Elephant attack: ಚನ್ನಗಿರಿ, ಕೊಡಗಿನಲ್ಲಿ ಮುಂಜಾನೆಯೇ ಆನೆಯ ದಾದಾಗಿರಿ, ಮಹಿಳೆ ಸಹಿತ ಇಬ್ಬರಿಗೆ ಗಾಯ - Vistara News

ಕರ್ನಾಟಕ

Elephant attack: ಚನ್ನಗಿರಿ, ಕೊಡಗಿನಲ್ಲಿ ಮುಂಜಾನೆಯೇ ಆನೆಯ ದಾದಾಗಿರಿ, ಮಹಿಳೆ ಸಹಿತ ಇಬ್ಬರಿಗೆ ಗಾಯ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಕೊಡಗಿನ ಕುಶಾಲನಗರದಲ್ಲಿ ಆನೆಗಳು ಬೆಳ್ಳಂಬೆಳಗ್ಗೆ ಭಯ ಹುಟ್ಟಿಸಿವೆ. ಚನ್ನಗಿರಿಯಲ್ಲಿ ಇಬ್ಬರಿಗೆ ಗಾಯವಾಗಿದ್ದರೆ, ಕುಶಾಲನಗರದಲ್ಲಿ ಎರಡು ಕಾರುಗಳು ಜಖಂಗೊಂಡಿವೆ.

VISTARANEWS.COM


on

ಚನ್ನಗಿರಿಯ ಕೆರೆ ಬಳಿ ಓಡಾಡುತ್ತಿರುವ ಕಾಡಾನೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ/ಮಡಿಕೇರಿ: ದಾವಣಗೆರೆ ಮತ್ತು ಕೊಡಗು ಜಿಲ್ಲೆಯಲ್ಲಿ ಮುಂಜಾನೆಯೇ ಆನೆಯ ದಾದಾಗಿರಿ ಸುದ್ದಿ ಮಾಡಿದೆ. ಚನ್ನಗಿರಿಯಲ್ಲಿ ಇಬ್ಬರಿಗೆ ಗಾಯ ಮಾಡಿದ್ದರೆ ಕೊಡಗಿನಲ್ಲಿ ಸ್ವಿಫ್ಟ್‌ ಮತ್ತು ಸ್ಯಾಂಟ್ರೋ ಕಾರಿಗೆ ಹಾನಿ ಮಾಡಿದೆ.

ಚನ್ನಗಿರಿ ತಾಲೂಕಿನ ಸೋಮ್ಲಾಪುರ ಹಾಗೂ ಕಾಶಿಪುರ ಸುತ್ತಮುತ್ತ ಶನಿವಾರ ಮುಂಜಾನೆ ಆನೆ ಓಡಾಟ ನಡೆಸಿದೆ. ಕಾಡಿನಿಂದ ನಾಡಿಗೆ ಬಂದ ಒಂಟಿ ಆನೆಯ ಓಡಾಟ ಅರಿಯದೆ ಓಡಾಡಿದ ಇಬ್ಬರು ಆನೆಯನ್ನು ಕಂಡು ಓಡಿದ ಪರಿಣಾಮ ಬಿದ್ದು ಗಾಯ ಮಾಡಿಕೊಂಡಿದ್ದಾರೆ.

ಬೆಳಗಿನ ಜಾವ 6 ಗಂಟೆ ಸುಮಾರಿಗೆ ಕಾಣಿಸಿಕೊಂಡ ಆನೆ ಎಲ್ಲರಲ್ಲೂ ಭಯ ಹುಟ್ಟಿಸಿದೆ. ಓರ್ವ ಮಹಿಳೆ ಹಾಗೂ ದಾವುಜ್ ನಾಯ್ಕ್ ಎನ್ನುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕಾಶಿಪುರ, ಸೋಮ್ಲಾಪುರ, ಸೂಳೆಕೆರೆ ಸುತ್ತಮುತ್ತಲು ಓಡಾಡುತ್ತಿರುವ ಆನೆಯಿಂದಾಗಿ ಹತ್ತಾರು ಗ್ರಾಮಗಳಲ್ಲಿ ಆತಂಕ ಉಂಟಾಗಿದೆ. ಯಾರೂ ಕೂಡ ಒಂಟಿಯಾಗಿ ಓಡಾಡಬಾರದು ಎಂದು ಅರಣ್ಯ ಇಲಾಖೆಯಿಂದ‌ ಜನರಿಗೆ ಎಚ್ಚರಿಕೆ ಸಂದೇಶವೂ ಬಂದಿದೆ. ಇಲ್ಲಿನ ತೋಟಗಳಲ್ಲಿ , ಕೆರೆಗಳ ಪ್ರದೇಶದಲ್ಲಿ ಓಡಾಡುತ್ತಿರುವ ಆನೆಯನ್ನು ಕಾಡಿಗಟ್ಟುವ ಪ್ರಯತ್ನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರತರಾಗಿದ್ದಾರೆ.

ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿ ಆನೆ ಬಂದಿದ್ದು, ಪೊಲೀಸರು ಕೂಡಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ. ಆನೆಯನ್ನು ನೋಡಲು ಬರುವ ಜನರನ್ನು ತಡೆಗಟ್ಟುವುದೇ ಅವರಿಗೆ ದೊಡ್ಡ ಸವಾಲಾಗಿದೆ.

ನಿಲ್ಲಿಸಿದ ಕಾರಿನ ಮೇಲೆ ಕಾಡಾನೆಯ ದರ್ಪ!

ಕೊಡಗಿನಲ್ಲಿ‌ ಕೂಡಾ ಆನೆ ಮತ್ತು ಮಾನವನ ಸಂಘರ್ಷ ಮುಂದುವರಿದಿದೆ. ನಿಲ್ಲಿಸಿದ ಕಾರಿನ ಮೇಲೆ ಕಾಡಾನೆಯ ದರ್ಪ ಜನರಿಗೆ ಭಯ ಹುಟ್ಟಿಸಿದೆ.

ಕಾರಿನ ಮೇಲೆ ಆನೆಯ ದರ್ಪ

ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯಲ್ಲಿ ಸ್ವಿಫ್ಟ್ ಮತ್ತು ಸ್ಯಾಂಟ್ರೋ ಕಾರಿನ ಮೇಲೆ ದಾಳಿ‌ ನಡೆಸಿದ ಪುಂಡಾನೆ ಸ್ವಿಫ್ಟ್ ಕಾರನ್ನು ಹೆದ್ದಾರಿಯವರೆಗೂ ತಳ್ಳಿಕೊಂಡು ಬಂದಿದೆ.

ಇಂದು ಬೆಳಗಿನ ಜಾವ 4:30ರ ಸಮಯಕ್ಕೆ ದಾಳಿ ನಡೆಸಿದ ಕಾಡಾನೆ‌ ಮತ್ತೆಲ್ಲಿ ಹೋಗಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ :Elephant attack: ನೀಲಗಿರಿ ತೋಪಿನಲ್ಲಿ ಅಡ್ಡಾಡಿದ ಕಾಡಾನೆ; ತೋಟಗಳಿಗೆ ನುಗ್ಗಿ ಬೆಳೆ ಹಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Government Employees Sports: ಆ. 17ರಿಂದ 19ರವರೆಗೆ ಬೆಂಗಳೂರಿನಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಮಾನಿಸಿದೆ.

VISTARANEWS.COM


on

Government Employees Sports
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ. 17ರಿಂದ 19ರವರೆಗೆ ಬೆಂಗಳೂರಿನಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ (Government Employees Sports) ಆಯೋಜಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಕ್ರೀಡಾಕೂಟ ಆಯೋಜನೆಗೆ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜೂನ್ 3ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಶಿವಮೊಗ್ಗದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಇದೀಗ ಕ್ರೀಡಾಕೂಟವನ್ನು ಬೆಂಗಳೂರು ನಗರದಲ್ಲಿ ಆ.17ರಿಂದ 19ರವರೆಗೆ (ಮೂರು ದಿನ) ನಡೆಸಲು ಸಂಘವು ತೀರ್ಮಾನಿಸಿದೆ. ಅದರಂತೆ ಕ್ರೀಡಾಕೂಟವನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಆಯೋಜಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿ

  1. ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಕಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ.
  2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು. ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  3. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
  4. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
  5. ದಿನಗೂಲಿ ನೌಕರರು, ಅರೆಕಾಲಿಕ ನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಕಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  6. ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು/ಕಚೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
  7. ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾ ಕೋಟಾದಡಿ ನೇಮಕವಾದ ನೌಕರರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  8. 1 ಟ್ರಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರ್ಯಾಕ್ ಮತ್ತು 1 ಫೀಲ್ಡ್ ಸೇರಿ ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು
  9. 45 ವರ್ಷ ಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ, ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  10. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.
  11. ಏಕಕಾಲದಲ್ಲಿ ಸ್ಪರ್ಧೆಗಳನ್ನು ನಡೆಸಲಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧಿಗಳನ್ನು ಕಾಯುವುದಿಲ್ಲ.
  12. ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ಧವಿರುವ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಸ್ಥಳದಲ್ಲಿ ತಯಾರಾಗಿ (ಮೊದಲನೇ ದಿನ) ಇಡಬೇಕು. 2ನೇ ದಿನ ತೀರ್ಪುಗಾರರಿಂದ ಪರಿಶೀಲಿಸಲಾಗುವುದು.
  13. ಸ್ಪರ್ಧೆ ನಡೆಯದ ಕ್ರೀಡೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಲಾಗುವುದಿಲ್ಲ.
  14. ಸಂಘಟಕರೊಡನೆ ಅಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಕ್ರೀಡಾ ಸ್ಪರ್ಧೆಯಿಂದ ಹೊರಹಾಕುವುದಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ಯ ಕ್ರೀಡಾಪಟುವಿನ ಮೇಲೆ ಸೇವಾ ನಿಯಮಗಳ ರೀತ್ಯಾ ಶಿಸ್ತಿನ ಕ್ರಮ ಜರುಗಿಸಲು ಶಿಫಾರಸು ಮಾಡಲಾಗುವುದು.
  15. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ನಿಗದಿತ ಸಮಯಕ್ಕೆ ಕನಿಷ್ಠ 1 ಗಂಟೆ ಮುಂಚಿತವಾಗಿ ಹಾಜರಿದ್ದು, ಕ್ರೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.
  16. ಕ್ರೀಡಾ ಸ್ಪರ್ಧೆಗಳಲ್ಲಿ ಸಂಗೀತ, ನೃತ್ಯ ಹಾಗೂ ನಾಟಕಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ತಮ್ಮದೇ ಆದ ಸಲಕರಣೆಗಳನ್ನು ತರತಕ್ಕದ್ದು
  17. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಯ ತುಣುಕು ಇತ್ಯಾದಿಗಳಿಗೆ ಅವಕಾಶವಿಲ್ಲ
  18. ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ.
  19. ಸ್ಪರ್ಧಿಗಳು ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಆಯಾ ಜಿಲ್ಲೆಯ ಬಾವುಟದೊಂದಿಗೆ ಭಾಗವಹಿಸುವುದು ಕಡ್ಡಾಯವಾಗಿದೆ. ಉದ್ಘಾಟನಾ ಸಮಾರಂಭಕ್ಕೆ ಮೊದಲು ನೋಂದಾವಣೆ ಮಾಡಿಕೊಳ್ಳುವ ಕ್ರೀಡಾಪಟುಗಳಿಗೆ ಮಾತ್ರ ಹಾಜರಾತಿ ನೀಡಲಾಗುವುದು.
  20. ಸರ್ಕಾರಿ ಆದೇಶ ಸಂ:ಎಫ್‌ಡಿಎ/ಎಸ್‌ಆರ್‌ಎಸ್/2002, ಬೆಂಗಳೂರು, ದಿನಾಂಕ:27-11-2002ರಂ ರಾಜ್ಯ ಸರ್ಕಾರದ ವತಿಯಿಂದ ನಡೆಸುವ ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿದೆ.
  21. ಒಬ್ಬ ಸರ್ಕಾರಿ ನೌಕರನು ಹಲವು ಕ್ರೀಡೆಗಳಲ್ಲಿ ಭಾಗವಹಿಸಲು ನೋಂದಾಯಿಸಿದ್ದರು ಸಹ ಒಂದು ಜೊತೆ ಕ್ರೀಡಾ ಸಮವಸ್ತ್ರ/ಟ್ರ್ಯಾಕ್ ಸೂಟ್ ನೀಡಲು ಕ್ರಮವಹಿಸುವುದು.
  22. ಯಾವ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿರುವುದಿಲ್ಲವೋ ಅಂತಹ ಸ್ಪರ್ಧೆಗಳಿಗೆ ಕ್ರೀಡಾಪಟುವಲ್ಲದ ನೌಕರರನ್ನು ಸೇರ್ಪಡೆಗೊಳಿಸುವ ಕ್ರಮವನ್ನು ಕೈಬಿಡುವುದು. ಒಂದು ವೇಳೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಸಹಾಯಕ ನಿರ್ದೇಶಕರು ಹಾಗೂ ನೌಕರರ ವಿರುದ್ಧ ಶಿಸ್ತು ಕ್ರಮ ಅನಿವಾರ್ಯವಾಗಲಿದೆ ಎಂಬ ಅಂಶವನ್ನು ಸ್ಪಷ್ಟಪಡಿಸುವುದು.

ಇದನ್ನೂ ಓದಿ | Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Continue Reading

ಉತ್ತರ ಕನ್ನಡ

Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

Uttara Kannada News: ಭಾರತ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆ.15ರವರೆಗೆ ನಡೆಯುವ ʼಹರ್ ಘರ್ ತಿರಂಗಾʼ ಅಭಿಯಾನದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

VISTARANEWS.COM


on

Uttara Kannada News
Koo

ಕಾರವಾರ: ಭಾರತ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆ.15ರವರೆಗೆ ನಡೆಯುವ “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ (Uttara Kannada News) ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದರು. ಸೋಮವಾರ ವೀಡಿಯೋ ಸಂವಾದ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಇದನ್ನೂ ಓದಿ: Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

ಆಗಸ್ಟ್ 13ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೈಕ್, ಸೈಕಲ್ ಜಾಥಾ ಮೂಲಕ ತಿರಂಗ ರ‍್ಯಾಲಿ ಆಯೋಜಿಸಬೇಕು. ಆಗಸ್ಟ್ 14 ರಂದು ವಾಕಥಾನ್ ಮೂಲಕ ತಿರಂಗ ರ‍್ಯಾಲಿ ಮತ್ತು ರಂಗೋಲಿ ಚಿತ್ರದ ಮೂಲಕ ಅಭಿಯಾನ ಕೈಗೊಳ್ಳಬೇಕು. ಆಗಸ್ಟ್ 15 ರಂದು ಪ್ರತಿ ಮನೆ ಮನೆಯಲ್ಲೂ ಧ್ವಜಾರೋಹಣ ಕೈಗೊಂಡು, ತಿರಂಗಾ ಜತೆಗಿನ ಸೆಲ್ಫಿಯನ್ನು harghartiranga.com ನಲ್ಲಿ ಅಪ್ಲೋಡ್ ಮಾಡಬೇಕು ಎಂದ ಅವರು, ಸ್ಥಳೀಯವಾಗಿ ಆಯೋಜಿಸಲಾಗುವ ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸ್ವಾತಂತ್ರ‍್ಯದ ಸಂಭ್ರಮವನ್ನು ಪ್ರತಿ ಮನೆ-ಮನೆಯಲ್ಲೂ ಹಾಗೂ ಸರ್ಕಾರಿ/ಅರೆ ಸರ್ಕಾರಿ/ನಿಗಮ-ಮಂಡಳಿಗಳು/ಸ್ವ-ಸಹಾಯ ಗುಂಪುಗಳು/ಸಾರ್ವಜನಿಕ ಉದ್ಯಮ ಸಂಸ್ಥೆಗಳು/ ಸಂಘ-ಸಂಸ್ಥೆಗಳು/ ನಾಗರಿಕ ಸೇವಾ ಸಂಸ್ಥೆಗಳು/ ಶಾಲಾ ಕಾಲೇಜು ವಿದ್ಯಾರ್ಥಿಗಳು/ ಸಾರ್ವಜನಿಕರು/ ಇತರೆ ಎಲ್ಲ ಸಿಬ್ಬಂದಿ ಹಾಗೂ ಕುಟುಂಬ ವರ್ಗದವರು ಸೇರಿ ಸ್ವತಃ ತಾವೇ ಸ್ವಯಂ ಕ್ರಿಯಾಶೀಲರಾಗಿ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

Tungabhadra Dam: ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾ‌ರ್, ಈ ಘಟನೆಗೆ ಯಾರೂ ಹೊಣೆಯಲ್ಲ ಎಂದು ಹೇಳಿರುವುದನ್ನು ನಾನು ಒಪ್ಪುವುದಿಲ್ಲ. ಇದರಲ್ಲಿ ಲೋಪ ಇದೆ. ಅದು ಯಾರಿಂದ ಆಗಿದೆ ಎನ್ನುವುದನ್ನು ತಿಳಿಯಲು ತನಿಖೆ ಮಾಡಬೇಕು ಎಂದು ತಿಳಿಸಿದ್ದಾರೆ.

VISTARANEWS.COM


on

Tungabhadra Dam
Koo

ವಿಜಯನಗರ/ಮುನಿರಾಬಾದ್: ತುಂಗಭದ್ರಾ ಡ್ಯಾಮ್‌ನ ಕ್ರಸ್ಟ್ ಗೇಟ್‌ನ ಚೈನ್ ಕತ್ತರಿಸಿ ನೀರು ಹರಿದು ಪೋಲಾಗಿರುವುದರಿಂದ ರಾಜ್ಯ ಸರ್ಕಾರವು ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಸಮಾನಾಂತರ ಜಲಾಶಯ ನಿರ್ಮಾಣ ಮಾಡಲು ಚಾಲನೆ ಕೊಡಲು ಇದು ಸೂಕ್ತ ಸಮಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರೊಂದಿಗೆ ಇಂದು ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಾಣ ಮಾಡಲು ಚಾಲನೆ ಕೊಡಲು ಇದು ಒಳ್ಳೆಯ ಕಾರಣ ಮತ್ತು ಸಮಯ. ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಅದನ್ನು ಆಂಧ್ರಪ್ರದೇಶ ಸರ್ಕಾರದ ಜತೆಗೆ ಹಂಚಿಕೊಂಡಿದ್ದೇವೆ. ಹಿಂದಿನ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಆರ್. ಜಗನಮೋಹನ್ ರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿದ್ದೇವು. ಅವರು ತಾಂತ್ರಿಕ ತಂಡ ಕಳುಹಿಸಿಕೊಟ್ಟಿದ್ದರು. ತಾಂತ್ರಿಕವಾಗಿ ಒಪ್ಪಿಗೆಯೂ ಆಗಿತ್ತು. ರಾಜಕೀಯ ತೀರ್ಮಾನ ಮಾಡುವುದು ಬಾಕಿ ಉಳಿದಿತ್ತು. ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ಒಂದೂವರೆ ವರ್ಷದಿಂದ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿಗಳು ಈಗಿನ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಬೇಕು. ಇದರಿಂದ 28 ಟಿಎಂಸಿ ನೀರು ಉಳಿತಾಯವಾಗಲಿದೆ ಎಂದು ಹೇಳಿದರು.

ತುಂಗಭದ್ರಾ ಕಲ್ಯಾಣ ಕರ್ನಾಟಕದ ಜೀವನಾಡಿ, ನಮ್ಮ ಕರ್ನಾಟಕದ ಒಟ್ಟು ಕೃಷಿ ಆದಾಯದಲ್ಲಿ ಶೇ. 40% ಕ್ಕಿಂತ ಹೆಚ್ಚು ಆದಾಯ ತುಂಗಭದ್ರಾ ಡ್ಯಾಮ್ ಪ್ರದೇಶದಿಂದ ಬರುತ್ತದೆ. ಮೂರು ರಾಜ್ಯಗಳು ಇದರ ಪಾಲು ಪಡೆಯುತ್ತವೆ. ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ತುಂಗಭದ್ರಾ ಡ್ಯಾಮ್‌ನಲ್ಲಿ ಹೂಳು ತುಂಬಿರುವುದರಿಂದ ಸಂಕಷ್ಟ ಬಂದಿದೆ‌. ಇದರಿಂದ ಸುಮಾರು ಮೂವತ್ತು ಟಿಎಂಸಿ ನೀರಿನಷ್ಟು ಹೂಳು ತುಂಬಿದೆ. ಇವತ್ತಿನ ಘಟನೆ ಮುಂದಿನ ಘಟನೆಗಳಿಗೆ ಆತಂಕ ಹುಟ್ಟಿಸುವ ಘಟನೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಧಿಕಾರಿಗಳು ಗೇಟನ್ನು ಪ್ಯಾಬ್ರಿಕೆಟ್ ಮಾಡುತ್ತೇವೆ ಅಂತ ಹೇಳುತ್ತಾರೆ. ಅಷ್ಡೇ ಅಲ್ಲ. ನೀರು ಶಕ್ತಿ ಮೀರಿ ಬರುತ್ತದೆ‌. ಓವರ್ ಲೋಡ್ ಅನಾಹುತಕ್ಕೆ ಕಾರಣವಾಗಿದೆ.

ಇದರಲ್ಲಿ ಎರಡು ಸಮಸ್ಯೆ ಇದೆ. ಮುಂಗಾರು ಪೂರ್ವ ನಿರ್ವಹಣೆ ಸಮಸ್ಯೆಯಾಗಿದೆ. ಇದು ವರ್ಟಿಕಲ್ ಗೇಟ್, ಈ ಗೇಟನ್ನು ಆಪರೇಟ್ ಮಾಡುವಾಗ ಆಗುವ ಲೀಕೇಜ್ ಎಲಿಮೆಂಟ್ ಬಹಳ ಮುಖ್ಯ. ಒಂದು ಬೇರಿಂಗ್ ಹೋದರೂ ಕೂಡ ಗೇಟ್ ಕಿತ್ತು ಹೋಗುತ್ತದೆ. ಎಲ್ಲಿ ಗೇಟಿಗೆ ಸಂಪರ್ಕ ಕಲ್ಪಿಸಬೇಕಿತ್ತೊ ಅದೇ ಲಿಂಕ್ ಕಿತ್ತು ಹೋಗಿದೆ. ಇದು ನಿಷ್ಕ್ರೀಯ ಲಿಂಕ್ ಇದೆ. ಹೀಗಾಗಿ ಅದು ಕಿತ್ತು ಹೋಗಿದೆ. ಇದಕ್ಕೆ ಯಾರೂ ಕಾರಣ ಅಲ್ಲ ಅಂತ ಹೇಳುವುದನ್ನು ನಾನು ಒಪ್ಪುವುದಿಲ್ಲ. ಅಧಿಕಾರಿಗಳು, ಸರ್ಕಾರವೂ ಕಾರಣ ಅಲ್ಲ ಆಂದರೆ ಹೇಗೆ? ಇಷ್ಟು ದಿನ ಆಗದಿರುವುದು ಈಗ ಏಕೆ ಆಯಿತು. ನೀರು ಎಷ್ಟು ಬಿಡಬೇಕು, ಎಷ್ಟು ಹಿಡಿದಿಟ್ಟುಕೊಳ್ಳಬೇಕೊ ಅದನ್ನು ನೋಡಿಕೊಳ್ಳಲು ನೀರು ನಿರ್ವಹಣೆ ತುಂಗಭದ್ರ ಬೊರ್ಡ್ ಇದೆ. ಅದು ಸರಿಯಾಗಿ ನೋಡಿಕೊಳ್ಳಬೇಕು. ಡ್ಯಾಮ್‌ನ ಗೇಟುಗಳನ್ನು ಹಂಚಿಕೊಂಡಿದ್ದಾರೆ. 0-16 ಆಂಧ್ರದ್ದು, ಆ ನಂತರದ್ದು ಕರ್ನಾಟಕದ್ದು, ಇಬ್ಬರು ಮುಖ್ಯ ಎಂಜನೀಯರ್ ಇದ್ದಾರೆ. 19ನೇ ಗೇಟು ಕರ್ನಾಟಕದ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕದ ಎಂಜನೀಯರ್ಗಳ ಜವಾಬ್ದಾರಿ ಹೆಚ್ಚಿದೆ. ಇದನ್ನು ಎಂಜನಿಯರು ಸರಿಯಾಗಿ ನಿರ್ವಹಣೆ ಮಾಡಿಲ್ಲ. ಎಲ್ಲ ಗೇಟುಗಳನ್ನು ಪರಿಶೀಲನೆ ಮಾಡಬೇಕಿದೆ. ಈಗ ನೀರಿನ ಪ್ರಮಾಣ ಕಡಿಮೆ ಇದೆ. ನೀರು ಹೆಚ್ಚಾದಾಗ ಮತ್ತೆ ಏನು ಸಮಸ್ಯೆಯಾಗುತ್ತದೊ ಗೊತ್ತಿಲ್ಲ. ನೀರಿನ ನಿರ್ವಹಣೆಗೆ ಹೊಸ ಮಾನದಂಡ ನಿರ್ಧರಿಸಬೇಕು. ಈ ವರ್ಟಿಕಲ್ ಗೇಟ್‌ಗೆ ಬೇಕಾದ ಸಾಧನಗಳ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಬೇಕು. ಆಗ ಎಲ್ಲಿ ವೈಫ್ಯಲ ಆಗಿದೆ ಎನ್ನುವುದು ಗೊತ್ತಾಗುತ್ತದೆ ಎಂದರು.

ಸರ್ಕಾರದವರು ಮೂರು ನಾಲ್ಕು ದಿನಗಳಲ್ಲಿ ಸರಿಪಡಿಸುವುದಾಗಿ ಹೇಳುತ್ತಾರೆ. ಅಖಂಡ ಗೇಟ್ ಇರುವಾಗ ಈ ಸಮಸ್ಯೆ ಆಗಿದೆ. ಫ್ಯಾಬ್ರಿಕೇಟ್ ಹಾಕಿದರೆ ಏನಾಗುತ್ತದೊ ಗೊತ್ತಿಲ್ಲ. ಎಚ್ಚರಿಕೆಯಿಂದ ಮಾಡುವಂತೆ ಸಲಹೆ ನೀಡಿದ್ದೇವೆ.

ಇದನ್ನೂ ಓದಿ: Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

ಇನ್ನೊಂದು ಸಮಸ್ಯೆ ಇವತ್ತು ನೀರನ್ನು ಉಳಿತಾಯ ಮಾಡಬೇಕು. ನೀರು ಹರಿವು ಇಟ್ಟುಕೊಂಡೆ ಈ ಗೇಟನ್ನು ನಾವು ಫ್ಯಾಬ್ರಿಕೆಟ್ ಮಾಡಿ ಜೋಡಿಸುತ್ತೇವೆ ಎನ್ನುವುದು ಸ್ವಾಭಾವಿಕ. ಇದನ್ನು ಮಾಡುವಾಗ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಫ್ಯಾಬ್ರಿಕೆಶನ್ ಕೆಳಗಿಳಿಸಿ ಮತ್ತೆ ಜೋಡಿಸುವುದು ಬಹಳ ಮುಖ್ಯ, ಅದಕ್ಕೆ ಕ್ರೇನ್ ವ್ಯವಸ್ಥೆ ಇರಬೇಕು. ಇದಕ್ಕೆ ಲಿಫ್ಟ್ ಮಾದರಿಯಲ್ಲಿ ಕೌಂಟರ್ ವೇಟ್ ಇರಬೇಕು. ಇವೆಲ್ಲವನ್ನು ಎಚ್ಚರಿಕೆಯಿಂದ ಮಾಡಬೇಕು ಎಂದು ಸಲಹೆ ನೀಡಿದ್ದೇವೆ. ಇವರು ಕ್ರೇನ್ ಮೂಲಕ ಮಾಡುತ್ತಿರುವುದಾಗಿ ಹೇಳಿದ್ದಾರೆ. ಕೆಆ‌ರ್‌ಎಸ್‌ನಲ್ಲಿ ಇದೇ ರೀತಿ ಸಮಸ್ಯೆಯಾದಾಗ ನಾವು 16 ಗೇಟ್‌ಗಳನ್ನು ಆಳವಡಿಸಬೇಕಾಗಿತ್ತು. ಆಗ ಗೇಟ್ ಒಡೆದಿರಲಿಲ್ಲ. ಸೋರಿಕೆಯಾಗಿತ್ತು. ಆಗ ಇದೇ ನಾರಾಯಣ ಸಂಸ್ಥೆಯವರು ಮಾಡಿದ್ದರು. ಆ ಸಂದರ್ಭದಲ್ಲಿ ದೊಡ್ಡ ಸವಾಲಾಗಿತ್ತು. 2005 ರಲ್ಲಿ ಖರ್ಗೆಯವರು ನೀರಾವರಿ ಸಚಿವರಾಗಿದ್ದಾಗ ನಾರಾಯಣ ಸಂಸ್ಥೆಯವರು ನಾರಾಯಣಪುರ ಡ್ಯಾಮ್ ಗೇಟ್ ಅಳವಡಿಸುತ್ತಿದ್ದರು. ಆಗ ಅವರನ್ನು ಬಳಸಿಕೊಂಡು ಗೇಟ್ ಸರಿಪಡಿಲಾಗಿತ್ತು ಎಂದು ಹೇಳಿದರು.

ತಜ್ಞರ ತಂಡ ರಚಿಸಿ

ನೀರಿನ ನಿರ್ವಹಣೆಯನ್ನು ಸರಿಯಾಗಿ ಮಾಡದಿರುವ ಬಗ್ಗೆ ಸರಿಯಾದ ತನಿಖೆಯಾಗಬೇಕು. ಡ್ಯಾಂ ಸುರಕ್ಷತಾ ನಿರ್ವಹಣಾ ಸಮಿತಿ ನೀಡಿರುವ ಸಲಹೆಗಳನ್ನು ಸರಿಯಾಗಿ ಪಾಲಿಸಿಲ್ಲ. ಡ್ಯಾಮ್‌ಗಳ ನಿರ್ವಹಣೆಗೆ ವಿಶ್ವ ಬ್ಯಾಂಕ್ ಹಣ ಕೊಡುತ್ತದೆ. ಆ ಹಣವನ್ನು ಸಂಪೂರ್ಣ ಬಳಕೆ ಮಾಡಿ, ಎಲ್ಲ ಗೇಟ್‌ಗಳನ್ನು ಪರಿಶೀಲನೆ ಮಾಡಿ ಯಾವುದು ಬದಲಾವಣೆ ಮಾಡಬೇಕೊ ಅದನ್ನು ಬದಲಾಯಿಸಬೇಕು. ರಾಜ್ಯದ ಬಹುತೇಕ ಆಣೆಕಟ್ಟೆಗಳು ಐವತ್ತು ವರ್ಷ ಪೂರೈಸಿವೆ. ಬಹಳಷ್ಟು ಡ್ಯಾಮ್‌ಗಳಿಗೆ ಸ್ಟ್ರಾಪ್‌ಪ್ಲಗ್ ಗೇಟ್‌ಗಳು ಇಲ್ಲ. ಸ್ಟಾಪ್ ಪ್ಲಗ್ ಗೇಟ್‌ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಡ್ಯಾಮ್‌ಗಳ ಸುರಕ್ಷತೆಯ ಒಂದು ವಿಶೇಷ ತಜ್ಞರ ತಂಡ ರಚನೆ ಮಾಡಿ, ಕೇಂದ್ರದ ಮಾದರಿಯಲ್ಲಿ ಈ ತಂಡ ಡ್ಯಾಮ್‌ಗಳ ಸುರಕ್ಷತೆಯ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಈ ಕೆಲಸವನು ಎಲ್ಲರೂ ಸೇರಿ ಮಾಡೋಣ ಎಂದರು.

ರೈತರಿಗೆ ಪರಿಹಾರ ಕೊಡಿ

ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾ‌ರ್ ಅವರು ಈ ಘಟನೆಗೆ ಯಾರೂ ಹೊಣೆಯಲ್ಲ ಎಂದು ಹೇಳಿರುವುದನ್ನು ನಾನು ಒಪ್ಪುವುದಿಲ್ಲ. ಇದರಲ್ಲಿ ಲೋಪ ಇದೆ. ಅದು ಯಾರಿಂದ ಆಗಿದೆ ಎನ್ನುವುದನ್ನು ತಿಳಿಯಲು ತನಿಖೆ ಮಾಡಬೇಕು. ಆಗ ಮಾತ್ರ ಸರ್ಕಾರದ ಮೇಲೆ ನಂಬಿಕೆ ಬರುತ್ತದೆ.

ನಮಗೆ 115 ಟಿಎಂಸಿ ನೀರು ಬೇಕು. ಈಗಾಗಲೇ 20 ಟಿಎಂಸಿ ನೀರು ಹರಿದು ಹೋಗಿದೆ. ಇನ್ನೂ ಮಳೆಯಿಂದ ಸುಮಾರು 40 ಟಿಎಂಸಿ ನೀರು ಬರುವ ನಿರೀಕ್ಷೆ ಇದೆ. ಆದರೆ ಅದು ಪ್ರಕೃತಿ ಮೇಲೆ ನಿರ್ಧಾರ ಆಗುತ್ತದೆ. ಈಗಿರುವ ಪರಿಸ್ಥಿತಿಯಲ್ಲಿ ಎರಡನೇ ಬೆಳೆ ಬೆಳೆಯುವುದು ಕಷ್ಟವಾಗಲಿದ್ದು, ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50 ಸಾವಿರ ರೂ. ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರವಾಹ ಬಂದಾಗ ನಾವು ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 13500 ರೂ. ನೀಡಿದ್ದೇವು. ಈಗ ರಾಜ್ಯ ಸರ್ಕಾರ ನಷ್ಟವನ್ನು ಪರಿಶೀಲಿಸಿ ಪತಿ ಹೆಕ್ಟೇರ್‌ಗೆ 50 ಸಾವಿರ ರೂ.ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

ಈ ವೇಳೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಜರಿದ್ದರು.

Continue Reading

ಬೆಂಗಳೂರು

Bengaluru Rain: ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು; ಒಳಚರಂಡಿ, ರಸ್ತೆ ಬದಿ ಚರಂಡಿಗಳ ಸ್ವಚ್ಛತೆಗೆ ಡಿ. ಕೆ. ಶಿವಕುಮಾರ್ ಸೂಚನೆ

Bengaluru Rain: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪರಿಶೀಲನೆ ನಡೆಸಿದರು. ನಗರದ ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

VISTARANEWS.COM


on

Bengaluru Rain
Koo

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪರಿಶೀಲನೆ ನಡೆಸಿದರು. ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ (Bengaluru Rain) ಭೇಟಿ ನೀಡಿ, ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಗೇಶ್ವರ ನಗರದ ಮೇಲ್ಸೇತುವೆ ಬಳಿ ನೀರಿನ ಹರಿವು ಹಾಗೂ ರಾಜಕಾಲುವೆ ವೀಕ್ಷಣೆ ಮಾಡಿ, ನೀರು ಹರಿವಿಗೆ ತೊಂದರೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಕಾಮಗಾರಿಗಳು ನಡೆದ ನಂತರ ಕಟ್ಟಡ ತ್ಯಾಜ್ಯಗಳನ್ನು ಸ್ಥಳದಲ್ಲೇ ಏಕೆ ಬಿಡಲಾಗಿದೆ? ಕೂಡಲೇ ಎಲ್ಲಾ ಕಡೆ ಸ್ವಚ್ಛಗೊಳಿಸಿ ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಇಡೀ ಪ್ರದೇಶದಲ್ಲಿ ಒಂದು ಸುತ್ತು ಬಂದ ಡಿಸಿಎಂ ಶಿವಕುಮಾರ್, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಎಲ್ಲಾ ಕಡೆ ರಸ್ತೆ ಬದಿ ಚರಂಡಿಗಳು ಹಾಗೂ ಒಳಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್‌ ಕಟ್‌

ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ರಾಜಕಾಲುವೆ ವೀಕ್ಷಣೆ ಮಾಡಿ ಮಾತನಾಡಿದ ಅವರು, ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಸ್ವಚ್ಛತೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಎಲ್ಲೆಲ್ಲಿ ಬಿಎಂಆರ್‌ಸಿಎಲ್ ಅವರು ಕಾಮಗಾರಿ ನಡೆಸುವಾಗ ಕಟ್ಟಡ ತ್ಯಾಜ್ಯಗಳು ರಾಜಕಾಲುವೆಯಲ್ಲಿ ಉಳಿದಿದ್ದರೇ ಕೂಡಲೇ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಕೆಲವೊಂದು ಕಡೆ ನೀರು ಹರಿಯುವ ಜಾಗಗಳು ಕಿರಿದಾಗಿದ್ದು ಅವುಗಳ ಅಗಲೀಕರಣ ಮಾಡುವಂತೆ ತಿಳಿಸಲಾಗಿದೆ ಎಂದರು.

ಮಾರುತಿ ಸೇವಾನಗರದಲ್ಲಿ ಸೋಮವಾರ ಬೆಳಗ್ಗೆ ಮರ ಬಿದ್ದ ಕಾರಣಕ್ಕೆ ನಾಲ್ವರು ಗಾಯಗೊಂಡಿದ್ದರು. ಬಾಣಸವಾಡಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು ಹಾಗೂ ಗಾಯಾಳುಗಳ ಎಲ್ಲಾ ಖರ್ಚು ವೆಚ್ಚಗಳನ್ನು ಬಿಬಿಎಂಪಿಯಿಂದ ಭರಿಸಲಾಗುವುದು ಎಂದು ಈ ವೇಳೆ ತಿಳಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, “ನಗರ ಸಂಚಾರದ ವೇಳೆ ಸಾಕಷ್ಟು ರಸ್ತೆಗುಂಡಿಗಳು ಕಂಡು ಬಂದವು. ಮಳೆ ಹೆಚ್ಚಾದ ಕಾರಣಕ್ಕೆ ಸುಮಾರು ಅರ್ಧ ಅಡಿಗೂ ಆಳದ ಗುಂಡಿಗಳಾಗಿವೆ. ಇವುಗಳನ್ನು ಕೂಡಲೇ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸರಿಗೂ ಎಲ್ಲಿಲ್ಲಿ ರಸ್ತೆಗುಂಡಿಗಳಿವೆ ಅದರ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇನೆ. ಈಗಾಗಲೇ ನೂತನ ಆಪ್ ಅನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಫೋಟೊ ತೆಗೆದು ಹಾಕಿದರೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ: Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

ರಾಜಕಾಲುವೆಗಳಿಗೆ ರಕ್ಷಣಾ ಗೋಡೆಗಳನ್ನು ಎಲ್ಲಾ ಕಡೆ ನಿರ್ಮಾಣ ಹಾಗೂ ರಸ್ತೆ ನಿರ್ಮಾಣದ ತೀರ್ಮಾನ ಮಾಡಲಾಗಿದೆ. ಅಲ್ಲದೇ ಅನೇಕ ಕಡೆ ರಸ್ತೆ ಫುಟ್‌ಪಾತ್‌ಗಳಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯಲಾಗಿದೆ. ಇದರ ಬಗ್ಗೆ ಕ್ರಮವಹಿಸಲಾಗುವುದು. ಇದರಿಂದ ಮೋರಿ ಮುಚ್ಚಿಕೊಳ್ಳುವುದು, ನೀರಿನ ಹರಿವಿಗೆ ತೊಂದರೆ ಉಂಟಾಗುತ್ತಿದೆ. ಅನೇಕ ಉದ್ಯಾನಗಳಲ್ಲೂ ಕಟ್ಟಡ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಇದರ ಬಗ್ಗೆ ಗಮನಹರಿಸಲಾಗುವುದು ಎಂದರು.

ಒಣಗಿದ್ದ ಬೃಹತ್ ಮರದ ತೆರವಿಗೆ ಈ ಹಿಂದೆಯೇ ಸಾರ್ವಜನಿಕರು ದೂರು ನೀಡಿದ್ದರೂ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಕೇಳಿದಾಗ, ಇಡೀ ಬೆಂಗಳೂರಿನಾದ್ಯಂತ ಕೂಡಲೇ ಒಣಗಿದ ಮರಗಳ ತೆರವು ಮಾಡಲಾಗುವುದು. ಎಲ್ಲೆಲ್ಲಿ ತೆರವು ಮಾಡಬೇಕು ಎನ್ನುವ ಬಗ್ಗೆ ಪಟ್ಟಿ ತಯಾರಿಸಿ ಮುಂದುವರೆಯಲಾಗುವುದು. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ಬಗ್ಗೆ ಸಭೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಅಂತಹ ಮಳೆ ಬಂದಿಲ್ಲ. ರಾಜ್ಯದ ಇತರೆಡೆ ಉತ್ತಮ ಮಳೆ ಬಂದಿದೆ. ಬೆಂಗಳೂರು ಸುತ್ತಲೂ ಯಾವ ಕೆರೆಗಳೂ ತುಂಬಿಲ್ಲ, ಅಕ್ಕಪಕ್ಕದ ಜಿಲ್ಲೆಗಳಲ್ಲೂ ಮಳೆ ಬಂದಿಲ್ಲ. ಪಶ್ಚಿಮ ಘಟ್ಟ ಸೇರಿದಂತೆ ಒಂದಷ್ಟು ಕಡೆ ಮಳೆ ಬಂದು ಅಣೆಕಟ್ಟುಗಳು ತುಂಬಿವೆ. ಬೆಂಗಳೂರು ನಗರದ ಒಳಗಿರುವ ಕೆರೆಗಳಲ್ಲೂ ಅಷ್ಟಾಗಿ ನೀರಿಲ್ಲ. ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗಿದ್ದರೆ ಸರಿ ಮಾಡೋಣ. ಜತೆಗೆ ಮಳೆಯೂ ಚೆನ್ನಾಗಿ ಬರಬೇಕು, ಕೆರೆಗಳು ತುಂಬಬೇಕು, ಅಂತರ್ಜಲ ಹೆಚ್ಚಾಗಬೇಕು. ಮಳೆ ಇನ್ನೂ ಸಾಲದು ಎಂದರು.

ಇದನ್ನೂ ಓದಿ: KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

ಸಂಚಾರಿ ಪೊಲೀಸರೆ ಹೆಚ್ಚು ಕೆಲಸ ಮಾಡುತ್ತಿದ್ದು ಬಿಬಿಎಂಪಿ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ಬರುತ್ತಿಲ್ಲ ಎಂದು ಕೇಳಿದಾಗ “ಇದರ ಬಗ್ಗೆ ಗಮನ ನೀಡಲಾಗುವುದು. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ಮಾಡಿಕೊಂಡ ಕಾರಣಕ್ಕೆ ಕಸ ಹೆಚ್ಚಾಗಿದೆ ಇದರ ತೆರವಿನ ಬಗ್ಗೆ ಗಮನ ನೀಡಲಾಗುವುದು ಎಂದು ಹೇಳಿದರು.

Continue Reading
Advertisement
NIRF 2024 Rank
ಶಿಕ್ಷಣ2 mins ago

NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

Paris Olympics 2024
ಪ್ರಮುಖ ಸುದ್ದಿ15 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

Government Employees Sports
ಕರ್ನಾಟಕ18 mins ago

Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Uttara Kannada News
ಉತ್ತರ ಕನ್ನಡ27 mins ago

Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

Tungabhadra Dam
ಕರ್ನಾಟಕ29 mins ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

Bengaluru Rain
ಬೆಂಗಳೂರು33 mins ago

Bengaluru Rain: ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು; ಒಳಚರಂಡಿ, ರಸ್ತೆ ಬದಿ ಚರಂಡಿಗಳ ಸ್ವಚ್ಛತೆಗೆ ಡಿ. ಕೆ. ಶಿವಕುಮಾರ್ ಸೂಚನೆ

Whiten Your Yellow Teeth
ಆರೋಗ್ಯ45 mins ago

Whiten Your Yellow Teeth: ಈ ಆಹಾರಗಳು ನಿಮ್ಮ ಹಲ್ಲುಗಳ ಬಣ್ಣಗೆಡಿಸುತ್ತವೆ ಎನ್ನುವುದು ಗೊತ್ತಿದೆಯೆ?

Part Time Lecturers
ಪ್ರಮುಖ ಸುದ್ದಿ50 mins ago

Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Faiz Hameed
ಪ್ರಮುಖ ಸುದ್ದಿ1 hour ago

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Varamahalakshmi Festival 2024
ಫ್ಯಾಷನ್1 hour ago

Varamahalakshmi Festival 2024: ಹಬ್ಬಕ್ಕೆ ಮಾರುಕಟ್ಟೆ ಪ್ರವೇಶಿಸಿವೆ ರೆಡಿಮೇಡ್‌ ವರಮಹಾಲಕ್ಷ್ಮಿ ಮೂರ್ತಿಗಳು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌