weather report Heavy rain warning accompanied by thunderstorms and thunderstorms across the stateWeather Report: ರಾಜ್ಯಾದ್ಯಂತ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ವೀಕೆಂಡ್‌ ಮೋಜಿಗೆ ಬ್ರೇಕ್‌ - Vistara News

ಉಡುಪಿ

Weather Report: ರಾಜ್ಯಾದ್ಯಂತ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ವೀಕೆಂಡ್‌ ಮೋಜಿಗೆ ಬ್ರೇಕ್‌

Weather Report: ಮುಂದಿನ ಎರಡು ದಿನಗಳು ರಾಜ್ಯಾದ್ಯಂತ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಮಳೆಯು ಮುಂದುವರಿಯಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

Thunderstorm squall is likely to occur in these 9 districts in the next 48 hours Rain lashes Bengaluru by evening
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ತಲುಪುವ ಸಾಧ್ಯತೆ ಇದೆ. ಬೆಂಗಳೂರಿಗೆ ಯಾವುದೇ ಮಳೆಯ ಮುನ್ಸೂಚನೆಯಿಲ್ಲ. ಗರಿಷ್ಠ ಉಷ್ಣಾಂಶ 35, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉಳಿದಂತೆ ಕೊಪ್ಪಳ, ಕೋಲಾರ, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ, ಯಾದಗಿರಿ, ರಾಯಚೂರು, ವಿಜಯನಗರ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: Cyber Crime: ಸೈಬರ್ ವಂಚಕರಿಂದ ಲಕ್ಷಾಂತರ ರೂಪಾಯಿ ಕಳೆದುಕೊಂಡ ಕೂಲಿಕಾರ್ಮಿಕ

ಇನ್ನು ಗುರುವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಣ ಹವೆ ಇತ್ತು. ಬೀದರ್‌ನಲ್ಲಿ ಎರಡು ಸೆಂ.ಮೀ ಮಳೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

Lokayukta Raid: ಮೈಸೂರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನಿಗೆ ನಾಲ್ಕು ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. ಉಡುಪಿಯಲ್ಲಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

VISTARANEWS.COM


on

By

Lokayukta Raid
Koo

ಮೈಸೂರು/ಉಡುಪಿ: ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ (Lokayukta Raid) ಇಟ್ಟಿದ್ದರು. ಇದೀಗ ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಪುಟ್ಟಸ್ವಾಮಿ ಶಿಕ್ಷೆಗೊಳಗಾದ ವೈದ್ಯರಾಗಿದ್ದಾರೆ. ಕಳೆದ 2017ರ ಏಪ್ರಿಲ್ 12ರಂದು ದೇವರಾಜು ಎಂಬುವವರು ದೂರು ನೀಡಿದ್ದರು. ಪುಟ್ಟಸ್ವಾಮಿ 26 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸಲಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಆರೋಪಿ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ ಪುಟ್ಟಸ್ವಾಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ಹಾಕಲಾಗಿದೆ.

Lokayukta Raid

ಉಡುಪಿಯಲ್ಲಿ ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಅಧಿಕಾರಿಗಳು

ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಉಪ್ಪೂರು ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಪಂಚಾಯತ್ ಬಿಲ್ ಕಲೆಕ್ಟರ್ ಸಂಜಯ್ ಕೂಡ ಸಿಕ್ಕಿಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಸಿಲುಕಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಿಬ್ಬರಿಗೂ ಜೂನ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Elephant Attack : ಆನೇಕಲ್‌ನಲ್ಲಿ ರೈತನ ಬೆನ್ನು ಮೂಳೆ ಮುರಿದ ಕಾಡಾನೆ; ವೃದ್ಧನ ಸ್ಥಿತಿ ಗಂಭೀರ

Elephant Attack : ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ದಾಳಿ ಮಾಡಿರುವ ಕಾಡಾನೆಯು ಬೆನ್ನು ಮೂಳೆ ಮುರಿಯುವಂತೆ ಮಾಡಿದೆ. ಗಂಭೀರ ಗಾಯಗೊಂಡಿರುವ ರೈತ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮತ್ತೊಂದು ಕಡೆ ಕಾಡಾನೆಯೊಂದು ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿದೆ.

VISTARANEWS.COM


on

By

Elephant attack
Koo

ಆನೇಕಲ್: ರೈತರೊಬ್ಬರ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದ್ದರಿಂದ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರವಾಗಿ ಗಾಯಗೊಂಡ ರೈತ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿ ಬಳಿ ಘಟನೆ ನಡೆದಿದೆ. ಚಿನ್ನಬರಿಯಪ್ಪ (70) ಆನೆ ದಾಳಿಗೊಳಗಾದ ರೈತ.

ಜಮೀನಿನ ಕಡೆ ಹೋಗುತ್ತಿದ್ದಾಗ ಏಕಾಏಕಿ ನುಗ್ಗಿದ ಕಾಡಾನೆ ಅಟ್ಟಾಡಿಸಿ ದಾಳಿ ಮಾಡಿದೆ. ಪರಿಣಾಮ ಕೈ ಹಾಗೂ ಸೊಂಟದ ಭಾಗದ ಮೂಳೆಗಳು ಮುರಿದು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡು ನರಳಾಡುತ್ತಿದ್ದ ಚಿನ್ನಬರಿಯಪ್ಪರನ್ನು ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಗಾಯಾಳು ರೈತನನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

elephant attack in Anekal

ಆನೇಕಲ್‌ನಲ್ಲಿ ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಪಲತೊಟ್ಟನಪಲ್ಲಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಸಮೀಪ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಗಂಡಾನೆ ತುಳಿದಿದೆ.

ಕಳೆದ ರಾತ್ರಿ ಗ್ರಾಮಕ್ಕೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿದ್ದವು. ಇಳಿಜಾರು ಪ್ರದೇಶದಲ್ಲಿ ಹೋಗುತ್ತಿದ್ದದ್ದಾಗ ಒಂದು ಕಾಡಾನೆಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಆನೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಉಡುಪಿಯಲ್ಲಿ ಚಿರತೆ ಓಡಾಟ

ಹಾಡುಹಗಲಿನಲ್ಲೇ ಚಿರತೆ ಕಾಣಿಸಿಕೊಂಡು ಜನರಲ್ಲಿ ಭಯವನ್ನು ಹುಟ್ಟಿಸುತ್ತಿದೆ. ಉಡುಪಿಯ ಕಾರ್ಕಳ ತಾಲೂಕು ಹಾಳೆಕಟ್ಟೆ ಕಲ್ಯಾ ಮಲಯ್ಯಬೆಟ್ಟು ಎಂಬಲ್ಲಿ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಅಡ್ಡಾದಿಡ್ಡಿಯಾಗಿ ಯಾವುದೇ ಭಯವಿಲ್ಲದೆ ಚಿರತೆ ಓಡಾಡುತ್ತಿದೆ. ಆದಷ್ಟು ಶೀಘ್ರದಲ್ಲಿ ಚಿರತೆಯನ್ನು ಹಿಡಿದು ರಕ್ಷಣೆ ನೀಡುವಂತೆ ಜನರು ಒತ್ತಾಯಿಸಿದ್ದಾರೆ. ಚಿರತೆ ಸಂಚಾರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Karnataka Weather: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು

Continue Reading

ದಕ್ಷಿಣ ಕನ್ನಡ

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

ಪಂಜುರ್ಲಿ ದೈವ (Panjurli Daiva) , “ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ” ಎಂದು ಅಭಯ ನೀಡಿತ್ತು. ಒಂದು ವರ್ಷಕ್ಕೂ ಅಧಿಕ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಕೋರ್ಟ್‌ಗೆ ಶರಣಾಗಿರುವುದರ ಹಿಂದೆ ಪಂಜುರ್ಲಿ ದೈವದ ಮಹಿಮೆ ಇದೆ ಎಂದು ಸ್ಥಳೀಯರು ನಂಬಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ ಹಲವರ ಬಂಧನ ನಡೆದಿದೆ.

VISTARANEWS.COM


on

panjurli daiva sharat shetty murder
ಎಡಚಿತ್ರದಲ್ಲಿ ಕೊಲೆಯಾದ ಶರತ್‌ ಶೆಟ್ಟಿ, ಬಲಚಿತ್ರದಲ್ಲಿ ಆರೋಪಿ ಯೋಗೀಶ್‌ ಆಚಾರ್ಯ.
Koo

ಉಡುಪಿ: ತುಳುನಾಡಿನ (Tulunadu) ಆರಾಧ್ಯ ದೈವವಾದ ಪಂಜುರ್ಲಿ ದೈವದ (Panjurli Daiva) ಕಾರಣಿಕ ಎಂದೇ ವ್ಯಾಖ್ಯಾನಿಸಲಾಗುತ್ತಿರುವ ಘಟನೆಯೊಂದು ಉಡುಪಿ (Udupi news) ಜಿಲ್ಲೆಯಲ್ಲಿ ನಡೆದಿದೆ. ಪಾಂಗಾಳದಲ್ಲಿ ನಡೆದಿದ್ದ ಶರತ್‌ ಶೆಟ್ಟಿ (Sharat Shetty murder) ಎಂಬಾತನ ಕೊಲೆಯ ಪ್ರಮುಖ ಆರೋಪಿಯೊಬ್ಬ ಶರಣಾಗತನಾಗಿದ್ದಾನೆ. ಇದಕ್ಕೂ ಮುನ್ನ ಕೊಲೆಯಾದಾತನ ಕುಟುಂಬಿಕರು ಪಂಜುರ್ಲಿ ದೈವ ಮೊರೆ ಹೋಗಿದ್ದರು.

2023ರ ಫೆಬ್ರವರಿ 5ರಂದು ಉಡುಪಿಯ ಪಾಂಗಾಳ ಎಂಬಲ್ಲಿ ಬಬ್ಬು ಸ್ವಾಮಿ ದೈವಸ್ಥಾನದ ನೇಮದಲ್ಲಿ ಭಾಗವಹಿಸಿದ್ದ ಶರತ್ ಶೆಟ್ಟಿ (42) ಅವರು ದುಷ್ಕರ್ಮಿಗಳಿಗೆ ಬಲಿಯಾಗಿದ್ದರು. ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಪತ್ತೆಯಾಗಿರಲಿಲ್ಲ.

ಬಳಿಕ ಕುಟುಂಬಸ್ಥರು ಮಾರ್ಚ್ 24, 2023ರಂದು ಪಾಂಗಾಳದ ಮನೆಯಲ್ಲಿ ವರ್ತೆ ಪಂಜುರ್ಲಿಗೆ ನೇಮೋತ್ಸವವನ್ನು ಆಯೋಜಿಸಿ, ದೈವದ ಮೊರೆ ಹೋಗಿದ್ದರು. ಈ ಸಂದರ್ಭದಲ್ಲಿ ಪಂಜುರ್ಲಿ ದೈವ (Panjurli Daiva) , “ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ” ಎಂದು ಅಭಯ ನೀಡಿತ್ತು.

ಅಚ್ಚರಿ ಎಂಬಂತೆ, ಮೇ.23ರಂದು ಪ್ರಕರಣ ಎ1 ಆರೋಪಿ ಯೋಗೀಶ್ ಆಚಾರ್ಯ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಒಂದು ವರ್ಷ ಮೂರು ತಿಂಗಳು ತಲೆಮರೆಸಿಕೊಂಡಿದ್ದ ಈತ ಉಡುಪಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿದ್ದಾನೆ. ಯೋಗೀಶ್ ಆಚಾರ್ಯನನ್ನು ಮೇ 30ರ ವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

ಒಂದು ವರ್ಷಕ್ಕೂ ಅಧಿಕ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಕೋರ್ಟ್‌ಗೆ ಶರಣಾಗಿರುವುದರ ಹಿಂದೆ ಪಂಜುರ್ಲಿ ದೈವದ ಮಹಿಮೆ ಇದೆ ಎಂದು ಸ್ಥಳೀಯರು ನಂಬಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ ಹಲವರ ಬಂಧನ ನಡೆದಿದೆ.

ತುಳುನಾಡಿನ ಪಂಜುರ್ಲಿ ದೈವದ ಬಗ್ಗೆ ರಿಷಭ್‌ ಶೆಟ್ಟಿ ನಟನೆಯ ʼಕಾಂತಾರʼ ಚಿತ್ರದ ಬಳಿಕ ಹೊರಗಡೆಯೂ ಹೆಚ್ಚು ಅರಿವು ಮೂಡಿತ್ತು. ದಕ್ಷಿಣ ಕನ್ನಡ ಹಾಗೂ ಉಡುಪಿಯ ಕರಾವಳಿಯಲ್ಲಿ ನ್ಯಾಯನಿರ್ಣಯಗಳಿಗೆ ದೈವದ ಕೋಲದಲ್ಲಿ ಪ್ರಶ್ನೆ ಹಾಕುವುದು ಹಾಗೂ ದೈವದಿಂದ ʼಅಭಯʼ ಪಡೆಯುವುದು ಸಾಮಾನ್ಯವಾಗಿ ಕಂಡುಬರುತ್ತದೆ.

ಇದನ್ನೂ ಓದಿ: Glenn Maxwell: ಕಾಂತಾರದ ‘ಪಂಜುರ್ಲಿ’ ಬಲದಿಂದ ಮ್ಯಾಕ್ಸ್‌ವೆಲ್‌ 201 ರನ್ ಚಚ್ಚಿದರೇ?

Continue Reading
Advertisement
Fake CBI Officer
ಬೆಂಗಳೂರು2 mins ago

Fake CBI Officer : ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ ನಾಲ್ವರು ಅರೆಸ್ಟ್‌

Prajwal Devaraj death news take leagal action by family
ಸ್ಯಾಂಡಲ್ ವುಡ್18 mins ago

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Revanna Case
ಕ್ರೈಂ23 mins ago

Prajwal Revanna Case: ಅಶ್ಲೀಲ ವಿಡಿಯೋ ಹಂಚಿದ ಆರೋಪಿಗಳಾದ ಚೇತನ್‌, ಲಿಖಿತ್‌ಗೆ ಜಾಮೀನು

Agnikul Cosmos
ತಂತ್ರಜ್ಞಾನ39 mins ago

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

PM Modi
Lok Sabha Election 202443 mins ago

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

Love Case in vijayapura
ವಿಜಯಪುರ52 mins ago

Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

Kantara Movie Mollywood actor enters
ಸಿನಿಮಾ56 mins ago

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Singapore Open
ಕ್ರೀಡೆ57 mins ago

Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

prajwalrevanna case hassan protest
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

PM Narendra Modi
ದೇಶ1 hour ago

PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌