tejasvi surya pressmeet regarding sc st reservation SC ST Reservation: ಎಲ್ಲಿಂದ ತೆಗೆದು ಮುಸ್ಲಿಂ ಮೀಸಲಾತಿ ನೀಡುತ್ತೀರ? ಒಬಿಸಿ ವಿರೋಧಿ ಕಾಂಗ್ರೆಸ್‌: ಸಂಸದ ತೇಜಸ್ವಿ ಸೂರ್ಯ ಆರೋಪ - Vistara News

ಕರ್ನಾಟಕ

SC ST Reservation: ಎಲ್ಲಿಂದ ತೆಗೆದು ಮುಸ್ಲಿಂ ಮೀಸಲಾತಿ ನೀಡುತ್ತೀರ? ಒಬಿಸಿ ವಿರೋಧಿ ಕಾಂಗ್ರೆಸ್‌: ಸಂಸದ ತೇಜಸ್ವಿ ಸೂರ್ಯ ಆರೋಪ

ಕಾಂಗ್ರೆಸ್‍ನ ಅಹಿಂದ ರಾಜಕಾರಣದಲ್ಲಿ ಅ ಮಾತ್ರ ಉಳಿದಿದೆ. ಕಾಂಗ್ರೆಸ್‍ನ ಅಹಿಂದದಲ್ಲಿ ಹಿಂದ ಈಗ ಇಲ್ಲ ಎಂದು ತೇಜಸ್ವೀ ಸೂರ್ಯ ಹೇಳಿದ್ದಾರೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನೇಕ ದಶಕಗಳಿಂದಲೂ ಕಾಂಗ್ರೆಸ್‌ ಸರ್ಕಾರಗಳು ಹಿಂದುಳಿದ ವರ್ಗಗಳ ವಿರೋಧಿಯಾಗಿ ಕೆಲಸ ಮಾಡುತ್ತಿದ್ದು, ಇದೀಗ ಮುಸ್ಲಿಂ ಮೀಸಲಾತಿಯನ್ನು ಯಾವ ಸಮುದಾಯದಿಂದ ಕಿತ್ತು ಕೊಡುತ್ತೀರ ಎಂದು ಕಾಂಗ್ರೆಸ್‌ ಪಕ್ಷವನ್ನು ಬಿಜೆಪಿ ಸಂಸದ ಹಾಗೂ ರಾಷ್ಟ್ರೀಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ತೇಜಸ್ವೀ ಸೂರ್ಯ ಪ್ರಶ್ನಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವೀ ಸೂರ್ಯ, ಈ ನಿರ್ಧಾರದಿಂದ ಇಲ್ಲಿನವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿದೆ. ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ಧೋರಣೆ ಎಲ್ಲರಲ್ಲಿ ಆಶ್ಚರ್ಯ ತಂದಿದೆ. ಅದು ಅಸಹ್ಯ ತರಿಸುವಂತಿದೆ.

ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ 4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಿದ್ದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ ಶೇ. 4 ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಅಚ್ಚರಿ ತರುವಂತಿದೆ.

ಶೇ. 13ರಷ್ಟು ಮುಸ್ಲಿಂ ಸಮುದಾಯ ರಾಜ್ಯದಲ್ಲಿದೆ. ಅದಕ್ಕೆ ಅನುಗುಣವಾಗಿ ಅವರಿಗೆ ಮೀಸಲಾತಿ ಕೊಡುವುದಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೇಳುತ್ತಿದ್ದಾರೆ. ಇದು ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಮಾಡುತ್ತಿರುವ ಅತ್ಯಂತ ಘೋರ ಅನ್ಯಾಯ. ಇದನ್ನು ರಾಜ್ಯದ ಜನತೆ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ. ಕಾಂಗ್ರೆಸ್ ಪಾರ್ಟಿ 1954ರಿಂದ ಇತಿಹಾಸದುದ್ದಕ್ಕೂ ನಿರಂತರವಾಗಿ ಒಬಿಸಿ ಸಮುದಾಯಗಳ ವಿರುದ್ಧ ಪಿತೂರಿ ಮಾಡುತ್ತಲೇ ಬಂದಿದೆ.

1954ರಲ್ಲಿ ಕಾಕಾ ಕಾಲೇಲ್ಕರ್ ಸಮಿತಿ ರಚಿಸಿ ಒಬಿಸಿ ಸಮುದಾಯಗಳ ಹಿತರಕ್ಷಿಸಲು ಒಬಿಸಿ ಆಯೋಗ ರಚಿಸಲು ತಿಳಿಸಿತ್ತು. ಆ ಆಯೋಗಕ್ಕೆ ಸಾಂವಿಧಾನಿಕ ದರ್ಜೆ ಕೊಡಲು ಬೇಡಿಕೆ ಇಡಲಾಗಿತ್ತು. ಅಲ್ಲಿಂದ 2018ರವರೆಗೆ ಕಾಂಗ್ರೆಸ್, ಕಾಂಗ್ರೆಸ್‍ನ ಹಲವು ಬಣ್ಣದ ಸರ್ಕಾರಗಳು ಬಂದರೂ ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ದರ್ಜೆ ಕೊಟ್ಟಿರಲಿಲ್ಲ. 2018ರಲ್ಲಿ ಮೋದಿಜ ಅವರ ಸರ್ಕಾರ ಸಾಂವಿಧಾನಿಕ ಮಾನ್ಯತೆ ನೀಡಿ ಮಹತ್ವದ ಐತಿಹಾಸಿಕ ನಿರ್ಧಾರ ಮಾಡಿತ್ತು. ಆಗ ಲೋಕಸಭೆಯಲ್ಲಿ ಕಾನೂನನ್ನು ಮಂಡಿಸಿದಾಗ ಕಾಂಗ್ರೆಸ್ ಪಕ್ಷವೂ ಅದನ್ನು ವಿರೋಧಿಸಿತ್ತು.

ಕಾಂಗ್ರೆಸ್ ಪಕ್ಷವು ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಮಾಡುತ್ತಿದೆ. ಅಲ್ಲದೆ ಈ ಸಮುದಾಯದ ಹಕ್ಕು, ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಿ ತುಷ್ಟೀಕರಣ ಮಾಡುತ್ತಿದೆ. ಆಂಧ್ರದಲ್ಲಿ 2005ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಕೇವಲ ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಶೇ. 4 ಮೀಸಲಾತಿಯನ್ನು ಒಬಿಸಿ ಸಮುದಾಯದ ಬಾಸ್ಕೆಟ್‍ನಿಂದ ಕಿತ್ತು ಕೊಟ್ಟಿದೆ. ಅವರ ಸಾಮಾಜಿಕ ಹಿಂದುಳಿದಿರುವಿಕೆ, ವಿದ್ಯೆಯಲ್ಲಿನ ಹಿಂದುಳಿದಿರುವಿಕೆ ಇದಕ್ಕೆ ಆಧಾರವಾಗಿರಲಿಲ್ಲ. ಅಲ್ಲಿನ ಹೈಕೋರ್ಟ್, ಸುಪ್ರೀಂ ಕೋರ್ಟ್ ಅದನ್ನು ರದ್ದು ಮಾಡಲು ಸೂಚಿಸಿತ್ತು. ಆದರೂ ಮತ್ತೆ 2010ರಲ್ಲಿ ಶೇ. 4 ಮೀಸಲಾತಿಯನ್ನು ಕೊಡಲಾಗಿದೆ.

ಒಬಿಸಿ ಸಮುದಾಯ, ಹಿಂದೂಗಳ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಕೋಪ, ಸಿಟ್ಟು ಯಾಕೆ? ಅವರ ಕಡೆಗಣನೆ ಏಕೆ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ. ಮಂಡಲ್ ಕಮಿಷನ್ ವರದಿಯನ್ನೂ ಸಂಸತ್ತಿನಲ್ಲಿ ರಾಜೀವ್ ಗಾಂಧಿ ಅವರು ಅಧಿಕೃತವಾಗಿ ವಿರೋಧಿಸಿದ್ದರು. ಹಿಂದುಳಿದ ಸಮುದಾಯಗಳ ಮೇಲೆ ಯಾಕಿಷ್ಟು ದ್ವೇಷ ಎಂಬ ಪ್ರಶ್ನೆಗೆ ಇದು ಇನ್ನಷ್ಟು ಪುಷ್ಟಿ ಕೊಡುವಂತಿದೆ. ವಿ.ಪಿ. ಸಿಂಗ್ ಸರ್ಕಾರವು ಮಂಡಲ್ ಆಯೋಗದ ಶೇ. 27 ಮೀಸಲಾತಿ ಜಾರಿಗೆ ಮುಂದಾದಾಗ ಇದಕ್ಕೆ ಬಿಜೆಪಿ ಬಾಹ್ಯ ಬೆಂಬಲ ಕೊಟ್ಟಿತ್ತು. ಆ ಮೂಲಕ ಅದರ ಜಾರಿಗೆ ಸಹಕರಿಸಿದೆ. ವೈದ್ಯಕೀಯ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಒಬಿಸಿ ಸಮುದಾಯಕ್ಕೆ ಶೇ. 27 ರಷ್ಟು ಮೀಸಲಾತಿ ಬೇಡಿಕೆ ಇದ್ದರೂ ಅದನ್ನು ಮಾಡಿರಲಿಲ್ಲ. 2004ರಿಂದ 2014ರವರೆಗೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಮನವಿಯನ್ನು ಯಾಕೆ ಪುರಸ್ಕಾರ ಮಾಡಿರಲಿಲ್ಲ? ದಶಕಗಳ ಬೇಡಿಕೆಯಾದ ಇದನ್ನೂ ಕೂಡ ಮೋದಿ ಸರ್ಕಾರ ಈಡೇರಿಸಿ ಹಿಂದುಳಿದ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಟ್ಟಿದೆ ಎಂದು ವಿಶ್ಲೇಷಿಸಿದರು.

2012-13ನೇ ಅವಧಿಯಲ್ಲಿ ಯುಪಿಎ ಸರ್ಕಾರ ಶೇ. 4.5 ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡಲು ಯುಪಿಎ ಸರ್ಕಾರ ಮುಂದಾಗಿತ್ತು. ಇದನ್ನು ಒಬಿಸಿ ಸಮುದಾಯದಿಂದ ಕಿತ್ತುಕೊಳ್ಳುವ ಇರಾದೆ ಕಾಂಗ್ರೆಸ್‍ನದಾಗಿತ್ತು. ಒಬಿಸಿ, ಹಿಂದುಳಿದವರ ಬಗ್ಗೆ ಕಾಂಗ್ರೆಸ್‍ಗೆ ಇಷ್ಟೊಂದು ದ್ವೇಷ ಯಾಕೆ ಎಂದು ಆ ಸಮುದಾಯದವರು ಪ್ರಶ್ನಿಸುತ್ತಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್‍ಗೆ ಘೋರ ವಿರೋಧ, ಆಕ್ರೋಶ ಏಕೆ? ಎಂದು ಕರ್ನಾಟಕದಲ್ಲಿ ದೇಶದೆಲ್ಲೆಡೆ ಪ್ರಶ್ನೆ ಎದ್ದಿದೆ.

ಒಬಿಸಿ ಸಮುದಾಯ ಮತ್ತು ಆ ಸಮುದಾಯದ ನಾಯಕರ ವಿರೋಧ ಮಾಡುವ ಐತಿಹಾಸಿಕ ಮಾನಸಿಕತೆ ಕಾಂಗ್ರೆಸ್‍ನದು. ಈ ಸಮುದಾಯಗಳ ನಾಯಕರಾದ ರಾಮಮನೋಹರ್ ಲೋಹಿಯಾ, ಬಿಹಾರದ ಕರ್ಪೂರಿ ಠಾಕೂರ್, ಜಯಪ್ರಕಾಶ್ ನಾರಾಯಣ್ ಎಲ್ಲರೂ ಕಾಂಗ್ರೆಸ್ ರಾಜಕೀಯವನ್ನು ವಿರೋಧಿಸಿದ್ದರು.

ಹಿಂದುಳಿದ ಸಮುದಾಯದ ಎಲ್ಲರಿಗೂ ಘೋರ ಅನ್ಯಾಯ ಮಾಡಿದ್ದು ಕಾಂಗ್ರೆಸ್ ಪಕ್ಷ, ಗಾಂಧಿ ಪರಿವಾರ. ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ಪಾರ್ಟಿ ಅಧ್ಯಕ್ಷರನ್ನಾಗಿ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿಂದಿನ ಅಧ್ಯಕ್ಷ, ಹಿಂದುಳಿದ ಸಮುದಾಯದ ದೊಡ್ಡ ನಾಯಕ ಸೀತಾರಾಮ ಕೇಸರಿ ಅವರನ್ನು ಅವಮಾನಿಸಿ, ಸ್ನಾನದ ಕೊಠಡಿಯಲ್ಲಿ ಬಂಧಿಸಿಟ್ಟದ್ದು ಇದೇ ಪಕ್ಷ.

ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯದ ಪ್ರತಿಪಾದಕರಾದ ದೇವರಾಜ ಅರಸು ಅವರಿಗೆ ಕಾಂಗ್ರೆಸ್ ಪಕ್ಷ ಮಾಡಿದ ಅಪಮಾನವನ್ನೂ ರಾಜ್ಯದ ಜನರು ನೆನಪಿಟ್ಟುಕೊಂಡಿದ್ದಾರೆ. ಕಳೆದ ಎಷ್ಟೋ ದಶಕಗಳಿಂದ ಕರ್ನಾಟಕದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕೆಂಬ ಬೇಡಿಕೆ ಇತ್ತು. ಆರು ವರ್ಷ ಅಧಿಕಾರದಲ್ಲಿ ಇದನ್ನು ಕಾಂಗ್ರೆಸ್ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಒಳಮೀಸಲಾತಿಯನ್ನು ಯಾಕೆ ನೀಡಿಲ್ಲ? ನಾವು ಅದನ್ನು ಮಾಡಿದ್ದೇವೆ. ತಾವು ಅಧಿಕಾರಕ್ಕೆ ಬಂದರೆ ಕಾನೂನನ್ನು ಬದಲಾಯಿಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಯಾವ ಸಮುದಾಯದಿಂದ ಇದನ್ನು ಕಿತ್ತು ಮುಸ್ಲಿಮರಿಗೆ ಕೊಡುತ್ತೀರೆಂದು ಸ್ಪಷ್ಟಪಡಿಸಿ. ಮುಸ್ಲಿಮರಿಗೆ ಶೇ 13 ಮೀಸಲಾತಿಯನ್ನು ಸಿದ್ದರಾಮಯ್ಯನವರು ಯಾವ ಸಮುದಾಯಗಳಿಂದ ಕಿತ್ತು ಕೊಡಲಿದ್ದಾರೆ? ರಾಜ್ಯದಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದ ಮೀಸಲಾತಿ ಜಾರಿಯಲ್ಲಿತ್ತು. ಬೊಮ್ಮಾಯಿಯವರ ಸರ್ಕಾರ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದೆ. ಇದರಿಂದ ಕಾಂಗ್ರೆಸ್ ಪಕ್ಷದ ಮತಬ್ಯಾಂಕಿಗೆ ಏಟು ಬಿದ್ದಿದೆ ಎಂದು ತಿಳಿಸಿದರು.

ಇದನ್ನೂ ಓದಿ: SC ST Reservation: ಪರಿಶಿಷ್ಟ ಜಾತಿ ಎಂದರೆ ಏನೆಂದು ಮೊದಲು ತಿಳಿದುಕೊಳ್ಳಿ; ಸಂವಿಧಾನದ ಪಾಠ ಮಾಡಿದ ಪಿ. ರಾಜೀವ್‌

ಕಾಂಗ್ರೆಸ್‍ನ ಅಹಿಂದ ರಾಜಕಾರಣದಲ್ಲಿ ಅ ಮಾತ್ರ ಉಳಿದಿದೆ. ಕಾಂಗ್ರೆಸ್‍ನ ಅಹಿಂದದಲ್ಲಿ ಹಿಂದ ಈಗ ಇಲ್ಲ. ಜನರು ಈ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತಾರೆ. ಕಾಂಗ್ರೆಸ್ ಪಕ್ಷದವರು ಸಮರ್ಥ ಅಧ್ಯಯನ, ಹಿಂದುಳಿದ ವರ್ಗದ ಆಯೋಗದ ವರದಿ ಇಲ್ಲದೆ ಮತಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು.

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಬೇರೆಯವರನ್ನ ಪುಸಲಾಯಿಸಿ ಮಾಡಲಾಗಿದೆ. ಈಗಾಗಲೇ ಮೂವರನ್ನ ಬಂಧಿಸಲಾಗಿದೆ. ಬಂಜಾರ ಸಮುದಾಯವನ್ನು ಮೀಸಲಾತಿ ಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆತಂಕ ಅವರಲ್ಲಿದೆ. ನಾವು ಸದಾಶಿವ ಆಯೋಗದ ವರದಿಯನ್ನು ಒಪ್ಪಿಲ್ಲ. ಇನ್ನೊಂದು ಗುಂಪು ಬಲಾಢ್ಯರು ನಮ್ಮ ಮೀಸಲಾತಿ ತಿಂತಿದ್ದಾರೆ, ನಮಗೆ ನ್ಯಾಯ ಕೊಡಿಸಿ ಅಂತ ಹೇಳಿದೆ. ಸದಾಶಿವ ಆಯೋಗ, ನಾಗಮೋಹನ್ ದಾಸ್ ಕಮಿಟಿ ಹೇಳಿರೋದೇ ಬೇರೆ. ಅವರ ಮೀಸಲಾತಿಗಿಂತ ಹೆಚ್ಚಿಗೆಯೇ ಕೊಡಲಾಗಿದೆ‌.

ಆದರೂ ಬೀದಿಗಿಳಿದು ಹೋರಾಟ ಮಾಡಲಾಗಿದೆ. ಹೆಚ್ಚಿಗೆ ಕೊಟ್ರೂ ಯಾವ ಕಾರಣಕ್ಕೆ ಹೋರಾಟ ಮಾಡಿದ್ದಾರೆ? ಅವರಿಗೆ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್ ಅಲ್ಲ, ದೇವೇಗೌಡರು. ಸಂಸತ್ತಿನಲ್ಲಿ ದೇವೇಗೌಡರು ಮೇಜು ಕುಟ್ಟಿ ಹೇಳಿದ್ರು, ಯಾರೂ ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿಲ್ಲ, ನಾನು ಕೊಟ್ಟೆ ಎಂದು. ಅದು ಕಾಂಗ್ರೆಸ್ ಅವರ ಕಣ್ಣಿಗೆ ಕುಕ್ಕಿತು. ಆಗ ಕಾಂಗ್ರೆಸ್ ಮೀಸಲಾತಿ ಕೊಡುವ ಕೆಲಸ ಮಾಡಿತು. ಆದ್ರೆ ಅದು ಅಸಂವಿಧಾನಿಕ ಆಗಿದೆ. ರಿಸರ್ವೇಷನ್ ನಾವೇ ಕೊಟ್ಟಿದ್ದು ಅಂತ ಕಾಂಗ್ರೆಸ್ ಹೇಳಿದೆ. ಜಮ್ಮು ಕಾಶ್ಮೀರದಲ್ಲಿ ಎಸ್ಸಿ, ಎಸ್ಟಿ‌ಗೆ ಮೀಸಲಾತಿ ಕೊಟ್ಟಿರಲಿಲ್ಲ. 370 ತೆಗೆದ ಬಳಿಕ ಅಲ್ಲಿ ಮೀಸಲಾತಿ ಬಂತು. ಅಂದ್ರೆ ನಾವು ಮೀಸಲಾತಿ ವಿರೋಧಿಗಳು ಅಲ್ಲ ಎಂದರು.

ಇದನ್ನೂ ಓದಿ: SC ST Reservation : ಬಾಗಲಕೋಟೆ ತಾಂಡಾಗಳಲ್ಲೂ ಆಕ್ರೋಶ; ಬಿಜೆಪಿ ಧ್ವಜ ತೆರವು, ಪ್ರವೇಶ ನಿರಾಕರಿಸಿ ಪೋಸ್ಟರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Murder Case: ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇಬ್ಬರ ಗುರುತೂ ಪತ್ತೆಯಾಗಿಲ್ಲ.

VISTARANEWS.COM


on

jayanagar murder case
Koo

ಬೆಂಗಳೂರು: ರಸ್ತೆಯ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ (Jayanagar murder case) ನಡೆಸಿದ ಘಟನೆ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ (Jayanagar murder case) 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ 12ರ ಹೊತ್ತಿಗೆ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

ಮೃತನ ಗುರುತು ಪತ್ತೆಯಾಗಿಲ್ಲ. ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಪಾನಮತ್ತನಾಗಿ ಈತ ಮಲಗಿದ್ದ ಎನ್ನಲಾಗಿದೆ. ಮತ್ತೊಬ್ಬ ಬಂದು ಆತನ ಮೇಲೆ ಬಿದ್ದಿದ್ದಾನೆ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಮಲಗಿದ್ದ ವ್ಯಕ್ತಿಯನ್ನು ದರದರನೆ ಎಳೆದು ತಂದ ಆಸಾಮಿ ನಂತರ ರಸ್ತೆ ಪಕ್ಕ ಬಿದ್ದಿದ್ದ ಕಲ್ಲು ತಲೆ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವವಾಗಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಘಟನೆ ಸ್ಥಳಕ್ಕೆ ಭೇಟಿ ನೀಡಿರುವ ಬನಶಂಕರಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ನಡೆದ ಸುತ್ತಮುತ್ತಲಿನ ಮನೆಗಳ ಸಿಸಿಟಿವಿ ಫೂಟೇಜ್‌ ಆಧರಿಸಿ ವ್ಯಕ್ತಿಯ ತಲಾಶೆ ನಡೆಸಲಾಗುತ್ತಿದೆ. ಕೊಲೆಯಾದ ವ್ಯಕ್ತಿಯ ವಿವರಗಳೂ ಗೊತ್ತಾಗಿಲ್ಲ. ಯಾವುದೇ ಐಡಿ ಈತನ ಬಳಿ ಕಂಡುಬಂದಿಲ್ಲ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Continue Reading

ಪ್ರಮುಖ ಸುದ್ದಿ

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

HD Revanna Bail: ಇಂದು ರೇವಣ್ಣ ಅವರು ಪರಪ್ಪನ ಅಗ್ರಹರ ‌ಜೈಲಿನಿಂದ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲು ಬಳಿ ಸೇರುವ‌ ಸಾಧ್ಯತೆ ಇದೆ. ಹೀಗಾಗಿ ಜೈಲಿನ ರಸ್ತೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

VISTARANEWS.COM


on

HD Revanna Bail
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಹಾಗೂ ಅಪಹರಣ (Kidnap case) ಪ್ರಕರಣದಲ್ಲಿ ಆರು ದಿನಗಳಿಂದ ಪರಪ್ಪನ ಅಗ್ರಹಾರ ಜೈಲುವಾಸಿಯಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna jailed) ಅವರಿಗೆ ನಿನ್ನೆ ಜಾಮೀನು (HD Revanna Bail) ದೊರೆತಿದೆ. ಆದರೆ ಇಂದು ಸಂಜೆಯವರೆಗೂ ಅವರು ಜೈಲಿನಲ್ಲಿರಬೇಕಾಗಿದೆ.

ಕಿಡ್ನಾಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಎಚ್.ಡಿ.ರೇವಣ್ಣನವರಿಗೆ ಇಂದು ಸೆರೆವಾಸ ಅಂತ್ಯವಾಗಲಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಲಿದ್ದಾರೆ. ಆದರೆ ಮೊದಲಿಗೆ ಜಾಮೀನಿನ ಶೂರಿಟಿ ಪ್ರಕ್ರಿಯೆಯನ್ನು ಕೋರ್ಟಿನಲ್ಲಿ ಮುಗಿಸಬೇಕು. ಬೇಲ್ ಕಾಪಿ ಜೈಲಿನ ಅಧಿಕಾರಿಗಳಿಗೆ ಮುಖತಃ ಬರಬೇಕು. ಬೇಲ್ ಕಾಪಿ ಬಂದ ಬಳಿಕ ಸಂಜೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ನಿನ್ನೆ ಸಂಜೆ ಜಾಮೀನು ಸಿಕ್ಕ ಖುಷಿಯಲ್ಲಿದ್ದ ರೇವಣ್ಣ ರಾತ್ರಿ 12 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದರು. ಇಂದು ಬೆಳಿಗ್ಗೆ 4 ಗಂಟೆಗೆ ಎದ್ದು ಕೆಲ ಹೊತ್ತು ಬ್ಯಾರಕ್‌ನಲ್ಲಿ ವಾಕಿಂಗ್ ಮಾಡಿದ್ದಾರೆ. ಕೊಠಡಿಯಲ್ಲಿದ್ದ ದೇವರ ಪೋಟೋಗೆ ಪೂಜೆ ಮಾಡಿದ್ದಾರೆ. ಜೈಲು ಸಿಬ್ಬಂದಿ ನೀಡಿದ ಚಹಾವನ್ನು ಕುಡಿದು ರಿಲ್ಯಾಕ್ಸ್ ಆಗಿದ್ದು, ದಿನಪತ್ರಿಕೆ ಓದಿ ವಿದ್ಯಮಾನಗಳ ಕಡೆ ಕಣ್ಣಾಡಿಸಿದ್ದಾರೆ.

ಜೈಲಿಗೆ ಬಂದ ದಿನದಿಂದ ಮೌನಕ್ಕೆ ಜಾರಿದ್ದ ರೇವಣ್ಣ, ಆಪ್ತರ ಭೇಟಿ ವೇಳೆ ಕಣ್ಣೀರು ಹಾಕಿ ನೋವನ್ನು ಹೇಳಿಕೊಳ್ಳುತ್ತಿದ್ದರು. ಆರು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸಿರುವ ಅವರಿಗೆ ನ್ಯಾಯಾಲಯ ಕೊನೆಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇಂದು ರೇವಣ್ಣ ಅವರು ಪರಪ್ಪನ ಅಗ್ರಹರ ‌ಜೈಲಿನಿಂದ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲು ಬಳಿ ಸೇರುವ‌ ಸಾಧ್ಯತೆ ಇದೆ. ಹೀಗಾಗಿ ಜೈಲಿನ ರಸ್ತೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇಬ್ಬರು ಎಸಿಪಿ, 6 ಜನ ಇನ್ಸ್ಪೆಕ್ಟರ್, 15 ಜನ‌ ಸಬ್ ಇನ್ಸ್ಪೆಕ್ಟರ್ ಸೇರಿ 200 ಸಿಬ್ಬಂದಿಯಿಂದ‌ ಭದ್ರತೆ ಒದಗಿಸಲಾಗಿದೆ. 12 ಗಂಟೆ ಒಳಗೆ ಕೋರ್ಟ್ ‌ಜಾಮೀನು ಪ್ರಕ್ರಿಯೆ ಮುಗಿಸಿ ರೇವಣ್ಣ ಪರ ವಕೀಲರು ಜಾಮೀನು ‌ಪ್ರತಿ ಪಡೆಯಲಿದ್ದು, 1‌ ಗಂಟೆಯೊಳಗೆ ಜಾಮೀನು ‌ಪ್ರತಿಯನ್ನು ಜೈಲು ತಲುಪಿಸುವ ಸಾಧ್ಯತೆ ಇದೆಯೆಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣಗೆ ಜಾಮೀನು ಸಿಗುವುದಕ್ಕೆ ಕಾರಣಗಳೇನು?

  • ರೇವಣ್ಣ ಅವರೇ ಕಿಡ್ನ್ಯಾಪ್ ಮಾಡಿಸಿದ್ದು ಎನ್ನುವುದಕ್ಕೆ ಸಾಕ್ಷಿ ಇಲ್ಲ.
  • ಸಿಆರ್‌ಪಿಸಿ ಅಡಿ ಸಂತ್ರಸ್ತೆ ನೀಡಿದ್ದ ಹೇಳಿಕೆಯಲ್ಲೂ ಪ್ರಸ್ತಾಪ ಇಲ್ಲ.
  • ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಸಾಕ್ಷಿ ಒದಗಿಸಲು ಎಸ್‌ಐಟಿ ವಿಫಲವಾಗಿದೆ.
  • ಎಚ್‌.ಡಿ. ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್ ಅನ್ನಲು ಸಾಕ್ಷಿ ಇಲ್ಲ.

ರೇವಣ್ಣ ಅವರಿಗೆ ಏಕೆ ಜಾಮೀನು ಕೊಡಲಾಗುತ್ತಿದೆ ಎಂಬುದಾಗಿ ಈ ಮೇಲಿನ ಕಾರಣಗಳನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ಪಷ್ಟವಾಗಿ ಆದೇಶಿಸಿದ್ದಾರೆ. ಆದರೆ, ಕೆಲವು ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

8 ಷರತ್ತುಗಳನ್ನು ವಿಧಿಸಿ ಬೇಲ್ ಕೊಟ್ಟ ಕೋರ್ಟ್!

  1. 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಕೊಡಬೇಕು
  2. ಇಬ್ಬರ ಶ್ಯೂರಿಟಿಯನ್ನು ಒದಗಿಸಿಕೊಡಬೇಕು
  3. ಯಾವ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದು
  4. ಕೇಸ್ ಆಗಿರುವ ಕೆ.ಆರ್.ನಗರಕ್ಕೆ ಹೋಗಬಾರದು
  5. ಎಸ್‌ಐಟಿ ತನಿಖೆಗೆ ಸೂಕ್ತ ಸಹಕಾರ ನೀಡಲೇಬೇಕು
  6. ಯಾವುದೇ ರೀತಿಯ ಸಾಕ್ಷ್ಯ ನಾಶ ಮಾಡಬಾರದು
  7. ಪಾಸ್ ಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು.
  8. ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯದಿಂದ ಹೊರಹೋಗುವಂತಿಲ್ಲ.

ಸಂತ್ರಸ್ತೆ ಹೇಳಿಕೆಯ ವಿಡಿಯೊ ಪ್ರಸ್ತಾಪ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ವಾದ – ಪ್ರತಿವಾದಗಳು ನಡೆದಿವೆ. ಕಲಾಪ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, 2 ವಿಚಾರಗಳಿಗೆ ಸಂಬಂಧಿಸಿ ಆರೋಪಿಗೆ ಜಾಮೀನು ಕೊಡಬೇಡಿ. ಒಂದು ಪ್ರಕರಣದ ಗಂಭೀರತೆಯನ್ನು ನೋಡಬೇಕಿದ್ದು, ಇದರಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಕಿಡ್ನ್ಯಾಪ್ ಕೇಸಲ್ಲೂ ಈಗಾಗಲೇ 2ನೇ ಆರೋಪಿ ಹೇಳಿಕೆಯನ್ನು ಪಡೆಯಲಾಗಿದೆ. ಈ ನಡುವೆ ಸಂತ್ರಸ್ತೆಯ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಂತ್ರಸ್ತೆ ಸ್ಪಷ್ಟನೆ ನೀಡಿದ್ದಾರೆ ಎಂಬುದಾಗಿ ವಿಡಿಯೋ ವೈರಲ್ ಬಗ್ಗೆ ಕೋರ್ಟ್‌ಗೆ ಮಾಹಿತಿಯನ್ನು ನೀಡಿದರು.

ಮೊದಲು ತನಿಖಾ ವರದಿ ಕೊಡಿ ಎಂದ ನ್ಯಾಯಾಧೀಶರು

ಈ ವೇಳೆ ಮಧ್ಯಪ್ರವೇಶ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ತನಿಖಾಧಿಕಾರಿಯ ಇನ್‌ವೆಸ್ಟಿಗೇಷನ್‌ ರಿಪೋರ್ಟ್ ಅನ್ನು ಮೊದಲು ಸಲ್ಲಿಸಿ. ಕಿಡ್ನ್ಯಾಪ್ ಕೇಸ್‌ ಸಂಬಂಧ ಏನೇನು ವಿಚಾರಗಳು ನಡೆದಿವೆ ಎಂಬುದನ್ನು ತಿಳಿಯಬೇಕು ಎಂದು ಎಸ್‌ಪಿಪಿಗೆ ಸೂಚಿಸಿದರು. ಆಗ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್‌, ತನಿಖಾ ವರದಿಯನ್ನು ನಮಗೂ ಕೊಟ್ಟಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ಇನ್‌ವೆಸ್ಟಿಗೇಷನ್ ರಿಪೋರ್ಟ್‌ ಅನ್ನು ಸಲ್ಲಿಸಲಾಯಿತು. ಇದಕ್ಕೆ ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ರಿಂದ ಆಕ್ಷೇಪ ವ್ಯಕ್ತವಾಯಿತು. ಬಳಿಕ ತಮಗೂ ಒಂದು ಕಾಪಿ ನೀಡಲು ಕೇಳಿದ್ದು, ಅವರಿಗೂ ಒಂದು ಪ್ರತಿಯನ್ನು ನೀಡಲಾಯಿತು.

ಸಿ.ವಿ.ನಾಗೇಶ್ ವಾದ

ಇಬ್ಬರೂ ಎಸ್‌ಪಿಪಿಗಳ ವಾದ ಮಂಡನೆ ನಂತರ ಸಿ.ವಿ. ನಾಗೇಶ್ ವಾದವನ್ನು ಆರಂಭಿಸಿದರು. ಏಪ್ರಿಲ್ 29ಕ್ಕೆ ಕಿಡ್ನ್ಯಾಪ್ ಮಾಡಿದರೆ, ದೂರು ಕೊಡಲು ತಡ ಯಾಕೆ ಮಾಡಿದರು? ಸಂತ್ರಸ್ತ ಮಹಿಳೆ ಎಚ್.ಡಿ.ರೇವಣ್ಣ ಅವರ ಸಂಬಂಧಿಯಾಗಿದ್ದಾರೆ. ಸುಮಾರು ವರ್ಷ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಕೆಲಸ ಮಾಡಿದ್ದವರನ್ನು ಯಾಕೆ ಕಿಡ್ನ್ಯಾಪ್ ಮಾಡಬೇಕು? ಮನೆ ಕೆಲಸ ಮಾಡುತ್ತಿದ್ದರಲ್ಲ, ಕರೆದುಕೊಂಡು ಬನ್ನಿ ಅಂದಿರಬಹುದು. ಇಲ್ಲಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರೇವಣ್ಣ ಅರೆಸ್ಟ್ ಆದ ದಿನವೇ ಸಂತ್ರಸ್ತೆ ಮಹಿಳೆ ಹುಣಸೂರಿನಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಹುಣಸೂರು ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಪತ್ತೆ ಆಗಿದ್ದರು. ಸಂತ್ರಸ್ತ ಮಹಿಳೆ ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರ ಆರೋಪಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆ ಮಹಿಳೆ ಯಾವುದೇ ಆರೋಪವನ್ನು ಮಾಡಿಲ್ಲ ಎಂದು ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಸಂತ್ರಸ್ತ ಮಹಿಳೆಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಆರೋಪದ ಬಗ್ಗೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯು ಸಿಆರ್‌ಪಿಸಿ 161 ಅಡಿಯಲ್ಲಿ ಹೇಳಿಕೆ ನೀಡುವಾಗ, ಕೇವಲ ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಅಂತಾ ಆರೋಪ ಮಾಡಿದ್ದಾಳೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಎರಡು ರಿಮ್ಯಾಂಡ್‌ ಅರ್ಜಿ ಸಲ್ಲಿಕೆಯಾಗಿದೆ. ಕಿಡ್ನ್ಯಾಪ್ ಮಾಡಿದ್ದಾರೆ ಅಂತಾ ಮಹಿಳೆಯ ಮಗನಿಗೆ ಹೇಗೆ ಗೊತ್ತಾಯ್ತು? ಅದು ಊಹೆಯಷ್ಟೇ. ಸಂತ್ರಸ್ತೆಯ ಮಗನಿಗೆ ಯಾರೂ ಕಾಲ್ ಮಾಡಿ ಡಿಮ್ಯಾಂಡ್ ಮಾಡಿಲ್ಲ. ಇನ್ನು ಸಂತ್ರಸ್ತ ಮಹಿಳೆಯನ್ನು ಅಂದು ಹುಣಸೂರಿನ ಬಳಿ ರಕ್ಷಣೆ ಮಾಡಲಾಗಿದೆ. ಆಪ್ತ ಸಮಾಲೋಚನೆ ಮಾಡಿ, ಆಕೆಯನ್ನು ಸುರಕ್ಷಿತ ಕೊಠಡಿಯಲ್ಲಿಡಲಾಗಿದೆ. ಈ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಲ್ಲ ಏಕೆ? ಇಲ್ಲಿಯ ತನಕ ರೇವಣ್ಣ ವಿರುದ್ಧ ಯಾವುದೇ ಸಾಕ್ಷಿಯನ್ನೂ ಸಂಗ್ರಹಿಸಿಲ್ಲ, ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿಲ್ಲ. ಸಂತ್ರಸ್ತ ಮಹಿಳೆಯನ್ನು ಕೇವಲ ಆಪ್ತ ಸಮಾಲೋಚನೆಯಲ್ಲಿ ಇರಿಸಿದ್ದಾರೆ ಎಂದು ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಸಂತ್ರಸ್ತ ಮಹಿಳೆಯನ್ನು ಹುಣಸೂರಿನ ತೋಟದಿಂದ ರಕ್ಷಣೆ ಮಾಡಿದರಾ? ಎಸ್‌ಐಟಿ ಎಲ್ಲಿಂದ ಮಹಿಳೆಯನ್ನು ಕರೆತಂದರು? ಅವರ ಸಂಬಂಧಿಕರ ಮನೆಯಿಂದ ಸಂತ್ರಸ್ತೆಯನ್ನು ಕರೆ ತಂದಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಎರಡು ಕಡೆ ರೆಕಾರ್ಡ್ ಆಗಿದೆ. ಒಂದು ಕಡೆ ಫೋಟೋ ಶಾಪ್‌ವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ತರಕಾರಿ ಅಂಗಡಿ ಸಿಸಿ ಕ್ಯಾಮರಾದಲ್ಲಿ ಇದು ಸೆರೆಯಾಗಿದೆ. ಅನುಮತಿ ನೀಡಿದರೆ ಸೆರೆಯಾಗಿರುವ ದೃಶ್ಯವನ್ನು ತೋರಿಸಲು ನಾವು ಸಿದ್ಧ. ಈಗ ನ್ಯಾಯಾಲಯದಲ್ಲಿಯೇ ಪ್ಲೇ ಮಾಡುತ್ತೇವೆ. ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ ವಿರುದ್ಧವೇ ಸಿ.ವಿ. ನಾಗೇಶ್ ಆರೋಪಿಸಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್‌ಐಟಿಯವರೇ ಟ್ಯಾಂಪರಿಂಗ್ ಮಾಡುತ್ತಿದ್ದಾರೆ. ಆದರೆ, ಎಸ್‌ಪಿಪಿಯವರು ಸಂತ್ರಸ್ತೆ ಹೇಳಿಕೆಯನ್ನು ಟ್ಯಾಂಪರಿಂಗ್ ಆಗಿದೆ ಎಂದು ಹೇಳಿದ್ದಾರೆ. ವೈರಲ್ ಆದ ಸ್ಪಷ್ಟನೆ ವಿಡಿಯೊದಲ್ಲಿ ಸಂತ್ರಸ್ತೆಯೇ ಹೇಳಿಕೊಂಡಿದ್ದಾರೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲವೆಂದಿದ್ದಾರೆ. ನಮ್ಮ ಕುಟುಂಬಕ್ಕೆ ತೊಂದರೆಯಾದರೆ ಅವರೇ ಹೊಣೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸಂಬಂಧಿಕರ ಮನೆಯಲ್ಲಿದ್ದೇನೆ. ಬೇಗ ಬರುತ್ತೇನೆ ಎಂದೂ ಹೇಳಿದ್ದಾರೆ. ಯಾರೂ ಬೆದರಿಕೆ ಹಾಕಿಲ್ಲ, ಬಲವಂತವಾಗಿಯೂ ಕರೆದೊಯ್ದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೀಗೆಲ್ಲಾ ಸಂತ್ರಸ್ತೆಯೇ ವಿಡಿಯೊ ಮೂಲಕ ಹೇಳಿದ್ದಾರೆ. ಹಾಗಾಗಿ ಕಿಡ್ನ್ಯಾಪ್ ಹೇಗೆ ಆಗುತ್ತದೆ. ಈ ಕಾರಣಕ್ಕಾಗಿ ರೇವಣ್ಣ ಅವರಿಗೆ ಜಾಮೀನು ನೀಡಬೇಕು ಎಂದು ಸಿ.ವಿ. ನಾಗೇಶ್‌ ಕೋರಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಚುನಾವಣಾ ತಕರಾರು ಅರ್ಜಿ ತರುವುದು ಬೇಡ. ಎಸ್‌ಪಿಪಿ ವಾದದ ಅಂಶಗಳನ್ನು ಆಕ್ಷೇಪಿಸಿ ರೇವಣ್ಣ ಪರ ವಕೀಲರು ವಾದ ಮಂಡಿಸಿದರು. ಎಚ್.ಡಿ.ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಸಾಬೀತಾಗಿಲ್ಲ. ಹಿಂದಿನ ಕೇಸ್‌ಗಳು ಸಾಬೀತಾಗಿದ್ದರೆ ಯಾಕೆ ಎಲ್ಲವೂ ಬಿ ರಿಪೋರ್ಟ್ ಆಗುತ್ತಿತ್ತು? ಎಂದು ಪ್ರಶ್ನೆ ಮಾಡಿದರು.

ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಎಸ್‌ಐಟಿ ಲೋಪವೆಸಗಿದೆ. ಅದರಲ್ಲಿ ಸಂತ್ರಸ್ತೆಯ ಹೇಳಿಕೆ ಒಂದು ಪ್ಯಾರಾ ಇದೆ. ಅದು ಬಿಟ್ಟು ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಆರೋಪಿ ಹೇಳಿಕೆಯೇ ಇದೆ. ಸಂತ್ರಸ್ತ ಮಹಿಳೆಯ ಹೇಳಿಕೆ ಒಂದು ಪ್ಯಾರಾ ಬಿಟ್ಟರೆ ಬೇರೆ ಇಲ್ಲವೇ ಇಲ್ಲ. ಯಾವಾಗಲೂ ಹೇಳಿಕೆ ದಾಖಲು ಮಾಡಿಕೊಳ್ಳುವುದೇ ಎಸ್‌ಐಟಿ ಕೆಲಸನಾ? ಸಂತ್ರಸ್ತೆ ಏನು ಹೇಳ್ತಾರೆ? ಏನು ಹೇಳಲ್ಲ ಅಂತಾ ಹೇಳಿಕೆ ದಾಖಲಾಗಬೇಕು. ಆಕೆ ಎಸ್‌ಐಟಿ ಸುಪರ್ದಿಯಲ್ಲಿರುವಾಗ ಏನನ್ನೂ ಮಾಡಿಲ್ಲ. ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿರುವಂತೆ ಯಾವುದೇ ಸಾಕ್ಷಿ ಸಂಗ್ರಹಿಸಿಲ್ಲ. ಆದರೆ, ನ್ಯಾಯಾಲಯಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಿದ್ದಾರೆ ಎಂದು ನಾಗೇಶ್ ಹೇಳಿದರು.

ಇದನ್ನೂ ಓದಿ: Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Prajwal Revanna Case: ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ ಅಮ್ಮ-ಮಗ ಎಸ್ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ(Prajwal Revanna Case), ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಆದ್ದರಿಂದ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಪ್ರಜ್ವಲ್ ಹಾಜರಾಗಲಿದ್ದಾರೆ ಎನ್ನಲಾಗಿದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.

ಇದನ್ನೂ ಓದಿ | Prajwal Revanna Case: ರೇವಣ್ಣಗೆ ಜಾಮೀನು; ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ವಶಕ್ಕೆ

ಹಾಸನ, ಹೊಳೆನರಸೀಪುರ ನಿವಾಸದಲ್ಲಿ ಎಫ್ಎಸ್ಎಲ್ ತಜ್ಞರ ಪರಿಶೀಲನೆ

ಹಾಸನ: ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ಪ್ರಕರಣದ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕಲು ಹಾಸನ ಸಂಸದರ ನಿವಾಸ ಹಾಗೂ ಹೊಳೆನರಸೀಪುರದ ರೇವಣ್ಣ ಅವರ ನಿವಾಸದಲ್ಲಿ ಎಫ್‌ಎಸ್‌ಎಲ್ ತಂಡದೊಂದಿಗೆ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಹಾಸನದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಲಾಗಿದ್ದು, ಅತ್ಯಾಚಾರ ಆರೋಪ ಕುರಿತು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ನಂತರ ಹೊಳೆನರಸೀಪುರದ ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ತೆರಳಿದರು. ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇನ್ಸ್‌ಪೆಕ್ಟರ್ ಸ್ಚರ್ಣ ನೇತೃತ್ವದ ತಂಡ ಪರಿಶೀಲನೆ ನಡೆಸಿತು.

ಹಾಸನ ಸಂಸದರ ನಿವಾಸ ಹಾಗೂ ಹೊಳೆನರಸೀಪುರ ನಿವಾಸದಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದರಿಂದ ಎರಡೂ ಕಡೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

Continue Reading
Advertisement
Federation Cup
ಕ್ರೀಡೆ3 mins ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ9 mins ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

IPL 2024 Points Table
ಕ್ರೀಡೆ27 mins ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

jayanagar murder case
ಕ್ರೈಂ31 mins ago

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Viral News
ದೇಶ1 hour ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ1 hour ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Kalki 2898 AD
ಸಿನಿಮಾ1 hour ago

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

mumbai hoarding collapse
ಪ್ರಮುಖ ಸುದ್ದಿ2 hours ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ2 hours ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

king dasharatha dhavala dharini
ಅಂಕಣ2 hours ago

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ14 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ15 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ16 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ16 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ22 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌