Shah Rukh Khan step of RRR song Naatu Naatu and pathaan song NMACC Launch: ʻನಾಟು ನಾಟುʼ ಹಾಡಿನ ಜತೆ ʻಜೂಮ್ ಜೋ ಪಠಾಣ್‌ʼಗೆ ಶಾರುಖ್‌ ಸಖತ್‌ ಡ್ಯಾನ್ಸ್‌; ವರುಣ್ , ರಣವೀರ್ ಸಾಥ್ - Vistara News

South Cinema

NMACC Launch: ʻನಾಟು ನಾಟುʼ ಹಾಡಿನ ಜತೆ ʻಜೂಮ್ ಜೋ ಪಠಾಣ್‌ʼಗೆ ಶಾರುಖ್‌ ಸಖತ್‌ ಡ್ಯಾನ್ಸ್‌; ವರುಣ್ , ರಣವೀರ್ ಸಾಥ್

ಶಾರುಖ್ ಖಾನ್ (NMACC Launch) ಅವರು ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಹೆಜ್ಜೆ ಹಾಕುವುದರೊಂದಿಗೆ ಪಠಾಣ್‌ ಸಿನಿಮಾದ ಜೂಮ್ ಜೋ ಪಠಾಣ್‌ ಹಾಡಿಗೂ ಸ್ಟೆಪ್ಸ್‌ ಹಾಕಿ ರಂಜಿಸಿದ್ದಾರೆ.

VISTARANEWS.COM


on

Shah Rukh Khan step of RRR song Naatu Naatu and pathaan song
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ (NMACC Launch) ಗ್ರ್ಯಾಂಡ್ ಲಾಂಚ್‌ನಲ್ಲಿ, ಅಂಬಾನಿ ಕುಟುಂಬಕ್ಕೆ ಆತ್ಮೀಯರಾಗಿರುವ ಶಾರುಖ್ ಖಾನ್ ನೃತ್ಯ ಪ್ರದರ್ಶನಗಳನ್ನು ನೀಡುವುದರ ಮೂಲಕ ವೇದಿಕೆಯನ್ನು ರಂಜಿಸಿದ್ದಾರೆ. ಏಪ್ರಿಲ್ 1 ರಂದು ಅಂಬಾನಿ ಕುಟಂಬ ದೊಡ್ಡ ಗಾಲಾವನ್ನು ಆಯೋಜಿಸಿದ್ದರು. ಶಾರುಖ್ ಖಾನ್ ಅವರು ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಹೆಜ್ಜೆ ಹಾಕುವುದರೊಂದಿಗೆ ಪಠಾಣ್‌ ಸಿನಿಮಾದ ಜೂಮ್ ಜೋ ಪಠಾಣ್‌ ಹಾಡಿಗೂ ಸ್ಟೆಪ್ಸ್‌ ಹಾಕಿದ್ದಾರೆ.

ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ (NMACC) ಪ್ರಾರಂಭಕ್ಕಾಗಿ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಬಾಲಿವುಡ್ ಮತ್ತು ಹಾಲಿವುಡ್ ಸೆಲೆಬ್ರಿಟಿಗಳ ಸೇರಿದ್ದರು. ಶಾರುಖ್ ಖಾನ್ ಸಹ ಅತಿಥಿಯಾಗಿ ಉಪಸ್ಥಿತರಿದ್ದರು. ಇತ್ತೀಚೆಗೆ ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿನ ಹುಕ್ ಸ್ಟೆಪ್ ಶಾರುಖ್‌ ಖಾನ್‌ ಪ್ರದರ್ಶಿಸಿದರು.

ಜೂಮ್ ಜೋ ಪಠಾಣ್‌ಗೆ ಶಾರುಕ್ ಡ್ಯಾನ್ಸ್

ಪ್ರೇಕ್ಷಕರ ಕಿರುಚಾಟ ಮತ್ತು ಹರ್ಷೋದ್ಗಾರಗಳ ನಡುವೆ ಶಾರುಖ್ ಖಾನ್ ಅವರು ಜೂಮ್ ಜೋ ಪಠಾನ್‌ಗೆ ನೃತ್ಯ ಮಾಡುವುದರ ಮೂಲಕ ಸಖತ್‌ ರಂಜಿಸಿದ್ದಾರೆ. ವೇದಿಕೆಯಲ್ಲಿ ಶಾರುಖ್‌ ಜತೆಗೆ ವರುಣ್ ಧವನ್ ಮತ್ತು ರಣವೀರ್ ಸಿಂಗ್ ಜತೆಯಾಗಿ ಡ್ಯಾನ್ಸ್‌ ಮಾಡಿದ್ದಾರೆ. ಇದೀಗ ಈ ವಿಡಿಯೊ ವೈರಲ್‌ ಆಗಿದ್ದು, ಕಾಮೆಂಟ್‌ ಮೂಲಕ ಶಾರುಖ್‌ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: NMACC Launch: ನೀತಾ ಅಂಬಾನಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಿಯಾಂಕಾ -ರಣವೀರ್‌ ಸಖತ್‌ ಸ್ಟೆಪ್ಸ್‌!

ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ (NMACC)?

ಮುಂಬಯಿಯ ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿರುವ ರಿಲಯನ್ಸ್ ಜಿಯೊ ವರ್ಲ್ಡ್​ ಸೆಂಟರ್​​ನೊಳಗೆ ನೂತನವಾಗಿ ನಿರ್ಮಿಸಲಾಗಿರುವ ನೀತಾ ಮುಕೇಶ್​ ಅಂಬಾನಿ ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ ಅದ್ಧೂರಿಯಾಗಿ ಮಾರ್ಚ್‌ 31ರಂದು ನಡೆಯಿತು. ನೀತಾ ಅಂಬಾನಿ, ಮುಕೇಶ್​ ಅಂಬಾನಿ ಮತ್ತು ಅವರ ಇಡೀ ಕುಟುಂಬದವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ನೀತಾ ಮುಕೇಶ್​ ಅಂಬಾನಿ ಸಾಂಸ್ಕೃತಿಕ ಕೇಂದ್ರ ಉದ್ಘಾಟನೆ ಕಾರ್ಯಕ್ರಮಕ್ಕೆ ಬಾಲಿವುಡ್​ ಗಣ್ಯರಾದ ಶಾರುಖ್​ಖಾನ್​, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್​, ಅಲಿಯಾ ಭಟ್​, ಜಾನ್ವಿ ಕಪೂರ್​, ವರುಣ್​ ಧವನ್​, ಕೀರ್ತಿ ಸನೂನ್​, ಕರೀನಾ ಕಪೂರ್​, ಆಮೀರ್ ಖಾನ್​, ಸೈಫ್​ ಅಲಿ ಖಾನ್​, ಕರಿಷ್ಮಾ ಕಪೂರ್​, ವಿದ್ಯಾ ಬಾಲನ್​, ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್​ ಜೋನಾಸ್ ಆಗಮಿಸಿದ್ದರು.

ರಜನಿಕಾಂತ್​ ಅವರೂ ಪಾಲ್ಗೊಂಡಿದ್ದರು. ಅಂಬಾನಿ ಕುಟುಂಬದ ಇಶಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಅಂಬಾನಿ, ಅನಂತ್​ ಅಂಬಾನಿ, ರಾಧಿಕಾ ಮರ್ಚಂಟ್ ಕೂಡ ಉಪಸ್ಥಿತರಿದ್ದರು. ಇವರೆಲ್ಲ ಸಾಂಪ್ರದಾಯಿಕ ಉಡುಗೆ ತೊಟ್ಟು, ಸಂಭ್ರಮಸಿದರು. ಅಂದಹಾಗೇ, ಈ ಸಾಂಸ್ಕೃತಿಕ ಕೇಂದ್ರ ನೀತಾ ಅಂಬಾನಿಯವರ ಕನಸಿನ ಕೂಸು. ಭಾರತದ ಕಲಾ ಪ್ರಕಾರಗಳನ್ನು ಪಸರಿಸುವ, ಉತ್ತೇಜಿಸುವ ಸಲುವಾಗಿ ಅವರು ನೀತಾ ಮುಕೇಶ್​ ಅಂಬಾನಿ ಸಾಂಸ್ಕೃತಿಕ ಕೇಂದ್ರವನ್ನು ನಿರ್ಮಾಣ ಮಾಡಿದ್ದಾರೆ. ಇಲ್ಲಿ ಮೂರು ಕಲಾ ಪ್ರದರ್ಶನ ವೇದಿಕೆಗಳು ಇವೆ. ಅದರಲ್ಲಿ ಒಂದು 2000 ಆಸನಗಳುಳ್ಳ ಭವ್ಯವಾದ ಥಿಯೇಟರ್​. ಇನ್ನೊಂದು 250 ಸೀಟ್​ಗಳಿರುವ ಸ್ಟುಡಿಯೋ ಥಿಯೇಟರ್​ ಮತ್ತು ಇನ್ನೊಂದು 125 ಕ್ಯೂಬ್​ ಸೀಟ್​ಗಳುಳ್ಳ ವೇದಿಕೆ. ಇಲ್ಲಿ ಆರ್ಟ್​ ಹೌಸ್​ ಕೂಡ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

Nandamuri Balakrishna: ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ಆದರೀಗ ನಟಿ ಅಂಜಲಿ ಈ ಪ್ರಕರಣ ಬಗ್ಗೆ ಮೌನ ಮುರಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಬಾಲಯ್ಯ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ನಡೆದ ಘಟನೆ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ ಎಂದು ಈ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದ್ದಾರೆ ನಟಿ.

VISTARANEWS.COM


on

Nandamuri Balakrishna pushed incident Anjali breaks silence
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ಆದರೀಗ ನಟಿ ಅಂಜಲಿ ಈ ಪ್ರಕರಣ ಬಗ್ಗೆ ಮೌನ ಮುರಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಬಾಲಯ್ಯ ಜತೆ ಇರುವ ವಿಡಿಯೊ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ನಡೆದ ಘಟನೆ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ ಎಂದು ಈ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದ್ದಾರೆ ನಟಿ.

ಕಾರ್ಯಕ್ರಮದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅಂಜಲಿ ಹೀಗೆ ಬರೆದುಕೊಂಡಿದ್ದಾರೆ, “ಗ್ಯಾಂಗ್ಸ್ ಆಫ್ ಗೋದಾವರಿ ಪ್ರೀ-ರಿಲೀಸ್ ಈವೆಂಟ್‌ವನ್ನು ತಮ್ಮ ಉಪಸ್ಥಿತಿಯೊಂದಿಗೆ ಅಲಂಕರಿಸಿದ್ದಕ್ಕಾಗಿ ನಾನು ಬಾಲಕೃಷ್ಣ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಾಲಕೃಷ್ಣ ಅವರು ಮತ್ತು ನಾನು ಯಾವಾಗಲೂ ಪರಸ್ಪರ ಗೌರವವನ್ನು ಉಳಿಸಿಕೊಂಡಿದ್ದೇವೆ. ಬಹಳ ಹಿಂದಿನಿಂದಲೂ ನಾವಿಬ್ಬರು ಪರಸ್ಪರ ಉತ್ತಮ ಸ್ನೇಹ, ಗೌರವವನ್ನು ಹಂಚಿಕೊಂಡಿದ್ದೇವೆ ಎಂದು ಹೇಳುವುದಕ್ಕೆ ನಾನು ಬಯಸುತ್ತೇನೆ. ಅವರ ಜತೆ ವೇದಿಕೆ ಹಂಚಿಕೊಂಡಿದ್ದು ಅದ್ಭುತವಾಗಿತ್ತುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Nandamuri Balakrishna: ಕುಡಿದು ಬಂದು ವೇದಿಕೆ ಮೇಲೆ ನಟಿ ಅಂಜಲಿಯನ್ನು ತಳ್ಳಿದ್ರಾ ಬಾಲಯ್ಯ?

ಆಗಿದ್ದೇನು?

. ‘ಗ್ಯಾಂಗ್ಸ್ ಆಫ್ ಗೋದಾವರಿ’ ಯ ಪ್ರೀ-ರಿಲೀಸ್ ಸಮಾರಂಭದಲ್ಲಿ (Vishwak Sen and Neha Shetty) ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದರು ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿದ್ದವು.

ವೈರಲ್‌ ಆದ ವಿಡಿಯೊದಲ್ಲಿ ವೇದಿಕೆಯ ಮೇಲೆ ನೇಹಾ ಶೆಟ್ಟಿ ಮತ್ತು ಅಂಜಲಿ ಅಕ್ಕ ಪಕ್ಕ ನಿಂತಿದ್ದರು. ನೇಹಾ ಅವರಿಗೆ ನಯವಾಗಿ ಪಕ್ಕಕ್ಕೆ ಸರಿಯಲು ಕೇಳುತ್ತಾರೆ. ಕೆಲವು ಕ್ಷಣಗಳ ನಂತರ, ಬಾಲಯ್ಯ ಅವರು ಅಂಜಲಿಯನ್ನು ದೂರ ತಳ್ಳುತ್ತಾರೆ, ಬಹುತೇಕ ನಟಿ ಬಿದ್ದೇ ಬಿಡುವಂತಿದ್ದರು. ಆಗ ನೇಹಾ ಅವರು ಅಂಜಲಿ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಬಳಿಕ ನಟಿಯರು ತಮಾಷೆಯಾಗಿ ಬಾಲಯ್ಯ ನೋಡಿ ನಕ್ಕಿದ್ದರು.

ಬಾಲಕೃಷ್ಣ ‘ಅಖಂಡ’ ಮತ್ತು ‘ವೀರಸಿಂಹ ರೆಡ್ಡಿ’ಯಂತಹ ಹಿಟ್‌ ಸಿನಿಮಾಗಳಿಂದ ಸುದ್ದಿ ಮಾಡುತ್ತಿದ್ದಾರೆ. ‘ಅಖಂಡ 2’ ಗಾಗಿ ನಿರ್ದೇಶಕ ಬೋಯಪತಿ ಶ್ರೀನು ಅವರೊಂದಿಗೆ ಕೈಜೋಡಿಸಲು ಯೋಜಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Shilpa Shetty: ʻಕೆಡಿʼಸಿನಿಮಾ ಶೂಟಿಂಗ್‌ ಮುಗಿಸಿ ಹೊಸ ವಿಡಿಯೊ ಹಂಚಿಕೊಂಡ ಶಿಲ್ಪಾ ಶೆಟ್ಟಿ!

Shilpa Shetty: ನಿರ್ದೇಶಕ ‘ಜೋಗಿ’ ಪ್ರೇಮ್​ (Prem) ಸೇರಿದಂತೆ ಇಡೀ ಚಿತ್ರತಂಡದವರ ಜೊತೆ ಶಿಲ್ಪಾ ಶೆಟ್ಟಿ ಖುಷಿ ಖುಷಿಯಿಂದ ಪೋಸ್​ ನೀಡಿದ್ದಾರೆ. . ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​ ಹಾಗೂ ಶಿಲ್ಪಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.
ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.

VISTARANEWS.COM


on

Shilpa Shetty Shares Special Video From KD Kannada Movie
Koo

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ (Shilpa Shetty) ʻಕೆಡಿʼಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಮಾಡಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಡಲಿದ್ದಾರೆ. ಈ ಹಿಂದೆ ಪೋಸ್ಟರ್‌ ಔಟ್‌ ಆದಾಗ ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ಕಂಡಿದ್ದರು ನಟಿ. ಮೈಸೂರಿನಲ್ಲಿ ‘ಕೆಡಿ’ ಸಿನಿಮಾ (KD Kannada Movie) ಶೂಟಿಂಗ್​ ನಡೆಯುತ್ತಿತ್ತು. ಈಗ ಅವರು ಚಿತ್ರೀಕರಣ ಮುಗಿಸಿದ್ದಾರೆ. ಈ ಖುಷಿಯಲ್ಲಿ ಹೊಸ ವಿಡಿಯೊ ಹಂಚಿಕೊಂಡಿದ್ದಾರೆ.

ನಿರ್ದೇಶಕ ‘ಜೋಗಿ’ ಪ್ರೇಮ್​ (Prem) ಸೇರಿದಂತೆ ಇಡೀ ಚಿತ್ರತಂಡದವರ ಜೊತೆ ಶಿಲ್ಪಾ ಶೆಟ್ಟಿ ಖುಷಿ ಖುಷಿಯಿಂದ ಪೋಸ್​ ನೀಡಿದ್ದಾರೆ. . ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​ ಹಾಗೂ ಶಿಲ್ಪಾ ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.

ಇದನ್ನೂ ಓದಿ: Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Cinema Lovers Day 2024: ಇಂದು ‘ಸಿನಿಮಾ ಲವರ್ಸ್ ಡೇ’: 99 ರೂಪಾಯಿ ಕೊಟ್ಟು ಸಿನಿಮಾ ನೋಡಿ!

Cinema Lovers Day 2024: ಆ ಆಫರ್‌ ಒಂದೇ ದಿನ ಇರುವುದರಿಂದ ಒಟ್ಟಾರೆ ಚಿತ್ರದ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ವ್ಯತ್ಯಾಸವನ್ನು ಇರುವುದಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅನೇಕ ನಿರ್ಮಾಪಕರು ಏಪ್ರಿಲ್ ಮತ್ತು ಮೇನಲ್ಲಿ ಚುನಾವಣಾ ಕಾವು ಇದ್ದ ಕಾರಣ ಸಿನಿಮಾಗಳನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಒಂದೇ ಸಲ ಎಲ್ಲ ಸಿನಿಮಾಗಳು ಬಿಡುಗಡೆಯಾಗಿ ಕ್ಲ್ಯಾಶ್‌ ಆಗಬಹುದು ಎನ್ನಲಾಗಿದೆ. ರವಿಚಂದ್ರನ್‌ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕದ ಚಿತ್ರಮಂದಿರಗಳಲ್ಲಿ 90 ರೂಪಾಯಿಗೆ ʻದಿ ಜಡ್ಜ್‌ಮೆಂಟ್‌ ಸಿನಿಮಾ ನೋಡಬಹುದಾಗಿದೆ.

VISTARANEWS.COM


on

Cinema Lovers Day 2024 Theaters offer 99 rupees tickets for latest movies
Koo

ಬೆಂಗಳೂರು: ಇಂದು ಮೇ 31 ʻ ಸಿನಿಮಾ ಲವರ್ಸ್‌ ಡೇʼ. ಈ ನೆಪದಲ್ಲಿ ಕೇವಲ 99 ರೂಪಾಯಿಗೆ (Cinema Lovers Day 2024) ಸಿನಿಮಾ ನೋಡುವ ಅವಕಾಶ ಮಲ್ಟಿಫ್ಲೆಕ್ಸ್‌ ಮತ್ತು ಸಿಂಗಲ್‌ ಸ್ಕ್ರೀನ್‌ ಸಿನಿಮಾ ಥಿಯೇಟರ್‌ಗಳು ​ ನೀಡಿವೆ. ಭಾರತದ ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಮೇ 31ರಂದು ಯಾವುದೇ ಸಿನಿಮಾ ನೋಡಿದರೂ ಟಿಕೆಟ್​ ಬೆಲೆ ಕೇವಲ 99 ರೂಪಾಯಿ ಆಗಿರಲಿದೆ. ಪಿವಿಆರ್‌ ಐನಾಕ್ಸ್‌, ಸಿನಿಪೋಲಿಸ್‌ ಇಂಡಿಯಾ, ಮಿರಾಜ್‌ ಸಿನಿಮಾಸ್‌, ಮುಲ್ತಾ ಎ2 ಮತ್ತು ಮೂವಿಮ್ಯಾಕ್ಸ್‌ ಸೇರಿದಂತೆ ಪ್ರಮುಖ ಮಲ್ಟಿಫ್ಲೆಕ್ಸ್‌ಗಳಲ್ಲಿಯೂ ಈ ಆಫರ್‌ ಇರಲಿದೆ. ರವಿಚಂದ್ರನ್‌ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕದ ಚಿತ್ರಮಂದಿರಗಳಲ್ಲಿ 90 ರೂಪಾಯಿಗೆ ʻದಿ ಜಡ್ಜ್‌ಮೆಂಟ್‌ ಸಿನಿಮಾ ನೋಡಬಹುದಾಗಿದೆ.

ಇತ್ತೀಚೆಗೆ ಚಿತ್ರಮಂದಿರಗಳಲ್ಲಿ ಸಿನಿಮಾ ನೋಡುವುದು ಕಡಿಮೆಯಾಗಿದೆ. ಟಿಕೆಟ್‌ ದರ ಕೂಡ ಮುಖ್ಯ ಕಾರಣ. ಕೊರೊನಾ ಬಂದ ಬಳಿಕ ಮತ್ತಷ್ಟು ಜನ ಚಿತ್ರಮಂದಿರಗಳ ಕಡೆ ತಿರುಗಿ ನೋಡೇ ಇಲ್ಲ. ಮತ್ತೆ ಪ್ರೇಕ್ಷಕರನ್ನು ಸೆಳೆಯಲು ಮಲ್ಟಿಪ್ಲೆಕ್ಸ್​ಗಳ ಹೊಸ ಐಡಿಯಾ ಮಾಡಿದವು. ‘ಸಿನಿಮಾ ಲವರ್ಸ್​ ಡೇ’ ಹೆಸರಲ್ಲಿ ಆಫರ್​ ಬೆಲೆಗೆ ಟಿಕೆಟ್​ಗಳನ್ನು ನೀಡುವ ಮೂಲಕ ಜನರನ್ನು ಸೆಳೆಯಲಾಯಿತು. ಈ ವರ್ಷ ಮೇ 31ರಂದು ‘ಸಿನಿಮಾ ಲವರ್ಸ್​ ಡೇ’ ಸೆಲೆಬ್ರೇಟ್​ ಮಾಡಲಾಗುತ್ತಿದೆ.ಥಿಯೇಟರ್‌ನಲ್ಲಿ ಸುಮಾರು ಶೇಕಡ 90-95 ಸೀಟುಗಳು ಈ 99 ರೂಪಾಯಿ ಟಿಕೆಟ್‌ ದರದಲ್ಲಿ ದೊರಕಲಿದೆ. ಕೆಲವು ಏಕಪರದೆ ಚಿತ್ರಮಂದಿರಗಳಲ್ಲಿ 99 ರೂಪಾಯಿ, ಇನ್ನು ಕೆಲವು 70 ರೂಪಾಯಿಗೆ ಟಿಕೆಟ್‌ ನೀಡಲಿವೆ.

ಆ ಆಫರ್‌ ಒಂದೇ ದಿನ ಇರುವುದರಿಂದ ಒಟ್ಟಾರೆ ಚಿತ್ರದ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ವ್ಯತ್ಯಾಸವನ್ನು ಇರುವುದಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅನೇಕ ನಿರ್ಮಾಪಕರು ಏಪ್ರಿಲ್ ಮತ್ತು ಮೇನಲ್ಲಿ ಚುನಾವಣಾ ಕಾವು ಇದ್ದ ಕಾರಣ ಸಿನಿಮಾಗಳನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಒಂದೇ ಸಲ ಎಲ್ಲ ಸಿನಿಮಾಗಳು ಬಿಡುಗಡೆಯಾಗಿ ಕ್ಲ್ಯಾಶ್‌ ಆಗಬಹುದು ಎನ್ನಲಾಗಿದೆ.

ಇದನ್ನೂ ಓದಿ: Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

ಈ ವಾರ ಬಿಡುಗಡೆ ಆಗಲಿರುವ ‘ಮಿಸ್ಟರ್​ ಆ್ಯಂಡ್​ ಮಿಸೆಸ್​ ಮಾಹಿ’, ‘ಫಾಸ್ಟ್​ ಚಾರ್ಲಿ’, ‘ಸವಿ’, ‘ಸ್ಟ್ರೇಂಜರ್ಸ್​’ ಮುಂತಾದ ಸಿನಿಮಾಗಳನ್ನು ಕೂಡ ಕೇವಲ 99 ರೂಪಾಯಿಗೆ ನೋಡುವ ಅವಕಾಶ ಸಿನಿಪ್ರಿಯರಿಗೆ ಸಿಗಲಿದೆ.

Continue Reading

ಕಾಲಿವುಡ್

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Kamal Haasan: 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kamal Haasan indian 2 second song out
Koo

ಬೆಂಗಳೂರು: ಕಾಲಿವುಡ್‌ ನಟ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಕಮಲ್ ಹಾಸನ್ ಜತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್1 min ago

Viral Video: KSRTC ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು! ಡ್ರೈವರ್‌ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

Donald Trump
ವಿದೇಶ7 mins ago

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Nandamuri Balakrishna pushed incident Anjali breaks silence
South Cinema16 mins ago

Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

T20 World Cup 2024
ಕ್ರಿಕೆಟ್16 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

Shatru Bhairavi yaga ಶತ್ರು ಭೈರವಿ ಯಾಗ
ರಾಜಕೀಯ37 mins ago

ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

T20 World Cup 2024
ಕ್ರಿಕೆಟ್53 mins ago

T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

Shilpa Shetty Shares Special Video From KD Kannada Movie
ಸ್ಯಾಂಡಲ್ ವುಡ್55 mins ago

Shilpa Shetty: ʻಕೆಡಿʼಸಿನಿಮಾ ಶೂಟಿಂಗ್‌ ಮುಗಿಸಿ ಹೊಸ ವಿಡಿಯೊ ಹಂಚಿಕೊಂಡ ಶಿಲ್ಪಾ ಶೆಟ್ಟಿ!

World No Tobacco Day
ಆರೋಗ್ಯ1 hour ago

World No Tobacco Day: ಇಂದು ವಿಶ್ವ ತಂಬಾಕು ರಹಿತ ದಿನ; ತಂಬಾಕು ಸೇವನೆಯಿಂದ ವರ್ಷಕ್ಕೆ 60 ಲಕ್ಷ ಜನರ ಸಾವು!

Air India Flight
ದೇಶ1 hour ago

Air India Flight: ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

PM Narendra Modi
ದೇಶ1 hour ago

PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ21 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌