Urban cooperative banks: RBI's new rule for the reform of urban cooperative banks, what is the effect?Urban cooperative banks : ನಗರ ಸಹಕಾರಿ ಬ್ಯಾಂಕ್‌ಗಳ ಸುಧಾರಣೆಗೆ ಆರ್‌ಬಿಐ ಹೊಸ ನಿಯಮ ಜಾರಿ, ಪರಿಣಾಮವೇನು? - Vistara News

ಪ್ರಮುಖ ಸುದ್ದಿ

Urban cooperative banks : ನಗರ ಸಹಕಾರಿ ಬ್ಯಾಂಕ್‌ಗಳ ಸುಧಾರಣೆಗೆ ಆರ್‌ಬಿಐ ಹೊಸ ನಿಯಮ ಜಾರಿ, ಪರಿಣಾಮವೇನು?

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ನಗರ ಸಹಕಾರಿ ಬ್ಯಾಂಕ್‌ಗಳ (Urban cooperative banks) ಸುಧಾರಣೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇದರ ಮಹತ್ವವೇನು? ಇಲ್ಲಿದೆ ವಿವರ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೋಮವಾರ ನಗರ ಸಹಕಾರಿ ಬ್ಯಾಂಕ್‌ಗಳ ಸುಧಾರಣೆಗೆ ಮಹತ್ವದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ( Urban cooperative banks ) ನಗರ ಸಹಕಾರಿ ಬ್ಯಾಂಕ್‌ಗಳ ಸ್ಟ್ಯಾಂಡರ್ಡ್‌ ಅಸೆಟ್‌ಗಳಿಗೆ ಪ್ರಾವಿಶನಿಂಗ್‌ ಕುರಿತ ಹೊಸ ನಿಯಮಾಳಿಗಳನ್ನು (ಮುನ್ನೇರ್ಪಾಟು) ಜಾರಿಗೊಳಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರ್‌ಬಿಐ, ನಗರ ಸಹಕಾರಿ ಬ್ಯಾಂಕ್‌ಗಳನ್ನು ನಿಯಂತ್ರಕ ಉದ್ದೇಶಗಳಿಗೆ 1,2,3 ಮತ್ತು 4 ಎಂದು ನಾಲ್ಕು ಸ್ತರಗಳಲ್ಲಿ ವರ್ಗೀಕರಿಸಿತ್ತು. ಇದಕ್ಕೂ ಮುನ್ನ 1 ಮತ್ತು 2 ಸ್ತರಗಳು ಮಾತ್ರ ಇತ್ತು.

ಇದೀಗ ಎರಡನೇ ಹಂತದಲ್ಲಿ ನಗರ ಸಹಕಾರಿ ಬ್ಯಾಂಕ್‌ಗಳ ಪ್ರಾವಿಶನ್‌ ನಿಯಮಗಳನ್ನು ಸುಧಾರಿಸಿದೆ. ಹಾಗಾದರೆ ಸ್ಟ್ಯಾಂಡರ್ಡ್‌ ಅಸೆಟ್‌ಗಳಲ್ಲಿ ಯಾವುದು ಬರುತ್ತದೆ? ಪ್ರಾವಿಶನಿಂಗ್‌ ಎಂದರೇನು? ನೋಡೋಣ.

ಬ್ಯಾಂಕ್‌ಗಳಲ್ಲಿ ಪ್ರಾವಿಶನಿಂಗ್‌ ಎಂದರೆ ಸಾಲ ಮರು ಪಾವತಿಯಾಗುವುದು ಕಷ್ಟವಾಗುತ್ತಿದ್ದು, ಬ್ಯಾಂಕಿಗೆ ನಷ್ಟವಾಗಬಹುದು ಎಂದಿದ್ದರೆ, ಅಂಥ ಸಂಭವನೀಯ ನಷ್ಟಕ್ಕೆ ಪ್ರತಿಯಾಗಿ ನಿರ್ದಿಷ್ಟ ಮೊತ್ತವನ್ನು ಲಾಭದಿಂದ ತೆಗೆದು ಪ್ರತ್ಯೇಕವಾಗಿ ಇಡುವುದು. ಇದನ್ನು ಪ್ರಾವಿಶನಿಂಗ್‌ ( ಮುನ್ನೇರ್ಪಾಟು) ಎನ್ನುತ್ತಾರೆ. ಇದರಿಂದ ಬ್ಯಾಂಕಿನ ಬ್ಯಾಲೆನ್ಸ್‌ ಶೀಟ್‌ ಸ್ವಚ್ಛವಾಗುತ್ತದೆ. ಬ್ಯಾಂಕಿನ ಆರ್ಥಿಕ ಆರೋಗ್ಯ ಚೆನ್ನಾಗಿರುತ್ತದೆ. ತೆರಿಗೆ ಸಂಬಂಧಿಸಿಯೂ ಬ್ಯಾಂಕಿಗೆ ಅನುಕೂಲವಾಗತ್ತದೆ.

cash

ಕೃಷಿ ಮತ್ತು ಸಣ್ಣ ಉದ್ದಿಮೆಗೆ ನೀಡುವ ಸಾಲಗಳು ಸ್ಟ್ಯಾಂಡರ್ಡ್‌ ಅಸೆಟ್‌ ವರ್ಗಕ್ಕೆ ಬರುತ್ತದೆ. ಇದಕ್ಕೆ ಫಂಡ್‌ನ 0.25% ಮೊತ್ತವನ್ನು ಪ್ರಾವಿಶನಿಂಗ್‌ ಇಡಲು ಆರ್‌ಬಿಐ ನಗರ ಸಹಕಾರಿ ಬ್ಯಾಂಕ್‌ಗಳಿಗೆ ಸೂಚಿಸಿದೆ.

ಕಮರ್ಶಿಯಲ್‌ ರಿಯಲ್‌ ಎಸ್ಟೇಟ್‌ (commercial real estate) ವಲಯಕ್ಕೆ ನೀಡುವ ಮುಂಗಡದಲ್ಲಿ ಫಂಡ್‌ನ 1% ಮೊತ್ತವನ್ನು ಪ್ರಾವಿಶನ್‌ ಇಡಲು ಸೂಚಿಸಲಾಗಿದೆ. ಕಮರ್ಶಿಯಲ್‌ ರಿಯಲ್‌ ಎಸ್ಟೇಟ್-ರೆಸಿಡೆನ್ಷಿಯಲ್‌ ಹೌಸಿಂಗ್‌ ಸೆಕ್ಟರ್‌ ಆಗಿದ್ದರೆ ಅನುಕ್ರಮವಾಗಿ 0.75% ಮತ್ತು 0.4% ಪ್ರಾವಿಶನ್‌ಗೆ ಸೂಚಿಸಲಾಗಿದೆ.

ಆರ್‌ಬಿಐ 100 ಕೋಟಿ ರೂ. ತನಕ ಠೇವಣಿ ಇರುವ ನಗರ ಸಹಕಾರಿ ಬ್ಯಾಂಕ್‌ಗಳನ್ನು ಮೊದಲನೇ ಸ್ತರದ (Tier 1) ನಗರ ಸಹಕಾರಿ ಬ್ಯಾಂಕ್‌ಗಳೆಂದು ವರ್ಗೀಕರಿಸಿದೆ. ಎರಡನೇ ಸ್ತರದಲ್ಲಿ 100-1000 ಕೋಟಿ ರೂ. ಠೇವಣಿ, ಮೂರನೇ ಸ್ತರದಲ್ಲಿ 1000-10000 ಕೋಟಿ ರೂ, ಹಾಗೂ ನಾಲ್ಕನೇ ಸ್ತರದಲ್ಲಿ 10,000 ಕೋಟಿ ರೂ.ಗಿಂತ ಮೇಲ್ಪಟ್ಟ ಠೇವಣಿಗಳು ಇರುವ ಬ್ಯಾಂಕ್‌ಗಳನ್ನು ವರ್ಗೀಕರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Lok Sabha Election: ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಶನಿವಾರ ಸಂಜೆಯೇ ಮತಗಟ್ಟೆ ಸಮೀಕ್ಷೆಗಳ ವರದಿಗಳು ಪ್ರಕಟವಾಗುವ ಕಾರಣ ಸಂಜೆಯೇ ಚುನಾವಣೆ ಫಲಿತಾಂಶದ ಅಂದಾಜು ಸಿಗಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ. ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Continue Reading

ಭವಿಷ್ಯ

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ನವಮಿ / ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ.ಅನಿರೀಕ್ಷಿತ ಲಾಭದ ಮೂಲಕ ಆರ್ಥಿಕ ಬಲಗಳು ಸುಧಾರಿಸುತ್ತವೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಮೇಷ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (1-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ:ನವಮಿ 07:23 / ದಶಮಿ 29:03 ವಾರ: ಶನಿವಾರ
ನಕ್ಷತ್ರ: ಉತ್ತರ ಭಾದ್ರಪದ 27:15 ಯೋಗ: ಪ್ರೀತಿ 15:08
ಕರಣ: ಗರಜ 07:23 /ವಣಿಜ 18:14 ಅಮೃತ ಕಾಲ: ರಾತ್ರಿ 10:46 ರಿಂದ 12:16 ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:43

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ. ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ. ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ವಿಶೇಷ ಅನುಕೂಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಜೀವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ. ಹತಾಶೆಯ ಭಾವನೆ ನಿಮ್ಮನ್ನು ಆವರಿಸಲು ಬಿಡಬೇಡಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ:ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ.ಅನಿರೀಕ್ಷಿತ ಲಾಭದ ಮೂಲಕ ಆರ್ಥಿಕ ಬಲಗಳು ಸುಧಾರಿಸುತ್ತವೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಧರ್ಮ ಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳವ ಸಾಧ್ಯತೆ ಇದೆ. ಅತಿಯಾದ ದ್ವೇಷದ ಭಾವನೆಯಿಂದ ನಿಮ್ಮ ಮನಸ್ಸುನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಇದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸುವುದಷ್ಟೇ ಅಲ್ಲದೇ ನಿಮ್ಮ ತಪ್ಪು ತಿಳುವಳಿಕೆಗಳನ್ನೂ ಹೋಗಲಾಡಿಸುತ್ತದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ದಿನದ ಮಟ್ಟಿಗೆ ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸ್ನೇಹಿತರ ಜೊತೆಗಿನ ನಿಮ್ಮ ಅಪಾರ್ಥ ಕೆಲವು ಅಹಿತಕರ ಪ್ರತಿಕ್ರಿಯೆಗಳನ್ನು ಉಂಟುಮಾಡಬಹುದು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಯಮದಿಂದ ವರ್ತಿಸಿ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರಲಿದೆ. ಆರ್ಥಿವಾಗಿ ಉತ್ತಮ ಫಲ ಇರಲಿದೆ. ಆರೋಗ್ಯದ ಕುರಿತು ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಪ್ರಮುಖ ಕೆಲಸಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಅನೇಕ ಒತ್ತಡದಿಂದ ಹೊರಬರವಿರಿ. ಹಣಕಾಸಿನಲ್ಲಿ ಸುಧಾರಣೆ, ದೀರ್ಘಕಾಲದ ಬಾಕಿ ಮರುಪಾವತಿ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ದಿನದ ಕೊನೆಯಲ್ಲಿ ಮನಸ್ತಾಪ ಆದಷ್ಟು ಮಾತಿಗೆ ವಿರಾಮವಿರಲಿ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಚಿಕ್ಕ ಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗಿಗಳಿಗೆ ಆಲಸ್ಯದಿಂದಾಗಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಸೃಜನಶೀಲ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ.ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು ಮತ್ತು ನೀವು ಹಣದ ಲಾಭವನ್ನು ಪಡೆಯಬಹುದು.ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಇಮ್ಮಡಿ ಆಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ಕೆಲವು ಊಹೆಗಳು ಲಾಭ ತರುತ್ತವೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ವಿದೇಶ

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Anti Islam Rally: ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಇನ್ನು, ರ‍್ಯಾಲಿ ನಡೆಯುವಾಗಲೇ ದುಷ್ಕರ್ಮಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದಾನೆ.

VISTARANEWS.COM


on

Anti Islam Rally
Koo

ಬರ್ಲಿನ್:‌ ಜರ್ಮನಿಯ ಮ್ಯಾನ್‌ಹೆಮ್‌ನಲ್ಲಿ ನಡೆದ ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ (Anti Islam Rally) ದುಷ್ಕರ್ಮಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ರ‍್ಯಾಲಿಯ ಮಧ್ಯೆ ಏಕಾಏಕಿ ನುಗ್ಗಿ, ಚಾಕು ಇರಿದ ಕಾರಣ ಒಬ್ಬ ಪೊಲೀಸ್‌ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ಮಾರ್ಕ್ಟ್‌ಪ್ಲಾಟ್ಜ್‌ ಪ್ರದೇಶದ ಬಳಿ ಇಸ್ಲಾಂಅನ್ನು ವಿರೋಧಿಸಿ ರ‍್ಯಾಲಿ ನಡೆಯುತ್ತಿರುವಾಗ ದುಷ್ಕರ್ಮಿಯು ದಾಳಿ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ವ್ಯಕ್ತಿಯೊಬ್ಬರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುವವರಿದ್ದರು. ಇಸ್ಲಾಮಿಕ್‌ ಹಿಂಸಾಚಾರ ಖಂಡಿಸಿ ಅವರು ಭಾಷಣ ಮಾಡುವವರಿದ್ದರು. ಆದರೆ, ಇದೇ ವೇಳೆ ವ್ಯಕ್ತಿಯು ದಾಳಿ ಮಾಡಿದ್ದಾನೆ. ಆತನನ್ನು ಹಿಡಿಯಲು ಹೋದ ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಇನ್ನು, ಮತ್ತೊಬ್ಬ ಪೊಲೀಸ್‌ ಅಧಿಕಾರಿಯು ದುಷ್ಕರ್ಮಿಯ ಮೇಲೆ ಗುಂಡು ಹಾರಿಸುವ ಮೂಲಕ ಆತನನ್ನು ಹಿಡಿದಿದ್ದಾರೆ. ಪೊಲೀಸ್‌ ಗುಂಡಿನ ದಾಳಿಗೆ ಗಾಯಗೊಂಡಿರುವ ದುಷ್ಕರ್ಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

“ಇಸ್ಲಾಂ ವಿರೋಧಿ ರ‍್ಯಾಲಿಯ ವೇಳೆ ವ್ಯಕ್ತಿಯೊಬ್ಬ ಪೊಲೀಸ್‌ ಅಧಿಕಾರಿ ಸೇರಿ ಹಲವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಹಾಗೊಂದು ವೇಳೆ, ದಾಳಿಯ ಹಿಂದೆ ಇಸ್ಲಾಮಿಕ್‌ ಕೈವಾಡ ಇದೆ ಎಂಬುದು ಗೊತ್ತಾದರೆ ದೇಶದಲ್ಲಿ ಮತ್ತೊಂದು ಇಸ್ಲಾಮಿಕ್‌ ಹಿಂಸಾಚಾರ ನಡೆಯಲಿದೆ. ಇಂತಹ ಹಿಂಸಾಚಾರದ ಬಗ್ಗೆ ನಾವು ಮೊದಲಿನಿಂದಲೂ ಎಚ್ಚರಿಕೆ ನೀಡುತ್ತಲೇ ಬಂದಿದ್ದೇವೆ” ಎಂಬುದಾಗಿ ಜರ್ಮನಿ ಗೃಹ ಸಚಿವ ನ್ಯಾನ್ಸಿ ಫೇಸರ್‌ ಪ್ರಕಟಣೆ ಹೊರಡಿಸಿದ್ದಾರೆ.

ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಪೂರ್ವ ಜರ್ಮನಿಯಲ್ಲಿ ಇಸ್ಲಾಂ ಧರ್ಮೀಯರ ಉಪಟಳ ಖಂಡಿಸಿ ಪೆಜಿಡಾ (PEGIDA) ಎಂಬ ಸಂಘಟನೆಯು ನಿಯಮಿತವಾಗಿ ಇಸ್ಲಾಂ ವಿರುದ್ಧ ರ‍್ಯಾಲಿಗಳನ್ನು ನಡೆಸುತ್ತಲೇ ಇರುತ್ತದೆ. ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಈ ಸಂಘಟನೆಯ ಸದಸ್ಯರೂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Continue Reading

ದೇಶ

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Modi Medidation: Modi Meditation: ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಸುಮಾರು 45 ಗಂಟೆಗಳವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ. ಇದೇ ವೇಳೆ ಅವರು ಎರಡು ದಿನವೂ ಆಹಾರ ಸೇವಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಧ್ಯಾನ ಮಾಡುತ್ತಿರುವ ಫೋಟೊಗಳು ಇಲ್ಲಿವೆ.

VISTARANEWS.COM


on

Modi Meditation
Koo

ಕನ್ಯಾಕುಮಾರಿ: ಲೋಕಸಭೆ ಚುನಾವಣೆ (Lok Sabha Election 2024), ಅಬ್ಬರದ ಪ್ರಚಾರ, ಸಾಲು ಸಾಲು ರ‍್ಯಾಲಿಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) ಗುರುವಾರದಿಂದ (ಮೇ 30) 45 ಗಂಟೆಗಳ ಧ್ಯಾನ (Modi Meditation) ಆರಂಭಿಸಿದ್ದಾರೆ. ಜೂನ್‌ 1ರವರೆಗೆ ಮೋದಿ ಅವರು ಧ್ಯಾನಸ್ಥರಾಗಿಯೇ ಇರಲಿದ್ದಾರೆ. ಮೋದಿ ಅವರು ಗಾಢವಾಗಿ ಧ್ಯಾನ ಮಾಡುತ್ತಿರುವ ಫೋಟೊಗಳು ಇಲ್ಲಿವೆ.

ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡುತ್ತಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು.
ನರೇಂದ್ರ ಮೋದಿ ಧ್ಯಾನದ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತ ಭದ್ರತೆಗಾಗಿ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Continue Reading
Advertisement
Cardamom Benefits
ಆರೋಗ್ಯ6 mins ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ36 mins ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ1 hour ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ2 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ2 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ7 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ8 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು9 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ9 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ10 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌