Supreme Court: ಗಲಭೆ ಸಂತ್ರಸ್ತರಿಗೆ ಏಕರೂಪ ಪರಿಹಾರ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೋರ್ಟ್ ನೋಟಿಸ್ - Vistara News

ದೇಶ

Supreme Court: ಗಲಭೆ ಸಂತ್ರಸ್ತರಿಗೆ ಏಕರೂಪ ಪರಿಹಾರ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೋರ್ಟ್ ನೋಟಿಸ್

Supreme Court: ದ್ವೇಷ ಅಪರಾಧ, ಗುಂಪು ಹತ್ಯೆ, ಗಲಭೆ ಸಂತ್ರಸ್ತರಿಗೆ ಪರಿಹಾರ ಒದಗಿಸುವಾಗ ಸರ್ಕಾರಗಳು ತಾರತಮ್ಯ ಮಾಡುತ್ತಿವೆ. ಹಾಗಾಗಿ ಏಕರೂಪ ಪರಿಹಾರಕ್ಕೆ ಸೂಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ದಾಖಲಾಗಿದೆ.

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗಲಭೆ, ಗುಂಪು ಹತ್ಯೆ ಪ್ರಕರಣಗಳ ಸಂತ್ರಸ್ತರಿಗೆ ಏಕರೂಪ ಪರಿಹಾರ ನೀಡುವ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್(Supreme Court) ಕೇಂದ್ರ ಸರ್ಕಾರ, ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಈ ಸಂಬಂಧ ಇಂಡಿಯನ್ ಮುಸ್ಲಿಮ್ ಫಾರ್ ಪ್ರೊಗ್ರೆಸ್ ಆ್ಯಂಡ್ ರಿಫಾರ್ಮ್ ಎಂಬ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆ ನಡೆಸಿದ ಜಸ್ಟೀಸ್ ಕೆ ಎಂ ಜೋಸೆಫ್ ಹಾಗೂ ಜಸ್ಟೀಸ್ ಬಿ ವಿ ನಾಗರತ್ನ ಅವರಿದ್ದ ಪೀಠವು, ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಿದೆ.

2018ರ ತೆಹ್ಸೀನ್ ಪೂನಾವಾಲ ವರ್ಸಸ್ ಕೇಂದ್ರ ಸರ್ಕಾರ ಪ್ರಕರಣದಲ್ಲಿ ಗುಂಪು ಹತ್ಯೆ ಮತ್ತು ಗುಂಪು ಹಿಂಸಾಚಾರ ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಯೋಜನೆ ರೂಪಿಸಿವೆ. ಆದರೆ, ಈ ಸಂಬಂಧ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜಾವೇದ್ ಶೇಖ್ ಅವರು, ಅಪರಾಧ ದಂಡ ಸಂಹಿತೆ(CrPC)ಯ ಸೆಕ್ಷನ್ 357ಎ ಅಡಿ ಈ ಸ್ಕೀಮುಗಳನ್ನು ರೂಪಿಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ಲೆಕ್ಕಾಚಾರ ಮಾಡುವಾಗ ದೈಹಿಕ ಹಾನಿ, ಮಾನಸಿಕ ಹಾನಿ ಮತ್ತು ಗಳಿಕೆಯ ನಷ್ಟ, ಉದ್ಯೋಗ ಇತ್ಯಾದಿಗಳನ್ನು ಪರಿಗಣಿಸಲು ನ್ಯಾಯಾಲಯವು ರಾಜ್ಯಗಳಿಗೆ ಸೂಚಿಸಿದೆ ಮತ್ತು ಅವರು ಇದಕ್ಕಾಗಿ 2018ರ ತೀರ್ಪನ್ನು ಅವಲಂಬಿಸಿದ್ದಾರೆ ಎಂದು ತಿಳಿಸಿದರು.

ಪರಿಹಾರ ವಿತರಣೆಯಲ್ಲಿ ಏಕರೂಪತೆ ಇಲ್ಲದ್ದರಿಂದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೆಲವು ಸಂತ್ರಸ್ತರಿಗೆ ಭಾರೀ ಮೊತ್ತದ ಪರಿಹಾರ ದೊರೆತರೆ, ಮತ್ತೆ ಕೆಲವರಿಗೆ ತೀರಾ ಅಲ್ಪ ಪ್ರಮಾಣದ ಪರಿಹಾರ ನೀಡಲಾಗುತ್ತಿದೆ ಎಂಬ ಸಂಗತಿಯನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು.

ಈ ಸಂಬಂಧ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿರುವ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿದೆ. ಈ ಸಂಬಂಧ ಹಿಂದೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಹೇಗೆ ಪಾಲನೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸಲ್ಲಿಸುವಂತೆ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: Godhra Train Burning Case: ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು; ನಾಲ್ವರ ಅರ್ಜಿ ತಿರಸ್ಕಾರ

ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಎರಡು ದ್ವೇಷ ಅಪರಾಧ ಪ್ರಕರಣಗಳನ್ನು ಉದಾಹರಣೆಯಾಗಿ ನೀಡಲಾಗಿದೆ. ಜೂನ್ ತಿಂಗಳಲ್ಲಿ ಕೊಲೆಯಾದ ಕನ್ಹಯ್ಯಲಾಲ್ ಕುಟಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲಾಗಿದೆ. ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಅದೇ ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಇಬ್ಬರನ್ನು ಗೋ ರಕ್ಷಕರು ಅಪಹರಣ ಮಾಡಿ, ಜೀವಂತವಾಗಿ ಸುಟ್ಟು ಹಾಕಿದರು. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇವಲ ಪರಿಹಾರವಾಗಿ 5 ಲಕ್ಷ ರೂ. ನೀಡಲಾಗಿದೆ ಎಂದು ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

PR Sreejesh : ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಹಾಕಿ ತಂಡದ ಅದ್ಭುತ ಅಭಿಯಾನದಲ್ಲಿ ಶ್ರೀಜೇಶ್ ಮತ್ತೊಮ್ಮೆ ಪ್ರಮುಖ ಪಾತ್ರ ವಹಿಸಿದ್ದರು. ಸ್ಪೇನ್ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿದ ಭಾರತ ಸತತ ಎರಡನೇ ಬಾರಿ ಒಲಿಂಪಿಕ್ಸ್​​ ಕೂಟದಲ್ಲಿ ಕಂಚಿನ ಪದಕ ಗೆದ್ದುಕೊಂಡಿತು. ಆಟಗಾರರ ಸಾಮೂಹಿಕ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡವು 52 ವರ್ಷಗಳ ನಂತರ ಒಲಿಂಪಿಕ್ಸ್​​ನಲ್ಲಿ ಸತತ ಪದಕಗಳನ್ನು ಗೆದ್ದಿದೆ. ಒಟ್ಟಾರೆ ಒಲಿಂಪಿಕ್ಸ್ ಪಟ್ಟಿಯಲ್ಲಿ 13 ನೇ ಪದಕ ತನ್ನದಾಗಿಸಿಕೊಂಡಿತು.

VISTARANEWS.COM


on

PR Sreejesh
Koo

ಹೊಸದಿಲ್ಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದ ಬಳಿಕ ನಿವೃತ್ತಿ ಘೋಷಿಸಿರುವ ಭಾರತ ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ (PR Sreejesh) ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾದರು. ವಿಶೇಷವೆಂದರೆ, ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರು ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪಾಲ್ಗೊಂಡ ಅಥ್ಲೀಟ್​ಗಳಿಗಾಗಿ ವಿಶೇಷ ಸಭೆ ಆಯೋಜಿಸಿದ್ದರು. ಅದು ಮುಗಿದ ಬಳಿಕ ಶ್ರೀಜೇಶ್​ ಕುಟುಂಬ ಸಮೇತ ಪ್ರಧಾನಿಯವನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ಯಾರಿಸ್​​ನಲ್ಲಿ ಭಾರತದ ಕಂಚಿನ ಪದಕ ವಿಜೇತರಾದ ಮನು ಭಾಕರ್, ಸರಬ್ಜೋತ್ ಸಿಂಗ್, ಸ್ವಪ್ನಿಲ್ ಕುಸಾಳೆ ,ಕುಸ್ತಿಪಟು ಅಮನ್ ಸೆಹ್ರಾವತ್ ಮತ್ತು ಭಾರತೀಯ ಹಾಕಿ ತಂಡವು ಇತರ ಕ್ರೀಡಾಪಟುಗಳು ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಖುಷಿಯನ್ನು ಹಂಚಿಕೊಂಡ ಶ್ರೀಜೇಶ್, ಪ್ರಧಾನಿಯೊಂದಿಗೆ ತಮ್ಮ ಕುಟುಂಬದ ಫೋಟೋಗಳನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ ಮೋದಿ ಅವರು, ಶ್ರೀಜೇಶ್​ ಮಗ ಮತ್ತು ಮಗಳ ತಲೆ ಕೈ ಇಟ್ಟು ಆಶೀರ್ವದಿಸುವುದು ಕಂಡು ಬಂದಿದೆ.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಹಾಕಿ ತಂಡದ ಅದ್ಭುತ ಅಭಿಯಾನದಲ್ಲಿ ಶ್ರೀಜೇಶ್ ಮತ್ತೊಮ್ಮೆ ಪ್ರಮುಖ ಪಾತ್ರ ವಹಿಸಿದ್ದರು. ಸ್ಪೇನ್ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿದ ಭಾರತ ಸತತ ಎರಡನೇ ಬಾರಿ ಒಲಿಂಪಿಕ್ಸ್​​ ಕೂಟದಲ್ಲಿ ಕಂಚಿನ ಪದಕ ಗೆದ್ದುಕೊಂಡಿತು. ಆಟಗಾರರ ಸಾಮೂಹಿಕ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡವು 52 ವರ್ಷಗಳ ನಂತರ ಒಲಿಂಪಿಕ್ಸ್​​ನಲ್ಲಿ ಸತತ ಪದಕಗಳನ್ನು ಗೆದ್ದಿದೆ. ಒಟ್ಟಾರೆ ಒಲಿಂಪಿಕ್ಸ್ ಪಟ್ಟಿಯಲ್ಲಿ 13 ನೇ ಪದಕ ತನ್ನದಾಗಿಸಿಕೊಂಡಿತು.

ಗಮನ ಸೆಳೆದ ಪಿ.ಆರ್. ಶ್ರೀಜೇಶ್

ಕಂಚು ಗೆದ್ದ ನಂತರ, ಗೋಲ್ ಕೀಪರ್ ಶ್ರೀಜೇಶ್​ ಗೌರವದಿಂದ ತಮ್ಮ ಗೋಲ್ ಕೀಪಿಂಗ್​​ ಗ್ಲವ್ಸ್​ ಸಮೇತ ಗೋಲ್​​ ಪೋಸ್ಟ್​​ಗೆ ನಮಸ್ಕರಿಸುವಾಗ ಅತ್ಯಂತ ಭಾವುಕರಾಗಿ ಕಾಣಿಸಿಕೊಂಡರು. ಟೋಕಿಯೊ ಒಲಿಂಪಿಕ್ಸ್​​ನಲ್ಲಿ ತಮ್ಮ ಪ್ರಸಿದ್ಧ ಸಂಭ್ರಮಾಚರಣೆಯ ಭಂಗಿಯನ್ನು ಅವರು ಪ್ಯಾರಿಸ್​ನಲ್ಲೂ ಮರುಸೃಷ್ಟಿಸಿದರು. ಇಡೀ ತಂಡ ಅವರ ಸಂಭ್ರಮದಲ್ಲಿ ಭಾಗಿಯಾಯಿತು.

18 ವರ್ಷಗಳ ವೃತ್ತಿಜೀವನದಲ್ಲಿ 278 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಶ್ರೀಜೇಶ್​ ವಿದಾಯ ಹೇಳಿರುವುದು ಭಾರತೀಯ ಹಾಕಿ ಅಭಿಮಾನಿಗಳ ಪಾಲಿಗೆ ಬೇಸರದ ವಿಷಯ. ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮನು ಭಾಕರ್ ಅವರೊಂದಿಗೆ ಕೇರಳ ಮೂಲದ ಆಟಗಾರನಿಗೆ ಭಾರತದ ಧ್ವಜಧಾರಿಯಾಗಿದ್ದರು. ಈ ಮೂಲಕ ಅವರಿಗೆ ವಿಶೇಷ ಗೌರವ ನೀಡಲಾಗಿದೆ.

ಇದನ್ನೂ ಓದಿ: Virat Kohli : ವಿರಾಟ್​​ ಮಾಲೀಕತ್ವದ ರೆಸ್ಟೋರೆಂಟ್​ಗೆ ಹೋದ ಡೂಪ್ಲಿಕೇಟ್​ ಕೊಹ್ಲಿ; ಗ್ರಾಹಕರು ಫುಲ್ ಕನ್​​ಫ್ಯೂಸ್​! ಇಲ್ಲಿದೆ ವಿಡಿಯೊ

ಸ್ಟಾರ್ ಶಟ್ಲರ್ ಪಿ.ವಿ.ಸಿಂಧು ಮತ್ತು ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರು ಪ್ರಧಾನಿಯೊಂದಿಗಿನ ಸಭೆಯಲ್ಲಿ ಹಾಜರಿರಲಿಲ್ಲ. ನೀರಜ್ ಅವರು ದೀರ್ಘಕಾಲದ ಸೊಂಟದ ಗಾಯಕ್ಕೆ ವೈದ್ಯಕೀಯ ಸಲಹೆಗಾಗಿ ಜರ್ಮನಿಗೆ ಹಾರಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಕ್ರೀಡಾಪಟುಗಳ ನಡೆಸಿರುವ ಮಾತುಕತೆಯ ಸಂಪೂರ್ಣ ವಿವರ ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

Shocking Incident : ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್​ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ,

VISTARANEWS.COM


on

Shocking Incident
Koo

ಲಖನೌ : ಖಾಸಗಿ ಆಸ್ಪತ್ರೆಯೊಂದರ ವಾರ್ಡ್ ಬಾಯ್, ಮಹಿಳಾ ರೋಗಿಯನ್ನು ನಗ್ನಗೊಳಿಸಿ ಶಸ್ತ್ರಚಿಕಿತ್ಸೆ ಮಾಡಿದ್ದಲ್ಲದೆ ಅದನ್ನು ವಿಡಿಯೊ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ (Shocking Incident) ನಡೆದಿದೆ. ಈ ಘಟನೆ ಬಗ್ಗೆ ಆಘಾತ ವ್ಯಕ್ತಗೊಂಡಿದೆ. ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಸರ್ಜರಿ ಮಾಡುವ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕ ಜನರು ನೋಡಿದ್ದಾರೆ. ಬಳಿಕ ವಿಷಯ ಆಕ್ರೋಶ ಹುಟ್ಟುಹಾಕಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಹರ್ದಿಯಾ ಮೂಲದ ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್​ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ,

ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದ ನಿರ್ದೇಶಕ ಡಾ.ಸಂಜಯ್ ಕುಮಾರ್ ಸೂಚನೆಯಂತೆ ಶಸ್ತ್ರಚಿಕಿತ್ಸೆ ನಡೆಸಿದ್ದೇನೆ ಎಂದು ವಾರ್ಡ್ ಬಾಯ್ ಹೇಳಿದ್ದಾನೆ. ಸಂಜಯ್ ಗೌತಮ್ ಅವರು ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಆಸ್ಪತ್ರೆಯ ಆಡಳಿತವು ಈ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದೆ. ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ತಂಡವನ್ನು ರಚಿಸಿದೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ತನಿಖೆ ನಡೆಸಲು ವೈದ್ಯಕೀಯ ಅಧಿಕಾರಿಯನ್ನು ಆಸ್ಪತ್ರೆಗೆ ಕಳುಹಿಸಿದ ನಂತರ ಸಮಗ್ರ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ತಪ್ಪಿತಸ್ಥರು ಅವಮಾನಕರ ಕೃತ್ಯಕ್ಕಾಗಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

ಘಟನೆ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ವೈದ್ಯಕೀಯ ತನಿಖೆ ನಡೆಸುತ್ತಿದೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಸ್ವೀಕರಿಸಿದ ನಂತರ ಇತರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಅಡಿಯಲ್ಲಿ ಆರೋಗ್ಯ ಸೌಲಭ್ಯಗಳ ಭಯಾನಕ ಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ. ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೋಗಿಗಳ ಸಾವಿಗೆ ಕಾರಣವಾದ ಇಂತಹ ಅನೇಕ ಘಟನೆಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ. ರಾಜ್ಯ ಸರ್ಕಾರವು ಆರೋಗ್ಯ ಸೌಲಭ್ಯಗಳ ಪರಿಸ್ಥಿತಿಯನ್ನು ಗಮನಿಸಬೇಕು ಎಂದು ಒತ್ತಾಯಿಸಿವೆ.

Continue Reading

ಉದ್ಯೋಗ

ITBP Recruitment 2024: ITBPಯಲ್ಲಿದೆ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗ; 69,100 ರೂ.ವರೆಗೂ ಸಂಬಳ

ITBP Recruitment 2024: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕಿದೆ. ಅದಾಗ್ಯೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

VISTARANEWS.COM


on

ITBP Recruitment 2024
Koo

ಬೆಂಗಳೂರು: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ (ITBP Recruitment 2024) ಕಾನ್ಸ್‌ಟೇಬಲ್ ಹುದ್ದೆಗಳು (Job news) ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 01 ರ ಒಳಗೆ ಅರ್ಜಿ ಸಲ್ಲಿಕೆ (application) ಮಾಡಬೇಕಿದೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನಲ್ಲಿ ಒಟ್ಟಾರೆ 819 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಯ್ಕೆ ಆದವರು 69,100 ರೂ.ವರೆಗೂ ತಿಂಗಳ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ತಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಇನ್ನು ಒಟ್ಟು ಹುದ್ದೆಗಳಲ್ಲಿ 122 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಹಾಗೂ 697 ಹುದ್ದೆಗಳು ಪುರುಷ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಅಲ್ಲದೆ ಜಾತಿವಾರು ಮೀಸಲಾತಿ ಸಹ ಇದೆ.

ವಯಸ್ಸಿನ ಅರ್ಹತೆ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕಿದೆ. ಅದಾಗ್ಯೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ ಎಷ್ಟು?

ಮಹಿಳೆಯರು, ಎಸ್‌ಸಿ, ಎಸ್‌ಟಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡುವ ಹಾಗಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ 100 ರೂ.ಗಳನ್ನು ಪಾವತಿ ಮಾಡಬೇಕಿದೆ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಮೊದಲು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ನಡೆಸಲಾಗುತ್ತದೆ. ನಂತರ ದೈಹಿಕ ಗುಣಮಟ್ಟದ ಪರೀಕ್ಷೆ (PST) ನಡೆಸಲಾಗುತ್ತದೆ. ಇದಾದ ನಂತರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆ ಆದರೆ ಡಾಕ್ಯುಮೆಂಟ್ ಪರಿಶೀಲನೆ ಮಾಡಲಾಗುತ್ತದೆ. ಈ ಹಂತದ ನಂತರ ವಿವರವಾದ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತದೆ. ಬಳಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-09-2024 ಹಾಗೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-ಅಕ್ಟೋಬರ್-2024. ಇನ್ನು ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳು ತಿಂಗಳಿಗೆ 21,700 ರೂ.ಗಳಿಂದ 69,100 ರೂ.ಗಳ ವರೆಗೆ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ. https://recruitment.itbpolice.nic.in/rect/index.php

ಇದನ್ನೂ ಓದಿ: Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

Continue Reading

ಪ್ರಮುಖ ಸುದ್ದಿ

Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

Indian Medical Association : ಎಲ್ಲಾ ಅಗತ್ಯ ಸೇವೆಗಳನ್ನು ನೀಡಲಾಗುವುದು. ಆದರೆ ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ. ಅದೇ ರೀತಿ ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ಆಧುನಿಕ ವೈದ್ಯಕೀಯ ಸೇವೆ ಸಿಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಎಂದು ಐಎಂಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ವೈದ್ಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಇದೇ ವೇಳೆ ಖಂಡಿಸಲಾಗಿದೆ.

VISTARANEWS.COM


on

Indian Medical Association
Koo

ಬೆಂಗಳೂರು : ಆಗಸ್ಟ್ 17 ರ ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ರ ಭಾನುವಾರ ಬೆಳಿಗ್ಗೆ 6 ರವರೆಗೆ 24 ಗಂಟೆಗಳ ಕಾಲ ವೈದ್ಯರು ರಾಷ್ಟ್ರವ್ಯಾಪಿ ಅಗತ್ಯವಲ್ಲದ ಸೇವೆಗಳನ್ನು ನೀಡುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (Indian Medical Association ) ಗುರುವಾರ ಘೋಷಿಸಿದೆ. ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ವಿರೋಧಿಸಿ ವೈದ್ಯರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ಅದಕ್ಕಾಗಿ ಸಾಂಕೇತಿಕವಾಗಿ ಕೆಲವು ಸೇವೆಗಳನ್ನು ನೀಡದಿರಲು ನಿರ್ಧರಿಸಲಾಗಿದೆ ಎಂದು ಐಎಂಎ ಹೇಳಿಕೆಯಲ್ಲಿ ತಿಳಿಸಿದೆ.

ಎಲ್ಲಾ ಅಗತ್ಯ ಸೇವೆಗಳನ್ನು ನೀಡಲಾಗುವುದು. ಆದರೆ ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ. ಅದೇ ರೀತಿ ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ಆಧುನಿಕ ವೈದ್ಯಕೀಯ ಸೇವೆ ಸಿಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಎಂದು ಐಎಂಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ವೈದ್ಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಇದೇ ವೇಳೆ ಖಂಡಿಸಲಾಗಿದೆ.

ಕಳೆದ ವಾರ ತರಬೇತಿ ವೈದ್ಯೆಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕೋಲ್ಕತ್ತಾದ ಆರ್​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಕೆಲವೇ ಗಂಟೆಗಳ ನಂತರ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಗುರುವಾರ ಮುಷ್ಕರ ಆರಂಭಿಸಿತ್ತು. ವೈದ್ಯರ ಸಂಘವು ಮಂಗಳವಾರ ಮುಷ್ಕರ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಎರಡು ದಿನಗಳ ನಂತರ ವೈದ್ಯಕೀಯ ಸಂಘದ ಪ್ರತಿಭಟನೆ ಪ್ರಕಟಗೊಂಡಿದೆ.

ಇದನ್ನೂ ಓದಿ: Physical Abuse : ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ನರ್ಸ್​ ಮೇಲೆ ಅತ್ಯಾಚಾರ ನಡೆಸಿ ಕೊಲೆ

ಆರ್​​ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಮುಷ್ಕರ ಮುಂದುವರಿಸಿದೆ. ಅಪರಿಚಿತ ದುಷ್ಕರ್ಮಿಗಳು ಗುರುವಾರ ಮುಂಜಾನೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ಪ್ರವೇಶಿಸಿ ಆಸ್ಪತ್ರೆಯಲ್ಲಿನ ಕೆಲವು ಭಾಗಗಳನ್ನು ಧ್ವಂಸಗೊಳಿಸಿದ್ದರು. ಅತ್ಯಾಚಾರ ಘಟನೆಯ ಬಳಿಕ ಮಹಿಳೆಯರು ಮಧ್ಯರಾತ್ರಿ ಪ್ರತಿಭಟನೆ ನಡೆಸಿದ ಮಧ್ಯೆ ಈ ದಾಳಿ ನಡೆದಿದೆ.

Continue Reading
Advertisement
Golden Star Ganesh krishnam pranaya sakhi first day collection
ಸ್ಯಾಂಡಲ್ ವುಡ್11 mins ago

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು?

cm medal saleem pasha
ಪ್ರಮುಖ ಸುದ್ದಿ17 mins ago

CM Medal: ಕಳ್ಳತನ ಪ್ರಕರಣದಲ್ಲಿ ಸಸ್ಪೆಂಡ್‌ ಆದ ಮುಖ್ಯ ಪೇದೆಗೆ ಮುಖ್ಯಮಂತ್ರಿಗಳ ಪದಕ! ಇದೇನಿದು ಅಂತಿದಾರೆ ಜನ

Jasprit Bumrah
ಪ್ರಮುಖ ಸುದ್ದಿ53 mins ago

Jasprit Bumrah : ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಪಂದ್ಯಕ್ಕೂ ಜಸ್​ಪ್ರಿತ್​ ಬುಮ್ರಾ ಅಲಭ್ಯ?

Duniya Vijay entry to kollywood lokesh Kankaraj director
ಸ್ಯಾಂಡಲ್ ವುಡ್55 mins ago

Duniya Vijay: ತೆಲುಗು ಬಳಿಕ ಕಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ಬ್ಲಾಕ್ ಕೋಬ್ರಾ; ನಿರ್ದೇಶಕ ಯಾರು?

PR Sreejesh
ಪ್ರಮುಖ ಸುದ್ದಿ1 hour ago

PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

Anoop Seelin Preethi Anno Dyavru Video Song Pramod Maravanthe
ಸ್ಯಾಂಡಲ್ ವುಡ್1 hour ago

Anoop Seelin: ‘ಪ್ರೀತಿ ಅನ್ನೊ ದ್ಯಾವ್ರು’ ಹಾಡಿದ ಅನೂಪ್ ಸೀಳಿನ್; ಮ್ಯೂಸಿಕ್‌ ಪ್ರಿಯರಿಂದ ಸಖತ್‌ ರೆಸ್ಪಾನ್ಸ್‌!

dcm dk shivakumar
ಪ್ರಮುಖ ಸುದ್ದಿ2 hours ago

DK Shivakumar: ದೇವಸ್ಥಾನಕ್ಕೆ ಬಂದು ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಘೋಷಿಸಿದ ಡಿಕೆ ಶಿವಕುಮಾರ್

Virat Kohli
ಪ್ರಮುಖ ಸುದ್ದಿ2 hours ago

Virat Kohli : ವಿರಾಟ್​​ ಮಾಲೀಕತ್ವದ ರೆಸ್ಟೋರೆಂಟ್​ಗೆ ಹೋದ ಡೂಪ್ಲಿಕೇಟ್​ ಕೊಹ್ಲಿ; ಗ್ರಾಹಕರು ಫುಲ್ ಕನ್​​ಫ್ಯೂಸ್​! ಇಲ್ಲಿದೆ ವಿಡಿಯೊ

Shocking Incident
ಪ್ರಮುಖ ಸುದ್ದಿ2 hours ago

Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

teacher murder case
ಕೋಲಾರ2 hours ago

Murder Case: ಶಿಕ್ಷಕಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ, ಹಂತಕರಿಂದ ಪುತ್ರಿ ಪಾರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌