businessman-missing: business man missing in Mangalore, Car and chappals found at beach Businessman missing : ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಡೀಲರ್ ನಾಪತ್ತೆ; ಮೊಬೈಲ್, ಚಪ್ಪಲಿ, ಕಾರು ಪತ್ತೆ Businessman missing : ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಡೀಲರ್ ನಾಪತ್ತೆ; ಮೊಬೈಲ್, ಚಪ್ಪಲಿ, ಕಾರು ಪತ್ತೆ - Vistara News

ಕರ್ನಾಟಕ

Businessman missing : ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಡೀಲರ್ ನಾಪತ್ತೆ; ಮೊಬೈಲ್, ಚಪ್ಪಲಿ, ಕಾರು ಪತ್ತೆ

Someshwara Beach : ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ಉದ್ಯಮಿಯೊಬ್ಬರಿಗೆ ಸೇರಿದ ಕಾರು, ಚಪ್ಪಲಿ ಪತ್ತೆಯಾಗಿದೆ. ಅವರು ನಾಪತ್ತೆಯಾಗಿದ್ದಾರೆ.

VISTARANEWS.COM


on

businessman-missing: business man missing in Mangalore, Car and chappals found at beach
ಸೋಮೇಶ್ವರ ಬೀಚ್‌ನಲ್ಲಿ ಪತ್ತೆಯಾಗಿರುವ ಚಪ್ಪಲಿ ಮತ್ತು ಕಾರು ಹಾಗೂ ನಾಪತ್ತೆಯಾಗಿರುವ ಉದ್ಯಮಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಳ್ಳಾಲ (ಮಂಗಳೂರು): ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ. ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ಉದ್ಯಮಿ ವಸಂತ್ ಅಮೀನ್ (49) ನಾಪತ್ತೆಯಾದವರು (Businessman missing). ಮೂಲತ: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದಷ್ಟೇ ಸುಸಜ್ಜಿತವಾದ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಪುಟಾಣಿ ಹೆಣ್ಣು ಮಗುವಿದೆ.

ಬುಧವಾರ ಬೆಳಗ್ಗೆ ಮನೆಯಿಂದ ಪತ್ನಿಯ ಲ್ಲಿ ತಿಳಿಸಿ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್‌, ಚಪ್ಪಲಿ ಹಾಗೂ ಮೊಬೈಲ್ ಅನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಅಕ್ಕಪಕ್ಕದ ಮನೆಗಳ ನೀರಿನ ಜಗಳ; ಮನನೊಂದ ಗೃಹಿಣಿ ಸಾವಿಗೆ ಶರಣು

ಬೆಂಗಳೂರು: ನೀರಿನ ವಿಚಾರಕ್ಕೆ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿದ್ದರಿಂದ ಮನ ನೊಂದ ಗೃಹಿಣಿಯೊಬ್ಬರು ಆತ್ಮಹತ್ಯೆ (Woman suicide) ಮಾಡಿಕೊಂಡಿದ್ದಾರೆ. ನೀರು ತುಂಬುವ ವಿಚಾರಕ್ಕೆ ಆರಂಭವಾದ ಗಲಾಟೆ ಇದೀಗ ಸಾವಿನಲ್ಲಿ ಅಂತ್ಯಗೊಂಡಿದೆ.

ಯಲಹಂಕ ಠಾಣಾ ವ್ಯಾಪ್ತಿಯ ಕೋಗಿಲು ಮುಖ್ಯ ರಸ್ತೆಯ ಸರ್ಕಾರಿ ವಸತಿ ಸಮುಚ್ಚಯದಲ್ಲಿ ವಾಸವಾಗಿರುವ ಸರಸ್ವತಿ (35) ಎಂಬವರೇ ಮೃತಪಟ್ಟವರು. ಇವರು ಸಿನಿಮಾಗಳಲ್ಲಿ ಕ್ಯಾಮೆರಾ ಸಹಾಯಕರಾಗಿ ಕೆಲಸ ಮಾಡುವ ನಾಗರಾಜ್‌ ಎಂಬವರ ಪತ್ನಿ. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಸರಸ್ವತಿ ಹಾಗೂ ಅವರ ಪತಿ ಕೋಗಿಲು ಮುಖ್ಯರಸ್ತೆಯ ಶ್ರೀನಿವಾಸಪುರದಲ್ಲಿರುವ ಸರ್ಕಾರಿ ವಸತಿ ಸಮುಚ್ಚಯದ ಮನೆಯಲ್ಲಿ ವಾಸವಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಸರಸ್ವತಿ

ನೆಲ ಮಹಡಿಯಲ್ಲಿ ವಾಸವಿದ್ದ ಶ್ರೀನಿವಾಸ್ ಹಾಗೂ ಭವಾನಿ ಎಂಬ ದಂಪತಿ ಪ್ರತ್ಯೇಕವಾಗಿ ನೀರಿನ ಟ್ಯಾಂಕ್ ತಂದಿಟ್ಟುಕೊಂಡು ಎಲ್ಲರಿಗಾಗಿ ಇರುವ ನೀರಿನ ಸಂಪ್‌ನಿಂದ ಪ್ರತ್ಯೇಕವಾಗಿ ನೀರು ತುಂಬಿಸಿಕೊಳ್ಳುತ್ತಿದ್ದರೆಂದು ಹೇಳಲಾಗಿದೆ. ನೀವು ಹೀಗೆ ಮಾಡುವುರಿಂದ ನೀರಿನ ಅಭಾವ ಉಂಟಾಗುತ್ತಿದೆ ಎಂದು ಸರಸ್ವತಿ ಪ್ರಶ್ನಿಸಿದಾಗ, ಮನ ಬಂದಂತೆ ಬೈದು, ಚಾರಿತ್ರ್ಯವಧೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದೇ ವಿಚಾರವಾಗಿ ಕಳೆದ ಕೆಲ ದಿನಗಳಿಂದ ಎರಡೂ ಮನೆಯವರ ನಡುವೆ ಗಲಾಟೆಗಳಾಗಿದ್ದು ಠಾಣೆಯ ಮೆಟ್ಟಿಲೇರಿದಾಗ ಪೊಲೀಸರು ಬುದ್ಧಿವಾದ ಹೇಳಿ‌ ಕಳಿಸಿದ್ದರು.

ಏಪ್ರಿಲ್ 21ರಂದು ನಾಗರಾಜ್ ಅವರು ಸಿನಿಮಾ ಕೆಲಸದ ನಿಮಿತ್ತ ಧಾರವಾಡಕ್ಕೆ ಹೋದಾಗ ನೀರಿನ ವಿಚಾರವಾಗಿ ಮತ್ತೆ ಗಲಾಟೆ ಆಗಿದೆ. ಈ ವೇಳೆ ಶ್ರೀನಿವಾಸ್, ಅವರ ಪತ್ನಿ ಭವಾನಿ ಹಾಗೂ ಶಿಲ್ಪಾ ಎಂಬಾಕೆ ಸರಸ್ವತಿಗೆ ಮನಬಂದಂತೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಮನನೊಂದ ಸರಸ್ವತಿ ಗಂಡನಿಗೆ ಕರೆ ಮಾಡಿ ‘ನನ್ನಿಂದ ಇನ್ನು ಸಹಿಸಲು ಸಾಧ್ಯವಿಲ್ಲ, ಬೇರೆ ಕಡೆ ಮನೆ ಮಾಡು ಅಂದರೆ ನೀನು ಅದನ್ನೂ ಮಾಡುತ್ತಿಲ್ಲ. ನನಗೆ ಇದನ್ನು ಸಹಿಸಲು ಸಾಧ್ಯವಿಲ್ಲ, ನಾನು ಸಾಯುತ್ತಿದ್ದೇನೆ’ ಎಂದಿದ್ದಾಳೆ.

ಗಾಬರಿಗೊಂಡ ನಾಗರಾಜ್ ಪಕ್ಕದ ಮನೆಯವರಿಗೆ ಕರೆ ಮಾಡಿ ಕಳಿಸುವಷ್ಟರಲ್ಲಿ ಸರಸ್ವತಿ ಆತ್ಮಹತ್ಯೆಗೆ ಶರಣಾಗಿದ್ದಳು. ಪತ್ನಿಯ ಸಾವಿಗೆ ಕಾರಣವಾದ ಶ್ರೀನಿವಾಸ್, ಭವಾನಿ ಹಾಗೂ ಶಿಲ್ಪಾಳ ವಿರುದ್ಧ ನಾಗರಾಜ್ ಯಲಹಂಕ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ : Suicide case : ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ವಿಡಿಯೊ ಮಾಡುತ್ತಲೇ ನೇಣಿಗೆ ಶರಣಾದ ಮಹಿಳೆ

businessman-missing: business man missing in Mangalore, Car and chappals found at beach

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ; ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್

Kannada New Movie: ಸಾಹಸ ನಿರ್ದೇಶಕ ಡಾ.ಕೆ. ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ. ಶೆಟ್ಟಿ ನಾಯಕರಾಗಿ ನಟಿಸುತ್ತಿರುವ “ರಕ್ಕಸಪುರದೋಳ್” ಚಿತ್ರದ ಮುಹೂರ್ತ ಸಮಾರಂಭವು ನಗರದ ನೆಟಕಲ್ಲಪ್ಪ ಸರ್ಕಲ್‌ನಲ್ಲಿರುವ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದಂದು ಅದ್ದೂರಿಯಾಗಿ ನೆರವೇರಿತು. ನಟಿ ರಕ್ಷಿತ ಹಾಗೂ ನಿರ್ದೇಶಕ ಪ್ರೇಮ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿ, ಶೀರ್ಷಿಕೆ ಅನಾವರಣ ಮಾಡಿದರು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಡಾ.ಕೆ. ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ. ಶೆಟ್ಟಿ ನಾಯಕರಾಗಿ ನಟಿಸುತ್ತಿರುವ “ರಕ್ಕಸಪುರದೋಳ್” ಚಿತ್ರದ ಮುಹೂರ್ತ ಸಮಾರಂಭವು ನಗರದ ನೆಟಕಲ್ಲಪ್ಪ ಸರ್ಕಲ್‌ನಲ್ಲಿರುವ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದಂದು ಅದ್ದೂರಿಯಾಗಿ ನೆರವೇರಿತು. ನಟಿ ರಕ್ಷಿತ ಹಾಗೂ ನಿರ್ದೇಶಕ ಪ್ರೇಮ್ ಚಿತ್ರದ (Kannada New Movie) ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿ, ಶೀರ್ಷಿಕೆ ಅನಾವರಣ ಮಾಡಿದರು. ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸಾಹಸ ನಿರ್ದೇಶಕರಾಗಿ ಜನಪ್ರಿರಾಗಿರುವ ರವಿವರ್ಮ ಅವರು ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. “ದಿ ವಿಲನ್”, “ಏಕ್ ಲವ್ ಯಾ”,‌ “ಕೆಡಿ” ಮುಂತಾದ ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದ ರವಿ ಸಾರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಜನಪ್ರಿಯ ನಟ ರಾಜ್ ಬಿ. ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ. “ರಕ್ಕಸಪುರದೋಳ್” ಚಿತ್ರ ಚಂದನವನದಲ್ಲಿ ಭರ್ಜರಿ ಯಶಸ್ಸು ಕಾಣಲಿ ಎಂದು ರಕ್ಷಿತ-ಪ್ರೇಮ್ ದಂಪತಿ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ರಕ್ಕಸಪುರದೋಳ್” ಚಿತ್ರದ ಕಥೆ ತುಂಬಾ ಚೆನ್ನಾಗಿದೆ. ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಬೇಕಾಗಿರುವಂತಹ ಕಥೆಯನ್ನು ನಿರ್ದೇಶಕ ರವಿ ಮಾಡಿಕೊಂಡಿದ್ದಾರೆ. ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಿಂದಿನ ಚಿತ್ರಗಳಿಗಿಂತ ಭಿನ್ನ ಪಾತ್ರ ಎಂದರು ರಾಜ್ ಬಿ ಶೆಟ್ಟಿ.

ಕಳೆದ ಹತ್ತು ವರ್ಷಗಳಿಂದ ಪ್ರೇಮ್ ಸರ್ ಬಳಿ ಕಥೆ, ಚಿತ್ರಕಥೆ ಹಾಗೂ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಅವರ ಸಹಕಾರ ನನಗೆ ಎಂದಿಗೂ ಇರುತ್ತದೆ. ಪ್ರೇಮ್ ಮತ್ತು ರಕ್ಷಿತ ಅವರಿಗೆ ಧನ್ಯವಾದ. “ರಕ್ಕಸ” ಎಂದರೆ ರಾಕ್ಷಸ. “ಪುರ” ಎಂದರೆ ಊರು. ರಾಕ್ಷಸರೆ ಇರುವ ಊರು ಎಂಬುದು ಈ ಶೀರ್ಷಿಕೆಯ ಅರ್ಥ. ಮನುಷ್ಯನಲ್ಲಿ ಎರಡು ಗುಣಗಳಿರುತ್ತದೆ. ಒಂದು ಒಳ್ಳೆಯದು. ಮತ್ತೊಂದು ಕೆಟ್ಟದ್ದು. ಆ ಕೆಟ್ಟ ಗುಣಗಳನ್ನು “ರಕ್ಕಸ” ಎನ್ನಬಹುದು. ನಿರ್ಮಾಪಕ ರವಿವರ್ಮ ಹಾಗೂ ನಾಯಕ ರಾಜ್ ಬಿ ಶೆಟ್ಟಿ ಅವರು ಕಥೆ ಮೆಚ್ಚಿಕೊಂಡದ್ದು ಸಂತೋಷವಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದ‌ರು‌ ನಿರ್ದೇಶಕ ರವಿ ಸಾರಂಗ.

ರವಿ ಸಾರಂಗ ಅವರು ನನಗೆ ಎರಡು ವರ್ಷಗಳ ಪರಿಚಯ ಎಂದು‌ ಮಾತು ಆರಂಭಿಸಿದ ನಿರ್ಮಾಪಕ ಕೆ.ರವಿವರ್ಮ, ಸಾಹಸ ನಿರ್ದೇಶಕನಾಗಿ ನನಗೆ ಎಲ್ಲರೂ ಪ್ರೋತ್ಸಾಹ ನೀಡಿದ್ದೀರಿ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ರವಿ ಸಾರಂಗ ಒಳ್ಳೆಯ ಕಥೆ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಆ ಕಥೆಯನ್ನು ಒಪ್ಪಿ ನಟಿಸುತ್ತಿದ್ದಾರೆ. ಅರ್ಜುನ್ ಜನ್ಯ‌ ಸಂಗೀತ ನಿರ್ದೇಶನ, ವಿಲಿಯಂ ಡೇವಿಡ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನವಿರುವ ಹಾಗೂ ನರಸಿಂಹ ಜಾಲಹಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ “ರಕ್ಕಸಪುರದೋಳ್” ಚಿತ್ರಕ್ಕೆ ಕ್ರಾಂತಿ ಕುಮಾರ್ ಸಂಭಾಷಣೆ ಬರೆಯತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಶುಭ ದಿನದಂದು ರಕ್ಷಿತ – ಪ್ರೇಮ್ ಅವರು ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಒಂದೊಳ್ಳೆ ಚಿತ್ರ ನಿರ್ಮಾಣ ಮಾಡುತ್ತಿರುವ ಖುಷಿಯಿದೆ ಎಂದರು.

ಇದನ್ನೂ ಓದಿ: CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

ರವಿವರ್ಮ ಅವರು ಸಾಹಸ ನಿರ್ದೇಶಕರಾಗಿ ನನ್ನ ನಿರ್ದೇಶನದ ಚಿತ್ರದಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ರಾಜ್ ಬಿ ಶೆಟ್ಟಿ ಅವರ ನಟನೆಯನ್ನು ಹತ್ತಿರದಿಂದ ನೋಡಿದ್ದೇನೆ. ಅವರೊಬ್ಬ ಉತ್ತಮ ಕಲಾವಿದ. ಇನ್ನು ರವಿ ಸಾರಂಗ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇದು ಕನ್ನಡದ “ಆರ್ ಆರ್ ಆರ್” ಚಿತ್ರ. ತ್ರಿಬಲ್ ಆರ್ ತರಹ‌ ಈ ಚಿತ್ರ ಕೂಡ ಯಶಸ್ವಿಯಾಗಲಿ ಎಂದು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾರೈಸಿದರು.

ಇದನ್ನೂ ಓದಿ: Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ನಾಯಕಿ ಸ್ವಾತಿಷ್ಟ ಕೃಷ್ಣ, ನಟ ಬಿ.ಸುರೇಶ್, ನಟಿ ಅರ್ಚನಾ ಕೊಟ್ಟಿಗೆ, ಚಿತ್ರದಲ್ಲಿ ಅಭಿನಯಿಸುತ್ತಿರುವ ಗೌರವ್ ಶೆಟ್ಟಿ, ಸಿದ್ದಣ್ಣ, ಸುಮ, ಅನಿರುದ್ದ್ ಭಟ್, ಛಾಯಾಗ್ರಾಹಕ ವಿಲಿಯಂ ಡೇವಿಡ್, ಸಂಭಾಷಣೆಕಾರ ಕ್ರಾಂತಿ ಕುಮಾರ್ ಹಾಗೂ ನರಸಿಂಹ ಜಾಲಹಳ್ಳಿ ಮುಂತಾದವರು “ರಕ್ಕಸಪುರದೋಳ್” ಚಿತ್ರದ ಕುರಿತು ಮಾತನಾಡಿದರು.

Continue Reading

ದೇಶ

Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

Pralhad Joshi: ಆಹಾರ ಹಂಚಿಕೆ ಪ್ರಮಾಣ ಹೆಚ್ಚಿಸುವ ಸಂಬಂಧ ಭಾರತ ಮತ್ತು ಅರ್ಜೆಂಟೀನಾ ಮಧ್ಯೆ ಪರಸ್ಪರ ಚರ್ಚೆ ನಡೆದಿದೆ. ಅರ್ಜೆಂಟೀನಾ ರಾಯಭಾರಿ ಮರಿಯಾನೋ ಅಗಸ್ಟಿನ್ ಕೌಸಿನೊ ಅವರ ನಿಯೋಗ ಇಂದು ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಭೇಟಿ ಮಾಡಿ ಆಹಾರೋತ್ಪಾದನೆ ಬಗ್ಗೆ ಸಮಾಲೋಚನೆ ನಡೆಸಿದೆ. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Pralhad Joshi
Koo

ನವದೆಹಲಿ: ಆಹಾರ ಹಂಚಿಕೆ ಪ್ರಮಾಣ ಹೆಚ್ಚಿಸುವ ಸಂಬಂಧ ಭಾರತ ಮತ್ತು ಅರ್ಜೆಂಟೀನಾ ಮಧ್ಯೆ ಪರಸ್ಪರ ಚರ್ಚೆ ನಡೆದಿದೆ. ಅರ್ಜೆಂಟೀನಾ ರಾಯಭಾರಿ ಮರಿಯಾನೋ ಅಗಸ್ಟಿನ್ ಕೌಸಿನೊ ಅವರ ನಿಯೋಗ ಇಂದು ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರನ್ನು ಭೇಟಿ ಮಾಡಿ ಆಹಾರೋತ್ಪಾದನೆ ಬಗ್ಗೆ ಸಮಾಲೋಚನೆ ನಡೆಸಿದೆ.

ಉಭಯ ರಾಷ್ಟ್ರಗಳಲ್ಲೂ ಆಹಾರ ಧಾನ್ಯ, ಖಾದ್ಯ ತೈಲದ ಉತ್ಪಾದನೆ ಮತ್ತು ಪೂರೈಕೆಗೆ ಬೇಕಿರುವ ಅಗತ್ಯ ಸಹಕಾರ ಕುರಿತು ಚರ್ಚಿಸಲಾಯಿತು.

ಇದನ್ನೂ ಓದಿ: Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಜಾಗತಿಕ ಸವಾಲುಗಳನ್ನು ನಿಭಾಯಿಸಲು ಮತ್ತು ಆಹಾರ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸಲು ಭಾರತ-ಅರ್ಜೆಂಟೀನಾ ಎರಡೂ ದೇಶಗಳ ನಡುವೆ ಪರಸ್ಪರ ಸಹಕಾರ, ಅಗತ್ಯ ನೆರವಿನ ಬಗ್ಗೆ ಚರ್ಚಿಸಲಾಗಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.

Continue Reading

ಬೆಂಗಳೂರು

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೈವಾನ್ ಮೂಲದ ಆಪಲ್ ಫೋನ್ ಕಂಪನಿ ಫಾಕ್ಸ್‌ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜತೆ ಚರ್ಚೆ ನಡೆಸಿದರು.ಈ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತೈವಾನ್ ಮೂಲದ ಆಪಲ್ ಫೋನ್ ಕಂಪನಿ ಫಾಕ್ಸ್‌ಕಾನ್ (Foxconn) ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜತೆ ಚರ್ಚೆ ನಡೆಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಶ್ರೀ ದೇವಿಗೆ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಶಿವಮೊಗ್ಗ, ರಾಯಚೂರು, ಚಿಕ್ಕಮಂಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ, ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದರು.

VISTARANEWS.COM


on

Shivamogga News
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಾಲಯದಲ್ಲಿ (Chandragutti Renukamba Temple) ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಶ್ರೀ ದೇವಿಗೆ ವಿಶೇಷ ಪೂಜೆ ಕೈಂಕರ್ಯಗಳು (Shivamogga News) ಜರುಗಿದವು.

ಶ್ರಾವಣ ಮಾಸದ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಶ್ರೀ ರೇಣುಕಾಂಬ ದೇವಿ ದರ್ಶನಕ್ಕೆ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಶಿವಮೊಗ್ಗ, ರಾಯಚೂರು, ಚಿಕ್ಕಮಂಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ದೇವಸ್ಥಾನದ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ, ದೇವರುಗಳಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು.

ಇದನ್ನೂ ಓದಿ: Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ದೇಗುಲಕ್ಕೆ ಆಗಮಿಸಿದ ಮಹಿಳೆಯರಿಗೆ ವರಮಹಾಲಕ್ಷ್ಮಿ ವ್ರತಾಚರಣೆ ಅಂಗವಾಗಿ ಪ್ರಸಾದ ರೂಪದಲ್ಲಿ ಅರಿಷಿಣ, ಕುಂಕುಮ, ಹಸಿರು ಬಳೆ ನೀಡಿ ಉಡಿ ತುಂಬಲಾಯಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ಕೆ ಮಹಿಳೆಯರು ಹಾಗೂ ಭಕ್ತಾದಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು ಎಂದು ತಿಳಿಸಿದರು.

Continue Reading
Advertisement
Kannada New Movie
ಬೆಂಗಳೂರು10 seconds ago

Kannada New Movie: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ; ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್

Pralhad Joshi
ದೇಶ4 mins ago

Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

PM Narendra Modi
ದೇಶ6 mins ago

PM Narendra Modi: ರಾಜತಾಂತ್ರಿಕ ಮಾತುಕತೆಯೇ ಸಂಘರ್ಷಕ್ಕೆ ಪರಿಹಾರ..ದೂರವಾಣಿ ಮೂಲಕ ಮೋದಿ- ನೆತನ್ಯಾಹು ಸಂಭಾಷಣೆ

Bureaucratic Reshuffle
ದೇಶ36 mins ago

Bureaucratic Reshuffle: ಆಡಳಿತಾತ್ಮಕ ಸುಧಾರಣೆಗೆ ಮೋದಿ ಗೇಮ್‌ ಪ್ಲಾನ್‌; ಉನ್ನತ ಮಟ್ಟದ ಅಧಿಕಾರಿಗಳ ಬದಲಾವಣೆ

Indian Paralympic Team
ಕ್ರೀಡೆ46 mins ago

Indian Paralympic Team: ಪದಕ ಬೇಟೆಗೆ ಹೊರಟ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ ಬೀಳ್ಕೊಡುಗೆ

ICC Women's T20 World Cup
ಕ್ರೀಡೆ2 hours ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

Union Cabinet meeting
ದೇಶ2 hours ago

Union Cabinet Meeting: 2 ಏರ್‌ಪೋರ್ಟ್‌ ಅಭಿವೃದ್ಧಿ, 3 ಮೆಟ್ರೋ ರೈಲು ಯೋಜನೆಗಳಿಗೆ ಕೇಂದ್ರ ಅಸ್ತು

Money Guide
ಮನಿ-ಗೈಡ್2 hours ago

Money Guide: ಎಸ್‌ಐಪಿ-ಪಿಪಿಎಫ್; ಹಣ ಹೂಡಿಕೆಗೆ ಯಾವುದು ಬೆಸ್ಟ್?

CM Siddaramaiah
ಬೆಂಗಳೂರು2 hours ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ2 hours ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌