ISRO: ಚಿತ್ರದುರ್ಗದ ಅದೃಷ್ಟದ ನೆಲೆಯಲ್ಲಿ ಯಶಸ್ವಿಯಾದ ಮಾನವರಹಿತ ರಿಯೂಸೆಬಲ್ ರಾಕೆಟ್‌ ಪರೀಕ್ಷೆ - Vistara News

ಚಿತ್ರದುರ್ಗ

ISRO: ಚಿತ್ರದುರ್ಗದ ಅದೃಷ್ಟದ ನೆಲೆಯಲ್ಲಿ ಯಶಸ್ವಿಯಾದ ಮಾನವರಹಿತ ರಿಯೂಸೆಬಲ್ ರಾಕೆಟ್‌ ಪರೀಕ್ಷೆ

ಇಸ್ರೋ ಚಿತ್ರದುರ್ಗದಲ್ಲಿ ಮಾನವರಹಿತ ರಿಯೂಸೆಬಲ್‌ ಉಡಾವಣಾ ವಾಹನವನ್ನು ಯಶಸ್ವಿಯಾಗಿ ಪರೀಕ್ಷೆ ಮಾಡಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಿತ್ರದುರ್ಗ: ಇಸ್ರೋ (ISRO) ಮಗದೊಂದು ಸಾಧನೆ ಮಾಡಿದೆ. ಉಪಗ್ರಹಗಳನ್ನು ಹೊತ್ತು ನಭಕ್ಕೆ ಹಾರುವ ರಾಕೆಟ್‌ಗಳು ಅಲ್ಲಿಯೇ ಸುಟ್ಟು ಭಸ್ಮವಾಗುವುದು ಎಲ್ಲರಿಗೂ ಅರಿವಿರುವ ವಿಚಾರ. ಆದರೆ ಇದೀಗ ಉಪಗ್ರಹವನ್ನು ಹೊತ್ತು ನಭಕ್ಕೆ ಜಿಗಿದು, ಕಕ್ಷೆಯಲ್ಲಿ ಅದನ್ನು ಬಿಟ್ಟು, ವಾಪಸು ಭೂಮಿಗೆ ಬರುವ ರಾಕೆಟ್‌ ಅನ್ನು ಭಾರತದ ಹೆಮ್ಮೆಯ ಇಸ್ರೋ ಯಶಸ್ವಿಯಾಗಿ ಪರೀಕ್ಷೆ ಮಾಡಿದೆ. ಅದರಲ್ಲೂ ನಮ್ಮ ಕರ್ನಾಟಕದ ಚಿತ್ರದುರ್ಗದ ಚಳ್ಳಕೆರೆಯಲ್ಲೇ ಈ ಪ್ರಯೋಗ ನಡೆದಿದೆ.

ಇದನ್ನೂ ಓದಿ: ISRO: ಇಸ್ರೋದಿಂದ ರಿಯೂಸೆಬಲ್ ಲಾಂಚ್ ವೆಹಿಕಲ್‌ನ ಅಟಾನಮಸ್‍ ಲ್ಯಾಂಡಿಂಗ್ ಪರೀಕ್ಷೆ ಸಕ್ಸೆಸ್!
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಕುದಾಪುರ ಡಿಆರ್‌ಡಿಒ ವಾಯುನೆಲೆಯಲ್ಲಿ ಭಾನುವಾರ ಬೆಳಗ್ಗೆ ಇಂಥದ್ದೊಂದು ಪ್ರಯೋಗ ಯಶಸ್ವಿಯಾಗಿ ನಡೆದಿದೆ. ಈ ವೈಮಾನಿಕ ವಲಯ ಬರೋಬ್ಬರಿ 3,600 ಎಕರೆ ಪ್ರದೇಶದಲ್ಲಿದೆ. ಒಂದು ರೀತಿಯಲ್ಲಿ ಇದು ಅದೃಷ್ಟದ ನೆಲ ಎಂದೂ ಹೇಳಬಹುದು. ಏಕೆಂದರೆ ಇಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ವೈಮಾನಿಕ ಪ್ರಯೋಗಗಳು ನಡೆದಿದ್ದು, ಅವೆಲ್ಲವೂ ಯಶಸ್ವಿಯಾಗಿವೆ. ಪ್ರಸಿದ್ಧ ರುಸ್ತುಂ 1, ರುಸ್ತುಂ 2 ಕೂಡ ಇದೇ ನೆಲದಲ್ಲಿ ಯಶಸ್ವಿ ಪ್ರಯೋಗ ಕಂಡವು. ಅಷ್ಟೇ ಅಲ್ಲದೆ ತೇಜಸ್‌ ಯುದ್ಧ ವಿಮಾನ ಕೂಡ ಇಲ್ಲಿ ಯಶಸ್ವಿ ಹಾರಾಟ ಮಾಡಿತ್ತು.

ಮರುಬಳಸಬಹುದಾದ ಲಾಂಚಿಂಗ್ ವೆಹಿಕಲ್ ಸ್ವಾಯತ್ತ ಲ್ಯಾಂಡಿಂಗ್ ವಿಡಿಯೋ

ಸಂಭ್ರಮವೋ ಸಂಭ್ರಮ

ಅಂದ ಹಾಗೆ ಭಾನುವಾರ ನಡೆದ ಈ ಪ್ರಯೋಗದ ಹಿಂದೆ ಇಸ್ರೋದ ಸಾಕಷ್ಟು ಪರಿಶ್ರಮವಿತ್ತು. ಡಿಆರ್‌ಡಿಒ ಜತೆಗೂಡಿಕೊಂಡು ಇಸ್ರೋ ಕೈ ಹಾಕಿದ್ದ ಈ ಸಾಹಸಕ್ಕೆ ವಾಯುಪಡೆಯ ಪೈಲಟ್‌ಗಳು ಸರಿ ಸುಮಾರು ಒಂದು ತಿಂಗಳಿನಿಂದ ಸಹಕಾರ ಕೊಟ್ಟಿದ್ದರು. ಸ್ಥಳೀಯ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌(ಎಟಿಆರ್‌) ಸಿಬ್ಬಂದಿ ರನ್‌ ವೇ ಮತ್ತು ಡಿಆರ್‌ಡಿಒ ಆವರಣದಲ್ಲಿ ಈ ಪ್ರಯೋಗಕ್ಕೆ ಬೇಕಾದಂತಹ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದರು. ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಅಹಮದಾಬಾದ್‌ ಸೇರಿ ಹಲವು ಕಡೆಗಳ ವಿಜ್ಞಾನಿಗಳು ಈ ಪ್ರಯೋಗಕ್ಕೆಂದೇ ತಿಂಗಳ ಮೊದಲು ಚಿತ್ರದುರ್ಗಕ್ಕೆ ಬಂದು ಕೆಲಸ ಆರಂಭಿಸಿದ್ದರು.

ಈ ಪ್ರಯೋಗ ಯಶಸ್ವಿಯಾಗುತ್ತಿದ್ದಂತೆಯೇ ವಿಜ್ಞಾನಿಗಳು, ತಂತ್ರಜ್ಞರು ಸೇರಿ ಪ್ರತಿಯೊಬ್ಬರೂ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಶಿಳ್ಳೆ ಹೊಡೆದು, ಚಪ್ಪಾಳೆ ತಟ್ಟಿ, ಕುಣಿದು ಸಂಭ್ರಮವನ್ನು ಆಚರಿಸಿದ್ದಾರೆ. ಎಲ್ಲರಿಗೂ ಸಿಹಿಯನ್ನೂ ಹಂಚಲಾಗಿದೆ. ಇಸ್ರೋದ ಅಧ್ಯಕ್ಷರಾದ ಎಸ್‌.ಸೋಮನಾಥ ಅವರು ಈ ಪ್ರಯೋಗಕ್ಕಾಗಿ ದುಡಿದ ಪ್ರತಿಯೊಬ್ಬರಿಗೂ ಅಭಿನಂದನೆ ಅರ್ಪಿಸಿದರು. ಮುಖ್ಯ ಅಧಿಕಾರಿಗಳಾದ ಡಾ.ಎಸ್‌.ಉನ್ನೀಕೃಷ್ಣನ್‌, ಎನ್‌.ಶ್ಯಾಮ್‌ ಮೋಹನ್‌, ಡಾ.ಜಯಕುಮಾರ್‌, ಮುತ್ತುಪಾಂಡ್ಯನ್‌, ರಾಮಕೃಷ್ಣ ಮತ್ತಿತರರು ಪ್ರಯೋಗವನ್ನು ನೋಡಲೆಂದು ಬಂದಿದ್ದರು.

ಸ್ವಾಯತ್ತ ಲ್ಯಾಂಡಿಂಗ್ ಯಶಸ್ವಿಯಾಗಿ ಪೂರೈಸಿದ ಲಾಂಚಿಂಗ್ ವೆಹಿಕಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Murder Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯ

Murder Case : ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

Murder Case

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ‌ ತಂದೆ-ಮಗನ ನಡುವೆ ಜಗಳವಾಗಿದ್ದು, ತಂದೆ ಮೇಲೆ ಹಲ್ಲೆ ಮಾಡಿ ಕೆಳಗೆ ಬೀಳಿಸಿ ಮಗನೇ ಕೊಲೆ (Murder Case) ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಘಟನೆ ನಡೆದಿದೆ. ರಂಗಸ್ವಾಮಿ (50) ಮಗನಿಂದಲೇ ಹತ್ಯೆಯಾದವರು. ದೇವರಾಜ್ ಆರೋಪಿ ಆಗಿದ್ದಾನೆ.

ಮನೆಯಲ್ಲಿ ಊಟದ ವಿಚಾರಕ್ಕೆ ತಂದೆ ಜತೆ ದೇವರಾಜ್‌ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ರಂಗಸ್ವಾಮಿಯನ್ನು ಕೆಳಗೆ ಬೀಳಿಸಿದ್ದಾನೆ. ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ‌ ಸಿಪಿಐ (CPI)ಗುಡ್ಡಪ್ಪ, ಹಾಗೂ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ ಆರು ಮಂದಿ ದಾರುಣ ಸಾವು

ಅನಂತಪುರ ಜಿಲ್ಲೆಯ ಶಿಂಗನಮಲ ಮಂಡಲದ ನಾಯನಪಲ್ಲಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅನಂತಪುರ ಇಸ್ಕಾನ್‌ಗೆ ಸೇರಿದವರು ಎಂದು ವರದಿಯಾಗಿದೆ. ತಾಡಿಪತ್ರಿ ನಗರದಲ್ಲಿ ಇಸ್ಕಾನ್ ನಗರ ಸಂಕೀರ್ತನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ತಾಡಿಪತ್ರಿಯಿಂದ ಅನಂತಪುರಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಂತೋಷ್, ಷಣ್ಮುಕ್, ವೆಂಕಣ್ಣ, ಶ್ರೀಧರ್ ಹಾಗೂ ಪ್ರಸನ್ನ, ವೆಂಕಿ ಮೃತ ದುರ್ದೈವಿಗಳು

Continue Reading

ಬೆಂಗಳೂರು

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Actor Darshan : ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ ಬಳ್ಳಾರಿ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡುವಂತೆ ವಕೀಲರು ವಾದ ಮಾಡಿಸಲಿದ್ದಾರೆ.

VISTARANEWS.COM


on

Hc to hear Darshans bail plea tomorrow

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ (Actor Darshan) ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest7 seconds ago

ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿ ಪ್ರತಿಭಟನೆ; ದೇಶದ ಕ್ಷಮೆ ಕೇಳಲು ಬಿಜೆಪಿ ಆಗ್ರಹ

Latest59 minutes ago

ಬಿಸಿಲಿನ ತಾಪಕ್ಕೆ 32 ನವಿಲುಗಳ ಸಾವು: ತುಮಕೂರು ಜಿಲ್ಲೆಯಲ್ಲಿ ಹೀಟ್‌ಸ್ಟ್ರೋಕ್ ಭೀತಿ!

Latest1 hour ago

SSLC ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಮೊದಲ ಸ್ಥಾನದಲ್ಲಿ ಉಡುಪಿ; ಕಲಬುರಗಿಗೆ ಕೊನೆಯ ಸ್ಥಾನ

Latest1 hour ago

ಅಂಬಾನಿ ಮನೆ ಅಡುಗೆಮನೆ ಮೆನು ಹೇಗಿರುತ್ತೆ ಗೊತ್ತಾ? ಪ್ರತಿದಿನ 4000 ರೊಟ್ಟಿ ತಯಾರಾಗುವುದರ ಹಿಂದಿನ ಅಸಲಿ ಕಾರಣವೇನು?

bigbreaking2 hours ago

Karnataka SSLC Result 2026 : ಇತಿಹಾಸದಲ್ಲೇ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ 94. 1% ಫಲಿತಾಂಶ: 7 ವಿದ್ಯಾರ್ಥಿಗಳಿಗೆ 625ಕ್ಕೆ 625

Latest2 hours ago

ಹುಬ್ಬಳ್ಳಿ: ಮತ್ತೊಂದು ವಿಮಾನ ತಡವಾಗಿ ಭೂ ಸ್ಪರ್ಶ; ಆಂತಕಕ್ಕೀಡಾದ ಪ್ರಯಾಣಿಕರು

Latest2 hours ago

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮತದಾನ ಆರಂಭ; ಸ್ಟಾಲಿನ್‌, ಮಮತಾ ಬ್ಯಾನರ್ಜಿ ಹಣೆಬರಹ ನಿರ್ಧಾರ

Latest3 hours ago

ಪಶ್ಚಿಮ ಬಂಗಾಳದ ಚುನಾಣಾ ಜಂಗಿ ಕುಸ್ತಿಯಲ್ಲಿ ಗೆಲವು ಯಾರಿಗೆ?

Latest3 hours ago

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ತಿರುಪತಿ ತಿಮ್ಮಪ್ಪನ ದೇಗುಲ: 100 ಕೋಟಿ ವೆಚ್ಚ, 7 ಎಕರೆ ಜಾಗ ಮಂಜೂರು

Latest3 hours ago

ಬ್ರೇಕ್ ವಿಫಲ:ಉತ್ತರ ಪ್ರದೇಶದಲ್ಲಿ ಭೀಕರ ಸರಣಿ ಅಪಘಾತ: 11 ಮಂದಿ ಸಜೀವ ದಹನ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌