Himanta Biswa Sarma: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಗೆ ಖಲಿಸ್ತಾನಿಗಳಿಂದ ಜೀವ ಬೆದರಿಕೆ - Vistara News

ದೇಶ

Himanta Biswa Sarma: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಗೆ ಖಲಿಸ್ತಾನಿಗಳಿಂದ ಜೀವ ಬೆದರಿಕೆ

Himanta Biswa Sarma: ಖಲಿಸ್ತಾನಿಗಳ ನಾಯಕ ಅಮೃತ್‌ಪಾಲ್‌ ಸಿಂಗ್‌ನ ಆಪ್ತರನ್ನು ಬಂಧಿಸಿ, ಅಸ್ಸಾಂ ಜೈಲಿನಲ್ಲಿ ಇರಿಸಿದ ಕಾರಣ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಖಲಿಸ್ತಾನಿಗಳು ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Himanta Biswa Sarma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಿಸ್ಪುರ: ಖಲಿಸ್ತಾನ ಪ್ರತ್ಯೇಕ ರಾಷ್ಟ್ರದ ಪರ ಹೋರಾಟ ನಡೆಸುತ್ತಿರುವ ಖಲಿಸ್ತಾನಿಗಳು ದೇಶಕ್ಕೇ ತಲೆನೋವಾಗುತ್ತಿದ್ದಾರೆ. ಅದರಲ್ಲೂ, ಪಂಜಾಬ್‌ನಲ್ಲಿ ಖಲಿಸ್ತಾನಿಗಳ ನಾಯಕ ಅಮೃತ್‌ಪಾಲ್‌ ಸಿಂಗ್‌ ಬಂಧನಕ್ಕೆ ಕಾರ್ಯಾಚರಣೆ ಆರಂಭವಾದ ಬಳಿಕವಂತೂ ಖಲಿಸ್ತಾನಿಗಳ ಉಪಟಳ ಜಾಸ್ತಿಯಾಗಿದೆ. ಪರಿಸ್ಥಿತಿ ಹೀಗಿರುವ ಮಧ್ಯೆಯೇ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರಿಗೆ ನಿಷೇಧಿತ ಖಲಿಸ್ತಾನಿ ಸಂಘಟನೆ ಸಿಖ್‌ ಫಾರ್‌ ಜಸ್ಟಿಸ್‌ನಿಂದ ಜೀವ ಬೆದರಿಕೆ ಹಾಕಲಾಗಿದೆ. ಹಾಗಾಗಿ, ಅಸ್ಸಾಂ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ.

ಜಸ್ಟಿಸ್‌ ಫಾರ್‌ ಸಿಖ್‌ ಸಂಘಟನೆಯ ಗುರ್‌ಪಟ್ವಾಣ್‌ ಸಿಂಗ್‌ ಪನ್ನುನ್‌ ಮಾತನಾಡಿದ್ದಾನೆ ಎನ್ನಲಾದ ಆಡಿಯೊ ಮೆಸೇಜ್‌ ಪೊಲೀಸರಿಗೆ ಲಭ್ಯವಾಗಿದೆ. “ಅಸ್ಸಾಂ ಮುಖ್ಯಮಂತ್ರಿ ಹಿಮಂತ ಶರ್ಮಾ ಅವರಿಗೆ ಈ ಸಂದೇಶ. ಅಸ್ಸಾಂನಲ್ಲಿ ಖಲಿಸ್ತಾನ ಪರ ಸಿಖ್ಖರಿಗೆ ನಿಮ್ಮ ಸರ್ಕಾರ ಕಿರುಕುಳ ನೀಡುತ್ತಿದೆ. ಜೈಲಿನಲ್ಲಿರುವವರಿಗೂ ಹಿಂಸಿಸಲಾಗುತ್ತಿದೆ. ಭಾರತ ಸರ್ಕಾರ ಹಾಗೂ ಸಿಖ್ಖರ ಮಧ್ಯೆ ಯುದ್ಧ ನಡೆಯುತ್ತಿದೆ. ಶರ್ಮಾ, ನೀವು ಇದರ ಮಧ್ಯೆ ಪ್ರವೇಶ ಮಾಡದಿರಿ” ಎಂದು ಎಚ್ಚರಿಸಿದ್ದಾನೆ.

“ನಾವು ಭಾರತದಿಂದ ಪಂಜಾಬ್‌ಅನ್ನು ಮುಕ್ತಗೊಳಿಸಲು ಬಯಸುತ್ತಿದ್ದೇವೆ. ಪ್ರಜಾಪ್ರಭುತ್ವದ ಹಾದಿಯಲ್ಲಿಯೇ ಬೇರ್ಪಡಲು ಬಯಸುತ್ತಿದ್ದೇವೆ. ಹಾಗೊಂದು ವೇಳೆ, ನೀವು (ಶರ್ಮಾ) ಹೀಗೆಯೇ ಸಿಖ್ಖರಿಗೆ ಕಿರುಕುಳ ಕೊಡುತ್ತಿದ್ದರೆ, ನೇರವಾಗಿ ನೀವೇ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾನೆ. ಇನ್ನು ಆಡಿಯೊ ಸಂದೇಶ ಲಭ್ಯವಾಗುತ್ತಲೇ ಅಸ್ಸಾಂ ಪೊಲೀಸರು ಅಲರ್ಟ್‌ ಆಗಿದ್ದು, ಸಕಲ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪಂಜಾಬ್‌ನಲ್ಲಿ ಹಿಂಸಾಚಾರಕ್ಕೆ ಕಾರಣನಾದ ಅಮೃತ್‌ಪಾಲ್‌ ಸಿಂಗ್‌ನ ಆಪ್ತರನ್ನು ಅಸ್ಸಾಂ ಜೈಲಿನಲ್ಲಿ ಇರಿಸಲಾಗಿದೆ. ಇದೇ ಕಾರಣಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಶರ್ಮಾ ಅವರಿಗೆ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ನಿತಿನ್‌ ಗಡ್ಕರಿಗೂ ಬೆದರಿಕೆ ಹಾಕಲಾಗಿತ್ತು

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಕೆಲ ದಿನಗಳ ಹಿಂದೆ ಜೀವ ಬೆದರಿಕೆ ಕರೆ ಮಾಡಲಾಗಿತ್ತು. ಮಹಾರಾಷ್ಟ್ರದ ನಾಗ್ಪುರದಲ್ಲಿರುವ ನಿತಿನ್ ಗಡ್ಕರಿ ಅವರ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಿದ ವ್ಯಕ್ತಿ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಎಂದು ಹೇಳಲಾಗಿದೆ. ಕಳೆದ ಜನವರಿ ತಿಂಗಳಲ್ಲಿ ಬೆಳಗಾವಿ ಹಿಂಡಲಗಾ ಜೈಲಿನಿಂದ ಜಯೇಶ್‌ ಕಾಂತಾ ಎಂಬಾತನ ಹೆಸರಿನಲ್ಲಿ ನಾಗಪುರದ ಕಚೇರಿಗೆ ಬೆದರಿಕೆ ಕರೆ ಮಾಡಲಾಗಿತ್ತು. ಅದೇ ಜಯೇಶ್‌ ಹೆಸರಿನಲ್ಲಿ ಹಿಂಡಲಗಾ ಜೈಲಿನಿಂದಲೇ ಕರೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿ ಹೆಸರು ಬಳಸಿ ಕರೆ ಮಾಡಲಾಗಿತ್ತು. 10 ಕೋಟಿ ರೂಪಾಯಿ ನೀಡುವಂತೆ ಆಗಂತುಕ ಬೇಡಿಕೆ ಇಟ್ಟಿದ್ದಾನೆ. ಆದರೆ, ನಿಜಕ್ಕೂ ಕರೆ ಮಾಡಿದ್ದು ಜಯೇಶ್‌ ಪೂಜಾರಿಯಾ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Sagara News: ನಾನು ಪತ್ರಕರ್ತರಿಗಾಗಲೀ, ಯಾರಿಗೇ ಆಗಲಿ ಜೀವ ಬೆದರಿಕೆ ಹಾಕಿಲ್ಲ: ಶಾಸಕ ಹಾಲಪ್ಪ ಸ್ಪಷ್ಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Kolkata Doctor Murder Case: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯರೊಬ್ಬರ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ನಡೆಸಲಾಗಿದೆ. ಸಂತ್ರಸ್ತೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿತ್ತು. ಮುಖ ಮತ್ತು ಉಗುರುಗಳ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದಲೂ ರಕ್ತಸ್ರಾವವಾಗಿದೆ. ಮಾತ್ರವಲ್ಲ ಹೊಟ್ಟೆ, ಎಡಗಾಲಿಗೆ ಗಾಯಗಳಾಗಿವೆ. ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿ ಹೀಗೆ ಎಲ್ಲ ಅಂಗಗಳಲ್ಲಿಯೂ ಗಾಯದ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯರೊಬ್ಬರ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ನಡೆಸಲಾಗಿದೆ. ಆರ್​ಜಿ ಕರ್ ಸರ್ಕಾರಿ ಆಸ್ಪತ್ರೆ (RG Kar Medical Hospital)ಯಲ್ಲಿನ ಟ್ರೈನಿ ವೈದ್ಯೆಯ ಮೇಲೆ ಈ ದೌರ್ಜನ್ಯ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಇದೀಗ ಘಟನೆಗೆ ಸಂಬಂಧಿಸಿದ ಭಯಾನಕ ವಿಚಾರಗಳು ಒಂದೊಂದಾಗಿ ಹೊರ ಬೀಳತೊಡಗಿದೆ (Kolkata Doctor Murder Case).

ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 31 ವರ್ಷದ ವೈದ್ಯೆಯ ದೇಹದಲ್ಲಿ ಅತೀ ಕ್ರೂರವಾಗಿ ಹಲ್ಲೆ ನಡೆಸಿದ್ದನ್ನು ಸೂಚಿಸುವ ಅನೇಕ ಗಾಯದ ಗುರುತುಗಳಿವೆ ಎನ್ನುವುದನ್ನು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗಪಡಿಸಿದೆ. ʼʼಸಂತ್ರಸ್ತೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿತ್ತು. ಮುಖ ಮತ್ತು ಉಗುರುಗಳ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದಲೂ ರಕ್ತಸ್ರಾವವಾಗಿದೆ. ಮಾತ್ರವಲ್ಲ ಹೊಟ್ಟೆ, ಎಡಗಾಲಿಗೆ ಗಾಯಗಳಾಗಿವೆ. ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿ ಹೀಗೆ ಎಲ್ಲ ಅಂಗಗಳಲ್ಲಿಯೂ ಗಾಯದ ಗುರುತುಗಳಿವೆʼʼ ಎಂದು ಮೂಲಗಳು ತಿಳಿಸಿವೆ.

“ಇದು ಖಂಡಿತವಾಗಿಯೂ ಆತ್ಮಹತ್ಯೆಯಲ್ಲ. ಲೈಂಗಿಕ ದೌರ್ಜನ್ಯದ ನಂತರ ಕೊಲೆ ಮಾಡಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಆಕೆಯ ಕುತ್ತಿಗೆಯ ಮೂಳೆ ಕೂಡ ಮುರಿದಿರುವುದು ಕಂಡುಬಂದಿದೆ. ಸಂತ್ರಸ್ತೆಯ ಕತ್ತು ಹಿಸುಕಿ ನಂತರ ಉಸಿರುಗಟ್ಟಿಸಿ ಕೊಲ್ಲಲಾಗಿದೆ. ಶವಪರೀಕ್ಷೆಯ ಸಂಪೂರ್ಣ ವರದಿಗಾಗಿ ನಾವು ಕಾಯುತ್ತಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಟಿಎಂಸಿ ಸರ್ಕಾರದ ವಿರುದ್ಧ ಆಕ್ರೋಶ

ಸದ್ಯ ಈ ಘಟನೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಶಿಕ್ಷೆ ನೀಡಬೇಕೆಂದು ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳು ಆಡಳಿತರೂಢ ತೃಣಮೂಲ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೆಂಡ ಕಾರಿವೆ. ಇನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಸಂತ್ರಸ್ತೆಯ ಕುಟುಂಬದ ಜತೆ ನಾನು ಮಾತನಾಡಿದ್ದು, ಸೂಕ್ತ ಕ್ರಮದ ಭರವಸೆಯನ್ನು ಅವರಿಗೆ ನೀಡಿದ್ದೇನೆ. ಪ್ರಕರಣದ ವಿಚಾರಣೆಯನ್ನು ಫಾಸ್ಟ್‌ಟ್ರ್ಯಾಕ್‌ ನ್ಯಾಯಾಲಯದಲ್ಲಿ ನಡೆಸಲು ನಿರ್ದೇಶನ ನೀಡಿದ್ದೇನೆ. ನಾನು ಮರಣದಂಡನೆ ಪರವಾಗಿ ಇಲ್ಲದಿದ್ದರೂ, ಅಗತ್ಯಬಿದ್ದರೆ ಆರೋಪಿಯನ್ನು ಗಲ್ಲಿಗೇರಿಸಲಾಗುತ್ತದೆ” ಎಂದು ಹೇಳಿದ್ದಾರೆ. ಪ್ರತಿಭಟನೆ ಹೆಸರಲ್ಲಿ ರೋಗಿಗಳನ್ನು ನಿರ್ಲಕ್ಷಿಸಬೇಡಿ ಎಂದೂ ಅವರು ಪ್ರತಿಭಟನಾನಿರತ ವೈದ್ಯರಿಗೆ ಮನವಿ ಮಾಡಿದ್ದಾರೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Continue Reading

ದೇಶ

Hindenburg: ಹಿಂಡನ್‌ಬರ್ಗ್‌ ಸ್ಫೋಟಕ ವರದಿ: ಆರೋಪ ತಳ್ಳಿ ಹಾಕಿದ ಅದಾನಿ ಗ್ರೂಪ್‌

Hindenburg: ಶನಿವಾರ ರಾತ್ರಿ ಈ ಕುರಿತು 106 ಪುಟಗಳ ವರದಿ ಬಿಡುಗಡೆ ಮಾಡಿರುವ ಹಿಂಡನ್ಬರ್ಗ್‌, ಅದಾನಿಯ ಬೇನಾಮಿ ಕಂಪೆನಿಗಳಲ್ಲಿ ತಾವೇ ಷೇರುಗಳನ್ನು ಹೊಂದಿರುವ ಕಾರಣಕ್ಕೆ ಸೆಬಿ ಮುಖ್ಯಸ್ಥೆಯಾಗಿರುವ ಮಾಧವಿ ಬುಚ್, ಅದಾನಿ ಗ್ರೂಪ್ ವಿರುದ್ಧದ ಷೇರು ಅವ್ಯವಹಾರ ಕುರಿತು ಸರಿಯಾಗಿ ತನಿಖೆ ಮಾಡಿಲ್ಲ ಎಂದು ಆಪಾದಿಸಿದೆ.

VISTARANEWS.COM


on

Hindenburg
Koo

ನವದೆಹಲಿ: ವಿದೇಶದಲ್ಲಿರುವ ಗೌತಮ್‌ ಅದಾನಿ (Gautam Adani) ನೇತೃತ್ವದ ಅದಾನಿ ಗ್ರೂಪ್‌ ಕಂಪನಿಗಳಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಅವರ ಪಾಲಿದೆ ಎಂದು ಸ್ಫೋಟಕ ವರದಿ ಬಹಿರಂಗಗೊಂಡಿರುವ ಬೆನ್ನಲ್ಲೇ ಕಂಪನಿಗೆ ಪ್ರತಿಕ್ರಿಯಿಸಿದೆ. ಅದಾನಿ ಗ್ರೂಪ್‌ ಅಮೆರಿಕದ ಶಾರ್ಟ್‌ಸೆಲ್ಲರ್ ಸಂಸ್ಥೆ ಹಿಂಡನ್‌ಬರ್ಗ್‌(Hindenburg) ರಿಸರ್ಚ್‌ ವರದಿಯನ್ನು ತಳ್ಳಿ ಹಾಕಿದೆ.

ಶನಿವಾರ ರಾತ್ರಿ ಈ ಕುರಿತು 106 ಪುಟಗಳ ವರದಿ ಬಿಡುಗಡೆ ಮಾಡಿರುವ ಹಿಂಡನ್ಬರ್ಗ್‌, ಅದಾನಿಯ ಬೇನಾಮಿ ಕಂಪೆನಿಗಳಲ್ಲಿ ತಾವೇ ಷೇರುಗಳನ್ನು ಹೊಂದಿರುವ ಕಾರಣಕ್ಕೆ ಸೆಬಿ ಮುಖ್ಯಸ್ಥೆಯಾಗಿರುವ ಮಾಧವಿ ಬುಚ್, ಅದಾನಿ ಗ್ರೂಪ್ ವಿರುದ್ಧದ ಷೇರು ಅವ್ಯವಹಾರ ಕುರಿತು ಸರಿಯಾಗಿ ತನಿಖೆ ಮಾಡಿಲ್ಲ ಎಂದು ಆಪಾದಿಸಿದೆ. ಮಾಧವಿ ಬುಚ್ ಮತ್ತು ಅವರ ಪತಿ ಬರ್ಮುಡಾ ಮತ್ತು ಮಾರಿಷಸ್ನಲ್ಲಿರುವ ನಕಲಿ ಕಂಪೆನಿಗಳಲ್ಲಿ ಹೂಡಿಕೆಗಳನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಈ ಬಗ್ಗೆ ಅದಾನಿ ಗ್ರೂಪ್‌ ಪ್ರಕಟಣೆ ಹೊರಡಿಸಿದ್ದು, ಸಾಗರೋತ್ತರದ ವ್ಯವಹಾರಗಳು ಸಂಪೂರ್ಣವಾಗಿ ಪಾರದರ್ಶಕವಾಗಿದೆ. ನಾವು ಅದಾನಿ ಗ್ರೂಪ್ ವಿರುದ್ಧದ ಈ ಆರೋಪಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ, ಇವುಗಳನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ, ಆಧಾರರಹಿತವೆಂದು ಸಾಬೀತುಪಡಿಸಲಾಗಿದೆ ಮತ್ತು ಜನವರಿ 2024 ರಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ಈಗಾಗಲೇ ವಜಾಗೊಳಿಸಿದೆ ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

2023ರ ಹಿಂಡನ್‌ಬರ್ಗ್‌ ವರದಿಯಲ್ಲಿ ಏನಿತ್ತು?

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ವ್ಯಾಪಕ ಚರ್ಚೆ ಹುಟ್ಟು ಹಾಕಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಹಿಂಡನ್‌ಬರ್ಗ್‌ ವರದಿ ಕುರಿತು ತನಿಖೆಯಾಗಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಹಲವರು ಮೊರೆ ಹೋಗಿದ್ದರು. ಅಲ್ಲದೆ ಅದಾನಿ ಗ್ರೂಪ್‌ ಅಕ್ರಮ ಪತ್ತೆಹಚ್ಚುವಲ್ಲಿ ಸೆಬಿ ವಿಫಲವಾಗಿದೆ. ಹಾಗಾಗಿ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಹಾಗಾಗಿ ಸರ್ವೋಚ್ಚ ನ್ಯಾಯಾಲಯವು 2023ರ ಮಾರ್ಚ್‌ನಲ್ಲಿ ಸೆಬಿ ತನಿಖೆ ಮೇಲೆ ನಿಗಾ ಇರಿಸಲು, ತನಿಖೆಯಲ್ಲಿ ದೋಷ ಪತ್ತೆಹಚ್ಚಲು ಆರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು. ಇದಾದ ಎರಡು ತಿಂಗಳ ಬಳಿಕ ಸೆಬಿಯು ಸುಪ್ರೀಂ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿತ್ತು. “ಅದಾನಿ ಗ್ರೂಪ್‌ ವಂಚನೆ ಮಾಡಿದೆ ಎಂಬುದನ್ನು ಸಾಬೀತುಪಡಿಸಲು ಈ ಹಂತದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ” ಎಂದು ಉಲ್ಲೇಖಿಸಿತ್ತು.

ಅದಾನಿ ಗ್ರೂಪ್‌, ವಿದೇಶಗಳಲ್ಲಿ ನಕಲಿ ಕಂಪನಿಗಳ ಮೂಲಕ ತನ್ನ ಕಂಪನಿಗಳ ಷೇರು ದರವನ್ನು ಕೃತಕವಾಗಿ ಏರಿಸಿದೆ ಎಂದು ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್ ಹಿಂಡೆನ್‌ ಬರ್ಗ್‌ ತನ್ನ ವರದಿಯಲ್ಲಿ ಆರೋಪಿಸಿತ್ತು. ಆದರೆ ಅದಾನಿ ಗ್ರೂಪ್‌ ಮಾರುಕಟ್ಟೆ ನಿಯಮಗಳನ್ನು ಉಲ್ಲಂಘಿಸಿರುವುದು ಹಾಗೂ ಮಾರುಕಟ್ಟೆ ನಿಯಂತ್ರಜ ಸೆಬಿ ಅದನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಸಮಿತಿಯ ವರದಿ ತಿಳಿಸಿದೆ.

ಗೌತಮ್‌ ಅದಾನಿ-ಹಿಂಡನ್‌ಬರ್ಗ್‌ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ನಡೆಸುತ್ತಿರುವ ತನಿಖೆಯ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿತ್ತು. “ಸೆಬಿಯು ತನಿಖೆ ಹಾಗೂ ನಿಯಂತ್ರಕ ಸಂಸ್ಥೆಯಾಗಿರುವುದರಿಂದ ಅದರ ತನಿಖೆಯಲ್ಲಿ ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡಲು ಆಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಇದರಿಂದಾಗಿ ಗೌತಮ್‌ ಅದಾನಿ ನೇತೃತ್ವದ ಗ್ರೂಪ್‌ಗೆ ರಿಲೀಫ್‌ ಸಿಕ್ಕಿತ್ತು.

ಇದನ್ನೂ ಓದಿ: Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Continue Reading

ದೇಶ

Serial Killer: ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದ! ಇಲ್ಲಿದೆ ವಿಲಕ್ಷಣ ಹಂತಕನ unusual story!

Serial Killer: ಹಂತಕ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಬಳಿಕ ಅವರ ಬಳಿಯಿಂದ ಬಿಂದಿ ಮತ್ತು ಲಿಪ್‌ಸ್ಟಿಕ್‌ ಅನ್ನು ಎತ್ತಿಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಇದೀಗ ಆತನ ಹೆಡೆಮುರಿ ಕಟ್ಟಿರುವ ಪೊಲೀಸರು ಈ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Serial Killer
Koo

ಲಖನೌ: ಉತ್ತರಪ್ರದೇಶ(Uttar Pradesh)ದಲ್ಲಿ ಅರೆಸ್ಟ್‌ ಆಗಿರುವ ಸೀರಿಯಲ್‌ ಕಿಲ್ಲರ್‌(Serial Killer)ಬಗ್ಗೆ ಅನೇಕ ವಿಚಾರಗಳು ಬಯಲಾಗುತ್ತಿದೆ. ಈತನ ಪತ್ತೆಗಾಗಿ 22 ಪೊಲೀಸರ ತಂಡ ಬಲೆ ಬೀಸಿತ್ತು. ಮತ್ತು ಬರೋಬ್ಬರಿ 1.50 ಲಕ್ಷ ಮೊಬೈಲ್‌ ಫೋನ್‌ ನಂಬರ್‌ಗಳನ್ನು ಟ್ರ್ಯಾಕ್‌ ಮಾಡಲಾಗಿದೆ. ಇನ್ನು ಕಿರುಕುಳ ನೀಡುತ್ತಿದ್ದ ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದಿದ್ದಾನೆ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

ಜೂನ್ 2023 ಮತ್ತು ಜುಲೈ 2024 ರ ನಡುವೆ ಬರೇಲಿ ಶಾಹಿ ಮತ್ತು ಶಿಶ್‌ಗಢ ಪೊಲೀಸ್ ವೃತ್ತದ ಅಡಿಯಲ್ಲಿ ಸುಮಾರು ಒಂಬತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡು ಸೈಕೋ ಕಿಲ್ಲರ್ ಅನ್ನು ನಾವು ಬಂಧಿಸಿದ್ದೇವೆ. ನಾವು 22 ತಂಡಗಳನ್ನು ರಚಿಸಿದ್ದೇವೆ ಮತ್ತು ಆತನನ್ನು ಪತ್ತೆಹಚ್ಚಲು ‘ತಲಾಶ್’ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೆವು ಎಂದು ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಹೇಳಿದ್ದಾರೆ. ಬಂಧಿತನನ್ನು 38 ವರ್ಷದ ಕುಲದೀಪ್‌ ಕುಮಾರ್‌ ಗಂಗ್ವಾರ್‌ ಎಂದು ಗುರುತಿಸಲಾಗಿದೆ.

ಕೊಲೆ ಮಾಡಿ ಬಿಂದಿ, ಲಿಪ್‌ಸ್ಟಿಕ್‌ ಎತ್ತಿಡುತ್ತಿದ್ದ

ಇನ್ನು ಕೊಲೆಗಾರ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಬಳಿಕ ಅವರ ಬಳಿಯಿಂದ ಬಿಂದಿ ಮತ್ತು ಲಿಪ್‌ಸ್ಟಿಕ್‌ ಅನ್ನು ಎತ್ತಿಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಇದೀಗ ಆತನ ಹೆಡೆಮುರಿ ಕಟ್ಟಿರುವ ಪೊಲೀಸರು ಈ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಲದೀಪ್‌ ಬಾಲ್ಯ ಅಷ್ಟೊಂದು ಸುಖಮಯವಾಗಿರಲಿಲ್ಲ. ತಾಯಿ ಬಾಲ್ಯದಲ್ಲೇ ಸಾವನ್ನಪ್ಪಿದ ಬಳಿಕ ತಂದೆ ಇನ್ನೊಂದು ಮದುವೆಯಾಗಿದ್ದ. ಮಲತಾಯಿಯ ಕಿರುಕುಳದಿಂದ ಬೇಸತ್ತಿದ್ದ ಕುಲದೀಪ್‌ಗೆ ಮಹಿಳೆಯರ ಮೇಲೆ ಒಂದು ರೀತಿಯ ದ್ವೇಷ ಬೆಳೆದಿತ್ತು ಎಂಬುದು ಪೊಲೀಸ್‌ ತನಿಖೆ ವೇಳೆ ಬಯಲಾಗಿದೆ. ಸದ್ಯ ಆತನನ್ನು ವೈದ್ಯಕೀಯ ಚಿಕಿತ್ಸೆಗೊಳಪಡಿಸಲಾಗಿದೆ.

ಇದನ್ನೂ ಓದಿ: Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Continue Reading

ಉದ್ಯೋಗ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ. ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7.

VISTARANEWS.COM


on

Job Alert
Koo

ಬೆಂಗಳೂರು: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ (Gas Authority of India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ (GAIL Recruitment 2024). ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7 (Job Alert).

ಹುದ್ದೆಗಳ ವಿವರ

ಜೂನಿಯರ್ ಎಂಜಿನಿಯರ್ (ಕೆಮಿಕಲ್)- 2 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ / ಪೆಟ್ರೋಕೆಮಿಕಲ್/ ಕೆಮಿಕಲ್ ಟೆಕ್ನಾಲಜಿ/ ಪೆಟ್ರೋಕೆಮಿಕಲ್ ಟೆಕ್ನಾಲಜಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)- 1 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್/ ಪ್ರೊಡಕ್ಷನ್/ ಪ್ರೊಡಕ್ಷನ್ & ಇಂಡಸ್ಟ್ರಿಯಲ್/ ಮ್ಯಾನುಫ್ಯಾಕ್ಚರಿಂಗ್/ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಫಾರ್‌ಮ್ಯಾನ್‌ (ಎಲೆಕ್ಟ್ರಿಕಲ್) 1 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಇನ್‌ಸ್ಟ್ರುಮೆಂಟೇಶನ್) 14 ಹುದ್ದೆ, ವಿದ್ಯಾರ್ಹತೆ: ಇನ್‌ಸ್ಟ್ರುಮೆಂಟೇಶನ್ / ಇನ್‌ಸ್ಟ್ರುಮೆಂಟೇಶನ್ & ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಸಿವಿಲ್) 6 ಹುದ್ದೆ, ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಜೂನಿಯರ್‌ ಸೂಪರಿಟೆಂಡೆಂಟ್‌ 5 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಕೆಮಿಸ್ಟ್ 8 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ
ಜೂನಿಯರ್ ಅಕೌಂಟೆಂಟ್ 14 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ (ಇಂಟರ್), ಸ್ನಾತಕೋತ್ತರ ಪದವಿ, ಎಂ.ಕಾಂ
ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ) 3 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಆಪರೇಟರ್ (ಕೆಮಿಕಲ್) 73 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) 44 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಇನ್‌ಸ್ಟ್ರುಮೆಂಟೇಶನ್) 45 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಮೆಕ್ಯಾನಿಕಲ್) 39 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಟೆಲಿಕಾಂ ಮತ್ತು ಟೆಲಿಮೆಟ್ರಿ) 11 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಆಪರೇಟರ್ (ಫೈರ್) 39 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಆಪರೇಟರ್ (ಬಾಯ್ಲರ್) 8 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಅಕೌಂಟ್ಸ್ ಅಸಿಸ್ಟೆಂಟ್ 13 ಹುದ್ದೆ, ವಿದ್ಯಾರ್ಹತೆ: ಕಾಮರ್ಸ್‌ನಲ್ಲಿ ಪದವಿ, ಬಿ.ಕಾಂ
ಬಿಸಿನೆಸ್ ಅಸಿಸ್ಟೆಂಟ್ 65 ಹುದ್ದೆ, ವಿದ್ಯಾರ್ಹತೆ: ಬಿಬಿಎ, ಬಿಬಿಎಸ್, ಬಿಬಿಎಂ, ಪದವಿ

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 26ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 50 ರೂ. ಪಾವತಿಸಬೇಕು. ಉಳಿದ ವಿಭಾಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಲಿಖಿತ ಪರೀಕ್ಷೆ, ಕಂಪ್ಯೂಟರ್‌ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://gailonline.com/CRApplyingGail.html)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲೊಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Continue Reading
Advertisement
Kolkata Doctor Murder Case
ದೇಶ2 mins ago

ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Duniya Vijay bheema collection 2nd day
ಸ್ಯಾಂಡಲ್ ವುಡ್2 mins ago

Duniya Vijay: ಎರಡನೇ ದಿನವೂ ಅಬ್ಬರ ಮುಂದುವರಿಸಿದ ʻಭೀಮʼ: ಕಲೆಕ್ಷನ್‌ ಎಷ್ಟು?

Sarabjot Singh
ಕ್ರೀಡೆ20 mins ago

Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

Hindenburg
ದೇಶ49 mins ago

Hindenburg: ಹಿಂಡನ್‌ಬರ್ಗ್‌ ಸ್ಫೋಟಕ ವರದಿ: ಆರೋಪ ತಳ್ಳಿ ಹಾಕಿದ ಅದಾನಿ ಗ್ರೂಪ್‌

Money Guide
ಮನಿ-ಗೈಡ್49 mins ago

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Mohammed Siraj
ಕ್ರೀಡೆ50 mins ago

Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Tungabhadra Dam
ಕರ್ನಾಟಕ1 hour ago

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Viral Video
ವೈರಲ್ ನ್ಯೂಸ್2 hours ago

Viral Video: ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ಚುಂಬಿಸಿದ ವಿದ್ಯಾರ್ಥಿನಿ! ತರಗತಿಯಲ್ಲೇ ಪ್ರಣಯ! ವಿಡಿಯೊ ನೋಡಿ

building collpase
ದಾವಣಗೆರೆ2 hours ago

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Shakib Al Hasan
ಕ್ರೀಡೆ2 hours ago

Shakib Al Hasan: ಸೂಪರ್‌ ಓವರ್‌ ಆಡಲು ನಿರಾಕರಿಸಿದ ಶಕಿಬ್; ಟೂನಿಯಿಂದಲೇ ಹೊರಬಿದ್ದ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌