read your daily horoscope predictions for march 28-2023 Horoscope Today : ಇಂದು ಕುಂಭ ರಾಶಿಯ ವೃತ್ತಿಪರರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today : ಇಂದು ಕುಂಭ ರಾಶಿಯ ವೃತ್ತಿಪರರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ?

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಸಪ್ತಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today ) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

rashi bhavishya today in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (28-03-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.

ತಿಥಿ: ಸಪ್ತಮಿ 19:01 ವಾರ: ಮಂಗಳವಾರ
ನಕ್ಷತ್ರ: ಮೃಗಶಿರಾ 17:31 ಯೋಗ: ಸೌಭಾಗ್ಯ 23:33
ಕರಣ: ವಣಿಜ 19:01 ಇಂದಿನ ವಿಶೇಷ: ಸಂತಾನ ಸಪ್ತಮಿ
ಅಮೃತಕಾಲ: ಬೆಳಗ್ಗೆ 07 ಗಂಟೆ 58 ನಿಮಿಷದಿಂದ ಮಧ್ಯಾಹ್ನ 09 ಗಂಟೆ 43 ನಿಮಿಷದವರೆಗೆ.

ಸೂರ್ಯೋದಯ : 06:19 ಸೂರ್ಯಾಸ್ತ : 06:31

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ಹಣಗಳಿಸುವ ವಿವಿಧ ಮಾರ್ಗಗಳು ತೆರೆದುಕೊಳ್ಳಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ಈ ಹಿಂದೆ ನಡೆದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಅನಿವಾರ್ಯವಾಗಿ ಖರ್ಚು, ಪ್ರಯಾಣ ಮಾಡುವ ಸಾಧ್ಯತೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಹಳೆಯ ವಿಚಾರಗಳನ್ನು ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಮನರಂಜನೆಗಾಗಿ ಖರ್ಚು ಮಾಡುವ ಸಾಧ್ಯತೆ. ಸಭೆ ಸಮಾರಂಭದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗ ಹಾಗೂ ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಇತರರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಬಾಕಿ ಇರುವ ಸಾಲ ಮರುಪಾವತಿ ಆಗಲಿದೆ. ಆರ್ಥಿಕವಾಗಿ ಲಾಭ. ಹೊಸ ಹೂಡಿಕೆ ವ್ಯವಹಾರಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹಳೆಯ ವಿಚಾರಗಳು ನಿಮ್ಮ ಮಾನಸಿಕ ಸಾಮರ್ಥ್ಯ ಕುಂದಿಸುವ ಸಾಧ್ಯತೆ. ವ್ಯರ್ಥ ಯೋಚನೆಗಳು ಬೇಡ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ವ್ಯವಹಾರ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯದ ಅಭಾವ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಆರೋಗ್ಯ ಸಾಧಾರಣ. ಉದ್ಯೋಗಿಗಳಿಗೆ ಒತ್ತಡ, ತಾಳ್ಮೆ ಅತ್ಯವಶ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ಬರದಂತೆ ಸೃಜನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ. ಕುಲ ದೇವತಾ ದರ್ಶನ, ಅಧ್ಯಾತ್ಮ ಗುರುಗಳ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು. ಅತಿಥಿಗಳ ಆಗಮನದಿಂದ ಸಂತಸ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ಸಾಮಾಜಿಕ ಜವಾಬ್ದಾರಿಗಳು ಹೆಚ್ಚಾಗಲಿದೆ. ಅದರ ಮಧ್ಯೆಯೂ ಆರೋಗ್ಯದ ಕುರಿತು ಕಾಳಜಿ ವಹಿಸಿ. ನಿಮಗಿಂದು ಸೌಂದರ್ಯ ಪ್ರಜ್ಞೆ ಮೂಡಲಿದೆ. ಭವಿಷ್ಯದ ಹೂಡಿಕೆಗಗಳ ಬಗ್ಗೆ ಆಲೋಚನೆ ಮಾಡುವಿರಿ. ಉದ್ಯೋಗಿಗಳಿಗೆ ಯಶಸ್ಸು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ: ಉದ್ವೇಗ ಹೆಚ್ಚಾಗಲಿದೆ. ಆತುರದಲ್ಲಿ ತೆಗೆದುಕೊಂಡ ನಿರ್ಧಾರ ಅಪಾಯ ತರುವುದು. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ. ತಂದೆ-ತಾಯಿಯರ ಆರೋಗ್ಯದಲ್ಲಿ ವ್ಯತ್ಯಾಸ. ದಿನದ ಮಟ್ಟಿಗೆ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆರೋಗ್ಯ ಉತ್ತಮ. ಆರ್ಥಿಕ ಹೂಡಿಕೆ ವ್ಯವಹಾರದಲ್ಲಿ ಪ್ರಗತಿ, ಲಾಭ. ವೃತ್ತಿಪರರಿಗೆ ಶುಭ ಫಲ. ಕಾರ್ಯದ ಒತ್ತಡದಿಂದ ಕುಟುಂಬದವರೊಂದಿಗೆ ಕಾಲ ಕಳೆಯಲು ಸಮಯದ ಅಭಾವ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಮಾನಸಿಕ ಆರೋಗ್ಯ ಹದಗೆಡಲಿದೆ. ತಾಳ್ಮೆಯಿಂದ ಇರಿ. ಯಾರದ್ದಾದರೂ ಪರ ವಹಿಸಿ ಮಾತನಾಡುವುದು ಬೇಡ. ಇದು ನಿಮಗೆ ಅಪಾಯ ತರುವುದು. ಹಣಕಾಸು ಪ್ರಗತಿ ಸಾಧಾರಣ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುತ್ತದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

University Grants Commission : ಈ ಹಿಂದೆ, ಯುಜಿಸಿ ಮುಕ್ತ ಮತ್ತು ದೂರಶಿಕ್ಷಣ (ಒಡಿಎಲ್) ಮತ್ತು ಆನ್​ಲೈನ್​ ವಿಧಾನಗಳಿಗೆ ವರ್ಷಕ್ಕೆ ಪ್ರವೇಶಕ್ಕೆ ಅನುಮತಿ ನೀಡಿತ್ತು. ಇದರ ಪರಿಣಾಮವಾಗಿ ಸುಮಾರು 5 ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳು ಅವಕಾಶ ಪಡೆದಿದ್ದರು. ಈ ಯಶಸ್ಸಿನಿಂದ ಉತ್ತೇಜಿತರಾದ ಯುಜಿಸಿ ಈ ನೀತಿಯನ್ನು ನಿಯಮಿತ ಕೋರ್ಸ್​ಗಳಿಗೆ ವಿಸ್ತರಿಸಿತ್ತು.

VISTARANEWS.COM


on

University Grants Commission
Koo

ನವದೆಹಲಿ: ಭಾರತೀಯ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಪ್ರಕಟಿಸಲಾಗಿದ್ದು. ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಅಡ್ಮಿಷನ್​ (ಪ್ರವೇಶ ಕಲ್ಪಿಸಲು) ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants Commission) ನಿರ್ಧರಿಸಿದೆ, ಪ್ರವೇಶಗಳು ಈಗ ಜನವರಿ / ಫೆಬ್ರವರಿ ಮತ್ತು ಜುಲೈ / ಆಗಸ್ಟ್​​ನಲ್ಲಿ ನಡೆಯಲಿವೆ. ಬೋರ್ಡ್ ಫಲಿತಾಂಶಗಳಲ್ಲಿನ ವಿಳಂಬ, ಆರೋಗ್ಯ ಸಮಸ್ಯೆಗಳು ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಆರಂಭಿಕ ಪ್ರವೇಶ ಪ್ರಕ್ರಿಯೆಯನ್ನು ತಪ್ಪಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.

ಯುಜಿಸಿ ಅಧ್ಯಕ್ಷ ಪ್ರೊಫೆಸರ್ ಮಾಮಿಡಾಲ ಜಗದೀಶ್ ಕುಮಾರ್ ಈ ಕುರಿತು ಮಾಹಿತಿ ಪ್ರಕಟಿಸಿದ್ದಾರೆ. ಎರಡು ಬಾರಿ ಪ್ರವೇಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ದಾಖಲಿಗಾಗಿ ಕಾಯುವ ಸಮಯವನ್ನು ಕಡಿಮೆ ಮಾಡಲಾಗುವುದು. ಆ ಮೂಲಕ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ಕಲ್ಪಿಸಲಾಗುವುದು ಎಂದು ವಿವರಿಸಿದ್ದಾರೆ. ಇದು ಕೈಗಾರಿಕೆಗಳಿಗೆ ವರ್ಷಕ್ಕೆ ಎರಡು ಬಾರಿ ಕ್ಯಾಂಪಸ್ ನೇಮಕ ಮಾಡಲು ಅನುವು ಮಾಡಿಕೊಡುತ್ತದೆ, ಪದವೀಧರರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ, ಯುಜಿಸಿ ಮುಕ್ತ ಮತ್ತು ದೂರಶಿಕ್ಷಣ (ಒಡಿಎಲ್) ಮತ್ತು ಆನ್​ಲೈನ್​ ವಿಧಾನಗಳಿಗೆ ವರ್ಷಕ್ಕೆ ಪ್ರವೇಶಕ್ಕೆ ಅನುಮತಿ ನೀಡಿತ್ತು. ಇದರ ಪರಿಣಾಮವಾಗಿ ಸುಮಾರು 5 ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳು ಅವಕಾಶ ಪಡೆದಿದ್ದರು. ಈ ಯಶಸ್ಸಿನಿಂದ ಉತ್ತೇಜಿತರಾದ ಯುಜಿಸಿ ಈ ನೀತಿಯನ್ನು ನಿಯಮಿತ ಕಾರ್ಯಕ್ರಮಗಳಿಗೆ ವಿಸ್ತರಿಸಿತ್ತು.

ಇದನ್ನೂ ಓದಿ: Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

ಈ ಬದಲಾವಣೆಯು ಭಾರತೀಯ ವಿಶ್ವವಿದ್ಯಾಲಯಗಳನ್ನು ಜಾಗತಿಕವಾಗಿ ಚಾಲ್ತಿಯಲ್ಲಿರುವ ವ್ಯವಸ್ಥೆಗೆ ಪೂರಕವಾಗಿದೆ. ಅಂತಾರಾಷ್ಟ್ರೀಯ ಸಹಯೋಗ ಮತ್ತು ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೂ ಪ್ರೇರಣೆ ನೀಡುತ್ತದೆ. ಆದಾಗ್ಯೂ, ಎರಡು ಬಾರಿ ಪ್ರವೇಶ ಕಲ್ಪಿಸುವುದು ಕಡ್ಡಾಯವಲ್ಲ.

ವರ್ಷಕ್ಕೆ ಎರಡು ಪ್ರವೇಶವು ಒಟ್ಟು ದಾಖಲಾತಿ ಅನುಪಾತ ಹೆಚ್ಚಿಸುತ್ತದೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ರಲ್ಲಿ ಕಲ್ಪಿಸಿದಂತೆ ಭಾರತವನ್ನು ‘ಜಾಗತಿಕ ಅಧ್ಯಯನ ತಾಣ’ ವನ್ನಾಗಿ ಮಾಡುತ್ತದೆ.

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 3 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Actor Darshan: ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ನಟ ದರ್ಶನ್‌ ಸೇರಿ 13 ಆರೋಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ಆರೋಪಿಗಳನ್ನು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder case) ಬಂಧನವಾಗಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ 14 ದಿನ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್‌ ಮೊಬೈಲ್‌ ಸೀಜ್‌ ಆಗಿದೆ, ದರ್ಶನ್‌ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.

ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಭಿಯೋಜಕ ಕೋರಿದರೆ, ದರ್ಶನ್‌ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್‌ ಕಣ್ಣೀರಿಟ್ಟಿದ್ದು ಕಂಡುಬಂತು.

ಹೀಗಾಗಿ ದರ್ಶನ್‌ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್‌ ಇನ್ನಿತರ ಟೆಸ್ಟ್‌ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ವೇಳೆ ಕೆಲ ವಸ್ತುಗಳನ್ನು ಎಫ್ಎಸ್ಎಲ್ ತಂಡ ಸಂಗ್ರಹಿಸಿದೆ. ವಸ್ತುಗಳನ್ನು ಸೀಜ್ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು

1.ನಟ ದರ್ಶನ್‌
2.ಪವಿತ್ರಾ ಗೌಡ
3.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
4.ಪ್ರದೋಶ್- ಹೋಟೆಲ್ ಉದ್ಯಮಿ
5.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
6.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
7.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
8.ಎಂ.ಲಕ್ಷ್ಮಣ್
9. ದೀಪಕ್ ಕುಮಾರ್
10.ಕಾರ್ತಿಕ್
11.ಆರ್.ನಾಗರಾಜ್, ದರ್ಶನ್ ಆಪ್ತ
12.ವಿ.ವಿನಯ್‌
13. ನಿಖಿಲ್‌ ನಾಯಕ್‌

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ | Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

ಇದನ್ನೂ ಓದಿ | Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 33 ವರ್ಷದ ಯುವಕ ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

Continue Reading

ಸಿನಿಮಾ

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Pawan Kalyan: ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರಂತೆ. ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ (Renu Desai Second Marriage) ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.

VISTARANEWS.COM


on

Renu Desai Second Marriage
Koo

ಬೆಂಗಳೂರು: ಟಾಲಿವುಡ್ ನ ಖ್ಯಾತ ನಟರಲ್ಲಿ ಪವನ್ ಕಲ್ಯಾಣ (Pawan Kalyan) ಕೂಡ ಒಬ್ಬರು. ಇವರು ಹಲವಾರು ಚಿತ್ರದಲ್ಲಿ ನಟಿಸಿ ಜನ ಮನ್ನಣೆಯನ್ನು ಪಡೆದು ಟಾಲಿವುಡ್ ನಲ್ಲಿ ಒಬ್ಬ ಖ್ಯಾತ ನಟ ಎನಿಸಿಕೊಂಡಿದ್ದಾರೆ. ಆದರೆ ಇಂತಹ ಮಹಾನ್ ನಟ ತಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಯನ್ನು ಎದುರಿಸಿದ್ದಾರೆ. ಪವನ್‌ ಕಲ್ಯಾಣ್‌ ತಮ್ಮ ಮೊದಲ ಪತ್ನಿ (Pawan Kalyan’s ex-wife) ರೇಣು ದೇಸಾಯಿ (Renu desai) ಅವರಿಂದ ವಿಚ್ಛೇದನ ಪಡೆದು ದೂರವಾಗಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇದೀಗ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai Second Marriage) ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಟಿ ರೇಣು ದೇಸಾಯಿ ಅವರು ಇತ್ತೀಚೆಗೆ ಜನಪ್ರಿಯ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಎರಡನೇ ಮದುವೆಯ ಯೋಜನೆಯ ಬಗ್ಗೆ ಪ್ರಸ್ತಾಪಮಾಡಿದ್ದಾರೆ.

ಸಂದರ್ಶನದಲ್ಲಿ ನಟಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಂಚಿಕೊಳ್ಳುತ್ತಿರುವಾಗ ಈ ವಿಚಾರ ತಿಳಿಸಿದ್ದಾರೆ. ಹಾಗೇ ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಹಾಗಾಗಿ ಈಗಾಗಲೇ ತಂದೆಯ ಪ್ರೀತಿಯಿಂದ ವಂಚಿತರಾದ ಅವರ ಮಕ್ಕಳಿಗೆ ತಂದೆಯ ಪ್ರೀತಿ ಸಿಗಲಿದೆ ಎನ್ನಲಾಗಿದೆ.

Renu Desai Second Marriage

ನಟಿ ರೇಣು ದೇಸಾಯಿಯವರು 2012ರಲ್ಲಿ ಪವನ್ ಕಲ್ಯಾಣ್ ಅವರಿಗೆ ಡಿವೋರ್ಸ್ ನೀಡಿದ್ದರು. ಆದರೆ ಅವರು ಇಷ್ಟು ವರ್ಷಗಳ ಕಾಲ ಯಾಕೆ ಮರು ಮದುವೆಯಾಗಿಲ್ಲ ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರಿಸಿದ ನಟಿ ರೇಣು ದೇಸಾಯಿ ಅವರು, ಆ ಸಮಯದಲ್ಲಿ ಮಕ್ಕಳಿಗೆ ಆರೈಕೆಯ ಅಗತ್ಯವಿತ್ತು. ಅವರಿಗೆ ತನ್ನ ಸಹಾಯ ಬೇಕಿತ್ತು. ಆದರೆ ತಾನು ಮದುವೆಯಾದರೆ ಪತಿಯೊಂದಿಗೆ ಸಮಯ ಕಳೆಯಬೇಕಾಗುತ್ತದೆ ಆಗ ಮಕ್ಕಳಿಗೆ ಒಂಟಿತನ ಕಾಡುತ್ತದೆ. ಈಗಾಗಲೇ ತಂದೆ ಇಲ್ಲದೆ ನರಳುತ್ತಿದ್ದ ಮಕ್ಕಳಿಗೆ ತಾಯಿಯ ಪ್ರೀತಿ ಸಿಗದಿದ್ದರೆ ಅವರಿಗೆ ಅನೇಕ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಇನ್ನೆರಡು ಮೂರು ವರ್ಷಗಳಲ್ಲಿ ಅವರು ದೊಡ್ಡವರಾಗುತ್ತಾರೆ. ಕಾಲೇಜಿಗೆ ಹೋಗುತ್ತಾರೆ. ಅಲ್ಲಿ ಅವರು ಸ್ನೇಹಿತರು ಮತ್ತು ಪ್ರೇಮಿಗಳ ಹೊಸ ಪ್ರಪಂಚಕ್ಕೆ ಕಾಲಿಡುತ್ತಾರೆ. ಅವರೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ. ಆಗ ಅವರು ಪೋಷಕರ ಮೇಲೆ ಅವಲಂಬಿತರಾಗಿರುವುದಿಲ್ಲ. ಹಾಗಾಗಿ ಈ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

Renu Desai Second Marriage

ಅಲ್ಲದೇ ಮರು ಮದುವೆಗೆ ತಮ್ಮ ಮಕ್ಕಳ ಬೆಂಬಲ ಇರುವುದಾಗಿ ತಿಳಿಸಿದ್ದಾರೆ. ಹಾಗೇ ಮರುಮದುವೆಯಿಂದ ತಾವು ಮತ್ತೆ ಸಂತೋಷವನ್ನು ಕಂಡುಕೊಳ್ಳುವ ಬಯಕೆಯನ್ನು ನಟಿ ವ್ಯಕ್ತಪಡಿಸಿದ್ದಾರೆ. ಇದು ನಟಿ ರೇಣು ದೇಸಾಯಿ ಅವರಿಗೆ ತಮ್ಮ ಮಕ್ಕಳ ಬಗ್ಗೆ ಎಷ್ಟು ಕಾಳಜಿ, ಜವಾಬ್ದಾರಿ ಇದೆ ಎಂಬುದರ ಬಗ್ಗೆ ತಿಳಿಸುತ್ತದೆ.

ಇದನ್ನೂ ಓದಿ: Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

ಇತ್ತ ನಟ ಪವನ್ ಕಲ್ಯಾಣ್ ಅವರು ಚಿತ್ರರಂಗದ ಜೊತೆಗೆ ರಾಜಕೀಯ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಅವರು ತಮ್ಮದೇ ಜನಸೇನಾ ಪಾರ್ಟಿ ಎಂಬ ರಾಜಕೀಯ ಪಕ್ಷವನ್ನು ಕಟ್ಟಿಕೊಂಡು 2019ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ್ದರು. ಆದರೆ 2024ರಲ್ಲಿ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಹಾಗಾಗಿ ಅವರು ಇನ್ನು ಮುಂದೆ ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Continue Reading

ಪ್ರಮುಖ ಸುದ್ದಿ

Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

Odisha chief minister: ಇತ್ತೀಚೆಗೆ ಮುಕ್ತಾಯಗೊಂಡ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಮಾಝಿ ಕಿಯೋಂಜಾರ್ ವಿಧಾನಸಭಾ ಸ್ಥಾನವನ್ನು ಗೆದ್ದಿದ್ದಾರೆ. ಬಿಜು ಜನತಾ ದಳದ ಮಿನಾ ಮಾಝಿ ಅವರನ್ನು 11,577 ಮತಗಳಿಂದ ಸೋಲಿಸಿದ್ದರು. ಮೋಹನ್ ಚರಣ್ ಮಾಝಿ ಖನಿಜ ಸಂಪದ್ಭರಿತ ಕೆಂದುಜಾರ್ ಜಿಲ್ಲೆಯ ಪ್ರಬಲ ಮತ್ತು ಫೈರ್ ಬ್ರಾಂಡ್ ಬುಡಕಟ್ಟು ನಾಯಕರಾಗಿದ್ದಾರೆ.

VISTARANEWS.COM


on

Odisha chief minister
Koo

ಬೆಂಗಳೂರು: ನಾಲ್ಕು ಬಾರಿ ಶಾಸಕ ಮೋಹನ್ ಚರಣ್ ಮಾಝಿ ಅವರನ್ನು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ (Odisha chief minister) ಬಿಜೆಪಿ ಮಂಗಳವಾರ ಆಯ್ಕೆ ಮಾಡಿದೆ. ಕೆ.ವಿ. ಸಿಂಗ್ ದೇವ್ ಮತ್ತು ಪಾರ್ವತಿ ಪರಿದಾ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾಝಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಘೋಷಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಮಾಝಿ ಕಿಯೋಂಜಾರ್ ವಿಧಾನಸಭಾ ಸ್ಥಾನವನ್ನು ಗೆದ್ದಿದ್ದಾರೆ. ಬಿಜು ಜನತಾ ದಳದ ಮಿನಾ ಮಾಝಿ ಅವರನ್ನು 11,577 ಮತಗಳಿಂದ ಸೋಲಿಸಿದ್ದರು. ಮೋಹನ್ ಚರಣ್ ಮಾಝಿ ಖನಿಜಗಳ ಗಣಿಗಳಿಂದ ಸಂಪದ್ಭರಿತವಾಗಿರ ಕೆಂದುಜಾರ್ ಜಿಲ್ಲೆಯ ಪ್ರಬಲ ಮತ್ತು ಫೈರ್ ಬ್ರಾಂಡ್ ಬುಡಕಟ್ಟು ನಾಯಕರಾಗಿದ್ದಾರೆ.

ಮಾಝಿ ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಆದಾಗ್ಯೂ ಅವರು ಒಡಿಶಾ ವಿಧಾನಸಭೆಯಲ್ಲಿ ತಮ್ಮ ಛಾಪು ಮೂಡಿಸಿದ್ದರು. ಮೋಹನ್ ಮಾಝಿ ಅವರನ್ನು ನಿಷ್ಠಾವಂತ ಬಿಜೆಪಿ ಸದಸ್ಯ ಮತ್ತು ಬಲವಾದ ನಾಯಕ ಎಂದು ಪರಿಗಣಿಸಲಾಗಿದೆ.

ಬಿಜೆಪಿ ಮೊದಲ ಸಿಎಂ

ಒಡಿಶಾದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿರುವ ಮಾಝಿ ಅವರಿಗೆ ಮೊದಲ ಬಾರಿಗೆ ಶಾಸಕಿ ಪ್ರಭಾತಿ ಪರಿದಾ ಮತ್ತು ಆರು ಬಾರಿ ಶಾಸಕ ಕೆ.ವಿ.ಸಿಂಗ್ ದೇವ್ ಎಂಬ ಇಬ್ಬರು ಉಪಮುಖ್ಯಮಂತ್ರಿಗಳು ಸಿಗಲಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದ್ರ ಯಾದವ್ ಅವರು ಎಲ್ಲಾ ಹಿರಿಯ ನಾಯಕರು ಮತ್ತು ಹೊಸದಾಗಿ ಆಯ್ಕೆಯಾದ ಸಂಸದರು ಮತ್ತು ಶಾಸಕರೊಂದಿಗೆ ಚರ್ಚಿಸಿದ ನಂತರ ಅವರ ಹೆಸರು ಅಂತಿಮಗೊಳಿಸಲಾಗಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ವಾರದ ನಂತರ ಅವರನ್ನು ಆಯ್ಕೆ ಮಾಡುವ ಸಭೆ ನಡೆಯಿತು. 147 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತವನ್ನು ಪಡೆದುಕೊಂಡಿದೆ.

ಪಟ್ನಾಯಕ್​ 24 ವರ್ಷಗಳ ಆಡಳಿತ ಅಂತ್ಯ

ಬಿಜೆಡಿಯ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಆಡಳಿತದ ನಂತರ ಮಾಝಿ ಒಡಿಶಾವನ್ನು ಮುನ್ನಡೆಸಲಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಮೂರನೇ ಕೇಂದ್ರ ಸಚಿವ ಸಂಪುಟದಲ್ಲಿ ಸಂಬಲ್ಪುರ ಸಂಸದ ಧರ್ಮೇಂದ್ರ ಪ್ರಧಾನ್ ಸಚಿವರಾದ ನಂತರ ಸಿಎಂ ಹುದ್ದೆಗೆ ಹಲವಾರು ಹೆಸರುಗಳು ಸ್ಪರ್ಧೆಯಲ್ಲಿದ್ದವು. ಆದರೆ, ಎಂದಿನಂತೆ ಬಿಜೆಪಿ ನಾಯಕತ್ವ ಕೊನೆಯ ಕ್ಷಣದಲ್ಲಿ ಅಚ್ಚರಿ ಮೂಡಿಸಿದೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್​ಗಢದಲ್ಲಿ ಈ ಹಿಂದೆ ಪಕ್ಷವು ಇದೇ ರೀತಿಯ ಘೋಷಣೆ ಮಾಡಿದ್ದರಿಂದ ಪಕ್ಷದ ಹಲವಾರು ನಾಯಕರು ಇದನ್ನು ನಿರೀಕ್ಷಿಸಿದ್ದರು.

ಇದನ್ನೂ ಓದಿ: Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

ಬುಧವಾರ ಪ್ರಮಾಣವಚನ ಸ್ವೀಕರಿಸುವ ಮೊದಲು ಮಾಝಿ ಮೊದಲು ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಜೂನ್ 12 ರಂದು ಮಧ್ಯಾಹ್ನ 2.30 ಕ್ಕೆ ಭುವನೇಶ್ವರಕ್ಕೆ ಪ್ರಧಾನಿ ಮೋದಿಯೂ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ಉದ್ದೇಶಿತ ಸ್ಥಳದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಒಡಿಶಾದ ನೂತನ ಮುಖ್ಯಮಂತ್ರಿ ಮತ್ತು ಇತರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

Continue Reading
Advertisement
University Grants Commission
ಪ್ರಮುಖ ಸುದ್ದಿ14 mins ago

University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Actor Darshan
ಪ್ರಮುಖ ಸುದ್ದಿ24 mins ago

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 3 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Wedding Jewel Fashion
ಫ್ಯಾಷನ್38 mins ago

Wedding Jewel Fashion: ವೆಡ್ಡಿಂಗ್‌ ಜ್ಯುವೆಲ್‌ ಫ್ಯಾಷನ್‌ನಲ್ಲಿ ಮಹಿಳೆಯರನ್ನು ಸೆಳೆಯುತ್ತಿವೆ ಈ 3 ಟ್ರೆಡಿಷನಲ್‌ ಮಾಟಿಗಳು

EPF Account Rules
ಮನಿ-ಗೈಡ್58 mins ago

EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

Renu Desai Second Marriage
ಸಿನಿಮಾ1 hour ago

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Odisha chief minister
ಪ್ರಮುಖ ಸುದ್ದಿ1 hour ago

Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

Renuka Swamy Murder Case
ಕರ್ನಾಟಕ1 hour ago

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Raksha Khadse
ರಾಜಕೀಯ2 hours ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ2 hours ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ2 hours ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ6 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ8 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌