Jagadish Shettar: ಬಿಜೆಪಿಯ ಏಳು ಜನ ಮಂತ್ರಿಗಳ ಸಿಡಿ ಇವೆ; ಸ್ಟೇ ತಂದಿದ್ದು ಯಾಕೆಂದು ಅವರನ್ನೇ ಕೇಳಿ ಎಂದ ಜಗದೀಶ್‌ ಶೆಟ್ಟರ್‌ - Vistara News

ಕರ್ನಾಟಕ

Jagadish Shettar: ಬಿಜೆಪಿಯ ಏಳು ಜನ ಮಂತ್ರಿಗಳ ಸಿಡಿ ಇವೆ; ಸ್ಟೇ ತಂದಿದ್ದು ಯಾಕೆಂದು ಅವರನ್ನೇ ಕೇಳಿ ಎಂದ ಜಗದೀಶ್‌ ಶೆಟ್ಟರ್‌

Assembly Election: ಬಿಜೆಪಿಯಲ್ಲಿನ ಏಳು ಸಚಿವರಿಗೆ ಸಂಬಂಧಪಟ್ಟ ಸಿಡಿಗಳಿದ್ದು, ಅವುಗಳನ್ನು ಬಹಿರಂಗಪಡಿಸದಂತೆ ಅವರೆಲ್ಲರೂ ಕೋರ್ಟ್‌ನಲ್ಲಿ ಸ್ಟೇ ತಂದಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಆ ಸಿಡಿ ಏನೆಂಬುದನ್ನು ಅವರ ಬಳಿಯೇ ಕೇಳಬೇಕು ಎಂದೂ ಹೇಳಿದ್ದಾರೆ.

VISTARANEWS.COM


on

Karnataka Is Not Gujarat, Hubballi Is Not Ahmedabad; Jagadish Shettar Taunts BJP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ:‌ ಬಿಜೆಪಿಯ ಏಳು ಜನ ಮಂತ್ರಿಗಳ ಸಿಡಿ (CD) ಇವೆ. ಅವುಗಳನ್ನು ಬಹಿರಂಗಪಡಿಸದಂತೆ ಆ ಎಲ್ಲ ಸಚಿವರು ಕೋರ್ಟ್‌ನಿಂದ ಸ್ಟೇ ತಂದಿದ್ದಾರೆ. ಏಕೆ ಎಂಬ ಬಗ್ಗೆ ಅವರೇ ಉತ್ತರ ನೀಡಬೇಕು. ಅವರಿಗೆ ಯಾರು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar) ಹೇಳಿದರು.

ಹುಬ್ಬಳ್ಳಿಯಲ್ಲಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಡಿ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನೂ ಹೇಳುವುದಿಲ್ಲ. ಅದನ್ನು ಅವರ ಬಳಿಯೇ ಕೇಳಿಕೊಳ್ಳಬೇಕು ಎಂದು ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಬಿಟ್ಟು ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ಆ ಪಕ್ಷದಲ್ಲಿದ್ದವರೇ ನನಗೆ ಈಗ ಹೇಳುತ್ತಿದ್ದಾರೆ. ಕಾಂಗ್ರೆಸ್ ಸೇರಿದ್ದು ಉತ್ತಮ ನಿರ್ಧಾರ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಈ ಕ್ಷಣದವರೆಗೆ ನನಗೆ ಬೇಸರವಿಲ್ಲ ಎಂದು ಶೆಟ್ಟರ್‌ ಹೇಳಿದರು.

ಇದನ್ನೂ ಓದಿ: Karnataka Election: ನಮ್ಮಲ್ಲಿ ದುಡ್ಡಿಲ್ಲ, ಜೆಡಿಎಸ್ ಪ್ರಚಾರಕ್ಕೆ ಹೊರಗಿನ ಯಾವ ನಾಯಕರೂ ಬರೋದಿಲ್ಲ: ಕುಮಾರಸ್ವಾಮಿ

ಕಳೆದ ಎರಡು-ಮೂರು ವರ್ಷಗಳಿಂದ ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ. ಲಿಂಗಾಯತರ ನಡುವೆ ಒಡಕು ಮೂಡಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಹೀಗಾಗಿ ಯಡಿಯೂರಪ್ಪ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುತ್ತಿದ್ದಾರೆ ಎಂದು ಶೆಟ್ಟರ್‌ ಕಿಡಿಕಾರಿದರು.

ಯಡಿಯೂರಪ್ಪ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುತ್ತಿರುವ ಬಿ.ಎಲ್.‌ ಸಂತೋಷ್:‌ ಶೆಟ್ಟರ್‌ ಕಿಡಿ
ನನ್ನ ವಿರುದ್ಧ ಬಿಜೆಪಿಯಲ್ಲಿ ಕುತಂತ್ರ, ಷಡ್ಯಂತ್ರ ನಡೆದಿತ್ತು. ನಾನು ನೇರವಾಗಿ ಟೀಕಿಸಿದ್ದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ಮೇಲಾಗಿತ್ತು. ಆದರೆ, ಅದಕ್ಕೆ ಸಂತೋಷ ಉತ್ತರಿಸಲಿಲ್ಲ. ಬದಲಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುವ ಕೆಲಸವನ್ನು ಮಾಡಿದ್ದಾರೆ. ಅವರು ಏನೇ ಮಾಡಿದರೂ ಈ ಚುನಾವಣೆಯಲ್ಲಿ (Karnataka Election 2023) ಗೆಲುವು ನನ್ನದೇ ಎಂದು ಮಾಜಿ ಮುಖ್ಯಮಂತ್ರಿ, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಕಿಡಿಕಾರಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯ ಬಿ.ಎಲ್.‌ ಸಂತೋಷ್‌ ಮೇಲೆ ಪುನಃ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆರೋಪಗಳಿಗೆ ಏನೂ ಉತ್ತರ ನೀಡದೆ, ಈಗ ಯಡಿಯೂರಪ್ಪ ಮೂಲಕ ತಮ್ಮ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹೀಗೆ ಎಲ್ಲರೂ ಸೇರಿ ನನ್ನನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಅಭಿಯಾನವನ್ನು ಬಿಜೆಪಿ ನಡೆಸುತ್ತಿದೆ. ನನ್ನಂತಹ ಬಡಪಾಯಿ ಮೇಲೆ ಯಾಕೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: Karnataka Election 2023: ಕುಣಿಯುತ್ತಿದೆ ಕುರುಡು ಕಾಂಚಾಣ; 265 ಕೋಟಿ ರೂ. ಮೌಲ್ಯದ ನಗದು, ಆಭರಣ ಜಪ್ತಿ

ನನ್ನ ಮೇಲೆ ಇವರೆಲ್ಲರೂ ಎಷ್ಟು ವಾಗ್ದಾಳಿ ನಡೆಸುತ್ತಾರೋ, ಟೀಕೆ ಮಾಡುತ್ತಾರೋ, ಅಷ್ಟೂ ನನಗೆ ಲಾಭವಾಗಲಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಶೆಟ್ಟರ್‌ ಹೇಳಿದರು.

ಕೆಜೆಪಿ‌ ಕಟ್ಟುವಾಗ ಐಡಿಯಲಾಜಿ ಎಲ್ಲಿ ಹೋಗಿತ್ತು?

ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ವಿಧಾನ ಪರಿಷತ್‌ ಸದಸ್ಯರಾಗಿದ್ದ ಆಯನೂರು ಮಂಜುನಾಥ, ಅರಸೀಕೆರೆ ಟಿಕೆಟ್‌ ಆಕಾಂಕ್ಷಿ ಎನ್.ಆರ್. ಸಂತೋಷ ಸೇರಿದಂತೆ ಎಲ್ಲರೂ ಪಕ್ಷ ತೊರೆದಿದ್ದಾರೆ. ಆದರೆ, ನಾನು ಪಕ್ಷ ತೊರೆದಿದ್ದಕ್ಕೆ ದೊಡ್ಡ ಅಪರಾಧ ಮಾಡಿದವನಂತೆ ನನ್ನ ವಿರುದ್ಧ ಮುಗಿಬಿದ್ದಿದ್ದಾರೆ. ಯಡಿಯೂರಪ್ಪ ಕೆಜೆಪಿ‌ ಕಟ್ಟುವಾಗ ಐಡಿಯಲಾಜಿ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದ ಶೆಟ್ಟರ್‌, ಬಿಜೆಪಿ ಪಕ್ಷ ದ್ರೋಹದ ಕೆಲಸ ಮಾಡಿಲ್ಲ. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಪಕ್ಷದಲ್ಲಿ ನನ್ನ ವಿರುದ್ಧ ಕುತಂತ್ರ, ಷಡ್ಯಂತ್ರ ನಡೆದಿದೆ ಎಂದು ಗುಡುಗಿದರು.

ಇದನ್ನೂ ಓದಿ: Karnataka Election: ಹೊನ್ನಾಳಿಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ; ರೇಣುಕಾಚಾರ್ಯ ಜತೆ ನಿಂತ ಸಂಸದ ಸಿದ್ದೇಶ್ವರ್‌

ಬಿಎಸ್‌ವೈ ಟೀಕೆ ನನಗೆ ಆಶೀರ್ವಾದ

ಯಡಿಯೂರಪ್ಪನವರ ಟೀಕೆಯನ್ನು ಆಶೀರ್ವಾದ ಎಂದು ತೆಗೆದುಕೊಂಡಿದ್ದೇನೆ. ನನಗೆ ಟಿಕೆಟ್ ಕೊಡಿಸುವುದಾಗಿ ಹೇಳಿದ್ದ ಯಡಿಯೂರಪ್ಪ ಈಗ ಅಸಹಾಯಕರಾಗಿದ್ದಾರೆ. ಕೆಜೆಪಿ ಕಟ್ಟಿ ಶಿಗ್ಗಾಂವಿಗೆ ಪ್ರಚಾರಕ್ಕೆ‌ ಬಂದಿದ್ದ ಅವರು ಆಗ ಇದೇ ಬಸವರಾಜ ಬೊಮ್ಮಾಯಿ‌ ಅವರನ್ನು ಬಾಯಿಗೆ ಬಂದಂತೆ ಬೈದಿದ್ದರು. ಆದರೆ, ಬೊಮ್ಮಾಯಿ ಬಿಜೆಪಿಯಿಂದ ಗೆದ್ದು ಬಂದಿದ್ದರು ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Janardhan Reddy: ಮಡದಿಗಾಗಿ ಮರವೇರಿ ಮಾವು ಕಿತ್ತುಕೊಟ್ಟ ರೆಡ್ಡಿ: ವಿಡಿಯೊ ವೈರಲ್

Janardhan Reddy: ಮಡದಿಯ ಮಾವಿನ ಕಾಯಿ ತಿನ್ನಬೇಕೆಂಬ ಮನದಾಸೆಯನ್ನು ತೀರಿಸಲು ಶಾಸಕ ಜಿ. ಜನಾರ್ದನರೆಡ್ಡಿ ಅವರು, ಹರಸಾಹಸಪಟ್ಟು ಮಾವಿನ ಮರವೇರಿ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಈ ವಿಡಿಯೊ ಸದ್ಯ ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

Janardhan Reddy
Koo

ಗಂಗಾವತಿ: ಮಾವು ಎಂದರೆ ಯಾರಿಗೆ ತಾನೆ ಇಷ್ಟವಿರದು ಹೇಳಿ?… ಮಾವಿನ ತೋಟದಲ್ಲಿ ಸಂಚರಿಸುವಾಗ ಹೇಳಿ-ಕೇಳಿ ಮುದ್ದಿನ ಮಡದಿ ಮಾವು ಬೇಕೆಂದು ಪಟ್ಟು ಹಿಡಿದಾಗ ಆಕೆಯ ಆಸೆ ಪೂರೈಸಲು ಎಂಥವರಾದರೂ ಹರಸಾಹಸ ಮಾಡಲೇಬೇಕು. ಇದಕ್ಕೆ ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ (Janardhan Reddy) ಹೊರತಾಗಿಲ್ಲ. ಮಡದಿಯ ಮಾವಿನ ಕಾಯಿ (Mango) ತಿನ್ನಬೇಕೆಂಬ ಮನದಾಸೆಯನ್ನು ತೀರಿಸಲು ಶಾಸಕ ರೆಡ್ಡಿ, ಹರಸಾಹಸಪಟ್ಟು ಮಾವಿನ ಮರವೇರಿ ಕಾಯಿಯನ್ನು ಕಿತ್ತು ಕೊಡುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್ ಆಗಿದೆ.

ಶಾಸಕ ಜಿ. ಜನಾರ್ದನರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರು, ತಮ್ಮ ಮಾವಿನ ತೋಟದಲ್ಲಿ ವಿಹರಿಸುತ್ತಿರುವಾಗ ರೆಡ್ಡಿ, ಮಾವಿನ ಮರವನ್ನು ಪ್ರಯಾಸಪಟ್ಟು ಏರಿ ಕಾಯಿಯೊಂದನ್ನು ಕಿತ್ತು ಪತ್ನಿಯ ಕೈಗಿಡುತ್ತಾರೆ.
ಮರದ ಟೊಂಗೆಗಳ ಮೇಲೆ ಶಾಸಕ ರೆಡ್ಡಿ ಜಾಗ್ರತೆಯಿಂದ ಹೆಜ್ಜೆ ಇಡುತ್ತಾ, ಬ್ಯಾಲೆನ್ಸ್ ಮಾಡಿ ಕಾಯಿ ಕಿತ್ತು, ಮರಳಿ ಮರ ಇಳಿಯುವಾಗ ತಮ್ಮ ಬಾಲ್ಯವನ್ನು ನೆನೆಸಿಕೊಂಡು ಇಳಿಯಲು ಪ್ರಯಾಸ ಪಡುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

ಸದ್ಯ ಮಾವಿನ ಹಣ್ಣಿನ ಸೀಸನ್‌ ಆಗಿರುವುದರಿಂದ ತರಹೇವಾರಿ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಈ ನಡುವೆ ಜನಾರ್ದನ ರೆಡ್ಡಿ ಅವರು ಮಡದಿಗಾಗಿ ಮಾವಿನ ಕಾಯಿ ಕಿತ್ತುಕೊಟ್ಟಿರುವ ಹಳೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಇದು 2019ರಲ್ಲಿ ರೆಡ್ಡಿ ಅವರ ಮಾವಿನ ತೋಟದಲ್ಲಿ ತೆಗೆದಿರುವ ವಿಡಿಯೊ ಎನ್ನಲಾಗಿದೆ.

Continue Reading

ಕರ್ನಾಟಕ

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Rameshwaram Cafe Blast: ಕರ್ನಾಟಕ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಇದರಲ್ಲಿ ಹುಬ್ಬಳ್ಳಿಯ ಗೌಸಿಯಾ ಟೌನ್‌ನ ನಿವಾಸಿ ಕೂಡ ಸೇರಿದ್ದಾನೆ.

VISTARANEWS.COM


on

Rameshwaram Cafe Blast
Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಈ ಪೈಕಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯೆಬ್‌ ಅಬ್ದುಲ್ ಮಿರ್ಜಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಹುಬ್ಬಳ್ಳಿಯ ಗೌಸಿಯಾ ಟೌನ್‌ನಲ್ಲಿ ವಾಸವಿದ್ದ ಶೋಯೆಬ್‌ ಅಬ್ದುಲ್ ಮಿರ್ಜಾನನ್ನು ವಶಕ್ಕೆ ಪಡೆದಿದ್ದು, ಈತ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ | Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

ಏಪ್ರಿಲ್ 12ರಂದು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದ ಎನ್‌ಐಎ

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

Continue Reading

ರಾಜಕೀಯ

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Phone tapping: ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Phone tapping case and R Ashok demands for CBI investigation
Koo

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು (Phone tapping) ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ. ಅವರು ತಪ್ಪು ಮಾಡಿಲ್ಲ ಎಂದಾದರೆ ಕೂಡಲೇ ಸಿಬಿಐಗೆ ತನಿಖೆ ಹೊಣೆಯನ್ನು ಒಪ್ಪಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಸವಾಲು ಹಾಕಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌. ಅಶೋಕ್, ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.

ಸರ್ಕಾರ ಮಾಡಿಲ್ಲವಾದರೆ ತನಿಖೆಗೆ ಕೊಡಲಿ

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್‌ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಆರ್‌. ಅಶೋಕ್ ಒತ್ತಾಯಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಈ ಕ್ಷೇತ್ರಗಳ ಮತದಾರರನ್ನು ಗುರುತಿಸಿ ಅವರ ಮನವೊಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್‌ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್‌ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಕೂಡಲೇ ರಾಜೀನಾಮೆ ಕೊಡಬೇಕು. ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ ಎಂದು ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ಜೈಲಿನಲ್ಲಿ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಜೀವ ಭಯ ಇದೆ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಏನು ಕಾರಣ ಎಂದೂ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜೇಗೌಡ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇರಬಹುದು. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನೆಲೆಯನ್ನು ನೋಡಿದರೆ ನಿಜ ಇರಬಹುದು. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು ಎಂದು ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡರು.

ಡಿಕೆಶಿ ವಜಾಕ್ಕೆ ಆಗ್ರಹ

ಆಡಿಯೊ ಸಂಭಾಷಣೆಯಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೊಗಳನ್ನು ತಂದು ಕೊಟ್ಟಿದ್ದೇ ಡಿಕೆ ಶಿವಕುಮಾರ್‌ಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.

ದೊಡ್ಡ ಬೆಲೆ ತೆರಬೇಕಾದೀತು ಎಚ್ಚರ

ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಒಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದರು.

ದೇವೇಗೌಡರ ಕುಟುಂಬ ನಿರ್ನಾಮಕ್ಕೆ ಸಂಚು

ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಇದಕ್ಕೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳಿದ್ದೇನೆ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು ಎಂದಿದ್ದೇನೆ. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ನಾವು ಹೋಗುವುದಿಲ್ಲ. ಆದರೆ, ಈ ವಿಷಯದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ದೇವೆಗೌಡರ ಕುಟುಂಬವನ್ನು ರಾಜಕೀಯವಾಗಿ ನಿರ್ನಾಮ ಮಾಡಬೇಕು ಎಂದು ಸಂಚು ನಡೆಯುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಆಡಿಯೊದಲ್ಲೇನಿದೆ?

ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೊ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಡಿಕೆಶಿ ವಿರುದ್ಧ ನೇರ ಆರೋಪ

ಈ ಪ್ರಕರಣಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಚಾರ ಕೊಡಿಸಿ ಅದನ್ನು ದೇಶ ವಿದೇಶದಲ್ಲಿಯೂ ಹರಡುವಂತೆ ಮಾಡಿದವರೇ ಕಾಂಗ್ರೆಸ್‌ನವರು. ಬಿಜೆಪಿ ಜೆಡಿಎಸ್ ಮೈತ್ರಿ ಆಗದೇ ಇದ್ದಿದ್ದರೆ ಅವರು ರಾಜ್ಯದಲ್ಲಿ 20 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಭ್ರಮೆಯಲ್ಲಿ ಇದ್ದರು. ಅವರ ಕನಸು ನುಚ್ಚು ನೂರಾಗಿದೆ. ಚುನಾವಣೆ ಫಲಿತಾಂಶ ಹೇಗೆ ಬರುತ್ತದೆ ಎನ್ನುವ ಹತಾಶೆಯಲ್ಲಿ ಅವರು ಇದ್ದಾರೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ದಿನವೇ ಅವರಿಗೆ ಅರ್ಥವಾಯಿತು, ನಮ್ಮ ಓಟಕ್ಕೆ ‌ಕಡಿವಾಣ ಬಿತ್ತು ಎಂದುಕೊಂಡರು. ಈ ಆತಂಕಕ್ಕೆ ಒಳಗಾಗಿ ಈ ಪ್ರಕರಣವನ್ನು ಸೃಷ್ಟಿಸಿ ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ್ದೆ ಇದೇ ಡಿ.ಕೆ. ಶಿವಕುಮಾರ್ ಎಂದು ಅವರು ನೇರ ಆರೋಪ ಮಾಡಿದರು.

ಸೀಡಿ ಶಿವು ಇದನ್ನೆಲ್ಲ ಮಾಡಿದ್ದಾರೆ

ಡಿ.ಕೆ.ಶಿವಕುಮಾರ್ ಮತ್ತು ಇವರ ಪಟಾಲಂಗಳು ಇದನ್ನು ಮಾಡಿದ್ದಾರೆ. ‘ಸೀಡಿ ಶಿವು’ ಅವರೇ ಇದನ್ನೆಲ್ಲ ಮಾಡಿದ್ದಾರೆ. ಆದರೆ, ಇದುವರೆಗೂ ಯಾರ ಮೇಲೆಯೂ ಕ್ರಮ ಇಲ್ಲ. ಈ ನೆಲದ ಕಾನೂನಿನ ಪ್ರಕಾರ ಯಾರೇ ಆದರೂ ನ್ಯಾಯಕ್ಕೆ ತಲೆ ಬಾಗಲೇಬೇಕು. ನಿತ್ಯವೂ ಹಣ, ಅಧಿಕಾರದ ದುರುಪಯೋಗ ಮಾಡಿಕೊಂಡು ಮೆರೆಯುವ ವ್ಯಕ್ತಿಗಳು ಬಹಳ ದಿನ ಮೆರೆಯುವುದಕ್ಕೆ ಸಾಧ್ಯ ಇಲ್ಲ. ಪ್ರತಿಯೊಂದಕ್ಕೂ ಅಂತಿಮ ದಿನಗಳು ಬಂದೇ ಬರುತ್ತವೆ ಎಂದು ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಸಿಬಿಐ ಕೊಡಲಿ ಎನ್ನುವ ಉದ್ದೇಶದಿಂದ ಯಾರೋ ಒಬ್ಬರು ಹೈಕೋರ್ಟ್ ಮೊರೆ ಹೋಗುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಬಗ್ಗೆ ಸಿಬಿಐ ತನಿಖೆ ನಡೆಯಬೇಕು. ನಾವು ಕೂಡ ಏನು ಮಾಡಬೇಕು ಎಂಬ ಬಗ್ಗೆ ಕಾನೂ‌ನು ತಜ್ಞರ ಜತೆ ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ‌ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ವಾಪಸ್ ಬರುವಂತೆ ಮತ್ತೆ ಪ್ರಜಲ್‌ಗೆ ಹೇಳಿದ ಎಚ್‌ಡಿಕೆ

ಪ್ರಜ್ವಲ್ ಗೆ ಈಗಾಗಲೇ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ. ಎಲ್ಲೇ ಇದ್ದರೂ ಬಂದು SIT ಮುಂದೆ ಹಾಜರಾಗು ಎಂದು ಸಂದೇಶ ನೀಡಿದ್ದೇನೆ ಎಂದ ಅವರು; ನನಗೆ ಪ್ರಜ್ವಲ್ ಸಂಪರ್ಕದಲ್ಲಿ ಇಲ್ಲ. ಆ ಕಾರಣಕ್ಕೆ ಸಾರ್ವಜನಿಕವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ.ನಾನೂ ಕೂಡ ವಾಪಸ್ ಬರುತ್ತಾನೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ದೇವೇಗೌಡರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಗೌರವ ಎನ್ನುವುದು ಇದ್ದರೆ ವಾಪಸ್ ಬಾ.. ಎಂದು ಹೇಳಿದ್ದೇನೆ. ಈ ಕೂಡಲೇ ವಾಪಸ್ ಬಾ.. ಎಂದು ಮತ್ತೆ ನಿಮ್ಮ (ಮಾಧ್ಯಮಗಳು) ಮೂಲಕ ಮನವಿ ಮಾಡುತ್ತೇನೆ ಎಂದರು.

ಸಾಕ್ಷ್ಯ ಬೇಕೆಂದ ಸಿಎಂ ವಿರುದ್ಧ ಕಿಡಿ

ಪೆನ್ ಡ್ರೈವ್ ಕೇಸ್‌ನಲ್ಲಿ ಸಾಕ್ಷ್ಯ ಕೇಳಿದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಮಾಧ್ಯಮಗಳಲ್ಲಿ ಬಿಡುಗಡೆ ಆಗಿರುವ ಶಿವರಾಮೇಗೌಡ, ದೇವರಾಜೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆಗಿಂತ ಬೇರೆ ಸಾಕ್ಷ್ಯ ಬೇಕಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್ ಅವರೇ ಅರ್ಧ ನಿಮಿಷ ಮಾತಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟು ಮಾತನಾಡಿರುವುದೇ ಸಾಲದೇ? ಆದರೆ, ಸಿಎಂ ಅವರು ಸಾಕ್ಷ್ಯ ಕೊಡಿ, ಸಾಕ್ಷ್ಯ ಕೊಡಿ ಎಂದು ಕೇಳುತ್ತಿದ್ದಾರೆ. SIT ತಂಡ 7-8 ಜನರನ್ನು ಬಂಧನ ಮಾಡಿ ಕರೆದುಕೊಂಡು ಬಂದಿದ್ದಾರೆ. ಯಾವ ಸಾಕ್ಷ್ಯಗಳ ಆಧಾರದಲ್ಲಿ ಅವರನ್ನು ಕರೆದುಕೊಂಡು ಬಂದಿದ್ದಾರೆ. ಅವರಿಗೂ ಪ್ರಕರಣಕ್ಕೂ ಏನು ಸಂಬಂಧ? ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೇ ಇದೆ, ಇದೆಲ್ಲವನ್ನೂ ಡಿ.ಕೆ.ಶಿವಕುಮಾರ್ ಅವರೇ ಮಾಡಿರುವುದು ಎಂದು ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಅವರೇ ಮೊಬೈಲ್ ಸಂಭಾಷಣೆಯಲ್ಲಿ ಇನ್ನು ಏನೇನು ಮಾಹಿತಿ, ಸಾಕ್ಷ್ಯ ಇದೆ ತೆಗೆದುಕೊಂಡು ಬಾ.. ಎಂದು ದೇವರಾಜೇ ಗೌಡನಿಗೆ ಹೇಳಿದ್ದಾರೆ. ಇದಕ್ಕಿಂತ ಇನ್ನೂ ಏನು ಸಾಕ್ಷ್ಯ ಬೇಕು? ಅವರ ಜತೆ ಮಾತನಾಡುವಾಗ ಡಿಕೆಶಿ, ಪೊಲೀಸ್ ದೂರನ್ನು ಕಷ್ಟ ಪಟ್ಟು ಕೊಡಿಸಿದ್ದೇವೆ ಎನ್ನುತ್ತಾರೆ. ಸಿಎಂಗೆ ಇದಕ್ಕಿಂತ‌ ಸಾಕ್ಷಿ ಬೇಕಾ? ಎಂದು ಸಿದ್ದರಾಮಯ್ಯ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ‌ಕಿಡಿಕಾರಿದರು.

ಸಿದ್ದರಾಮಯ್ಯ ಅವರು 6 ಪ್ರಶ್ನೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ನನ್ನು ಮುಖ್ಯಮಂತ್ರಿಗಳು ಅಪರಾಧಿ ಮಾಡಿ ಬಿಟ್ಟಿದ್ದಾರೆ. ಇನ್ನು ಪ್ರಜ್ವಲ್ ಆರೋಪಿ ಸ್ಥಾನದಲ್ಲಿ ‌ಇದ್ದಾನೆ. ಅಪರಾಧಿ ಅಂತ‌ ಇನ್ನು ಎಲ್ಲಿ ಸಾಬೀತಾಗಿದೆ? ತನಿಖಾ ತಂಡದವರೇ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಿದ್ದಾರೆ. ವಿಡಿಯೊಗಳಲ್ಲಿ ಪುರುಷನ ಮುಖವೇ ಕಾಣಲ್ಲ ಎಂದು ಹೇಳಲಾಗಿದೆ. ಇದು ಸಿಎಂಗೆ ಗೊತ್ತಿಲ್ಲವೇ? ನೈತಿಕತೆ ಉಳಿಸಬೇಕು ಎಂದೇ ಆತನ ವಿರುದ್ಧ ಕೇಳಿ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಿದ್ದೇವೆ. ನಾವು ಸಿದ್ದರಾಮಯ್ಯ ತರಹ ಭಂಡತನ ಮಾಡಿಲ್ಲ. ಆ ಭಂಡತನದಲ್ಲಿ ನಿಮ್ಮ ಮಗನದ್ದು ನಡೆಯಿತಲ್ಲ.. ಅಪ್ಪ..ಅಪ್ಪ.. ನಾನು ಕೊಟ್ಟಿದ್ದೇ 5 ಹೆಸರು, 6 ಹೆಸರು ಎಲ್ಲಿಂದ ಬಂತು ಹೇಳಿ ಎಂದು ಕಥೆ ಕಟ್ಟಿದಿರಲ್ಲ? ನಿಮ್ಮ ಮಗನ ಹೆಸರು ಬಂದ ಕೂಡಲೇ ಅದಕ್ಕೆ ಸಿಎಸ್‌ಆರ್‌ ಫಂಡ್ ಎಂದು ಬಣ್ಣ ಹಚ್ಚಿದ್ದು ಗೊತ್ತಿಲ್ಲವೇ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂಗೆ ತಿರುಗೇಟು ನೀಡಿದರು.

ಸಾಕ್ಷ್ಯ ನಾಶಕ್ಕೆ ನಿಮಗಿಂತ ಒಳ್ಳೆ ಉದಾಹರಣೆ ಬೇಕಾ?

ಸಾಕ್ಷ್ಯ ನಾಶ ಯಾವ ರೀತಿ ಮಾಡಬಹುದು ಎನ್ನುವುದಕ್ಕೆ ನಿಮಗಿಂತ ಒಳ್ಳೆಯ ಉದಾಹರಣೆ ಬೇಕಾ? ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾಕ್ಷ್ಯಗಳನ್ನು ಯಾವ ರೀತಿ ತಿದ್ದಬಹುದು ಎಂದು ಸಾಬೀತು ಮಾಡಿದ್ದೀರಿ. ಈಗಲೂ ನೀವು ಮಾಡುತ್ತಿರುವುದು ಅದೇ ಕೆಲಸ. ಅಷ್ಟು ಸ್ಪಷ್ಟವಾಗಿ ಒಬ್ಬ ಡಿಸಿಎಂ ಮಾತನಾಡಿರುವುದು ಕಣ್ಣ ಮುಂದೆಯೇ ಇದೆ, ಆದರೂ ಸಾಕ್ಷ್ಯ ಕೇಳುತ್ತಿದ್ದೀರಿ ಎಂದು ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಇದನ್ನೂ ಓದಿ: ‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

ಸಿಎಂ ಉತ್ತರ ಕೊಡಬೇಕು

ಕಾರ್ತಿಕ್ ಗೌಡ, ನವೀನ್ ಗೌಡ ಸೇರಿ ಪೆನ್ ಡ್ರೈವ್ ಹಂಚಿದ ಕಿಡಿಗೇಡಿಗಳನ್ನು ಇವತ್ತಿನವರೆಗೂ ಬಂಧಿಸಿಲ್ಲ. ಎಸ್‌ಐಟಿಗೆ ಹೇಳಿಕೆ ನೀಡಿದ್ದಾನೆ ಎನ್ನುತ್ತೀರಿ, ಹಾಗಾದರೆ ಅವನು ಯಾರ ವಶದಲ್ಲಿ ಇದ್ದಾನೆ. ಯಾವತ್ತೂ ಅವನು ತನಿಖಾ ತಂಡಕ್ಕೆ ಹೇಳಿಕೆ ಕೊಟ್ಟ? ಅವನನ್ನು ಯಾಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿಲ್ಲ? ಇದರಲ್ಲಿ‌ ಏನೋ ಹುನ್ನಾರ ಇದೆ. ಮುಖ್ಯಮಂತ್ರಿ ಇದಕ್ಕೆ ಉತ್ತರ ಕೊಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.

ಸಿಎಂ ಅವರು ಇಷ್ಟು ಲಘುವಾಗಿ ಮಾತಾಡೋದು ಬೇಡ. ಅವರು ನಮ್ಮ ‌ಪ್ರಶ್ನೆಗಳಿಗೆ ಉತ್ತರ ಕೊಡದೇ ನುಣಿಚಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಯಾರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿಲ್ಲ. ಇದು SIT ತಂಡ ಅಲ್ಲ. ಇದು SIT ದಂಡ! ಸುಖಾಸುಮ್ಮನೆ ದಂಡಕ್ಕೆ ಇದನ್ನು ರಚನೆ ಮಾಡಲಾಗಿದೆ. SIT ದಂಡವನ್ನು ತಮಗೆ ಆಗದವರ ಮೇಲೆ ಪ್ರಯೋಗ ಮಾಡಲು ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ‌ಆಕ್ರೋಶ ವ್ಯಕ್ತಪಡಿಸಿದರು.

Continue Reading

ಶಿವಮೊಗ್ಗ

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Road Accident: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಬಳಿ ಬಸ್‌ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಆಟೋ ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದಾನೆ.

VISTARANEWS.COM


on

Road Accident
Koo

ಶಿವಮೊಗ್ಗ/ಚಿಕ್ಕಮಗಳೂರು: ಎರಡು ಪ್ರತ್ಯೇಕ ಅಪಘಾತಗಳಲ್ಲಿ (Road Accident) ಒಬ್ಬರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಬಳಿ ಬಸ್‌ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಆಟೋ ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದಾನೆ.

ತೀರ್ಥಹಳ್ಳಿಯ ಮಂಡಗದ್ದೆ ಬಳಿ ಭೀಕರ ಬಸ್ ಅಪಘಾತ, ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಮುಂದೆ ಹೋಗುತ್ತಿದ್ದ ವಾಹನವನ್ನು ಖಾಸಗಿ ಬಸ್ ಓವರ್ ಟೇಕ್ ಮಾಡಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹಲವರಿಗೆ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಬಸ್ ಮುಂಭಾಗ ನುಜ್ಜುಗುಜ್ಜಾಗಿದೆ.

ಮೂಡಿಗೆರೆಯಲ್ಲಿ ಆಟೋ ಪಲ್ಟಿಯಾಗಿ ಚಾಲಕ ಸಾವು

ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.

ಮೂಡಿಗೆರೆಯ ಮಲೆಮನೆ ಗ್ರಾಮದ ರವಿ (28) ಮೃತ ದುರ್ದೈವಿ. ಬಣಕಲ್- ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಗಾಯಳು ರವಿಯನ್ನು ಬಣಕಲ್‌ನಿಂದ ಮೂಡಿಗೆರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮೃತಪಟ್ಟಿದ್ದಾನೆ.

ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

Self Harming

ಹುಬ್ಬಳ್ಳಿ: ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮನೆಯಿಂದ ದುರ್ವಾಸನೆ ಬರತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ | Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ಧಾರವಾಡದ ಟ್ರಾಫಿಕ್‌ ಕಾನ್‌ಸ್ಟೇಬಲ್ ಮಹೇಶ್ ಹೆಸರೂರ (31), ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ಜೋಡಿ ಆತ್ಮಹತ್ಯೆಗೆ ಶರಣಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಕಾರಣ ಜೋಡಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ17 mins ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Narendra Modi
ದೇಶ24 mins ago

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Janardhan Reddy
ರಾಜಕೀಯ27 mins ago

Janardhan Reddy: ಮಡದಿಗಾಗಿ ಮರವೇರಿ ಮಾವು ಕಿತ್ತುಕೊಟ್ಟ ರೆಡ್ಡಿ: ವಿಡಿಯೊ ವೈರಲ್

Harbhajan Singh
ಕ್ರೀಡೆ50 mins ago

Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

Tamil Nadu Officers
ದೇಶ1 hour ago

ಐಎಎಸ್‌ ಆಫೀಸರ್‌ ಆಗಿರುವ ಮಾಜಿ ಪತ್ನಿಯಿಂದ ನನ್ನ ಮನೆಗೆ ವಿದ್ಯುತ್‌ ಕಟ್; ಇದು ಐಪಿಎಸ್‌ ಆಫೀಸರ್‌ ಅಳಲು!

Rameshwaram Cafe Blast
ಕರ್ನಾಟಕ1 hour ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ1 hour ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ2 hours ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ2 hours ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ2 hours ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು9 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು10 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌