Road accident : ಹಿರಿಯೂರು ಬಳಿ ಬಸ್‌, ಟಾಟಾ ಏಸ್‌, ಲಾರಿಗಳ ಸರಣಿ ಅಪಘಾತ; ಒಬ್ಬ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ - Vistara News

ಕರ್ನಾಟಕ

Road accident : ಹಿರಿಯೂರು ಬಳಿ ಬಸ್‌, ಟಾಟಾ ಏಸ್‌, ಲಾರಿಗಳ ಸರಣಿ ಅಪಘಾತ; ಒಬ್ಬ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

serial accident : ಹಿರಿಯೂರು ಬಳಿ ಬಸ್‌, ಲಾರಿ, ಟಾಟಾ ಏಸ್‌ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Tata ace hiriyur accident
ಅಪಘಾತಕ್ಕೀಡಾದ ಟಾಟಾ ಏಸ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿರಿಯೂರು: ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆದಿವಾಲ ಬಳಿ ತಡರಾತ್ರಿ ಕೆಎಸ್ಸಾರ್ಟಿಸಿ ಬಸ್, ಟಾಟಾ ಏಸ್, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ, ಒಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಪಘಾತಕ್ಕೆ ಒಳಗಾದ ಬಸ್‌

ಮೃತಪಟ್ಟ ವ್ಯಕ್ತಿಯನ್ನು ಗದಗ ಟಾನ್ ನಿವಾಸಿ ಸೈಯದ್ ಮುಜಾಹಿದ್ದೀನ್ (40) ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗದಿಂದ ಬಸ್ ಬೆಂಗಳೂರು ಕಡೆ ಹೋಗುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಜಖಂಗೊಂಡಿರುವ ಲಾರಿ

ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಪ್ತಪದಿ ತುಳಿದ ಹತ್ತೇ ದಿನಕ್ಕೆ ಮಸಣ ಸೇರಿದ ನವ ದಂಪತಿ

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭೀಕರ ರಸ್ತೆ ಅಪಘಾತ (Road Accident) ನಡೆದಿದ್ದರಿಂದ ಸಪ್ತಪದಿ ತುಳಿದ ಹತ್ತೇ ದಿನಕ್ಕೆ ನವ ದಂಪತಿ ಮಸಣ ಸೇರಿದ್ದಾರೆ.

ಮಹಾರಾಷ್ಟ್ರ ಮೂಲದ ಇಂದ್ರಜಿತ್ ಮೋಹನ್ ಡಮ್ಮನಗಿ (27), ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ (24) ಮೃತರು. ನವ ದಂಪತಿ ಶನಿವಾರ ಕಾರಿನಲ್ಲಿ ಬಾದಾಮಿಯ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : Toll plazas : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಪ್ಲಾಜಾ ತೆರವು ಸಂಭವ, ಶುಲ್ಕ ಸಂಗ್ರಹ ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Darshan Arrested: ರೇಣುಕಾಸ್ವಾಮಿ ಕೊಲೆ ಕೇಸ್;‌ ಪವಿತ್ರಾ ಗೌಡಗೆ ಜೈಲು, ದರ್ಶನ್‌ ಪೊಲೀಸ್‌ ಕಸ್ಟಡಿಗೆ

Darshan Arrested: ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಅದರಂತೆ ನ್ಯಾಯಾಲಯವು ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ, ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದರು.

VISTARANEWS.COM


on

Darshan Arrested
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ (Renukaswamy Murder) ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Darshan Arrested) ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಇದಕ್ಕೆ ದರ್ಶನ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. “ಬಹುತೇಕ ವಿಚಾರಣೆ ಮುಗಿದಿದೆ. ಹಾಗಾಗಿ, ಪೊಲೀಸ್‌ ಕಸ್ಟಡಿಗೆ ನೀಡುವ ಅಗತ್ಯವಿಲ್ಲ” ಎಂದರು. ಆದರೆ, “ರೇಣುಕಾಸ್ವಾಮಿ ಮೊಬೈಲ್‌ ರಿಕವರಿ ಆಗಿಲ್ಲ. ಅದನ್ನು ಪತ್ತೆ ಹಚ್ಚಬೇಕಿದೆ. ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ದರ್ಶನ್, ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಹಾಗೂ ಧನರಾಜ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಿದರು.

Actor Darshan case reaction by umapathy d boss Fans violent

ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು, ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂಬುದಾಗಿ ಪೊಲೀಸರು ಎರಡು ಪ್ರತ್ಯೇಕ ರಿಮ್ಯಾಂಡ್‌ ಅಪ್ಲಿಕೇಷನ್‌ ಸಲ್ಲಿಸಿದ್ದರು. ಅದರಂತೆ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದರು. ಕೊನೆಗೆ ನ್ಯಾಯಾಲಯವು ಎಸ್‌ಪಿಪಿ ಅವರ ವಾದವನ್ನು ಪುರಸ್ಕರಿಸಿ ದರ್ಶನ್, ವಿನಯ್‌, ಪ್ರದೋಶ್, ನಾಗರಾಜ್, ಲಕ್ಷ್ಮಣ್‌, ಧನರಾಜ್‌ ಅವರ ಪೊಲೀಸ್‌ ಕಸ್ಟಡಿಯನ್ನು ಮುಂದುವರಿಸಿದರು. ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗುತ್ತದೆ.

ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಜೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲುಗಳು, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಒಂಬತ್ತು ದಿನಗಳ ಕಾಲ ದರ್ಶನ್‌ ಅಲಿಯಾಸ್‌ ಡಿ ಬಾಸ್‌ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾನೆ.

ಜೂನ್‌ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ಹತ್ಯೆ ಸಂಬಂಧ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿತ್ತು. ಜೈಲಿಗೆ ಕಳಿಸಿದರೆ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ ಹೋದಂತಾಗುತ್ತದೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ನಟ ದರ್ಶನ್‌ ಜೈಲು ಸೇರಿದ್ದ.

ಇದನ್ನೂ ಓದಿ: Actor Darshan: ಘಟಾನುಘಟಿಗಳ ಕಲಾವಿದರ ಜತೆ ʻದರ್ಶನ್‌ʼ ಕಿರಿಕ್‌ ಒಂದೆರಡಲ್ಲ; ದೂರಾದವರೆಷ್ಟು ಮಂದಿ?

Continue Reading

ಕರ್ನಾಟಕ

Road Construction: ವಿಶ್ವಬ್ಯಾಂಕ್‌ನಿಂದ ಸಾಲ ತಂದು ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ಸಿದ್ದರಾಮಯ್ಯ ಸರ್ಕಾರ ನಿರ್ಧಾರ

Road Construction: ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ರಾಜ್ಯದ 7,110 ರಸ್ತೆಗಳ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುಮಾರು 5,190 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ ಎಂಬುದಾಗಿ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ.ಪಾಟೀಲ್‌ ಅವರು ಮಾಹಿತಿ ನೀಡಿದರು.

VISTARANEWS.COM


on

Road Construction
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ, ವಿಶ್ವಬ್ಯಾಂಕ್‌ನಿಂದ ಸಾಲ ಪಡೆದು ಕರ್ನಾಟಕದ 7,110 ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲು (Road Construction) ತೀರ್ಮಾನಿಸಿರುವುದು ಪ್ರಮುಖ ಸಂಗತಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52 ಸಾವಿರ ಕೋಟಿ ರೂ. ವ್ಯಯಿಸುತ್ತಿರುವ ಮಧ್ಯೆಯೇ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವುದು ಉತ್ತಮ ತೀರ್ಮಾನವಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ.ಪಾಟೀಲ್‌ ಅವರು ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. “ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ರಾಜ್ಯದ 7,110 ರಸ್ತೆಗಳ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುಮಾರು 5,190 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಇದಕ್ಕಾಗಿ ವಿಶ್ವಬ್ಯಾಂಕ್‌ನಿಂದ ಸಾಲ ಪಡೆಯಲಾಗುತ್ತದೆ. ಎರಡು ವರ್ಷಗಳಲ್ಲಿ ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲಾಗುವುದು” ಎಂಬುದಾಗಿ ತಿಳಿಸಿದರು.

HK Patil

ಕಲಬುರಗಿಯಲ್ಲಿ ವಸತಿ ಯೋಜನೆ

“ಕಲಬುರಗಿಯ ಕುಸನೂರು ಗ್ರಾಮದಲ್ಲಿ ವಸತಿ ಬಡಾವಣೆ ನಿರ್ಮಿಸಲು ಕೂಡ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸುಮಾರು 132 ಕೋಟಿ ರೂ. ವೆಚ್ಚದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುತ್ತದೆ. ಇದರ ಜತೆಗೆ, ಆಸ್ತಿ ತೆರಿಗೆ, ನೀರಿನ ವಸೂಲಿಗೂ ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿವಿಧ ನಗರ ಪ್ರದೇಶಗಳಲ್ಲಿ ಆಸ್ತಿ, ನೀರಿನ ತೆರಿಗೆ ವಸೂಲಿ ಮಾಡಲಾಗುವುದು. ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಬರಲಿವೆ. ಸ್ವಸಹಾಯ ಗುಂಪುಗಳಿಗೆ ಇದರ ಜವಾಬ್ದಾರಿ ನೀಡಲಾಗಿದೆ” ಎಂದು ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದರು.

ನಡೆದ ಸಚಿವ ಸಂಪುಟ ಸಭೆಯಲ್ಲಿ (cabinet meeting) ಸಚಿವರ ಸಲಹೆಯನ್ನೂ ಮೀರಿ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ಸಿಎಂ ಒಲವು ತೋರಿದ್ದಾರೆ. ವೇತನ ಆಯೋಗದ ಶಿಫಾರಸುಗಳನ್ನು ಪೂರ್ಣಗೊಳಿಸುವ ಮಾತನ್ನಾಡಿರುವ ಸಿಎಂ ಸಿದ್ದರಾಮಯ್ಯ, 27%ರಷ್ಟು ವೇತನ ಹೆಚ್ಚಳ ಮಾಡಲು ಸೈ ಎಂದಿದ್ದಾರೆ. ನೌಕರರು ನಿರೀಕ್ಷೆ ಮಾಡಿದ ಹೆಚ್ಚಳ ಜಾರಿಯಾಗುವ ಸಾಧ್ಯತೆಯಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಂಪುಟ ಸಭೆ ಸಿಎಂಗೆ ಬಿಟ್ಟಿದೆ.

ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

Continue Reading

ಕೊಡಗು

Building Collapse : ಗೋಣಿಕೊಪ್ಪದಲ್ಲಿ ಏಕಾಏಕಿ ಕುಸಿದು ಬಿದ್ದ ಹೋಟೆಲ್‌ ಕಟ್ಟಡ; ಊಟಕ್ಕೆ ಬಂದವರು ನರಳಾಟ

Building Collapse : ಗೋಣಿಕೊಪ್ಪದಲ್ಲಿರುವ ಅಂಬೂರು ಬಿರಿಯಾನಿ ಸೆಂಟರ್ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

VISTARANEWS.COM


on

By

building collapses in Gonikoppa
Koo

ಕೊಡಗು: ಕೊಡಗಿನ ಗೋಣಿಕೊಪ್ಪಲು ಪಟ್ಟಣದಲ್ಲಿ (Gonikoppa News) ಏಕಾಏಕಿ ಕಟ್ಟಡವೊಂದು ಕುಸಿದು (Building Collapse) ಬಿದ್ದಿದೆ. ಕಟ್ಟಡದೊಳಗೆ ಹಲವರು ಸಿಲಿಕಿರುವ ಶಂಕೆ ಇದೆ. ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿದ್ದ ಅಂಬೂರು ಬಿರಿಯಾನಿ ಸೆಂಟರ್ ಇದ್ದ ಕಟ್ಟಡ ಕುಸಿದು ಬಿದ್ದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಕಟ್ಟಡದೊಳಗೆ ಸಿಲುಕಿಕೊಂಡಿರುವವರನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ನೆರೆದಿರುವ ನೂರಾರು ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕಟ್ಟಡದಡಿಯಲ್ಲಿ ಸಿಲುಕಿದ್ದ ಐವರನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಗೋಣಿಕೊಪ್ಪ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ಮುಂದುವರಿದಿದೆ. ಅಂಬೂರು ಬಿರಿಯಾನಿ ಸೆಂಟರ್‌ಗೆ ಮಧ್ಯಾಹ್ನ ಊಟಕ್ಕೆಂದು ಬಂದಿದ್ದಾಗ ಈ ದುರ್ಘಟನೆ ನಡೆದಿದೆ.

ಗೋಣಿಕೊಪ್ಪದ ಉತ್ತಯ, ತಿಮ್ಮಯ್ಯ ಇಬ್ಬರಿಗೆ ಸೇರಿದ ಕಟ್ಟಡ ಇದಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದ ಹಳೆಯದಾದ ಕಟ್ಟಡ‌ ಇದಾಗಿದೆ. ಗೋಣಿಕೊಪ್ಪ ಮೈಸೂರು ಮುಖ್ಯ ರಸ್ತೆ ಬಂದ್ ಮಾಡಿ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ. ಮುಖ್ಯ ರಸ್ತೆ ಬಂದ್‌ ಆಗಿರುವುದರಿಂದ ಬೈ ಪಾಸ್ ರಸ್ತೆ ಮೂಲಕ ವಾಹನಗಳು ಸಂಚರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

David Johnson: ಮೃತ ಡೇವಿಡ್ ಜಾನ್ಸನ್ ಯಾರು? ಇವರ ಕ್ರಿಕೆಟ್​ ಸಾಧನೆ ಏನು?

David Johnson: 90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಜಾನ್ಸನ್, 1995-96ರಲ್ಲಿ ಕೇರಳದ ವಿರುದ್ಧದ ಪಂದ್ಯದಲ್ಲಿ ಹತ್ತು ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 63ಕ್ಕೆ 6 ವಿಕೆಟ್​ ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 89ಕ್ಕೆ 4 ಕೆಡವಿದ್ದರು

VISTARANEWS.COM


on

David Johnson
Koo

ಬೆಂಗಳೂರು: ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕ ಮೂಲದ, ಟೀಮ್​ ಇಂಡಿಯಾ ಮಾಜಿ ಆಟಗಾರ ಡೇವಿಡ್ ಜಾನ್ಸನ್(David Johnson) ಭಾರತ ಪರ ಕೇವಲ 2 ಟೆಸ್ಟ್​ ಪಂದ್ಯವನ್ನಾಡಿದ್ದರೂ ಕೂಡ ಅವರು ನಿರ್ಮಿಸಿದ ದಾಖಲೆಯೊಂದನ್ನು ಈಗಲೂ ಟೀಮ್​ ಇಂಡಿಯಾ ಬೌಲರ್​ಗಳಿಂದ ಮುರಿಯಲು ಸಾಧ್ಯವಾಗಿಲ್ಲ. ಈ ದಾಖಲೆ ಯಾವುದು?, ಅವರ ಕ್ರಿಕೆಟ್​ ಸಾಧನೆ ಏನು? ಎಂಬ ಮಾಹಿತಿ ಇಂತಿದೆ.

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಆರಂಭಿಕ ದಿನಗಳಲ್ಲಿ ಟೆನ್ನಿಸ್​ ಬಾಲ್​ ಕ್ರಿಕೆಟ್​ನಲ್ಲಿ ಸ್ಥಳೀಯ ಕ್ರಿಕೆಟ್​ ಟೂರ್ನಿಗಳಲ್ಲಿ ವೇಗದ ಬೌಲಿಂಗ್​ ನಡೆಸಿ ವಿಕೆಟ್​ ಕೀಳುತ್ತಿದ್ದರು. ಪಂದ್ಯವೊಂದರಲ್ಲಿ ಅವರು 8 ವಿಕೆಟ್​ ಕಿತ್ತು ಮಿಂಚಿದ್ದರು. ಇದೇ ವೇಳೆ ಈ ಪಂದ್ಯವನ್ನು ನೋಡುತ್ತಿದ್ದ ಅವರ ಗೆಳೆಯನೊಬ್ಬ ಜಾನ್ಸನ್ ಅವರನ್ನು ಸ್ವಸ್ತಿಕ್​ ಕ್ರಿಕೆಟ್​ ಕ್ಲಬ್​ಗೆ ಸೇರಿಸಿದ್ದರು. ಆಗ ಜಾನ್ಸನ್​ಗೆ ಕೇವಲ 17 ವರ್ಷವಾಗಿತ್ತು. ಈ ಕ್ರಿಕೆಟ್​ ಕ್ಲಬ್​ನಲ್ಲಿ ಸ್ಟಿಚ್​ ಬೌಲಿಂಗ್​ ಅಭ್ಯಾಸ ನಡೆಸಿ ಹಂತ ಹಂತವಾಗಿ ಬೆಳೆದ ಅವರು ಬಳಿಕ ಕರ್ನಾಟಕ ಪರ ಅಂಡರ್​-19 ಪಂದ್ಯವನ್ನಾಡಿ ಕೇವಲ ಎರಡು ಪಂದ್ಯಗಳಿಂದ 13 ವಿಕೆಟ್​ ಕಿತ್ತು ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದರು.


10 ವಿಕೆಟ್​ ಸರದಾರ


90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಜಾನ್ಸನ್, 1995-96ರಲ್ಲಿ ಕೇರಳದ ವಿರುದ್ಧದ ಪಂದ್ಯದಲ್ಲಿ ಹತ್ತು ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 63ಕ್ಕೆ 6 ವಿಕೆಟ್​ ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 89ಕ್ಕೆ 4 ಕೆಡವಿದ್ದರು. ಇದಾದ ಬಳಿಕ ಬಂಗಾಳದ ವಿರುದ್ಧ 49 ಕ್ಕೆ 4 ಮತ್ತು ಬರೋಡಾ ವಿರುದ್ಧ 91 ಕ್ಕೆ 5 ವಿಕೆಟ್​ ಕಬಳಿಸಿದ್ದರು. ಅವರ ಈ ಬೌಲಿಂಗ್​ ಪ್ರದರ್ಶನ ಕಂಡು ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಗೆ ಟೀಮ್​ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿತ್ತು.

ಇದನ್ನು ಓದಿ David Johnson: ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು; ಖಿನ್ನತೆಯಿಂದ ಆತ್ಮಹತ್ಯೆ?

ಗಂಟೆಗೆ 157.8 ಕಿ. ಮೀಟರ್ ವೇಗದಲ್ಲಿ ಬೌಲಿಂಗ್​…


1996ರಲ್ಲಿ ದೆಹಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಜಾವಗಲ್​ ಶ್ರೀನಾಥ್​ ಅವರು ಗಾಯಗೊಂಡ ಕಾರಣ ಅವರ ಸ್ಥಾನದಲ್ಲಿ ಜಾನ್ಸನ್ ಆಡುವ ಅವಕಾಶ ಪಡೆದರು. ಅದು ಅವರ ಚೊಚ್ಚಲ ಪಂದ್ಯವಾಗಿತ್ತು. ಮೊದಲ ಇನಿಂಗ್ಸ್​ನಲ್ಲಿ ಅವರಿಗೆ ವಿಕೆಟ್​ ಕೀಳಲು ಸಾಧ್ಯವಾಗಲಿಲ್ಲ. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೆಂಡೆಸೆದು ​ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರ ವಿಕೆಟ್​ ಉರುಳಿಸಿದರು. ಇದೇ ವೇಳೆ ಭಾರತ ಪರ ಅತಿ ವೇಗದಲ್ಲಿ ಬೌಲಿಂಗ್​ ನಡೆಸಿದ ದಾಖಲೆಯನ್ನು ನಿರ್ಮಿಸಿದರು. ಸದ್ಯ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇದು ದಾಖಲೆಯಾಗಿಯೇ ಉಳಿದಿದೆ. ದೇಶೀಯ ಕ್ರಿಕೆಟ್​ನಲ್ಲಿ ಅತಿ ವೇಗದ ಬೌಲಿಂಗ್​ ನಡೆಸಿದ ದಾಖಲೆ ಮಯಾಂಕ್​ ಯಾದವ್ ಹೆಸರಿನಲ್ಲಿದೆ. ಇದೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಲಕ್ನೋ ತಂಡದ ಮಯಾಂಕ್​ ಯಾದವ್​ 156.7 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್​ ನಡೆಸಿದ್ದರು.


ಅವಕಾಶವೇ ನೀಡಲಿಲ್ಲ…


ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 39 ಪಂದ್ಯಗಳಿಂದ 437 ರನ್​, 125 ವಿಕೆಟ್​, ಲಿಸ್ಟ್​ 2 ಕ್ರಿಕೆಟ್​ನಲ್ಲಿ 33 ಪಂದ್ಯಗಳನ್ನಾಡಿ 118 ರನ್, 41 ವಿಕೆಟ್​​ ಕಲೆಹಾಕಿದ್ದಾರೆ. ಭಾರತ ಪರ 2 ಟೆಸ್ಟ್​ ಪಂದ್ಯಗಳನ್ನಾಡಿ 8 ರನ್​ ಸಹಿತ 3 ವಿಕೆಟ್​ ಕಿತ್ತಿದ್ದಾರೆ. ವಿಪರ್ಯಾಸವೆಂದರೆ ಉತ್ತಮ ಬೌಲಿಂಗ್​ ಸಾಧನೆ ತೋರಿದ್ದರೂ ಕೂಡ ಅವರನ್ನು ಕೇವಲ 2 ಪಂದ್ಯಗಳಿಗೆ ಸೀಮಿತರನ್ನಾಗಿ ಮಾಡಿ ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಕೊನೆಯ ಪಂದ್ಯವಾಡಿದ ದಕ್ಷಿಣ ಆಫ್ರಿಕಾ ವಿರುದ್ಧ 2 ವಿಕೆಟ್​ ಕಿತ್ತಿದ್ದರು.


ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಖಿನ್ನತೆಗೆ ಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಹಲವು ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Continue Reading
Advertisement
IIT Bombay
Latest10 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ17 mins ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Genitals Removed Case
Latest21 mins ago

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

UGC-NET
ದೇಶ22 mins ago

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Niveditha Gowda new reels after divorce
ಸಿನಿಮಾ30 mins ago

Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

Darshan Arrested
ಕರ್ನಾಟಕ31 mins ago

Darshan Arrested: ರೇಣುಕಾಸ್ವಾಮಿ ಕೊಲೆ ಕೇಸ್;‌ ಪವಿತ್ರಾ ಗೌಡಗೆ ಜೈಲು, ದರ್ಶನ್‌ ಪೊಲೀಸ್‌ ಕಸ್ಟಡಿಗೆ

Road Construction
ಕರ್ನಾಟಕ59 mins ago

Road Construction: ವಿಶ್ವಬ್ಯಾಂಕ್‌ನಿಂದ ಸಾಲ ತಂದು ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ಸಿದ್ದರಾಮಯ್ಯ ಸರ್ಕಾರ ನಿರ್ಧಾರ

building collapses in Gonikoppa
ಕೊಡಗು1 hour ago

Building Collapse : ಗೋಣಿಕೊಪ್ಪದಲ್ಲಿ ಏಕಾಏಕಿ ಕುಸಿದು ಬಿದ್ದ ಹೋಟೆಲ್‌ ಕಟ್ಟಡ; ಊಟಕ್ಕೆ ಬಂದವರು ನರಳಾಟ

Duniya Vijay In kotee movie special Role
ಸ್ಯಾಂಡಲ್ ವುಡ್1 hour ago

Duniya Vijay: ಕೋಟಿ ಸಿನಿಮಾದ ‘ದುನಿಯಾ ವಿಜಯ್’ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಫಿದಾ

David Johnson
ಕ್ರೀಡೆ1 hour ago

David Johnson: ಮೃತ ಡೇವಿಡ್ ಜಾನ್ಸನ್ ಯಾರು? ಇವರ ಕ್ರಿಕೆಟ್​ ಸಾಧನೆ ಏನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌