Narendra Modi: ದಿ ಎಲಿಫೆಂಟ್‌ ವಿಸ್ಪರರ್ಸ್‌ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿ ಜತೆ ಮೋದಿ ಮಾತು, ಆನೆ ಸಂರಕ್ಷಣೆಗೆ ಮೆಚ್ಚುಗೆ - Vistara News

ದೇಶ

Narendra Modi: ದಿ ಎಲಿಫೆಂಟ್‌ ವಿಸ್ಪರರ್ಸ್‌ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿ ಜತೆ ಮೋದಿ ಮಾತು, ಆನೆ ಸಂರಕ್ಷಣೆಗೆ ಮೆಚ್ಚುಗೆ

Narendra Modi:ತಮಿಳುನಾಡಿನ ಮಧುಮಲೈಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಆಸ್ಕರ್‌ ಪ್ರಶಸ್ತಿ ಪುರಸ್ಕೃತ ದಿ ಎಲಿಫೆಂಟ್‌ ವಿಸ್ಪರರ್ಸ್‌ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರ ಜತೆ ಆನೆಗಳ ಸಂರಕ್ಷಣೆ, ಅವುಗಳ ಪಾಲನೆ ಕುರಿತು ಚರ್ಚಿಸಿದರು.

VISTARANEWS.COM


on

The Elephant Whisperers’ Couple Bomman And Bellie Meet PM Narendra Modi At Elephant Camp
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಧುಮಲೆ: ಚಾಮರಾಜನಗರ ಜಿಲ್ಲೆ ಬಂಡೀಪುರ ಅರಣ್ಯದಲ್ಲಿ ಸಫಾರಿ ಕೈಗೊಂಡ ಬಳಿಕ ತಮಿಳುನಾಡಿನ ಮಧುಮಲೈಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಆಸ್ಕರ್‌ ಪ್ರಶಸ್ತಿ ಪುರಸ್ಕೃತ ದಿ ಎಲಿಫೆಂಟ್‌ ವಿಸ್ಪರರ್ಸ್‌ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿಯನ್ನು ಭೇಟಿಯಾಗಿ, ಅವರ ಜತೆ ಮಾತುಕತೆ ನಡೆಸಿದರು.

ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದ ಅವರು ದಂಪತಿ ಜತೆಗೂಡಿ ಆನೆಗಳಿಗೆ ಆಹಾರ ತಿನ್ನಿಸಿದರು. ಶಿಬಿರದಲ್ಲಿರುವ ಆನೆಗಳನ್ನು ವೀಕ್ಷಿಸಿದ ಮೋದಿ, ರಾಣಿ ಎಂಬ ಹೆಸರಿನ ಆನೆಗೆ ಕಬ್ಬು ಕೊಟ್ಟರು. ಬಳಿಕ ಆನೆಯ ಸೊಂಡಿಲು ಸವರಿದರು.

ಬೊಮ್ಮ-ಬೆಳ್ಳಿ ದಂಪತಿ ಜತೆ ಆನೆಗಳ ವೀಕ್ಷಣೆ ಮಾಡಿದ ಮೋದಿ

ಹಾಗೆಯೇ, ಆನೆಗಳ ಪಾಲಕರಾದ ದೇವನ್‌, ಕುಳ್ಳನ್‌ ಹಾಗೂ ಕಿರುಮಾರನ್‌ ಅವರ ಜತೆಗೂ ಮೋದಿ ಮಾತನಾಡಿದರು. ಹುಲಿಗಳನ್ನು ಸೆರೆ ಹಿಡಿಯುವ ಸಿಬ್ಬಂದಿ ಜತೆಗೂ ಮೊದಿ ಮಾತನಾಡಿದರು. ಆನೆಗಳ ಪಾಲನೆ ಮಾಡುವುದು, ಅವುಗಳ ಮರಿಗಳನ್ನು ಸಂರಕ್ಷಿಸುವುದು ಸೇರಿ ಸಿಬ್ಬಂದಿ ವಿವಿಧ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಮೋದಿ ಅವರಿಗೆ ಬೊಮ್ಮ ಮನವಿ

ಮಧುಮಲೈನಲ್ಲಿ ವಾಸವಿರುವ ಸೋಲಿಗ ಜನಾಂಗದವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಪ್ರಧಾನಿಗೆ ಬೊಮ್ಮ ಮನವಿ ಮಾಡಿದರು. ಹಾಗೆಯೇ ಸೋಲಿಗ ಸಮುದಾಯದ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನೂ ನೀಡುವಂತೆ ಮನವಿ ಮಾಡಿದರು. ಈ ಕುರಿತು ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ ಬೊಮ್ಮ, “ಮೋದಿ ಅವರನ್ನು ಭೇಟಿಯಾಗಿದ್ದು ನಮಗೆ ಖುಷಿಯಾಗಿದೆ” ಎಂದು ಹೇಳಿದರು.

ಕೆಲ ದಿನಗಳ ಹಿಂದಷ್ಟೇ ಮೋದಿ ಅವರು ದಿ ಎಲಿಫೆಂಟ್‌ ವಿಸ್ಪರರ್ಸ್‌ ತಂಡವನ್ನು ಭೇಟಿ ಮಾಡಿದ್ದರು. ಸಿನಿಮಾದ ನಿರ್ದೇಶಕಿ ಕಾರ್ತಿಕಿ ಗೊನ್ಸಲ್ವೆಸ್‌ ಮತ್ತು ನಿರ್ಮಾಪಕಿ ಗುನೀತ್‌ ಮೊಂಗಾ ಅವರೊಂದಿಗಿರುವ ಫೋಟೋವನ್ನು ಹಂಚಿಕೊಂಡಿದ್ದ ಮೋದಿ, “ದಿ ಎಲಿಫೆಂಟ್ ವಿಸ್ಪರರ್ಸ್ ಸಿನಿಮಾದ ತೇಜಸ್ಸು ಮತ್ತು ಯಶಸ್ಸು ಜಾಗತಿಕ ಗಮನ ಸೆಳೆಯುವುದರ ಜೊತೆಗೆ ಮೆಚ್ಚುಗೆಯನ್ನೂ ಗಳಿಸಿದೆ. ಇಂದು, ಅದಕ್ಕೆ ಸಂಬಂಧಿಸಿದ ಅದ್ಭುತ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಅವರು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ”ಎಂದು ಅವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: Modi in Karnataka : ಬಂಡಿಪುರದಲ್ಲಿ 20 ಕಿ.ಮೀ ಟೈಗರ್ ಸಫಾರಿ, ತೆಪ್ಪಕಾಡಿನಲ್ಲಿ ಆನೆಗಳಿಗೆ ಕಬ್ಬು ತಿನ್ನಿಸಿದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

PM Narendra Modi: ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi
Koo

ಪಾಟ್ನಾ: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನೂ ಎದುರಿಸುತ್ತಿರುವ ಒಡಿಶಾದಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಿಎಂ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆರೋಗ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಈ ವಿಡಿಯೂ ದೇಶವ್ಯಾಪಿ ಬಹಳ ಸದ್ದು ಮಾಡುತ್ತಿದೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಾಲಿ ಸಿಎಂ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ಕ್ಷೀಣಿಸಲು ಕಾರಣ ಏನೆಂಬುದರ ಬಗ್ಗೆ ತನಿಖೆಗೆ ಆದೇಶಿಸುತ್ತೇವೆ ಎಂದು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಕಳೆದೊಂದು ವರ್ಷಗಳಿಂದ ನವೀನ್‌ ಬಾಬು(ಪಟ್ನಾಯಕ್‌) ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವ ಬಗ್ಗೆ ಅವರ ಹಿತೈಷಿಗಳು ಇತ್ತೀಚೆಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕಳೆದೊಂಡು ವರ್ಷಗಳಿಂದ ಪಟ್ನಾಯಕ್‌ ಅವರ ಪರಿಚಯಸ್ಥರು ಯಾರೇ ನನ್ನನ್ನು ಭೇಟಿ ಮಾಡಿದರೂ ಅವರ ಆರೋಗ್ಯದ ಬಗ್ಗೆ ಚರ್ಚೆ ಮಾಡುತ್ತಾರೆ. ಈಗೀಗ ಅವರಿಗೆ ತಮ್ಮ ಸ್ವಂತ ಕೆಲಸಗಳನ್ನೂ ಮಾಡಿಕೊಳ್ಳಲಾಗದಂತಹ ಅನಾರೋಗ್ಯ ಕಾಡುತ್ತಿದೆ ಎಂಬುದು ಅವರ ಆಪ್ತರಿಂದ ತಿಳಿದಿದೆ.

ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ. ಜೂ.10ರ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನವೀನ್‌ ಬಾಬು ಅವರ ಅನಾರೋಗ್ಯಕ್ಕೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ವಿಶೇಷ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಒಡಿಶಾದಲ್ಲಿ ಬಿಜೆಡಿಯ 25 ವರ್ಷಗಳ ಆಡಳಿತ ಅಂತ್ಯಗೊಳ್ಳುವುದು ಖಚಿತ. ಬಿಜೆಪಿಯ ವ್ಯಕ್ತಿ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಒಡಿಶಾಗೆ ಒಡಿಯಾ ವ್ಯಕ್ತಿಯೇ ಸಿಎಂ ಆದರೆ ಚೆಂದ. ಹೊರಗಿನವರ ಕೈಗೆ ಅಧಿಕಾರ ಕೊಡಲು ಜನರಿಗೂ ಮನಸಿಲ್ಲ ಎಂದು ಪರೋಕ್ಷವಾಗಿ ಬಿಜೆಡಿ ಸಿಎಂ ಸ್ಥಾನದ ಆಕಾಂಕ್ಷಿ ಪಾಂಡಿಯನ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ:Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Continue Reading

ದೇಶ

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Arvind Kejriwal: ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ ಎಂಬುದಾಗಿ ಅರವಿಂದ್‌ ಕೇಜ್ರಿವಾಲ್‌ ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ. ಇದು ಈಗ ಭಾರಿ ಸಂಚಲನ ಮೂಡಿಸಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಶತಾಯ ಗತಾಯ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟದಲ್ಲಿ (India Bloc) ಆರಂಭದಿಂದಲೂ ಭಿನ್ನಮತ, ಭಿನ್ನಾಭಿಪ್ರಾಯ ತಲೆದೋರುತ್ತಿವೆ. ನಿತೀಶ್‌ ಕುಮಾರ್‌ (Nitish Kumar) ಇಂಡಿಯಾ ಒಕ್ಕೂಟ ತೊರೆದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದ್ದೇ ಇದಕ್ಕೆ ನಿದರ್ಶನಗಳಾಗಿವೆ. ಇದರ ಬೆನ್ನಲ್ಲೇ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ ಜತೆಗಿನ ನಮ್ಮ ಮದುವೆಯು (ಆಪ್‌-ಕಾಂಗ್ರೆಸ್‌ ಮೈತ್ರಿ) (AAP Congress Alliance) ಶಾಶ್ವತ ಅಲ್ಲ” ಎಂದು ಹೇಳುವ ಮೂಲಕ ಮೈತ್ರಿ ಮುರಿದುಕೊಳ್ಳುವ ಸೂಚನೆ ನೀಡಿದ್ದಾರೆ.

ಇಂಡಿಯಾ ಟುಡೇ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅರವಿಂದ್‌ ಕೇಜ್ರಿವಾಲ್‌ ಅವರು ಹೀಗೆ ಹೇಳಿದ್ದಾರೆ. “ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಮಾತ್ರ ನಾವು ಮೈತ್ರಿ ಮಾಡಿಕೊಂಡಿದ್ದೇವೆ” ಎಂದು ಹೇಳಿರುವುದು ಭಾರಿ ಸಂಚಲನ ಮೂಡಿಸಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ

ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಆಗ್ರಹಿಸುತ್ತಿದೆ. ಇದರ ಕುರಿತು ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಹೇಳಿತು ಎಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅಷ್ಟಕ್ಕೂ, ನಾನು ಜೈಲಿಗೆ ಹೋಗುತ್ತೇನೆ ಎಂಬುದು ಮುಖ್ಯ ವಿಷಯವಲ್ಲ. ದೇಶದ ಭವಿಷ್ಯದ ಬಗ್ಗೆ ನನಗೆ ಚಿಂತೆ ಇದೆ. ಅವರಿಗೆ ಎಷ್ಟು ದಿನ ಬೇಕೋ, ಅಷ್ಟು ದಿನ ನನ್ನನ್ನು ಜೈಲಿನಲ್ಲಿ ಇರಿಸಲಿ. ನಾವು ಯಾವುದೇ ಕಾರಣಕ್ಕೂ ಕುಗ್ಗುವುದಿಲ್ಲ, ಹೋರಾಟ ನಿಲ್ಲಿಸಲ್ಲ” ಎಂದಿದ್ದಾರೆ. ಕೇಜ್ರಿವಾಲ್‌ ಅವರು ಜೂನ್‌ 2ರಂದು ಮತ್ತೆ ಜೈಲಿಗೆ ಹೋಗಲಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಗೆ ದೀದಿ ಗೈರು

ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದು ಕೂಡ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Continue Reading

ದೇಶ

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

Karan Bhushan Singh: ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Karan Bhushan Singh
Koo

ಲಕ್ನೋ: ಪುಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಕುಡಿದು ಐಷಾರಾಮಿ ಪೋರ್ಷೆ ಕಾರನ್ನು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ಹಸಿಯಾಗಿರುವಾಗಲೇ ಅಂತಹದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಕೈಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಮತ್ತು ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಪುತ್ರ ಕರಣ್ ಭೂಷಣ್ ಸಿಂಗ್ (Karan Bhushan Singh) ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದ್ದು, ಮೃತರನ್ನು 17 ವರ್ಷದ ರೆಹಾನ್ ಮತ್ತು ಆತನ ಸಂಬಂಧಿ 24 ವರ್ಷದ ಶಹಜಾದ್ ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ವಿವರ

ಈ ಬಗ್ಗೆ ಎಫ್ಐಆರ್ ದಾಖಲಿಸಿರುವ ಚಂದಾ ಬೇಗಂ ಮಾತನಾಡಿ, ʼʼಇಂದು (ಮೇ 29) ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಮಗ ರೆಹಾನ್ ಮತ್ತು ಸೋದರಳಿಯ ಶಹಜಾದ್ ಔಷಧ ಖರೀದಿಸಲು ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟೊಯೊಟಾ ಫಾರ್ಚೂನರ್ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆʼʼ ಎಂದು ಹೇಳಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮತ್ತು ಮೃತರ ಕುಟುಂಬದವರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು. ಕ್ರಮ ಕೈಗೊಂಡ ಪೊಲೀಸರು ಅಪಘಾತ ನಡೆದ ನಂತರ ಪರಾರಿಯಾಗಿದ್ದ ಟೊಯೊಟಾ ಫಾರ್ಚೂನರ್‌ನ ಚಾಲಕನ್ನು ಬಂಧಿಸಿದ್ದಾರೆ. ಅಪಘಾತ ನಡೆದ ಸಮಯದಲ್ಲಿ ಕರಣ್ ಭೂಷಣ್ ಸಿಂಗ್ ಅವರು ವಾಹನದಲ್ಲಿ ಇದ್ದರಾ ಎನ್ನುವ ಬಗ್ಗೆ ಇದುವರೆಗೆ ಮಾಹಿತಿ ಲಭಿಸಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಿರುವ ಕಾರಣ ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್‌ ನೀಡಿರಲಿಲ್ಲ. ಅವರ ಬದಲಾಗಿ ಪುತ್ರ ಕರಣ್ ಭೂಷಣ್ ಸಿಂಗ್ ಅವರಿಗೆ ಮಣೆ ಹಾಕಲಾಗಿತ್ತು. ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದರು. ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೂರಾರು ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಅವರನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ: Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

ಕರಣ್ ಭೂಷಣ್ ಸಿಂಗ್ ಹಿನ್ನೆಲೆ

2019ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ.

Continue Reading

ಪ್ರಮುಖ ಸುದ್ದಿ

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ರಾಹುಲ್‌ ಗಾಂಧಿ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಈ ಘೋಷಣೆಯ ಬೆನ್ನಲ್ಲೇ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ (post payments Bank digital account) ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ.

VISTARANEWS.COM


on

ರಾಹುಲ್‌ ಗಾಂಧಿ rahul gandhi ippb account 2
Koo

ವಿಶೇಷ ವರದಿ: ಅಭಿಷೇಕ್ ಬಿ.ವಿ, ವಿಸ್ತಾರ ನ್ಯೂಸ್

ಬೆಂಗಳೂರು: ಇಂಡಿಯಾ ಮೈತ್ರಿಕೂಟ (INDIA bloc) ಅಧಿಕಾರಕ್ಕೆ ಬಂದ ನಂತರದ ದಿನವೇ ಮಹಿಳೆಯರ (women) ಖಾತೆಗೆ ʼಟಕಾ ಟಕ್ ಹಣʼ ಜಮಾವಣೆ ಮಾಡಲಾಗುವುದು ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಘೋಷಣೆ ಪರಿಣಾಮ, ಪೋಸ್ಟ್‌ ಆಫೀಸ್‌ಗಳಲ್ಲಿ (Post Office) ಖಾತೆ ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಇವರಲ್ಲಿ ಹೆಚ್ಚಾಗಿ ಮುಸ್ಲಿಂ ಮಹಿಳೆಯರೇ ಕಂಡು ಬರುತ್ತಿದ್ದಾರೆ.

ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ಇಂಡಿಯಾ ಒಕ್ಕೂಟ, ಅಧಿಕಾರ ಬಂದ ಕೂಡಲೇ ಸರ್ಕಾರ ನಿಮ್ಮ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಘೋಷಣೆಯ ಬೆನ್ನಲ್ಲೇ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ (post payments Bank digital account) ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಪ್ರತಿ ತಿಂಗಳು 8500 ರೂ. ಹಣ ಬರಲಿದೆ ಎಂಬ ನಿರೀಕ್ಷೆಯಲ್ಲಿ ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ.

ಕಳೆದ 15 ದಿನದಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಖಾತೆ ತೆರೆಯಲು ಮಹಿಳೆಯರು ಮುಗಿಬೀಳುತ್ತಿರುವುದು ಕಂಡುಬಂದಿದೆ. ಮಹಿಳೆಯರ ನಿಯಂತ್ರಣ ಮಾಡಲಾರದೆ ಬೆಂಗಳೂರಿನ ಅಂಚೆ ಕೇಂದ್ರ ಕಚೇರಿಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಕಚೇರಿ ಮುಂದೆ ಮುಗಿಬೀಳುತ್ತಿರುವ ಸುತ್ತಮುತ್ತಲಿನ ಶಿವಾಜಿನಗರ, ವಸಂತನಗರ ಮುಂತಾದೆಡೆಗಳ ಮಹಿಳೆಯರು, ಅವರ ಜೊತೆಗೆ ಬರುತ್ತಿರುವ ಪುರುಷರು ಅಂಚೆ ಕಚೇರಿ ಆವರಣವನ್ನು ಅಕ್ಷರಶಃ ಸಂತೆಯಾಗಿಸಿದ್ದಾರೆ.

ಮಹಿಳೆಯರ ನಿಯಂತ್ರಣ ಸಾಧ್ಯವಾಗದೆ ಅಂಚೆ ಸಿಬ್ಬಂದಿ ಟೋಕ‌ನ್ ವಿತರಿಸಲು ಆರಂಭಿಸಿದ್ದಾರೆ. ಬೆಳಗ್ಗೆ 4 ಗಂಟೆಗೆ ಟೋಕನ್ ವಿತರಣೆ ಆರಂಭವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಕ್ಯೂ ನಿಂತು ಮಹಿಳೆಯರು ಟೋಕನ್ ಪಡೆಯುತ್ತಿದ್ದಾರೆ.

ಖಾತೆ ತೆರೆಯುತ್ತಿರುವ ಮಹಿಳೆಯರಿಗೂ ಹಣ ಬರುವ ಬಗ್ಗೆ ಖಚಿತ ಮಾಹಿತಿ ಇಲ್ಲ! “ಅಕೌಂಟ್‌ಗೆ ಹಣ ಬರುತ್ತೆ ಅಂತ ಅಕ್ಕಪಕ್ಕದವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ಲಕ್ಷ ಹಣ ನೀಡುತ್ತಾರಂತೆ. ಮೋದಿ ಬಂದ್ರೆ 2 ಸಾವಿರ ನೀಡುತ್ತಾರಂತೆ. ಯಾರು ಬಂದ್ರೇನು ನಮಗೆ ಹಣ ಬರುತ್ತೆ ಅಂತ ಹೇಳಿದ್ರು. ಅದಕ್ಕೆ ಬಂದಿದ್ದೇವೆ. ಬೆಳಗ್ಗೆ 5 ಗಂಟೆಗೆ ಬಂದಿದ್ದೇವೆ. ಯಾವ ಅಧಿಕಾರಿಗಳೂ ಹೇಳಿಲ್ಲ, ನೆರೆಮನೆಯವರು, ಸ್ಥಳೀಯರು ಹೇಳಿದರು” ಎಂಬುದು ಖಾತೆಗಾಗಿ ಕ್ಯೂ ನಿಂತ ಮಹಿಳೆಯರ ಹೇಳಿಕೆ.

ಹೆಡ್‌ ಪೋಸ್ಟ್‌ ಮಾಸ್ಟರ್‌ ಹೇಳೋದೇನು?

“ನಮ್ಮಲ್ಲಿ ಮೊದಲಿನಿಂದಲೂ IPPB ಖಾತೆ ಮಾಡುತ್ತಿದ್ದೇವೆ. ಆದರೆ ಕೆಲ ದಿನಗಳಿಂದ ಜನರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಅಕೌಂಟ್‌ಗೆ ಹಣ ಹಾಕ್ತಾರೆ ಅಂತ ಜನ ಬರುತ್ತಿದ್ದಾರೆ. ಹಣ ಬರುವ ಬಗ್ಗೆ ನಮಗೆ ಯಾವುದೇ ಸೂಚನೆ ಇಲ್ಲ. ಆದರೆ ವದಂತಿ ಹರಡಿ ಜನರು ಜಾಸ್ತಿ ಜಾಸ್ತಿ ಬರ್ತಿದ್ದಾರೆ” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಹೇಳಿದ್ದಾರೆ.

“ಈ ಖಾತೆಯಿಂದ ಬೇರೆ ಬೇರೆ ಪ್ರಾಧಿಕಾರಗಳಿಗೆ ಹಣ ಕಟ್ಟಬಹುದು. 200 ರೂ. ಮಾತ್ರ ಜಮಾ ಮಾಡಿಸಿ ಖಾತೆ ತೆರೆಯುತ್ತಿದ್ದೇವೆ. ಜನರು ಹೆಚ್ಚಾಗಿದ್ದರಿಂದ ಈಗ ಹೆಚ್ಚಿನ ಸಿಬ್ಬಂದಿ ನೇಮಿಸಿದ್ದೇವೆ. ನಿತ್ಯ 1 ಸಾವಿರ ಅಕೌಂಟ್ ಮಾಡಿ ಕೊಡ್ತಿದ್ದೇವೆ. ಜನರಿಗೆ ಮಾಹಿತಿ ಕೊರತೆ ಇರೋದರಿಂದ ಮುಗಿಬೀಳ್ತಿದ್ದಾರೆ. ಇದಕ್ಕೆ ಯಾವುದೇ ಕೊನೆ ದಿನಾಂಕ ಇಲ್ಲ. ಯಾವ ಅಂಚೆ ಕಚೇರಿಯಲ್ಲಾದರೂ ಅಕೌಂಟ್ ಮಾಡಿಸಬಹುದು” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Continue Reading
Advertisement
Bhavani Revanna
ಕರ್ನಾಟಕ5 mins ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ7 mins ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Missing Case
ಕರ್ನಾಟಕ21 mins ago

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Prajwal Revanna Case
ಕರ್ನಾಟಕ28 mins ago

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Virat Kohli
ಕ್ರೀಡೆ46 mins ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

PM Narendra Modi
ದೇಶ58 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ59 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ1 hour ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ1 hour ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ1 hour ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌