priyank kharge warns chakravarthi sulibele regarding mallikarjun kharge name to ESIMallikarjun Kharge: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವೆ: ಪ್ರಿಯಾಂಕ್‌ ಖರ್ಗೆ ಹೇಳಿಕೆ - Vistara News

ಕರ್ನಾಟಕ

Mallikarjun Kharge: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವೆ: ಪ್ರಿಯಾಂಕ್‌ ಖರ್ಗೆ ಹೇಳಿಕೆ

ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಅವ್ರ ಸ್ವಾಮೀಜಿಗಳು ಎರಡು ತಿಂಗಳು ಸತ್ಯಾಗ್ರಹ ಕೂತಿದ್ರು. ಆಗ ಯಾಕೆ ಸ್ವಾಮೀಜಿಗಳಿಗೆ ಬೆಂಬಲ ಕೊಟ್ಟಿಲ್ಲ? ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

VISTARANEWS.COM


on

Priyank kharge-warns-chakravarthi-sulibele regarding Mallikarjun Kharge issue
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರಿನ ರೀತಿಯಲ್ಲೆ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದೆ ಎಂಬ ಚಕ್ರವರ್ತಿ ಸೂಲಿಬೆಲೆ ಆರೋಪದ ವಿಚಾರಕ್ಕೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಮಾನಹಾನಿ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೆಲಸ ಇಲ್ಲದವರು ಮೈ ಎಲ್ಲಾ‌ ಪರಚಿಕೊಂಡ್ರಂತೆ. ಸೂಲಿಬೆಲೆ ಹಾಗೂ ಬಿಜೆಪಿಯವರು ಪ್ರಚಾರ ಮಾಡ್ತಲೇ ಇದ್ದಾರೆ ಇದನ್ನು. ಹಾಗಾದರೆ ಡಿಮಾಲಿಷ್ ಮಾಡಿ, ಯಾರು ಬೇಡ ಅಂದ್ರು? ಮೈಮೇಲೆ ಪ್ರಜ್ಞೆ ಇದ್ಯಿಯಾ ಇವರಿಗೆ? ಪ್ರಬುದ್ಧರು ಅಂತಾರ ಇವರಿಗೆ?

ಸೂಲಿಬೆಲೆ 10 ವರ್ಷಗಳಿಂದ ಎಷ್ಟು ಸುಳ್ಳು ಹೇಳಿದ್ದಾನೆ ತೆಗೆದು ನೋಡಿ. ನಾನು ವಾರ್ನಿಂಗ್ ಮಾಡ್ತೇನೆ, ಇವರು ಕ್ರಿಮಿನಲ್ ಡಿಫಾಮೆಷನ್ ಎದುರಿಸಬೇಕಾಗುತ್ತದೆ. ಬಡವರಿಗೆ ಕಟ್ಟಿರುವ ಆಸ್ಪತ್ರೆ ಅದು. ಸರ್ಕಾರ ಬಂದು‌ 9 ವರ್ಷ ಆಯಿತು. ಇವರಿಗೆ ESI ಕಟ್ಟೋದು ಬಿಡಿ, ಆಸ್ಪತ್ರೆಗೆ ಪೇಂಟ್ ಮಾಡುವ ಯೋಗ್ಯತೆ ಇಲ್ಲ.

ಇವರು ಬಾಡಿಗೆ ಭಾಷಣಕಾರರು. ಎಷ್ಟು ಬಾಡಿಗೆ ಕೊಡ್ತಾರೆ, ಅಷ್ಟು ಭಾಷಣ ಮಾಡ್ತಾರೆ. ಯಾರಾದರೂ ಆ ರೀತಿ‌ ಮಾಡ್ತಾರಾ? ವೈಜ್ಞಾನಿಕವಾಗಿ ಕಟ್ಟಿರುತ್ತಾರೆ. ಮೋದಿ ಇವರ ಸಮೀಪದವರು ಅಲ್ಲವಾ? ಆಕ್ಷನ್ ತೆಗೆದುಕೊಳ್ಳಿ. ಅವನು ಯಾವನೋ ಹೇಳ್ತಾನೆ ಅಂತ ಮಾಧ್ಯಮದವರು ನಂಬಬೇಡಿ.

10 ವರ್ಷಗಳಿಂದ ಅಪಪ್ರಚಾರ ಮಾಡ್ತಾ ಇದ್ದಾರೆ. ತಾಳ್ಮೆ ಪರೀಕ್ಷೆ‌‌ಮಾಡಬೇಡಿ ಬಿಜೆಪಿ ಅವರೇ, ಕ್ರಿಮಿನಲ್ ಡಿಫಮೆಷನ್ ಗೆ ರೆಡಿ ಆಗಿದೆ. ಕಾನೂನಾತ್ಮಕವಾಗಿ ತುಳಿಬೇಕಾಗುತ್ತದೆ ನಿಮಗೆ. ಖರ್ಗೆ ಸಾಹೇಬರು ರಾಜ್ಯಸಭೆಯಲ್ಲಿ, ನಾನು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ತತ್ವದ ಬಗ್ಗೆ ಮಾತಾಡುತ್ತೇನೆ ಆದ್ದರಿಂದ ಟಾರ್ಗೆಟ್ ‌ಮಾಡ್ತಾರೆ. ಈ ಹಿಂದೆ ಗಣೇಶ್ ಎಂಬುವವರು ಐವತ್ತು ಸಾವಿರ ಕೋಟಿ ರೂ. ಆಸ್ತಿ ಇದೆ ಎಂದಿದ್ದರು. ಅವರಿಗೆ ಲೀಗಲ್ ನೋಟಿಸ್ ಕೊಟ್ಟಿದ್ದೆ, ಅವರು ಕ್ಷಮೆ ಕೇಳಿದ್ರು. ಇಬ್ಬರಿಗೆ ಕ್ರಿಮಿನಲ್ ಡಿಫಮೆಷನ್ ಹಾಕಲಾಗಿದೆ, ಅವರು ಒಳಗೆ ಹೋಗ್ತಾರೆ.

ಬಾಡಿಗೆ ಭಾಷಣಕಾರರಿಗೆ ನಾನು ಉತ್ತರ ಕೊಡಲ್ಲ. ಆದರೆ ಅದೇನು ಪ್ರಚಾರ ಮಾಡಿದ್ದಾರೆ ನೋಡ್ತೇನೆ. ಅದು ಏನಾದರೂ ಇದ್ರೆ, 100% ಕ್ರಮ ಆಗುತ್ತದೆ‌ ಎಂದರು.

ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಅವ್ರ ಸ್ವಾಮೀಜಿಗಳು ಎರಡು ತಿಂಗಳು ಸತ್ಯಾಗ್ರಹ ಕೂತಿದ್ರು. ಆಗ ಯಾಕೆ ಸ್ವಾಮೀಜಿಗಳಿಗೆ ಬೆಂಬಲ ಕೊಟ್ಟಿಲ್ಲ? ಬೊಮ್ಮಾಯಿ ಮಾಮಾ ಜೊತೆ ಮಾತಾಡ್ತೀನಿ ಅಂತಾ ಸುದೀಪ್ ಹೇಳಬಹುದಿತ್ತಲ್ವಾ? ಅವ್ರ ಮಾಮ ಜೊತೆ ಮಾತಾಡಿ ಎಸ್‌ಸಿಎಸ್‌ಟಿಯವರಿಗೆ ಮೀಸಲಾತಿ‌ ಕೊಡಿಸಬಹುದಿತ್ತಲ್ವಾ?

ಬಾಲಿವುಡ್ ವರ್ಸಸ್ ಸ್ಯಾಂಡಲ್ ವುಡ್ ಎಂದಾಗ ಕನ್ನಡ ಅಸ್ಮಿತೆ ಪರ ಸುದೀಪ್ ನಿಂತಿದ್ರು. ಇದು 40% ಬಿಜೆಪಿ ಸರ್ಕಾರ. ಅವರ ಸಿನಿಮಾಗಳನ್ನ ಬಿಜೆಪಿಯವ್ರು ಮಾತ್ರ ನೋಡ್ತಾರಾ? ಅವ್ರ ಅಭಿಮಾನಿಗಳು ಎಲ್ಲಾ ಪಾರ್ಟಿಗಳಲ್ಲೂ ಇದ್ದಾರೆ ಎಂದರು.

ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಬಿಜೆಪಿ ಯಾವ ಧಿಕ್ಕಿನ‌ಕಡೆ ಕೊಂಡೊಯ್ಯುತ್ತಿದೆ? ಅಭಿವೃದ್ಧಿ ಬಗ್ಗೆ ಮಾತನಾಡಬೇಡಿ ಅಂತ ಕಟೀಲ್ ಹೇಳ್ತಾರೆ. ಬಿಜೆಪಿಯವರು ಸಂಪೂರ್ಣ ಹತಾಶರಾಗಿದ್ದಾರೆ. ನಿಜವಾದ ವಿಚಾರಗಳನ್ನ ಮುಚ್ಚಿ ಹಾಕ್ತಿದ್ದಾರೆ. ಬಿಜೆಪಿಯವರು ಕರ್ನಾಟಕವನ್ನ ಒಡೆಯುತ್ತಿದ್ದಾರೆ.

ಈ ನೆಲ, ಜಲದ ಬಗ್ಗೆ ಅವರಿಗೆ ಪ್ರೀತಿಯಿಲ್ಲ. ಕರ್ನಾಟಕ ಏಕೀಕರಣದ ಬಗ್ಗೆ ಗಮನವಿಲ್ಲ. ರಾಯಚೂರನ್ನ ಆಂಧ್ರಕ್ಕೆ ಸೇರಿಸಬೇಕು ಎಂದು ರಾಯಚೂರು ಶಾಸಕ‌ ಶಿವರಾಜ್ ಪಾಟೀಲ್ ಹೇಳ್ತಾರೆ. ಆನಂದ್ ಸಿಂಗ್ ಕರ್ನಾಟಕ ಒಡೆಯಬೇಕು ಅಂತಾರೆ. ಉತ್ತರ, ದಕ್ಷಿಣ ಕರ್ನಾಟಕ‌ ಮಾಡೋಣ ಅಂತಾರೆ. ಆದರೂ ಇವರ ಮಾತಿಗೆ ಬಿಜೆಪಿ ಕಡಿವಾಣ ಹಾಕಲ್ಲ. ಬಿಜೆಪಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕಲ್ಲ? ಈಗ ಮಹಾರಾಷ್ಟ್ರದವರು ಕೆಣಕುತ್ತಿದ್ದಾರೆ. ಮೋದಿ, ಶಾ ಪದೇ ಪದೇ ಇಲ್ಲಿಗೆ ಬರ್ತಿದ್ದಾರೆ.

ವಿಶ್ವ, ರಾಷ್ಟ್ರದ ಬಗ್ಗೆ ಅವರು ಮಾತನಾಡ್ತಾರೆ, ಕಮಲ ಅರಳುತ್ತೆ ಅಂತ ಹೇಳ್ತಾರೆ. ಇಲ್ಲಿ ನನ್ನ‌ ಮೇಲೆ ಸಂಚು‌ ನಡೆಯುತ್ತಿದೆ ಅಂತಾರೆ. ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡೋಕೆ ಆಗುತ್ತೆ, ರಾಜ್ಯದ ಬಗ್ಗೆ ಮಾತನಾಡೋಕೆ ಆಗಲ್ಲ. ಮಹಾರಾಷ್ಟ್ರದ ಬಗ್ಗೆ ಇವರು ಮಾತನಾಡ್ತಿಲ್ಲ. ಪದೇ ಪದೇ ಅವರು ಕನ್ನಡಿಗರನ್ನ ಕೆಣಕ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Priyank Kharge: ಸರ್ಕಾರದ ವಿರುದ್ಧ ಮಾತನಾಡಿದರೆ ಎಫ್‌ಐಆರ್‌ ದಾಖಲಾಗುತ್ತಿದೆ: ಪ್ರಿಯಾಂಕ್‌ ಖರ್ಗೆ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶ್ರದ್ಧಾಂಜಲಿ

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

ಲಕ್ಕೂರು ಆನಂದ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

ಲಕ್ಕೂರು ಆನಂದ lakkuru Anand
Koo

ಕಲಬುರಗಿ: ಪ್ರತಿಭಾವಂತ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ (Central Sahitya Akademy) ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ (Lakkuru Ananda) ಅವರು ಮೇ 20ರಂದು ನಿಧನ (Death news) ಹೊಂದಿದ್ದಾರೆ. ಪೊಲೀಸರು ಇದೊಂದು ಅನುಮಾನಾಸ್ಪದ ಸಾವು (UDR Case) ಎಂದು ‌ದೂರು ದಾಖಲಿಸಿಕೊಂಡಿದ್ದಾರೆ.

44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಆಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ.

ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದರಿಗೆ ಸಂದಿದೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಆನಂದ್ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

Continue Reading

ರಾಜಕೀಯ

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

Prajwal Revanna Case: ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲದ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Prajwal Revanna Case Shivarame Gowdas Deve Gowda suicide statement says Nikhil Kumaraswamy
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamu) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading

ಬೆಳಗಾವಿ

Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Baby Death : ಮೂರು ವರ್ಷದ ಮಗುವೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಮಗುವು ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಗಿದೆ ಎಂದು ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

murder case in Belgavi
ರಾಯಣ್ಣ ಮತ್ತು ಆತನ ಎರಡನೇ ಪತ್ನಿ ಸಪ್ನಾ. ಮೊದಲ ಪತ್ನಿ ಮಗು ಸಮೃದ್ದಿ ಮೃತ ದುರ್ದೈವಿ
Koo

ಬೆಳಗಾವಿ: ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಕಂದಮ್ಮ (Baby Death) ಬಲಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಲತಾಯಿಯೇ 3 ವರ್ಷದ ಮಗುವನ್ನು ಕೊಂದಿದ್ದಾಳೆ (Murder case) ಎನ್ನಲಾಗಿದೆ. ಸಮೃದ್ಧಿ(3) ಮೃತ ದುರ್ದೈವಿ. ಮಲತಾಯಿ ಸಪ್ನಾ ರಾಯಣ್ಣ ನಾವಿ ಎಂಬಾಕೆ ಕೊಲೆ ಆರೋಪ ಎದುರಿಸುತ್ತಿರುವ ಮಲತಾಯಿ ಆಗಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ ಹೆಚ್ ಗ್ರಾಮದಲ್ಲಿ ಘಟನೆ ನಡೆದಿದೆ.

ಮಗುವಿನ ಮೇಲೆ ಕ್ರೌರ್ಯ ಮೆರೆದು ಕೊಲೆ ಮಾಡಿದ್ದಾಗಿ ಸಮೃದ್ಧಿಯ ಅಜ್ಜಿ ಹಾಗೂ ಚಿಕ್ಕಪ್ಪ ಆರೋಪಿಸಿದ್ದಾರೆ. ಸಮೃದ್ಧಿ ತಂದೆ ರಾಯಣ್ಣ ಸಿಆರ್‌ಪಿಎಫ್ ಯೋಧನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮೊದಲ ಪತ್ನಿ ನಿಧನದ ನಂತರ ಎರಡನೇ ಮದುವೆಯಾಗಿದ್ದರು. ಇದೀಗ ರಾಯಣ್ಣನ 2ನೇ ಪತ್ನಿ ಸಪ್ನಾ ಎಂಬಾಕೆ ಸಮೃದ್ದಿಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Murder case in Belgavi
ರಾಯಣ್ಣ ಹಾಗೂ ಮೊದಲ ಪತ್ನಿ ಭಾರತಿ ನಾವಿ, ಆಕೆಯ ಮಗಳು ಸಮೃದ್ದಿ

ಮೊದಲ ಪತ್ನಿ ಕೊಲೆ ಆರೋಪ ಎದುರಿಸುತ್ತಿರುವ ಕುಟುಂಬ

ಈಗಾಗಲೇ ಮೊದಲ ಪತ್ನಿ ಭಾರತಿ ನಾವಿ ಕೊಲೆ ಆರೋಪವನ್ನು ರಾಯಣ್ಣ ಹಾಗೂ ಆತನ ಕುಟುಂಬಸ್ಥರು ಎದುರಿಸುತ್ತಿದ್ದಾರೆ. ಪತಿ ರಾಯಣ್ಣ ಹಾಗೂ ತಾಯಿ ಶೋಭಾ ಹಾಗೂ ತಂಗಿ ರೂಪಾ ವಿರುದ್ಧ 2021ರಲ್ಲಿ ಮೃತ ಭಾರತಿ ನಾವಿ ಕುಟುಂಬಸ್ಥರು ನಾಗಪುರದ ಕಾರದಾ ಠಾಣೆಯಲ್ಲಿ ದಾಖಲಿಸಿದ್ದಾರೆ. ಆ ಪ್ರಕರಣದಲ್ಲೂ ರಾಯಣ್ಣ ನಾವಿ ಕುಟುಂಬ ಆರೋಪಿಯಾಗಿದ್ದರು. ಅಂದು ತಾಯಿ ಕೊಂದರು, ಇಂದು ಆಕೆಯ ಮಗಳು ಸಮೃದ್ಧಿಯನ್ನೂ ಕೊಂದಿದ್ದಾರೆ ಎಂದು ಮೊದಲ ಪತ್ನಿ ಕುಟುಂಬಸ್ಥರು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

ಕೊಯಂಬತ್ತೂರ್‌: ಕಳೆದ ತಿಂಗಳು ಅಪಾರ್ಟ್‌ಮೆಂಟ್‌(Apartment)ನ ಕಿಟಕಿಯಿಂದ ವಿಂಡೋ ಪೋರ್ಚ್‌(Window Porch) ಮೇಲೆ ಬಿದ್ದು, ಪವಾಡ ಸದೃಶ್ಯವಾಗಿ ಬದುಕಿ ಬಂದ ಏಳು ತಿಂಗಳ ಮಗುವಿನ(Toddler) ತಾಯಿ ಇದೀಗ ಆತಹತ್ಯೆಗೆ ಶರಣಾಗಿದ್ದಾಳೆ(Viral News). ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ಮಗು ಅದೃಷ್ಟವಶಾತ್‌ ಅಲ್ಲೇ ನೇತಾಡಿಕೊಂಡು ಸ್ಥಳೀಯರ ಸಹಾಯದಿಂದ ಬದುಕುಳಿದಿತ್ತು.

ಈ ಘಟನೆ ಬಳಿಕ ಮಗುವಿನ ತಾಯಿ ರಮ್ಯಾ ತೀರ ಖಿನ್ನತೆಗೊಳಗಾಗಿದ್ದರು. ತನ್ನ ಅಜಾಗುರೂಕತೆಯಿಂದ ದುರಂತ ಸಂಭವಿಸಿದೆ ಎಂಬುದನ್ನು ಪದೇ ಪದೇ ಹೇಳುತ್ತಲೇ ಇದ್ದರು. ಇನ್ನು ನೆರೆಹೊರೆಯವರು, ನೆಟ್ಟಿಗರು ಈ ಘಟನೆ ಬಗ್ಗೆ ತಿಳಿದವರು ಎಲ್ಲರೂ ರಮ್ಯಾಳ ಅಜಾಗುರೂಕತೆಯಿಂದಲೇ ಈ ಘಟನೆ ನಡೆದಿದೆ ಎಂದು ದೂರುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ರಮ್ಯಾ ಖಿನ್ನತೆಗೊಳಗಾಗಿದ್ದರು. ಇದನ್ನು ಗಮನಿಸಿದ ಆಕೆಯ ಪತಿ ವೆಂಕಟೇಶ್‌ ಕೊಯಂಬತ್ತೂರ್‌ನಲ್ಲಿರುವ ಆಕೆಯ ತವರು ಮನೆಗೆ ಕರೆದುಕೊಂಡು ಬಂದಿದ್ದರು.

ಭಾನುವಾರ ರಮ್ಯಾಳನ್ನು ಒಬ್ಬಳೇ ಮನೆಯಲ್ಲಿ ಬಿಟ್ಟು ಎಲ್ಲರೂ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ವಾಪಸ್‌ ಮನೆಗೆ ಬಂದಾಗ ರಮ್ಯಾ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡು ಮನೆಯವರು ಗಾಬರಿಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ. ಇನ್ನು ಆಕೆಯ ಸಾವಿಗೆ ಕಾರಣ ಏನೆಂಬುದು ಸರಿಯಾಗಿ ತಿಳಿದುಬಂದಿಲ್ಲ. ಆಕೆ ಏನಾದರೂ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಏ.28ರಂದು ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಮಗುವಿನ ರಕ್ಷಣೆಗೆ ಧಾವಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಂಡೋ ಪೋರ್ಚ್‌ ಮೇಲೆ ಬಿದ್ದಿ ಮಗುವಿನ ರಕ್ಷಣೆಗೆ ದೌಡಾಯಿಸಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಂದು ಕಿಟಕಿಯಿಂದ ಹೊರಬಂದು ಮಗುವನ್ನು ರಕ್ಷಿಸಿಲು ಹರಸಾಹನ ಪಟ್ಟರು. ನಾಲ್ಕೈದು ಜನ ಕಿಟಕಿಯ ಹೊರ ಭಾಗದಲ್ಲಿರುವ ಸಣ್ಣ ಜಾಗದಲ್ಲಿ ನಿಂತು ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ರಕ್ಷಿಸಿದ್ದಾರೆ. ಇನ್ನು ಕೆಳಗೆ ಅನೇಕ ಜನ ದೊಡ್ಡ ಬಟ್ಟೆಯೊಂದು ಹಿಡಿದು ಮಗುವಿನ ರಕ್ಷಣೆಗೆ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಶಂಸೆ ವ್ಯಕ್ತಪಡಿಸಿರುವ ನೆಟ್ಟಿಗರು, ಅಚಾನಕ್ಕಾಗಿ ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದ್ದ 7 ತಿಂಗಳಿನ ಮಗುವನ್ನು ಬಹಳ ಜಾಣ್ಮೆಯಿಂದ ರಕ್ಷಿಸಿದ್ದಾರೆ. ಅವರ ಕಾರ್ಯಕ್ಕೆ ಸಲಾಂ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

‌Rave Party: ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ ತೆಲುಗು ನಟಿ; ಐವರ ಬಂಧನ

‌Rave Party: ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದಾರೆ. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದಾರೆ. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ.

VISTARANEWS.COM


on

rave party telugu actress hema
Koo

ಬೆಂಗಳೂರು: ನಿನ್ನೆ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ. ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಮುಜುಗರ ತಪ್ಪಿಸಲು ಅದೇ ಫಾರಂ ಹೌಸ್‌ನಲ್ಲೇ ವಿಡಿಯೋ ಚಿತ್ರೀಕರಿಸಿ ಅವರು ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ. ಸದ್ಯ ನಟಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದಾರೆ. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದಾರೆ. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ ಪೊಲೀಸರು ರೇವ್‌ ಪಾರ್ಟಿಯಲ್ಲಿದ್ದ 101 ಮಂದಿಯನ್ನೂ ಕೂರಿಸಿಕೊಂಡು, ಯಾರ್ಯಾರು ಡ್ರಗ್ಸ್‌ ತೆಗೆದುಕೊಂಡಿದ್ದಾರೆ ಎಂಬುದಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸುತ್ತಿದ್ದಾರೆ. ಮೆಡಿಕಲ್‌ ಟೀಮನ್ನು ಫಾರಂ ಹೌಸ್‌ಗೆ ಕರೆಸಲಾಗಿದ್ದು, ಮೆಡಿಕಲ್‌ ಮುಗಿಯುವವರೆಗೆ ಎಲ್ಲ ಅತಿಥಿಗಳನ್ನೂ ಫಾರಂ ಹೌಸ್‌ ತೊರೆಯದಂತೆ ನಿರ್ಬಂಧಿಸಲಾಗಿದೆ. ಸದ್ಯ 30 ಜನ ಹುಡುಗಿಯರು, 71 ಜನ ಪುರುಷರು ಹೀಗೆ ಒಟ್ಟು 101 ಜನರ ವಿಚಾರಣೆ ನಡೆಯುತ್ತಿದೆ.

ಪಾರ್ಟಿ ಆಯೋಜಕ, ಆರೋಪಿ ವಾಸು ಇದೀಗ ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದಾನೆ. ಆದರೆ ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರಾದರು ಬರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿವೆ. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿದೆ. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಳೆದಂಡಿ ಆಗಮಿಸಿ ತನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದ ವಾಸು ಈ ಹಿಂದೆ ಕೂಡ ಇದೇ ರೀತಿಯ ರೇವ್ ಪಾರ್ಟಿ ಮಾಡಿರುವ ಶಂಕೆ ಇದೆ. ಇನ್ನಷ್ಟು ಡ್ರಗ್ ಪೆಡ್ಲರ್‌ಗಳ ಪತ್ತೆಗೆ ಸಿಸಿಬಿ ಮುಂದಾಗಿದೆ.

ಕಳೆದ ಶುಕ್ರವಾರದಿಂದಲೇ ಪಾರ್ಟಿಗೆ ಸಿದ್ಧತೆ ನಡೆದಿತ್ತು. ಪಾರ್ಟಿಯಲ್ಲಿ ಭಾಗಿಯಾಗಿರುವ ಬಹುತೇಕರು ಆಂಧ್ರ ಮೂಲದ ಉದ್ಯಮಿಗಳು. ಖ್ಯಾತ ಹೋಟೆಲ್‌ಗಳ ಮಾಲೀಕರ ಮಕ್ಕಳು, ತೆಲುಗು ಸಿನಿರಂಗದ ಕಲಾವಿದರು, ಮಾಡೆಲ್‌ಗಳು, ದಕ್ಷಿಣಭಾರತದ ಖ್ಯಾತ ಡಿಜೆಗಳು ಭಾಗಿಯಾಗಿದ್ದಾರೆ. ಆಂಧ್ರ ಮೂಲದವರಾಗಿದ್ದು ಬೆಂಗಳೂರಿನಲ್ಲಿ ಬಿಝಿನೆಸ್ ಹೊಂದಿರುವ ಬಹುತೇಕರು ಇದ್ದರು. ಫಾರಂ ಹೌಸ್‌ನ ಹೊರಗೆ ನಿಂತಿರುವ ವಿಲಾಸಿ ವಾಹನಗಳಲ್ಲಿ ಆಂಧ್ರ ಮೂಲದ ವಾಹನಗಳೇ ಹೆಚ್ಚಿವೆ.

ನಿನ್ನೆ ಸಂಜೆ ಐದು ಗಂಟೆಯಿಂದಲೇ ಪಾರ್ಟಿ ಶುರುವಾಗಿದ್ದು, ಸ್ಥಳೀಯ ಪೊಲೀಸರ ಕರ್ತವ್ಯ ಲೋಪ ಗಮನಿಸಲಾಗಿದೆ. ಡ್ರಗ್ಸ್ ಪಾರ್ಟಿ ನಡೀತಿದ್ರೂ ಪೊಲೀಸರ ಗಮನಕ್ಕೆ ಬಂದಿಲ್ಲ. ಶುಕ್ರವಾರದಿಂದಲೇ ಪಾರ್ಟಿ ಸಿದ್ಧತೆ ನಡೆದಿದೆ. ಭಾರಿ ಪ್ರಮಾಣದಲ್ಲಿ ಡ್ರಗ್ ಸರಬರಾಜು ಆಗಿದೆ. ಡ್ರಗ್ ಪೆಡ್ಲರ್‌ಗಳ ಬಗ್ಗೆ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಮಾಹಿತಿ ಕಲೆ ಹಾಕುತ್ತಿದೆ.

ತನಿಖೆ ನಡೆಯುತ್ತಿದೆ

“ಬೆಂಗಳೂರು ಹೊರ ವಲಯದಲ್ಲಿ ನೂರು ಜನರನ್ನೊಳಗೊಂಡ ರೇವ್ ಪಾರ್ಟಿ ನಡೆದಿದೆ. ತಪಾಸಣೆ ವೇಳೆ ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳು ಪತ್ತೆಯಾಗಿವೆ. ಮಾದಕ ಸೇವನೆ ಬಗ್ಗೆ ತನಿಖೆ ನಡೆಯಲಾಗುತ್ತಿದೆ. ಎಫ್ಎಸ್ಎಲ್ ಹಾಗೂ ಸೋಕೋ ‌ಟೀಂನಿಂದ ತಪಾಸಣೆ ನಡೆಯಲಾಗುತ್ತಿದೆ. ಆಯೋಜಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿ. ಆರ್. ಪಾರ್ಮ್‌ಹೌಸ್‌ನ ಮಾಲೀಕರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆʼʼ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.‌ಚಂದ್ರಗುಪ್ತಾ ಹೇಳಿಕೆ ಕೊಟ್ಟಿದ್ದಾರೆ.

Continue Reading
Advertisement
ಲಕ್ಕೂರು ಆನಂದ lakkuru Anand
ಶ್ರದ್ಧಾಂಜಲಿ12 mins ago

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

Prajwal Revanna Case Shivarame Gowdas Deve Gowda suicide statement says Nikhil Kumaraswamy
ರಾಜಕೀಯ16 mins ago

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

murder case in Belgavi
ಬೆಳಗಾವಿ29 mins ago

Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

rave party telugu actress hema
ಕ್ರೈಂ30 mins ago

‌Rave Party: ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ ತೆಲುಗು ನಟಿ; ಐವರ ಬಂಧನ

Payal Rajput Accuses Rakshana Producers Of Not Clearing Her Dues
ಟಾಲಿವುಡ್41 mins ago

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Salman Khan Ultimate Sex Symbol Says Malaika Arora
ಬಾಲಿವುಡ್45 mins ago

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Ebrahim Raisi
ವಿದೇಶ47 mins ago

Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

One year for the government Cm Siddaramaiah reveals many dreams and media interaction live
ರಾಜಕೀಯ56 mins ago

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

Drowned in water
ಬೆಂಗಳೂರು1 hour ago

Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

gold rate today sai pallavi
ಚಿನ್ನದ ದರ2 hours ago

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ22 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ23 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌