karnataka-election: two shades of police empolyees, one is suspended, another honoured Karnataka Election : ಉದ್ಧಟ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌, ತಾಯಿ ಮೃತಪಟ್ಟರೂ ಕರ್ತವ್ಯಕ್ಕೆ ಬಂದ ಕಾನ್‌ಸ್ಟೆಬಲ್‌ಗೆ ಗೌರವ - Vistara News

ಕರ್ನಾಟಕ

Karnataka Election : ಉದ್ಧಟ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌, ತಾಯಿ ಮೃತಪಟ್ಟರೂ ಕರ್ತವ್ಯಕ್ಕೆ ಬಂದ ಕಾನ್‌ಸ್ಟೆಬಲ್‌ಗೆ ಗೌರವ

Police suspended: ಇಬ್ಬರೂ ಪೊಲೀಸ್‌ ಇಲಾಖೆಗೆ ಸೇರಿದವರೇ. ಮತದಾನಕ್ಕೆ ಸಂಬಂಧಿಸಿದ ಕರ್ತವ್ಯದಲ್ಲಿ ಒಬ್ಬರು ಸಸ್ಪೆಂಡ್‌ ಆಗಿದ್ದಾರೆ. ಇನ್ನೊಬ್ಬರು ಗೌರವ ಪಡೆದಿದ್ದಾರೆ. ಏನಿದು ಕಥೆ?

VISTARANEWS.COM


on

Police inspector suspended, constable honoured
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆಗೆ (Karnataka Election 2023) ಸಂಬಂಧಿಸಿದ ಮಸ್ಟರಿಂಗ್‌ ಕೇಂದ್ರದಲ್ಲಿ ಸಿಬ್ಬಂದಿಗಳಿಗೆ ಮತಗಟ್ಟೆ ತರಬೇತಿ ನೀಡುವ ವೇಳೆ ಉದ್ಧಟತನ ತೋರಿಸಿದ್ದಕ್ಕಾಗಿ ಮಹಿಳಾ ಇನ್ಸ್‌ಪೆಕ್ಟರ್‌ ಒಬ್ಬರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಇದು ಬೆಂಗಳೂರಿನಲ್ಲಿ ನಡೆದ ಘಟನೆ. ಅತ್ತ ಗದಗದಲ್ಲಿ ತಾಯಿ ಮೃತಪಟ್ಟರೂ ಕರ್ತವ್ಯನಿಷ್ಠೆ ಮೆರೆದ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರನ್ನು ಗೌರವಿಸಲಾಯಿತು.

ಬೆಂಗಳೂರಿನ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಘಟನೆ ನಡೆದಿತ್ತು. ಇಲ್ಲಿ ಇನ್ಸ್‌ಪೆಕ್ಟರ್‌ ಭವ್ಯ ಅವರನ್ನು ಅವರನ್ನು ತರಬೇತಿಗೆ ನಿಯೋಜನೆ ಮಾಡಲಾಗಿತ್ತು. ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿಯನ್ನು ಅಲ್ಲಿ ನೀಡಲಾಗುತ್ತಿತ್ತು. ಈ ವೇಳೆ ಅವರು ತರಬೇತಿಗೆ ಹಾಜರಾಗದೆ ಪೇಪರ್ ಓದುತ್ತಾ ಕುಳಿತಿದ್ದರು!

ಪತ್ರಿಕೆ ಓದುತ್ತಾ ಕುಳಿತಿದ್ದ ಇನ್ಸ್‌ಪೆಕ್ಟರ್‌ ಭವ್ಯ ಅವರನ್ನು ನೋಡಲ್ ಅಧಿಕಾರಿ ಹಾಗು ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಅವರು ಉದ್ಧಟತನ ಮೆರೆದರು ಎನ್ನಲಾಗಿದೆ.

ʻʻನಾನು ಮಾಡುತ್ತಿರುವುದು ಸರಿ , ತರಬೇತಿ ಕೊಡುವುದು ನಿಮ್ಮ ಕೆಲಸ ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ. ನೀವ್ ಹೇಳಿದಂತೆ ಕೇಳೊದಕ್ಕೆ ನಾನು ನಿಮ್ಮ ಡಿಪಾರ್ಟ್ಮೆಂಟ್ ಅಲ್ಲ. ಈ ತರಬೇತಿ ಉಪಯೋಗಕ್ಕಿಲ್ಲʼʼ ಎಂದು ಹೇಳುವ ಮೂಲಕ ಭವ್ಯ ಅವರು ಉದ್ಧಟತನ ಮೆರೆದಿದ್ದಾರೆ ಎನ್ನಲಾಗಿದೆ.

ʻʻನನ್ನ ಬಗ್ಗೆ ಯಾರಿಗೆ ಬೇಕಾದರೂ ದೂರು ನೀಡಿ. ಏನು ಬೇಕಾದರೂ ಮಾಡಿಕೊಳ್ಳಿ. ನಾನು ಇರುವುದೇ ಹೀಗೆʼʼ ಎಂದು ಭವ್ಯ ಹೇಳಿದಾಗ ಅಧಿಕಾರಿಗಳು ಬಿಬಿಎಂಪಿ ಆಯುಕ್ತರಿಗೆ ವಿಷಯ ತಿಳಿಸಿದ್ದರು.

ಬಿಬಿಎಂಪಿ ಆಯುಕ್ತರು ಪ್ರಜಾಪ್ರಾತಿನಿಧ್ಯ ಕಾಯ್ದೆಯಡಿ ಇನ್ಸ್‌ಪೆಕ್ಟರ್‌ ಭವ್ಯ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲು ಸೂಚಿಸಿದರು. ಜಿಲ್ಲಾ ಚುನಾವಣಾಧಿಕಾರಿಗಳ ಮೂಲಕ ಇವರು ಅಮಾನತು ಮಾಡಲಾಗಿದೆ.

ತಾಯಿಯನ್ನು ಕಳೆದುಕೊಂಡರೂ ಕರ್ತವ್ಯಪ್ರಜ್ಞೆ ಮೆರೆದ ಪೊಲೀಸ್‌

ಗದಗ: ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಹೆತ್ತ ತಾಯಿಯನ್ನೇ ಕಳೆದುಕೊಂಡರೂ ಚುನಾವಣಾ ಕೆಲಸಕ್ಕೆ ಹಾಜರಾಗುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ಗದಗ ಬೆಟಗೇರಿ ಬಡವಾಣೆ ಠಾಣೆಯ ಕಾನ್ಸ್‌ಟೇಬಲ್‌ ಆಗಿರುವ ಅಶೋಕ್ ಗದಗ ಅವರೇ ಮಾತೃ ವಿಯೋಗದ ನೋವಿನ ನಡುವೆಯೂ ನಡುವೆಯೂ ಕರ್ತವ್ಯಕ್ಕೆ ಹಾಜರಾದರು.

ಅಶೋಕ್‌ ಗದಗ ಅವರ ತಾಯಿ ಶಂಕ್ರವ್ವ ಸತ್ಯಪ್ಪ ಗದಗ (78) ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಸಾವನ್ನಪ್ಪಿದ್ದರು. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದರು.

ತಾಯಿ ಅಗಲಿದ ದುಃಖದಲ್ಲಿಯೂ ಕರ್ತವ್ಯಕ್ಕೆ ಹಾಜರಾದರು. ಈ ರೀತಿ ಕರ್ತವ್ಯ ಪ್ರಜ್ಞೆ ಮೆರೆದ ಅಶೋಕ್‌ ಅವರನ್ನು ಪೊಲೀಸ್ ಇಲಾಖೆಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಗದಗ ನಗರದ ಜೆಟಿ ಕಾಲೇಜ್ ನಲ್ಲಿ ನಡೆದ ಮಸ್ಟರಿಂಗ್ ಕಾರ್ಯದ ಕರ್ತವ್ಯವನ್ನು ಅವರು ನೆರವೇರಿಸಿದರು. ಅಶೋಕ್‌ ಅವರು ಮೂಲತಃ ಗದಗ ತಾಲೂಕಿನ ಹಾತಲಗೇರಿ ಗ್ರಾಮದವರು.

ಆಳಂದದಲ್ಲಿ ಮಸ್ಟರಿಂಗ್‌ ಕೇಂದ್ರದಲ್ಲಿ ಮಳೆ ಅನಾಹುತ

ಕಲಬುರಗಿ: ಜಿಲ್ಲೆಯ ಆಳಂದದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರಿ ಸಮಸ್ಯೆಯಾಗಿದೆ. ಇಲ್ಲಿನ ವಿಧಾನಸಭಾ ಚುನಾವಣಾ ಮಸ್ಟರಿಂಗ್‌ ಕೇಂದ್ರದಲ್ಲಿದ್ದ ಮರವೊಂದು ಉರುಳಿ ಬಿದ್ದ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳಿಗೆ ಇವಿಎಂ ಮೆಷಿನ್‌ ಹಂಚಿಕೆ ಮತ್ತಿತರ ಕಾರ್ಯಗಳಿಗಾಗಿ ಹಾಕಲಾಗಿದ್ದ ಟೆಂಟ್‌ ನೆಲಕ್ಕೆ ಉರುಳಿದೆ.

ಆಳಂದ ತಾಲೂಕಿನ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿರುವ ಮತದಾನ ಕೇಂದ್ರದಲ್ಲಿರುವ (Election center) ಮರ ಉರುಳಿದೆ. ಮತದಾನ ಕೇಂದ್ರದಲ್ಲಿರುವ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿದ್ದು, ಮತದಾನ ಕೇಂದ್ರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ನಡುವೆ, ಮಳೆಯಿಂದಾಗಿ ಮತದಾನ ಕೇಂದ್ರದಲ್ಲಿನ ವಿದ್ಯುತ್ ಸಂಪರ್ಕ ಕಡಿತವಾಗಿ ಅಧಿಕಾರಿಗಳು ಪರದಾಡಬೇಕಾಯಿತು.

ಇದನ್ನೂ ಓದಿ: Karnataka Election 2023: ಗದಗ ಮಸ್ಟರಿಂಗ್‌ ಸೆಂಟರ್‌ವೊಳಗೆ ಹಾವು ಪ್ರತ್ಯಕ್ಷ; ಯಲಹಂಕದಲ್ಲಿ ತಲೆ ತಿರುಗಿ ಬಿದ್ದ ಸಿಬ್ಬಂದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Vijayanagara News: ರಾಜ್ಯ ವಿಧಾನ ಪರಿಷತ್ತಿನ 03 ಪದವೀಧರರ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆ ಘೋಷಣೆಯಾಗಿದ್ದು, ಮೇ 9ರಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಈ ಚುನಾವಣೆಯ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳನ್ನು ಪಾಲನೆ ಮಾಡಬೇಕು ಎಂದು ವಿಜಯನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ತಿಳಿಸಿದ್ದಾರೆ.

VISTARANEWS.COM


on

Meeting with representatives of various political parties about MLC election in Hosapete
Koo

ಹೊಸಪೇಟೆ: ರಾಜ್ಯ ವಿಧಾನ ಪರಿಷತ್ತಿನ 03 ಪದವೀಧರರ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆ ಘೋಷಣೆಯಾಗಿದ್ದು, ಮೇ 9ರಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಈ ಚುನಾವಣೆಯ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಸೂಚನೆ (Vijayanagara News) ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿನ ಕೇಸ್ವಾನ್ ಹಾಲ್‌ನಲ್ಲಿ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗವು ರಾಜ್ಯದ ವಿಧಾನ ಪರಿಷತ್‌ಗೆ ಅವಧಿ ಮುಕ್ತಾಯವಾಗುವ ಮೂರು ಶಿಕ್ಷಕರ ಕ್ಷೇತ್ರಗಳ ಜತೆಗೆ ಮೂರು ಪದವೀಧರರ ಕ್ಷೇತ್ರಗಳಿಗೆ ದೈವಾರ್ಷಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಈ ಸಂಬಂಧಿತ ಮೇ 9ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ನಾಮಪತ್ರಗಳ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಇದನ್ನೂ ಓದಿ: Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

ನಾಮಪತ್ರಗಳನ್ನು ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಸದರಿ ಚುನಾವಣೆಯ ಪ್ರಕ್ರಿಯೆಯು ಜೂನ್ 12ರೊಳಗೆ ಮುಕ್ತಯ ಆಗಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಲೋಕಸಭೆಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಈಗಾಗಲೇ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳು ವಿಧಾನ ಪರಿಷತ್ತಿನ ಚುನಾವಣೆಗಳಿಗೆ ಅನ್ವಯಿಸುತ್ತವೆ ಎಂದು ತಿಳಿಸಿದರು.

ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ. ಈ ಚುನಾವಣೆಯ ಸಂಬಂಧ ಭಾರತ ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ನಿರ್ದೇಶನಗಳನ್ನು ಪಾಲನೆ ಮಾಡಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಡಿಸಿ ತಿಳಿಸಿದರು.

ಮೇ 6 ಕೊನೆಯ ದಿನ

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಲು ಇಚ್ಚಿಸುವ ಅರ್ಹರು ತಮ್ಮ ಹೆಸರನ್ನು ಸದರಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮೇ 6 ಕೊನೆಯ ದಿನವಾಗಿರುತ್ತದೆ. ಅರ್ಹರು ಆಯಾ ತಾಲೂಕು ಕಚೇರಿಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ., ಚುನಾವಣಾ ಶಾಖೆಯ ಮನೋಜ ಲಾಡೆ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Continue Reading

ರಾಜಕೀಯ

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬರಗಾಲ ಗ್ಯಾರಂಟಿ, ಅಲ್ಲಲ್ಲಿ ಬಾಂಬ್ ಸ್ಫೋಟ ಗ್ಯಾರಂಟಿ, ಜಾತಿ ಜಾತಿ ಜಗಳ ಗ್ಯಾರಂಟಿ, ಹಿಂದೂಗಳ ಹತ್ಯೆ ಗ್ಯಾರಂಟಿ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದರು. ಕಲಬುರಗಿಯಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪ್ರಚಾರ ಭಾಷಣ ಮಾಡಿದರು.

VISTARANEWS.COM


on

Election campaign meeting for Kalaburgi Lok Sabha constituency BJP candidate Umesh Jadav at kalaburagi
Koo

ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬರಗಾಲ ಗ್ಯಾರಂಟಿ, ಅಲ್ಲಲ್ಲಿ ಬಾಂಬ್ ಸ್ಫೋಟ ಗ್ಯಾರಂಟಿ, ಜಾತಿ ಜಾತಿ ಜಗಳ ಗ್ಯಾರಂಟಿ, ಹಿಂದೂಗಳ ಹತ್ಯೆ ಗ್ಯಾರಂಟಿ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (Lok Sabha Election 2024) ಎಚ್ಚರಿಸಿದರು.

ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ನಮ್ಮ ಹಣ ನಮಗೆ ನೀಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಭ್ರಷ್ಟಾಚಾರ ಇಲ್ಲದೆ ಮೋದಿ ಗ್ಯಾರಂಟಿಯನ್ನು ಜನರ ಮನೆ ಬಾಗಿಲಿಗೆ ಯಾವುದೇ ದಲ್ಲಾಳಿಗಳ ನೆರವಿಲ್ಲದೆ ಮುಟ್ಟಿಸುತ್ತಿದ್ದಾರೆ. ಉಜ್ವಲ ಯೋಜನೆ ಅಡಿ 10 ಕೋಟಿ ಜನರಿಗೆ ನೆರವು ದೊರೆತಿದೆ. ಮೋದಿ ಅವರ ಗ್ಯಾರಂಟಿ ಸಣ್ಣ ಸಣ್ಣ ಊರುಗಳಿಗೂ ಮುಟ್ಟಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ನ ಜನವಿರೋಧಿ ಕ್ರಮಗಳನ್ನು ಬಿಜೆಪಿಯ ಕಾರ್ಯಕರ್ತರು ಮನೆ ಮನೆಗೂ ಮುಟ್ಟಿಸುವ ದೊಡ್ಡ ಕೆಲಸವನ್ನು ಮಾಡಬೇಕು ಎಂದು ಮನವಿ ಮಾಡಿದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಜೆಡಿಎಸ್ ಮಾಜಿ ಅಧ್ಯಕ್ಷ ಅವಿನಾಶ್ ಕುಲಕರ್ಣಿ, ಬಿಜೆಪಿ ನಗರ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Jai Shri Ram Slogan: ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕೈ ಮುಖಂಡ ವಿವಾದಿತ ಹೇಳಿಕೆ ನೀಡಿದ್ದಾರೆ.

VISTARANEWS.COM


on

Jai Shri Ram Slogan
Koo

ರಾಯಚೂರು: ಜೈ ಶ್ರೀರಾಮ್ (Jai Shri Ram Slogan) ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕಾಂಗ್ರೆಸ್ ಮುಖಂಡರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕೈ ಮುಖಂಡನ ಹೇಳಿಕೆಗೆ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗುತ್ತಿದ್ದು, ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಗರಂ ಆಗಿದ್ದಾರೆ. ನಡುರಸ್ತೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ಕೈ ಮುಖಂಡನ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Prajwal Revanna Case Wherever Prajwal escapes we will pick him up says CM Siddaramaiah

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಪ್ರಮುಖ ಆರೋಪಿ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ದುಬೈ ಅಲ್ಲ, ಎಲ್ಲಿಯಾದರೂ ಎಸ್ಕೇಪ್‌ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ

ಪ್ರಜ್ವಲ್‌ ಅವರ ತಂದೆ ಎಚ್.ಡಿ. ರೇವಣ್ಣ ಅವರು ಲಾಯರ್ ಹತ್ತಿರ ಯಾಕೆ ಹೋಗಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಗೆ ಲಾಯರ್ ಅನ್ನು ಕರೆಸಿಕೊಂಡು ಏಕೆ ಚರ್ಚೆ ಮಾಡಿದ್ದಾರೆ? ಎಚ್‌ಡಿಕೆ ಒಮ್ಮೆ ಹೇಳುತ್ತಾರೆ, ರೇವಣ್ಣ, ನಾನು ಬೇರೆ ಬೇರೆ ಆಗಿದ್ದೇವೆ ಅಂತ. ದೇವೇಗೌಡರಿಗೂ, ನಮಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ ಅಂತ ಹೇಳುತ್ತಾರೆ. ಇನ್ನೊಂದು ಕಡೆ ಇದೆಲ್ಲವನ್ನೂ ಮಾಡುತ್ತಾರೆ. ಚುನಾವಣೆ ಪ್ರಚಾರದಲ್ಲಿ ಪ್ರಜ್ವಲ್ ಬೇರೆ ಅಲ್ಲ, ನನ್ನ ಮಗ ಬೇರೆ ಅಲ್ಲ ಎಂದು ಹೇಳಿದ್ದು ಕುಮಾರಸ್ವಾಂಇ ಅಲ್ಲವೇ? ಇದರ ಅರ್ಥ ಏನು? (What is it mean?) ಅವರು ಮಾಡೋದೆಲ್ಲವನ್ನೂ ಒಟ್ಟಿಗೆ ಮಾಡೋದು. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

Continue Reading

ಬಳ್ಳಾರಿ

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಜಿಲ್ಲೆಯ ಕುಡುತಿನಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಮತಯಾಚನೆ ನಡೆಸಿದರು. ಮನೆ ಮಗನಾಗಿ, ಸಹೋದರನಾಗಿ ಈವರೆಗೆ ಕೆಲಸ ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಿ ಗೆಲ್ಲಿಸುವಂತೆ ಮತದಾರರದಲ್ಲಿ ಮನವಿ ಮಾಡಿದರು.

VISTARANEWS.COM


on

Ballari Lok Sabha constituency Congress candidate E Tukaram election campaign in Kuduthini
Koo

ಕುಡುತಿನಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಜಿಲ್ಲೆಯ ಕುಡುತಿನಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಮತಯಾಚನೆ (Lok Sabha Election 2024) ನಡೆಸಿದರು. ಮನೆ ಮಗನಾಗಿ, ಸಹೋದರನಾಗಿ ಈವರೆಗೆ ಕೆಲಸ ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಪಟ್ಟಣದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂದು ಮತಯಾಚನೆ ನಡೆಸಿ, ಮಾತನಾಡಿದ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಕುಡುತಿನಿ ಭಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮತದಾರರಲ್ಲಿ ಅಭ್ಯರ್ಥಿ ಈ. ತುಕಾರಾಂ ಮನವಿ ಮಾಡಿದರು.

ಇದನ್ನೂ ಓದಿ: T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಆಂಜನೇಯಲು , ಕುಡುತಿನಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Health Tips Kannada
ಆರೋಗ್ಯ32 seconds ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ4 mins ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Election campaign meeting for Kalaburgi Lok Sabha constituency BJP candidate Umesh Jadav at kalaburagi
ರಾಜಕೀಯ7 mins ago

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್

Jai Shri Ram Slogan
ಕರ್ನಾಟಕ31 mins ago

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Ballari Lok Sabha constituency Congress candidate E Tukaram election campaign in Kuduthini
ಬಳ್ಳಾರಿ34 mins ago

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

IPL 2024
ಕ್ರೀಡೆ35 mins ago

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

Darshanam Mogulaiah
ದೇಶ41 mins ago

Darshanam Mogulaiah: 2 ವರ್ಷದ ಹಿಂದೆ ಪದ್ಮಶ್ರೀ ಪಡೆದ ಸಾಧಕ ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕ!

Prajwal Revanna Case Who is the kingpin of Prajwal video pen drive HDK team is on its way
ಕ್ರೈಂ45 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

KL Rahul
ಕ್ರೀಡೆ56 mins ago

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

Physical Abuse
ಕರ್ನಾಟಕ1 hour ago

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಅರೆಸ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ6 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ17 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌