ಸರ್ಕಾರಕ್ಕೆ ಧಮಕಿ ಹಾಕಿದವರ ವಿರುದ್ದ ಬೆಳಗಾವಿಯಲ್ಲಿ ಬಿತ್ತು ಕೇಸ್! - Vistara News

ಬೆಳಗಾವಿ

ಸರ್ಕಾರಕ್ಕೆ ಧಮಕಿ ಹಾಕಿದವರ ವಿರುದ್ದ ಬೆಳಗಾವಿಯಲ್ಲಿ ಬಿತ್ತು ಕೇಸ್!

ಕನ್ನಡ ಮರಾಠಿ ಭಾಷಿಕರಲ್ಲಿ ದ್ವೇಷ ಭಾವನೆ ಉಂಟು ಮಾಡುವ ಸಮಾಜ ಶಾಂತಿ ಕಾಡುವ ಕೆಲಸ ಮಾಡಲಾಗಿದೆ ಎಂದು ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.

VISTARANEWS.COM


on

royal_belgavkar_
ರಾಯಲ್ ಬೆಳಗಾವ್ಕಾರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಜಿಲ್ಲೆಯಲ್ಲಿ royal_belgavkar_ ಎನ್ನುವ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ನಾಡವಿರೋಧಿ ಪೋಸ್ಟ್ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೂನ್‌ 27 ಒಳಗಡೆ ಮರಾಠಿ ನಾಮಫಲಕ ಹಾಕದಿದ್ದರೆ, ಒಂದೂ ಕನ್ನಡ ಬಾವುಟ ಮತ್ತು ಕನ್ನಡ ಬೋರ್ಡ್‌ಗಳನ್ನು ಬೆಳಗಾವಿಯಲ್ಲಿ ಇರಲು ಬಿಡುವುದಿಲ್ಲ. ತಲವಾರ ರೆಡಿ ಮಾಡಿಕೊಳ್ಳಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಮರಾಠಿ ಪುಟವೊಂದು ಬಹಿರಂಗವಾಗಿ ಕನ್ನಡಿಗರಿಗೆ ಕೊಲೆ ಬೆದರಿಕೆ ಹಾಕಿತ್ತು.

ಕನ್ನಡ ಮರಾಠಿ ಭಾಷಿಕರಲ್ಲಿ ದ್ವೇಷ ಭಾವನೆ ಉಂಟು ಮಾಡುವ ಸಮಾಜ ಶಾಂತಿ ಕಾಡುವ ಕೆಲಸ ಮಾಡಲಾಗಿದೆ ಎಂದು ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.

royal_belgavkar_ ಇನಸ್ಟಾಗ್ರಾಮ್ ಅಕೌಂಟ್ ಹೋಲ್ಡರ್ ವಿರುದ್ಧ ಐಪಿಸಿ ಕಲಂ 120, 153,505(1)(B),505(2) ಅಡಿ ಕೇಸ್ ದಾಖಲು ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರಕ್ಕೆ ಧಮಕಿ ಹಾಕಿದ್ದ ಕಿಡಿಗೇಡಿಗಳ ವಿರುದ್ದ ಮುಖ್ಯಪೇದೆ ಬಿ.ಎನ್. ನಾಕುಡೆ ನೀಡಿದ ದೂರಿನ ಮೇರೆಗೆ FIR ದಾಖಲಾಗಿದೆ.

ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ನಾಡದ್ರೋಹಿ ವಿರೋಧಿ ಪೋಸ್ಟ್
ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ನಾಡದ್ರೋಹಿ ವಿರೋಧಿ ಪೋಸ್ಟ್

ಇದನ್ನೂ ಓದಿ| ಬೆಳಗಾವಿಯಲ್ಲಿ ಪಾರ್ಕಿಂಗ್‌ ವಿಚಾರದಲ್ಲಿ‌ ಗುಂಪು ಘರ್ಷಣೆ, ಒಬ್ಬರ ಹತ್ಯೆ, ವಾಹನಗಳಿಗೆ ಬೆಂಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಳಗಾವಿ

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Belagavi News: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11 ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ತಿಳಿಸಿದ್ದಾರೆ.

VISTARANEWS.COM


on

11th Annual Mahotsav of Sri Annapurneswari Temple in Belagavi from 29th May
Koo

ಬೆಳಗಾವಿ: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ (Belagavi News) ತಿಳಿಸಿದ್ದಾರೆ.

ಇದನ್ನೂ ಓದಿ: Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

ಮೇ 29 ರಂದು ಬೆಳಗ್ಗೆ 6 ಗಂಟೆಗೆ ಶ್ರೀ ಅನ್ನಪೂರ್ಣೇಶ್ವರಿ ಸಹಿತ ಪರಿವಾರ ದೇವರಿಗೆ ಕಲಶಾಭಿಷೇಕ, 8 ಕ್ಕೆ ನಾಗದೇವರ ಬಿಂಬ ಪ್ರತಿಷ್ಠಾಪನೆ, ಕಲಶಾಭಿಷೇಕ ಮಹಾಪೂಜೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸನ್ನ ಪೂಜೆ, ಪ್ರಸಾದ, ಸಂಜೆ 5 ರಿಂದ ರಂಗ ಪೂಜೆ ಶ್ರೀ ದೇವಿಯ ಪಲ್ಲಕ್ಕಿ- ಮೆರವಣಿಗೆ, ದೀಪೋತ್ಸವ ನಡೆಯಲಿದೆ.

ಮೇ 30 ರಂದು ಬೆಳಗ್ಗೆ 7 ಕ್ಕೆ ಸಂಪ್ರೋಕ್ಷಣೆ, ಅನ್ನಪೂರ್ಣೇಶ್ವರಿ ಯಾಗ, ಸುಬ್ರಮಣ್ಯ ದೇವರಿಗೆ ಆಶ್ಲೇಷ ಬಲಿ, 8.30 ಕ್ಕೆ ಮಹಾ ಚಂಡಿಕಾ ಯಾಗ, ಸಂಜೆ 6 ಕ್ಕೆ ಕೀರ್ತನಾಕಾರರಿಂದ ಕೀರ್ತನೆ, ವ್ಯಾಖ್ಯಾನ ನಡೆಯಲಿದೆ.

ಇದನ್ನೂ ಓದಿ: New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಮೇ 31 ರಂದು ಬೆಳಗ್ಗೆ 9 ಕ್ಕೆ ದೇವಿಗೆ ವಿಶೇಷ ಅಲಂಕಾರ, ಪೂಜಾರಾಧನೆ, 10 ಕ್ಕೆ ಭಜನಾ ಮಂಡಳಿಯಿಂದ ಭಜನೆ, ಮಧ್ಯಾಹ್ನ 1 ರಿಂದ 3 ಗಂಟೆವರೆಗೆ ಮಹಾಪ್ರಸಾದ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Weather Forecast : ರಾಜ್ಯದ ಹಲವೆಡೆ ಮಳೆಗೆ (Rain News) ಅವಾಂತರಗಳೇ ಸೃಷ್ಟಿಯಾಗಿವೆ. ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತಗೊಂಡರೆ, ಯಾದಗಿರಿಯಲ್ಲಿ ಮನೆ ಚಾವಣಿ ಕುಸಿದಿದೆ. ವಿಜಯನಗರದ ರೈಲ್ವೆ ನಿಲ್ದಾಣದಲ್ಲಿ ಚಾವಣಿಯಿಂದ ನೀರು ಸೋರಿಕೆ ಆಗುತ್ತಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯೊಂದಿಗೆ ಗುಡುಗು ಇರಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ: Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಕಡಲತೀರಕ್ಕೆ ಇಳಿಯದಂತೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಅಲೆಗಳ ಅಬ್ಬರ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಲೈಫ್‌ಗಾರ್ಡ್‌ಗಳು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಘಟ್ಟದ ಮೇಲಿನ ಕೆಲ ತಾಲೂಕುಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಕರಾವಳಿ ತಾಲೂಕುಗಳಲ್ಲಿ ಬಿಸಿಲಿನ ವಾತಾವರಣ ಇತ್ತು.

ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ

ಮಳೆಯಿಂದಾಗಿ ರೈಲ್ವೆ ನಿಲ್ದಾಣದ ಚಾವಣಿಯು ಸೋರಿಕೆ ಆಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿಜಯನಗರದ ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಭಾರಿ ಮಳೆಯಿಂದ ಅವಾಂತರವೇ ಸೃಷ್ಟಿಸಿಯಾಗಿದೆ. ರೈಲು ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ಹೊಸಪೇಟೆ ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಳೆ ನೀರು ಸೋರುತ್ತಿದೆ. ಒಂದು ವರ್ಷದ ಹಿಂದೆ ಕೇಂದ್ರ ಸರ್ಕಾರವು ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿತ್ತು.

ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತ

ರಾಯಚೂರಲ್ಲಿ ಅಬ್ಬರದ ಮಳೆ ಮುಂದುವರಿದಿದ್ದು, ಹಲವು ಗ್ರಾಮಗಳ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಫತ್ತೇಪೂರ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಅಪಾಯದಲ್ಲೇ ಸೇತುವೆ ದಾಟಲು ಜನರು ಮುಂದಾಗುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ನೀರಲ್ಲಿ‌ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಮಳೆಗೆ ಚಾವಣಿ ಕುಸಿತ

ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಇಡೀ ಮನೆಯ ಚಾವಣಿ ಕುಸಿದಿದ್ದು, ಪವಾಡ ಸದೃಶ್ಯ ಎಂಬಂತೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತೆಗ್ಗೆಳ್ಳಿ ಗ್ರಾಮದ ಭೀರಪ್ಪ ಪೂಜಾರಿ ಹಾಗೂ ಸುರೇಶ್ ಕಲ್ಮನಿ ಎಂಬುವರಿಗೆ ಸೇರಿದ ಮನೆಯು ವಿಪರೀತ ಗಾಳಿ ಮಳೆಯಿಂದ ಚಾವಣಿ ಕುಸಿದಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ಸಂಪೂರ್ಣ ಹಾಳಾಗಿವೆ.

ರಾಯಚೂರಲ್ಲಿ ಗಾಳಿಗೆ ಮಳೆಗೆ ಹಾರಿಹೋದ ಜೋಪಡಿಗಳು

ರಾಯಚೂರು ಜಿಲ್ಲೆಯಲ್ಲಿ ತಡರಾತ್ರಿ ಗಾಳಿ ಸಹಿತ ಭಾರಿ ಮಳೆಗೆ ಲಿಂಗಸಗೂರಿನಲ್ಲಿ ಜೋಪಡಿಗಳು ಹಾರಿಹೋಗಿದೆ. ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಜನರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ 50 ಕ್ಕೂ ಹೆಚ್ಚು ಜೋಪಡಿಗಳಿಗೆ ಹಾನಿಯಾಗಿದೆ. ಸೂರುಯಿಲ್ಲದೆ ಬುಡ್ಗ ಜಂಗಮ ಸಮುದಾಯದವರು ಕಂಗಲಾಗಿದ್ದಾರೆ. ಜೋಪಡಿಗಳಿಗೆ ಹಾನಿಯಾದರೂ,ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಬುಡ್ಗ ಜಂಗಮ ಸಮುದಾಯದವರ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡದಲ್ಲಿ ಬಿತ್ತನೆ ಕಾರ್ಯ ಚುರುಕು

ಮುಂಗಾರು ಪೂರ್ವ ಮಳೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಮುಂಗಾರಿನ ಬೆಳೆಗಳನ್ನು ಬಿತ್ತುವ ಕಾರ್ಯ ಆರಂಭವಾಗಿದೆ. ಧಾರವಾಡ ಗ್ರಾಮೀಣ ಹಾಗೂ ಜಿಲ್ಲೆಯಾದ್ಯಂತ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಮುಂಗಾರು ಬೆಳೆಗಳಾದ ಹೆಸರು, ಕಡಲೆ, ಶೇಂಗಾ ಇತ್ಯಾದಿ ಬೆಳೆಗಳನ್ನು ರೈತರು ಬಿತ್ತುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಬಿತ್ತನೆ ಕಾರ್ಯ ಚುರುಕು ಪಡೆದಿದೆ. ಕಳೆದ ವರ್ಷ ಬರ ಹಿನ್ನೆಲೆ ಈ ಮುಂಗಾರು ಪೂರ್ವವೇ ಬಿತ್ತನೆಗೆ ಸಿದ್ಧತೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

Road Accident : ಚಿಕ್ಕಮಗಳೂರಲ್ಲಿ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಪ್ರಾಣ ಕಳೆದುಕೊಂಡರೆ, ಹಿಂಬದಿ ಕುಳಿತಿದ್ದ ಯುವತಿಯ ನಾಲಿಗೆ ಕಟ್‌ ಆಗಿದೆ. ಬೆಳಗಾವಿಯಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗ ವಿದ್ಯುತ್ ತಂತಿ ತಗುಲಿ ರೈತ ದುರ್ಮರಣ ಹೊಂದಿದ್ದಾರೆ.

VISTARANEWS.COM


on

By

Road Accident
Koo

ಚಿಕ್ಕಮಗಳೂರು/ಬೆಳಗಾವಿ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ನಾಲಿಗೆ ಕಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ (Road Accident) ಘಟನೆ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ನಾಲಿಗೆ ಕಳೆದುಕೊಂಡವಳು. ಲಾವಣ್ಯ ಹಾಸನದ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಳು. ಶಿವರಾಜ್-ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

ಇಬ್ಬರು ಬೈಕ್‌ನಲ್ಲಿ ಬರುವಾಗ ಕ್ಯಾಂಟರ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಶಿವರಾಜ್‌ ಸ್ಥಳದಲ್ಲೆ ಮೃತಪಟ್ಟರೆ, ಇತ್ತ ಹಿಂಬದಿ ಕುಳಿತಿದ್ದ ಲಾವಣ್ಯ ಡಿಕ್ಕಿ ರಭಸಕ್ಕೆ ನಾಲಿಗೆಯೇ ಕಟ್‌ ಆಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಗಾಯಾಳು ಲಾವಣ್ಯಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರೈತ ಮಂಜುನಾಥ್ ದಾಸನಕೊಪ್ಪ ಮೃತ ದುರ್ದೈವಿ.

ಗ್ರಾಮದಲ್ಲ ಭಾರಿ ಮಳೆ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದ ರೈತ ಮಂಜುನಾಥ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

ಈಶಾ ಫೌಂಡೇಶ್‌ಗೆ ಬಂದು ಕಲ್ಲು ಕ್ವಾರಿಯಲ್ಲಿ‌ ಬಿದ್ದ ಕಾರು

ಚಿಕ್ಕಬಳ್ಳಾಪುರದ ಈಶಾ ಫೌಂಡೇಶ್‌ನಲ್ಲಿ ಲೇಸರ್ ಲೈಟ್ ನೋಡಲು ಬಂದ ಯುವಕ ಕಾರು ಕಲ್ಲು ಕ್ವಾರಿಯಲ್ಲಿ‌ ಬಿದ್ದ ಘಟನೆ ನಡೆದಿದೆ. ರಾಯಚೂರಿನಿಂದ‌ ಯುವಕರು ಶಿಫ್ಟ್‌ ಕಾರಿನಲ್ಲಿ ಬಂದಿದ್ದರು. ಈ ವೇಳೆ ಟಿಟಿ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಕಲ್ಲು ಕ್ವಾರಿಗೆ ಕಾರು ಹಾರಿದೆ

ಕಾರು ಫುಲ್‌ ಜಖಂಗೊಂಡಿದ್ದು, ಅದೃಷ್ಟವಶಾತ್‌ ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರನ್ನು‌ ಜೆಸಿಬಿ ಮೂಲಕ ರಕ್ಷಣೆ ನಡೆಸಲಾಗಿದೆ. ಘಟನೆಯಲ್ಲಿ ಗಾಯಾಳುಗಳನ್ನು ಚಿಕ್ಕಬಳ್ಳಾಪುರ‌ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರವನಹಳ್ಳಿ ಗ್ರಾಮದ ಈಶಾ ಸದ್ಗುರು ಧ್ಯಾನ ಕೇಂದ್ರದಲ್ಲಿ ಘಟನೆ ನಡೆದಿದೆ.

ಸರ್ಕಾರಿ ಬಸ್ ಹರಿದು ಕುರಿಗಾಹಿ ಸೇರಿ 15ಕ್ಕೂ ಹೆಚ್ಚು ಕುರಿಗಳು ಸಾವು

ಚಿತ್ರದುರ್ಗದಲ್ಲಿ ಸರ್ಕಾರಿ ಬಸ್ ಹರಿದು ಕುರಿಗಾಹಿ ಸೇರಿ 15ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಮತ್ತೊಬ್ಬ ಕುರಿಗಾಹಿಗೆ ಸಣ್ಣ ಪುಟ್ಟ ಗಾಯವಾಗಿದೆ. ಚಿತ್ರದುರ್ಗ ಹೊರವಲಯದ ಈರಜ್ಜನ ಹಟ್ಟಿ ಗೇಟ್ ಬಳಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ 6.30ರ ಸುಮಾರಿಗೆ ಕುರಿ ಹಾದು ಹೋಗುವಾಗ ಘಟನೆ ನಡೆದಿದೆ. ಚಾಲಕನ ಅತಿ ವೇಗ ಚಾಲನೆಯೇ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಗಾಯಗೊಂಡ ಕುರಿಗಾಹಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ತು ಬಿದ್ದ ಕುರಿಗಳನ್ನು ತೆರವು ಮಾಡಲಾಗಿದೆ. ಕುರಿಗಾಹಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident: ಭೀಕರ ರಸ್ತೆ ಅಪಘಾತ; ಕೆಕೆಆರ್‌ಟಿಸಿ ಬಸ್‌ ಅಪ್ಪಳಿಸಿ 3 ಬೈಕ್‌ ಸವಾರರು ಬಲಿ

Road Accident: ಬೈಕ್ ಮತ್ತು ಕೆಕೆಆರ್‌ಟಿಸಿ ಬಸ್ (KKRTC bus) ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೆ ಮರಣ ಹೊಂದಿದ್ದಾರೆ. ಮೃತಪಟ್ಟವರು ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದವರು. ಕಿಣ್ಣಿ ಸಡಕ್ ಗ್ರಾಮದಿಂದ ಕಲಬುರಗಿಗೆ ಬೈಕಿನಲ್ಲಿ ಬರುತ್ತಿದ್ದರು.

VISTARANEWS.COM


on

road accident kalaburagi
Koo

ಕಲಬುರಗಿ: ಕಮಲಾಪುರ ಬಳಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿ ಮೂವರು ಬೈಕ್‌ ಸವಾರರು (bike riders death) ಸಾವಿಗೀಡಾಗಿದ್ದಾರೆ. ಕಲಬುರಗಿ (Kalaburagi news) ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳೂರು ಕ್ರಾಸ್ ಬಳಿ ದುರ್ಘಟನೆ ನಡೆದಿದೆ.

ಬೈಕ್ ಮತ್ತು ಕೆಕೆಆರ್‌ಟಿಸಿ ಬಸ್ (KKRTC bus) ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೆ ಮರಣ ಹೊಂದಿದ್ದಾರೆ. ಮೃತಪಟ್ಟವರು ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದವರು. ಕಿಣ್ಣಿ ಸಡಕ್ ಗ್ರಾಮದಿಂದ ಕಲಬುರಗಿಗೆ ಬೈಕಿನಲ್ಲಿ ಬರುತ್ತಿದ್ದರು. ಕಲಬುರಗಿಯಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಅಪ್ಪಳಿಸಿದೆ. ಮೃತರನ್ನು ಚಂದ್ರಕಾಂತ್(17), ವಿಶಾಲ್ (20), ಸಮೀರ್ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ

ಬೆಳಗಾವಿ: 2 ವರ್ಷದ ಮಗುವೊಂದು ಆಟವಾಡುತ್ತ ಹೋಗಿ ನೀರಿನ ಸಂಪ್‌ಗೆ (Water Sump) ಬಿದ್ದು ಸಾವಿಗೀಡಾದ ದುರ್ಘಟನೆ (Child Death) ಬೆಳಗಾವಿಯ (Belagavi news) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಸಾಯೀಶಾ ಸಂದೀಪ್ ಬಡವನಾಚೆ(2) ಮೃತಪಟ್ಟ ಮಗು. ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು. ಸಂಪ್ ಓಪನ್ ಮಾಡುತ್ತಿದ್ದಂತೆ ಅಲ್ಲಿ ಬಿದ್ದಿದ್ದ ಮಗು ಸಾಯೀಶಾ ಕಂಡುಬಂದಿದ್ದಳು.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಪೋಷಕರು ಕರೆದೊಯ್ದರಾದರೂ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯರು ಮಾಹಿತಿ ನೀಡಿದರು. ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರ ಬಿದ್ದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರದಿಂದಾಗಿ, ನೀರು ತರಲು ಹೋದ ಮಹಿಳೆ ಮೇಲೆ ಮರ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಶ್ವೇತಾ ರಾಠೋಡ (21) ಮೃತ ಮಹಿಳೆ. ಬಿರುಗಾಳಿ ಸಹಿತ ಮಳೆ ಬರುತ್ತಿದ್ದಾಗಲೇ ನೀರು ತರಲು ಹೋದ ಶ್ವೇತಾ ರಾಠೋಡ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಶ್ವೇತಾರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ನಡೆದಿದೆ. ಬಾಲಕಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ. ಜಮೀನಿನ ಶೀಟ್‌ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರ ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Continue Reading
Advertisement
Vijayapura news
ಪ್ರಮುಖ ಸುದ್ದಿ4 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ5 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ5 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ6 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ6 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ6 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ6 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ6 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ6 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ6 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ11 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌