horoscope today read your daily horoscope predictions for april 18, 2023Horoscope Today : ವರಾಹ ಜಯಂತಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ವರಾಹ ಜಯಂತಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (18-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ತ್ರಯೋದಶಿ 13:26 ವಾರ: ಮಂಗಳವಾರ
ನಕ್ಷತ್ರ: ಉತ್ತರಭಾದ್ರಪದ 25:00 ಯೋಗ: ಇಂದ್ರ 18:07
ಕರಣ: ವಣಿಜ 13:26 ಇಂದಿನ ವಿಶೇಷ: ವರಾಹ ಜಯಂತಿ, ಮಾಸ ಶಿವರಾತ್ರಿ, ವಿಶ್ವ ಪಾರಂಪರಿಕ ದಿನ
ಅಮೃತಕಾಲ: ರಾತ್ರಿ 08 ಗಂಟೆ 30 ನಿಮಿಷದಿಂದ 10 ಗಂಟೆ 01 ನಿಮಿಷದವರೆಗೆ.

ಸೂರ್ಯೋದಯ : 06:06 ಸೂರ್ಯಾಸ್ತ : 06:33

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ. ಹಣಕಾಸು ಪ್ರಗತಿ ಸಾಧಾರಣ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ. ಆರೋಗ್ಯ ಉತ್ತಮ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿನ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸ್ವಲ್ಪ ಖರ್ಚಿನ ದಿನ. ಬಹುದಿನಗಳ ಕನಸು ನನಸಾಗುವ ಸಮಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸುವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ ಒಳ್ಳೆಯ ಫಲ ನೀಡುತ್ತದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ. ಉದ್ಯೋಗ ಮತ್ತು ಆರೋಗ್ಯದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇಂದು ನಿಮ್ಮ ಆರೋಗ್ಯ ಉತ್ತಮ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ. ಆದಷ್ಟು ಮಾತಿನ ಮೇಲೆ ನಿಯಂತ್ರಣವಿರಲಿ. ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರವಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ, ಪ್ರಶಂಸೆಗೊಳಗಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಯಶಸ್ಸು ತಂದುಕೊಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆ ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಗಮನ ನೀಡಬೇಕಾದದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಿ. ವ್ಯಾಪಾರದಲ್ಲಿ ಪ್ರಗತಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ನೆಮ್ಮದಿ ಹಾಳು. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದಲ್ಲಿ ಸಾಧಾರಣ ಫಲ. ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ. ಹೀಗಾಗಿ ಕೌಟಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Flesh-Eating Bacteria: ಅಪಾಯಕಾರಿ ಕಾಯಿಲೆಯೊಂದು ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ-ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ.

VISTARANEWS.COM


on

Flesh-Eating Bacteria
Koo

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ (Flesh-Eating Bacteria)ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (Streptococcal Toxic Shock Syndrome-STSS) ಎಂದು ಕರೆಯಲಾಗುತ್ತದೆ.

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ.

“ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಯಾವ ಬ್ಯಾಕ್ಟೀರಿಯಾ?

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್ (Streptococcus Pyogenes) ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣ

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

CM Siddaramaiah: ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

VISTARANEWS.COM


on

CM Siddaramaiah and Vidhanasoudha
Koo

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಅಧಿಕಾರಿಗಳನ್ನು (retired employees) ಸೇವೆಯಿಂದ ಕೈ ಬಿಡುವಂತೆ ವಿವಿಧ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ (CM Siddaramaiah) ಮುಖ್ಯ ಕಾರ್ಯದರ್ಶಿ (Chief Secretary) ಪತ್ರ ಬರೆದಿದ್ದಾರೆ. ಸರಕಾರದ (Karnataka Govt) ಮೇಲಿನ ಹಣದ ಹೊರೆ (Fiscal deficit) ತಪ್ಪಿಸಲು ಈ ನಡೆ ಕೈಗೊಳ್ಳಲಾಗಿದೆ.

ಆರ್ಥಿಕ ಶಿಸ್ತು ಜಾರಿ‌ ಮಾಡಲು ನಾನಾ ಕಸರತ್ತು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಹಿಂದೆಯೂ ಒಮ್ಮೆ ಈ ಕೆಲಸ ಮಾಡಲು ಸೂಚಿಸಿದ್ದರು. ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜನವರಿ 9ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಹೊರಗುತ್ತಿಗೆಯಲ್ಲಿ ನೇಮಕವಾದ ನಿವೃತ್ತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಿ; ಆ ಹುದ್ದೆಯಲ್ಲಿ ಸೇವೆಯಲ್ಲಿರುವ ಅಧಿಕಾರಿಗಳನ್ನು ನಿಯೋಜನೆ ಮಾಡಿ ಎಂದು ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಜನವರಿ 23 ಮತ್ತು ಫೆಬ್ರವರಿ 22ರಂದು ಇಲಾಖೆಗಳಿಗೆ ಸಿಎಸ್ ಅವರಿಂದ ಟಿಪ್ಪಣಿ ರವಾನೆ ಆಗಿತ್ತು.

ಆದರೂ ನಿವೃತ್ತ ನೌಕರರನ್ನು ಕೈ ಬಿಡುವ ಪ್ರಕ್ರಿಯೆ ಯಾವುದೇ ಮುನ್ನಡೆ ಕಂಡಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಸಿಎಂ ಸೂಚನೆ ಮೇರೆಗೆ ವಿವಿಧ ಇಲಾಖೆಗಳಿಗೆ ಸಿಎಸ್ ಪತ್ರ ಬರೆದಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನಿರ್ವಹಿಸಲಾಗುತ್ತಿರುವ ಈ ಕಾರ್ಯಗಳ ಹೆಚ್ಚಿನ ಹೊಣೆ ಈಗಿನ ಇಲಾಖಾ ಅಧಿಕಾರಿಗಳ ಮೇಲೆ ಬೀಳಲಿದೆ.

ಈ ಹಿಂದಿನ ಸಿಎಂ ಟಿಪ್ಪಣಿಯಲ್ಲೇನಿದೆ?

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಿತ ಹಲವು ಇಲಾಖೆ- ಸಚಿವಾಲಯಗಳಲ್ಲಿ ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿಸಿ, ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಸಮಾಲೋಚಕ, ವಿಶೇಷ ಸಂಪನ್ಮೂಲ ವ್ಯಕ್ತಿಗಳೆಂದು ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ, ನೌಕರರನ್ನು ನಿಯೋಜಿಸಲು ಸೂಚಿಸಲಾಗಿದೆ.”

“ಹಾಗೆಯೇ, ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೂಚನೆ ಆಧರಿಸಿ ಅಗತ್ಯ ಕ್ರಮ ಕೈಗೊಂಡು ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ” ಸಿಎಎಸ್ ನಿರ್ದೇಶನ ನೀಡಿದ್ದಾರೆ.

ನಿವೃತ್ತ ಅಧಿಕಾರಿಗಳನ್ನು ಹೀಗೆ ನೇಮಕ ಮಾಡಿಕೊಳ್ಳುವುದನ್ನು ವಿರೋಧಿಸಿ ಸಚಿವಾಲಯ ನೌಕರರ ಸಂಘವೂ ಹೋರಾಟ ಮಾಡಿತ್ತು. ಸಂಘದ ಹಿಂದಿನ ಅಧ್ಯಕ್ಷ ಪಿ. ಗುರುಸ್ವಾಮಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ಹಾಗೂ ಇತರ ಮುಖಂಡರು ಸಾಕಷ್ಟು ಬಾರಿ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Continue Reading

ದೇಶ

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Himanta Biswa Sarm: ಸುಮಾರು 70 ವರ್ಷಗಳ ವಿಐಪಿ ಸಂಸ್ಕೃತಿಯನ್ನು ತೊಡೆದು ಹಾಕಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಂದಾಗಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ. ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ವಿಐಪಿ ಸಂಸ್ಕೃತಿಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

VISTARANEWS.COM


on

Himanta Biswa Sarma
Koo

ದಿಸ್ಪುರ: ಅಸ್ಸಾಂನಲ್ಲಿ ಕೆಲವು ʼವಿಐಪಿ ಸಂಸ್ಕೃತಿʼ (VIP culture)ಯನ್ನು ತೊಡೆದು ಹಾಕುವುದಾಗಿ ಹೇಳಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು, ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ʼವಿಐಪಿ ಸಂಸ್ಕೃತಿʼಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

ಜತೆಗೆ “ಜುಲೈಯಿಂದ ಎಲ್ಲ ಸರ್ಕಾರಿ ನೌಕರರು ತಮ್ಮ ಸ್ವಂತ ವಿದ್ಯುತ್ ಬಳಕೆಗೆ ತಾವೇ ಪಾವತಿಸಬೇಕಾಗುತ್ತದೆ” ಎಂದೂ ತಿಳಿಸಿದ್ದಾರೆ. “ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳ ನಿವಾಸಗಳ ವಿದ್ಯುತ್ ಬಿಲ್‌ಗಳನ್ನು ಸರ್ಕಾರವೇ ಇಷ್ಟು ದಿನ ಪಾವತಿಸುತ್ತ ಬಂದಿದೆ. ಈ ವ್ಯವಸ್ಥೆ ಇಂದು ನಿನ್ನೆಯದ್ದಲ್ಲ. ಸುಮಾರು 75 ವರ್ಷಗಳ ಸುದೀರ್ಘ ಕಾಲದಿಂದ ನಡೆದುಕೊಂಡು ಬಂದಿದೆʼʼ ಎಂದು ಅವರು ಹೇಳಿದ್ದಾರೆ. ಈ ವ್ಯವಸ್ಥೆಯನ್ನು ಬದಲಾಯಿಸುವುದಾಗಿ ನುಡಿದಿದ್ದಾರೆ.

ಕಾರಣವೇನು?

ಅಸ್ತಿತ್ವದಲ್ಲಿರುವ ವಿಐಪಿ ಸಂಸ್ಕೃತಿಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ಇದನ್ನು ತಪ್ಪಿಸಿದರೆ ವಿದ್ಯುತ್ ಮಂಡಳಿಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಬೇಕಾದ ಪ್ರಮೇಯ ಎದುರಾಗುವುದಿಲ್ಲ. ಹೀಗಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎನ್ನಲಾಗಿದೆ. “ನಾನು ಕೂಡ ಮೂರು ವರ್ಷಗಳಿಂದ ಉಚಿತ ವಿದ್ಯುತ್ ಬಳಸಿದ್ದೇನೆ. ಈ ಬಗ್ಗೆ ನನಗೆ ತಿಳಿದಿರಲಿಲ್ಲ. ಇತ್ತೀಚೆಗೆ ಚರ್ಚೆಯ ಸಮಯದಲ್ಲಿ ಅದರ ಬಗ್ಗೆ ತಿಳಿದುಕೊಂಡೆ. ನಮ್ಮ ವಿದ್ಯುತ್‌ ಬಿಲ್‌ ನಾವೇ ಪಾವತಿಸುವುದಿಂದ ವಿದ್ಯುತ್ ಮಂಡಳಿಗೆ ಸಹಾಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಶರ್ಮಾ ಹೇಳಿದ್ದಾರೆ.

“ಸಿಎಂ ಕಾರ್ಯದರ್ಶಿ, ಗೃಹ ಮತ್ತು ಹಣಕಾಸು ಇಲಾಖೆಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾತ್ರಿ 8 ಗಂಟೆಗೆ ಸ್ವಯಂ ಚಾಲಿತವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಕ್ರಮ ಕೈಗೊಂಡಿದ್ದೇವೆ. ಇದರಿಂದ ನಾವು ವಿದ್ಯುತ್ ಉಳಿಸಬಹುದು. ಈ ಕ್ರಮವು ಈಗಾಗಲೇ ರಾಜ್ಯದಾದ್ಯಂತ 8,000 ಸರ್ಕಾರಿ ಕಚೇರಿಗಳು, ಶಾಲೆಗಳಲ್ಲಿ ಜಾರಿಯಲ್ಲಿದೆ” ಎಂದು ಹಿಮಂತ ಶರ್ಮಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ಇದಕ್ಕೂ ಮುನ್ನ ಗುವಾಹಟಿಯ ರಾಜ್ಯ ಸಚಿವಾಲಯ ಸಂಕೀರ್ಣದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು 2.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಗ್ರಿಡ್-ಸಂಪರ್ಕಿತ ಮೇಲ್ಛಾವಣಿ ಮತ್ತು ನೆಲ-ಮೌಂಟೆಡ್ ಸೌರ ಪಿವಿ ವ್ಯವಸ್ಥೆಯಾದ ಜನತಾ ಭವನ ಸೌರ ಯೋಜನೆಯನ್ನು ಅನಾವರಣಗೊಳಿಸಿದರು. ಈ ವೇಳೆ ಅವರು, ಪ್ರತಿ ಸರ್ಕಾರಿ ಕಚೇರಿಗಳು ಹಂತಹಂತವಾಗಿ ಸೌರಶಕ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಆರಂಭಿಕ ಹಂತದಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಸೌರ ಶಕ್ತಿಗೆ ಪರಿವರ್ತಿಸಲು ಕರೆ ನೀಡಿದರು.

Continue Reading

ಧಾರ್ಮಿಕ

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Bakrid 2024: ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

VISTARANEWS.COM


on

bakrid 2024
Koo

:: ಹಾಶಿಂ ಬನ್ನೂರು

ಮುಸ್ಲಿಮರು (Muslim) ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ (Eid UL Adha- Bakrid 2024) ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ (Quran) ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೇಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು, ಸೌಕರ್ಯ ಹೊಂದಿ ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್ ಆಗಿರುತ್ತದೆ.

ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮೆಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ ಬೆಟ್ಟಗಳ ಮಧ್ಯೆ ನಡೆಯುವುದು, ಮಿನಾದಲ್ಲಿ ತಂಗುವುದು, ಅರಫಾ ಮೈದಾನಕ್ಕೆ ತೆರಳುವುದು, ಮುಝ್ದಲಿಫಾದಲ್ಲಿ ಇರುವುದು, ಜಮ್ರಾದಲ್ಲಿ ಕಲ್ಲೆಸೆಯುವುದು, ಮತ್ತೆ ಮಿನಾದಲ್ಲಿ ತಂಗಿ ಬಲಿ ನೀಡುವುದು ಈ ರೀತಿ ಕೆಲವೊಂದು ಕರ್ಮಗಳನ್ನು ಒಳಗೊಂಡ ಮಕ್ಕಾ ಪುಣ್ಯ ಯಾತ್ರೆಗೆ ಹಜ್ ಎಂದು ಕರೆಯುತ್ತೇವೆ. ಹಜ್ ನಂತೆಯೇ ಉಮ್ರಾ ಕೂಡ ಇದೇ ಕರ್ಮಗಳನ್ನು ಒಳಗೊಂಡಿವೆ. ಆದರೆ ಹಜ್ ವರ್ಷಕ್ಕೆ ಒಂದು ಬಾರಿ ಝುಲ್ ಹಿಜ್ಜ ತಿಂಗಳಲ್ಲಿ ಮಾತ್ರ. ಉಮ್ರಾ ವರ್ಷದ ಎಲ್ಲಾ ದಿನವು ಮಾಡಬಹುದಾಗಿದೆ.

ಧರ್ಮ ಪ್ರಚಾರ

ಇಸ್ಲಾಂ ದರ್ಮದ ಪ್ರಚಾರಕರಾಗಿ ಆಯುಕ್ತರಾಗಿದ್ದ ಒಂದು ಲಕ್ಷಕ್ಕಿಂತಲೂ ಅಧಿಕ ಪ್ರವಾದಿಗಳ ಪೈಕಿ ಅಲ್ಲಾಹನ ಇಷ್ಟ ದಾಸರಾಗಿ ವಿಶೇಷ ಸ್ಥಾನಮಾನ ಪಡೆದ ಮಹಾನರಾಗಿದ್ದರು ಹಜ್ರತ್ ಇಬ್ರಾಹಿಮ್ ಅಲೈಹಿಸ್ಸಲಾಮ್, ಅವರು ಪ್ರವಾದಿಯಾದ ಬಳಿಕ, ಧರ್ಮ ಪ್ರಚಾರಕ್ಕಿಳಿಯುತ್ತಾರೆ. ಈ ವೇಳೆ ದೇವರು ಇಬ್ರಾಹಿಮ್ ಅವರನ್ನು ಹಲವಾರು ಪರೀಕ್ಷೆಗಳಿಗೆ ಒಳಪಡಿಸುತ್ತಾನೆ. ಏಕದೇವ ವಿಶ್ವಾಸದ ಅನುಷ್ಠಾನಕ್ಕಾಗಿ ಸ್ವಂತ ಹೆತ್ತವರು, ಕುಟುಂಬ, ಮನೆ, ಆಸ್ತಿ, ಊರು ಎಲ್ಲವನ್ನೂ ತ್ಯಾಗ ಮಾಡಿ ದೇಶಾಂತರ ಹೊರಟು, ಸಂತಾನ ಭಾಗ್ಯ ಇಲ್ಲದೆ ಕೊರಗುತ್ತಿದ್ದ ಪ್ರವಾದಿ ಇಬ್ರಾಹಿಂ ಮತ್ತು ಹಾಜರ ಬೀವಿ ಅವರಿಗೆ ಪವಾಡದಂತೆ ವೃದ್ಧಾಪ್ಯದಲ್ಲಿ ಲಭಿಸಿದ ಗಂಡು ಮಗು ಇಸ್ಮಾಯಿಲ್ ಸ್ವಂತ ಮಗನನ್ನೂ ದೇವರ ಆದೇಶದಂತೆ ಬಲಿ ಕೊಡಲು ಮುಂದಾಗುತ್ತಾರೆ. ನಿರ್ಜಲ, ನಿರ್ಜನ ಮರುಭೂಮಿಯಲ್ಲಿ ಪುಟ್ಟ ಮಗುವನ್ನು ಮಡದಿಯನ್ನು ಏಕಾಂಗಿಯಾಗಿ ಬಿಟ್ಟು ಬಿಡುತ್ತಾರೆ.

ಅಲ್ಲಾಹನ ಎಲ್ಲಾ ಆಜ್ಞೆಗಳನ್ನು ಈಡೇರಿಸಿ ಪರೀಕ್ಷೆಗಳನ್ನು ಎದುರಿಸಿ ದೇವ ಪ್ರೀತಿಗೆ ಪಾತ್ರರಾಗಿ ಪ್ರವಾದಿ ಇಬ್ರಾಹಿಂ ಮತ್ತು ಮಡದಿ ಹಾಜರ ಮಗ ಇಸ್ಮಾಯಿಲ್ ತ್ಯಾಗ ಮತ್ತು ಅಛಲ ವಿಶ್ವಾಸ ಸ್ನೇಹ ನಂಬಿಕೆಯ ಬದುಕನ್ನು ರೂಪಿಸಿಕೊಳ್ಳುತ್ತಾರೆ. ಪ್ರವಾದಿ ಇಬ್ರಾಹಿಂ ಅವರ ನಂತರ ತಮ್ಮ ಮಗ ಇಸ್ಮಾಯಿಲ್ ಪ್ರವಾದಿ ಪಟ್ಟವನ್ನು ಸ್ವೀಕರಿಸುತ್ತಾರೆ. ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

ಇದನ್ನೂ ಓದಿ:Govt Holidays : 2024ರಲ್ಲಿ ಸರ್ಕಾರಿ ನೌಕರರಿಗೆ ಭರ್ಜರಿ ರಜೆ; ಇಲ್ಲಿದೆ ಸರ್ಕಾರಿ ರಜೆಗಳ ಪಟ್ಟಿ

Continue Reading
Advertisement
T20 World Cup 2024
ಕ್ರೀಡೆ2 mins ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Nikhil Gupta
ವಿದೇಶ7 mins ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ35 mins ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್40 mins ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Lok Sabha Election Result
Lok Sabha Election 202445 mins ago

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Flesh-Eating Bacteria
ಆರೋಗ್ಯ55 mins ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

CM Siddaramaiah and Vidhanasoudha
ಪ್ರಮುಖ ಸುದ್ದಿ1 hour ago

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

Euro 2024
ಕ್ರೀಡೆ1 hour ago

Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

Nayana Nagaraj ginirama serial fame got married with suhas
ಕಿರುತೆರೆ1 hour ago

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Auto Launches
ಆಟೋಮೊಬೈಲ್1 hour ago

Auto Launches: ಸ್ಕೋಡಾ ಕುಶಾಕ್‌, ಬಿಎಂಡಬ್ಲ್ಯು ಆರ್ 1300 ಸೇರಿ ಇನ್ನೂ ಹಲವು ಹೊಸ ವಾಹನ ಮಾರುಕಟ್ಟೆಗೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ16 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ17 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ22 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌