davanagere news The Jagalur police resorted to lathi charge to women and childrenDavanagere News: ಮಹಿಳೆಯರು, ಮಕ್ಕಳು ಎನ್ನದೆ ಮನಬಂದಂತೆ ಲಾಠಿ ಪ್ರಯೋಗ ಮಾಡಿದ ಜಗಳೂರು ಪೊಲೀಸರು? - Vistara News

ಕರ್ನಾಟಕ

Davanagere News: ಮಹಿಳೆಯರು, ಮಕ್ಕಳು ಎನ್ನದೆ ಮನಬಂದಂತೆ ಲಾಠಿ ಪ್ರಯೋಗ ಮಾಡಿದ ಜಗಳೂರು ಪೊಲೀಸರು?

Jagalur Police: ಮಹಿಳೆಯರು ಮಕ್ಕಳು ಎನ್ನದೆ ಕೈಗೆ ಸಿಕ್ಕವರ ಮೇಲೆ ಜಗಳೂರು ಪೊಲೀಸರು ಲಾಠಿ ಬೀಸಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಜಾತ್ರೆಯ ಸಂದರ್ಭದಲ್ಲಿ ನಡೆದ ಸಣ್ಣ ಜಗಳಕ್ಕೆ ಸಂಬಂಧಿಸಿ ಈ ಘಟನೆ ನಡೆದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಇಲ್ಲಿನ ಜಗಳೂರು ಠಾಣೆ (Jagalur Police) ಮುಂಭಾಗ ಪೊಲೀಸರು ಮಹಿಳೆಯರು, ಮಕ್ಕಳ ಮೇಲೆ ಮನಬಂದಂತೆ ಲಾಠಿ ಪ್ರಯೋಗ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸುಖಾಸುಮ್ಮನೆ ಮನೆಯ ಮಕ್ಕಳನ್ನು ಠಾಣೆಗೆ ಕರೆದುಕೊಂಡು ಬಂದಿದ್ದು, ಕೇಳಲು ಬಂದವರಿಗೆ ಲಾಠಿಯಿಂದ ಹೊಡೆದಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜಗಳೂರಿನಲ್ಲಿ ಐದು ವರ್ಷಕ್ಕೊಮ್ಮೆ ದೊಡ್ಡ ಮಾರಮ್ಮನ‌ ಜಾತ್ರೆ ನಡೆಯುತ್ತದೆ. ಈ ಜಾತ್ರೆ ಆಚರಣೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಕೆಲವು ಕಿಡಿಗೇಡಿಗಳು ಬುಧವಾರ (ಏ.26) ರಾತ್ರಿ ವಾಹನಗಳ ಗ್ಲಾಸ್‌ ಪುಡಿ ಪುಡಿ ಮಾಡಿ ಹಾನಿ ಮಾಡಿದ್ದಾರೆ. ಈ‌ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗ್ರಾಮದ ಹತ್ತಕ್ಕೂ ಹೆಚ್ಚು ಯುವಕರನ್ನು ಠಾಣೆಗೆ ಕರೆ ತಂದಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಪೋಷಕರು, ಅನಗತ್ಯವಾಗಿ ನಮ್ಮ ಮಕ್ಕಳನ್ನು ಕರೆತರಲಾಗಿದೆ ಎಂದು ಠಾಣೆ ಮುಂದೆ ಜಮಾಯಿಸಿದ್ದಾರೆ. ಈ ವೇಳೆ ಠಾಣೆ ಮುಂಭಾಗ ನಿಂತಿದ್ದವರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. ಮಹಿಳೆಯರು, ಮಕ್ಕಳು ಎನ್ನದೆ ಲಾಠಿ ಪ್ರಯೋಗ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾಗಿ ಆರೋಪಿಸಿದ್ದಾರೆ. ಜಗಳೂರು ಪೊಲೀಸರ ವರ್ತನೆಗೆ ಕಿಡಿಕಾರಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Illicit Relationship: ಪತಿ, ಮಕ್ಕಳಿದ್ದರೂ ಸಣ್ಣ ವಯಸ್ಸಿನ ಯುವಕನ ಮೋಹಿಸಿದಳು; ಅನೈತಿಕ ಸಂಬಂಧಕ್ಕೆ ಬಲಿಯಾದಳು

ಆದರೆ, ಸ್ಥಳೀಯರ ಈ ಎಲ್ಲ ಆರೋಪವನ್ನು ಜಗಳೂರು ಪೊಲೀಸರು ತಳ್ಳಿ ಹಾಕಿದ್ದಾರೆ. ವಶಕ್ಕೆ ಪಡೆದ ಯುವಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಠಾಣೆಗೆ ನುಗ್ಗಲು ಯತ್ನಿಸಿದಾಗ ಅವರನ್ನು ಲಾಠಿಯಿಂದ ಚದುರಿಸಲಾಯಿತು ಅಷ್ಟೇ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Bengaluru News: ಬೆಂಗಳೂರಿನ ಜೆಪಿ ನಗರದಲ್ಲಿ ನೂತನ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಆಯುರಾಶ್ರಮದ ಶ್ರೀ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಹಾಗೂ ಮಾಜಿ ಕಾರ್ಪೊರೇಟರ್ ನಾಗರತ್ನ ರಾಮಮೂರ್ತಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

VISTARANEWS.COM


on

Inauguration of Pushpam Ayurveda Wellness Center in Bengaluru
Koo

ಬೆಂಗಳೂರು: ನಗರದ ಜೆಪಿ ನಗರದಲ್ಲಿ ನೂತನ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಆಯುರಾಶ್ರಮದ ಶ್ರೀ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಹಾಗೂ ಮಾಜಿ ಕಾರ್ಪೊರೇಟರ್ ನಾಗರತ್ನ ರಾಮಮೂರ್ತಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ (Bengaluru News) ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯೋಜನೆ ಮತ್ತು ಅಭಿವೃದ್ಧಿ ಅಧಿಕಾರಿ ಡಾ. ಮೊಹಮ್ಮದ್ ರಫಿ ಹಕೀಂ, ಬೆಂಗಳೂರು ಡಿಎಒ ಡಾ. ಶಹಾಬುದ್ದಿನ್, ಪ್ರಸಿದ್ಧ ಆಯುರ್ವೇದ ವೈದ್ಯರಾದ ಡಾ. ಬಲ್ಲಾಳ ಕೆ.ಸಿ., ಡಾ. ಗಿರಿಧರ್ ಕಜೆ ಮತ್ತು ಇತರ ವೈದ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಸ್ವಾಮಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಪ್ರೈವೇಟ್ ಲಿಮಿಟೆಡ್‌ನ ಘಟಕ ಇದಾಗಿದ್ದು, ಜೆಪಿ ನಗರದ 9ನೇ ಕ್ರಾಸ್ ರಸ್ತೆಯ ತಿರುಮಲಗಿರಿ ದೇವಸ್ಥಾನದ ಮುಂಭಾಗದಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್ ಅನ್ನು ಆರಂಭಿಸಲಾಗಿದೆ.

ಭಾರತೀಯ ಪಾರಂಪರಿಕ ವಿಧಾನಗಳು ಮತ್ತು ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಡಾ. ರಾಜಶೇಖರ ಭೂಸನೂರಮಠ ಮತ್ತು ಡಾ. ಮಹತಿ ಸಾಹುಕರ್ ಅವರು, ಈ ಮಲ್ಟಿ ಸ್ಪೆಷಾಲಿಟಿ ಆಯುರ್ವೇದ ಆಸ್ಪತ್ರೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ: Shira News: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಈ ಆಯುರ್ವೇದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕರ್ನಾಟಕದಲ್ಲಿ ವಿಶೇಷವಾದ ಆಸ್ಪತ್ರೆಯಿದಾಗಿದ್ದು, ತ್ವಚೆ ಆರೈಕೆ, ಗಾಯದ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ, ಡಿಟಾಕ್ಸ್, ಮಾನಸಿಕ, ವಿಶೇಷ ಚಿಕಿತ್ಸೆಗಳು ಮತ್ತು ಸಾಮಾನ್ಯ ಚಿಕಿತ್ಸೆಗಳನ್ನು ನಡೆಸುವ ವಿವಿಧ ವಿಭಾಗಗಳನ್ನು ಹೊಂದಿದೆ. ಜನರು ಆರೋಗ್ಯದ ಉತ್ತಮ ಲಾಭಗಳನ್ನು ಪಡೆಯಲು ಈ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಭೂಸನೂರಮಠ ತಿಳಿಸಿದ್ದಾರೆ.

Continue Reading

ಕರ್ನಾಟಕ

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Kalki 2898 AD: ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ 2 ನಿಮಿಷ ಮತ್ತು 51 ಸೆಕೆಂಡ್‌ಗಳ ಟ್ರೈಲರ್ ಬಿಡುಗಡೆ ಆಗಿದೆ. ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

Kalki 2898 AD Trailer Released on Vyjayanthi Movies YouTube Channel
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಚಿತ್ರದಲ್ಲಿ ಪ್ರಭಾಸ್‌ ಭೈರವನಾಗಿ, ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌ ಮತ್ತು ಅಮಿತಾಭ್‌ ಬಚ್ಚನ್‌ ಕೂಡ ಅದ್ಭುತವಾದ ಆಕ್ಷನ್‌ ಅನ್ನು ಮಾಡಿರುವುದು ಟ್ರೇಲರ್‌ನಿಂದ ತಿಳಿಯುತ್ತದೆ. ಅತಿಥಿ ಪಾತ್ರ ಮತ್ತು ಖಳನಾಯಕನ ಪಾತ್ರವನ್ನು ನಿರ್ವಹಿಸಿರುವ ಕಮಲ್‌ ಹಾಸನ್‌ ಟ್ರೇಲರ್‌ನ ಕೊನೆಯಲ್ಲಿ ಭಯ ಪಡಬೇಡಿ ಇನ್ನೊಂದು ಲೋಕ ಬರುತ್ತಿದೆ ಎಂಬ ಡೈಲಾಗ್‌ ಹೇಳುವ ಮೂಲಕ ಗುರುತಿಸಲಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಪೋಸ್ಟರ್‌ಗಳಿಂದಲೇ ಸಿನಿಮಾ ಸಂಚಲನ ಮೂಡಿಸಿದ್ದು, ಟ್ರೇಲರ್‌ ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

Continue Reading

ಕರ್ನಾಟಕ

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Stabbing Case: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದಿದ್ದ ಆರೋಪಿಗಳ ಪೈಕಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Stabbing Case
Koo

ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ಇಬ್ಬರು ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಐವರನ್ನು ಪೊಲೀಸರು ಸೆರೆಹಿಡಿದ್ದಾರೆ. ಇದೇ ಪ್ರಕರಣದಲ್ಲಿ ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ಮೇಲೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18) ಹಾಗೂ ಹಫೀಝ್(24) ಬಂಧಿತ ಅರೋಪಿಗಳು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಭಾನುವಾರ ರಾತ್ರಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬೋಳಿಯಾರಿನ ಬಿಜೆಪಿ ಕಾರ್ಯಕರ್ತರಾದ ಹರೀಶ್ ‌ಹಾಗೂ ನಂದ ಕುಮಾರ್‌ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು.

ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಘೋಷಣೆಗಳನ್ನು ಕೂಗಿದ್ದಾರೆ ಎಂದು ಕೆಲ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿ, ಹಲ್ಲೆ ನಡೆಸಿತ್ತು. ಇದೇ ವೇಳೆ ಕೃಷ್ಣ ಕುಮಾರ್ ಎಂಬಾತನಿಗೆ ಹಿಗ್ಗಾಮುಗ್ಗಾ ಹಲ್ಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇದೀಗ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಪ್ರಚೋದನಕಾರಿ ಘೋಷಣೆ; ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪ್ರಕರಣ

ಮಂಗಳೂರು: ಚೂರಿ ಇರಿತ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲ ನೀಡಿದ ದೂರಿನಡಿ ಸುರೇಶ್, ವಿನಯ್, ಸುಭಾಷ್, ರಂಜಿತ್ ಹಾಗೂ ಧನಂಜಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ | Hebbe Waterfalls : ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಪ್ರವಾಸಿಗ ಸಾವು

ನೆನ್ನೆ ರಾತ್ರಿ 8.50 ರ ಸುಮಾರಿಗೆ ಕೆಲ ಯುವಕರು ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ದೂರು ನೀಡಲಾಹಿದೆ. ಮಸೀದಿ ಬಳಿ ನಿಂತಿದ್ದವರಿಗೂ ಕೆಟ್ಟ ಶಬ್ದಗಳಲ್ಲಿ ನಿಂದಿಸಿದ ಆರೋಪದಲ್ಲಿ ಐಪಿಸಿ 143, 147, 148, 153A, 504, 506, 149ರಡಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿದ್ದು, ಹಲವು ಆರೋಪ ಮಾಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ಕುಟುಂಬದ ಕುಡಿ, ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ‌ ಅವರಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವುದು ಭಾರಿ ಸುದ್ದಿಯಾಗಿದೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದು, ಶ್ರೀದೇವಿ ಭೈರಪ್ಪ (Sridevi Byrappa) ಅವರ ಬಗ್ಗೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. “ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬುವರ ಜತೆ ಅಕ್ರಮ ಸಂಬಂಧ ಇದೆ” ಎಂಬುದಾಗಿ ಅವರು ಆರೋಪಿಸಿದ್ದಾರೆ.

“ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

ಯುವ ಕುಟುಂಬವನ್ನು ಕಂಟ್ರೋಲ್‌ ಮಾಡಲು ಯತ್ನ

“ಯುವ ಪತ್ನಿಯು ಇಡೀ ಕುಟುಂಬದ ವ್ಯವಹಾರ ಹಾಗೂ ಎಲ್ಲದರ ಮೇಲೂ ಕಂಟ್ರೋಲ್ ಮಾಡಲು ಪ್ರಯತ್ನಿಸಿದ್ದಳು. ಯುವ ಫ್ಯಾಮಿಲಿಯಿಂದ ಬಹಳ ಹಣ ಖರ್ಚು ಮಾಡಿಸಿಕೊಂಡಿದ್ದಾರೆ. ಐಎಎಸ್ ಕಲಿಯಲು ದೆಹಲಿಗೆ ಹೋಗಿದ್ದರು. ಅವಳ ಬಾಯ್ ಫ್ರೆಂಡ್ ರಾಧಯ್ಯ ಎಂಬವರ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ರಾತ್ರಿ ಅವನ ಮನೆಯಲ್ಲಿ ಉಳದುಕೊಳ್ತಿದ್ದರು. ಇಂಥ ಹಲವು ಕಾರಣಗಳನ್ನು ಅರ್ಜಿಯಲ್ಲಿ ನಮೂದಿಸಿ ಫೈಲ್ ಮಾಡಿದ್ದೇವೆ. ಆದರೆ ಯುವ ಪತ್ನಿಯು ಯುವನಿಗೆ ಬೇರೆ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರ ಜತೆ ಯುವನಿಗೆ ಸಂಬಂಧ ಇತ್ತು ಎಂದು ಅವರು ರಿಪ್ಲೈ ಮಾಡಿದ್ದಾರೆ” ಎಂದು ತಿಳಿಸಿದರು.

3 ಕೋಟಿ ರೂ. ಅಕ್ರಮ ವರ್ಗಾವಣೆ

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ವಿಚ್ಛೇದನ ಅರ್ಜಿ ಸಿಕ್ಕಾಗ ಉತ್ತರಿಸುವೆ; ಯುವ ನೋಟಿಸ್‌ಗೆ ಪತ್ನಿ ಶ್ರೀದೇವಿ ಫಸ್ಟ್‌ ರಿಯಾಕ್ಷನ್!

Continue Reading
Advertisement
Inauguration of Pushpam Ayurveda Wellness Center in Bengaluru
ಬೆಂಗಳೂರು5 mins ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ18 mins ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ42 mins ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ1 hour ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ2 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ3 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ3 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sowing seed distribution in Shira by MLA TB Jayachandra
ತುಮಕೂರು3 hours ago

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

World Environment Day celebration in Banavasi
ಉತ್ತರ ಕನ್ನಡ3 hours ago

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Vinay Kulkarni
ಕರ್ನಾಟಕ4 hours ago

Vinay Kulkarni: ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ; ಸಿಬಿಐ ವಿಶೇಷ ಕೋರ್ಟ್‌ನ ತೀರ್ಪು ಎತ್ತಿ ಹಿಡಿದ ಸುಪ್ರೀಂ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌