Video: ಪ್ರಧಾನಿ ಮೋದಿ ವಿರುದ್ಧ ದೂರು ಕೊಡಲು ಠಾಣೆಗೆ ಹೋದ ಕಾಂಗ್ರೆಸ್ ನಾಯಕ; ತಗೋಳಲ್ಲ, ಹೋಗಿ ಎಂದು ವಾಪಸ್​ ಕಳಿಸಿದ ಪೊಲೀಸ್​ - Vistara News

ದೇಶ

Video: ಪ್ರಧಾನಿ ಮೋದಿ ವಿರುದ್ಧ ದೂರು ಕೊಡಲು ಠಾಣೆಗೆ ಹೋದ ಕಾಂಗ್ರೆಸ್ ನಾಯಕ; ತಗೋಳಲ್ಲ, ಹೋಗಿ ಎಂದು ವಾಪಸ್​ ಕಳಿಸಿದ ಪೊಲೀಸ್​

ಮನೋಜ್​ ಶುಕ್ಲಾ ಮತ್ತು ಇನ್ನಿತರ ಕಾಂಗ್ರೆಸ್ ನಾಯಕರು ಪೊಲೀಸ್​ ಸ್ಟೇಶನ್​ಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ನೀಡಿದ್ದಾರೆ. ಮೋದಿಯವರು ಹಲವು ಹಿರಿಯ ಕಾಂಗ್ರೆಸ್​ ನಾಯಕರನ್ನು ಅವಹೇಳನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಂಪ್ಲೇಂಟ್​ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

VISTARANEWS.COM


on

Congress leader Manoj Shukla try to file case against PM Modi But Police Did not allow in Madya Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ರದ್ದುಗೊಳಿಸಿದ ಬೆನ್ನಲ್ಲೇ ದೇಶಾದ್ಯಂತ ಕಾಂಗ್ರೆಸ್ ಪ್ರಮುಖರು ಸಿಡಿಮಿಡಿ ಎನ್ನುತ್ತಿದ್ದಾರೆ. ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅದರಲ್ಲೂ ಮಧ್ಯಪ್ರದೇಶದ ಭೋಪಾಲ್​​ನ ಪೊಲೀಸ್​ಸ್ಟೇಶನ್​ವೊಂದರಲ್ಲಿ ಕಾಂಗ್ರೆಸ್ ನಾಯಕ ಮನೋಜ್ ಶುಕ್ಲಾ ಮತ್ತು ಇನ್ನಿತರ ಕೆಲವು ಪ್ರಮುಖರೆಲ್ಲ ಸೇರಿ ಹೈಡ್ರಾಮಾವನ್ನೇ ಮಾಡಿದ್ದಾರೆ. ಬಳಿಕ ಅಲ್ಲಿಂದ ಪೊಲೀಸರು ಅವರನ್ನು ಕಳಿಸಿದ್ದಾರೆ.

ಮನೋಜ್​ ಶುಕ್ಲಾ ಮತ್ತು ಇನ್ನಿತರ ಕಾಂಗ್ರೆಸ್ ನಾಯಕರು ಪೊಲೀಸ್​ ಸ್ಟೇಶನ್​ಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ನೀಡಿದ್ದಾರೆ. ಮೋದಿಯವರು ಹಲವು ಹಿರಿಯ ಕಾಂಗ್ರೆಸ್​ ನಾಯಕರನ್ನು ಅವಹೇಳನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಂಪ್ಲೇಂಟ್​ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ. ಆದರೆ ಅಲ್ಲಿನ ಹಿರಿಯ ಪೊಲೀಸ್ ಅಧಿಕಾರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೇಸ್​ ದಾಖಲು ಮಾಡಲು ನಿರಾಕರಿಸಿದ್ದಾರೆ. ನಾವು ಕೇಸ್​ ಹಾಕುವುದಿಲ್ಲ, ಆದರೆ ನೀವು ಹೇಳಿದ ವಿಷಯದ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಆಗ ಮನೋಜ್ ಶುಕ್ಲಾ ಜೋರಾಗಿ ಯಾಕೆ ದೂರು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಳಿದ್ದಾರೆ. ಕೆಲ ಕಾಲ ಪೊಲೀಸ್ ಮತ್ತು ಮನೋಜ್ ಶುಕ್ಲಾ ನಡುವೆ ವಾಗ್ವಾದವೂ ನಡೆಯಿತು. ಪೊಲೀಸರ ವಿರುದ್ಧವೇ ಅವರು ಘೋಷಣೆ ಕೂಗಲು ಪ್ರಾರಂಭಿಸಿದರು. ಬಳಿಕ ಕಾಂಗ್ರೆಸ್ ನಾಯಕರನ್ನು ಅಲ್ಲಿಂದ ಕಳಿಸಲಾಗಿದೆ. ಈ ವಿಡಿಯೊವನ್ನು ಮಧ್ಯಪ್ರದೇಶ ಕಾಂಗ್ರೆಸ್​ ಟ್ವಿಟರ್​​ನಲ್ಲಿ ಶೇರ್ ಮಾಡಿಕೊಂಡಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಬೆನ್ನಲ್ಲೇ ವೈರಲ್ ಆಗ್ತಿದೆ ಬಿಜೆಪಿ ನಾಯಕಿ ಖುಷ್ಬು ಹಳೇ ಟ್ವೀಟ್​; ಶಿಕ್ಷೆ ಇಲ್ವಾ ಎನ್ನುತ್ತಿದ್ದಾರೆ ಕಾಂಗ್ರೆಸ್​ ನಾಯಕರು

2019ರಲ್ಲಿ ರಾಹುಲ್​ ಗಾಂಧಿ ಕೋಲಾರದಲ್ಲಿ ಭಾಷಣ ಮಾಡುವಾಗ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ, ‘ಎಲ್ಲ ಕಳ್ಳರ ಉಪನಾಮವೂ ಮೋದಿ ಎಂದೇ ಶುರುವಾಗುತ್ತದಲ್ಲ, ಯಾಕೆ ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ಗುಜರಾತ್​ ಶಾಸಕ ಪೂರ್ಣೇಶ್ ಮೋದಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆ ಕೇಸ್​​ನಲ್ಲಿ ದೋಷಿ ಎಂದು ಮಾರ್ಚ್​ 23ರಂದು ಸೂರತ್ ಕೋರ್ಟ್​ ತೀರ್ಪು ಕೊಟ್ಟಿದೆ. ರಾಹುಲ್ ಗಾಂಧಿಗೆ 2ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸದ್ಯ ಜಾಮೀನು ಪಡೆದು ಹೊರಗೆ ಇರುವ ರಾಹುಲ್ ಗಾಂಧಿಯನ್ನು ಲೋಕಸಭೆ ಸದಸ್ಯನ ಸ್ಥಾನದಿಂದಲೂ ಅನರ್ಹಗೊಳಿಸಲಾಗಿದೆ. ಕಾಂಗ್ರೆಸ್ ಈ ಕ್ರಮವನ್ನು ವಿರೋಧಿಸುತ್ತಿದ್ದು, ಸೋಮವಾರದಿಂದ ದೇಶದ ಎಲ್ಲೆಡೆ ದೊಡ್ಡಮಟ್ಟದಲ್ಲಿ ಆಂದೋಲನ ನಡೆಸುವುದಾಗಿ ಹೇಳಿದೆ. ರಾಹುಲ್ ಗಾಂಧಿ ಲೋಕಸಭಾ ಕ್ಷೇತ್ರ ವಯಾನಾಡ್​​ನಲ್ಲಿ ಇಂದು ಕರಾಳ ದಿನ ಆಚರಣೆ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Nijjar Killing:ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂಬ ಕೆನಡಾ ಆರೋಪಕ್ಕೆ ಭಾರತ ತಿರುಗೇಟು ನೀಡಿದೆ. ಕೆನಡಾ ಆರೋಪಕ್ಕೆ ತಿರುಗೇಟು ಕೊಟ್ಟಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈ ಶಂಕರ್‌ , ಜಸ್ಟಿನ್‌ ಟ್ರೂಡೋ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಭಾರತದ ವಿರುದ್ಧ ಆರೋಪ ಮಾಡುವ ಮೂಲಕ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Nijjar Killing
Koo

ನವದೆಹಲಿ: ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ(Nijjar Killing) ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂಬ ಕೆನಡಾ(Canada) ಆರೋಪಕ್ಕೆ ಭಾರತ ತಿರುಗೇಟು ನೀಡಿದೆ. ಕೆನಡಾ ಆರೋಪಕ್ಕೆ ತಿರುಗೇಟು ಕೊಟ್ಟಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈ ಶಂಕರ್‌(Jai Shankar), ಜಸ್ಟಿನ್‌ ಟ್ರೂಡೋ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಭಾರತದ ವಿರುದ್ಧ ಆರೋಪ ಮಾಡುವ ಮೂಲಕ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆನಡಾ ಆರೋಪಕ್ಕೆ ತಿರುಗೇಟು ನೀಡಿದ ಜೈಶಂಕರ್‌, ನಿಜ್ಜರ್‌ ಕೊಲೆಗೂ ಭಾರತಕ್ಕೂ ಯಾವುದೇ ಸಂಬಂಧ ಇಲ್ಲ. ಕೆನಡಾದಲ್ಲಿ ಆಂತರಿಕ ಅಲ್ಪ ಸಂಖ್ಯಾತರ ವೋಟ್‌ ಪಡೆಯಲು ನಿಜ್ಜರ್‌ ಕೊಲೆ ಪ್ರಕರಣವನ್ನು ಬಳಸಿಕೊಳ್ಳುತ್ತಿದೆ. ಖಲಿಸ್ತಾನದ ಜೊತೆ ಲಿಂಕ್‌ ಇರುವ ಡೆಮಾಕ್ರಟಿಕ್‌ ಪಕ್ಷದ ಸಹಾಯದೊಂದಿಎಗೆ ಟ್ರೂಡೋ ಸರ್ಕಾರ ನಡೆಸುತ್ತಿದ್ದಾರೆ. ಹೀಗಾಗಿ ಸಿಖ್‌ ಅಲ್ಪ ಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಕೆನಡಾ ಸರ್ಕಾರ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಭಾರತ ಈ ಹಿಂದೆಯೇ ಉಗ್ರ ಚಟುಟಿಕೆಯಲ್ಲಿ ಭಾಗಿಯಾಗಿರುವ 25 ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಕೆನಡಾ ಸರ್ಕಾರಕ್ಕೆ ಭಾರತ ಮನವಿ ಮಾಡಿತ್ತು. ಆದರೆ ಟ್ರೂಡೋ ಸರ್ಕಾರ ಯಾವುದೇ ರೀತಿಯ ಸ್ಪಂದನೆ ನೀಡಿರಲಿಲ್ಲ. ಈಗ ಈ ವಿಚಾರದಲ್ಲಿ ಡ್ರಾಮಾ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಕಳೆದ ವರ್ಷ ಕೆನಡಾದ ಬ್ರಿಟೀಷ್‌ ಕೊಲಂಬಿಯಾದಲ್ಲಿ ಹರ್ದೀಪ್‌ ಸಿಂಗ್‌ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಮೂವರು ಹಂತಕರನ್ನುಕೆನಡಾ ಪೊಲೀಸರು ಅರೆಸ್ಟ್‌ ಮಾಡಿದ್ದರು. ಬಂಧಿತರನ್ನು ಕರಣ್‌ ಪ್ರಿತ್‌ ಸಿಂಗ್(28) ಕಮಲ್‌ ಪ್ರಿತ್‌ ಸಿಂಗ್‌(22) ಮತ್ತು ಕರಣ್‌ ಬ್ರಾರ್‌(22) ಎಂದು ಗುರುತಿಸಲಾಗಿದೆ. ಅಲ್ಲದೇ ಪೊಲೀಸರು ಮೂವರು ಹಂತಕರ ಫೊಟೋವನ್ನೂ ಕೂಡ ರಿಲೀಸ್‌ ಮಾಡಿದ್ದರು. ಆರೋಪಿಗಳ ವಿರುದ್ಧ ಕೊಲೆಗೆ ಸಂಚು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಕೋರ್ಟ್‌ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ.

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಮೂವರನ್ನು ಅರೆಸ್ಟ್‌ ಮಾಡಿರುವ ಬೆನ್ನಲ್ಲೇ ಕೆನಡಾ ಮತ್ತೆ ಭಾರತದತ್ತ ಬೊಟ್ಟು ಮಾಡಿ ತೋರಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೆನಡಾ ಸಂಸದ ಜಗ್ಮಿತ್‌ ಸಿಂಗ್‌, ಪ್ರಕರಣದಲ್ಲಿ ಭಾರತದ ಕೈವಾಡವಿರುವುದು ಸಾಬೀತಾಗಿದೆ. ಕೆನಡಾದಂತಹ ಪೂಜ್ಯನೀಯ ಸ್ಥಳದಲ್ಲಿ ಕೆನಡಾ ಪ್ರಜೆಯನ್ನು ಕೊಲ್ಲಲು ಭಾರತ ಹಂತಕರನ್ನು ನೇಮಿಸಿದೆ ಎಂದು ಆರೋಪಿಸಿದ್ದರು.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದರು. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

ಇದನ್ನೂ ಓದಿ:HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

Continue Reading

ರಾಜಕೀಯ

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Kangana Ranaut: ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ಹಿಮಾಚಲ ಪ್ರದೇಶ: ಲೋಕಸಭೆ ಚುನಾವಣೆ(Kangana Ranaut) ದೇಶದಲ್ಲಿ ದಿನೇ ದಿನೇ ರಂಗೇರಿದೆ. ಅಬ್ಬರದ ಪ್ರಚಾರ, ಪರ ವಿರೋಧ ವಾಗ್ದಾಳಿ ನಡೆಸಿದ್ದಾರೆ. ಎದುರಾಳಿ ನಾಯಕರನ್ನು ಟೀಕಿಸುವ ಭರದಲ್ಲಿ ಕೆಲವೊಮ್ಮೆ ತಮ್ಮದೇ ಪಕ್ಷಕ್ಕೆ ಮುಜುಗರ ತಂದಿರುವ ಘಟನೆಗಳೂ ನಡೆಯುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಹೇಳಿಕೆ ಮೂಲಕ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಅಭ್ಯರ್ಥಿ ಕಂಗನಾ ರಾಣಾವತ್‌ ಆಭಾಸಕ್ಕೀಡಾಗಿದ್ದಾರೆ. ಪ್ರಚಾರ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಬಿಹಾರದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌(Tejaswi Yadav) ಅವರನ್ನು ಟೀಕಿಸುವ ಭರದಲ್ಲಿ ತಮ್ಮದೇ ಪಕ್ಷ ಬಿಜೆಪಿ ಮುಖಂಡ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿತೇಜಸ್ವಿ ಸೂರ್ಯ(Tejaswi Surya) ಹೆಸರು ಪ್ರಸ್ತಾಪಿಸಿ ಮುಜುಗರಕ್ಕೀಡಾಗಿದ್ದಾರೆ. ಇದೀಗ ಈ ವಿಡಿಯೋ ವೈರಲ್‌(Viral Video) ಆಗಿದ್ದು, ಖುದ್ದು, ತೇಜಸ್ವಿ ಯಾದವ್‌ ಅವರೇ ಈ ವಿಡಿಯೋಗೆ ರಿಯಾಕ್ಟ್‌ ಮಾಡಿದ್ದಾರೆ.

ಕಂಗನಾ ಹೇಳಿದ್ದೇನು?

ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಏ.9ರಂದು ನವರಾತ್ರಿಯ ದಿನ ತೇಜಸ್ವಿ ಯಾದವ್‌ ಮೀನು ತಿನ್ನುವ ಫೋಟೋವನ್ನು ಶೇರ್‌ ಮಾಡಿಕೊಂಡು ಭಾರೀ ಟೀಕೆಗೆ ಗುರಿಯಾಗಿದ್ದರು. ಇದೇ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಕಂಗನಾ, ರಾಹುಲ್‌, ಅಖಿಲೇಶ್‌ ಯಾದವ್‌ ಮತ್ತು ತೇಜಸ್ವಿ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದರು. ಸಂಪೂರ್ಣವಾಗಿ ಹಾಳಾದ ರಾಜಕುಮಾರರನ್ನು ಹೊಂದಿರುವ ಪಕ್ಷಗಳಿವೆ. ಅಲ್ಲಿ ಚಂದ್ರನ ಮೇಲೆ ಆಲೂಗೆಡ್ಡೆ ಬೆಳೆಯುವ ರಾಹುಲ್‌ ಗಾಂಧಿ, ಗೂಂಡಾಗಿರಿ ಮಾಡುವ ಮತ್ತು ಮೀನು ತಿನ್ನುವ ತೇಜಸ್ವಿ ಸೂರ್ಯ ಮತ್ತು ಅಸಂಬದ್ದ ಹೇಳಿಕೆ ನೀಡುವ ಅಖಿಲೇಶ್‌ ಯಾದವ್‌ ಇದ್ದಾರೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ಭಾಷೆಯನ್ನು ಅರ್ಥ ಮಾಡಿಕೊಳ್ಳದಿರುವ ಇಂತಹ ನಾಯಕರು ಹೇಗೆ ತಾನೇ ದೇಶವನ್ನು ನಡೆಸಬಲ್ಲರು ಎಂದು ಅವರು ವ್ಯಂಗ್ಯವಾಡಿರುವ ವಿಡಿಯೋ ವೈರಲ್‌ ಆಗಿದೆ.

ಇದನ್ನೂ ಓದಿ:Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

ಟಾಂಗ್‌ ಕೊಟ್ಟ ತೇಜಸ್ವಿ ಯಾದವ್‌

ಕಂಗನಾ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿದ್ದು, ರಾರು ಈ ಮಹಿಳೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಅವರು ಈ ವಿಡಿಯೋವನ್ನು ತನ್ನ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿ ಯಾರು ಈ ಮಹಿಳೆ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಜೂ.1ರಂದು ಹಿಮಾಚಲಪ್ರದೇಶದಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಕಂಗನಾ ವಿರುದ್ಧ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಾರೆ.

Continue Reading

ದೇಶ

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

Terrorist Attack:ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡಿರು ಯೋಧರು ಜೀವಣ್ಮರಣ ಹೋರಾಟ ನಡೆಸುತ್ತಿದ್ದು, ಅವರನ್ನು ಉದಾಮ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ

VISTARANEWS.COM


on

Terrorist attack
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರ(Jammu-Kashmir)ದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ (Terrorist Attack) ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡಿರು ಯೋಧರು ಜೀವಣ್ಮರಣ ಹೋರಾಟ ನಡೆಸುತ್ತಿದ್ದು, ಅವರನ್ನು ಉದಾಮ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಿನ್ನೆ ಸಂಜೆ 6ಗಂಟೆ ಹೊತ್ತಿಗೆ ಜರಾನ್ವಲಿಯಿಂದ ವಾಯುನೆಲೆಗೆ ವಾಪಾಸಾಗುತ್ತಿದ್ದ ವೇಳೆ ಈ ದಾಳಿ ನಡೆದಿದ್ದು, ಈ ಬಗ್ಗೆ ಭಾರತೀಯ ವಾಯುಪಡೆ Xನಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇನ್ನು AK ರೈಫಲ್ಸ್‌ ಹೊಂದಿದ್ದ ಉಗ್ರರು ಪಕ್ಕದಲ್ಲಿದ್ದ ಕಾಡಿಗೆ ಓಡಿ ಹೋಗಿರುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಈ ಬಗ್ಗೆ ಮತ್ತಷ್ಟು ತನಿಖೆ ಮುಂದುವರೆದಿದೆ ಎಂದು ಟ್ವೀಟ್‌ ಮಾಡಿದೆ.

ಇನ್ನು ಪೂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಶುಕ್ರವಾರವೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಈ ಆಪರೇಶನ್‌ನಲ್ಲಿ ಇದುವರೆಗೆ ಯಾರೂ ಅರೆಸ್ಟ್‌ ಆಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು‌ ಪೂಂಚ್‌ ಪ್ರದೇಶ ಅನಂತ್‌ನಾಗ್‌ – ರಜೌರಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಇಲ್ಲಿ ಮೇ 25ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಭದ್ರತೆ ಮತ್ತಷ್ಟು ಹೆಚ್ಚಿಸಲಾಗಿದೆ.

ಎರಡು ವಾರದ ಹಿಂದೆ ಜಮ್ಮು-ಕಾಶ್ಮೀರ (Jammu and Kashmir)ದಲ್ಲಿ ಗುಂಡಿನ ಸದ್ದು ಮೊಳಗಿತ್ತು . ಭಯೋತ್ಪಾದಕನ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. (Terrorist Attack). ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಗೆ ಸರ್ಕಾರಿ ನೌಕರ ಮೊಹಮ್ಮದ್ ರಜಾಕ್ ಬಲಿಯಾಗಿದ್ದರು. ರಾಜೌರಿಯ ಶದ್ರಾ ಶರೀಫ್ ಪ್ರದೇಶದ ಮಸೀದಿಯಿಂದ ಹೊರಬಂದ ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

40 ವರ್ಷದ ಮೊಹಮ್ಮದ್ ರಜಾಕ್ ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಮೃತ ರಝಾಕ್ ಅವರ ಸಹೋದರ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Paytm: ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ಕಂಪನಿಯು ವರ್ಗಾಯಿಸಿದೆ.

VISTARANEWS.COM


on

Paytm
Koo

ನವದೆಹಲಿ: ಪೇಟಿಎಂನ (Paytm) ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿಯ ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ.

ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ವರ್ಗಾಯಿಸಲಾಗಿದೆ.

ಪಾವತಿ ಮತ್ತು ಸಾಲ ನೀಡುವ ವ್ಯವಹಾರಗಳ ಮೇಲ್ವಿಚಾರಣೆ ನಡೆಸುತ್ತಿದ್ದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ವೈಯಕ್ತಿಕ ಕಾರಣಗಳಿಂದಾಗಿ ವೃತ್ತಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಅವರು ಸಲಹಾ ಪಾತ್ರಕ್ಕೆ ಪರಿವರ್ತನೆಗೊಳ್ಳಲಿದ್ದು ವರ್ಷದ ಅಂತ್ಯದವರೆಗೆ ಪೇಟಿಎಂನ ಬೆಳವಣಿಗೆಯ ಉಪಕ್ರಮಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಕಂಪನಿಯ ನಿರ್ದೇಶಕರ ಮಂಡಳಿಯು ಮೇ 04, 2024 ರಂದು ನಡೆದ ಸಭೆಯಲ್ಲಿ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಮೇ 04, 2024 ರ ಪತ್ರದ ಮೂಲಕ ಸಲ್ಲಿಸಿದ ರಾಜೀನಾಮೆಯನ್ನು ಪುರಸ್ಕರಿಸಿದೆ. ಮೇ 31, 2024 ರಂದು ವ್ಯವಹಾರದ ಸಮಯ ಮುಗಿಯುವುದರಿಂದ ಅವರನ್ನು ಕಂಪನಿಯ ಸೇವೆಗಳಿಂದ ಮುಕ್ತಗೊಳಿಸಲಾಗುವುದು ಎಂದು ಪೇಟಿಎಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪೇಟಿಎಂ ಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಈ ಕುರತು ಪ್ರತಿಕ್ರಿಯಿಸಿ, ಭವೇಶ್ ಅವರ ಕೊಡುಗೆಗಳಿಗಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪಾವತಿಗಳು ಮತ್ತು ಸಾಲ ನೀಡುವಿಕೆಯ ಮೇಲೆ ನಮ್ಮ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಮತ್ತು ನಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ನಮ್ಮ ಪ್ರತಿಯೊಂದು ವ್ಯವಹಾರಗಳಲ್ಲಿ ನಾವು ಹೊಂದಿರುವ ಅನುಭವಿ ನಾಯಕರೊಂದಿಗೆ ನಾನು ಕೆಲಸ ಮುಂದುವರಿಸಲಿದ್ದೇವೆ ಎಂದು ಹೇಳಿದರು.

Continue Reading
Advertisement
Gold Rate
ಕರ್ನಾಟಕ11 mins ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Virat- Anushka
ಕ್ರೀಡೆ11 mins ago

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Jyotika Trolled For Claiming Online Private Voting
ಕಾಲಿವುಡ್20 mins ago

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Prajwal Revanna Case
ಕರ್ನಾಟಕ20 mins ago

Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

murder case In karwar
ಉತ್ತರ ಕನ್ನಡ23 mins ago

Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

Nijjar Killing
ದೇಶ44 mins ago

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Bhavya Gowda shares her experiences during shooting
ಕಿರುತೆರೆ1 hour ago

Bhavya Gowda: ಡ್ರಿಪ್ಸ್‌ ಹಾಕಿದ್ದರೂ ಶೂಟಿಂಗ್‌ಗೆ ಬರಲೇ ಬೇಕು ಅಂದ್ರು ಎಂದ ʻಗೀತಾ ಧಾರಾವಾಹಿʼ ನಟಿ ಭವ್ಯಾ ಗೌಡ!

IPL 2024
ಕ್ರೀಡೆ1 hour ago

IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

Kangana Ranaut
ರಾಜಕೀಯ2 hours ago

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Virat Kohli
ಕ್ರೀಡೆ2 hours ago

Virat Kohli: ಟಿ20ಯಲ್ಲಿ ದಾಖಲೆ ಬರೆದ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌