ರ. ಆಗಾಗ ಇತರ ದೇಶಗಳ ಮೇಲೆ ದಂಡೆತ್ತಿ ಬರುವ
ಈ ದೇಶ ಈಗ ಆಹಾರದ ಮುಗ್ಗಟ್ಟು ಮತ್ತು ಹಣದುಬ್ಬರ ಸಮಸ್ಯೆಯಿಂದ ಒದ್ದಾಡುತ್ತಿದೆ. ಹಾಗಾಗಿ ತಮ್ಮ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಿದೆ. ಅದರಂತೆ ಇದೀಗ ಆಹಾರ ಮುಗ್ಗಟ್ಟನ್ನು ನಿವಾರಿಸಲು ಮದುವೆ ಮತ್ತು ಸಮಾರಂಭಗಳಲ್ಲಿ ನೀಡುವ ಊಟದ ಮೇಲೆ ತನ್ನ ಕಣ್ಣಿಟ್ಟಿದೆ. ಆಹಾರ ವ್ಯರ್ಥವಾಗುವುದನ್ನು ತಡೆಯಲು ಹೊಸ ಮಾರ್ಗವನ್ನು ಕಂಡುಕೊಂಡಿದೆಯಂತೆ.

ಪಂಜಾಬ್ ಪ್ರಾಂತ್ಯದ ಸಿಎಂ ಮರ್ಯಮ್ ನವಾಜ್ ಅವರು ‘ಒಂದು ಭಕ್ಷ್ಯ’ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ಧರಿಸಿದ್ದಾರೆ. ಈ ನೀತಿಯ ಪ್ರಕಾರ ಮದುವೆಯ ಪಾರ್ಟಿಗಳಲ್ಲಿ ಒಂದಕ್ಕಿಂತ ಹೆಚ್ಚು ಭಕ್ಷ್ಯಗಳನ್ನು ಅನುಮತಿಸಲಾಗುವುದಿಲ್ಲ. ಅಂದರೆ ಊಟದ ಮೆನುವಿನಲ್ಲಿ ಕೇವಲ ಒಂದು ತರಕಾರಿ, ಅನ್ನ, ರೊಟ್ಟಿ, ದಾಲ್, ಸಲಾಡ್, ತಂಪು ಪಾನೀಯ ಮತ್ತು ಒಂದು ಸಿಹಿತಿಂಡಿ ನೀಡಲು ಅನುಮತಿಸಲಾಗಿದೆ.

ಬಹು ಖಾದ್ಯಗಳನ್ನು ತಯಾರಿಸುವುದರಿಂದ ಅದು ಅನಗತ್ಯ ವೆಚ್ಚಕ್ಕೆ ಕಾರಣವಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಅಲ್ಲದೇ ಈ ನೀತಿಯನ್ನು 2016ರಲ್ಲಿ ಮೊದಲು ಜಾರಿಗೆ ತರಲಾಯಿತು. ಆದರೆ ಜನರು ಅದನ್ನು ಅನುಸರಿಸಲಿಲ್ಲ. ಇದೀಗ ಈ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಈ ಕ್ರಮವನ್ನು ಪಾಲಿಸದಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

ಪಾಕಿಸ್ತಾನವು ಪ್ರಸ್ತುತ ದಿನಗಳಲ್ಲಿ ಹಣಕಾಸಿನ ಸಮಸ್ಯೆಯನ್ನು ಹೆಚ್ಚಿನ ಮಟ್ಟದಲ್ಲಿ ಅನುಭವಿಸುತ್ತಿದೆ. ಹಾಗಾಗಿ ಇತ್ತೀಚೆಗೆ ಪ್ರಧಾನಿ ಮಂತ್ರಿ ಶೆಹಬಾಜ್ ಷರೀಫ್ ವಿತ್ತೀಯ ಸಹಾಯವನ್ನು ಪಡೆಯಲು ಸೌದಿ ಅರೇಬಿಯಾಕ್ಕೆ ಹೋದರು. ಆದರೆ ಆ ಕಾರ್ಯ ಯಶಸ್ವಿಯಾಗಲಿಲ್ಲ. ಪಾಕಿಸ್ತಾನದಲ್ಲಿ ಹಣದುಬ್ಬರ ಎಷ್ಟಿದೆಯೆಂದರೆ ಸಾಮಾನ್ಯ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಿದೆ. ಉದಾಹರಣೆಗೆ ಒಂದು ಕಿಲೋ ಗೋಧಿ ಹಿಟ್ಟಿನ ಬೆಲೆ ಈಗ 800 PKR (ಪಾಕಿಸ್ತಾನ ಕರೆನ್ಸಿ)ಆಗಿದೆ. ಒಂದು ರೊಟ್ಟಿ ಬೆಲೆ 25 PKRಆಗಿದೆ. ಬಾಳೆಹಣ್ಣಿನ ಬೆಲೆ 150-200 PKR ಆಗಿದೆಯಂತೆ.

Continue Reading
Advertisement
Self Harming
ಕಲಬುರಗಿ3 mins ago

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Bhoomi Shetty African braids Look style
ಸಿನಿಮಾ18 mins ago

Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

prajwal revanna case lookout notice
ಕ್ರೈಂ23 mins ago

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

School Jobs Scam
Lok Sabha Election 202431 mins ago

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

elephant attack
ಬೆಂಗಳೂರು ಗ್ರಾಮಾಂತರ31 mins ago

Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

Delhi Lieutenant Governor
ದೇಶ41 mins ago

Delhi Lieutenant Governor: ದೆಹಲಿಯ DCW ಗುತ್ತಿಗೆ ನೌಕರರಿಗೆ ಬಿಗ್‌ ಶಾಕ್‌; 220ಕ್ಕೂ ಹೆಚ್ಚು ನೌಕರರು ವಜಾ

Prajwal Revanna Case Application seeking exemption from appearing before SIT rejected
ಕ್ರೈಂ46 mins ago

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

IPL 2024
ಕ್ರೀಡೆ46 mins ago

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

Temperature Warning
ರಾಯಚೂರು48 mins ago

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Swara Bhasker reveals big difference between Kangana Ranaut and herself
ಬಾಲಿವುಡ್49 mins ago

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌