Mumbai bowler Hrithik and Nitish Rana fought on the field IPL 2023: ಮೈದಾನದಲ್ಲೇ ಕಿತ್ತಾಡಿಕೊಂಡ ಮುಂಬಯಿ ಬೌಲರ್​ ಋತಿಕ್​, ನಿತೀಶ್​ ರಾಣಾ - Vistara News

ಕ್ರಿಕೆಟ್

IPL 2023: ಮೈದಾನದಲ್ಲೇ ಕಿತ್ತಾಡಿಕೊಂಡ ಮುಂಬಯಿ ಬೌಲರ್​ ಋತಿಕ್​, ನಿತೀಶ್​ ರಾಣಾ

ತನ್ನ ಎಸೆತಕ್ಕೆ ಸಿಕ್ಸರ್​ ಬಾರಿಸಲು ಮುಂದಾದ ನಿತೀಶ್​ಗೆ ಅವಮಾನ ಮಾಡಲು ಋತಿಕ್​ ಮುಂದಾದರೆ ನಿತೀಶ್​ ಸರಿಯಾಗಿ ಪ್ರತ್ಯುತ್ತರ ಕೊಟ್ಟಿದ್ದಾರೆ.

VISTARANEWS.COM


on

Mumbai bowler Hrithik and Nitish Rana fought on the field
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ : ಜಂಟಲ್​ಮೆನ್ಸ್ ಗೇಮ್​ ಎಂದು ಕರೆಯುವ ಕ್ರಿಕೆಟ್​ನಲ್ಲೂ ಆಟಗಾರರ ವಾಗ್ವಾದಗಳು ಆಗಾಗ ನಡೆಯುವುದುಂಟು. ಇಬ್ಬರು ಆಟಗಾರರು ತಾಳ್ಮೆಗೆಟ್ಟಾಗ ಇಂಥ ಪ್ರಸಂಗಳು ನಡೆಯುತ್ತವೆ. ಅಂತೆಯೇ ಮುಂಬಯಿ ಇಂಡಿಯನ್​ ಹಾಗೂ ಕೋಲ್ಕೊತಾ ನೈಟ್ ರೈಡರ್ಸ್​ ತಂಡಗಳ ನಡುವಿನ ಐಪಿಎಲ್ 16ನೇ ಆವೃತ್ತಿಯ ಪಂದ್ಯದಲ್ಲೂ ಇಬ್ಬರು ಆಟಗಾರರು ಮಾತಿನ ಚಕಮಕಿ ನಡೆಸಿದರು. ಮುಂಬೈ ಬೌಲರ್​ ಋತಿಕ್​ ಶೌಕೀನ್ ಹಾಗೂ ಕೋಲ್ಕೊತಾ ತಂಡದ ನಾಯಕ ನಿತೀಶ್ ರಾಣಾ ಮಾತಿನ ಸಮರ ನಡೆಸಿದವರು. ಮುಂಬೈ ನಾಯಕ ಸೂರ್ಯಕುಮಾರ್​ ಯಾದವ್​ ಹಾಗೂ ಸ್ಪಿನ್ನರ್​ ಪಿಯೂಷ್ ಚಾವ್ಲಾ ಅವರ ಮಧ್ಯಪ್ರವೇಶದಿಂದ ಜಗಳ ನಿಂತಿತು.

ಐಪಿಎಲ್​ಗೆ ಪದಾರ್ಪಣೆ ಮಾಡಿದ ಸಚಿನ್ ಪುತ್ರ ಅರ್ಜುನ್​ ತೆಂಡೂಲ್ಕರ್​

ಕಳೆದ ಎರಡು ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಭಾಗವಾಗಿದ್ದ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್(Sachin Tendulkar)​ ಅವರ ಪುತ್ರ ಅರ್ಜುನ್​ ತೆಂಡೂಲ್ಕರ್​ಗೆ ​(Arjun Tendulkar) ಕೊನೆಗೂ ಐಪಿಎಲ್​ ಬಾಗಿಲು ತೆರೆದಿದೆ.

ಕೋಲ್ಕತಾ ನೈಟ್​ ರೈಡರ್ಸ್ ವಿರುದ್ಧದ ಭಾನುವಾರದ ಪಂದ್ಯದಲ್ಲಿ ಮುಂಬೈ ಪರ ಕಣಕ್ಕಿಳಿಯುವ ಮೂಲಕ ಅರ್ಜುನ್​ ತೆಂಡೂಲ್ಕರ್ ಅವರು ಐಪಿಎಲ್​ಗೆ ಪದಾರ್ಪಣೆ ಮಾಡಿದರು. ರೋಹಿತ್​ ಶರ್ಮ ಅವರು ಕ್ಯಾಪ್​ ನೀಡಿ ತಂಡಕ್ಕೆ ಬರಮಾಡಿಕೊಂಡರು. ತಮ್ಮನ ಚೊಚ್ಚಲ ಪಂದ್ಯವನ್ನು ವೀಕ್ಷಿಸಲು ಅಕ್ಕ ಸಾರಾ ತೆಂಡೂಲ್ಕರ್​ ಕೂಡ ಉಪಸ್ಥಿತರಿದ್ದರು.​ ಈ ಪಂದ್ಯದಲ್ಲಿ ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್​ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಇನ್ನು ತಂಡದ ಕಾಯಂ ನಾಯಕ ರೋಹಿತ್​ ಶರ್ಮ ಅವರು ಅಸೌಖ್ಯದಿಂದಾಗಿ ಪಂದ್ಯದಿಂದ ಹೊರಗುಳಿದರು. ಅವರ ಬದಲು ಸೂರ್ಯಕುಮಾರ್​ ಯಾದವ್​ ತಂಡವನ್ನು ಮುನ್ನಡೆಸಲಿದ್ದಾರೆ.

ರಣಜಿ ಟ್ರೋಫಿ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಅರ್ಜುನ್ ತೆಂಡೂಲ್ಕರ್​ಗೆ ಈ ಬಾರಿ ಐಪಿಎಲ್‌ನಲ್ಲಿ ಮುಂಬೈ ತಂಡದ ಪರ ಆಡುವ ಅವಕಾಶ ನೀಡಲಾಯಿತು. ಆರಂಭಿಕ ಪಂದ್ಯದಲ್ಲಿಯೇ ಅವರನ್ನು ಕಣಕ್ಕಿಳಿಸುವ ಯೋಜನೆ ಮಾಡಲಾಗಿತ್ತು. ಆದರೆ ಅವರು ಸ್ನಾಯು ಸೆಳೆತದ ನೋವಿನಿಂದ ಬಳಲುತ್ತಿದ್ದಾರೆ ಎಂದು ತಂಡದ ಕೋಚ್​ ಮಾಹಿತಿ ನೀಡಿದ್ದರು. ಇದೀಗ ಕೆಕೆಆರ್​ ಪರ ಆಡುವ ಮೂಲಕ ಎರಡು ವರ್ಷಗಳ ಕಾಯುವಿಕೆ ಕೊನೆಗೊಂಡಿದೆ.

ಇದನ್ನೂ ಓದಿ IPL 2023: ಕಳೆದ ಬಾರಿಯ ಫೈನಲಿಸ್ಟ್​ಗಳ ಮಧ್ಯೆ ಹೈ ವೋಲ್ಟೇಜ್ ಪಂದ್ಯ

ಕಳೆದ ಆವೃತ್ತಿಯ ರಣಜಿ ಟ್ರೋಫಿಯಲ್ಲಿ ಅರ್ಜುನ್ ತೆಂಡೂಲ್ಕರ್ ಗೋವಾ ಪರ ಪದಾರ್ಪಣ ಪಂದ್ಯದಲ್ಲೇ ಶತಕ ಬಾರಿಸುವ ಮೂಲಕ ತಂದೆ ಸಚಿನ್​ ಅವರ ದಾಖಲೆಯನ್ನು ಸರಿಗಟ್ಟಿದ್ದರು. ಇದುವರೆಗೆ 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ ಅವರು 12 ವಿಕೆಟ್‌ಗಳ ಜತೆಗೆ 233 ರನ್ ಗಳಿಸಿದ್ದಾರೆ.

ಕಳೆದ ವರ್ಷ ಮೆಗಾ ಹರಾಜಿನಲ್ಲಿ 30 ಲಕ್ಷಕ್ಕೆ ಬಿಡ್ ಮಾಡುವ ಮೂಲಕ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ರೀಟೈನ್​ ಮಾಡಿತ್ತು. ಈ ಹಿಂದೆ 2021ರಲ್ಲಿ ಮುಂಬೈ ತಂಡವು ಅವರನ್ನು 20 ಲಕ್ಷ ರೂ. ಮೂಲ ಬೆಲೆಗೆ ಖರೀದಿಸಿತ್ತು. ವಿಶೇಷ ಎಂದರೆ ತಮ್ಮ ಪದಾಪರ್ಣ ಪಂದ್ಯದಲ್ಲಿಯೇ ಮೊದಲ ಓವರ್​ ಎಸೆದು ಗಮನಸೆಳೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

KKR vs SRH: 25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಮತ್ತು ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ

VISTARANEWS.COM


on

KKR vs SRH
Koo

ಅಹಮದಾಬಾದ್​: 17ನೇ ಆವೃತ್ತಿಯ ಐಪಿಎಲ್‌(IPL 2024) ಪಂದ್ಯಾವಳಿ ತನ್ನ ಲೀಗ್‌ ವ್ಯವಹಾರವನ್ನು ಮುಗಿಸಿದೆ. ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್​ ಕಿಂಗ್ಸ್​ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದದ್ದು, ಪಾತಾಳದಲ್ಲಿದ್ದ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಗೆದ್ದು ಫೀನಿಕ್ಸ್‌ನಂತೆ ಎದ್ದು ನಿಂತು 4ನೇ ಸ್ಥಾನ ಅಲಂಕರಿಸಿದ್ದೆಲ್ಲ ಲೀಗ್‌ ಹಂತದ ಅಚ್ಚರಿ. ಇನ್ನು ಕ್ವಾಲಿಫೈಯರ್​ ಮತ್ತು ಎಲಿಮಿನೇಟರ್​ ಪಂದ್ಯದ ಕೌತುಕ.

ನಾಳೆ(ಮಂಗಳವಾರ) ನಡೆಯುವ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಈ ಬಾರಿಯ ಕೂಟದ ಅತ್ಯಂತ ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್​ ರೈಡರ್ಸ್(KKR vs SRH)​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಕಣಕ್ಕಿಳಿಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಇತ್ತಂಡಗಳ ಈ ಪಂದ್ಯ ಜಿದ್ದಾಜಿದ್ದಿ ಹೋರಾಟವೊಂದಕ್ಕೆ ಸಾಕ್ಷಿಯಾಗುವ ಎಲ್ಲ ಸಾಧ್ಯತೆ ಇದೆ. ಇದರ ಮಧ್ಯೆ ಮಳೆಯ ಭೀತಿ ಕೂಡ ಎದುರಾಗಿದೆ.

ಇತ್ತಂಡಗಳಲ್ಲಿ ಕೆಕೆಆರ್​ ಲೀಗ್‌ ಹಂತದ ಅಗ್ರಸ್ಥಾನಿ ಎಂಬ ಹೆಗ್ಗಳಿಕೆ ಇದೆ. ಅಷ್ಟೇ ಅಲ್ಲ, ಲೀಗ್‌ ಹಂತದಲ್ಲಿ ಎದುರಾದ ಒಂದು ಪಂದ್ಯಗಳಲ್ಲಿ ಹೈದರಾಬಾದ್​ಗೆ 4 ರನ್​ ಅಂತರದ ಸೋಲುಣಿಸಿದ ಹಿರಿಮೆಯನ್ನೂ ಹೊಂದಿದೆ. ಜತೆಗೆ ಉಭಯ ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಕೆಕೆಆರ್​ 17 ಪಂದ್ಯ ಗೆದ್ದಿದೆ. ಹೈದರಾಬಾದ್​ ಗೆದ್ದಿರುವುದು ಕೇವಲ 9 ಪಂದ್ಯ ಮಾತ್ರ. ಈ ಲೆಕ್ಕಾಚಾರದಲ್ಲಿ ಕೆಕೆಆರ್​ ನೆಚ್ಚಿನ ತಂಡ ಎಂಬುದರಲ್ಲಿ ಅನುಮಾನವಿಲ್ಲ.

ಹೆಡ್​-ಅಭಿಷೇಕ್​ ಬಲ


25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಮತ್ತು ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ. ಅಭಿಷೇಕ್​ ಶರ್ಮ ಈ ಬಾರಿಯ ಕೂಟದಲ್ಲಿ 41 ಸಿಕ್ಸರ್​ ಬಾರಿಸಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಇದನ್ನೂ ಓದಿ KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

ಕೆಕೆಆರ್​ ಕೂಡ ಸಮರ್ಥ ತಂಡ


ಗೌತಮ್​ ಗಂಭಿರ್​ ಅವರ ಮಾರ್ಗದರ್ಶನ ಮತ್ತು ಆಟಗಾರರ ಸಂಘಟಿತ ಪ್ರದರ್ಶನ ಕೆಕೆಆರ್​ ಪಾಲಿನ ಬಲ. ಅದರಲ್ಲೂ ಆಲ್​ರೌಂಡರ್​ ಸುನೀಲ್​ ನರೈನ್​ ಅವರಂತು ಈ ಬಾರಿ ಪ್ರಚಂಡ ಫಾರ್ಮ್​ನಲ್ಲಿದ್ದಾರೆ. ತಂಡಕ್ಕೆ ಹಿನ್ನಡೆಯಾಗಿರುವುದೆಂದರೆ ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದು. ಹೀಗಾಗಿ ಅವರ ತಂಡ ಇವರ ಸೇವೆ ಕಳೆದುಕೊಂಡಿದೆ. ಇವರ ಸ್ಥಾನದಲ್ಲಿ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಈ ಪಂದ್ಯದಲ್ಲಿ ಆಡಲಿದ್ದಾರೆ. ಮೊದಲ ಪಂದ್ಯವನ್ನಾಡುತ್ತಿರುವ ಕಾರಣ ಅವರ ಫಾರ್ಮ್​ ಹೇಗಿರಲಿದೆ ಎನ್ನುವುದು ಕೂಡ ಇಲ್ಲಿ ಮುಖ್ಯವಾಗಿದೆ.

ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದಾರೆ. ಯುವ ಆಟಗಾರ ಆಂಗ್ಕ್ರಿಶ್ ರಘುವಂಶಿ, ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. ರಿಂಕು ಸಿಂಗ್​ ಕಳೆದ ಆವೃತ್ತಿಯಲ್ಲಿ ತೋರಿದ ಪ್ರದರ್ಶನ ಇದುವರೆಗೂ ತೋರಿಲ್ಲ. ಹೀಗಾಗಿ ಈ ಮಹತ್ವದ ಪಂದ್ಯದಲ್ಲಿ ಅವರು ಅಬ್ಬರಿಸುವ ಅನಿವಾರ್ಯತೆ ಇದೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಈ ಪಂದ್ಯದಲ್ಲಾದರೂ ತಾವು ಪಡೆದ ಈ ಮೊತ್ತಕ್ಕೆ ನ್ಯಾಯ ಒದಗಿಸಲೇ ಬೇಕು. ದುಬಾರಿ ಮೊತ್ತ ಪಡೆದರೂ ಕೂಡ ಅವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬಂದಿಲ್ಲ.

Continue Reading

ಕ್ರೀಡೆ

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

IPL 2024:ಆಟಗಾರರು ತಂಗಿರುವ ಹೋಟೆಲ್​ಗಳಿಗೂ ಮತ್ತು ಆಟಗಾರರು ಅಭ್ಯಾಸಕ್ಕೆ ಸಂಚರಿಸುವ ಬಸ್​ಗಳಿಗೂ ಅಹಮದಾಬಾದ್‌ ಪೊಲೀಸರು ಭಾರೀ ಭದ್ರತೆ ಕಲ್ಪಿಸಿದ್ದಾರೆ. ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಎಲ್ಲ ವಾಹನಗಳನ್ನು ತಪಾಸಣೆ ನಡೆಸುವುದು ಮತ್ತು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

IPL 2024
Koo

ಅಹಮದಾಬಾದ್​: ಕೆಲವು ದಿನಗಳ ಹಿಂದಷ್ಟೇ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿಗೆ ಪಾಕಿಸ್ತಾನ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ ಬಂದಿತ್ತು. ಇದೀಗ ಐಪಿಎಲ್(IPL 2024)​ಟೂರ್ನಿಗೂ ಐಸಿಸ್‌ ಉಗ್ರರ ಕಾಟವೊಂದು ಎದುರಾದಂತಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯಕ್ಕೆ ಒಂದು ದಿನ ಮೊದಲೇ ನಾಲ್ವರು ಐಸಿಸ್‌ ಉಗ್ರರನ್ನು (ISIS Terrorists) ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಹೀಗಾಗಿ ನಾಳೆ(ಮಂಗಳವಾರ) ನಡೆಯುವ ಕ್ವಾಲಿಫೈಯರ್​ ಮತ್ತು ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯಕ್ಕೆ ಭಾರೀ ಭದ್ರತೆ ಮತ್ತು ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಬಂಧಿತ ನಾಲ್ವರು ಉಗ್ರರನ್ನು ಶ್ರೀಲಂಕಾ ಮೂಲದವರೆಂದು ಗುರುತಿಸಲಾಗಿದೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ತಮ್ಮ ಹ್ಯಾಂಡ್ಲರ್‌ಗಾಗಿ ಕಾಯುತ್ತಿರುವಾಗ ಅವರನ್ನು ಬಂಧಿಸಲಾಗಿದೆ. ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ಏನು ಮಾಡುತ್ತಿದ್ದರು? ಅವರು ರೂಪಿಸಿದ ಸಂಚೇನು? ಎಲ್ಲಿಗೆ ಹೋಗುವವರಿದ್ದರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯದ ವೇಳೆ ಬಾಂಬ್​ ಸ್ಫೋಟ ಮಾಡುವುದು ಇವರ ಉದ್ದೇಶವಾಗಿತ್ತೇ ಎನ್ನುವುದು ಕೂಡ ಇಲ್ಲಿ ಭಯ ಹುಟ್ಟಿಸುವಂತೆ ಮಾಡಿದೆ.

ಈಗಾಗಲೇ ಆಟಗಾರರು ತಂಗಿರುವ ಹೋಟೆಲ್​ಗಳಿಗೂ ಮತ್ತು ಆಟಗಾರರು ಅಭ್ಯಾಸಕ್ಕೆ ಸಂಚರಿಸುವ ಬಸ್​ಗಳಿಗೂ ಅಹಮದಾಬಾದ್‌ ಪೊಲೀಸರು ಭಾರೀ ಭದ್ರತೆ ಕಲ್ಪಿಸಿದ್ದಾರೆ. ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಎಲ್ಲ ವಾಹನಗಳನ್ನು ತಪಾಸಣೆ ನಡೆಸುವುದು ಮತ್ತು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಮೊದಲ ಕ್ವಾಲಿಫೈಯರ್​ ಪಂದ್ಯ ಮಂಗಳವಾರ (ಮೇ 21) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಬುಧವಾರ (ಮೇ 22) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ.

ಮೇ 12ರಂದು ಅಹಮದಾಬಾದ್‌ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು. ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಬೆದರಿಕೆಯ ಮೇಲ್‌ ಬರುತ್ತಲೇ ಭದ್ರತಾ ಸಿಬ್ಬಂದಿಯು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿತ್ತು. ಇಡೀ ವಿಮಾನ ನಿಲ್ದಾನದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳಿಗಾಗಿ ಇನ್ನಿಲ್ಲದಂತೆ ಪರಿಶೀಲನೆ ನಡೆಸಲಾಗಿತ್ತು.

Continue Reading

ಕ್ರೀಡೆ

KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

KKR vs SRH Qualifier 1: ಇತ್ತಂಡಗಳ ನಡುವಿನ ಪಂದ್ಯದಲ್ಲಿ ಯಾರೇ ಸೋತರೂ ಕೂಡ ಅವರಿಗೆ ಮತ್ತೊಂದು ಕ್ವಾಲಿಫೈಯರ್​ ಪಂದ್ಯವನ್ನಾಡುವ ಅವಕಾಶವಿದೆ. ಎಲಿಮಿನೇಟರ್​ ಪಂದ್ಯದ ವಿಜೇತರನ್ನು ಎದುರಿಸಲಿದೆ. ಹೀಗಾಗಿ ಸೋತರೂ ಮತ್ತೊಂದು ಪಂದ್ಯ ಆಡಿ ಅಲ್ಲಿ ಗೆದ್ದರೆ ಫೈನಲ್​ ಪ್ರವೇಶಿಸಬಹುದು.

VISTARANEWS.COM


on

KKR vs SRH Qualifier 1
Koo

ಅಹಮದಾಬಾದ್​: ಈ ಬಾರಿಯ ಐಪಿಎಲ್​ನ(IPL 2024) ಬಲಿಷ್ಠ ತಂಡಗಳಾದ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಣ ಮೊದಲ ಕ್ವಾಲಿಫೈಯರ್(KKR vs SRH Qualifier 1) ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯುವ ಇತ್ತಂಡಗಳ ಈ ಕಾದಾಟಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ(Narendra Modi Stadium) ಅಣಿಯಾಗಿದೆ. ಯಾರೇ ಗೆದ್ದರೂ ನೇರವಾಗಿ ಫೈನಲ್​ಗೆ ಎಂಟ್ರಿಕೊಡಲಿದ್ದಾರೆ. ಈ ತಂಡ ಯಾವುದು ಎಂಬುದು ನಾಳಿನ ಪಂದ್ಯದ ಕೌತುಕ.

ಬಲಾಬಲ ​


ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 26 ಪಂದ್ಯಗಳನ್ನು ಆಡಿ 17 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಪಂದ್ಯದಲ್ಲೂ ಹೈದರಾಬಾದ್​ ಸೋಲು ಕಂಡಿತ್ತು. ಉಭಯ ತಂಡಗಳ ನಡುವೆ ಒಂದು ಸೂಪರ್​ ಓವರ್​ ಪಂದ್ಯ ಕೂಡ ನಡೆದಿತ್ತು. 2020ರಲ್ಲಿ ಅಬುಧಾಬಿಯಲ್ಲಿ ನಡೆದಿದ್ದ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಕೆಕೆಆರ್​ ಜಯಿಸಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ನಾಳಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್​ ಆಗಿದೆ.

ಸೋತರೆ ಮತ್ತೊಂದು ಅವಕಾಶ


ಇತ್ತಂಡಗಳ ನಡುವಿನ ಪಂದ್ಯದಲ್ಲಿ ಯಾರೇ ಸೋತರೂ ಕೂಡ ಅವರಿಗೆ ಮತ್ತೊಂದು ಕ್ವಾಲಿಫೈಯರ್​ ಪಂದ್ಯವನ್ನಾಡುವ ಅವಕಾಶವಿದೆ. ಎಲಿಮಿನೇಟರ್​ ಪಂದ್ಯದ ವಿಜೇತರನ್ನು ಎದುರಿಸಲಿದೆ. ಹೀಗಾಗಿ ಸೋತರೂ ಮತ್ತೊಂದು ಪಂದ್ಯ ಆಡಿ ಅಲ್ಲಿ ಗೆದ್ದರೆ ಫೈನಲ್​ ಪ್ರವೇಶಿಸಬಹುದು. ನಾಳಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ ಟಿಕೆಟ್​ ಪಡೆಯಲಿದೆ.

ಇದನ್ನೂ ಓದಿ IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಮಳೆ ಭೀತಿ


ಅಹಮದಾಬಾದ್​ನಲ್ಲಿ ಮಳೆಯಿಂದ ಒಂದು ಲೀಗ್​ ಪಂದ್ಯ ರದ್ದಾಗಿತ್ತು. ಇದು ಕೆಕೆಆರ್​ ಮತ್ತು ಗುಜರಾತ್​ ನಡುವಣ ಪಂದ್ಯವಾಗಿತ್ತು. ಮಳೆಯಿಂದ ಟಾಸ್​ ಕೂಡ ಆಗದೆ ರದ್ದಾಗಿತ್ತು. ಇದೀಗ ನಾಳೆ ನಡೆಯುವ ಕ್ವಾಲಿಫೈಯರ್​ ಪಂದ್ಯಕ್ಕೂ ಮಳೆಯ ಭೀತಿ ಇದೆ. ಒಂದೊಮ್ಮೆ ಮಳೆ ಬಂದರೂ ಕೂಡ ಚಿಂತಿಸುವ ಅಗತ್ಯವಿಲ್ಲ. ಮೀಸಲು ದಿನ ಇದೆ.

ಪಿಚ್​ ರಿಪೋರ್ಟ್​


ವಿಶ್ವದ ಅತಿ ದೊಡ್ಡ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನೇರ ಬೌಂಡರಿಗಳಿಗೆ ಸರಾಸರಿ 75 ಮೀಟರ್ ಮತ್ತು ಚದರ ಗಡಿಗಳಿಗೆ 60 ಮೀಟರ್ ಉದ್ದವನ್ನು ಹೊಂದಿದೆ. ಇಲ್ಲಿ ಇದುವರೆಗೆ 33 ಐಪಿಎಲ್​ ಪಂದ್ಯಗಳು ನಡೆದಿದ್ದು 15 ಬಾರಿ ಮೊದಲು ಬ್ಯಾಟಿಂಗ್​ ಮಾಡಿದ ತಂಡ, 18 ಬಾರಿ ಚೇಸಿಂಗ್​ ನಡೆಸಿದ ತಂಡಗಳು ಗೆದ್ದಿವೆ. ಇಲ್ಲಿ ದಾಖಲಾದ ಗರಿಷ್ಠ ಒತ್ತ 233 ರನ್​. ಮುಂಬೈ ಮತ್ತು ಗುಜರಾತ್ ನಡುವಣ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

ಸಂಭಾವ್ಯ ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​: ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ. ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ನಿತೀಶ್ ರಾಣಾ, ಆಂಡ್ರೆ ರಸೆಲ್, ರಮಣ್​ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರಿಕೆಟ್

MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

MS Dhoni Retirement: ಸಿಎಸ್‌ಕೆ ಅಧಿಕಾರಿಯೊಬ್ಬರು ಧೋನಿ ನಿವೃತ್ತಿ ಬಗ್ಗೆ ಮಾತನಾಡಿದ್ದು, “ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ

VISTARANEWS.COM


on

MS Dhoni Retirement
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ಕಳೆದ ಪಂದ್ಯದಲ್ಲಿ ಆರ್​ಸಿಬಿ(RCB) ವಿರುದ್ಧ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಮಹೇಂದ್ರ ಸಿಂಗ್​ ಧೋನಿ(MS Dhoni Retirement) ಅವರ ನಿವೃತ್ತಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೀಗ ಧೋನಿ ನೃತ್ತಿ ವಿಚಾರವಾಗಿ ಸಿಎಸ್​ಕೆ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಹತ್ವದ ಹೇಳಿಕೆ ನೀಡಿದ್ದಾರೆ.

ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಾಗಿತ್ತು. ಇದೀಗ ಚೆನ್ನೈ ಸೋತು ಟೂರ್ನಿಯಿಂದ ಹೊರಬಿದ್ದರೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಇದೀಗ ಸಿಎಸ್‌ಕೆ ಅಧಿಕಾರಿಯೊಬ್ಬರು ಧೋನಿ ನಿವೃತ್ತಿ ಬಗ್ಗೆ ಮಾತನಾಡಿದ್ದು, “ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ಕೆಲವು ಸಕ್ರಿಯ ಕ್ರಿಕೆಟಿಗರಿಂದ ಹೆಚ್ಚು ಟೀಕೆಗೆ ಒಳಗಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ. ನಿಯಮವು ಮುಂದುವರಿದರೆ, ತಂಡದೊಂದಿಗೆ ನಿರ್ದಿಷ್ಟ ಕೆಲಸವನ್ನು ಪೂರೈಸಲು ಇದು ಅವರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ನಿಯಮವನ್ನು ರದ್ದುಗೊಳಿಸಿದರೆ, ಧೋನಿ ಆಡುವುದು ಕಷ್ಟ” ಎಂದು ಹೇಳಿದ್ದಾರೆ.

ಅಧಿಕಾರಿಯ ಈ ಮಾತನ್ನು ಕೇಳುವಾಗ ಧೋನಿ ಇಂಪ್ಯಾಕ್ಟ್​ ನಿಯಮ ಜಾರಿಯಲ್ಲಿದ್ದರೆ ಮುಂದಿನ ಆವೃತ್ತಿಯಲ್ಲಿಯೂ ಆಡುವುದು ಬಹುತೇಖ ಖಚಿತ ಎನ್ನುವುದು ತಿಳಿದುಬಂದಿದೆ. ಒಂದೊಮ್ಮೆ ಈ ನಿಯಮ ಇಲ್ಲವಾದರೆ ಧೋನಿ ಮುಂದಿನ ಆವೃತ್ತಿಯ ಆಟಗಾರರ ಹರಾಜಿಗೂ ಮುನ್ನವೇ ನಿವೃತ್ತಿ ಹೇಳುವುದು ಬಹುತೇಖ ಖಚಿತ ಎನ್ನಲಡ್ಡಿಯಿಲ್ಲ. ಚೆನ್ನೈ ತಂಡ ಆರ್​ಸಿಬಿ ವಿರುದ್ಧ ಸೋಲು ಕಂಡಾಗ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಅವರು ಧೋನಿ ಮುಂದಿನ ಆವೃತ್ತಿಯಲ್ಲಿಯೂ ಆಡಲಿದ್ದಾರೆ ಎಂದು ಬಲವಾದ ಹೇಳಿಕೆ ನೀಡಿದ್ದರು.

ಇದನ್ನೂ ಓದಿ MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

ಕಳೆದ ಕೆಲವು ವರ್ಷಗಳಿಂದ ಸಿಎಸ್‌ಕೆಗಾಗಿ ಧೋನಿ ಆಡುತ್ತಿದ್ದಾರೆ. ಅವರ ಈ ಪ್ರದರ್ಶನವನ್ನು ಪರಿಗಣಿಸಿ, ಚೆನ್ನೈಯಲ್ಲಿ ಧೋನಿಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

Continue Reading
Advertisement
Reservation in outsourcing
ಪ್ರಮುಖ ಸುದ್ದಿ26 seconds ago

Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

Karnataka weather Forecast
ಮಳೆ14 mins ago

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

MLC N Ravikumar Spoke in North East Graduate Constituency Election Preliminary meeting in hosapete
ವಿಜಯನಗರ17 mins ago

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

Lok Sabha Election
ದೇಶ23 mins ago

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Public Exam Good news for students of classes 5 and 8 and 9 Important decision of Karnataka government
ಶಿಕ್ಷಣ27 mins ago

Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

KKR vs SRH
ಕ್ರೀಡೆ38 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ40 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ51 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್52 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ54 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌