Why Was Tejaswi Surya's Name Not Included In BJP Star Campaigners ListKarnataka Election 2023: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ ಏಕಿಲ್ಲ? - Vistara News

ಕರ್ನಾಟಕ

Karnataka Election 2023: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ ಏಕಿಲ್ಲ?

Karnataka Election 2023: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 40 ಸ್ಟಾರ್‌ ಪ್ರಚಾರಕರ ಹೆಸರಿದೆ. ಆದರೆ, ತೇಜಸ್ವಿ ಸೂರ್ಯ ಅವರ ಹೆಸರಿರದಿರುವುದು ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Tejasvi Surya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗಾಗಿ‌ (Karnataka Election 2023) ಭಾರತೀಯ ಜನತಾ ಪಕ್ಷ 40 ಜನ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಂದಿನಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ ಸ್ಥಾನ ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌‌, ಅಮಿತ್‌ ಶಾ, ನಿತಿನ್‌ ಗಡ್ಕರಿ ಸೇರಿ ಹಲವು ನಾಯಕರು ಪಟ್ಟಿಯಲ್ಲಿದ್ದಾರೆ. ಆದರೆ, ಭಾರತೀಯ ಜನತಾ ಯುವ ಮೋರ್ಚಾ (BJYM) ರಾಷ್ಟ್ರೀಯ ಅಧ್ಯಕ್ಷ, ಯುವ ಸಂಸದ ತೇಜಸ್ವಿ ಸೂರ್ಯ ಹೆಸರಿಲ್ಲದಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೆಲ ತಿಂಗಳ ಹಿಂದೆ ತೇಜಸ್ವಿ ಸೂರ್ಯ ಅವರು ವಿಮಾನದ ತುರ್ತು ನಿರ್ಗಮನದ ದ್ವಾರ ತೆಗೆಯಲು ಯತ್ನಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಭಾರಿ ಟೀಕೆಗಳು ವ್ಯಕ್ತವಾಗಿದ್ದವು. ಹಾಗಾಗಿಯೇ, ತೇಜಸ್ವಿ ಸೂರ್ಯ ಅವರ ಹೆಸರನ್ನು ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಪಕ್ಷದ ಮೂಲಗಳು ಹೇಳುತ್ತಿರುವುದೇ ಬೇರೆ. ಪಕ್ಷವು ಸಿದ್ಧಪಡಿಸಿದ ಪಟ್ಟಿಯೊಂದಕ್ಕೆ ಚುನಾವಣೆ ಆಯೋಗವು ಅನುಮೋದನೆ ನೀಡಿದೆ ಅಷ್ಟೆ. ಚುನಾವಣೆ ಪ್ರಚಾರದಲ್ಲಿ ತೇಜಸ್ವಿ ಸೂರ್ಯ ಭಾಗವಹಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಪುತ್ತೂರಿನಲ್ಲಿ ತೇಜಸ್ವಿ ಸೂರ್ಯ ಪ್ರಚಾರ

“ತೇಜಸ್ವಿ ಸೂರ್ಯ ಅವರು ಪ್ರತಿಯೊಂದು ಚುನಾವಣೆಯಲ್ಲಿ ಪ್ರಚಾರ ಮಾಡುತ್ತಾರೆ. ಹಾಗಾಗಿ, ಅವರಿಗೆ ಹೊರೆ ಆಗಬಾರದು ಎಂಬ ಕಾರಣಕ್ಕಾಗಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಅವರ ಹೆಸರಿಲ್ಲ. ಆದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ” ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಮತ್ತೊಬ್ಬ ನಾಯಕ ಈ ಕುರಿತು ಪ್ರತಿಕ್ರಿಯಿಸಿದ್ದು, “ತೇಜಸ್ವಿ ಸೂರ್ಯ ಅವರಿಗೆ 50 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲು ಸೂಚಿಸಲಾಗಿದೆ. ಅವರು ಭರ್ಜರಿ ಪ್ರಚಾರ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ. ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ್‌ ಸಿಂಹ ಕೂಡ ಪಟ್ಟಿಯಲ್ಲಿ ಇಲ್ಲ.

ಯಾರೆಲ್ಲ ಸ್ಟಾರ್‌ ಪ್ರಚಾರಕರು?

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌‌, ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರ್‌. ಅಶೋಕ್‌, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್‌ ಇದ್ದಾರೆ.

ಹಾಗೆಯೇ, ಪಕ್ಷದ ನಾಯಕರಾದ ಮನ್ಸುಖ್‌ ಮಂಡಾವಿಯ, ಅಣ್ಣಾಮಲೈ, ಅರುಣ್‌ ಸಿಂಗ್‌, ಡಿ.ಕೆ. ಅರುಣಾ, ಸಿ.ಟಿ ರವಿ, ಯೋಗಿ ಆದಿತ್ಯನಾಥ್‌, ಶಿವರಾಜ್‌ ಸಿಂಗ್‌ ಚೌಹಾನ್‌, ಹೇಮಂತ್‌ ಬಿಸ್ವಾ ಶರ್ಮಾ, ದೇವೇಂದ್ರ ಫಡ್ನವಿಸ್‌, ಪ್ರಭಾಕರ್‌ ಕೋರೆ, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ, ಭಗವಂತ್‌ ಖೂಬಾ, ಅರವಿಂದ ಲಿಂಬಾವಳಿ, ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನ ಗೌಡ ಪಾಟೀಲ್‌ ಯತ್ನಾಳ್‌, ಉಮೇಶ್‌ ಜಾಧವ್‌, ಚಲವಾದಿ ನಾರಾಯಣ ಸ್ವಾಮಿ, ಎನ್‌. ರವಿಕುಮಾರ್‌, ಜಿ.ವಿ. ರಾಜೇಶ್‌, ಜಗ್ಗೇಶ್‌, ಶ್ರುತಿ, ತಾರಾ ಅನುರಾಧ ಅವರು ಸ್ಟಾರ್‌ ಪ್ರಚಾರಕರಾಗಿದ್ದಾರೆ.

ಇದೇ ಪ್ರಶ್ನೆ ಎತ್ತಿದ ಎಐಸಿಸಿ ವಕ್ತಾರ ಗೌರವ್‌ ವಲ್ಲಭ್

ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ವಿಮಾನದ ಎಮರ್ಜನ್ಸಿ ಗೇಟ್‌ ಓಪನ್‌ ಪ್ರಕರಣದ‌ ತೇಜಸ್ವಿ ಸೂರ್ಯ ಹೆಸರು ಏಕಿಲ್ಲ ಎಂದು ಎಐಸಿಸಿ ವಕ್ತಾರ ಗೌರವ್‌ ವಲ್ಲಭ್‌ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಹಾಗೆಯೇ, ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರಿರದಿರುವ ಕುರಿತು ಕೂಡ ಇವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಗಳಗಳನೆ ಅತ್ತ ಅಭ್ಯರ್ಥಿ, ಕುದುರೆ ಏರಿ ಬಂದು ನಾಮಪತ್ರ ಸಲ್ಲಿಕೆ; ಇವು ದಿನದ ಇಂಟರೆಸ್ಟಿಂಗ್‌ ಘಟನೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Accident Case : ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ ಜೆಸಿಬಿ ಚಾಲಕ; ಬಯಲು ಶೌಚಕ್ಕೆ ಹೋದಾಕೆ ಉಸಿರುಗಟ್ಟಿ ಸಾವು!

Accident Case : ರಾಯಚೂರಿನಲ್ಲಿ ನಡೆದ ಅವಘಡದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣಿನ ರಾಶಿ ಹಾಕಿದ್ದರಿಂದ ಉಸಿರುಗಟ್ಟಿ ಮೃತಪಟ್ಟರೆ, ಟ್ರಾಕ್ಟರ್‌ ಡಿಕ್ಕಿಯಾಗಿ ಸವಾರನೊಬ್ಬ ಜೀವ ಬಿಟ್ಟಿದ್ದಾನೆ.

VISTARANEWS.COM


on

By

Accident case
Koo

ರಾಯಚೂರು: ನಿವೇಶನ ಸ್ವಚ್ಚಗೊಳಿಸುತ್ತಿದ್ದಾಗ ಜೆಸಿಬಿ ಚಾಲಕನಿಂದ ಅಚಾತುರ್ಯ (Accident Case) ನಡೆದಿದೆ. ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ್ದರಿಂದ ಮೂವರು ಮಕ್ಕಳ ತಾಯಿ ಮೃತಪಟ್ಟಿದ್ದಾರೆ. ತಾಯಮ್ಮ(32) ಮೃತಪಟ್ಟವರು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿನ ಜನತಾ ಕಾಲೋನಿಯಲ್ಲಿ ಘಟನೆ ನಡೆದಿದೆ.

ಖಾಲಿ ನಿವೇಶನದಲ್ಲಿ ಜಾಲಿ ಗಿಡ ಕಸ ಬೆಳೆದಿತ್ತು. ಹೀಗಾಗಿ ಬಡಾವಣೆಯ ಕೆಲ ಬಡ ಮಹಿಳೆಯರು ಇಲ್ಲಿ ಬಯಲು ಶೌಚಕ್ಕೆ ಹೋಗುತ್ತಿದ್ದರು. ತಾಯಮ್ಮ ಮುಂಜಾನೆ ಎಂದಿನಂತೆ ಬಯಲು ಶೌಚಕ್ಕೆಂದು ಹೋಗಿದ್ದಾರೆ. ಇದನ್ನು ಗಮನಿಸಿದ ಚಾಲಕ ಜೆಸಿಬಿಯಿಂದ ಮಣ್ಣಿನ ರಾಶಿಯನ್ನು ತಾಯಮ್ಮ ಮೇಲೆ ಹಾಕಿದ್ದಾನೆ.

ತಾಯಮ್ಮಳ ಮುಖದ ಮೇಲೆ ಮಣ್ಣಿನ ರಾಶಿ ಬಿದ್ದಿದ್ದರಿಂದ ಸಹಾಯಕ್ಕೆ ಚೀರಾಡಲು ಆಗದಂತಾಗಿದೆ. ಇತ್ತ ಎರಡ್ಮೂರು ಬಾರಿ ಮಣ್ಣಿ ರಾಶಿ ಬಿದ್ದಾಗ ಕುಸಿದು ಬಿದ್ದ ತಾಯಮ್ಮ ಹೊರಬರಲು ಆಗದೆ ಒದ್ದಾಡಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ತಾಯಿ ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೆಸಿಬಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವೆಸ್ಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Independence Day 2024 : ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

ಬೈಕ್‌ಗೆ ಟ್ರಾಕ್ಟರ್‌ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಬೈಕ್‌ಗೆ ಟ್ರಾಕ್ಟರ್ ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಟ್ರಾಕ್ಟರ್ ಸಮೇತ ಚಾಲಕ ಎಸ್ಕೇಪ್ ಆಗಿದ್ದ. ರಾಯಚೂರು ತಾಲೂಕಿನ ಎಲೆ ಬಿಚ್ಚಾಲಿ ಬಳಿ ಘಟನೆ ನಡೆದಿದೆ. ಚಂದ್ರಶೇಖರ್ (21)ಮೃತ ದುರ್ದೈವಿ.

ರಾಯಚೂರು ತಾಲ್ಲೂಕಿನ ಬಿ.ಹನುಮಾಪುರ ಗ್ರಾಮದ ಚಂದ್ರಶೇಖರ್‌, ಪ್ಲೊಮಾ ಮುಗಿಸಿ ಸಿಇಟಿಗೆ ಸಿದ್ಧವಾಗುತ್ತಿದ್ದ. ನಿನ್ನೆ ರಾತ್ರಿ ಬೈಕ್ ನಲ್ಲಿ ಚಂದ್ರಶೇಖರ್ ಸ್ವ ಗ್ರಾಮಕ್ಕೆ ಹೋಗೊವಾಗ ಟ್ರಾಕ್ಟರ್ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಚಾಲಕ ಶಬ್ಜವಲಿ ಎಂಬಾತ ಮಾರ್ಗ ಮಧ್ಯೆ ಜಮೀನುವೊಂದರಲ್ಲಿ ಟ್ರಾಕ್ಟರ್ ಸಮೇತ ಬಚ್ಚಿಟ್ಟುಕೊಂಡಿದ್ದ. ಬಳಿಕ ಟ್ರಾಕ್ಟರ್ ಪತ್ತೆ ಹಚ್ಚಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Independence Day 2024: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ

Independence Day 2024: ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಸರ್ಕಾರ ಯಶಸ್ವಿಯಾಗಿ ಕಾರ್ಯಗತಗೊಳಿಸುತ್ತಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜಭವನದ ಅಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

VISTARANEWS.COM


on

Independence Day 2024
Koo

ಬೆಂಗಳೂರು: ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಸರ್ಕಾರ ಯಶಸ್ವಿಯಾಗಿ ಕಾರ್ಯಗತಗೊಳಿಸುತ್ತಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ (Independence Day 2024).

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜಭವನದ ಅಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು. ಕರ್ನಾಟಕದ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಭಾಷಣ ಆರಂಭಿಸಿದ ರಾಜ್ಯಪಾಲರು, ʼʼಆಗಸ್ಟ್ 15 ನಮಗೆ ಐತಿಹಾಸಿಕ ದಿನ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ. ಈ ದಿನ ಅವರಿಂದ ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಹೊಸ ಸಂಕಲ್ಪದೊಂದಿಗೆ ಮುನ್ನಡೆಯಲು ಅವಕಾಶವಿದೆʼʼ ಎಂದು ಹೇಳಿದ್ದಾರೆ.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಇದು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದೆ ಎಂದು ತಿಳಿಸಿದ ಅವರು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಪೂರ್ಣಾಂಕ ನೀಡಿದ್ದಾರೆ. ʼʼಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಮೂಲಕ ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲಾಗುತ್ತಿದೆʼʼ ಎಂದು ಹೇಳಿದ್ದಾರೆ. ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದೂ ಅಭಿಪ್ರಾಯ ಪಟ್ಟಿದ್ದಾರೆ.

ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ

ರಾಜಭವನದ ಅಂಗಳದಲ್ಲಿರುವ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಲಾರ್ಪಣೆ ಮಾಡಿದರು. ಬಳಿಕ ಧ್ವಜಾರೋಹಣ ನೆರವೇರಿಸಿದರು. ಜತೆಗೆ ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದ ಗೌರವ ರಕ್ಷೆ ಸ್ವೀಕರಿಸಿದರು. ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್, ರಾಜ್ಯಪಾಲರ ಆಪ್ತ ಕಾರ್ಯದರ್ಶಿ ಪಂಕಜ್ ಮೆಹ್ತಾ, ಉಪ ಕಾರ್ಯದರ್ಶಿ ಯೋಗೇಶ್ ಉಪಧ್ಯಾಯ್, ಎಡಿಸಿ ಸಾಬು ಥಾಮಸ್, ಎಡಿಸಿ ಸಂದೀಪ್ ಶರ್ಮಾ, ಒಎಸ್‌ಡಿಗಳಾದ ಶಂಕರ್ ಲಾಲ್ ಗುಜರ್, ಆದರ್ಶ್ ಪಾಸ್ವಾನ್ ಮತ್ತಿತರರು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದ ಸಿಎಂ

ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ಅವರು, ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡಿದ್ದಾರೆ.

ʼʼಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಒಂದು ಆರ್ಥಿಕ ಭದ್ರತೆಯನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಯೋಜನೆ ಮುಂದುವರಿಯಲಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದು ಹೋಗಿರುವ ಜನರ ಬದುಕಿಗೆ ಈ ಯೋಜನೆಗಳು ನೆಮ್ಮದಿ ತಂದಿವೆ. ಈ ಯೋಜನೆಗಳ ಮೂಲಕ ಸಂಪತ್ತಿನ ಮರುಹಂಚಿಕೆಗೆ ಒತ್ತು ನೀಡುತ್ತಲೇ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾದ ರೀತಿಯಲ್ಲಿ ಹೆಚ್ಚಿಸಲು ಕೂಡಾ ಅಷ್ಟೇ ಬದ್ಧತೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕ ಬೆಳವಣಿಗೆ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುವುದರ ಜತೆಗೆ ಈ ನೆಲದ ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಪರಂಪರೆಯನ್ನು ಮುಂದುವರಿಸಿ ಕರ್ನಾಟಕವನ್ನು ನಿಜ ಅರ್ಥದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ವನ್ನಾಗಿ ರೂಪಿಸಲು ನಾವು ಕಾರ್ಯತತ್ಪರಾಗಿದ್ದೇವೆʼʼ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

Continue Reading

ಚಿಕ್ಕಬಳ್ಳಾಪುರ

Independence Day 2024 : ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

Independence Day 2024 : ಚಿಕ್ಕಬಳ್ಳಾಪುರ ಹಾಗೂ ರಾಯಚೂರಿನಲ್ಲಿ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ವೇಳೆ ಮಕ್ಕಳು, ಪೊಲೀಸರು ಕುಸಿದು ಬಿದ್ದಿದ್ದಾರೆ. ವಿಜಯಪುರದಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದಾರೆ.

VISTARANEWS.COM


on

By

independence day 2024
Koo

ಚಿಕ್ಕಬಳ್ಳಾಪುರ/ರಾಯಚೂರು: 78ರ ಸ್ವಾತಂತ್ರ್ಯೋತ್ಸವ (Independence Day 2024) ದಿನದ ಧ್ವಜಾರೋಹಣದ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು, ಪೊಲೀಸರು ನಿತ್ರಾಣವಾಗಿ ಕುಸಿದು ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಸರ್‌. ಎಂ. ವಿ ಕ್ರೀಡಾಂಗಣದಲ್ಲಿ ಸಚಿವ ಡಾ ಎಂ ಸಿ ಸುಧಾಕರ್ ಭಾಷಣದ ವೇಳೆ ಪೊಲೀಸರು ಮತ್ತು ಮಕ್ಕಳು (Independence Day 2024) ಕುಸಿದು ಬಿದ್ದಿದ್ದಾರೆ.

ಸಚಿವ ಡಾ ಎಂ ಸಿ ಸುಧಾಕರ್ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡುತ್ತಿದ್ದರು. ಈ ವೇಳೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಮಕ್ಕಳನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಹಿಳಾ ತುಕಡಿಯ ನೇತೃತ್ವ ವಹಿಸಿದ್ದ ಪಿಎಸ್ಐ ನಾಗಮ್ಮ ಅವರು ವಿಪರೀತ ಬಿಸಿಲಿನ ತಾಪಕ್ಕೆ ನಿತ್ರಾಣವಾಗಿ ಬಿದ್ದರು. ಸ್ಟೇಡಿಯಂನಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಓಡಿಹೋಗಿ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಯಚೂರಿನಲ್ಲೂ ಕುಸಿದು ಬಿದ್ದ ಮಕ್ಕಳು

ರಾಯಚೂರಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಕಾರ್ಯಕ್ರಮದ ವೇಳೆ ಬಿಸಿಲಿನ ತಾಪಕ್ಕೆ ಮಕ್ಕಳಿಬ್ಬರು ಕುಸಿದು ಬಿದ್ದಿದ್ದರು. ಕೂಡಲೇ ಇಬ್ಬರು ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಯಿತು. ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ.

ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಪ್ರಶಸ್ತಿ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವಾಗ ಬಿಸಿಲಿನ ತಾಪಕ್ಕೆ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

ವಿಜಯಪುರದಲ್ಲಿ ಧ್ವಜಾರೋಹಣ ವೇಳೆ ಹೊಡೆದಾಟ

ಧ್ವಜಾರೋಹಣ ವೇಳೆ ಹುಡುಗರ ನಡುವೆ ಗಲಾಟೆ ನಡೆದಿದೆ. ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಂ ಬಿ ಪಾಟೀಲ್ ಭಾಷಣ ವೇಳೆ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಧ್ವಜಾರೋಹಣ ನೋಡಲು ಬಂದಿದ್ದ ಹುಡುಗರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಹೊಡೆದಾಡಿಕೊಳ್ಳುತ್ತಿದ್ದ, ಓರ್ವನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ

Independence Day 2024: ಇತ್ತೀಚಿನ ದಿನಗಳಲ್ಲಿ ಭೂಕುಸಿತ ಭೀಕರ ಸಮಸ್ಯೆಯಾಗಿ ಕಾಡುತ್ತಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸಿ 100 ಕೋಟಿ ರೂ. ವೆಚ್ಚದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಘೋಷಿಸಿದ್ದಾರೆ.

VISTARANEWS.COM


on

Independence Day 2024
Koo

ಬೆಂಗಳೂರು: ”ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆಯು ರಾಜ್ಯದ ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಒಳಪಡುವ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿನ 250 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಭೂ-ಕುಸಿತ ತಡೆಗಟ್ಟಲು ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು National Institute of Rock Mechanics (NIRM) ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ (Independence Day 2024).

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಅವರು ಈ ವಿಚಾರವನ್ನು ಪ್ರಸ್ತಾವಿಸಿದರು. ʼʼಮಾನವ-ವನ್ಯ ಪ್ರಾಣಿ ಸಂಘರ್ಷ ನಾವು ಎದುರಿಸುವ ಪ್ರಮುಖ ಸವಾಲಾಗಿದೆ. ಇದನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಸರ್ಕಾರ 120 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡುತ್ತಿದೆ. ಇದರೊಂದಿಗೆ 7 ಆನೆ ಟಾಸ್ಕ್ ಫೋರ್ಸ್ ಹಾಗೂ 2 ಚಿರತೆ ಟಾಸ್ಕ್ ಫೋರ್ಸ್ ರಚಿಸಲಾಗಿದೆʼʼ ಎಂದು ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಒತ್ತು

ʼʼಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಡಿ ಹೋಬಳಿಗೊಂದು ವಸತಿ ಶಾಲೆ ಪ್ರಾರಂಭಿಸುವ ಗುರಿಯನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 20 ಹೊಸ ವಸತಿ ಶಾಲೆಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದವರಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ಪೂರಕವಾಗಿ ಹೊಸದಾಗಿ ಒಟ್ಟು 295 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆʼʼ ಎಂದಿದ್ದಾರೆ.

ʼʼಪರಿಶಿಷ್ಟ ಪಂಗಡದ ಅತಿ ಹಿಂದುಳಿದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಶೇ. 20ರಷ್ಟು ಮೀಸಲಾತಿ ಹಾಗೂ ನೇರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25ರಿಂದ 40ಕ್ಕೆ ಹೆಚ್ಚಿಸಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಬಾಡಿಗೆ ಕಟ್ಟಡದಲ್ಲಿರುವ 30 ವಿದ್ಯಾರ್ಥಿ ನಿಲಯಗಳ ಸ್ವಂತ ಕಟ್ಟಡ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಅಭಿವೃದ್ಧಿಗಾಗಿ 100 ಹೊಸ ಮೌಲಾನಾ ಆಜಾದ್ ಶಾಲೆಗಳ ಪ್ರಾರಂಭಿಸಲಾಗಿದೆ ಹಾಗೂ 50 ಸಂಖ್ಯಾ ಬಲವುಳ್ಳ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಸ್ವಂತ ಕಟ್ಟಡ ಹೊಂದಿರುವ
25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗಿದೆʼʼ ಎಂದು ಸಿಎಂ ಹೇಳಿದ್ದಾರೆ.

ʼʼಮಧ್ಯಾಹ್ನದ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಸಹಯೋಗದೊಂದಿಗೆ ಮೊಟ್ಟೆ ಅಥವಾ ಚಿಕ್ಕಿ ಮತ್ತು ಬಾಳೆಹಣ್ಣಿನ ವಿತರಣೆಯನ್ನು ವಾರದಲ್ಲಿ ಎರಡು ದಿನಗಳಿಂದ ಆರು ದಿನಗಳಿಗೆ ಹೆಚ್ಚಿಸಲಾಗಿದೆ ಹಾಗೂ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಭಾಗಿತ್ವದಲ್ಲಿ ವಾರದಲ್ಲಿ 3 ದಿನ ರಾಗಿ ಮಾಲ್ಟನ್ನು ನೀಡಲಾಗುತ್ತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 11,494 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಬಾಕಿ ಇರುವ ಹುದ್ದೆಗಳನ್ನೂ ಹಂತ ಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆ ಪ್ರಾರಂಭಿಸುತ್ತೇವೆʼʼ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ʼʼಮುಕ್ತ, ನಿರ್ಭೀತ ಸಮಾಜದ ನಿರ್ಮಾಣ ಹಾಗೂ ವೈಜ್ಞಾನಿಕ ತಳಹದಿಯ ಮೇಲೆ ಉನ್ನತ ಶಿಕ್ಷಣ ವ್ಯವಸ್ಥೆ ರೂಪಿಸಲು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ. ಇದಕ್ಕಾಗಿ ಸರ್ಕಾರವು ರಚಿಸಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಆಧಾರದಲ್ಲಿ ಪದವಿ ಶಿಕ್ಷಣದ ಅವಧಿ ಹಾಗೂ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆʼʼ ಎಂದೂ ತಿಳಿಸಿದ್ದಾರೆ.

ವಸತಿ ಯೋಜನೆಗಳ ಮೂಲಕ ಸ್ವಂತ ಸೂರಿನ ಕನಸು ನನಸು

ʼʼನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 3,690 ಕೋಟಿ ರೂ. ವೆಚ್ಚದಲ್ಲಿ 2.38 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಫಲಾನುಭವಿಗಳಿಗೆ ಆರ್ಥಿಕವಾಗಿ ಹೊರೆಯಾಗಿದ್ದ ವಂತಿಗೆಯಲ್ಲಿ ತಲಾ 4 ಲಕ್ಷ ರೂ. ರಾಜ್ಯ ಸರ್ಕಾರವೇ ಭರಿಸಲು ತೀರ್ಮಾನಿಸಿ, ಅರ್ಧಕ್ಕೆ ನಿಂತಿದ್ದ ಮನೆಗಳ ನಿರ್ಮಾಣ ಮತ್ತೆ ಪ್ರಾರಂಭವಾಗಿದೆ. ಈಗಾಗಲೇ 36,781 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವ ಮೂಲಕ ಬಡ ಜನರ ಸ್ವಂತ ಸೂರಿನ ಕನಸನ್ನು ಸಾಕಾರಗೊಳಿಸಿದ್ದೇವೆ. ಹಾಗೆಯೇ ಇನ್ನುಳಿದ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡಿದ್ದೇವೆʼʼ ಎಂದು ಸಿಏಂ ತಿಳಿಸಿದ್ದಾರೆ.

ಜನರಿಗೆ ಸರಳವಾಗಿ, ಪಾರದರ್ಶಕವಾಗಿ ನಾಗರಿಕ ಸೇವೆಗಳನ್ನು ದೊರಕಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪಹಣಿಗೆ ಆಧಾರ್ ಜೋಡಣೆ, ಆಟೋಮ್ಯುಟೇಷನ್ ಸೌಲಭ್ಯ, ಬಗರ್‌ಹುಕುಂ ಸಾಗುವಳಿ ತಂತ್ರಾಂಶ, ಕಂದಾಯ ದಾಖಲೆಗಳ ಡಿಜಿಟಲೀಕರಣ, ನಗರಾಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆ ಮೊದಲಾದವುಗಳು ರೈತರ, ಜನ ಸಾಮಾನ್ಯರ ಸಮಯ ಹಾಗೂ ಶ್ರಮ ಉಳಿತಾಯ ಮಾಡುವತ್ತ ಮಹತ್ವದ ಕ್ರಮಗಳಾಗಿವೆ. ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮ ಪಂಚಾಯಿತಿಯಲ್ಲಿಯೇ ಸಕಾಲದಲ್ಲಿ ಜನನ ಮರಣ ನೋಂದಣಿ ಮಾಡುವ ಉದ್ದೇಶದಿಂದ ರಾಜ್ಯದ ಎಲ್ಲ 5,950 ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆʼʼ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ʼʼನೋಂದಣಿ ಮತ್ತು ಮುದ್ರಾಂಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸೆಲಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ತಾಯಂದಿರ ಅನುಕೂಲಕ್ಕಾಗಿ 4,000 ಪಂಚಾಯಿತಿಗಳಲ್ಲಿ ‘ಕೂಸಿನ ಮನೆʼ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

Continue Reading
Advertisement
physical abuse
ವಿದೇಶ3 mins ago

Physical abuse: ಐದು ದಿನಗಳಿಂದ ನಿರಂತರ ಗ್ಯಾಂಗ್‌ರೇಪ್‌; ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಬೆಲ್ಜಿಯಂ ಮಹಿಳೆ ರಸ್ತೆ ಬದಿಯಲ್ಲಿ ಪತ್ತೆ

Independence Day 2024
ದೇಶ9 mins ago

Independence Day 2024: ಹೊಸ ದಾಖಲೆ ಸೃಷ್ಟಿಸಿದೆ ಕೆಂಪುಕೋಟೆಯಲ್ಲಿನ ಮೋದಿ ಭಾಷಣದ ಅವಧಿ!

Accident case
ರಾಯಚೂರು34 mins ago

Accident Case : ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ ಜೆಸಿಬಿ ಚಾಲಕ; ಬಯಲು ಶೌಚಕ್ಕೆ ಹೋದಾಕೆ ಉಸಿರುಗಟ್ಟಿ ಸಾವು!

Independence Day 2024
ಕರ್ನಾಟಕ34 mins ago

Independence Day 2024: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ

Priyanka Chopra Nick Jonas Kisses In a Steamy Video
ಬಾಲಿವುಡ್37 mins ago

Priyanka Chopra: ಲಿಪ್‌ ಲಾಕ್‌ ಫೋಟೊ ಹಂಚಿಕೊಂಡ ನಿಕ್ ಜೋನಾಸ್ – ಪ್ರಿಯಾಂಕಾ!

independence day 2024
ಚಿಕ್ಕಬಳ್ಳಾಪುರ1 hour ago

Independence Day 2024 : ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

Independence Day 2024
ಕರ್ನಾಟಕ1 hour ago

ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ

Raj B Shetty mass entry to Bollywood The actor will make a splash with Bobby Deol
ಬಾಲಿವುಡ್2 hours ago

Raj B Shetty: ಬಾಲಿವುಡ್‌ಗೆ ಮಾಸ್‌ ಎಂಟ್ರಿ ಕೊಟ್ಟ ರಾಜ್‌ ಬಿ ಶೆಟ್ಟಿ; ಬಾಬಿ ಡಿಯೋಲ್ ಜತೆ ಅಬ್ಬರಿಸಲಿದ್ದಾರೆ ನಟ!

Independence Day 2024
ದೇಶ2 hours ago

Independence Day 2024: 2036ರಲ್ಲಿ ಭಾರತದಲ್ಲೇ ಒಲಿಂಪಿಕ್ಸ್ ಕ್ರೀಡಾಕೂಟ? ಪ್ರಧಾನಿ ಮೋದಿ ಮಹತ್ವದ ಘೋಷಣೆ

Self Harming
ಹಾಸನ2 hours ago

Self Harming : ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌