Sharad Pawar: ಎನ್​ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಅವ್ಹಾದ್ ರಾಜೀನಾಮೆ - Vistara News

ದೇಶ

Sharad Pawar: ಎನ್​ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಅವ್ಹಾದ್ ರಾಜೀನಾಮೆ

Jitendra Awhad: ಶರದ್ ಪವಾರ್ ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಜಿತೇಂದ್ರ ಅವ್ಹಾದ್ ಸೇರಿ ಇನ್ನೂ ಹಲವು ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಿಸೈನ್ ಮಾಡಿದ್ದಾರೆ

VISTARANEWS.COM


on

MLA Jitendra Awhad Quits NCP General secretary post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಥಾಣೆ: ನ್ಯಾಷನಲಿಸ್ಟ್​ ಕಾಂಗ್ರೆಸ್ ಪಾರ್ಟಿ (NCP) ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಶರದ್ ಪವಾರ್ (Sharad Pawar)ಅವರು ಮಂಗಳವಾರ ಘೋಷಣೆ ಮಾಡಿದ ಬೆನ್ನಲ್ಲೇ ಎನ್​ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಂದು ಶಾಸಕ ಜಿತೇಂದ್ರ ಅವ್ಹಾದ್​ ರಾಜೀನಾಮೆ ಕೊಟ್ಟಿದ್ದಾರೆ. ಶರದ್​ ಪವಾರ್ ರಾಜೀನಾಮೆ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಶರದ್ ಪವಾರ್ ಅವರು ತಮ್ಮ ರಾಜೀನಾಮೆ ಬಗ್ಗೆ ಇನ್ನೂ ಎರಡು-ಮೂರು ದಿನಗಳ ಕಾಲ ವಿಚಾರ ಮಾಡಲಿ ಎಂದು ಅವರ ಸೋದರಳಿತ, ಎನ್​ಸಿಪಿ ಮುಖಂಡ ಅಜಿತ್ ಪವಾರ್ ಹೇಳಿದ್ದಾರೆ. ಆದರೆ ಶರದ್​ ಪವಾರ್ ತಮ್ಮ ತೀರ್ಮಾನದಿಂದ ಹಿಂದೆ ಸರಿಯುವ ಲೆಕ್ಕದಲ್ಲಿ ಇಲ್ಲ. ಆದರೆ ಶರದ್ ಪವಾರ್ ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಜಿತೇಂದ್ರ ಅವ್ಹಾದ್ ಸೇರಿ ಇನ್ನೂ ಹಲವು ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಿಸೈನ್ ಮಾಡಿದ್ದಾರೆ. ​

ಎನ್​ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಅವರು ಎಎನ್​​ಐ ಜತೆ ಮಾತನಾಡಿ ‘ನಾನು ನನ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಶರದ್ ಪವಾರ್ ಅವರಿಗೆ ಕಳಿಸಿಕೊಟ್ಟಿದ್ದೇನೆ. ಎನ್​ಸಿಪಿ ಥಾಣೆ ಘಟಕದ ಎಲ್ಲ ಪದಾಧಿಕಾರಿಗಳೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಶರದ್​ ಪವಾರ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಘೋಷಣೆ ಮಾಡಿದ್ದರಿಂದಲೇ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:Sharad Pawar: ಎನ್​ಸಿಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಶರದ್​ ಪವಾರ್ ನಿರ್ಧಾರ

ಶರದ್ ಪವಾರ್ ಅವರು ಮಂಗಳವಾರ ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ತಾವು ಸಾರ್ವಜನಿಕ ಜೀವನದಿಂದ ದೂರ ಸರಿಯುವುದಿಲ್ಲ. ರಾಜ್ಯಸಭೆಯಲ್ಲಿ ನನ್ನ ಅಧಿಕಾರ ಅವಧಿ ಮೂರು ವರ್ಷಗಳು ಬಾಕಿ ಇವೆ. ನಾನು ಇನ್ನು ಯಾವುದೇ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಿಲ್ಲ. ನಮ್ಮ ಮಹಾರಾಷ್ಟ್ರ ರಾಜ್ಯ ಮತ್ತು ಇಡೀ ದೇಶದ ಸಮಸ್ಯೆಗಳ ಬಗ್ಗೆ ರಾಜ್ಯಸಭೆಯಲ್ಲಿ ಧ್ವನಿ ಎತ್ತುತ್ತೇನೆ. ಹೊರತಾಗಿ ಇನ್ನೇನೂ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುವುದಿಲ್ಲ. ನಾವು ಆಸೆಬುರುಕರಾಗಬಾರದು’ ಎಂದು ಅವರು ಹೇಳಿದ್ದಾರೆ. ತೆರವಾಗಿರುವ ಎನ್​ಸಿಪಿ ಅಧ್ಯಕ್ಷನ ಸ್ಥಾನಕ್ಕೆ ಅಜಿತ್ ಪವಾರ್ ಏರಲಿದ್ದಾರೆ. ಅಜಿತ್ ಪವಾರ್​ಗೋಸ್ಕರವೇ ಶರದ್ ಪವಾರ್ ಆ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor Murder Case: ಜನರಲ್ಲಿ ಗೊಂದಲ ಮೂಡಿಸುವ ಮಮತಾ ಬ್ಯಾನರ್ಜಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ; ನಿರ್ಭಯಾ ತಾಯಿ

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ಪ್ರಕರಣದಲ್ಲಿ ಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನಿರ್ಭಯಾ ಅವರ ತಾಯಿ ಕಿಡಿ ಕಾರಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಅಸಮರ್ಥರಾದ ಕಾರಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ (Kolkata Doctor Murder Case) ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಮಧ್ಯೆ ನಿರ್ಭಯಾ ಅವರ ತಾಯಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಕಿಡಿ ಕಾರಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಸಮರ್ಥರಾದ ಕಾರಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಿರ್ಭಯಾ 2012ರಲ್ಲಿ ನವದೆಹಲಿಯಲ್ಲಿ ಚಲಿಸುವ ಬಸ್‌ನಲ್ಲೇ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕ್ರೂರವಾಗಿ ಕೊಲೆಯಾಗಿದ್ದರು.

ʼʼಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದ್ದಾರೆʼʼ ಎಂದು ನಿರ್ಭಯಾ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರೊಂದಿಗೆ ಟ್ರೈನಿ ವೈದ್ಯೆಯ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ʼʼತಮ್ಮ ಅಧಿಕಾರ ಬಳಸಿ ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮಮತಾ ಬ್ಯಾನರ್ಜಿ ಪ್ರತಿಭಟನೆಯ ಹೆಸರಿನಲ್ಲಿ ಜನರ ಗಮನ ಬೇರೆಡೆ ತಿರುಗಿಸಲು ಯತ್ನಿಸುತ್ತಿದ್ದಾರೆʼʼ ಎಂದು ನಿರ್ಭಯಾ ತಾಯಿ ಟೀಕಿಸಿದ್ದಾರೆ.

ನಿರ್ಭಯಾ ತಾಯಿ ಹೇಳಿದ್ದೆನು?

ʼʼಈ ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕುʼʼ ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಅತ್ಯಾಚಾರ ಆರೋಪಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನೂ ಹೆಚ್ಚಿನ ಕಠಿಣ ಶಿಕ್ಷೆ ವಿಧಿಸಬೇಕು. ದೇಶದ ವಿವಿಧ ಭಾಗಗಳಲ್ಲಿ ಈಗಲೂ ಮಹಿಳೆಯರ ಮೇಲಿನ ಭೀಕರ ಅತ್ಯಾಚಾರ ಪ್ರಕರಣ ವರದಿಯಾಗುತ್ತಿರುವುದು ಕಳವಳವನ್ನುಂಟು ಮಾಡಿದೆ. ಇದರ ವಿರುದ್ಧ ಸೂಕ್ತ ಕ್ರಮ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ʼʼಕೋಲ್ಕತ್ತಾ ಮೆಡಿಕಲ್‌ ಕಾಲೇಜಿನಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದಾದರೆ ರಾಜ್ಯದ ಪರಿಸ್ಥಿತಿ ಯಾವ ಮಟ್ಟಿಗೆ ಹದಗೆಟ್ಟಿದೆ ಎನ್ನುವುದನ್ನು ಊಹಿಸಿʼʼ ಎಂದು ನಿರ್ಭಯಾ ತಾಯಿ ಹೇಳಿದ್ದಾರೆ.

ರಾಜ್ಯಗಳಿಗೆ ಕೇಂದ್ರದ ಸೂಚನೆ

ಕೋಲ್ಕತ್ತಾ ಟ್ರೈನಿ ವೈದ್ಯೆಯ ಹತ್ಯೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ಮಧ್ಯೆ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿ, ಪ್ರತಿ 2 ಗಂಟೆಗೊಮ್ಮೆ ಕಾನೂನು ಸುವ್ಯವಸ್ಥೆಯ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ / ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಗೃಹ ಸಚಿವಾಲಯ ರಾಜ್ಯಗಳ ಪೊಲೀಸ್‌ ಇಲಾಖೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ, ಪ್ರತಿ 2 ಗಂಟೆಗೊಮ್ಮೆ ಪರಿಸ್ಥಿತಿಯನ್ನು ಇಮೇಲ್‌, ಫ್ಯಾಕ್ಸ್‌ ಅಥವಾ ವ್ಯಾಟ್ಸ್‌ಆ್ಯಪ್‌ ಮೂಲಕ ತಿಳಿಸುವಂತೆ ಸೂಚಿಸಿದೆ.

“ಪಶ್ಚಿಮ ಬಂಗಾಳದ ಕೋಲ್ಕತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಹತ್ಯೆ ವಿರೋಧಿಸಿ ನಿಮ್ಮ ರಾಜ್ಯ / ಕೇಂದ್ರಾಡಳಿತ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ವರದಿಯನ್ನು ಮೇಲ್ವಿಚಾರಣೆ ಮಾಡಲು ಸಕ್ಷಮ ಪ್ರಾಧಿಕಾರ ಬಯಸಿದೆ. ಈ ನಿಟ್ಟಿನಲ್ಲಿ ಪ್ರತಿ ಎರಡು ಗಂಟೆಗಳಿಗೊಮ್ಮೆ ನಿಮ್ಮ ವರದಿ ನಮ್ಮ ಕೈ ಸೇರಬೇಕುʼʼ ಎಂದು ಹೇಳಿದೆ.

ಇದನ್ನೂ ಓದಿ: Kolkata Doctor Murder Case: ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ; ಸ್ಪಷ್ಟನೆ ನೀಡಿದ ವೈದ್ಯರು

Continue Reading

ವಿದೇಶ

Tahawwur Rana: 26/11 ಮುಂಬೈ ದಾಳಿಯ ಭಾಗವಾಗಿದ್ದ ಪಾಕ್‌ ಮೂಲದ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಒಪ್ಪಿಗೆ

Tahawwur Rana: ಭಾರತದ ಕಾನೂನು ಹೋರಾಟಕ್ಕೆ ಜಯ ಲಭಿಸಿದ್ದು, 2008ರ 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಶಾಮೀಲಾಗಿರುವ ಪಾಕ್‌ ಮೂಲದ ಕೆನಡಾ ಉದ್ಯಮಿ ತಹವ್ವೂರ್‌ ರಾಣಾನನ್ನು ಹಸ್ತಾಂತರಿಸಬೇಕೆಂದು ಕೋರಿದ್ದ ಭಾರತದ ಮನವಿಯನ್ನು ಅಮೆರಿಕ ಕೋರ್ಟ್‌ ಅಂಗೀಕರಿಸಿದೆ. “ರಾಣಾ ಭಾಗಿಯಾಗಿದ್ದ ಅಪರಾಧ ಕೃತ್ಯವು ಅಮೆರಿಕ ಮತ್ತು ಭಾರತದ ನಡುವಿನ ಹಸ್ತಾಂತರ ಒಪ್ಪಂದದ ನಿಯಮದ ಅಡಿಯಲ್ಲಿ ಬರುತ್ತದೆ. ಹೀಗಾಗಿ ರಾಣಾನ ಹಸ್ತಾಂತರಕ್ಕೆ ಯಾವುದೇ ಕಾನೂನು ತೊಡಕು ಎದುರಾಗುವುದಿಲ್ಲʼʼ ಎಂದು ಅಮೆರಿಕದ 9ನೇ ಸರ್ಕ್ಯೂಟ್‌ನ ಮೇಲ್ಮನವಿ ನ್ಯಾಯಾಲಯ ಸ್ಪಷ್ಪಪಡಿಸಿದೆ.

VISTARANEWS.COM


on

Tahawwur Rana
Koo

ವಾಷಿಂಗ್ಟನ್‌: 2008ರ 26/11 ಮುಂಬೈ ಭಯೋತ್ಪಾದಕ ದಾಳಿ (26/11 Mumbai terror attacks)ಯಲ್ಲಿ ಶಾಮೀಲಾಗಿರುವ ಪಾಕ್‌ ಮೂಲದ ಕೆನಡಾ ಉದ್ಯಮಿ ತಹವ್ವೂರ್‌ ರಾಣಾ (Tahawwur Rana)ನನ್ನು ಹಸ್ತಾಂತರಿಸಬೇಕೆಂದು ಕೋರಿದ್ದ ಭಾರತದ ಮನವಿಯನ್ನು ಅಮೆರಿಕ ಕೋರ್ಟ್‌ ಅಂಗೀಕರಿಸಿದೆ. ಉಭಯ ದೇಶಗಳ ನಡುವಿನ ಹಸ್ತಾಂತರ ಒಪ್ಪಂದದ ಪ್ರಕಾರ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಮಹತ್ವದ ತೀರ್ಪು ನೀಡಿದೆ.

ಮುಂಬೈ ದಾಳಿಯ ಮುನ್ನ ಬೇಹುಗಾರಿಕೆ ನಡೆಸಲು ಡೇವಿಡ್ ಕೋಲ್ಮನ್ ಹೆಡ್ಲಿಗೆ ರಾಣಾ ಸಹಾಯ ಮಾಡಿದ್ದಾನೆ ಮತ್ತು 24 ವಿದೇಶಿ ಪ್ರಜೆಗಳು ಸೇರಿದಂತೆ 166 ಜನರ ಸಾವಿಗೆ ಕಾರಣವಾದ ಈ ದಾಳಿಯನ್ನು ಸಂಘಟಿಸುವಲ್ಲಿ ಲಷ್ಕರ್-ಎ-ತೈಬಾ (LeT) ಸಂಘಟನೆಗೆ ಬೆಂಬಲವನ್ನು ಒದಗಿಸಿದ್ದಾನೆ ಎಂದು ಭಾರತೀಯ ಅಧಿಕಾರಿಗಳು ಆರೋಪಿಸಿ, ಆತನನ್ನು ಹಸ್ತಾಂತರಿಸಬೇಕು ಎಂದು ಮನವಿ ಸಲ್ಲಿಸಿದ್ದರು. ಮುಂಬೈ ಮತ್ತು ಕೋಪನ್ ಹ್ಯಾಗನ್ ಸೇರಿದಂತೆ ಅಮೆರಿಕ ಹೊರಗೆ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಪಿತೂರಿ ಮಾಡಿದ್ದಾಕ್ಕಾಗಿ ರಾಣಾನನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌ (FBI) 2009ರಲ್ಲಿ ಬಂಧಿಸಿತ್ತು.

“ರಾಣಾ ಭಾಗಿಯಾಗಿದ್ದ ಅಪರಾಧ ಕೃತ್ಯವು ಅಮೆರಿಕ ಮತ್ತು ಭಾರತದ ನಡುವಿನ ಹಸ್ತಾಂತರ ಒಪ್ಪಂದದ ನಿಯಮದ ಅಡಿಯಲ್ಲಿ ಬರುತ್ತದೆ. ಹೀಗಾಗಿ ರಾಣಾನ ಹಸ್ತಾಂತರಕ್ಕೆ ಯಾವುದೇ ಕಾನೂನು ತೊಡಕು ಎದುರಾಗುವುದಿಲ್ಲʼʼ ಎಂದು ಅಮೆರಿಕದ 9ನೇ ಸರ್ಕ್ಯೂಟ್‌ನ ಮೇಲ್ಮನವಿ ನ್ಯಾಯಾಲಯ ಸ್ಪಷ್ಪಪಡಿಸಿದೆ.

ಕಳೆದ ವರ್ಷ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಮುಂಬೈ ಪೊಲೀಸ್‌ನ ಅಪರಾಧ ವಿಭಾಗವು ಹೆಡ್ಲಿಯೊಂದಿಗೆ ರಾಣಾ ಸಹ-ಪಿತೂರಿಗಾರ ಮಾತ್ರವಲ್ಲ, ದಾಳಿ ನಡೆಸುವ ಯೋಜನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾನೆ ಎಂದು ಉಲ್ಲೇಖಿಸಿತ್ತು. 2020ರಲ್ಲಿ ರಾಣಾ ಹಸ್ತಾಂತರಕ್ಕಾಗಿ ಭಾರತವು ಸಲ್ಲಿಸಿದ್ದ ಮನವಿಗೆ ಜೋ ಬೈಡನ್ ಸರ್ಕಾರ ಬೆಂಬಲ ಸೂಚಿಸಿತ್ತು. 2023ರ ಮೇ 1ರಂದು ನ್ಯಾಯಾಲಯವು ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಸಮ್ಮತಿ ಸೂಚಿಸಿತ್ತು. ಬಳಿಕ ಇದರ ವಿರುದ್ಧ 63 ವರ್ಷದ ರಾಣಾ ಕ್ಯಾಲಿಫೋರ್ನಿಯಾದ ಹೇಬಿಯಸ್ ನ್ಯಾಯಾಲಯದ ಮೊರೆ ಹೋಗಿದ್ದ. ಅದಾಗ್ಯೂ 2023ರ ಆಗಸ್ಟ್ 10ರಂದು ಈ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿತ್ತು. ನಂತರ ಆತ ಸರ್ಕ್ಯೂಟ್ ನ್ಯಾಯಾಲಯವನ್ನು ಸಂಪರ್ಕಿಸಿದ್ದ. ಇದೀಗ ಇಲ್ಲೂ ಹಿನ್ನಡೆಯಾಗಿದೆ.

ಇನ್ನೂ ಅವಕಾಶವಿದೆ

ಅಚ್ಚರಿ ಎಂದರೆ ರಾಣಾಗೆ ತೀರ್ಪಿನ ವಿರುದ್ಧ ಇನ್ನೂ ಮೇಲ್ಮನವಿ ಸಲ್ಲಿಸುವ ಆಯ್ಕೆ ಇದೆ. ಭಾರತಕ್ಕೆ ಗಡೀಪಾರು ಮಾಡುವುದನ್ನು ತಡೆಯುವಂತೆ ಮನವಿ ಸಲ್ಲಿಸಲು ಹಲವು ಮಾರ್ಗಗಳಿವೆ ಎಂದು ಮೂಲಗಳು ತಿಳಿಸಿವೆ. ಅಮೆರಿಕ ಕಾನೂನಿನ ಪ್ರಕಾರ, ರಾಣಾನನ್ನು ಭಾರತಕ್ಕೆ ಹಸ್ತಾಂತರಿಸದಿದ್ದರೆ 2027ರಲ್ಲಿ ಜೈಲು ಶಿಕ್ಷೆ ಪೂರ್ಣಗೊಂಡ ನಂತರ ಆತನನ್ನು ತಾಯ್ನಾಡಾದ ಕೆನಡಾಕ್ಕೆ ಗಡೀಪಾರು ಮಾಡಲಾಗುತ್ತದೆ.

ಭಯೋತ್ಪಾದಕ ದಾಳಿಯ ಕರಾಳ ನೆನಪು

2008ರ ನವೆಂಬರ್ 26ರಂದು ಲಷ್ಕರ್-ಎ-ತೊಯ್ಬಾದ 10 ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈಗೆ ಬಂದು, ನಗರದಾದ್ಯಂತ ಹಲವು ಸ್ಥಳಗಳಲ್ಲಿ ದಾಳಿ ಮಾಡಿದರು. ದಾಳಿಯಲ್ಲಿ 26 ವಿದೇಶಿ ನಾಗರಿಕರು ಸೇರಿದಂತೆ 166 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Sajid Mir: ಮುಂಬೈ ದಾಳಿಯ ಉಗ್ರನಿಗೆ ಪಾಕ್‌ ಜೈಲಿನಲ್ಲೇ ವಿಷ ಪ್ರಾಶನ!

Continue Reading

ಪ್ರಮುಖ ಸುದ್ದಿ

Physical assault : ಹೆಣ್ಣು ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸುತ್ತಿದ್ದ ಶಿಕ್ಷಕ; ಸಿಟ್ಟಿಗೆದ್ದು ಶಾಲೆಯನ್ನೇ ಸುಟ್ಟು ಹಾಕಿದ ಗ್ರಾಮಸ್ಥರು

Physical assault :

VISTARANEWS.COM


on

Koo

ಗುವಾಹಟಿ: ಇಲ್ಲಿನ ಶಾಲೆಯೊಂದರ ಶಿಕ್ಷಕ ಶಾಲೆಯಲ್ಲಿ ಕಲಿಯುತ್ತಿರುವ ಹೆಣ್ಣು ಮಕ್ಕಳಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಲೈಂಗಿಕ ಕಿರುಕುಳ (Physical assault) ನೀಡುತ್ತಿದ್ದ ಬಗ್ಗೆ ದೂರು ದಾಖಲಾಗಿದೆ. ಪ್ರಕರಣ ಬಯಲಿಗೆ ಬಂದ ತಕ್ಷಣ ಗ್ರಾಮಸ್ಥರು ಶಾಲೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಗೆ ಬೆಂಕಿ ಹಚ್ಚಿದ್ದಕ್ಕಾಗಿ ಸ್ಥಳೀಯರು ಸಹ ಪೊಲೀಸ್ ಪ್ರಕರಣವನ್ನು ಎದುರಿಸುವಂತಾಗಿದೆ.

ಘಟನೆ ಬಳಿಕ 37 ವರ್ಷದ ಶಿಕ್ಷಕ ಪರಾರಿಯಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 12 ರಂದು ನಡೆದಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪೊಲೀಸರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಕರೀಂಗಂಜ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪಾರ್ಥ ಪ್ರತಿಮ್ ದಾಸ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ಹೇಳಲು ಆರಂಭದಲ್ಲಿ ಮಕ್ಕಳು ಹಿಂಜರಿಯುತ್ತಿದ್ದರು. ಆದರೆ ನಂತರ ಬಾಲಕಿಯೊಬ್ಬಳು ತನ್ನ ತಾಯಿಗೆ ವಿಷಯ ತಿಳಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಆ ಸುದ್ದಿ ಎಲ್ಲೆಡೆ ಹರಿಡಿದ್ದು ಸಿಟ್ಟಿಗೆದ್ದ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ

“ಅಶ್ಲೀಲ ಚಿತ್ರಗಳನ್ನು ನೋಡುವಂತೆ ಶಿಕ್ಷಕರು ಬಲವಂತಪಡಿಸಿದ್ದಾರೆ ಎಂದು ಅವಳು ಹೇಳಿದ್ದಳು. ವಿಡಿಯೊ ತೋರಿಸಿದ ಬಳಿಕ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದ” ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದರು. ಕೋಪಗೊಂಡ ಸ್ಥಳೀಯರು ಶಿಕ್ಷಕನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ದರು. ಆದರೆ ಅವನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: Sourav Ganguly : ಕೊಲೆಗಡುಕರಿಗೆ ಈ ರೀತಿ ಮಾಡಿ; ಕೋಲ್ಕೊತಾ ವೈದ್ಯೆಯ ಅತ್ಯಾಚಾರ, ಕೊಲೆ ಬಗ್ಗೆ ಸೌರವ್​ ಗಂಗೂಲಿ ಅಭಿಪ್ರಾಯ ಹೀಗಿತ್ತು

“ಸ್ಥಳೀಯರು ಸರ್ಕಾರಿ ಆಸ್ತಿಗೆ ಹಾನಿ ಮಾಡಿರುವುದರಿಂದ, ನಾವು ಅವರ ವಿರುದ್ಧವೂ ಪ್ರಕರಣ ದಾಖಲಿಸುತ್ತೇವೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಇದರಿಂದ ಅವರು ಶಿಕ್ಷಣವನ್ನು ಪಡೆಯುತ್ತಾರೆ ಮತ್ತು ಉತ್ತಮ ಮಾನವರಾಗುತ್ತಾರೆ ಎಂದುಕೊಂಡಿದ್ದೆವು. ಆದರೆ ಈ ರೀತಿಯ ಶಿಕ್ಷಕರಿಂದ ಅವರು ಏನು ಕಲಿಯುತ್ತಾರೆ” ಎಂದು ಸ್ಥಳೀಯರೊಬ್ಬರು ಹೇಳಿದರು.

Continue Reading

ಪ್ರಮುಖ ಸುದ್ದಿ

Sourav Ganguly : ಕೊಲೆಗಡುಕರಿಗೆ ಈ ರೀತಿ ಮಾಡಿ; ಕೋಲ್ಕೊತಾ ವೈದ್ಯೆಯ ಅತ್ಯಾಚಾರ, ಕೊಲೆ ಬಗ್ಗೆ ಸೌರವ್​ ಗಂಗೂಲಿ ಅಭಿಪ್ರಾಯ ಹೀಗಿತ್ತು

Sourav Ganguly: ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆಯ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ, ಈ ಸಮಯದಲ್ಲಿ ವಾಡಿಕೆಯ ಒಪಿಡಿ ಸೇವೆಗಳು ಮತ್ತು ಚುನಾಯಿತ ಶಸ್ತ್ರಚಿಕಿತ್ಸೆಗಳನ್ನು ನಡೆಯುವುದಿಲ್ಲ. ಆದಾಗ್ಯೂ, ಎಲ್ಲಾ ತುರ್ತು ಸೇವೆಗಳು ಸಿಗಲಿವೆ.

VISTARANEWS.COM


on

Sourav Ganguly
Koo

ಕೋಲ್ಕತಾ: ಇಲ್ಲಿನ ಆರ್​​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣವು ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಅಲ್ಲಿನ ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದೆ. ಕನಿಷ್ಠ 30 ಶಂಕಿತರನ್ನು ಗುರುತಿಸಿದ್ದು ಪ್ರಶ್ನಿಸಲು ಪ್ರಾರಂಭಿಸಿದ್ದೇವೆ” ಎಂದು ಸಿಬಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಪಶ್ಚಿಮ ಬಂಗಾಳದ ಕ್ರೀಡಾ ಐಕಾನ್ ಸೌರವ್ ಗಂಗೂಲಿ (Sourav Ganguly) ಕಠಿಣ ಶಿಕ್ಷೆಯಿಂದ ಮಾತ್ರ ಇಂಥ ಪ್ರಕರಣಗಳಿಗೆ ಕೊನೆ ಎಂದು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಸೌರವ್ ಗಂಗೂಲಿ ಈ ಘಟನೆಯನ್ನು ಖಂಡಿಸಿದ್ದು, ಶಿಕ್ಷೆಯನ್ನು ಕಠಿಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯದ ಬಗ್ಗೆ ಅವರು ತಮ್ಮ ಹಿಂದಿನ ಹೇಳಿಕೆಗಳಿಗೆ ಎದುರಾದ ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಹಿಂದೆ ಗಂಗೂಲಿ ಇದನ್ನು ‘ಯಾವುದೋ ಒಂದು ಘಟನೆ ಎಂದು ಕರೆದಿದ್ದರು ಎಂದು ಆರೋಪಿಸಿದ್ದರು. ಕೋಲ್ಕತಾ ಮೂಲದ ಭಾರತದ ಮಾಜಿ ತಾರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಇದನ್ನು ಸಂದರ್ಭಕ್ಕೆ ಅನುಗುಣವಾಗಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಭಾನುವಾರ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ವ್ಯಾಖ್ಯಾನಿಸಲಾಗಿದೆ. ನಾನು ಇದನ್ನು ಈ ಹಿಂದೆಯೂ ಹೇಳಿದ್ದೇನೆ ಇದೊಂದು ಭಯಾನಕ ಘಟನೆ. ಈಗ ಸಿಬಿಐ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಡೆದಿರುವುದು ತುಂಬಾ ನಾಚಿಕೆಗೇಡಿನ ಸಂಗತಿ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಅಪರಾಧಿಯನ್ನು ಪತ್ತೆ ಹೆಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದು ನಾನು ಆಗ್ರಹಿಸುತ್ತೇನೆ. ಶಿಕ್ಷೆಯು ಹೇಗಿರಬೇಕು ಎಂದರೆ ಯಾರೂ ತಮ್ಮ ಜೀವನದಲ್ಲಿ ಮತ್ತೆ ಅಂತಹ ಅಪರಾಧವನ್ನು ಮಾಡಲು ಧೈರ್ಯ ಮಾಡಬಾರದು ಎಂದು ಸೌರವ್ ಗಂಗೂಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಷ್ಟ್ರ ವ್ಯಾಪಿ ಮುಷ್ಕರ

ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆಯ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ, ಈ ಸಮಯದಲ್ಲಿ ವಾಡಿಕೆಯ ಒಪಿಡಿ ಸೇವೆಗಳು ಮತ್ತು ಚುನಾಯಿತ ಶಸ್ತ್ರಚಿಕಿತ್ಸೆಗಳನ್ನು ನಡೆಯುವುದಿಲ್ಲ. ಆದಾಗ್ಯೂ, ಎಲ್ಲಾ ತುರ್ತು ಸೇವೆಗಳು ಸಿಗಲಿವೆ.

ಸಾರ್ವಜನಿಕ ಹಿತದೃಷ್ಟಿಯಿಂದ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವಂತೆ ಆರೋಗ್ಯ ಸಚಿವಾಲಯವು ಪ್ರತಿಭಟನಾನಿರತ ವೈದ್ಯರನ್ನು ವಿನಂತಿಸಿದೆ. ಆರೋಗ್ಯ ಸೇವಾ ಕಾರ್ಯನಿರತರ ಸುರಕ್ಷತೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ಭರವಸೆ ನೀಡಿದೆ. ಸಮಿತಿಯೊಂದಿಗೆ ತಮ್ಮ ಸಲಹೆಗಳನ್ನು ಹಂಚಿಕೊಳ್ಳಲು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲಾ ಪಾಲುದಾರರ ಪ್ರತಿನಿಧಿಗಳನ್ನು ಸಲಹೆ ನೀಡಲಾಗಿದೆ.

ಇದನ್ನೂ ಓದಿ: Power Banks : ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ಪವರ್​ ಬ್ಯಾಂಕ್​ಗಳನ್ನು ಬಾಡಿಗೆಗೆ ಪಡೆಯಬಹುದು!

ಭಾರತದ ವೈದ್ಯರ ಅತಿದೊಡ್ಡ ಸಂಘಟನೆಯಾದ ಐಎಂಎ, 36 ಗಂಟೆಗಳ ಪಾಳಿ ಮತ್ತು ವಿಶ್ರಾಂತಿ ಪಡೆಯಲು ಸುರಕ್ಷಿತ ಸ್ಥಳಗಳು ಸೇರಿದಂತೆ ನಿವಾಸಿ ವೈದ್ಯರ ಕೆಲಸ ಮತ್ತು ಜೀವನ ಪರಿಸ್ಥಿತಿಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕೆಂದು ಒತ್ತಾಯಿಸಿದೆ. ಕೆಲಸದ ಸ್ಥಳಗಳಲ್ಲಿ ವೈದ್ಯಕೀಯ ವೃತ್ತಿಪರರ ವಿರುದ್ಧದ ಹಿಂಸಾಚಾರವನ್ನು ತಡೆಗಟ್ಟಲು ಕಾನೂನು ರಚನೆಗೆ ಕೋರಿದೆ.

Continue Reading
Advertisement
Murder case
ಪ್ರಮುಖ ಸುದ್ದಿ4 seconds ago

Murder Case : ದಲಿತನಿಗೆ ಕ್ಷೌರ ಮಾಡಲು ನಿರಾಕರಣೆ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕ್ರೀಡೆ2 mins ago

Youth Olympic 2030: ಯೂತ್​ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಐಸಿಸಿ ಪ್ರಯತ್ನ; ಆತಿಥ್ಯಕ್ಕೆ ಭಾರತ ಸಿದ್ಧತೆ

Air India Hostess
ವಿದೇಶ16 mins ago

Air India Hostess: ಹೋಟೆಲ್‌ನಲ್ಲಿ ಏರ್‌ ಇಂಡಿಯಾ ಗಗನಸಖಿ ಮೇಲೆ ಹಲ್ಲೆ; ನೆಲಕ್ಕೆ ಕೆಡವಿ ಎಳೆದಾಡಿದ ದುಷ್ಕರ್ಮಿ

70th National Film Awards Nithya Menen REACTS For 1st Time
ಕಾಲಿವುಡ್20 mins ago

70th National Film Awards : ರಾಷ್ಟ್ರ ಪ್ರಶಸ್ತಿ ಗೆದ್ದ ಬಳಿಕ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದು ಹೀಗೆ!

Accident News:
ಪ್ರಮುಖ ಸುದ್ದಿ43 mins ago

Accident News : ನರಗುಂದಲ್ಲಿ ಭೀಕರ ಅಫಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

Neeraj Chopra
ಕ್ರೀಡೆ44 mins ago

Neeraj Chopra: ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಸ್ಪರ್ಧೆ; ಆಗಸ್ಟ್​ 22ಕ್ಕೆ ಟೂರ್ನಿ

Liquor theft:
ಪ್ರಮುಖ ಸುದ್ದಿ1 hour ago

Liquor Theft : ಡಾಬಾದಿಂದ ಲೋಕಲ್ ಬ್ರಾಂಡ್​ ಎಣ್ಣೆ ಕದಿಯುತ್ತಿದ್ದವನ ಮುಖ ಸಿಸಿಟಿವಿಯಲ್ಲಿ ಸೆರೆ

Thalapathy Vijay plays both father and son in this time travel saga.
ಕಾಲಿವುಡ್1 hour ago

Thalapathy Vijay: ದಳಪತಿ ವಿಜಯ್‌ ಕೊನೆ ಚಿತ್ರದ ಟ್ರೈಲರ್‌ ಔಟ್‌;  ಅಬ್ಬರಿಸಿದ ನಟ!

Kolkata Doctor Murder Case
ದೇಶ1 hour ago

Kolkata Doctor Murder Case: ಜನರಲ್ಲಿ ಗೊಂದಲ ಮೂಡಿಸುವ ಮಮತಾ ಬ್ಯಾನರ್ಜಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ; ನಿರ್ಭಯಾ ತಾಯಿ

virat kohli
ಕ್ರೀಡೆ1 hour ago

Virat Kohli: ಕೊಹ್ಲಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ತುಂಬಿತು 16 ವರ್ಷ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌