Exam Results: ಆಂಧ್ರಪ್ರದೇಶದಲ್ಲಿ 2 ದಿನದಲ್ಲಿ 9ವಿದ್ಯಾರ್ಥಿಗಳ ಆತ್ಮಹತ್ಯೆ, ಪಾಲಕರಿಗೆ ಇರಲಿ ಎಚ್ಚರ - Vistara News

ದೇಶ

Exam Results: ಆಂಧ್ರಪ್ರದೇಶದಲ್ಲಿ 2 ದಿನದಲ್ಲಿ 9ವಿದ್ಯಾರ್ಥಿಗಳ ಆತ್ಮಹತ್ಯೆ, ಪಾಲಕರಿಗೆ ಇರಲಿ ಎಚ್ಚರ

ವಿಶಾಖಪಟ್ಟಣಂ ಜಿಲ್ಲೆಯ ಕಂಚರಪಾಲೆಂ ನಿವಾಸಿಯಾಗಿದ್ದ 18ವರ್ಷದ ಹುಡುಗ ಪಿಯುಸಿ ಎರಡನೇ ವರ್ಷದ ಪರೀಕ್ಷೆಯಲ್ಲಿ ಫೇಲ್​ ಆದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ತೂರ್​ ಜಿಲ್ಲೆಯಲ್ಲಿಯೇ ಇಬ್ಬರು 17ವರ್ಷದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

VISTARANEWS.COM


on

BJP Polling agent death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶಾಖಪಟ್ಟಣಂ: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ (School Students Suicide) ಆತ್ಮಹತ್ಯೆ ಪ್ರಕರಣಗಳೂ ಹೆಚ್ಚುತ್ತವೆ. ಪರೀಕ್ಷೆ ಬರೆಯಲು ಭಯವಾಗಿ ಸಾಯುವವರು, ಬರೆದ ಮೇಲೆ ಫೇಲ್​ ಆಗಬಹುದು ಎಂದು ಭಾವಿಸಿ ಆತ್ಮಹತ್ಯೆ ಮಾಡಿಕೊಳ್ಳುವವರು, ರಿಸಲ್ಟ್ ಬಂದ ಮೇಲೆ ಕಡಿಮೆ ಅಂಕ ಬಂತು ಎಂದು ಸಾಯುವವರು..ಒಟ್ನಲ್ಲಿ ಅನೇಕರು ತಮ್ಮ ಜೀವನವನ್ನು ಕೊನೆಗಾಣಿಸಿಕೊಳ್ಳುತ್ತಾರೆ. ಈಗ ಆಂಧ್ರಪ್ರದೇಶದಿಂದ ಒಂದು ಆತಂಕಕಾರಿ ವರದಿ ಹೊರಬಿದ್ದಿದೆ. ಬುಧವಾರ ಆಂಧ್ರಪ್ರದೇಶದಲ್ಲಿ 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ಫಲಿತಾಂಶ (Exams Result) ಹೊರಬಿದ್ದಿದ್ದು, ಶುಕ್ರವಾರದವರೆಗೆ ಒಟ್ಟು 9 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (School Students Suicide In Andhra Pradesh). ಹಾಗೇ, ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದವರನ್ನು ರಕ್ಷಿಸಲಾಗಿದೆ. ಅಂದಹಾಗೇ, ಆಂಧ್ರಪ್ರದೇಶದಲ್ಲಿ ಈ ಎರಡೂ ತರಗತಿಗಳಿಂದ 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, 11ನೇ ತರಗತಿ ಫಲಿತಾಂಶ ಶೇ.61 ಮತ್ತು 12ನೇ ತರಗತಿ ಫಲಿತಾಂಶ ಶೇ.72ರಷ್ಟು ದಾಖಲಾಗಿದೆ.

ಬಿ ತರುಣ್​ (17) ಎಂಬ ಹುಡುಗ 11ನೇ ತರಗತಿ ಪರೀಕ್ಷೆ ಬರೆದಿದ್ದ. ಮೂಲತಃ ಶ್ರೀಕುಲಂ ಜಿಲ್ಲೆಯ ದಂಡು ಗೋಪಾಲಪುರಂ ಗ್ರಾಮದವನಾದ ಇವನು ಮೂರ್ನಾಲ್ಕು ವಿಷಯದಲ್ಲಿ ಫೇಲ್ ಆಗಿದ್ದ. ಅವನು ಅದೇ ಜಿಲ್ಲೆಯ ರೈಲ್ವೆ ಮಾರ್ಗವೊಂದಕ್ಕೆ ಹೋಗಿ, ಸಂಚರಿಸುತ್ತಿದ್ದ ರೈಲಿನ ಎದುರು ಹಾರಿ ಪ್ರಾಣಬಿಟ್ಟಿದ್ದಾನೆ. ವಿಶಾಖಪಟ್ಟಣಂ ಜಿಲ್ಲೆಯ ತ್ರಿನಾಧಪುರಂ ನಿವಾಸಿಯಾಗಿದ್ದ 16ವರ್ಷದ ಬಾಲಕಿ ಅಖಿಲಶ್ರೀ ಎಂಬಾಕೆ ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೂಡ ಪಿಯುಸಿ ಮೊದಲ ವರ್ಷದ ಪರೀಕ್ಷೆ ಬರೆದು ಕೆಲವು ವಿಷಯಗಳಲ್ಲಿ ಫೇಲ್ ಆಗಿದ್ದಳು.

ಇದನ್ನೂ ಓದಿ: Jiah Khan Suicide Case: ಜಿಯಾ ಖಾನ್​ ಆತ್ಮಹತ್ಯೆ ಕೇಸ್​ನಲ್ಲಿ ಸೂರಜ್​ ಪಾಂಚೋಲಿಗೆ ಬಿಗ್ ರಿಲೀಫ್​; ನಿರ್ದೋಷಿ ಎಂದು ತೀರ್ಪು ಕೊಟ್ಟ ಕೋರ್ಟ್​​

ಇನ್ನು ವಿಶಾಖಪಟ್ಟಣಂ ಜಿಲ್ಲೆಯ ಕಂಚರಪಾಲೆಂ ನಿವಾಸಿಯಾಗಿದ್ದ 18ವರ್ಷದ ಹುಡುಗ ಪಿಯುಸಿ ಎರಡನೇ ವರ್ಷದ ಪರೀಕ್ಷೆಯಲ್ಲಿ ಫೇಲ್​ ಆದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ತೂರ್​ ಜಿಲ್ಲೆಯಲ್ಲಿಯೇ ಇಬ್ಬರು 17ವರ್ಷದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ನದಿಗೆ ಹಾರಿ ಜೀವ ಬಿಟ್ಟಿದ್ದರೆ, ವಿದ್ಯಾರ್ಥಿಯೊಬ್ಬ ಕೀಟನಾಶಕ ಸೇವನೆ ಮಾಡಿ ಮೃತಪಟ್ಟಿದ್ದಾನೆ. ಹಾಗೇ, ಅಂಕಪಲ್ಲಿ ಎಂಬಲ್ಲಿ 17ವರ್ಷದ ವಿದ್ಯಾರ್ಥಿಯೊಬ್ಬ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ನೇಣುಬಿಗಿದುಕೊಂಡು ಮೃತಪಟ್ಟಿದ್ದಾನೆ. ಇನ್ನೂ ಇಬ್ಬರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮಕ್ಕಳ ಬಗ್ಗೆ ಪಾಲಕರು ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Chandrababu Naidu: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ

Chandrababu Naidu: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್.​ ಚಂದ್ರಬಾಬು ನಾಯ್ಡು ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ (ಜೂನ್‌ 12) ರಾಜ್ಯಪಾಲ ಅಬ್ದುಲ್ ನಜೀರ್ ಅವರು ಪ್ರಮಾನ ವಚನ ಬೋಧಿಸಿದರು. ಜನಸೇನಾ ಪಾರ್ಟಿಯ ಪವನ್‌ ಕಲ್ಯಾಣ್‌ ಕೂಡ ಈ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

VISTARANEWS.COM


on

Chandrababu Naidu
Koo

ವಿಜಯವಾಡ: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್.​ ಚಂದ್ರಬಾಬು ನಾಯ್ಡು (Chandrababu Naidu) ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ (ಜೂನ್‌ 12) ರಾಜ್ಯಪಾಲ ಅಬ್ದುಲ್ ನಜೀರ್ ಅವರು ಪ್ರಮಾನ ವಚನ ಬೋಧಿಸಿದರು. ಜನಸೇನಾ ಪಾರ್ಟಿಯ ಪವನ್‌ ಕಲ್ಯಾಣ್‌ ಕೂಡ ಈ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಎನ್‌ಡಿಎ ಒಕ್ಕೂಟದ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಟಿಡಿಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಕೆ.ಅಚ್ಚಣ್ಣ ನಾಯ್ಡು ಮತ್ತು ಜನಸೇನಾ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂಡ್ಲಾ ಮನೋಹರ್ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಜೆ.ಪಿ.ನಡ್ಡಾ, ನಿತಿನ್‌ ಗಡ್ಕರಿ, ರಾಮ್‌ದಾಸ್‌ ಅಥವಾಳೆ, ಅನುಪ್ರಿಯಾ ಪಟೇಲ್‌, ಚಿರಾಗ್‌ ಪಾಸ್ವಾನ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ, ಎನ್‌ಚಿಪಿ ನಾಯಕರಾದ ಪ್ರಫುಲ್‌ ಪಟೇಲ್‌, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತಿತರರು ಪಾಲ್ಗೊಂಡಿದ್ದರು.

ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ಮಂಗಳವಾರ ತಡರಾತ್ರಿ ಅಮರಾವತಿಯ ತಮ್ಮ ನಿವಾಸದಲ್ಲಿ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರೊಂದಿಗೆ ಸಭೆ ನಡೆಸಿದ ನಂತರ ಚಂದ್ರಬಾಬು ನಾಯ್ಡು ತಮ್ಮ ಸಚಿವರ ತಂಡವನ್ನು ಅಂತಿಮಗೊಳಿಸಿದ್ದರು. ಸತ್ಯ ಕುಮಾರ್ ಯಾದವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಏಕೈಕ ಶಾಸಕ. ಜನಸೇನಾ ಪಾರ್ಟಿಯಿಂದ ಪವನ್ ಕಲ್ಯಾಣ್, ನಾದೆಂಡ್ಲಾ ಮನೋಹರ್ ಮತ್ತು ಕಂದುಲಾ ದುರ್ಗೇಶ್ ಮೂವರು ಸಚಿವರಾಗಿ ಆಯ್ಕೆಯಾಗಿದ್ದಾರೆ. ಈ ಸಚಿವ ಸಂಪುಟದಲ್ಲಿ 17 ಹೊಸ ಮುಖಗಳಿವೆ. ಸಂಪುಟದಲ್ಲಿ ಮೂವರು ಮಹಿಳೆಯರಿದ್ದಾರೆ.

ಚಂದ್ರಬಾಬು ನಾಯ್ಡು 2014ರಲ್ಲಿ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು. ಅವರು 2019ರ ಚುನಾವಣೆಯಲ್ಲಿ ಸೋತು 2024ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. ಇದೀಗ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಮರಳಿದ್ದಾರೆ. ಮಂಗಳವಾರ ವಿಜಯವಾಡದ ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿ(JSP)ಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದ್ದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇದನ್ನೂ ಓದಿ: Chandrababu Naidu: ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ; ಚಂದ್ರಬಾಬು ನಾಯ್ಡು ಘೋಷಣೆ

Continue Reading

ರಾಜಕೀಯ

Viral News: ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿ?

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು ಜಾರಿಗೊಳಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದೆ. ವೈರಲ್ (Viral News) ಆಗಿರುವ ಈ ಸುದ್ದಿ ಸತ್ಯವೇ ಸುಳ್ಳೇ ಎಂಬ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ. ಆದರೆ ಈ ಸುದ್ದಿ ಹುಟ್ಟಿಕೊಳ್ಳಲು ಕಾರಣ ಏನು? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Viral News
Koo

ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು (Population Control Bill) ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರ ಉತ್ತರಪ್ರದೇಶದಲ್ಲಿ (uttarpradesh) ಜಾರಿಗೊಳಿಸಿದೆ ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ (Viral News) ಭಾರಿ ಚರ್ಚೆ ನಡೆಯುತ್ತಿದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಎಲ್ಲ ಸರ್ಕಾರಿ ಸಬ್ಸಿಡಿಗಳು ಮತ್ತು ಸೌಲಭ್ಯಗಳನ್ನು ಸರ್ಕಾರ ತೆಗೆದುಹಾಕಿದೆ. ಮಾತ್ರವಲ್ಲದೇ ಸ್ಥಳೀಯ ಚುನಾವಣೆಯಲ್ಲೂ ಭಾಗವಹಿಸುವಂತಿಲ್ಲ ಎಂದು ಎಕ್ಸ್ (x) ಬಳಕೆದಾರರೊಬ್ಬರು ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿರುವ ಈ ಸುದ್ದಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ ಇದು ಸುಳ್ಳು. ಉತ್ತರಪ್ರದೇಶದಲ್ಲಿ ಅಂತಹ ಯಾವುದೇ ಕಾನೂನು ಜಾರಿಯಾಗಿಲ್ಲ ಎಂಬುದು ಮಾಧ್ಯಮಗಳು ನಡೆಸಿದ ತನಿಖೆಯಿಂದ ತಿಳಿದು ಬಂದಿದೆ.

ಉತ್ತರಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು 2021ರಲ್ಲಿ ಬಿಡುಗಡೆ ಮಾಡಲಾಯಿತಾದರೂ ಅದನ್ನು ಇದುವರೆಗೆ ಶಾಸಕಾಂಗ ಸಭೆಯಲ್ಲಿ ಮಂಡಿಸಲಾಗಿಲ್ಲ.

ಉತ್ತರಪ್ರದೇಶದ ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ರಾಜ್ಯ ಕಾನೂನು ಆಯೋಗವು ರಚಿಸಿದ್ದು, 2021ರ ಜುಲೈ 10ರಂದು ಅದರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಸಲಹೆಗಳನ್ನು ಕಳುಹಿಸಲು ಹೇಳಲಾಗಿದೆ. ಈ ಕರಡು ಮಸೂದೆಯು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರನ್ನು ಸರ್ಕಾರದ ಯೋಜನೆಗಳು ಮತ್ತು ಸವಲತ್ತುಗಳಿಂದ ದೂರವಿಡುವ ನಿಬಂಧನೆಗಳನ್ನು ಹೊಂದಿದೆ. ಆಆದರೂ ಉತ್ತರಪ್ರದೇಶ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿಲ್ಲ.

ಈ ಕುರಿತು 2021ರ ಸೆಪ್ಟೆಂಬರ್ ನಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿಕ್ರಿಯಿಸಿ, ಎಲ್ಲದಕ್ಕೂ ಒಂದು ಸಮಯವಿದೆ. ನೀವು ಈ ಹಿಂದೆ ಮಂದಿರ ವಹೀಂ ಬನೇಂಗೆ, ತಾರೀಖ್ ನಹೀಂ ಬತಾಯೇಂಗೆ ಎಂದು ಹೇಳುತ್ತಿದ್ದೀರಿ. ಆದರೆ ಮಂದಿರದ ನಿರ್ಮಾಣ ಪ್ರಾರಂಭವಾಗಿದೆ. ಆರ್ಟಿಕಲ್ 370 ಅನ್ನು ಸಹ ತೆಗೆದುಹಾಕಲಾಗಿದೆ ಎಂದು ಹೇಳಿದ್ದರು.

ಬಿಜೆಪಿ ಯುಪಿ ವಕ್ತಾರ ಮನೀಶ್ ಶುಕ್ಲಾ ಮಾತನಾಡಿ, ಮಸೂದೆಯನ್ನು ಇನ್ನೂ ವಿಧಾನಸಭೆಯಲ್ಲಿ ಮಂಡಿಸಿಲ್ಲ. ಕರಡನ್ನು 2021 ರಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರಿಂದ ಸಲಹೆಗಳನ್ನು ಕೇಳಲಾಗಿದೆ. ಆದರೆ ಅದನ್ನು ವಿಧಾನಸಭೆಯಲ್ಲಿ ತೆಗೆದುಕೊಳ್ಳಲೇ ಇಲ್ಲ ಎಂದು ತಿಳಿಸಿದ್ದಾರೆ.


2021ರ ಜುಲೈ 11ರ ಬಳಿಕ ಟಿವಿ ಚಾನೆಲ್ ಒಂದರ ತುಣುಕನ್ನು ಅನೇಕರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಅದು ವೈರಲ್ ಆಗುತ್ತಲೇ ಇದೆ.

ರಿಪಬ್ಲಿಕ್ ಭಾರತ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟವಾದ ವಿಡಿಯೋದಿಂದಲೇ ಈ ಸುಳ್ಳು ಸುದ್ದಿ ಹುಟ್ಟಿಕೊಂಡಿರುವುದು ದೃಢಪಟ್ಟಿದೆ. ಇದರಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೋರಖ್‌ಪುರ ಮೃಗಾಲಯಕ್ಕೆ ಭೇಟಿ ನೀಡಿ ಘೇಂಡಾಮೃಗಗಳಾದ ‘ಹರ್’ ಮತ್ತು ‘ಗೌರಿ’ಗೆ ಆಹಾರ ನೀಡುತ್ತಾರೆ. ಇದರೊಂದಿಗೆ ಉತ್ತರ ಪ್ರದೇಶ ಕಾನೂನು ಆಯೋಗವು ಜನಸಂಖ್ಯೆ ನಿಯಂತ್ರಣದ ಕರಡು ಮಸೂದೆಯನ್ನು ರಾಜ್ಯಕ್ಕೆ ರವಾನಿಸಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

ಈ ಕರಡಿನ ಪ್ರಕಾರ ಸರ್ಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗೆ ಸರ್ಕಾರಿ ಉದ್ಯೋಗಗಳು ಮತ್ತು ಕಲ್ಯಾಣಕ್ಕಾಗಿ ಅನರ್ಹತೆಯಂತಹ ದಂಡವನ್ನು ಸೂಚಿಸುತ್ತದೆ ಅಸ್ಸಾಂನಂತಹ ರಾಜ್ಯಗಳಲ್ಲಿ ಇದೇ ರೀತಿಯ ನೀತಿಗಳಿವೆ. 2024ರ ಜೂನ್ 7ರಿಂದ ಉತ್ತರ ಪ್ರದೇಶ ಸರ್ಕಾರದ ಈ ಹಕ್ಕು ಜಾರಿಗೊಳಿಸುತ್ತದೆ ಎಂದು ಹೇಳಲಾಗಿದೆ.

ಟಿವಿ ಚಾನೆಲ್ ವೊಂದರ ಯೂಟ್ಯೂಬ್ ಚಾನೆಲ್‌ನಲ್ಲಿನ ಇದರ ಸಂಪೂರ್ಣ ವಿಡಿಯೋ ವರದಿಯಲ್ಲಿ ನಿರೂಪಕಿ ಕರಡು ಕುರಿತು ಮಾತನಾಡುತ್ತಿದ್ದಾರೆಯೇ ಹೊರತು ಅದರ ಅನುಷ್ಠಾನದ ಬಗ್ಗೆ ಅಲ್ಲ ಎಂಬುದು ಸ್ಪಷ್ಟವಾಗಿದೆ.
ಹೀಗಾಗಿ ವೈರಲ್ ಪೋಸ್ಟ್‌ ಗಳು ಸುಳ್ಳು. ಉತ್ತರಪ್ರದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಮಸೂದೆಯನ್ನು ಜಾರಿಗೆ ತರಲಾಗಿಲ್ಲ ಎಂಬುದು ಸ್ಪಷ್ಟವಾಗಿದೆ.

Continue Reading

ದೇಶ

Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Modi 3.0: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾಗಿ ಅಧಿಕಾರ ವಹಿಸಿದ ಹರ್‌ದೀಪ್‌ ಸಿಂಗ್‌ ಪುರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಗಣನೀಯವಾಗಿ ಇಳಕೆಯಾಗಲಿದೆ.

VISTARANEWS.COM


on

Modi 3.0
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾಗಿ ಅಧಿಕಾರ ವಹಿಸಿದ ಹರ್‌ದೀಪ್‌ ಸಿಂಗ್‌ ಪುರಿ (Hardeep Singh Puri) ಗುಡ್‌ನ್ಯೂಸ್‌ ನೀಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಮತ್ತು ನೈಸರ್ಗಿಕ ಅನಿಲಗಳನ್ನು ಜಿಎಸ್‌ಟಿ (Goods and Services Tax-GST) ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಗಣನೀಯವಾಗಿ ಇಳಕೆಯಾಗಲಿದೆ.

ʼʼಪೆಟ್ರೋಲ್‌, ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು 2020ರಲ್ಲಿಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ರಾಜ್ಯಗಳ ಒಪ್ಪಿಗೆ ಅಗತ್ಯ. ಆದರೆ ರಾಜ್ಯಗಳಿಗೆ ಪ್ರಮುಖ ಆದಾಯ ಬರುವುದು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಹೇರಲಾಗಿರುವ ತೆರಿಗೆಯಿಂದ. ಹೀಗಾಗಿ ಇದು ಜಾರಿ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಲಾಗುವುದುʼʼ ಅವರು ತಿಳಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಈ ಹಿಂದೆ ಮಾತನಾಡಿದ್ದ ಹರ್‌ದೀಪ್‌ ಸಿಂಗ್‌ ಪುರಿ, “ರಾಜ್ಯಗಳು ಈ ಬಗ್ಗೆ ಕ್ರಮ ಕೈಗೊಂಡರೆ, ಜಾರಿಗೊಳಿಸಲು ನಾವು ಸಿದ್ಧರಿದ್ದೇವೆ. ಅದನ್ನು ಹೇಗೆ ಕಾರ್ಯಗತಗೊಳಿಸಬೇಕು ಎನ್ನುವುದನ್ನು ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ಹೇಳಿದ್ದರು. 2022ರಲ್ಲಿಯೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿದ್ದ ಹರ್‌ದೀಪ್‌ ಸಿಂಗ್‌ ಪುರಿ ಈ ಬಗ್ಗೆ ತಿಳಿಸಿದ್ದರು. ಅಲ್ಲದೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೂ ಈ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. 2023ರ ನವೆಂಬರ್‌ನಲ್ಲಿ ಅವರು, ಈ ಯೋಜನೆ ಜಾರಿಗೆ ತರುವುದರಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ಒತ್ತಿ ಹೇಳಿದ್ದರು.

ಜಿಎಸ್‌ಟಿ ಜಾರಿಗೆ ಬಂದಾಗಿನಿಂದ ಇಂಧನ ಉತ್ಪನ್ನಗಳನ್ನು ಹೊಸ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಚರ್ಚೆ ನಡೆದಿದೆ. ಪ್ರಸ್ತುತ ಜಿಎಸ್‌ಟಿ ವ್ಯಾಪ್ತಿಗೆ ಒಳಪಡದ ಪೆಟ್ರೋಲ್, ಡೀಸೆಲ್, ನೈಸರ್ಗಿಕ ಅನಿಲ ಮತ್ತು ವಾಯುಯಾನ ಟರ್ಬೈನ್ ಇಂಧನದಂತಹ ಉತ್ಪನ್ನಗಳು ಮೌಲ್ಯವರ್ಧಿತ ತೆರಿಗೆ (VAT), ಕೇಂದ್ರ ಅಬಕಾರಿ ಸುಂಕ ಮತ್ತು ಕೇಂದ್ರ ಮಾರಾಟ ತೆರಿಗೆಯ ಅಡಿಯಲ್ಲಿ ಬರುತ್ತದೆ. ಪ್ರತಿ ರಾಜ್ಯವು ಪೆಟ್ರೋಲ್ ಮತ್ತು ಡೀಸೆಲ್‌ಗೆ ತನ್ನದೇ ಆದ ದರಗಳನ್ನು ನಿಗದಿಪಡಿಸುತ್ತದೆ. ಒಂದು ವೇಳೆ ಪೆಟ್ರೋಲ್- ಡೀಸೆಲ್ ಅನ್ನು ಜಿಎಸ್‌ಟಿ ಕೆಳಗೆ ತಂದುಬಿಟ್ಟರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬರುತ್ತಿರುವ ಆದಾಯ ಶೇ. 50ರಷ್ಟು ಕುಸಿದು ಹೋಗುತ್ತದೆ.

ಪ್ರಸ್ತುತ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕವನ್ನು ಮತ್ತು ರಾಜ್ಯ ಸರ್ಕಾರವು ಮೌಲ್ಯವರ್ಧಿತ ತೆರಿಗೆಯನ್ನು ಸಂಗ್ರಹಿಸುತ್ತದೆ.

ಇದನ್ನೂ ಓದಿ: GST : ರಾಜ್ಯಗಳು ಒಪ್ಪಿದರೆ ಪೆಟ್ರೋಲ್‌, ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ: ನಿರ್ಮಲಾ ಸೀತಾರಾಮನ್

ಕಳೆದ ವರ್ಷ ಸಚಿವೆ ನಿರ್ಮಲಾ ಸೋತಾರಾಮನ್‌ ಈ ಬಗ್ಗೆ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೊದಲಿನಿಂದಲೂ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಒಲವು ತೋರುತ್ತಿದೆ. ಆದರೆ ಕಾಂಗ್ರೆಸ್ ಈ ಬಗ್ಗೆ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದರು.

Continue Reading

ಪ್ರಮುಖ ಸುದ್ದಿ

Lok Sabha Election : ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Lok Sabha Election: ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು.

VISTARANEWS.COM


on

Lok Sabha Election
Koo

ಬೆಂಗಳೂರು: ಈ ಕ್ಷಣದಲ್ಲೇ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಮತ್ತು ಲೋಕಸಭಾ ಚುನಾವಣೆಯಂತೆಯೇ (Lok Sabha Election ) ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ 142 ಸ್ಥಾನಗಳನ್ನು ಗೆಲ್ಲಲಿದೆ. ಈ ಮೂಲಕ ಇದು ರಾಜ್ಯದಲ್ಲಿ ಕಾಂಗ್ರೆಸ್ 2023ರಲ್ಲಿ ಪಡೆದ ಭಾರಿ ಜನಾದೇಶ ಬುಡಮೇಲಾಗಲಿದೆ. ಡೆಕ್ಕಲ್​ ಹೆರಾಲ್ಡ್​ ಪತ್ರಿಕೆಯು ಈ ಬಗ್ಗೆ ವರದಿಯೊಂದನ್ನು ಮಾಡಿದ್ದು ಜೆಡಿಎಸ್​, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್​ಗೆ ನಷ್ಟವಾಗಲಿದೆ ಎಂದು ವರದಿ ಮಾಡಿದೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿಭಿನ್ನವಾಗಿ ಮತ ಚಲಾಯಿಸುವ ಸುದೀರ್ಘ ಇತಿಹಾಸವನ್ನು ಕರ್ನಾಟಕದ ಮತದಾರರು ಹೊಂದಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು 28 ಸ್ಥಾನಗಳ ಪೈಕಿ ಬಿಜೆಪಿಗೆ 17 ಸೀಟ್ ಕೊಟ್ಟಿದ್ದಾರೆ. ಜೆಡಿಎಸ್ ಸ್ಪರ್ಧಿಸಿರುವ 3ರಲ್ಲಿ 2 ಮತ್ತು ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದುಕೊಂಡಿದೆ. 2019ರಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ 14ರಿಂ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ಅದು ಕೆಲಸ ಮಾಡಿಲ್ಲ.

ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು. ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅವರ ಪುತ್ರ ಮೃಣಾಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಅಲ್ಲಿ ಬಿಜೆಪಿ 50,000 ಮತಗಳ ಮುನ್ನಡೆ ಸಾಧಿಸಿದೆ.

ಮೈತ್ರಿ ಯಶಸ್ಸು

ಚುನಾವಣಾ ಬಳಿಕದ ಅಂಕಿ ಅಂಶಗಳ ಪ್ರಕಾರ, ಬಿಜೆಪಿ-ಜೆಡಿಎಸ್ ಮೈತ್ರಿ ಕೆಲಸ ಮಾಡಿದೆ. ಏಕೆಂದರೆ ಎರಡೂ ಪಕ್ಷಗಳು ಪರಸ್ಪರ ತಮ್ಮ ಮತಗಳನ್ನು ಹಂಚಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಇದು ಸಂಭವಿಸುವುದಿಲ್ಲ ಎಂದು ಕಾಂಗ್ರೆಸ್ ಭಾವಿಸಿತ್ತು. ಅವರ ನಿರೀಕ್ಷೆ ಸುಳ್ಳಾಗಿದೆ. ತುಮಕೂರು ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ ಎಂಬುದೇ ಇದಕ್ಕೆ ಸಾಕ್ಷಿ. ಅದೇ ರೀತಿ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೊಂಚವೂ ಮುನ್ನಡೆ ಸಿಕ್ಕಿಲ್ಲ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

ವ್ಯತರಿಕ್ತ ಫಲಿತಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು. ಬೀದರ್, ರಾಯಚೂರು ಮತ್ತು ಬಳ್ಳಾರಿಯಲ್ಲಿ ಇದು ಬಹುತೇಕ ಮೇಲುಗೈ ಸಾಧಿಸಿದೆ.
ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವ್ ಮತ್ತು ಫೈರ್ ಬ್ರಾಂಡ್ ಹಿಂದುತ್ವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಜಾಪುರ ನಗರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ವಿಶೇಷ.

ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸಿಗುವ ಗಣನೀಯ ಮುನ್ನಡೆ ಇಡೀ ಫಲಿತಾಂಶವನ್ನು ಹೇಗೆ ತಿರುಗಿಸುತ್ತದೆ ಎಂಬುದಕ್ಕೂ ಉದಾಹರಣೆಯಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು ಮಹದೇವಪುರ ಕ್ಷೇತ್ರ ಒಂದರಲ್ಲಿಯೇ 1.14 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದರು. ಇದು ಫಲಿತಾಂಶವನ್ನೇ ಬದಲಾಯಿಸಿ ಗೆಲುವು ತಂದುಕೊಟ್ಟಿತು. ಮಹದೇವಪುರದ ಮತದಾರರ ಸಂಖ್ಯೆ 3 ವಿಧಾನಸಭಾ ಕ್ಷೇತ್ರಗಳಿಗೆ ಸಮನಾಗಿದೆ. ರಾಜಾಜಿನಗರ ಮತ್ತು ಇತರ ಸ್ಥಳಗಳಲ್ಲಿ ನನಗೆ ದೊರೆತ ಮುನ್ನಡೆ ಇಲ್ಲದಿದ್ದರೆ, ಮಹದೇವಪುರ ಮಾತ್ರ ಸಾಕಾಗುತ್ತಿರಲಿಲ್ಲ ಎಂದು ಮೋಹನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಪಕ್ಷ ರಾಜಕೀಯಗೊಳಿಸದಿದ್ದರೆ ಬಿಜೆಪಿಗೆ ಇಷ್ಟೊಂದು ಸೀಟು ಸಿಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದರು. ಯಾಕೆಂದರೆ 2019ಕ್ಕೆ ಹೋಲಿಸಿದರೆ ಕಾಂಗ್ರೆಸ್ ಮತ ಹಂಚಿಕೆ ಶೇ.13ರಷ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಮೂಲ ಗೊತ್ತಾಗಿದೆ.

Continue Reading
Advertisement
Murder case
ಪ್ರಮುಖ ಸುದ್ದಿ2 mins ago

Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

Chandrababu Naidu
ದೇಶ5 mins ago

Chandrababu Naidu: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ

Viral News
ರಾಜಕೀಯ5 mins ago

Viral News: ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿ?

Belagvi Police
ಪ್ರಮುಖ ಸುದ್ದಿ7 mins ago

Belagavi News : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೆ ಪಾಕ್​ ಪರ ಘೋಷಣೆ ಕೂಗಿದ ಆರೋಪಿ

Tumkur News
ಪ್ರಮುಖ ಸುದ್ದಿ30 mins ago

Tumkur News : ವಾಟರ್​ ಮ್ಯಾನ್​ ಮೇಲೆ ಠಾಣೆಯಲ್ಲಿ ಹಲ್ಲೆ ; ಡಿವೈಎಸ್​ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಎಫ್​ಐಆರ್​​

Actor Darshan arest Actor Jaggesh Says Karma Follows You
ಸ್ಯಾಂಡಲ್ ವುಡ್33 mins ago

Actor Darshan: ದರ್ಶನ್‌ ಅರೆಸ್ಟ್​ ಆದ ಬೆನ್ನಲ್ಲೇ ಕರ್ಮ ಫಲ ಎಂದು ಜಗ್ಗೇಶ್‌ ಟ್ವೀಟ್‌!

Modi 3.0
ದೇಶ43 mins ago

Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Vinod Raj admitted hospital
ಸ್ಯಾಂಡಲ್ ವುಡ್1 hour ago

Vinod Raj: ಲೀಲಮ್ಮನ ಮಗ, ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Actor Darshan arrest what about his future project
ಸ್ಯಾಂಡಲ್ ವುಡ್1 hour ago

Actor Darshan: ʻಡೆವಿಲ್‌ʼಗೆ ಜೈಲು ಗ್ಯಾರಂಟಿ ಆದ್ರೆ ಮುಂದಿನ ಸಿನಿಮಾಗಳ ಗತಿಯೇನು? ನಿರ್ಮಾಪಕರಿಗೆ ನಡುಕ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ20 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ22 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ23 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌