ಹಾವೇರಿ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಏಲಕ್ಕಿ ನಾಡಿನ ಪ್ರಭುತ್ವಕ್ಕೆ ಕೈ-ಕಮಲ ನಡುವೆ ಬಿಗ್ ಫೈಟ್! - Vistara News

ಕರ್ನಾಟಕ

ಹಾವೇರಿ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಏಲಕ್ಕಿ ನಾಡಿನ ಪ್ರಭುತ್ವಕ್ಕೆ ಕೈ-ಕಮಲ ನಡುವೆ ಬಿಗ್ ಫೈಟ್!

Karnataka Election 2023: ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ಬಿಜೆಪಿ ಭದ್ರಕೋಟೆ ಭೇದಿಸಲು ಕೈ ಕಸರತ್ತುನಡೆಸಿದೆ. ಜಿಲ್ಲೆಯ 6 ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಮತ್ತೆ ಕಮಲ ಅರಳಿಸಲು ಪ್ರಯತ್ನ ನಡೆದಿದೆ. ಸಿಎಂ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಈ ಬಾರಿ ಜಯದ ಪತಾಕೆ ಹಾರಿಸಲು ಸಜ್ಜಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳ ಮಧ್ಯೆ ಜೆಡಿಎಸ್ ಸೇರಿದಂತೆ ಇತರ ಪಕ್ಷಗಳು ತಮ್ಮ ಅಸ್ತಿತ್ವಕ್ಕೆ ಕಾದಾಡುತ್ತಿವೆ.

VISTARANEWS.COM


on

Karnataka Election 2023: Big fight between BJP and Congress for winning Haveri District
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಸುರೇಶ್ ನಾಯ್ಕ, ವಿಸ್ತಾರ ನ್ಯೂಸ್, ಹಾವೇರಿ
ಉತ್ತರ ಕರ್ನಾಟಕ ಹೆಬ್ಬಾಗಿಲು, ಏಲಕ್ಕಿ ಕಂಪಿನ ಹಾವೇರಿಯಲ್ಲಿ (Haveri District election Survey) ಚುನಾವಣಾ ಕಾವು ಏರಿದೆ. 6 ಕ್ಷೇತ್ರಗಳ ಪೈಕಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ಸೇರಿದಂತೆ 5 ಕ್ಷೇತ್ರಗಳು ಬಿಜೆಪಿ ಮುಷ್ಟಿಯಲ್ಲಿವೆ. 2018ರ ಚುನಾವಣೆಯಲ್ಲಿ 4 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ, 2019ರಲ್ಲಿ ಹಿರೇಕೆರೂರು ಮತ್ತು ರಾಣಿಬೆನ್ನೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದು ಇಡೀ ಜಿಲ್ಲೆ ಕಮಲಮಯವಾಗಿ ಕಾಂಗ್ರೆಸ್ ಮುಕ್ತ ಜಿಲ್ಲೆ ಎನಿಸಿತ್ತು. ಆ ಮೂಲಕ ಹಾವೇರಿ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎನಿಸಿತ್ತು. ಹಾನಗಲ್ ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನದಿಂದ ತೆರವಾದ ಸ್ಥಾನಕ್ಕೆ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಗೆದ್ದು ಬೀಗಿತ್ತು (Karnataka Election 2023).

ಬಿಜೆಪಿ ಸರ್ಕಾರದ ಸಾಧನೆ, ತವರು ಜಿಲ್ಲೆಗೆ ಮುಖ್ಯಮಂತ್ರಿ ಬೊಮ್ಮಾಯಿ ನೀಡಿದ ಹಲವು ಯೋಜನೆ, ಅಭಿವೃದ್ಧಿಗೆ ಹರಿದ ಅನುದಾನ, ಮೋದಿ ಅಲೆ, ತಳ ಮಟ್ಟದಲ್ಲಿ ಪ್ರಬಲವಾಗಿರುವ ಸಂಘಟನೆ ನೆಚ್ಚಿಕೊಂಡು ಬಿಜೆಪಿ ಚುನಾವಣೆ ಎದುರಿಸುವ ಉತ್ಸಾಹದಲ್ಲಿದೆ. ಕಾಂಗ್ರೆಸ್ ಕೂಡ ಸರ್ಕಾರದ ವೈಫಲ್ಯ, ಬೆಲೆಯೇರಿಕೆ, ಆಡಳಿತ ವಿರೋಧಿ ಅಲೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಕೋಟೆ ಭೇದಿಸಲು ಹೊರಟಿದೆ. ಜಿಲ್ಲೆಯಲ್ಲಿ ಜೆಡಿಎಸ್ ಸಂಘಟನೆ ಅಷ್ಟಾಗಿ ಇಲ್ಲದ್ದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಎಲ್ಲ ಕ್ಷೇತ್ರಗಳಲ್ಲಿ ನೇರ ಪೈಪೋಟಿ ಏರ್ಪಟ್ಟಿದೆ.

6 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ, ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಕಂಡುಬರುತ್ತಿದೆ. ಬಿಜೆಪಿ ಭದ್ರ ಕೋಟೆಯನ್ನು ಕೈವಶಪಡಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ಹೆಣೆದಿದ್ದರೆ; ಹಾನಗಲ್, ರಾಣೇಬೆನ್ನೂರು, ಶಿಗ್ಗಾವಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಪಕ್ಷಗಳ ನಿದ್ದೆಗೆಡಿಸಿದೆ. ರಾಣೇಬೆನ್ನೂರಿನಲ್ಲಿ ಎನ್‌ಸಿಪಿಯಿಂದ ಅಖಾಡಕ್ಕಿಳಿದ ಆರ್ ಶಂಕರ್ ಅಬ್ಬರವೂ ಜೋರಾಗಿದೆ. ಮತ್ತೊಂದೆಡೆ ಪಕ್ಷೇತರ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವು ತಂದಿದ್ದಾರೆ. ಅಂತಿಮವಾಗಿ ಮತದಾರರು ಯಾವ ಅಭ್ಯರ್ಥಿಗಳಿಗೆ ತಲೆನೋವು ತಂದೊಡ್ಡಲಿದ್ದಾರೆ ಕಾದು ನೋಡಬೇಕು.

ಶಿಗ್ಗಾಂವಿ-ಸವಣೂರು: ಬಸವರಾಜ ಬೊಮ್ಮಾಯಿ ನಾಗಲೋಟ ತಡೆಯಬಲ್ಲದೇ ಕಾಂಗ್ರೆಸ್?

ಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರ ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಮುಸ್ಲಿಂ ಹಾಗೂ ಲಿಂಗಾಯತರು ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಬೊಮ್ಮಾಯಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಈ ಸಲ ಗೆಲುವಿಗೆ ಸಜ್ಜಾಗಿರುವ ಬೊಮ್ಮಾಯಿಗೆ ಠಕ್ಕರ್ ಕೊಡಲು ಕಾಂಗ್ರೆಸ್ ಮತ್ತೊಮ್ಮೆ ಅಲ್ಪಸಂಖ್ಯಾತರಿಗೆ ಮಣೆ ಹಾಕಿದ್ದು, ಯಾಸೀರ್‌ಖಾನ್ ಪಠಾಣರನ್ನು ಕಣಕ್ಕಿಳಿಸಿದೆ. ಬೊಮ್ಮಾಯಿ ಅವರನ್ನು ಕಟ್ಟಿಹಾಕಲು ಕೈ ನಾಯಕರು ನಡೆಸಿದ ತಂತ್ರಗಾರಿಕೆಯೇ ಈಗ ಕಾಂಗ್ರೆಸ್ ಕೈ ಕಟ್ಟಿಹಾಕಿದೆ. ಮೊದಲು ವಿನಯ ಕುಲಕರ್ಣಿ ಹೆಸರು ಮುಂಚೂಣಿಗೆ ತಂದು, ಬಳಿಕ ಯೂಸುಫ್ ಸವಣೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಸ್ಥಳೀಯರಿಂದ ತೀವ್ರ ವಿರೋದ ವ್ಯಕ್ತವಾಗುತ್ತಿದ್ದಂತೆ ಒಂದೇ ದಿನದಲ್ಲಿ ಅಭ್ಯರ್ಥಿ ಬದಲಿಸಿ ಯಾಸೀರ್‌ಖಾನ್ ಪಠಾಣಗೆ ಟಿಕೆಟ್ ನೀಡಲಾಗಿದೆ. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಮುನಿಸು ಇನ್ನೂ ಶಮನವಾಗಿಲ್ಲ. ಮತ್ತೊಬ್ಬ ಕೈ ಟಿಕೆಟ್ ಆಕಾಂಕ್ಷಿ ಪಂಚಮಸಾಲಿ ಸಮುದಾಯದ ಮುಖಂಡ ಶಶಿಧರ ಯಲಿಗಾರ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದಾರೆ. ಕ್ಷೇತ್ರದಲ್ಲಿ ಪ್ರಬಲ ಎದುರಾಳಿಯ ನಿರೀಕ್ಷೆಯಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುಲಭವಾಗಿ ಗೆಲ್ಲುವ ಸನ್ನಾಹದಲ್ಲಿದ್ದಾರೆ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್‌ ಸುಮ್ಮನೆ ಕೂತಿಲ್ಲ. ಅದು ತಂತ್ರ ಹೆಣೆಯುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ 83868 ಹಾಗೂ ಕಾಂಗ್ರೆಸ್‌ನ ಅಜ್ಜಂಫೀರ್ ಖಾದ್ರಿ ಅವರು 74015 ಮತಗಳನ್ನು ಪಡೆದುಕೊಂಡಿದ್ದರು. ಗೆಲುವಿನ ಅಂತರ- 9265 ಮತಗಳು.

ಹಿರೇಕೆರೂರು: ಬಿ.ಸಿ.ಪಾಟೀಲ್ – ಬಣಕಾರ ಮಧ್ಯೆ ಮತ್ತೊಂದು ಬಿಗ್ ಫೈಟ್

ಸಾದರ ಲಿಂಗಾಯತರೇ ನಿರ್ಣಾಯಕರಾಗಿರುವ ಹಿರೇಕೆರೂರು ಕ್ಷೇತ್ರದಲ್ಲಿ ಪಕ್ಷ, ಚಿಹ್ನೆಗಿಂತ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ವೈಯಕ್ತಿಕ ವರ್ಚಿಸ್ಸಿನ ಮೇಲೆಯೇ ಕಳೆದ ನಾಲ್ಕು ಚುನಾವಣೆಗಳು ನಡೆದಿವೆ. 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಬಿ.ಸಿ.ಪಾಟೀಲ್, ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಸಚಿವರಾಗಿದ್ದಾರೆ. ಈ ಸಲ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆಗ ಬಿಜೆಪಿ ಅಭ್ಯರ್ಥಿಯಾಗಿದ್ದ ಯು.ಬಿ. ಬಣಕಾರ್ ಈ ಸಲ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ. ವಿಶೇಷ ಎಂದರೆ, 2019ರ ಬೈಎಲೆಕ್ಷನ್‌ ವೇಳೆ ಬಿ ಸಿ ಪಾಟೀಲ್, ಬಣಕಾರ ಜೋಡೆತ್ತಿನಂತೆ ಇದ್ದರು! ಆದರೆ, ಈಗ ತಮ್ಮ ರಾಜಕೀಯ ಏಳಿಗೆಗಾಗಿ ಬಿಜೆಪಿ ತೊರೆದಿರುವ ಬಣಕಾರ್ ಕಾಂಗ್ರೆಸ್‌ನಲ್ಲಿದ್ದಾರೆ. ಬಿ ಸಿ ಪಾಟೀಲ್ ಅಬ್ಬರ ಪ್ರಚಾರಕ್ಕೆ ಮುಂದಾಗಿದ್ದಾರೆ, ಬಣಕಾರ್ ಸದ್ದಿಲ್ಲದೇ ಪ್ರಚಾರ ಮಾಡುತ್ತಿದ್ದಾರೆ. ನಾಲ್ಕು ಬಾರಿ ಗೆದ್ದಿರುವ ಪಾಟೀಲ್, 5ನೇ ಬಾರಿ ಗೆಲುವು ಎದುರು ನೋಡುತ್ತಿದ್ದಾರೆ. ಜೆಡಿಎಸ್‌ನಿಂದ ಜಯಣ್ಣ ಜಾವಣ್ಣನವರ ಕಣದಲ್ಲಿದ್ದರೂ, ಅಂಥ ಸ್ಪರ್ಧೆ ಏನೂ ಕಂಡು ಬರುತ್ತಿಲ್ಲ.

2019ರ ಉಪಚುನಾವಣೆ ವೇಳೆ ಬಿಜೆಪಿಯ ಬಿ ಸಿ ಪಾಟೀಲ್ 85562 ಮತ್ತು ಕಾಂಗ್ರೆಸ್‌ನ ಬಿ ಎಚ್ ಬನ್ನಿಕೋಡ್ 56495 ಮತಗಳನ್ನು ಪಡೆದುಕೊಂಡಿದ್ದರು. ಗೆಲುವಿನ ಅಂತರ-29067 ಮತಗಳು.

ಹಾವೇರಿ: ಕ್ಷೇತ್ರ ಮರುವಶಕ್ಕೆ ಕಾಂಗ್ರೆಸ್ ತಂತ್ರ, ಬಿಜೆಪಿಯ ಹೊಸ ಮುಖಕ್ಕೆ ಸಿಗುವುದೇ ಗೆಲುವು?

ಹಾವೇರಿ ಎಸ್‌ಸಿ ಮೀಸಲು ಕ್ಷೇತ್ರವಾಗಿದೆ. ಮಾಜಿ ಸಚಿವ ರುದ್ರಪ್ಪಾ ಲಮಾಣಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದರೆ, ಬಿಜೆಪಿ ಹೊಸಮುಖ ಗವಿಸಿದ್ದಪ್ಪ ದ್ಯಾಮಣ್ಣನವರಿಗೆ ಟಿಕೆಟ್ ನೀಡಿದೆ. ಹಾಲಿ ಶಾಸಕ ನೆಹರು ಓಲೇಕಾರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ್ದಾರೆ. ಅವರು ಬಿಜೆಪಿಯಲ್ಲೇ ಇದ್ದರೂ ತಟಸ್ಥವಾಗಿದ್ದಾರೆ. ಬಿಜೆಪಿಯ ಕೆಲವು ಆಕಾಂಕ್ಷಿಗಳ ಅಸಮಾಧಾನವೂ ತಣ್ಣಗಾಗಿರುವುದು ಬಿಜೆಪಿ ಪಾಲಿಗೆ ಕೊಂಚ ಮಟ್ಟಿಗೆ ಸಮಾಧಾನ ತರಿಸಿದೆ. ಕಾಂಗ್ರೆಸ್‌ನಲ್ಲೂ ಬಂಡಾಯ ಶಮನವಾಗಿದೆ. ಬಂಡಾಯ ಎದ್ದಿದ್ದ ಎಂ ಎಂ ಹಿರೇಮಠ್, ಈರಪ್ಪ ಲಮಾಣಿ ಅವರು ಕೈ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಉಪತಹಸೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಮಾಡಿದ ಸಹಾಯವೇ ಗವಿಸಿದ್ದಪ್ಪಗೆ ಪ್ಲಸ್ ಪಾಯಿಂಟ್ ಆಗಿದೆ. ಇದೇ ಮೊದಲ ಸಲ ಬಿಜೆಪಿ ಎಸ್ಸಿ ಎಡಗೈ ಸಮುದಾಯಕ್ಕೆ ಅವಕಾಶ ನೀಡಿದೆ. ಎರಡೂ ಪಕ್ಷಗಳ ಅಭ್ಯರ್ಥಿಗಳ ಸರಳ ವ್ಯಕ್ತಿತ್ವದ ಬಗ್ಗೆ ಚರ್ಚೆಯಾಗುತ್ತಿದೆ. ಕಳೆದುಕೊಂಡ ಕ್ಷೇತ್ರ ಮರಳಿ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದ್ದರೆ, ಕ್ಷೇತ್ರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಮಲ ಪಡೆ ಕೆಲಸ ಮಾಡುತ್ತಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿಯ ನೆಹರೂ ಓಲೇಕಾರ್ ಅವರು 91721 ಮತ್ತು ಕಾಂಗ್ರೆಸ್‌ನ ರುದ್ರಪ್ಪಾ ಲಮಾಣಿ 75261 ಮತ ಪಡೆದಿದ್ದರು. ಗೆಲುವಿನ ಅಂತ 11304 ಮತಗಳು.

ಹಾನಗಲ್: ಬೈಎಲೆಕ್ಷನ್ ಸೋಲಿನ ಸೇಡಿಗೆ ಬಿಜೆಪಿ ತಂತ್ರ; ಕೇತ್ರ ಉಳಿಸಿಕೊಳ್ಳಲು ಕೈ ಪ್ರತಿತಂತ್ರ

ಮೂರ್ನಾಲ್ಕು ದಶಕಗಳ ಕಾಲ ಸಿ.ಎಂ.ಉದಾಸಿ, ಮನೋಹರ ತಹಶೀಲ್ದಾರ್ ನಡುವೆ ಕಾಳಗಕ್ಕೆ ಸಾಕ್ಷಿಯಾಗುತ್ತಿದ್ದ ಹಾನಗಲ್ಲ ಕ್ಷೇತ್ರದಲ್ಲಿ ಈಗ ಚಿತ್ರಣ ಬದಲಾಗಿದೆ. ಬಿಜೆಪಿಯ ಸಿ.ಎಂ.ಉದಾಸಿ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಜಯಭೇರಿ ಬಾರಿಸಿದ್ದರು. ಉಪಚುನಾವಣೆಯಲ್ಲಿ ಬಿಜೆಪಿಯಿ ಅಭ್ಯರ್ಥಿಯಾಗಿದ್ದ ಶಿವರಾಜ ಸಜ್ಜನರ ಮತ್ತೊಮ್ಮೆ ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಹಾಲಿ ಶಾಸಕ ಶ್ರೀನಿವಾಸ ಮಾನೆ ಸ್ಪರ್ಧಿಸಿದ್ದಾರೆ. ಉಪಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟವೇ ಬಂದು ನಿಂತರೂ ಕಾಂಗ್ರೆಸ್ ಸೋಲಿಸಲು ಸಾಧ್ಯವಾಗಿರಲಿಲ್ಲ. ಆಡಳಿತಾರೂಢ ಬಿಜೆಪಿಗೆ ಆ ಫಲಿತಾಂಶ ಇರಿಸುಮುರಿಸು ತಂದಿತ್ತು. ಉಪಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ಶಿವರಾಜ ಸಜ್ಜನರಗೆ ಬಿಜೆಪಿ ಮತ್ತೊಂದು ಅವಕಾಶ ನೀಡಿದೆ. ಕಾಂಗ್ರೆಸ್‌ನ ಮಾನೆ ಮತ್ತದೇ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿದ್ದ ಮನೋಹರ ತಹಶೀಲ್ದಾರ್ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‌ಗೆ ಎಷ್ಟರಮಟ್ಟಿಗೆ ಹೊಡೆತ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

2021ರ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 87490 ಮತ್ತು ಬಿಜೆಪಿಯ ಶಿವರಾಜ್ ಸಜ್ಜನರ್ 80117 ಮತಗಳನ್ನು ಪಡೆದಿದ್ದರು. ಗೆಲುವಿನ ಅಂತರ- 7373 ಮತಗಳು.

ಬ್ಯಾಡಗಿ: ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಭಾರೀ ಜಿದ್ದಾಜಿದ್ದಿ

ಕೆಂಪು ಮೆಣಸಿನಕಾಯಿ ಮಾರುಕಟ್ಟೆಗೆ ಹೆಸರಾಗಿರುವ ಬ್ಯಾಡಗಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದೆ. ಬಿಜೆಪಿಯಿಂದ ಹಾಲಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್‌ನಿಂದ ಮಾಜಿ ಸಚಿವ ಬಸವರಾಜ ಶಿವಣ್ಣನವರ ಕಣಕ್ಕಿಳಿದಿದ್ದಾರೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಎರಡೂ ಪಕ್ಷದಲ್ಲಿ ಭುಗಿಲೆದ್ದಿದ್ದ ಅಸಮಾಧಾನ ಸದ್ಯಕ್ಕೆ ತಣ್ಣಗಾಗಿದೆ. 2018ರಲ್ಲಿ ವಿರೂಪಾಕ್ಷಪ್ಪ ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಿದ್ದರು. ಈ ಸಲವೂ ಮತ್ತೆ ಅದೇ ಹುಮ್ಮಸ್ಸಿನಲ್ಲಿರುವ ಅವರು ಅಭಿವೃದ್ದಿ ಮಂತ್ರ ಜಪಿಸುತ್ತಿದ್ದು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹಾಲಿ ಶಾಸಕ ಆಗಿದ್ದರೂ 2018ರಲ್ಲಿ ಟಿಕೆಟ್ ಸಿಗದೇ ಕೂತಿದ್ದ ಬಸವರಾಜ ಶಿವಣ್ಣನವರಗೆ ಈ ಸಲ ಅವಕಾಶ ಸಿಕ್ಕಿದೆ. ಎರಡೂ ಪಕ್ಷಗಳಲ್ಲಿನ ಮೇಲ್ನೋಟಕ್ಕೆ ಭಿನ್ನಮತ ಶಮನವಾಗಿದೆ. ಒಗ್ಗಟ್ಟಿನಿಂದ ಚುನಾವಣೆ ಎದುರಿಸುವ ಪಕ್ಷಕ್ಕೆ ಗೆಲುವು ಸುಲಭವಾಗಲಿದೆ.

ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿಯ ವಿರೂಪಾಕ್ಷಪ್ಪ ಬಳ್ಳಾರಿ 91721 ಮತ್ತು ಕಾಂಗ್ರೆಸ್‌ನ ಎಸ್ ಆರ್ ಪಾಟೀಲ್ 70450 ಮತಗಳನ್ನು ಪಡೆದಿದ್ದರು. ಗೆಲುವಿನ ಅಂತರ – 21271 ಮತಗಳು.

ರಾಣಿಬೆನ್ನೂರು: ಬಹುಕೋನ ಸ್ಪರ್ಧೆಯ ಈ ಕ್ಷೇತ್ರದಲ್ಲಿ ಅಚ್ಚರಿ ಫಲಿತಾಂಶ?

2018ರ ಚುನಾವಣೆ ಬಳಿಕ ಸಾಕಷ್ಟು ರಾಜಕೀಯ ಬದಲಾವಣೆ ಕಂಡಿರುವ ರಾಣಿಬೆನ್ನೂರು ಕ್ಷೇತ್ರದಲ್ಲಿ ಈ ಸಲ ಬಹುಕೋನ ಸ್ಪರ್ಧೆ ಕಂಡುಬರುತ್ತಿದೆ. ಆಡಳಿತರ ವಿರೋದಿ ಅಲೆ, ಸ್ವಪಕ್ಷಿಕರ ವಿರೋಧದ ನಡುವೆಯು ಬಿಜೆಪಿಯಿಂದ ಹಾಲಿ ಶಾಸಕ ಅರುಣಕುಮಾರ್ ಪೂಜಾರ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಕೆ.ಬಿ.ಕೋಳಿವಾಡರ ಪುತ್ರ ಪ್ರಕಾಶ ಕೋಳಿವಾಡಗೆ ಟಿಕೆಟ್ ನೀಡಲಾಗಿದೆ. ಪರಿಣಾಮ ಪಕ್ಷದಲ್ಲಿ ಭುಗಿಲೆದ್ದಿದ್ದ ಅಸಮಾಧಾನವು ಶಮನವಾಗಿರೋದು ಕೈ ಪಡೆ ನಿಟ್ಟುಸಿರುವ ಬಿಟ್ಟಿದೆ. ಇನ್ನು 2018ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ಆರ್.ಶಂಕರ್, ಆ ನಂತರ ನಾನಾ ರಾಜಕೀಯ ಏಳು ಬೀಳುಗಳನ್ನು ಕಂಡರು. ಪ್ರಸಕ್ತ ಚುನಾವಣೆಯಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದ ಶಂಕರ್, ಕೊನೆಗಳಿಗೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿ(NCP)ಯಿಂದ ಕಣಕ್ಕಿಳಿದಿದ್ದಾರೆ. ಬಿ ಎಸ್ ಯಡಿಯೂರಪ್ಪ ಅವರ ಆಪ್ತ, ಸಿಎಂ ಉದಾಸಿ ಅವರ ಶಿಷ್ಯ ಸಂತೋಷಕುಮಾರ್ ಪಾಟೀಲ್ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಇವರಿಬ್ಬರ ಸ್ಪರ್ದೆ ಬಿಜೆಪಿಗೆ ಸಂಕಷ್ಟ ತಂದೊಡ್ಡಿದೆ. ಜೆಡಿಎಸ್ ಅಭ್ಯರ್ಥಿ ಮಂಜುನಾಥ ಗೌಡಶಿವಣ್ಣನವರ ಪರ ಕುಮಾರಸ್ವಾಮಿ ಎರಡು ಸಲ ಪ್ರಚಾರ ನಡೆಸಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಬಹುಕೋನ ಸ್ಪರ್ಧೆ ಏರ್ಪಟ್ಟಿರುವ ಈ ಕ್ಷೇತ್ರದಲ್ಲಿ ಅಚ್ಚರಿ ಫಲಿತಾಂಶ ಹೊರಬಿಳುವು ಸಾಧ್ಯತೆಗಳಿವೆ.

2019ರ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯ ಅರುಣ್ ಕುಮಾರ್ 95438 ಹಾಗೂ ಕಾಂಗ್ರೆಸ್‌ನ ಕೆ ಬಿ ಕೋಳಿವಾಡ್ ಅವರು 72216 ಮತಗಳನ್ನು ಪಡೆದುಕೊಂಡಿದ್ದರು. ಗೆಲುವಿನ ಅಂತರ- 23222 ಮತಗಳು.

ಇದನ್ನೂ ಓದಿ: ಮಂಡ್ಯ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಜೆಡಿಎಸ್ ಭದ್ರ ಕೋಟೆಯಲ್ಲಿ ಕಾಂಗ್ರೆಸ್ ಕಾಳಗ; ಬಿಜೆಪಿಗೂ ಇದೆ ಅಪಾರ ನಿರೀಕ್ಷೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Stray dogs attack: ಬೀದಿನಾಯಿಗಳು ದಾಳಿ ನಡೆಸಿ, ನಾಲ್ಕು ಮಕ್ಕಳು ಹಾಗೂ ಓರ್ವ ಮಹಿಳೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರದ 12 ನೇ ವಾರ್ಡ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಜರುಗಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಇದೇ ವೇಳೆ ರಕ್ಷಣೆಗೆಂದು ಹೋದ ಮಹಿಳೆಯ ಮೇಲೂ ದಾಳಿ ನಡೆಸಿ, ಗಾಯಗೊಳಿಸಿವೆ.

VISTARANEWS.COM


on

Stray dogs attack in Shira 4 children one woman injured
Koo

ಶಿರಾ: ಬೀದಿನಾಯಿಗಳು ದಾಳಿ (Stray Dogs Attack) ನಡೆಸಿ, ನಾಲ್ಕು ಮಕ್ಕಳು ಹಾಗೂ ಒಬ್ಬ ಮಹಿಳೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರಸಭೆಯ 12ನೇ ವಾರ್ಡ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಇದೇ ವೇಳೆ ಮಕ್ಕಳ ರಕ್ಷಣೆಗೆಂದು ಹೋದ ಮಹಿಳೆಯ ಮೇಲೂ ದಾಳಿ ನಡೆಸಿ, ಗಾಯಗೊಳಿಸಿವೆ.

ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಶಿರಾ ನಗರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ನಿವಾಸಿಗಳು, ನಗರಸಭೆಯ ಆಯುಕ್ತ ಕೆ. ರುದ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು.

ರಿಹಾನ್ (7), ತಾಸ್ಮಿಯ (13), ಜಿಯಾ ಉಲ್ಲಾಖಾನ್ (7), ಇಬದುಲ್ಲಾ ಖಾನ್ (1) ಹಾಗೂ ಶಾಹಿನ (45) ಅವರಿಗೆ ಗಾಯಗಳಾಗಿದ್ದು, ಶಿರಾ ನಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ 4 ಮಕ್ಕಳು ಹಾಗೂ ಮಹಿಳೆಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಶಿರಾ ನಗರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ನಿವಾಸಿಗಳು, ನಗರಸಭೆಯ ಆಯುಕ್ತ ಕೆ. ರುದ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ನಗರಸಭೆಯ ಆಯುಕ್ತ ಕೆ. ರುದ್ರೇಶ್‌, ನಗರಸಭೆ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಎಬಿಸಿ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಭೆ ತೀರ್ಮಾನ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡವಾಯಿತು. ಸದ್ಯದಲ್ಲೇ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದ ತಿಳಿಸಿದರು.

Continue Reading

ಪ್ರಮುಖ ಸುದ್ದಿ

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Bangalore Rain: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ.

VISTARANEWS.COM


on

Bangalore rain
Koo

ಬೆಂಗಳೂರು: ರಾಜಧಾನಿಯ ವಿವಿಧೆಡೆ ಶನಿವಾರ ಸಂಜೆ ಭರ್ಜರಿ ಮಳೆ (Bangalore Rain) ಸುರಿದಿದ್ದು, ಹಲವೆಡೆ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ನಗರದ ಹೊರವಲಯದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ವೀರಸಂದ್ರ ಸಿಗ್ನಲ್ ಬಳಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಇನ್ನು ನಗರದ ಕೆಲವು ಕಡೆ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರತಿ ಬಾರಿ ಮಳೆ ಬಂದಾಗ ಹೆದ್ದಾರಿ ಕೆರೆಯಂತಾಗುತ್ತದೆ. ಮಳೆಯ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆ ಜಲಾವೃತವಾಗುತ್ತದೆ. ಹೆದ್ದಾರಿಯಲ್ಲಿ ನಾಲ್ಕೈದು ಅಡಿಗಳಷ್ಟು ಮಳೆ ನೀರು ನಿಂತಿದ್ದರಿಂದ ಹೆದ್ದಾರಿಯ ಅವ್ಯವಸ್ಥೆಯಿಂದ ಹಲವು ವಾಹನಗಳು ಕೆಟ್ಟುನಿಂತಿವೆ. ಇನ್ನು ಜಲಾವೃತವಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲಾಗದೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ಸಿಲಿಕಾನ್ ಸಿಟಿಯ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿ ನಗರ, ಕೋರಮಂಗಲ, ಎಂ.ಜಿ. ರಸ್ತೆ, ಕಬ್ಬನ್ ಪಾರ್ಕ್ ಸೇರಿ ನಗರದ ಹಲವೆಡೆ ಭರ್ಜರಿ ಮಳೆಯಾಗಿದೆ. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಿದರು.

ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ವೇಳೆ ಭಾರಿ ಮಳೆ ಬಿದ್ದಿದ್ದರಿಂದ ವಾಹನ ಸವಾರರು ಬಸ್ ನಿಲ್ದಾಣಗಳು, ಕಟ್ಟಡಗಳ ಬಳಿ ನಿಂತು ಆಶ್ರಯ ಪಡೆದರು. ಮಳೆ ನೀರಿನಿಂದ ಸಹಕಾರ ನಗರದ ಜಿ ಬ್ಲಾಕ್ ರಸ್ತೆಗಳು ಹಳ್ಳದಂತಾಗಿ ಬದಲಾಗಿದ್ದವು. ಇನ್ನು ಕೆಎಸ್ ಗಾರ್ಡನ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡಿದರು.

ಸಂಜೆ ಸುರಿದ ಮಳೆಯಿಂದ ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಪರದಾಡಿದರು. ಮಳೆ ಬಂದರೆ ಇಲ್ಲಿನ ಜನ ಭಯದಲ್ಲೇ ದಿನ ಕಳೆಯುವ ಸ್ಥಿತಿ ಇದೆ. ಇನ್ನು ಮನೆಯ ಮುಂದೆ ಅಧಿಕಾರಿಗಳು ಗುಂಡಿ ತೆಗೆದು ಮುಚ್ಚದ ಹಿನ್ನೆಲೆಯಲ್ಲಿ ವಾಹನ ಸವಾರನೊಬ್ಬ ಬಿದ್ದು ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಧರೆಗುರುಳಿದ ಮರ

ಮಳೆಯಿಂದಾಗಿ ಯಲಹಂಕ ವಲಯದಲ್ಲಿನ ಜಕ್ಕೂರು ಬಳಿ ಮರ ಧರೆಗುರುಳಿದ್ದು, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಮರ ತೆರವುಗೊಳಿಸಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕೇರಳ ಪ್ರವೇಶಿಸಿರುವ ಮುಂಗಾರು, ನಂತರ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15 ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಇನ್ನು ರಾಜ್ಯದಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಮಾನ ಇಲಾಖೆ‌ ಅಲರ್ಟ್‌ ನೀಡಿದ್ದುಮ ಬೆಂಗಳೂರಿನಲ್ಲಿ ಇಂದಿನಿಂದ ಐದು ದಿನ ಮಳೆ ಇರಲಿದೆ. ಗುಡುಗು – ಮಿಂಚು ಸಹಿತ ಬೀರುಗಾಳಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

Continue Reading

ದೇಶ

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Exit Poll 2024: ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Exit Poll 2024
Koo

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಬಹುತೇಕ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿ ನಾವ್ಯಾರು ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂದು ಹೇಳಿದ್ದಾರೆ. ಇದು ಗ್ರೌಂಡ್ ರಿಯಾಲಿಟಿಯಿಂದ ದೂರ ಇದೆ ಎಂದೇ ನಂಬುತ್ತೇವೆ ಎಂದು ನುಡಿದಿದ್ದಾರೆ. ಸಮೀಕ್ಷೆಗಳಲ್ಲಿ ಕೇವಲ ಐದಾರು ಸೀಟುಗಳನ್ನು ಮಾತ್ರ ಕೊಟ್ಟಿದ್ದಾರೆ. ಆದರೆ, ಜೂ 4ರಂದು ವಾಸ್ತವ ಗೊತ್ತಾಗಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್​ ಡಬಲ್​ ಡಿಜಿಟ್ ದಾಟಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಸಮೀಕ್ಷೆ ಹೇಗಿದೆ?

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4

Continue Reading

ಕರ್ನಾಟಕ

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Prajwal Revanna Case: ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ.

VISTARANEWS.COM


on

Prajwal Revanna Case
Koo

ಹಾಸನ: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ (Prajwal Revanna Case) ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ಭವಾನಿ ರೇವಣ್ಣ ಅವರು ಶನಿವಾರವೂ ಪ್ರತ್ಯಕ್ಷವಾಗಿಲ್ಲ. ಭವಾನಿ ರೇವಣ್ಣ (Bhavani Revanna) ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಹೊಳೆನರಸೀಪುರ ನಿವಾಸದ ಎದುರು ಸತತ 7 ಗಂಟೆ ಕಾದು ವಾಪಸ್‌ ಆಗಿದ್ದಾರೆ.

ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಮನೆ ಬಳಿ ತೆರಳಿದ್ದ ಎಸ್‌ಐಟಿ ಟೀಂನಲ್ಲಿ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಇನ್ಸ್‌ಪೆಕ್ಟರ್ ತೆರಳಿದ್ದರು. ಎಷ್ಟು ಕಾದರೂ ಭವಾನಿ ರೇವಣ್ಣ ಬಾರದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆ ನಡುವೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ಬಂಧನ ಭೀತಿಯಿಂದ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ.

ಇದನ್ನೂ ಓದಿ | Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

ಭವಾನಿ ರೇವಣ್ಣಗೆ ನ್ಯಾಯಾಲಯದ ಬಗ್ಗೆ ಗೌರವವಿದೆ: ವಕೀಲೆ ಸುಮಾ

ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಪರ ವಕೀಲೆ ಸುಮಾ ಮಾತನಾಡಿ, ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಇಲ್ಲ. ಹೆಣ್ಣುಮಕ್ಕಳು ಮೇಡಂ ಪರವಾಗಿ ಕಷ್ಟದಲ್ಲೂ ಇರುತ್ತೇವೆ, ಸುಖದಲ್ಲೂ ಇರುತ್ತೇವೆ. ಆದರೆ ನಾನು ಇಂದು ಬಂದಿದ್ದು ವಕೀಲಳಾಗಿ. ಭವಾನಿ ರೇವಣ್ಣ ಅವರಿಗೆ ಆರೋಗ್ಯ ಸರಿಯಿಲ್ಲ, ಎರಡು ಮಂಡಿ ಆಪರೇಷನ್ ಆಗಿದೆ. ಅವರ ಅಣ್ಣ ಸಾವನ್ನಪ್ಪಿದ್ದು, ಆ ನೋವಿನಲ್ಲೂ ಇದ್ದಾರೆ. ಖಂಡಿತವಾಗಿಯೂ ತನಿಖೆಗೆ ಹಾಜರಾಗುತ್ತಾರೆ. ಕಾನೂನು ಬಗ್ಗೆ ಮೇಡಂಗೆ ಗೌರವವಿದೆ. ಅವರಿಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಆದಷ್ಟು ಬೇಗ ಬರ್ತಾರೆ, ತನಿಖೆ ಎದುರಿಸುತ್ತಾರೆ, ನಿರ್ದೊಷಿಯಾಗಿ ಬರ್ತಾರೆ ಎಂದು ಹೇಳಿದರು.

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ3 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ3 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ4 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ4 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ4 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ5 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ6 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ6 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ6 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ7 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು11 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌