Commercial traffic on Whitefield-KR Pura metro line to resume from march 26 Namma Metro: ಮಾ.26ರಿಂದಲೇ ವೈಟ್‌ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗದಲ್ಲಿ ಪ್ರಯಾಣಿಕರ ಓಡಾಟ ಶುರು - Vistara News

ಕರ್ನಾಟಕ

Namma Metro: ಮಾ.26ರಿಂದಲೇ ವೈಟ್‌ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗದಲ್ಲಿ ಪ್ರಯಾಣಿಕರ ಓಡಾಟ ಶುರು

Namma Metro: ಮಾರ್ಚ್‌ 26ರ ಬೆಳಗ್ಗೆ 7 ಗಂಟೆಯಿಂದ ವೈಟ್‌ಫೀಲ್ಡ್‌-ಕೆ.ಆರ್.ಪುರ ಮಾರ್ಗದಲ್ಲಿ ಮೆಟ್ರೋ ರೈಲು ವಾಣಿಜ್ಯ ಸೇವೆ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

VISTARANEWS.COM


on

Commercial traffic on Whitefield-KR Pura metro line to resume from march 26
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಲಿಕಾನ್​ ಸಿಟಿ ಜನರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ವೈಟ್‌ಫೀಲ್ಡ್-ಕೆ.ಆರ್‌.ಪುರ​ ಮೆಟ್ರೋ ರೈಲು ಸೇವೆಗೆ (Namma Metro) ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಸಿರು ನಿಶಾನೆ ತೋರಿದ್ದಾರೆ. ಹೀಗಾಗಿ ಈ ಮಾರ್ಗದಲ್ಲಿ ಮಾರ್ಚ್‌ 26ರ ಬೆಳಗ್ಗೆ 7 ಗಂಟೆಯಿಂದ ವಾಣಿಜ್ಯ ಸೇವೆ ಆರಂಭವಾಗಲಿದೆ.

ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್‌) ಪ್ರಕಟಣೆ ನೀಡಿದ್ದು, ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮೊದಲ ರೈಲು ಸಂಚಾರ ಆರಂಭವಾಗಲಿದ್ದು, ಎರಡೂ ಟರ್ಮಿನಲ್‌ಗಳಿಂದ ರಾತ್ರಿ 11 ಗಂಟೆಗೆ ರೈಲು ಸೇವೆ ಕೊನೆಯಾಗಲಿದೆ. ಹಾಗೆಯೇ ಸೋಮವಾರದಿಂದ ಎಂದಿನಂತೆ ಮುಂಜಾನೆ 5 ಗಂಟೆಯಿಂದ ರಾತ್ರಿ 11ರ ವರೆಗೂ ಮೆಟ್ರೋ ಸೇವೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೆಟ್ರೋ ಪ್ರಯಾಣಿಕರಿಗೆ ಟೋಕನ್, ಮೊಬೈಲ್ ಕ್ಯೂ ಆರ್ ಟಿಕೆಟ್, ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಕೆ.ಆರ್.ಪುರದಿಂದ ಬೈಯಪ್ಪನಹಳ್ಳಿಗೆ ಹೋಗುವ ಪ್ರಯಾಣಿಕರಿಗೆ ಬಿಎಂಟಿಸಿ ಫೀಡರ್ ಬಸ್ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್ 30ರಿಂದ ಮೆಟ್ರೋ ನಿಲ್ದಾಣದಲ್ಲಿ ಆರ್‌ಬಿಎಲ್ ಬ್ಯಾಂಕ್ ರುಪೇ, ಎನ್‌ಸಿಎಂಸಿ ಕಾರ್ಡ್ ದೊರೆಯಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ನಮ್ಮ ಮೆಟ್ರೋ 2ನೇ ಹಂತದ ರೀಚ್-1‌ ವಿಸ್ತರಣಾ ಯೋಜನೆಯ ಭಾಗವಾಗಿ ಸುಮಾರು 4.5 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್‌ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ವಿಸ್ತರಿತ ನೇರಳೆ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದರೊಂದಿಗೆ ದೇಶದಲ್ಲೇ ಎರಡನೇ ಅತಿ ದೊಡ್ಡ ಮೆಟ್ರೋ‌ ಜಾಲ ಹೊಂದಿದ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ.

ಬೈಯಪ್ಪನಹಳ್ಳಿ-ಕೆ.ಆರ್.ಪುರ ಮೆಟ್ರೋ ನಿಲ್ದಾಣಗಳ ನಡುವೆ ಸುಮಾರು 2 ಕಿ.ಮೀ. ಮೆಟ್ರೋ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ಈ ಮಾರ್ಗದಲ್ಲಿನ ಬೆನ್ನಿಗಾನಹಳ್ಳಿ ಮೆಟ್ರೋ ರೈಲು ನಿಲ್ದಾಣ ಕಾಮಗಾರಿ ಜೂನ್‌ ವೇಳೆಗೆ ಈ ಕಾಮಗಾರಿ ಮುಗಿಯಲಿದ್ದು, ನಂತರ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮೆಟ್ರೋ ನಿಲ್ದಾಣಗಳ ನಡುವೆ ಸಂಪರ್ಕ ಏರ್ಪಡಲಿದೆ.

12 ನಿಲ್ದಾಣಗಳು, ಅನೇಕ ಪ್ರಯೋಜನಗಳು

ನಿರ್ಮಾಣ ಹಂತದಲ್ಲಿರುವ 15.81 ಕಿಲೋಮೀಟರ್ ವಿಸ್ತರಣೆಯಲ್ಲಿ 13.71 ಕಿಲೋಮೀಟರ್ ಭಾಗ ಮಾತ್ರ ಶನಿವಾರ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಈ ನೂತನ ಮಾರ್ಗದ ವಿಭಾಗವು ಬೈಯಪ್ಪನಹಳ್ಳಿಯಿಂದ- ವೈಟ್‌ಫೀಲ್ಡ್ ನಿಲ್ದಾಣದವರೆಗೆ ಕಾರ್ಯಾಚರಣೆಯಲ್ಲಿರುವ ಪೂರ್ವ-ಪಶ್ಚಿಮ ಕಾರಿಡಾರ್​ನ ನೇರಳೆ ಮಾರ್ಗದ ಪೂರ್ವ ವಿಸ್ತರಣೆಯಾಗಿದೆ. ಕೃಷ್ಣರಾಜಪುರ, ಸಿಂಗಯ್ಯನಪಾಳ್ಯ, ಗರುಡಾಚಾರ್ ಪಾಳ್ಯ, ಹೂಡಿ, ಸೀತಾರಾಮಪಾಳ್ಯ, ಕುಂದಲಹಳ್ಳಿ, ನಲ್ಲೂರು ಹಳ್ಳಿ, ಶ್ರೀ ಸತ್ಯಸಾಯಿ ಆಸ್ಪತ್ರೆ, ಪಟ್ಟಂದೂರು ಅಗ್ರಹಾರ, ಕಾಡುಗೋಡಿ ಟ್ರೀ ಪಾರ್ಕ್, ಹೋಪ್ ಫಾರ್ಮ್ ಚನ್ನಸಂದ್ರ, ವೈಟ್ ಫೀಲ್ಡ್ (ಕಾಡುಗೋಡಿ) ಸೇರಿ ಒಟ್ಟು 12 ನಿಲ್ದಾಣಗಳು ಈ ಮಾರ್ಗದಲ್ಲಿ ಬರಲಿವೆ.

ಪ್ರತಿ 12 ನಿಮಿಷಕ್ಕೆ ಒಂದು ರೈಲು ಸಂಚಾರ

ಈ ಮಾರ್ಗದಲ್ಲಿ ಪ್ರತಿ 12 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಈ ವಿಸ್ತರಣೆಯಲ್ಲಿ ಗರಿಷ್ಠ ಟಿಕೆಟ್‌ ದರವು 35 ರೂ. ಆಗಿರಲಿದೆ. ವೈಟ್‌ಫೀಲ್ಡ್ ಮತ್ತು ಕೆ.ಆರ್. ಪುರಂ ನಡುವಿನ ಅಂತರವನ್ನು 22 ನಿಮಿಷಗಳಲ್ಲಿ ಕ್ರಮಿಸುತ್ತದೆ. ಪಟ್ಟಂದೂರು ಅಗ್ರಹಾರ ಮೆಟ್ರೋ ನಿಲ್ದಾಣದಿಂದ ಇಂಟರ್‌ನ್ಯಾಷನಲ್‌ ಟೆಕ್ ಪಾರ್ಕ್ ಬೆಂಗಳೂರುಗೆ (ITPB) ನೇರ ಪ್ರವೇಶವನ್ನು ಒದಗಿಸಲು ITPLನೊಂದಿಗೆ BMRCL ಒಪ್ಪಂದಕ್ಕೆ ಸಹಿ ಹಾಕಿದೆ.

ದೆಹಲಿ ನಂತರ ದೇಶದಲ್ಲೇ 2ನೇ ಅತಿ ದೊಡ್ಡ ಮೆಟ್ರೋ ಜಾಲ

ದೇಶದಲ್ಲಿಯೇ ದೆಹಲಿ ನಂತರ ನಂತರ ಅತಿ ದೊಡ್ಡ ಮೆಟ್ರೋ ಜಾಲ ಹೊಂದಿರುವ ನಗರವಾಗಿ ಬೆಂಗಳೂರು ಹೆಗ್ಗಳಿಕೆ ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಹೈದರಾಬಾದ್ ಮೆಟ್ರೋ ಇತ್ತು. ಆದರೆ ಈಗ ಹೊಸ ಮಾರ್ಗ ಉದ್ಘಾಟನೆಯೊಂದಿಗೆ ಹೈದರಾಬಾದ್ ಅನ್ನು ಹಿಂದಿಕ್ಕಿ ಬೆಂಗಳೂರಿನ ನಮ್ಮ ಮೆಟ್ರೋ ಎರಡನೇ ಸ್ಥಾನಕ್ಕೆ ಜಿಗಿದಿದೆ. ಇಂದಿನಿಂದ ನಮ್ಮ ಮೆಟ್ರೋ ದೇಶದ ಎರಡನೇ ಅತಿ ದೊಡ್ಡ ಮೆಟ್ರೋ ಜಾಲ ಹೊಂದಿದ ನಗರವಾದಂತಾಗಿದೆ. ಇಂದಿನ 13.71 ಕಿಲೋಮೀಟರ್ ಮಾರ್ಗ ಸೇರಿ ಒಟ್ಟು 69.66 ಕಿಲೋಮೀಟರ್ ಮೆಟ್ರೋ ಜಾಲವನ್ನು ನಮ್ಮ ಮೆಟ್ರೊ ಹೊಂದಿದಂತಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Narendra Modi: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಮೇಲೆ ನಡೆದ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ,

VISTARANEWS.COM


on

Congress ties with Aurangzeb supporters and Girls killed under his rule says Narendra Modi
Koo

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮೋದಿ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆದರೂ ಸಹ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಮೇಲೆ ನಡೆದ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪಿಎಫ್‌ಐ ಆತಂಕವಾದಿ ಸಂಘಟನೆಯನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಪಿಎಫ್‌ಐ, ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನಿಮ್ಮ ಆಸ್ತಿ ಮೇಲೆ ಕಣ್ಣಿಟ್ಟ ಸರ್ಕಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯಲ್ಲವೂ ಅನ್ಯರ ಪಾಲಾಗುತ್ತದೆ. ನೀವು ಮಾಡಿಟ್ಟ ಮನೆ, ಆಸ್ತಿ, ಚಿನ್ನ ಎಲ್ಲವೂ ಅನ್ಯರ ಪಾಲಾಗಿದೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಗೆಡುತ್ತದೆ. ಅವರು ದಿಲ್ಲಿಯಲ್ಲಿ ಆಡಳಿತಕ್ಕೆ ಬಂದರೆ ನಿಮ್ಮ ಆಸ್ತಿಯನ್ನು ವಶಕ್ಕೆ ಪಡೆಯುತ್ತದೆ. ನೀವು ನಿಮ್ಮ ಮಕ್ಕಳಿಗಾಗಿ ಪೈಸೆ ಪೈಸೆ ಕೂಡಿಟ್ಟು ಮಾಡಿದ ಆಸ್ತಿಯಲ್ಲಿ ಶೇಕಡಾ 55 ಪರ್ಸೆಂಟ್‌ ಅನ್ನು ಕಾಂಗ್ರೆಸ್‌ ವಶಕ್ಕೆ ಪಡೆಯಲಿದೆ. ಈ ಮೂಲಕ ನಿಮ್ಮ ಆಸ್ತಿಯು ನಿಮ್ಮ ಮಕ್ಕಳಿಗೆ ಸಿಗುವುದಿಲ್ಲ. ಹೀಗಾಗಿ ನಿಮ್ಮ ಆಸ್ತಿಯ ಬಹುದೊಡ್ಡ ಪಾಲು ಕಾಂಗ್ರೆಸ್‌ ಸರ್ಕಾರದ್ದಾಗುತ್ತದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇರ ವಾಗ್ದಾಳಿ ನಡೆಸಿದರು.

Continue Reading

Lok Sabha Election 2024

PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

PM Narendra Modi: ಶಿರಸಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ವಿಐಪಿ ಗೇಟ್ ಮುಖಾಂತರ ವೇದಿಕೆಯತ್ತ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರು ಆಗಮಿಸುತ್ತಿದ್ದರು. ಈ ವೇಳೆ ಭದ್ರತೆ ತಪಾಸಣೆ ಹಿನ್ನೆಲೆಯಲ್ಲಿ ಕೆಲವರು ಪೊಲೀಸರು ತಡೆದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಕಾಗೇರಿ, ತಪಾಸಣೆ ಹೆಸರಲ್ಲಿ ಜನರನ್ನು ಏಕೆ ತಡಿಯುತ್ತಿದ್ದೀರಿ? ಕಾರ್ಯಕ್ರಮ ಯಶಸ್ವಿಯಾಗಬಾರದು ಎಂದು ರಾಜ್ಯ ಸರ್ಕಾರ ಹೇಳಿದೆಯಾ ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

VISTARANEWS.COM


on

Has Karnataka Congress government suggested PM Narendra Modi programme should not be success Kageri question to police
Koo

ಶಿರಸಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ಮೋದಿ ರಿಎಂಟ್ರಿ (Modi in Karnataka) ಕೊಟ್ಟಿದ್ದಾರೆ. ಈಗಾಗಲೇ ಬೆಳಗಾವಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿ ಬೃಹತ್‌ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಸಮಾವೇಶಕ್ಕೆ ಸಂಬಂಧಪಟ್ಟಂತೆ ಪೊಲೀಸರ ಮೇಲೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆಗಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗದಂತೆ ತಡೆಯಲು ರಾಜ್ಯ ಸರ್ಕಾರ ನಿಮಗೆ ನಿರ್ದೇಶನ ಕೊಟ್ಟಿದೆಯೇ ಎಂದು ಕಿಡಿಕಾರಿದ್ದರು.

ಶಿರಸಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ವಿಐಪಿ ಗೇಟ್ ಮುಖಾಂತರ ವೇದಿಕೆಯತ್ತ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರು ಆಗಮಿಸುತ್ತಿದ್ದರು. ಈ ವೇಳೆ ಭದ್ರತೆ ತಪಾಸಣೆ ಹಿನ್ನೆಲೆಯಲ್ಲಿ ಕೆಲವರು ಪೊಲೀಸರು ತಡೆದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಕಾಗೇರಿ, ತಪಾಸಣೆ ಹೆಸರಲ್ಲಿ ಜನರನ್ನು ಏಕೆ ತಡಿಯುತ್ತಿದ್ದೀರಿ? ಕಾರ್ಯಕ್ರಮ ಯಶಸ್ವಿಯಾಗಬಾರದು ಎಂದು ರಾಜ್ಯ ಸರ್ಕಾರ ಹೇಳಿದೆಯಾ ಎಂದು ತರಾಟೆಗೆ ತಗೆದುಕೊಂಡರು.

ಬಳಿಕ ಪೊಲೀಸರಿಗೆ ಬ್ಯಾರಿಕೇಡ್ ಸರಿಸಲು ಹೇಳಿ ಜನರನ್ನು ಒಳಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಕಳುಹಿಸಿದರು. ಜನರನ್ನು ವೇದಿಕೆ ಮುಂದೆ ಕಳುಹಿಸಿದ ಬಳಿಕ ತಾವು ವೇದಿಕೆಗೆ ಬಂದರು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಪ್ರಧಾನಿ ನರೇಂದ್ರ ಮೋದಿ ಅವರ ಬೆಳಗಾವಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Congress MLA: ಶಾಸಕ ಎಂ.ವೈ.ಪಾಟೀಲ್ ಅವರಿಗೆ ರಸ್ತೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಅಂತಾ ಕೈ ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಜೋರಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ ಜೈ ಶ್ರೀರಾಮ ಘೋಷಣೆ ಹಾಕಿರು. ಈ ವೇಳೆ ಕಾಂಗ್ರೆಸ್​ ಹಾಗೂ ಕಮಲ ಕಾರ್ಯಕರ್ತರ ನಡುವೆ ಚಕಮಕಿ ನಡೆದಿದೆ.

VISTARANEWS.COM


on

Congress MLA
Koo

ಕಲಬುರಗಿ: ಅಫಜಲಪುರ ಶಾಸಕ (Congress MLA) ಎಂ.ವೈ ಪಾಟೀಲ್ ಅವರು ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದ ವೇಳೆ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ ಘಟನೆ ನಡೆದಿದೆ ಈ ವೇಳೆ ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಕೈ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬಡದಾಳ ಗ್ರಾಮಕ್ಕೆ ತೆರಳಿದ ಶಾಸಕ ಎಂ.ವೈ.ಪಾಟೀಲ್ ಅವರಿಗೆ ರಸ್ತೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಅಂತಾ ಕೈ ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಜೋರಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ ಜೈ ಶ್ರೀರಾಮ ಘೋಷಣೆ ಹಾಕಿರು. ಈ ವೇಳೆ ಕಾಂಗ್ರೆಸ್​ ಹಾಗೂ ಕಮಲ ಕಾರ್ಯಕರ್ತರ ನಡುವೆ ಚಕಮಕಿ ನಡೆದಿದೆ.

ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ ಅನ್ನುತ್ತಿದ್ದಂತೆ ಜೈ ಕಾಂಗ್ರೆಸ್ ಅಂತಾ ಕೈ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ನಡುವೆ‌ ಮಾತಿನ‌ ಚಕಮಕಿ ನಡೆದಿದೆ.

ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ.ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ವಿಮಾನ ಇದೇ ಏರ್​ಪೋರ್ಟ್​​ನಲ್ಲಿರುವ ಕಾರಣ ಸಿಎಂ ವಿಮಾನಕ್ಕೆ ಅನುಮತಿ ದೊರಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಹೊರಟಿದ್ದರು. ಆದರೆ, ಅಲ್ಲಿ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ವಿಮಾನ ಬರಬೇಕಿತ್ತು. ಅಲ್ಲಿಂದ ಅವರು ಶಿರಸಿಗೆ ತೆರಳಲು ಯೋಜನೆ ಹಾಕಲಾಗಿತ್ತು. ಆದರೆ ಪಿಎಂ ವಿಮಾನ ಇರುವ ಕಾರಣ ಅಲ್ಲಿ ಅವಕಾಶ ಸಿಕ್ಕಿಲ್ಲ.

ಇದನ್ನೂ ಓದಿ: Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬದಲಿಗೆ ಪಕ್ಕದ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಸಿಎಂ ವಿಮಾನ ಲ್ಯಾಂಡ್ ಆಗಲಿದೆ. ಮಧ್ಯಾಹ್ನ 12 ಗಂಟೆಗೆ ಕೊಲ್ಲಾಪುರದ ಛತ್ರಪತಿ ರಾಜಾರಾಮ್ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ಅವರ ವಿಮಾನ ಇಳಿಯಲಿದೆ. ಬಳಿಕ ಹೆಲಿಕಾಪ್ಟರ್ ಮೂಲಕ ಕಾಗವಾಡ ತಾಲೂಕಿನ ಉಗಾರ್ ಖುರ್ದ ಗೆ ಅವರು ಹೋಗಲಿದ್ದಾರೆ.

Continue Reading

Lok Sabha Election 2024

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

Prajwal Revanna Pen Drive: ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

VISTARANEWS.COM


on

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಪೆನ್‌ಡ್ರೈವ್‌ ಬಹಿರಂಗಗೊಂಡ (Prajwal Revanna Pen Drive) ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಶನಿವಾರ (ಏಪ್ರಿಲ್‌ 27) ಘೋಷಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Dr G Parameshwar) ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರದಿಂದ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್‌, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಕೇಸ್ ಅನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇನ್ನು ಕೆಲವೇ ಸಮಯದಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗುವುದು. ಎಡಿಜಿಪಿ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಹೇಳಿದರು.

ಎಸ್‌ಐಟಿಗೆ ಪರಮಾಧಿಕಾರ

ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ವಿದೇಶದಿಂದ ಕರೆ ತರಲಾಗುತ್ತದೆಯೇ?

ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟ ವಿಚಾರವಾಗಿದೆ. ಇನ್ನು ವಿದೇಶದಲ್ಲಿರುವ ಅವರನ್ನು ಕರೆತರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ಮಾಡಬೇಕು. ಪ್ರಕರಣದಲ್ಲಿ ಸತ್ಯ ಕಂಡುಬಂದರೆ ಅವರ ರೀತಿಯಲ್ಲಿ ಅವರು ಕ್ರಮ ವಹಿಸುತ್ತಾರೆ. ಇದರಲ್ಲಿ ಸರ್ಕಾರದಿಂದ ಯಾವುದೇ ನಿರ್ದೇಶನ ಇರುವುದಿಲ್ಲ. ಹೀಗೇ ತನಿಖೆ ನಡೆಸಬೇಕು ಎಂದು ನಾವು ಹೇಳುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಎಸ್‌ಐಟಿ ತನಿಖೆ ಬಗ್ಗೆ ಘೋಷಿಸಿದ್ದ ಸಿಎಂ

ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಮಾಧ್ಯಮ ಪ್ರಕಟಣೆ ಮೂಲಕ ಘೋಷಣೆ ಮಾಡಿದ್ದರು. ಭಾನುವಾರ ಈ ಸಂಬಂಧ ಅಧಿಕೃತ ಆದೇಶ ಹೊರಬರಬೇಕಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ಈ ಸಂಬಂಧ ಮಹಿಳಾ ಆಯೋಗ ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದು, ತನಿಖೆ ನಡೆಸುವಂತೆ ಕೋರಿತ್ತು.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೊಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading
Advertisement
Congress ties with Aurangzeb supporters and Girls killed under his rule says Narendra Modi
Lok Sabha Election 20243 mins ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ14 mins ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ18 mins ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್26 mins ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್30 mins ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ34 mins ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Has Karnataka Congress government suggested PM Narendra Modi programme should not be success Kageri question to police
Lok Sabha Election 202438 mins ago

PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

Congress MLA
ಪ್ರಮುಖ ಸುದ್ದಿ53 mins ago

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 20241 hour ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ1 hour ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ3 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202420 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌