Ram Navami 2023 : ರಾಮಾ ಮನೋಹರನೆ ದೀನ ಪತಿತಪಾವನ... - Vistara News

ಧಾರ್ಮಿಕ

Ram Navami 2023 : ರಾಮಾ ಮನೋಹರನೆ ದೀನ ಪತಿತಪಾವನ…

ರಾಮನವಮಿಯ (Ram Navami 2023) ದಿನ ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಗುಣಗಳನ್ನು ಅರಿತು ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ಈ ಕುರಿತ ಲೇಖನ ಇಲ್ಲಿದೆ.

VISTARANEWS.COM


on

The story of a Perfect man and god lord sri rama
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಪ್ರೀತಾ ಬಿ. ಎಸ್‌.
ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ (Ram Navami 2023), ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನ. ತಂದೆ ದಶರಥ ಮಹಾರಾಜನು ಮಕ್ಕಳಿಲ್ಲದೇ ಪುತ್ರಕಾಮೇಷ್ಟಿ ಯಾಗವನ್ನು ಮಾಡಿದಾಗ, ಈ ಯಜ್ಞದಿಂದ ಸಂತುಷ್ಟನಾದ ಪ್ರಜಾಪತಿಯು ದಶರಥನಿಗೆ ಪಾಯಸವನ್ನು ನೀಡುತ್ತಾನೆ. ಈ ಪಾಯಸವನ್ನು ದಶರಥನು ತನ್ನ ಮೂವರು ಪತ್ನಿಯರಿಗೂ ನೀಡುತ್ತಾನೆ. ಇದರಂತೆ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಮಧ್ಯಾಹ್ನ ಪುನರ್ವಸು ನಕ್ಷತ್ರದಲ್ಲಿ ಕೌಸಲ್ಯೆಗೆ ರಾಮನೂ, ಪುಷ್ಯನಕ್ಷತ್ರದ ದಶಮಿಯಂದು ಸೂರ್ಯೋದಯಕ್ಕೆ ಮುನ್ನ ಕೈಕೇಯಿಗೆ ಭರತನೂ, ಅದೇ ದಿನ ಆಶ್ಲೇಷಾ ನಕ್ಷತ್ರದಲ್ಲಿ ಮಧ್ಯಾಹ್ನ ಲಕ್ಷ್ಮಣ, ಶತ್ರುಘ್ನರೂ ಜನಿಸುತ್ತಾರೆ. ಹೀಗೆ ರಾಮನು ಜನಿಸಿದ ನವಮಿಯಂದು ರಾಮನವಮಿಯನ್ನಾಗಿ ಆಚರಿಸುತ್ತಾರೆ.

ರಾಮ ಎನ್ನುವ ಎರಡು ಅಕ್ಷರದಲ್ಲಿ ಮಹತ್ವಪೂರ್ಣವಾದ ಅರ್ಥವಿದೆ ‘ರಾ’ ಎಂದರೆ ಬೆಳಕು ‘ಮ’ ಎಂದರೆ ಒಳಗೆ. ಅಂದರೆ ನಮ್ಮೊಳಗಿನ ದೈವಿಕ ಬೆಳಕು ರಾಮ. ರಾಮನೊಬ್ಬನ ಮೂರ್ತಿಗೆ ಪೂಜೆ ಅಪರೂಪ. ಎಡಕ್ಕೆ ಸೀತೆ, ಬಲಕ್ಕೆ ಲಕ್ಷ್ಮಣ, ಕಾಲ ಕೆಳಗೆ ಹನುಮಂತ.

ರಾವಣನು ಘೋರ ತಪಸ್ಸನ್ನು ಮಾಡಿ, ರಾಕ್ಷಸರೂ, ಯಕ್ಷಕನ್ಯೆಯರಿಂದಲೂ ಸಾವು ಬರಬಾರದೆಂದು ಬ್ರಹ್ಮನಿಂದ ವರವನ್ನು ಪಡೆಯುತ್ತಾನೆ. ಹೀಗೆ ವರ ಪಡೆದು ಸಹಚರ ರಾಕ್ಷಸರೊಡಗೂಡಿ ಭೂಸಂಹಾರಕ್ಕೆ ತೊಡಗಿ, ಜನರಿಗೆ ತೊಂದರೆ ಕೊಡುತ್ತಾ, ಹೋಮಹವನಗಳಿಗೆ ಹವಿಸ್ಸನ್ನು ಕೊಡದಂತೆ ತಡೆದಾಗ, ದೇವತೆಗಳು ವಿಷ್ಣುವಿನ ಮೊರೆ ಹೊಕ್ಕಿ, ಸಾಕ್ಷಾತ್ ವಿಷ್ಣು ದೇವನೇ 7 ನೇ ಅವತಾರವಾಗಿ “ರಾಮ” ನಾಗಿ ಭೂಲೋಕದಲ್ಲಿ ಅವತಾರ ತಾಳಿದನು. ರಾಮ ಸಾಗಿದ ಮಾರ್ಗ, ಎತ್ತಿ ಹಿಡಿದ ಆದರ್ಶ ಮತ್ತು ಅವನು ಅನುಸರಿಸಿದ ಮಾರ್ಗಗಳು ಸರ್ವಕಾಲಕ್ಕೂ ಶಾಶ್ವತ ಮತ್ತು ಲೋಕಾತೀತವಾಗಿದೆ. ರಾಮ ಏಕೆ ಮತ್ತು ಹೇಗೆ ನಮಗೆ ಆದರ್ಶ? ವಾಲ್ಮೀಕಿ ಮಹರ್ಷಿಗಳು ನಾರದರನ್ನು ಹೀಗೆ ಕೇಳುತ್ತಾರೆ;

“ಈ ಲೋಕದಲ್ಲಿ ಈಗ ಸಕಲ ಸದ್ಗುಣ ಸಂಪನ್ನ, ಪರಾಕ್ರಮಶಾಲಿ, ಧರ್ಮಜ್ಞ, ಸತ್ಯದ ವ್ರತ ಹಿಡಿದವನು, ಮಾಡಿದ ಸಂಕಲ್ಪವನ್ನು ಬಿಡದವನು, ಪರಂಪರೆಯಾಗಿ ಬಂದ ಸದಾಚಾರ ಸಂಪನ್ನ, ಸರ್ವಶಾಸ್ತ್ರಗಳನ್ನು ಬಲ್ಲವನು, ಸರ್ವ ಕಾರ್ಯ ದುರಂಧರ, ಪ್ರಿಯದರ್ಶನ, ಧೈರ್ಯಶಾಲಿ, ಕೋಪವನ್ನು ಜಯಿಸಿದವನು, ಅಹಂಕಾರ ರಹಿತನು, ಅಸೂಯೆ ಇಲ್ಲದವನು, ಯುದ್ಧಕ್ಕೆ ನಿಂತರೆ ದೇವತೆಗಳನ್ನೇ ಗೆಲ್ಲಬಲ್ಲವನು ಇದ್ದಾನೆಯೇ? – ಈ ಗುಣಗಳಿಂದ ಕೂಡಿದಂಥವ ಈಗ ಲೋಕದಲ್ಲಿ ಇದ್ದರೆ ದಯವಿಟ್ಟು ತಿಳಿಸಿ.” ವಾಲ್ಮೀಕಿಗಳ ಈ ಪ್ರಶ್ನೆಯನ್ನು ಕೇಳಿದ ನಾರದರು ಸಂತೋಷದಿಂದ ವಾಲ್ಮೀಕಿಗಳಿಗೆ “ನೀವು ಕೇಳುವಂತೆ ಸಕಲ ಗುಣಗಳಿಂದ ಕೂಡಿದವನು ಇದ್ದಾನೆ. ಅವನೇ ಇಕ್ಷ್ವಾಕು ವಂಶದಲ್ಲಿ ಅವತರಿಸಿದ ಶ್ರೀರಾಮ” ಎಂದು ಶ್ರೀರಾಮನ ಕಥೆಯನ್ನು ವಿವರಿಸುತ್ತಾರೆ.

ಅಗಣಿತ ಗುಣ ಸಂಪನ್ನ

ರಾಮಾಯಣವನ್ನು ಒಪ್ಪದೇ ಇದ್ದವರು, ಸರಿಯಾಗಿ ಓದದೇ ಬರೀ ಕೊಂಕು ನುಡಿಯುವರು ಇದಕ್ಕೆ ತಗಾದೆ ಎತ್ತುತ್ತಾರೆ. ಧರ್ಮವನ್ನು ಸಂಸ್ಥಾಪಿಸಲು ಅವತಾರವೆತ್ತಿದ ಶ್ರೀರಾಮ, ಕೈಕೇಯಿಗೆ ವನವಾಸಕ್ಕೆ ಹೋಗುವ ಮುಂಚೆ ಹೀಗೆ ಹೇಳುತ್ತಾನೆ “ನನಗೆ ಹಣ, ರಾಜ್ಯ, ಭೋಗ, ಭಾಗ್ಯ ಇವೆಲ್ಲದರ ಚಿಂತೆ ಇಲ್ಲ. ಧರ್ಮಾಚರಣೆಯೇ ನನ್ನ ವ್ರತ”. ಬ್ರಹ್ಮಚರ್ಯ ನಿಷ್ಠೆಯಿಂದ ಕೂಡಿದವನು ಇವನು. ತಂದೆಯ ಮಾತಿಗೆ ಬೆಲೆಕೊಟ್ಟು , ವನವಾಸಕ್ಕೆ ಹೋದವ. ಧೈರ್ಯವಂತ, ವಿದ್ವಾಂಸನಾಗಿರುವವನು. ಸರ್ವಶಾಸ್ತ್ರಗಳನ್ನೂ ತಿಳಿದವನು ಮಾತ್ರವಲ್ಲ ಅವೆಲ್ಲವನ್ನೂ ಯಥಾವತ್ತಾಗಿ ಅನುಷ್ಟಾನಕ್ಕೆ ತಂದಿರುವಂಥವನು, ಕೋಪಗೊಳ್ಳದವನು, ಎಂಥ ಕಷ್ಟಕಾರ್ಯವನ್ನಾದರೂ ಸಾಧಿಸುವಂತಹ ಧೃತಿಯುಳ್ಳವನು.

ಇನ್ನೂ ಕೆಲವರು ರಾಮ ತನ್ನ ಪತ್ನಿಯ ಮೇಲೆ ಸಂದೇಹ ಪಟ್ಟ ವ್ಯಕ್ತಿ. ಕಾಡಿಗಟ್ಟಿದವ ಎಂದೆಲ್ಲಾ ಹೇಳಿ ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ. ಅಷ್ಟೇ ಏಕೆ ನೀವು ರವಿಚಂದ್ರನ್ ಅಭಿನಯದ ನಾನು ನನ್ನ ಹೆಂಡ್ತೀರು ಚಿತ್ರವನ್ನು ನೋಡಿದರೆ ಅಲ್ಲಿ ಈ ಮಾತುಗಳು ಬರುತ್ತವೆ. ರಾಮನು ಸಂದೇಹದಿಂದ ಸೀತೆಯನ್ನು ಅಗ್ನಿ ಪರೀಕ್ಷೆಗೆ ಗುರಿಪಡಿಸಲಿಲ್ಲ. ಸರ್ವವನ್ನು ತಿಳಿದ ರಾಮನಿಗೆ ಹೆಂಡತಿಯ ಮೇಲೆ ಅನುಮಾನವೇ ? ಕೇವಲ ಮಾತಿನಲ್ಲಿ ಅವಳು ಶ್ರೇಷ್ಟವೆಂದು ಹೇಳದೇ ವಿಶ್ವಕ್ಕೆ ಅವಳು ಮಹಾಪತಿವ್ರತೆ ಎಂದು ಸಾರಲು ಈ ರೀತಿ ಮಾಡಿದನು. ಅವಳನ್ನು ಪರೀಕ್ಷೆಗೆ ಒಳಪಡಿಸದಿದ್ದ. ರಾಮ ಹುಟ್ಟಿದ್ದೇ ರಾವಣನ ಸಂಹರಿಸಲು, ಧರ್ಮ ಮರುಸ್ಥಾಪಿಸಲು. ಹೀಗಾಗಿಯೇ ಸೀತೆಯು ಮಾಯಾಜಿಂಕೆಗೆ ಮೋಹಿತಳಾಗುವುದು, ರಾಮ ಜಿಂಕೆಯನ್ನು ಬೆನ್ನಟ್ಟಿದಾಗ ಸೀತೆಯನ್ನು ರಾವಣ ಅಪಹರಿಸುವುದು ಎಲ್ಲವೂ. ರಾಮ ರಾವಣ ಯುದ್ಧವಾಗುವುದೂ, ಬರುವ ಪಾತ್ರಗಳಾದ ಹನುಮ, ಸುಗ್ರೀವ, ವಾಲಿ, ಶಬರಿ, ಲಕ್ಷ್ಮಣ, ಹೀಗೆ ಎಲ್ಲಾ ಪಾತ್ರಗಳಲ್ಲಿಯೂ ನಾವು ಅನುಸರಿಸಬೇಕಾದ ಒಂದು ಆದರ್ಶ ಗುಣವಿದೆ. ಮೂಲ ರಾಮಾಯಣವನ್ನು ಓದಿದಾಗ ಮಾತ್ರ ತಿಳುವಳಿಕೆ ಸಾಧ್ಯ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ರಾಮನವಮಿ ಆಚರಣೆ ಹೇಗೆ?

ಚೈತ್ರ ಮಾಸದ ಪಾಡ್ಯದಿಂದ ಆರಂಭಿಸಿ ಒಂಬತ್ತು ದಿನಗಳವರೆಗೆ ರಾಮನವಮಿ ಉತ್ಸವವು ನಡೆಯುತ್ತದೆ. ರಾಮನವಮಿಯಂದು ಶ್ರೀರಾಮನನ್ನು ಪೂಜಿಸಿ, ಅರ್ಚಿಸಲಾಗುತ್ತದೆ. ಈ ದಿನದಂದು ಉಪವಾಸವನ್ನು, ಅಥವಾ ಫಲಾಹಾರವನ್ನು ಮಾತ್ರ ಸೇವಿಸಲಾಗುತ್ತದೆ. ದೇವಸ್ಥಾನಗಳಲ್ಲಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ.

ಕೆಲವು ಭಾಗಗಳಲ್ಲಿ ಸೀತಾ ಕಲ್ಯಾಣ ಮಾಡುವ ಪದ್ಧತಿಯೂ ಇದೆ . ಕೊನೆಯ ಮಾತು : ಶ್ರೀರಾಮಚಂದ್ರ ಹೇಳುವಂತೆ “ಅಭಯಂ ಸರ್ವ ಭೂತೇಭ್ಯೋ ದದಾಮಿ ಏತದ್ ವ್ರತಂ ಮಮಃ” ಅಂದರೆ ‘ಯಾರು ನನ್ನಲ್ಲಿ ಶರಣು ಕೋರಿ ಬರುತ್ತಾರೋ ಅವರಿಗೆ ಜಗತ್ತಿನಿಂದ ರಕ್ಷಣೆ ಕೊಡುವುದು ನನ್ನ ಕರ್ತವ್ಯ ‘ ಎಂದು ರಾಮನೇ ಹೇಳಿದ್ದಾನೆ. ಅಂತಹ ರಾಮ ನಾಮವನ್ನು ಭಜಿಸುತ್ತಾ, ರಾಮನ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾ ರಾಮನವಮಿಯನ್ನು ಆಚರಿಸೋಣ.
ಎಲ್ಲರಿಗೂ ರಾಮ ನವಮಿಯ ಶುಭಾಶಯಗಳು!

ಇದನ್ನೂ ಓದಿ : Ram Navami 2023 : ರಾಮನವಮಿಯಂದು ಶ್ರೀರಾಮನ ಪೂಜೆ ಎಷ್ಟು ಹೊತ್ತಿಗೆ? ಆಚರಣೆ ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
woman assault case haveri
ಕ್ರೈಂ3 mins ago

Assault Case: ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿತ

West Bengal Governor
ದೇಶ12 mins ago

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

T20 World Cup 2024
ಕ್ರೀಡೆ27 mins ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

Actor Darshan React about Kaatera 2
ಸ್ಯಾಂಡಲ್ ವುಡ್30 mins ago

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

KSET Exam 2023 provisional score list
ಪ್ರಮುಖ ಸುದ್ದಿ48 mins ago

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Amith Shah
Lok Sabha Election 202452 mins ago

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

IPL 2024 Points Table
ಕ್ರೀಡೆ54 mins ago

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

Lok sabha Election 2024
ದೇಶ56 mins ago

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Kaatera  Movie Rockline Venkatesh Gifts Car To Jadesh K Hampi Maasthi And Suraj
ಸ್ಯಾಂಡಲ್ ವುಡ್58 mins ago

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Lok sabha Election
ದೇಶ1 hour ago

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ15 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌