IPL 2023: ರೀಸ್‌ ಟಾಪ್ಲಿಗೆ ಶಸ್ತ್ರಚಿಕಿತ್ಸೆ; ಚೇತರಿಕೆಗೆ ಹಾರೈಸಿದ ಆರ್​ಸಿಬಿ - Vistara News

ಕ್ರಿಕೆಟ್

IPL 2023: ರೀಸ್‌ ಟಾಪ್ಲಿಗೆ ಶಸ್ತ್ರಚಿಕಿತ್ಸೆ; ಚೇತರಿಕೆಗೆ ಹಾರೈಸಿದ ಆರ್​ಸಿಬಿ

ಭುಜದ ಶಸ್ತ್ರಚಿಕಿತ್ಸೆಗೆ ಒಳಗಾದ ಇಂಗ್ಲೆಂಡ್​ ವೇಗಿ ರೀಸ್‌ ಟಾಪ್ಲಿ(Reece Topley) ಅವರ ಚೇತರಿಕೆಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಹಾರೈಸಿದೆ.

VISTARANEWS.COM


on

IPL 2023: Reece Topley undergoes surgery; RCB wished for recovery
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಮುಂಬೈ ಇಂಡಿಯನ್ಸ್​ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದ ಆರ್​ಸಿಬಿ ತಂಡದ ವೇಗಿ ರೀಸ್‌ ಟಾಪ್ಲಿ(Reece Topley) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಭುಜದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದ ಫೋಟೊವನ್ನು ಟಾಪ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್​ ವಿರುದ್ಧ ಏಪ್ರಿಲ್​ 2ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಫೀಲ್ಡಿಂಗ್​ ನಡೆಸುತ್ತಿದ್ದ ಟಾಪ್ಲಿ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಎರಡು ಓವರ್​ ಮಾಡಿದ್ದ ಅವರು ಆ ಬಳಿಕ ಪಂದ್ಯದಿಂದ ಹೊರಗುಳಿದಿದ್ದರು. ಬಳಿಕ ಟೂರ್ನಿಯಿಂದಲೇ ಹೊರವಿದ್ದಿದ್ದರು. ಅವರ ಬದಲು ದಕ್ಷಿಣ ಆಫ್ರಿಕಾದ ವೇಗಿ ವೇಯ್ನ್​ ಪರ್ನೆಲ್​ ಅವರನ್ನು ತಂಡಕ್ಕೆ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಟಾಪ್ಲಿ ಅವರು ತನ್ನ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಇದನ್ನೂ ಓದಿ IPL 2023 : ಸಿಎಸ್​ಕೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ಸಂಜು ಸ್ಯಾಮ್ಸನ್​ಗೆ 12 ಲಕ್ಷ ರೂಪಾಯಿ ದಂಡ

ಸದ್ಯ ಅವರ ಚೇತರಿಕೆಗೆ ಕನಿಷ್ಠ 5 ತಿಂಗಳು ಕಾಲಾವಕಾಶ ಬೇಕೆಂದು ತಿಳಿದುಬಂದಿದೆ. ಹೀಗಾಗಿ ಅವರು ಜೂನ್​ನಲ್ಲಿ ಆರಂಭವಾಗಲಿರುವ ಆ್ಯಶಸ್​ ಟೆಸ್ಟ್​ ಸರಣಿ ಸೇರಿ ಪ್ರಮುಖ ಸರಣಿಯಿಂದ ಹೊರಗುಳಿಯಲಿದ್ದಾರೆ. ಟಾಪ್ಲಿ ಚೇತರಿಕೆಗೆ ಆರ್​ಸಿಬಿ ತಂಡ ಹಾರೈಸಿದೆ. ಶೀಘ್ರದಲ್ಲೇ ಗುಣಮುಖರಾಗಿ, ಮುಂದಿನ ಬಾರಿಯ ಐಪಿಎಲ್​ನಲ್ಲಿ ಸಿಗೋಣ’ ಎಂದು ಪ್ರಾಂಚೈಸಿ ತಿಳಿಸಿದೆ. ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಆರ್​ಸಿಬಿ ರೀಸ್ ಟಾಪ್ಲಿ ಅವರನ್ನು ಬರೋಬ್ಬರಿ 1.9 ಕೋಟಿಗೆ ಖರೀದಿಸಿತ್ತು. ಮುಂಬೈ ವಿರುದ್ಧ ಅವರು ಆಡಿದ ಚೊಚ್ಚಲ ಐಪಿಎಲ್​ ಪಂದ್ಯವಾಗಿತ್ತು. ಆದರೆ ದುರಾದೃಷ್ಟವಶಾತ್‌ ಅವರಿಗೆ ಈ ಪಂದ್ಯವೇ ಕೊನೆಯ ಪಂದ್ಯವಾಗಿತ್ತು. ಸದ್ಯ ಮುಂದಿನ ಬಾರಿಯ ಐಪಿಎಲ್​ನಲ್ಲಿ ಅವರು ಆಡುವ ಸಾಧ್ಯತೆ ಇದೆ.​

ಆರ್​ಸಿಬಿ ತಂಡ: ಫಾಪ್​ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಜ್​ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.,ವೈಶಾಖ್ ವಿಜಯಕುಮಾರ್, ವೇಯ್ನ್​ ಪಾರ್ನೆಲ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

T20 ವಿಶ್ವಕಪ್

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

T20 World Cup 2024: ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ.

VISTARANEWS.COM


on

T20 World Cup 2024
Koo

ಲಾಡರ್‌ಹಿಲ್‌ (ಯುಎಸ್‌ಎ): ಅಮೆರಿಕದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಗ್ರೂಪ್‌ ಹಂತದ ಭಾರತ ಹಾಗೂ ಕೆನಡಾ ನಡುವಿನ (India vs Canada Match) ಪಂದ್ಯವು ಒಂದೂ ಎಸೆತ ಕಾಣದೆ ರದ್ದಾಗಿದೆ. ಭಾರಿ ಮಳೆಯಿಂದಾಗಿ ಶನಿವಾರ (ಜೂನ್‌ 15) ಲಾಡರ್‌ಹಿಲ್‌ನಲ್ಲಿರುವ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯವು ರದ್ದಾಯಿತು. ಇದರಿಂದಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಗ್ರೂಪ್‌ ಹಂತದಲ್ಲಿ ಒಂದೂ ಪಂದ್ಯ ಸೋಲದ ಭಾರತ ತಂಡವು 7 ಅಂಕಗಳೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೂಪರ್‌ 8 ಹಂತಕ್ಕೆ ಪ್ರವೇಶ ಪಡೆದಿದೆ.

ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಭಾರತ ಹಾಗೂ ಅಮೆರಿಕ ತಂಡವು ಸೂಪರ್‌ 8 ಪ್ರವೇಶಿಸಿವೆ. ಭಾನುವಾರ ಐರ್ಲೆಂಡ್‌ ಹಾಗೂ ಪಾಕಿಸ್ತಾನ ತಂಡಗಳು ಗ್ರೂಪ್‌ ಹಂತದ ಹಾಗೂ ಟೂರ್ನಿಯ ಕೊನೆಯ ಪಂದ್ಯವನ್ನು ಆಡಲಿವೆ.

ಭಾರತ ಹಾಗೂ ಕೆನಡಾ ಪಂದ್ಯವನ್ನು ಆಡಲಿಸಲು ಪ್ರಯತ್ನ ಮಾಡಲಾಯಿತು. ಹಲವು ಬಾರಿ ಪಿಚ್‌ ಹಾಗೂ ಮೈದಾನವನ್ನು ಪರಿಶೀಲನೆ ನಡೆಸಲಾಯಿತು. ಕೊನೆಗೆ ಐದು ಓವರ್‌ಗಳ ಪಂದ್ಯವನ್ನಾದರೂ ಆಡಿಸಲು ಪ್ರಯತ್ನಿಸಲಾಯಿತು. ಆದರೆ, ಮಳೆ ಕಡಿಮೆಯಾದರೂ ಮೈದಾನದಲ್ಲಿ ತೇವಾಂಶ ರದ್ದಿರುವ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಸೂಪರ್‌ 8ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಒಂದೇ ಗ್ರೂಪ್‌ನಲ್ಲಿವೆ. ಜೂನ್‌ 19ರಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿವೆ. ಸೂಪರ್‌ 8 ಪಂದ್ಯಗಳು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿವೆ.

ಉತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗವನ್ನು ಹೊಂದಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ವಿಫಲವಾಗುವ ಜತೆಗೆ ಅದೃಷ್ಟದಾಟದಲ್ಲೂ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್‌ ತಂಡವು ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯಿಂದಲೇ ಹೊರಬಿದ್ದಿದೆ. ಸೂಪರ್‌ 8ರ ರೇಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಬರ್‌ ಅಜಂನೇತೃತ್ವದ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಪಾಕ್‌ ಕ್ರಿಕೆಟ್‌ ಅಭಿಮಾನಿಗಳು ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Continue Reading

ಕ್ರೀಡೆ

Trent Boult: ಕೊನೆಯ ಟಿ20 ವಿಶ್ವಕಪ್​ ಆಡಲು ಸಿದ್ಧರಾದ ಟ್ರೆಂಟ್​ ಬೌಲ್ಟ್

Trent Boult: 34 ವರ್ಷದ ಎಡಗೈ ವೇಗಿ ಬೌಲ್ಟ್​ ಇದುವರೆಗೆ ನ್ಯೂಜಿಲ್ಯಾಂಡ್​ ಪರ 60 ಟಿ20 ಪಂದ್ಯಗಳನ್ನು ಆಡಿ ಒಟ್ಟು 81 ವಿಕೆಟ್​ ಕಬಳಿಸಿದ್ದಾರೆ.

VISTARANEWS.COM


on

Trent Boult
Koo

ನ್ಯೂಯಾರ್ಕ್​: ನ್ಯೂಜಿಲ್ಯಾಂಡ್​ ಕ್ರಿಕೆಟ್​ ತಂಡದ ಹಿರಿಯ ವೇಗಿ ಟ್ರೆಂಟ್​ ಬೌಲ್ಟ್(​Trent Boult) ಅವರು ತಮ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ ವೃತ್ತಿ ಬುದುಕಿಗೆ ತೆರೆ ಎಳೆಯಲು ಸಿದ್ಧರಾಗಿದ್ದಾರೆ. ಇದು ತನ್ನ ಕೊನೆಯ ಟಿ20 ವಿಶ್ವಕಪ್​ ಟೂರ್ನಿ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದಂತಿದೆ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ನ್ಯೂಜಿಲ್ಯಾಂಡ್​ ತನ್ನ ಕೊನೆಯ ಲೀಗ್​ ಪಂದ್ಯವನ್ನು ಜೂನ್​ 17ರಂದು ಪಪುವಾ ನ್ಯೂಗಿನಿಯಾ ವಿರುದ್ಧ ಆಡಲಿದೆ. ಈ ಪಂದ್ಯ ಬೌಲ್ಟ್​ ಅವರಿಗೆ ಕೊನೆಯ ಪಂದ್ಯವಾಗುವ ಸಾಧ್ಯತೆ ಇದೆ.


34 ವರ್ಷದ ಎಡಗೈ ವೇಗಿ ಬೌಲ್ಟ್​ ಇದುವರೆಗೆ ನ್ಯೂಜಿಲ್ಯಾಂಡ್​ ಪರ 60 ಟಿ20 ಪಂದ್ಯಗಳನ್ನು ಆಡಿ ಒಟ್ಟು 81 ವಿಕೆಟ್​ ಕಬಳಿಸಿದ್ದಾರೆ. 13 ರನ್​ಗೆ 4 ವಿಕೆಟ್​ ಕಿತ್ತದ್ದು ವೈಯಕ್ತಿಕ ಜೀವಮಾನ ಶ್ರೇಷ್ಠ ಬೌಲಿಂಗ್​ ಸಾಧನೆಯಾಗಿದೆ. 2013ರಲ್ಲಿ ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ ಆಡುವ ಮೂಲಕ ಬೌಲ್ಟ್​ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಐಪಿಎಲ್​ ಟೂರ್ನಿಯಲ್ಲಿ 103 ಪಂದ್ಯಗಳನ್ನಾಡಿ 121 ವಿಕೆಟ್​ ಕಿತ್ತಿದ್ದಾರೆ. ಕಿವೀಸ್​ ತಂಡದ ಪರ ಟಿ20 ಆಡದಿದ್ದರೂ ಕೂಡ ಅವರು ವಿದೇಶಿ ಟಿ20 ಲೀಗ್​ನಲ್ಲಿ ಆಟ ಮುಂದುವರಿಸಲಿದ್ದಾರೆ.


2014-2024ರ ತನಕ ಟಿ0 ವಿಶ್ವಕಪ್​ ಆಡಿರುವ ಬೌಲ್ಟ್​ ಇದುವರೆಗೆ 17 ಪಂದ್ಯಗಳಿಂದ 32 ವಿಕೆಟ್​ ಕಲೆಹಾಕಿದ್ದಾರೆ. ಇಂದು(ಶನಿವಾರ) ನಡೆದ ಉಗಾಂಡ ವಿರುದ್ಧದ ಪಂದ್ಯದಲ್ಲಿ ಬೌಲ್ಟ್​ 4 ಓವರ್​ ನಡೆಸಿ ಒಂದು ಮೇಡನ್​ ಸಹಿತ ಕೇವಲ 7 ರನ್​ಗೆ 2 ವಿಕೆಟ್​ ಕಿತ್ತು ಮಿಂಚಿದ್ದರು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಪಂದ್ಯ ಗೆದ್ದ ಕಿವೀಸ್​


ಟ್ರಿನಿಡಾಡ್​ನ ಬ್ರಿಯನ್​ ಲಾರ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಉಗಾಂಡ, ಟಿಮ್​ ಸೌಥಿ ಮತ್ತು ಬೌಲ್ಟ್​ ಘಾತದ ದಾಳಿಗೆ ತತ್ತರಿಸಿ ಕೇವಲ 40 ರನ್​ಗೆ ಆಲೌಟ್​ ಆಯಿತು. ಈ ಸಣ್ಣ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್​ 5.2 ಓವರ್​ಗಳಲ್ಲಿ 1 ವಿಕೆಟ್​ಗೆ 41 ರನ್​ ಬಾರಿಸಿ 9 ವಿಕೆಟ್​ ಅಂತರದಿಂದ ಗೆಲುವು ಸಾಧಿಸಿತು. ಇದು ಕಿವೀಸ್​ಗೆ ಟೂರ್ನಿಯಲ್ಲಿ ಒಲಿದ ಮೊದಲ ಗೆಲುವು. ಇದಕ್ಕು ಮುನ್ನ ಆಡಿದ 2 ಪಂದ್ಯಗಳಲ್ಲಿಯೂ ಹೀನಾಯ ಸೋಲು ಕಂಡಿತ್ತು. ಕಿವೀಸ್​ ಪರ ಬೌಲಿಂಗ್​ನಲ್ಲಿ ಟಿಮ್​ ಸೌಥಿ 4 ಓವರ್​ ಎಸೆದು ಕೇವಲ 4 ರನ್​ಗೆ 3 ವಿಕೆಟ್​ ಕಿತ್ತು ಮಿಂಚಿದರು. ಚೇಸಿಂಗ್​ನಲ್ಲಿ ಡೆವೋನ್​ ಕಾನ್ವೆ ಅಜೇಯ 22 ರನ್​ ಬಾರಿಸಿ ತಂಡದ ಗೆಲುವು ಸಾರಿಸಿದರು.

Continue Reading

ಕ್ರಿಕೆಟ್

Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

Pakistan Cricket Board: ಎನ್‌ಒಸಿ ನಿಯಮದ ಪ್ರಕಾರ, ವಿದೇಶಗಳಲ್ಲಿ ನಡೆಯುವ ಲೀಗ್‌ಗಳಿಗೆ ಸಂಬಂಧಿಸಿದಂತೆ ಪಾಕ್​ ಕ್ರಿಕೆಟ್​ ಮಂಡಳಿಯು ಆಟಗಾರರಿಗೆ ಎರಡು ಎನ್‌ಒಸಿಗಳನ್ನು ನೀಡುತ್ತದೆ. ಈ ನಿಯಮಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಪಿಸಿಬಿ ಸೂಚಿಸಿದೆ.

VISTARANEWS.COM


on

Pakistan Cricket Board
Koo

ಟಿ20 ವಿಶ್ವಕಪ್​ ಟೂರ್ನಿಯಿಯ ಲೀಗ್​ ಹಂತದಿಂದಲೇ ಪಾಕಿಸ್ತಾನ ತಂಡ(Pakistan Cricket Team) ಹೊರಬಿದ್ದ ಬೆನ್ನಲ್ಲೇ ಪಾಕ್​ ಕ್ರಿಕೆಟ್​ ಮಂಡಳಿ(Pakistan Cricket Board) ಮಹತ್ವದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮದ ಪ್ರಕಾರ ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಎಲ್ಲ ಪಾಕ್​ ಆಟಗಾರರು ವರ್ಷವೊಂದರಲ್ಲಿ ಪಾಕಿಸ್ತಾನ ಸೂಪರ್‌ ಲೀಗ್‌ (ಪಿಎಸ್‌ಎಲ್‌) ಹೊರತುಪಡಿಸಿ, ವಿದೇಶಗಳಲ್ಲಿ ನಡೆಯುವ ಎರಡು ಟಿ20 ಲೀಗ್‌ಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ.

ಎನ್‌ಒಸಿ ನಿಯಮದ ಪ್ರಕಾರ, ವಿದೇಶಗಳಲ್ಲಿ ನಡೆಯುವ ಲೀಗ್‌ಗಳಿಗೆ ಸಂಬಂಧಿಸಿದಂತೆ ಪಾಕ್​ ಕ್ರಿಕೆಟ್​ ಮಂಡಳಿಯು ಆಟಗಾರರಿಗೆ ಎರಡು ಎನ್‌ಒಸಿಗಳನ್ನು ನೀಡುತ್ತದೆ. ಈ ನಿಯಮಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಪಿಸಿಬಿ ಸೂಚಿಸಿದೆ. ಅಚ್ಚರಿ ಎಂದರೆ ವಿಶ್ವಕಪ್‌ನಲ್ಲಿ ಪಾಲ್ಗೊಂಡ ಅಜಂ ಖಾನ್‌ ಮತ್ತು ಸೈಮ್ ಆಯೂಬ್‌ ಅವರಿಗೆ ಮಂಡಳಿ ಈವರೆಗೆ ಎನ್‌ಒಸಿ ನೀಡಿಲ್ಲ. ಆದರೂ ಇವರು ವಿಶ್ವಕಪ್​ ಆಡಿದ್ದಾರೆ.

ಇದನ್ನೂ ಓದಿ Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

ಎರಡು ಎನ್‌ಒಸಿ ನಿಯಮ


ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಉಳಿದೆಲ್ಲ ಆಟಗಾರರಿಗೆ ಎರಡು ಎನ್‌ಒಸಿ ನಿಯಮ ಅನ್ವಯವಾಗುತ್ತದೆ. ಯಾವುದೇ ಆಟಗಾರ ಎನ್‌ಒಸಿಗಾಗಿ ಸಲ್ಲಿಸುವ ಮನವಿಯನ್ನು ತಡೆಹಿಡಿಯುವ ಹಕ್ಕು ಕೂಡ ಪಿಸಿಬಿಗೆ ಇದೆ ಎಂದು ಮಂಡಳಿಯ ಅಧಿಕೃತ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಇನ್ನು, ನಾಲ್ಕು ಪಾಯಿಂಟ್ ಹೊಂದಿದ್ದ ಅಮೆರಿಕ ತಂಡವು ಐರ್ಲೆಂಡ್‌ ವಿರುದ್ಧ ಸೋತು, ಜೂನ್‌ 16ರಂದು ಐರ್ಲೆಂಡ್‌ ವಿರುದ್ಧ ನಡೆಯುವ ಪಂದ್ಯದಲ್ಲಿ ಬಾಬರ್‌ ಅಜಂ ಬಳಗ ಗೆದ್ದರೆ ಮಾತ್ರ ಸೂಪರ್‌ 8ಕ್ಕೆ ಅರ್ಹತೆ ಪಡೆಯುತ್ತಿತ್ತು. ಆದರೆ, ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕಗಳು 5ಕ್ಕೆ ಏರಿಕೆಯಾದವು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ.

ಟೂರ್ನಿಯಿಂದ ಹೊರಬಿದ್ದಿರುವ ಪಾಕ್​ ತಂಡದ ಪ್ರದರ್ಶನದ ಬಗ್ಗೆ ವಾಸಿಂ ಅಕ್ರಮ್ ಸೇರಿ ಅನೇಕ ಮಾಜಿ ಆಟಗಾರರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್​ ಅಭ್ಯಾಸ ಮಾಡುವುದನ್ನು ಬಿಟ್ಟು ಶೋಕಿಗಾಗಿ ಸೇನೆಯಲ್ಲಿ ಫಿಟ್​ನೆಸ್​ ತರಬೇತಿ ಪಡೆದು ಸಮಯ ವ್ಯರ್ಥ ಮಾಡಿದ್ದು ಈ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡವನ್ನು(Pakistan Team Troll) ಸ್ವತಃ ತವರಿನ ಅಭಿಮಾನಿಗಳು ಸೇರಿ ಭಾರತೀಯ(India fans troll Pakistan cricket team) ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಹಲವು ಮಿಮ್ಸ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Continue Reading

ಕ್ರಿಕೆಟ್

Chahal-Dhanashree: ನ್ಯೂಯಾರ್ಕ್​ನಲ್ಲಿ ಪತ್ನಿ ಜತೆ ಪ್ರವಾಸಿ ತಾಣ ಸುತ್ತಿ ಎಂಜಾಯ್​ ಮಾಡಿದ ಚಹಲ್​

Chahal-Dhanashree: ಚಹಲ್​ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

VISTARANEWS.COM


on

Chahal-Dhanashree
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯನ್ನಾಡಲು ನ್ಯೂಯಾರ್ಕ್​ನಲ್ಲಿರುವ ಟೀಮ್​ ಇಂಡಿಯಾದ ಸ್ಪಿನ್ನರ್​ ಯಜುವೇಂದ್ರ ಚಹಲ್(Yuzvendra Chahal)​ ಅವರು ಬಿಡುವಿನ ವೇಳೆ ತಮ್ಮ ಪತ್ನಿ ಧನಶ್ರೀ ವರ್ಮಾ(Chahal-Dhanashree) ಜತೆ ನ್ಯೂಯಾರ್ಕ್​ ಸಿಟಿ ಸುತ್ತಿದ್ದಾರೆ. ಈ ಜೋಡಿ ಇಲ್ಲಿನ ಪ್ರಸಿದ್ಧ ತಾಣಗಳಿಗೆ ಭೇಟಿ ನೀಡಿ ಎಂಜಾಯ್​ ಮಾಡಿದ ಸುಂದರ ಫೋಟೊಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಮಧ್ಯೆ ಎಲ್ಲವೂ ಸರಿಯಿಲ್ಲ ಎನ್ನುತ್ತಿದ್ದ ನೆಟ್ಟಿಗರಿಗೆ ನಾವಿಬ್ಬರು ಚೆನ್ನಾಗಿಯೇ ಇದ್ದೇವೆ ಎನ್ನುವ ಪರೋಕ್ಷ ಸಂದೇಶವೊಂದನ್ನು ನೀಡಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಚಹಲ್ ಹಾಗೂ ಧನ ಶ್ರೀ(Dhanashree Verma) ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬುದಾಗಿ ಸುದ್ದಿ ಹರಡಿತ್ತು. ಧನಶ್ರಿ ತಮ್ಮ ಗೆಳೆಯರೊಂದಿಗೆ ಕಾಣಿಸಿಕೊಂಡಾಗಲೆಲ್ಲವೂ ಸಾಮಾಜಿ ಜಾಲತಾಣದಲ್ಲಿ ಈ ವಿಚಾರ ಆಗಾಗ ಮುನ್ನಲೆಗೆ ಬರುತ್ತಿತ್ತು. ಆದರೆ ಈ ಜೋಡಿ ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಒಳ್ಳೆಯ ರೀತಿಯಲ್ಲೇ ಸಂಸಾರ ನಡೆಸುತ್ತಿದ್ದಾರೆ. ಇದೀಗ ನ್ಯೂಯಾರ್ಕ್ ಸಿಟಿಯಲ್ಲಿ ಎಂಜಾಯ್​ ಮೂಡ್​ನಲ್ಲಿರುವ ಫೋಟೊಗಳನ್ನು ಹಂಚಿಕೊಂಡು ತಮ್ಮ ಸಂಸಾರದ ಮಧ್ಯೆ ಹುಳಿ ಹಿಂಡುತ್ತಿರುವವರಿಗೆ ತಕ್ಕ ಉತ್ತರ ನೀಡಿದ್ದಾರೆ.

ತಂದೆಯಾಗಲಿದ್ದಾರಾ ಚಹಲ್​?


ಚಹಲ್​ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಆದರೆ ಈ ಜೋಡಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಕೇವಲ ನೆಟ್ಟಿಗರ ಕಲ್ಪನೆಯಾಗಿದೆ. ಧನಶ್ರೀ ಡ್ಯಾನ್ಸರ್​ ಮತ್ತು ಮಾಡೆಲ್​ ಆಗಿರುವ ಕಾರಣ ಟ್ರೆಂಡ್​ಗಾಗಿ ಈ ಉಡುಗೆಯನ್ನು ತೊಟ್ಟಿರುವ ಸಾಧ್ಯತೆಯೂ ಅಧಿಕವಾಗಿದೆ. 2020ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.

ಇದನ್ನೂ ಓದಿ Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಸದ್ಯ ಅಮೆರಿಕಕ್ಕೆ ತೆರಳಿದ್ದಾರೆ. ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಇಂದು ನಡೆಯುವ ಕೆನಾಡ ವಿರುದ್ಧದ ಪಂದ್ಯದಲ್ಲಿ ಮತ್ತು ಸೂಪರ್​-8 ಹಂತದ ಪಂದ್ಯದಲ್ಲಿ ಚಹಲ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಅಧಿಕವಾಗಿದೆ.

ಇತ್ತೀಚೆಗೆ 150ನೇ ಐಪಿಎಲ್​ ಪಂದ್ಯವನ್ನಾಡಿದ ಚಹಲ್​ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್​ಬ್ಯಾಕ್​ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್​ ತೆಗೆಯಬಲ್ಲ ಬೌಲರ್​ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್(Rajasthan Royals)​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು.

Continue Reading
Advertisement
Actor Darshan
ಕರ್ನಾಟಕ23 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

Apple With sticker
Latest34 mins ago

Apple With sticker: ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

Viral News
Latest35 mins ago

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral Video
Latest47 mins ago

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Health Tips
Latest51 mins ago

Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Temple Bell
ಧಾರ್ಮಿಕ55 mins ago

Temple Bell: ದೇವಾಲಯದಿಂದ ಹಿಂತಿರುಗುವಾಗ ಗಂಟೆ ಬಾರಿಸಲೇಬಾರದು ಯಾಕೆ ಗೊತ್ತೇ?

Morning Nutrition
ಆರೋಗ್ಯ58 mins ago

Morning Nutrition: ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

Karnataka Weather Forecast
ಮಳೆ1 hour ago

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

International Yoga Day 2024
ಆರೋಗ್ಯ2 hours ago

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ18 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌