ದ್ರೌಪದಿ ಮುರ್ಮು ಭಾಷಣದ ಮಧ್ಯೆ ಕಡಿತಗೊಂಡ ವಿದ್ಯುತ್​; ಸೌಮ್ಯವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ರಾಷ್ಟ್ರಪತಿ - Vistara News

ದೇಶ

ದ್ರೌಪದಿ ಮುರ್ಮು ಭಾಷಣದ ಮಧ್ಯೆ ಕಡಿತಗೊಂಡ ವಿದ್ಯುತ್​; ಸೌಮ್ಯವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ರಾಷ್ಟ್ರಪತಿ

Droupadi Murmu: ಬೆಳಗ್ಗೆ ಹೊತ್ತಲ್ಲಿ ಸಮಾರಂಭ ನಡೆಯುತ್ತಿತ್ತು. ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದರು. ಆದರೆ ಏಕಾಏಕಿ ವಿದ್ಯುತ್ ಕಡಿತಗೊಂಡು ಯೂನಿವರ್ಸಿಟಿಯ ಅಡಿಟೋರಿಯಮ್​​ನಲ್ಲಿ ಕತ್ತಲಾವರಿಸಿತು. ಸುಮಾರು 9 ನಿಮಿಷಗಳ ಕಾಲ ಇದೇ ಸ್ಥಿತಿಯಿತ್ತು.

VISTARANEWS.COM


on

Power Cut during President Droupadi Speech In Odisha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಷ್ಟ್ರಪತಿ-ಪ್ರಧಾನಮಂತ್ರಿ-ಸಚಿವರು ಮತ್ತು ಇತರ ವಿಐಪಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ಏನೂ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗುತ್ತದೆ. ವೇದಿಕೆ, ಕುರ್ಚಿ, ಮೈಕ್​-ವಿದ್ಯುತ್​ ಹೀಗೆ ಎಲ್ಲವೂ ಸರಿಯಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಅದರಲ್ಲೂ ರಾಷ್ಟ್ರಪತಿ/ಪ್ರಧಾನಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ತುಸು ಜಾಸ್ತಿಯೇ ಕಟ್ಟೆಚ್ಚರ ಇರುತ್ತದೆ. ಆದರೆ ಒಡಿಶಾ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕಾರ್ಯಕ್ರಮವೊಂದರಲ್ಲಿ ಎಡವಟ್ಟಾಗಿದೆ. ಇಲ್ಲಿನ ಮಯೂರ್​ಬಂಜ್​​ನ ಬರಿಪಾಡಾದಲ್ಲಿರುವ ಮಹಾರಾಜಾ ಶ್ರೀರಾಮ್​ ಚಂದ್ರ ಭಂಜಾ ದೇವ್​ ವಿಶ್ವ ವಿದ್ಯಾನಿಲಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದಾಗಲೇ ಕರೆಂಟ್ ಹೋಗಿದೆ.

ಬೆಳಗ್ಗೆ ಹೊತ್ತಲ್ಲಿ ಸಮಾರಂಭ ನಡೆಯುತ್ತಿತ್ತು. ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದರು. ಆದರೆ ಏಕಾಏಕಿ ವಿದ್ಯುತ್ ಕಡಿತಗೊಂಡು ಯೂನಿವರ್ಸಿಟಿಯ ಅಡಿಟೋರಿಯಮ್​​ನಲ್ಲಿ ಕತ್ತಲಾವರಿಸಿತು. ಸುಮಾರು 9 ನಿಮಿಷಗಳ ಕಾಲ ಇದೇ ಸ್ಥಿತಿಯಿತ್ತು. ಕರೆಂಟ್ ಹೋದ ತಕ್ಷಣ ದ್ರೌಪದಿ ಮುರ್ಮು ಅವರೇನೂ ಭಾಷಣ ನಿಲ್ಲಿಸಲಿಲ್ಲ. ಕತ್ತಲಲ್ಲೇ ತಮ್ಮ ಭಾಷಣ ಮುಂದುವರಿಸಿದರು. ಆ ಅಡಿಟೋರಿಯಂಗೆ ಹೊರಗಿನಿಂದ ಸ್ವಲ್ಪ ಬೆಳಕು ಬರುತ್ತಿತ್ತು. ಆದರೆ ಕರೆಂಟ್ ಹೋಗಿದ್ದಕ್ಕೆ ದ್ರೌಪದಿ ಮುರ್ಮು ಸ್ವಲ್ಪ ಕಿರಿಕಿರಿಗೊಂಡರೂ, ಅತ್ಯಂತ ಸೌಮ್ಯವಾಗಿಯೇ ಅದನ್ನು ಹೊರಹಾಕಿದರು. ಈ ವಿಶ್ವವಿದ್ಯಾನಿಲಯವು ಅದೆಷ್ಟು ಸೌಂದರ್ಯ ಹೊಂದಿದೆಯೊ, ಅಷ್ಟೇ ಕತ್ತಲಲ್ಲಿ ಇದೆ’ ಎಂದು ಹೇಳಿದರು.

ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಪಾದ ಮುಟ್ಟಿ ನಮಿಸಲು ಮುಂದಾಗಿದ್ದ ಸರ್ಕಾರಿ ಎಂಜಿನಿಯರ್​ ಅಮಾನತು

ಹೀಗೆ ದ್ರೌಪದಿ ಮುರ್ಮು ಕಾರ್ಯಕ್ರಮದ ಮಧ್ಯೆ ಕರೆಂಟ್ ಹೋಗಿದ್ದನ್ನು ಒಡಿಶಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದೃಢಪಡಿಸಿದೆ. ಬೆಳಗ್ಗೆ 11.56ರಿಂದ 12.05ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಅಡಿಟೋರಿಯಂ ಸಂಪೂರ್ಣವಾಗಿ ಕತ್ತಲಾಗಿತ್ತು ಎಂದು ಹೇಳಿದೆ. ಹಾಗೇ, ಈ ಬಗ್ಗೆ ವಿಷಾದವನ್ನೂ ವ್ಯಕ್ತಪಡಿಸಿದೆ. ಹೀಗೆ ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಮಧ್ಯೆ ಕರೆಂಟ್ ಹೋಗುವುದು ಭದ್ರತೆ ದೃಷ್ಟಿಯಿಂದಲೂ ಪ್ರಮಾದವಾಗಿದೆ. ಒಡಿಶಾದ ಹಲವು ರಾಜಕಾರಣಿಗಳು, ನಿವೃತ್ತ ಭದ್ರತಾ ಸಿಬ್ಬಂದಿ ಇದನ್ನು ಟೀಕಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video: ಗಾಜಿಪುರ ಪೊಲೀಸ್ ಠಾಣೆಯಾ ಎದುರು ಕಲ್ಯಾಣಪುರಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಅಲ್ಲೇ ಒಂದು ಸಣ್ಣ ಶೆಡ್ ಮಾಡಿಕೊಂಡು ಅಲ್ಲಿ ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬಂದಿತ್ತು. ಈ ವಿಡಿಯೋದಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕಿಕೊಂಡಿರುವ ಲಂಚಕೋರ ಮೂವರು ಸಂಚಾರಿ ಪೊಲೀಸರು ಬಂದ ಹಣವನ್ನು ಹಂಚಿಕೊಳ್ಳುತ್ತಿರುವುದು ಬಯಲಾಗಿದೆ.

VISTARANEWS.COM


on

Viral Video
Koo

ನವದೆಹಲಿ: ಟ್ರಾಫಿಕ್‌ ಪೊಲೀಸ(Traffic Police)ರ ವಿರುದ್ಧ ಲಂಚ(Bribe)ದ ಆರೋಪ ಕೇಳಿ ಬರುವುದು ಸರ್ವೇ ಸಾಮಾನ್ಯ. ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡುವವರಿಂದ ಹಣ ಪೀಕಿಸಿ ತಮ್ಮ ಜೇಬ ತುಂಬಿಸಿಕೊಂಡು ಕೆಲವೊಮ್ಮೆ ಸಿಕ್ಕಿಹಾಕಿಕೊಂಡಿರುವ ಘಟನೆಗಳೂ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ವಾಹನ ತಪಾಸಣೆ ನೆಪದಲ್ಲಿ ವಾಹನ ಸವಾರರಿಂದ ಪಡೆದ ಲಂಚದ ಹಣವನ್ನು ಮೂವರು ಟ್ರಾಫಿಕ್ ಪೊಲೀಸರು ಹಂಚಿಕೊಳ್ಳುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video) ಆಗಿದೆ.

ಗಾಜಿಪುರ ಪೊಲೀಸ್ ಠಾಣೆಯಾ ಎದುರು ಕಲ್ಯಾಣಪುರಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಅಲ್ಲೇ ಒಂದು ಸಣ್ಣ ಶೆಡ್ ಮಾಡಿಕೊಂಡು ಅಲ್ಲಿ ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬಂದಿತ್ತು. ಈ ವಿಡಿಯೋದಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕಿಕೊಂಡಿರುವ ಲಂಚಕೋರ ಮೂವರು ಸಂಚಾರಿ ಪೊಲೀಸರು ಬಂದ ಹಣವನ್ನು ಹಂಚಿಕೊಳ್ಳುತ್ತಿರುವುದು ಬಯಲಾಗಿದೆ. ಅಲ್ಲದೆ ಇದಕ್ಕೆ ಪೂರಕ ಎಂಬಂತೆ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಈ ಮೂವರು ಸಂಚಾರಿ ಪೊಲೀಸರು ಹಣ ಹಂಚಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಮತ್ತೊಂದು ವಿಡಿಯೋದಲ್ಲಿ ವಾಹನ ಚಾಲಕನೊಬ್ಬ ಚೌಕಿಯ ಬಳಿ ಬಂದು ಪೊಲೀಸರ ಜೊತೆ ಮಾತನಾಡುವ ದೃಶ್ಯವಿದೆ. ಕೆಲ ಹೊತ್ತಿನ ಮಾತುಕತೆ ಬಳಿಕ ಟ್ರಾಫಿಕ್ ಪೊಲೀಸ್ ಆತನಿಂದ ಲಂಚವಾಗಿ ಹಣ ಪಡೆದಿದ್ದಾರೆ. ಆದರೆ ನೇರವಾಗಿ ಹಣ ಪಡೆಯದೇ, ಕುಳಿತಿಕೊಂಡ ಬಳಿ ಇಡುವಂತೆ ಸೂಚಿದ್ದಾನೆ. ಲಂಚದ ರೂಪದಲ್ಲಿ ಹಣ ಇಟ್ಟು ವಾಹನ ಚಾಲಕ ತೆರಳಿದ್ದಾನೆ.

ಮೂವರೂ ಸಸ್ಪೆಂಡ್‌

ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ತನಿಖೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿ ಮೂವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದರ ಹಿನ್ನೆಲೆಯಲ್ಲಿ ಅಪರಾಧವೆಸಗಿದ ಮೂವರು ಟ್ರಾಫಿಕ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ

ಇದನ್ನೂ ಓದಿ: Viral News: 5 ಕೆಜಿ ಆಲೂಗಡ್ಡೆ ಲಂಚ ಕೇಳಿ ಅಮಾನತುಗೊಂಡ ಸಬ್‌ ಇನ್ಸ್‌ಪೆಕ್ಟರ್ !

Continue Reading

ಪ್ರಮುಖ ಸುದ್ದಿ

Rakesh Pal: ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ವಿಧಿವಶ

Rakesh Pal:ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿನ್ನೆ ಪಾಲ್ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದರು. ತಕ್ಷಣ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Rakesh pal
Koo

ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್(Rakesh Pal) ಅವರು ಹೃದಯಾಘಾತ(Heart attack)ದಿಂದ ಭಾನುವಾರ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿನ್ನೆ ಪಾಲ್ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದರು. ತಕ್ಷಣ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ರಾಕೇಶ್‌ ಪಾಲ್‌ ಅವರ ಅಕಾಲಿಕ ನಿಧನಕ್ಕೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಂಬನಿ ಮಿಡಿದಿದ್ದಾರೆ. ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ‘ರಾಕೇಶ್ ಪಾಲ್ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಸಮರ್ಥ ಮತ್ತು ಬದ್ಧ ಅಧಿಕಾರಿಯಾಗಿದ್ದು, ಅವರ ನಾಯಕತ್ವದಲ್ಲಿ ICG ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ದೊಡ್ಡ ದಾಪುಗಾಲುಗಳನ್ನು ಇಡುತ್ತಿತ್ತು. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಮಾಜಿಕ ಜಾಲತಾಣ ‘ ಎಂದಿದ್ದಾರೆ. ಅಲ್ಲದೇ ರಾಕೇಶ್‌ ಪಾಲ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಇನ್ನ ರಾಕೇಶ್‌ ಪಾಲ್‌ ಅವರು ಕಳೆದ ತಿಂಗಳಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ತಮ್ಮ ವಿಶೇಷ ಸೇವೆ ವಿಶಿಷ್ಟ ಸೇವಾ ಮೆಡಲ್‌ ಪಡೆದಿದ್ದರು.

ಇದನ್ನೂ ಓದಿ: Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

Continue Reading

ದೇಶ

Viral News: ಒಂಟಿಯಾಗಿದ್ದಾಗ ಮೈ ಮುಟ್ಟೋಕೆ ಬಂದೋನ ಖಾಸಗಿ ಅಂಗಕ್ಕೆ ಸಟ್ಟುಗದಲ್ಲೇ ಚುಚ್ಚಿದ್ಳು!

Viral News: ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ಭಿವಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅನಿಲ್ ಸತ್ಯನಾರಾಯಣ ರಚ್ಚಾ(30) ಎಂಬಾತ 26 ವರ್ಷದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಮಹಿಳೆ ಮತ್ತು ಈತ ಪರಸ್ಪರ ಪರಿಚಿತರೇ. ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ರಚ್ಚ ತನ್ನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ.

VISTARANEWS.COM


on

Viral Video
Koo

ಮುಂಬೈ: ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ತನ್ನ ಅಸಭ್ಯವಾಗಿ ವರ್ತಿಸಿದ ಕಿಡಿಗೇಡಿಗೆ ಮಹಿಳೆಯೊಬ್ಬಳು ತಕ್ಕಪಾಠ ಕಲಿಸಿದ್ದಾಳೆ. ಮಹಾರಾಷ್ಟ್ರ(Maharashtra)ದ ಥಾಣೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಕಬ್ಬಿಣದ ಸಟ್ಟುಗ(spatula)ದಿಂದಲೇ 30 ವರ್ಷದ ವ್ಯಕ್ತಿಯ ಖಾಸಗಿ ಅಂಗಕ್ಕೆ ಚುಚ್ಚಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ(Viral News).

ಏನಿದು ಘಟನೆ?

ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ಭಿವಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅನಿಲ್ ಸತ್ಯನಾರಾಯಣ ರಚ್ಚಾ(30) ಎಂಬಾತ 26 ವರ್ಷದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಮಹಿಳೆ ಮತ್ತು ಈತ ಪರಸ್ಪರ ಪರಿಚಿತರೇ. ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ರಚ್ಚ ತನ್ನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಅಲ್ಲದೆ ಆಕೆ ಮೇಲೆ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಮಹಿಳೆ, ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ, ಅಡುಗೆಮನೆಗೆ ಓಡಿ ಸಟ್ಟುಗ(ಸೌಟು) ತೆಗೆದುಕೊಂಡಳು. ಅದರಿಂದಲೇ ಅವಳು ರಚ್ಚಾ ಮೇಲೆ ದಾಳಿ ಮಾಡಿ ಅವನ ಜನನಾಂಗಗಳಿಗೆ ಗಾಯಗೊಳಿಸಿದಳು ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ರಚ್ಚಾನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಆತ ಅಪಾಯದಿಂದ ಪಾರಾಗಿದ್ದಾನೆ. ಇನ್ನು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ರಚ್ಚಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅತಿಕ್ರಮಣಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿ ಇನ್ನೂ ಆಸ್ಪತ್ರೆಯಲ್ಲಿರುವುದರಿಂದ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು, ಬಿಹಾರದ ಮಹಿಳೆಯೊಬ್ಬಳು ತನ್ನನ್ನು ಮದುವೆಯಾಗಲು ನಿರಾಕರಿಸಿದ ಕಾರಣ ಸರನ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಅಂಗಗಳನ್ನು ಕತ್ತರಿಸಿ ಹಾಕಿದ್ದಳು. ಈ ಸುದ್ದಿ ಭಾರೀ ವೈರಲ್‌ ಆಗಿತ್ತು. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆಕೆಯ ಬಳಿಯಿದ್ದ ರಕ್ತಸಿಕ್ತ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆಯ ನಂತರ, ಆರೋಪಿಯು ತಾನು ಮತ್ತು ಸಂತ್ರಸ್ತೆ ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಹೇಳಿದ್ದಾನೆ, ಆದರೆ ವ್ಯಕ್ತಿ ಅವಳನ್ನು ಮದುವೆಯಾಗಲು ನಿರಾಕರಿಸಿದನು. ತನ್ನ ಪ್ರಸ್ತಾಪವನ್ನು ನಿರಾಕರಿಸಿದ ನಂತರ ವಾದದ ನಂತರ ಅವಳು ಅವನ ಮೇಲೆ ಹಲ್ಲೆ ನಡೆಸಿದ್ದಾಳೆ. ಮದುವೆಯ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿದ್ದಾನೆ ಎಂದು ಆರೋಪಿಸಿದ್ದಾಳೆ.

ಇದನ್ನೂ ಓದಿ: Viral News: ‘ಅಸ್ವಾಭಾವಿಕ ಲೈಂಗಿಕಕ್ರಿಯೆ’ಗೆ ಒತ್ತಾಯಿಸುತ್ತಿದ್ದ ಗಂಡನ ಶಿಶ್ನವನ್ನೇ ಬಾಯಿಂದ ಕತ್ತರಿಸಿದ ಹೆಂಡತಿ!

Continue Reading

ದೇಶ

Champai Soren: ನನ್ನ ಎದುರು ಮೂರು ಆಯ್ಕೆಗಳಿವೆ; ಬಿಜೆಪಿ ಸೇರ್ಪಡೆ ಬಗ್ಗೆ ಚಂಪೈ ಸೊರೆನ್‌ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್‌

Champai Soren: ನನಗೆ ಮೂರು ಆಯ್ಕೆಗಳಿವೆ, ಮೊದಲನೆಯದಾಗಿ, ರಾಜಕೀಯದಿಂದ ನಿವೃತ್ತಿ, ಎರಡನೆಯದು, ನನ್ನದೇ ಆದ ಪ್ರತ್ಯೇಕ ಸಂಘಟನೆಯನ್ನು ಸ್ಥಾಪನೆ ಮತ್ತು ಮೂರನೆಯದಾಗಿ, ನಾನು ಈ ಹಾದಿಯಲ್ಲಿ ಮತ್ತೊಬ್ಬ ಜೊತೆಗಾರನನ್ನು ಹುಡುಕಿಕೊಳ್ಳುವುದು(ಪರೋಕ್ಷವಾಗಿ ಬಿಜೆಪಿ ಸೇರ್ಪಡೆ) ಆ ದಿನದಿಂದ ಇಂದಿನವರೆಗೆ ಮತ್ತು ಮುಂಬರುವ ಜಾರ್ಖಂಡ್ ಅಸೆಂಬ್ಲಿ ಚುನಾವಣೆಯವರೆಗೆ, ಈ ಪ್ರಯಾಣದಲ್ಲಿ ನನಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Champai Soren
Koo

ನವದೆಹಲಿ: ಜಾರ್ಖಂಡ್‌ ರಾಜಕೀಯದಲ್ಲಿ (Jharkhand Politics) ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಸ್ವಪಕ್ಷದ ಬಗ್ಗೆ ತೀವ್ರ ಬೇಸರಗೊಂಡು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಬಲವಾಗಿ ಕೇಳುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ (Jharkhand Mukti Morcha-JMM)ದ ಹಿರಿಯ ನಾಯಕ ಚಂಪೈ ಸೊರೆನ್ (Champai Soren) ತಮ್ಮ ಮುಂದಿನ ನಡೆ ಬಗ್ಗೆ ಮಹತ್ವ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಮಾಡಿರುವ ಚಂಪೈ, ತಮ್ಮ ಮುಂದೆ ಮೂರು ಆಯ್ಕೆಗಳಿವೆ ಎಂದಿದ್ದಾರೆ.

ಭಾರವಾದ ಹೃದಯದಿಂದ, ನಾನು ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ “ಇಂದಿನಿಂದ ನನ್ನ ಜೀವನದ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಹೇಳಿದ್ದೆ. ಇದರಲ್ಲಿ ನನಗೆ ಮೂರು ಆಯ್ಕೆಗಳಿವೆ, ಮೊದಲನೆಯದಾಗಿ, ರಾಜಕೀಯದಿಂದ ನಿವೃತ್ತಿ, ಎರಡನೆಯದು, ನನ್ನದೇ ಆದ ಪ್ರತ್ಯೇಕ ಸಂಘಟನೆಯನ್ನು ಸ್ಥಾಪನೆ ಮತ್ತು ಮೂರನೆಯದಾಗಿ, ನಾನು ಈ ಹಾದಿಯಲ್ಲಿ ಮತ್ತೊಬ್ಬ ಜೊತೆಗಾರನನ್ನು ಹುಡುಕಿಕೊಳ್ಳುವುದು(ಪರೋಕ್ಷವಾಗಿ ಬಿಜೆಪಿ ಸೇರ್ಪಡೆ) ಆ ದಿನದಿಂದ ಇಂದಿನವರೆಗೆ ಮತ್ತು ಮುಂಬರುವ ಜಾರ್ಖಂಡ್ ಅಸೆಂಬ್ಲಿ ಚುನಾವಣೆಯವರೆಗೆ, ಈ ಪ್ರಯಾಣದಲ್ಲಿ ನನಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದು ಪೋಸ್ಟ್‌ ಮಾಡಿದ್ದಾರೆ.

ನಾನು ಒಳಗೊಳಗೇ ಒಡೆದು ಚೂರಾಗಿದ್ದೇನೆ. ಏನು ಮಾಡಬೇಕೆಂದು ನನಗೆ ಅರ್ಥವಾಗಲಿಲ್ಲ. ಎರಡು ದಿನಗಳ ಕಾಲ ನಾನು ಶಾಂತವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಂಡೆ, ಇಡೀ ಘಟನೆಯಲ್ಲಿ ನನ್ನ ತಪ್ಪನ್ನು ಹುಡುಕುತ್ತಲೇ ಇದ್ದೆ. ನನಗೆ ಅಧಿಕಾರದ ದುರಾಸೆ ಸ್ವಲ್ಪವೂ ಇರಲಿಲ್ಲ, ಆದರೆ ನನ್ನ ಸ್ವಾಭಿಮಾನಕ್ಕೆ ಈ ಹೊಡೆತ ಬಿದ್ದಿದೆ. ನನ್ನ ಸ್ವಂತ ಜನರು ಉಂಟುಮಾಡಿದ ನೋವನ್ನು ನಾನು ಎಲ್ಲಿ ವ್ಯಕ್ತಪಡಿಸಬಹುದು?” ಎಂದು ಚಂಪೈ ಸೊರೆನ್ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಮುಖ್ಯಮಂತ್ರಿ ಜೈಲಿನಿಂದ ಹೊರಬಂದ ನಂತರ ಶಾಸಕರು ಮತ್ತು ಇತರ ಭಾರತ ಬ್ಲಾಕ್ ನಾಯಕರ ಸಭೆಯ ಕಾರ್ಯಸೂಚಿಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಅವರು ಹೇಳಿದರು. ಶಾಸಕರ ಸಭೆ ಕರೆಯುವ ಹಕ್ಕು ಮುಖ್ಯಮಂತ್ರಿಗೆ ಇದ್ದರೂ ಸಭೆಯ ಅಜೆಂಡಾವನ್ನೂ ಹೇಳಿಲ್ಲ, ಸಭೆಯ ವೇಳೆ ರಾಜೀನಾಮೆ ನೀಡುವಂತೆ ಹೇಳಿದ್ದು ಅಚ್ಚರಿ ತಂದಿದೆ, ಆದರೆ ದುರಾಸೆ ಇರಲಿಲ್ಲ. ಬೇರೆಯವರ ಅಧಿಕಾರದ ಆಸೆಗಾಗಿ, ನಾನು ತಕ್ಷಣ ರಾಜೀನಾಮೆ ನೀಡಿದ್ದೇನೆ, ಆದರೆ ಇದು ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಚಂಪೈ ಸೊರೆನ್ ಹೇಳಿದ್ದಾರೆ.

ಇದನ್ನೂ ಓದಿ: Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

Continue Reading
Advertisement
Viral Video
ವೈರಲ್ ನ್ಯೂಸ್2 hours ago

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್3 hours ago

Viral Video: ಅಬ್ಬಾ.. ಸಾವು ಹೀಗೂ ಬರುತ್ತಾ? ಸ್ನೇಹಿತನೊಂದಿಗೆ ಮಾತಾಡ್ತಾ ನಿಂತಿದ್ದವನ ಮೇಲೆ ದೊಪ್ಪೆಂದು ಬಿದ್ದ ಎಸಿ-ವಿಡಿಯೋ ಇದೆ

Rakesh pal
ಪ್ರಮುಖ ಸುದ್ದಿ3 hours ago

Rakesh Pal: ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ವಿಧಿವಶ

Viral Video
ದೇಶ4 hours ago

Viral News: ಒಂಟಿಯಾಗಿದ್ದಾಗ ಮೈ ಮುಟ್ಟೋಕೆ ಬಂದೋನ ಖಾಸಗಿ ಅಂಗಕ್ಕೆ ಸಟ್ಟುಗದಲ್ಲೇ ಚುಚ್ಚಿದ್ಳು!

Health Tips
ಆರೋಗ್ಯ4 hours ago

Health Tips: ಮಾನಸಿಕ ಒತ್ತಡ ನಿವಾರಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸುಲಭೋಪಾಯ!

Madurai Tour
Latest4 hours ago

Madurai Tour: ಮಧುರೈಗೆ ಹೋದಾಗ ನೋಡಲೇಬೇಕಾದ 6 ರಮಣೀಯ ಸ್ಥಳಗಳು

Vastu Tips
ಧಾರ್ಮಿಕ4 hours ago

Vastu Tips: ಮಲಗುವ ದಿಕ್ಕು ಸತಿಪತಿ ನಡುವಿನ ವಿರಸಕ್ಕೆ ಕಾರಣ ಆಗಬಹುದು!

Kundapura Kannada Habba 2024
ಕರ್ನಾಟಕ4 hours ago

Kundapura Kannada Habba 2024: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸದ್ಯದಲ್ಲೇ ಸಮಿತಿ ರಚನೆ: ಜಯಪ್ರಕಾಶ ಹೆಗ್ಡೆ

Physical Abuse
ಕರ್ನಾಟಕ5 hours ago

Physical Abuse: ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

Champai Soren
ದೇಶ5 hours ago

Champai Soren: ನನ್ನ ಎದುರು ಮೂರು ಆಯ್ಕೆಗಳಿವೆ; ಬಿಜೆಪಿ ಸೇರ್ಪಡೆ ಬಗ್ಗೆ ಚಂಪೈ ಸೊರೆನ್‌ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌