SN Narayanaswamy wins in Bangarpet karnataka election results 2023 Bangarapet Election Results: ಬಂಗಾರಪೇಟೆಯಲ್ಲಿ ಕಾಂಗ್ರೆಸ್‌ನ ಎಸ್.ಎನ್.ನಾರಾಯಣಸ್ವಾಮಿಗೆ ಜಯ - Vistara News

ಕರ್ನಾಟಕ

Bangarapet Election Results: ಬಂಗಾರಪೇಟೆಯಲ್ಲಿ ಕಾಂಗ್ರೆಸ್‌ನ ಎಸ್.ಎನ್.ನಾರಾಯಣಸ್ವಾಮಿಗೆ ಜಯ

Karnataka Election 2023: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್.ಎನ್.ನಾರಾಯಣಸ್ವಾಮಿ ಪ್ರತಿಸ್ಪರ್ಧಿ ಜೆಡಿಎಸ್‌ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ವಿರುದ್ಧ 21, 571 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

VISTARANEWS.COM

on

Bangarapet Election Results SN Narayanaswamy wins
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ವಿಧಾನಸಭಾ ಚುನಾವಣೆ (Bangarapet Election Results) ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎನ್. ನಾರಾಯಣಸ್ವಾಮಿ ಗೆಲುವು ಸಾಧಿಸಿದ್ದಾರೆ. ಇವರು 4711 ಮತಗಳ ಅಂತರದಿಂದ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್ ಬಾಬು ವಿರುದ್ಧ ಜಯ ಗಳಿಸಿದ್ದಾರೆ.

ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಎಸ್.ಎನ್. ನಾರಾಯಣಸ್ವಾಮಿ 77,292 ಮತಗಳನ್ನು ಪಡೆದಿದ್ದು, ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್ ಬಾಬು 72,581 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ 8,972 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ | Kolar Gold Field Election Results: ಕೆಜಿಎಫ್‌ನಲ್ಲಿ ಕಾಂಗ್ರೆಸ್‌ನ ರೂಪಕಲಾಗೆ ಭರ್ಜರಿ ಗೆಲುವು

ಕ್ಷೇತ್ರದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್.ಎನ್.ನಾರಾಯಣಸ್ವಾಮಿ 1,55,727 ಮತಗಳನ್ನು ಪಡೆದು ಸಮೀಪದ ಪ್ರತಿಸ್ಪರ್ಧಿ ವಿರುದ್ಧ 21, 571 ಮತಗಳ ಅಂತರದಲ್ಲಿ ಜಯಶೀಲರಾಗಿದ್ದರು. ಜೆಡಿಎಸ್‌ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು 49,300, ಬಿಜೆಪಿ ಅಭ್ಯರ್ಥಿ ವೆಂಕಟಮುನಿಯಪ್ಪ ಬಿ. ಪಿ. 33,555 ಮತಗಳನ್ನು ಪಡೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

Dog Attack : ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಸಿಕ್ಕ ಸಿಕ್ಕವರ ಮೇಲೆ ಎಗರಿ ದಾಳಿ ಮಾಡುತ್ತಿದ್ದ ಬೀದಿ ನಾಯಿಯನ್ನು ಹಿಡಿದು ಗ್ರಾಮಸ್ಥರು ಕೊಂದು ಹಾಕಿದ್ದಾರೆ.

VISTARANEWS.COM

on

By

Dog Attack in raichur
Koo

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ (Dog Attack) ನಡೆಸಿ ಅಟ್ಟಾಡಿಸಿ ಕಿತ್ತು ತಿಂದಿತ್ತು. ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಇದೀಗ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ರಾಯಚೂರಿನ ಕೊರವಿಹಾಳ ಗ್ರಾಮದಲ್ಲಿ ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಲಾವಣ್ಯ(4) ನಾಯಿ ಕಡಿತಕ್ಕೆ ಬಲಿಯಾದವಳು.

ಕೊರವಿಹಾಳ ಗ್ರಾಮದ ಕೀರಲಿಂಗ ಎಂಬುವವರ ಮಗಳು ಲಾವಣ್ಯ ಕಳೆದ ಶನಿವಾರ ಮೃತಪಟ್ಟಿದ್ದು, ಘಟನೆಯು ತಡವಾಗಿ ಬೆಳಕಿಗೆ ಬಂದಿದೆ. ಲಾವಣ್ಯ ಸೇರಿ ನಾಲ್ಕೈದು ಮಕ್ಕಳು ಮನೆ ಮುಂದೆ ಆಟವಾಡುತ್ತಿದ್ದರು. ಈ ವೇಳೆ ಬೀದಿ ನಾಯಿಯೊಂದು ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ದಾಳಿ ಸಮಯದಲ್ಲಿ ಲಾವಣ್ಯಳ ಕತ್ತಿನ ಹಿಂಭಾಗಕ್ಕೆ ದಾಳಿ ಮಾಡಿದ ನಾಯಿ ಕ್ರೂರವಾಗಿ ಕಚ್ಚಿತ್ತು.

ಕಳೆದ 15 ದಿನಗಳ ಹಿಂದೆ ನಡೆದ ಈ ದಾಳಿಯಲ್ಲಿ ಕೊರವಿಹಾಳ ಗ್ರಾಮದ ಏಳು ಮಕ್ಕಳಿಗೆ ನಾಯಿ ಕಚ್ಚಿತ್ತು. ಇತ್ತ ನಾಯಿ ದಾಳಿಯಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಲಾವಣ್ಯಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾವಣ್ಯ ಕಳೆದ ಶನಿವಾರ ಏಕಾಏಕಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

ರೊಚ್ಚಿಗೆದ್ದು ನಾಯಿಯನ್ನೆ ಕೊಂದರು

ಒಬ್ಬಂಟಿಯಾಗಿ ಓಡಾಡುವರನ್ನು ಕಂಡರೆ ಸಾಕು ರೊಚ್ಚಿಗೆದ್ದ ಬೀದಿ ನಾಯಿಗಳು (Street Dog Attack ) ಅಟ್ಟಾಡಿಸಿಕೊಂಡು ಹೋಗಿ ದಾಳಿ ಮಾಡುತ್ತಿರುವುದು ಕಂಡು ಬಂದಿತ್ತು. ವಯೋವೃದ್ಧರು ಹಾಗೂ ಶಾಲಾ ಮಕ್ಕಳು ಒಬ್ಬೊಬ್ಬರೇ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿತ್ತು. ಸಿಕ್ಕ ಸಿಕ್ಕವರ ಮೇಲೆ ಎರಗಿ ಕಚ್ಚುತ್ತಿದ್ದ ನಾಯಿಯಿಂದ ಇತರೆ ಮಕ್ಕಳ ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಈ ಎಲ್ಲ ಘಟನೆ ಬಳಿಕ ರೊಚ್ಚಿ ಗೆದ್ದ ಗ್ರಾಮಸ್ಥರು ದಾಳಿ ಮಾಡಿದ್ದ ಬೀದಿ ನಾಯಿಯನ್ನು ಹಿಡಿದು ಕೊಂದು ಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕೋಡಿ

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Sallekhana: ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

VISTARANEWS.COM

on

jain monk samadhi sena chikkodi sallekhana
Koo

ಚಿಕ್ಕೋಡಿ: ಜೈನಮುನಿಗಳಾದ (Jain Muni) ಬೆಳಗಾವಿ ಜಿಲ್ಲೆ ಚಿಕ್ಕೋಡಿ (Chikkodi news) ತಾಲೂಕಿನ ಕೋಥಳಿಯ ಸಮಾಧಿಸೇನ ಮುನಿಗಳು (Samadhisena Muni) ಜೈನ ಸಂಪ್ರದಾಯದಂತೆ (Jain tradition) ಯಮ ಸಲ್ಲೇಖನ ವ್ರತ (Sallekhana Vrata) ಸ್ವೀಕರಿಸಿ ಕೀರ್ತಿಶೇಷರಾಗಿದ್ದಾರೆ. ಇವರು ಕೋಥಳಿಯ ದೇಶಭೂಷಣ ಮನಿಗಳ ಜೈನ ಆಶ್ರಮದಲ್ಲಿ ಕಳೆದ ನಾಲ್ಕು ದಿನಗಳಿಂದ ಸಲ್ಲೇಖನ ವ್ರತ ನಿರತರಾಗಿದ್ದರು. ಸೋಮವಾರ ರಾತ್ರಿ ಅವರು ಜಿನೈಕ್ಯರಾಗಿದ್ದಾರೆ.

ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

ಗದಗ ಜಿಲ್ಲೆಯ ಗಜೇಂದ್ರ ಗಢದವರಾದ ಸಮಾಧಿಸೇನ ಮುನಿಗಳು ಗುಲಾಬಭೂಷಣ ಮುನಿಯವರ ಶಿಷ್ಯರಾಗಿದ್ದರು. ಸಂಸಾರಿಯಾಗಿದ್ದ ಅವರು 2004ರಲ್ಲಿ ಮನೆ ತೊರೆದು ತ್ಯಾಗಿಯಾಗಿ ದೀಕ್ಷೆ ಪಡೆದು ಜೈನ ಧರ್ಮದ ಪ್ರಸಾರ ಕಾರ್ಯದಲ್ಲಿ ತೊಡಗಿದ್ದರು. 2014ರಲ್ಲಿ ಮಹಾರಾಷ್ಟ್ರದ ಚಿಪರಿ ಆಶ್ರಮದ ಧರ್ಮಸೇನಾ ಮುನಿಗಳಿಂದ ಕ್ಷುಲ್ಲಕ ದೀಕ್ಷೆ ಪಡೆದಿದ್ದರು. 2021ರಲ್ಲಿ ಗುಲಾಬಭೂಷಣ ಮುನಿಗಳಿಂದ ಮುನಿ ದೀಕ್ಷೆ ಪಡೆದಿದ್ದ ರು. ಕೋಥಳಿಯ ಆಶ್ರಮದಲ್ಲಿ ದೇಶಭೂಷಣ ಮುನಿಗಳು ಸೇರಿ ಇದುವರೆಗೆ 40ಕ್ಕೂ ಅಧಿಕ ಜೈನಮುನಿಗಳು ಯಮ ಸಲ್ಲೇಖನ ವ್ರತ ಕೈಗೊಂಡು ದೇಹ ತ್ಯಾಗ ಮಾಡಿದ್ದಾರೆ.

ಸಲ್ಲೇಖನ ಎಂದರೇನು?

ಸಲ್ಲೇಖನ ಜೈನ ಧರ್ಮೀಯರ ಒಂದು ಕಠಿಣ ವ್ರತ. ಜೈನ ಧರ್ಮದ ಅನುಸಾರವಾಗಿ ಮೋಕ್ಷ ಅಥವಾ ಸದ್ಗತಿಗಾಗಿ ಧರ್ಮಪೂರ್ವಕವಾಗಿ ಆಹಾರಾದಿಗಳನ್ನು ತ್ಯಜಿಸಿ ಶರೀರ ತ್ಯಾಗ ಮಾಡುವ ವಿಧಿಗೆ ಸಲ್ಲೇಖನ ವ್ರತ ಎನ್ನಲಾಗುತ್ತದೆ. ಇದಕ್ಕೆ ಸಮಾಧಿ ಮರಣ ಎಂಬ ಹೆಸರೂ ಇದೆ. ಸಲ್ಲೇಖನ ವ್ರತವು ಮುನಿಗೆ ಶ್ರೇಷ್ಠವಾದುದು ಹಾಗೂ ಗೃಹಸ್ಥರಿಗೆ ಸಂಪೂರ್ಣ ಐಚ್ಛಿಕ ಕ್ರಿಯೆಯಾಗಿದೆ.

ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

ಬೆಂಗಳೂರು ಮೂಲದ ಉದ್ಯಮಿ ಮನೀಶ್‌ ಎಂಬುವವರ ಪತ್ನಿ ಸ್ವೀಟಿ (30) ಹಾಗೂ 11 ವರ್ಷದ ಮಗ ಹೃಧನ್ ಇತ್ತೀಚೆಗೆ ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ತಾಯಿ-ಮಗನ ದೀಕ್ಷಾ ಸಮಾರಂಭವು ಗುಜರಾತ್‌ನ ಸೂರತ್‌ನಲ್ಲಿ ಜನವರಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆದಿದೆ. ಇವರಿಬ್ಬರೂ ಈಗ ಸೂರತ್‌ನಲ್ಲಿ ನೆಲೆಸಿದ್ದಾರೆ.

ಜೈನ ದೀಕ್ಷೆಯ ನಂತರ ತಾಯಿ ಸ್ವೀಟಿಗೆ ಭಾವಶುದ್ಧಿ ರೇಖಾ ಶ್ರೀ ಜಿ ಹಾಗೂ ಮಗ ಹೃದನ್‌ಗೆ ಹಿತಶಯ್ ರತನವಿಜಯ್ ಜಿ. ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ತಾಯಿ-ಮಗ ದೀಕ್ಷೆ ಸ್ವೀಕಾರ ಮಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಸನ್ಯಾಸ ದೀಕ್ಷೆ ಸ್ವೀಕರಿಸುವಾಗ ಮಗನ ತಲೆಯನ್ನು ತಾಯಿ ನೇವರಿಸುತ್ತಾ ಭಾವುಕರಾಗಿದ್ದಾರೆ. ಪರಸ್ಪರ ಹಣೆಗೆ ಕುಂಕುಮ ಇಟ್ಟುಕೊಂಡು, ಅಕ್ಷತೆ ಹಾಕಿಕೊಂಡಿದ್ದು, ನಂತರ ಇಬ್ಬರೂ ಶ್ವೇತ ವಸ್ತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಡಿಯೊದಲ್ಲಿದೆ.

ಕುಟುಂಬದ ಸಂಬಂಧಿ ವಿವೇಕ್‌ ಪ್ರತಿಕ್ರಿಯಿಸಿ, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗಲೇ ಸನ್ಯಾಸಿಯಾಗಲು ಬಯಸಿದ್ದರು. ಅದೇ ಸಮಯದಲ್ಲಿ, ತನ್ನ ಮಗು ಕೂಡ ತನ್ನನ್ನು ಅನುಸರಿಸಿ ಜೈನ ಸನ್ಯಾಸಿಯಾಗಬೇಕೆಂದು ನಿರ್ಧರಿಸಿದ್ದರು. ನಂತರ ಮಗ ಕೂಡ ತಾಯಿ ಹಾದಿಯಲ್ಲೇ ನಡೆಯುವುದಾಗಿ ಹೇಳಿದ್ದ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಸಂಕಲ್ಪ ಕೇಳಿದ ನಂತರ ಅವರ ಪತಿ ಮನೀಶ್ ಕೂಡ ಬೆಂಬಲಿಸಿದರು. ಅವರು ದೀಕ್ಷೆ ಪಡೆದಿರುವುದು ಮನೀಶ್ ಮತ್ತು ಕುಟುಂಬದ ಇತರರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Akshay Kumar: ಜೈನ ಸನ್ಯಾಸಿಯ 180 ದಿನಗಳ ಉಪವಾಸ ಬ್ರೇಕ್‌ ಮಾಡಿದ ಅಕ್ಷಯ್ ಕುಮಾರ್!

ಈ ಹಿಂದೆ, ಗುಜರಾತ್‌ನ ಶ್ರೀಮಂತ ಜೈನ ದಂಪತಿ ಸುಮಾರು 200 ಕೋಟಿ ರೂ. ಆಸ್ತಿ ತ್ಯಜಿಸಿ ಸನ್ಯಾಸ ದೀಕ್ಷೆ ಪಡೆದಿದ್ದರು. ಭಾವೇಶ್ ಭಂಡಾರಿ ಮತ್ತು ಪತ್ನಿ ಫೆಬ್ರವರಿಯಲ್ಲಿ ಸನ್ಯಾಸ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮಗ ಮತ್ತು ಮಗಳಿದ್ದು, ಅವರು ಕೂಡ 2022ರಲ್ಲಿಯೇ ದೀಕ್ಷೆ ತೆಗೆದುಕೊಂಡಿದ್ದರು.

ಇದನ್ನೂ ಓದಿ: Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Continue Reading

ಕ್ರೈಂ

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Soldier death: ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ.

VISTARANEWS.COM

on

cisf soldier death raichur
Koo

ರಾಯಚೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ (Gun misfire) ಸಿಡಿದು ರಾಯಚೂರು (Raichur news) ಮೂಲದ ಯೋಧರೊಬ್ಬರು (Soldier death) ಸಾವಿಗೀಡಾಗಿದ್ದಾರೆ. ಮಾನ್ವಿ ತಾಲೂಕಿನ ಆರ್.ಜಿ ಕ್ಯಾಂಪ್‌ನ ಯೋಧ ರವಿಕಿರಣ್ (37) ಮೃತಪಟ್ಟವರು. ಚೆನ್ನೈ ಏರ್‌ಪೋರ್ಟ್ ಸಮೀಪದ ಕಲ್ಪಾಕ್ಕಂ ಬಳಿ ಈ ದುರ್ಘಟನೆ ನಡೆದಿದೆ.

ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ. ಇಂಡಿಯನ್ ಸ್ಮಾಲ್ ಆರ್ಮ್ಸ್ ಸಿಸ್ಟಮ್ ರೈಫಲ್‌ನ ಬುಲೆಟ್ ರವಿಕಿರಣ್ ಕುತ್ತಿಗೆಯ ಭಾಗಕ್ಕೆ ತಗುಲಿದೆ.

ಚೆನ್ನೈನಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಗಿದೆ. ಇಂದು ಆರ್.ಜಿ ಕ್ಯಾಂಪ್‌ಗೆ ಯೋಧ ರವಿಕಿರಣ್‌ ಪಾರ್ಥಿವ ಶರೀರ ಬರಲಿದೆ.

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (missing case) ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

Continue Reading

ಕ್ರೈಂ

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Missing case: ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ.

VISTARANEWS.COM

on

missing case davanagere
Koo

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (family missing Case) ಘಟನೆ ದಾವಣೆಗೆರೆಯಲ್ಲಿ (Davanagere crime news) ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ಬೆಳಗಾವಿ: ರೈತರೊಬ್ಬರು ಮಾಡಿದ ಸಾಲ ಕಟ್ಟಲಿಲ್ಲ (farmer loan) ಎಂದು ಸಾಲ ನೀಡಿದ ಮಹಿಳೆ ಆ ರೈತನ ಪತ್ನಿ ಹಾಗೂ ಪುತ್ರನಿಗೆ ಅನ್ನ ನೀರು ಕೊಡದೆ ಗೃಹಬಂಧನದಲ್ಲಿಟ್ಟ, ಇದರಿಂದ ನೊಂದ ರೈತ ಆತ್ಮಹತ್ಯೆ (farmer suicide, farmer self harming) ಮಾಡಿಕೊಂಡ ಮನ ಕಲಕುವ ಘಟನೆ ಬೆಳಗಾವಿ (belagavi news) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಭೀಕರ ಬರಕ್ಕೆ ಕೈಕೊಟ್ಟ ಬೆಳೆಗಳಿಂದಾಗಿ ಉಪಜೀವನಕ್ಕೆ ರೈತ ಸಾಲದ ಮೊರೆ ಹೋಗಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನದ ಶಿಕ್ಷೆಯನ್ನು ಸಾಲ ನೀಡಿದ ಮಹಿಳೆ ವಿಧಿಸಿದ್ದಳು. ಇದರಿಂದ ಮನನೊಂದ ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಹೆಸರಿನ ವಿಕೃತ ಮಹಿಳೆಯಿಂದ ಈ ಕೃತ್ಯ ನಡೆದಿದೆ. ರಾಜು ಖೋತಗಿ ತಮ್ಮ ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ರೂ. ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಏಕಾಏಕಿ ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದಾಳೆ. ರಾಜು ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದ್ದರು.

ಇದಕ್ಕೆ ಒಪ್ಪದೇ, ಸಾಲ ಮರಳಿಸುವವರೆಗೂ ಪುತ್ರ ಬಸವರಾಜ ಖೋತಗಿಯನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ ತಾಕೀತು ಮಾಡಿದ್ದಳು. ಎರಡು ದಿನವಾದರೂ ಪುತ್ರನನ್ನು ಬಿಡದಾಗ ಸಿದ್ದವ್ವಳ ಮನೆಗೆ ಕೇಳಲು ರಾಜು-ದುರ್ಗವ್ವ ಹೋಗಿದ್ದರು. ಈ ವೇಳೆ ಬಸವರಾಜ್‌ನನ್ನು ಬಿಟ್ಟು ರಾಜು ಖೋತಗಿ, ಪತ್ನಿ ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ವಿಧಿಸಿದ್ದಾಳೆ. ಮೂವರನ್ನೂ ಹನಿ ನೀರು, ತುತ್ತು ಅನ್ನ ನೀಡದೇ 2 ದಿನ ಗೃಹಬಂಧನದಲ್ಲಿಟ್ಟಿದ್ದಾಳೆ.

ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೂರು ನೀಡಲು ಹೋದರೆ, ಸಿದ್ದವ್ವಳ ಅನ್ಯಾಯದ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸತಾಯಿಸಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದುರ್ಬಲ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ ವಿರುದ್ಧ ಪತಿ ಕಳೆದುಕೊಂಡ ದುರ್ಗವ್ವ, ಪೋಷಕರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

ಇದನ್ನೂ ಓದಿ: Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Continue Reading
Advertisement
Dog Attack in raichur
ರಾಯಚೂರು2 mins ago

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

jain monk samadhi sena chikkodi sallekhana
ಚಿಕ್ಕೋಡಿ9 mins ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Viral Video
ವೈರಲ್ ನ್ಯೂಸ್16 mins ago

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Prashant Kishor
Lok Sabha Election 202422 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್41 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ59 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್1 hour ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್1 hour ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ2 hours ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌