Raichur district administration gearing up for vote counting says District Collector Chandrasekhara Naik Karnataka election 2023 UpdatesKarnataka election 2023: ಮತ ಎಣಿಕೆಗೆ ರಾಯಚೂರು ಜಿಲ್ಲಾಡಳಿತ ಸಜ್ಜು: ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ - Vistara News

ಕರ್ನಾಟಕ

Karnataka election 2023: ಮತ ಎಣಿಕೆಗೆ ರಾಯಚೂರು ಜಿಲ್ಲಾಡಳಿತ ಸಜ್ಜು: ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್

Assembly Election: ಮೇ 13 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ರಾಯಚೂರು ಜಿಲ್ಲಾಡಳಿತ ಸಜ್ಜುಗೊಂಡಿದೆ, ಎರಡು ಕಾಲೇಜುಗಳಲ್ಲಿ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

VISTARANEWS.COM


on

Raichur District Collector Chandrasekhara Naik Pressmeet
ರಾಯಚೂರು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ (Karnataka election 2023) ಮತ ಎಣಿಕೆ (Vote counting) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ, ಎರಡು ಕಾಲೇಜುಗಳಲ್ಲಿ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಮತದಾನ ನಡೆದಿದ್ದು, ಈ ಬಾರಿ ರಾಯಚೂರು ನಗರದ ಎಲ್‌ವಿಡಿ ಮತ್ತು ಎಸ್‌ಆರ್‌ಪಿಎಸ್ ಕಾಲೇಜುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.

ಇದನ್ನೂ ಓದಿ: Accident News: 3ನೇ ಮಹಡಿಯಿಂದ ಬಿದ್ದು ಪೇಂಟರ್‌ ಸಾವು; ಆಂಬ್ಯುಲೆನ್ಸ್‌ ಬಾರದೆ ನಡು ರಸ್ತೆಯಲ್ಲೆ ಒದ್ದಾಡಿ ಪ್ರಾಣಬಿಟ್ಟ

7 ಕ್ಷೇತ್ರಗಳ ಪೈಕಿ ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನ್ವಿ ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಗರದ ಎಲ್‌ವಿಡಿ‌ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.ಇನ್ನುಳಿದ ಲಿಂಗಸುಗೂರು, ಮಸ್ಕಿ, ಸಿಂಧನೂರು, ದೇವದುರ್ಗ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಹೇಳಿದರು.

ಲಿಂಗಸುಗೂರು ವಿಧಾನಸಭಾ ಕ್ಷೇತ್ರ

ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 255534 ಮತದಾರರ ಇದ್ದು, ಈ ಪೈಕಿ 173056 ಜನರು ಮತದಾನ ಮಾಡಿದ್ದಾರೆ. ಲಿಂಗಸುಗೂರು ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತಿನಲ್ಲಿ ಮುಕ್ತಾಯವಾಗಲಿದೆ.

ದೇವದುರ್ಗ ವಿಧಾನಸಭಾ ಕ್ಷೇತ್ರ

ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 233472 ಮತದಾರರ ಇದ್ದು, ಈ ಪೈಕಿ ಈ ಬಾರಿ 174204 ಜನರು ಮತದಾನ ಮಾಡಿದ್ದಾರೆ. ದೇವದುರ್ಗ ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 19 ಸುತ್ತಿನಲ್ಲಿ ಎಣಿಕೆ ನಡೆಯಲಿದೆ.

ಇದನ್ನೂ ಓದಿ: Weather Report: ಕಳಸದಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ಸೇತುವೆ; ಸಿಕ್ಕಿಹಾಕಿಕೊಂಡ ಪಿಕಪ್ ವಾಹನ

ರಾಯಚೂರು ನಗರ ವಿಧಾನಸಭಾ ಕ್ಷೇತ್ರ

ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 232698 ಮತದಾರರು ಇದ್ದು, ಈ ಪೈಕಿ ಈ ಬಾರಿ 144294 ಜನರು ಮತದಾನ‌ ಮಾಡಿದ್ದಾರೆ. ರಾಯಚೂರು ನಗರ ಕ್ಷೇತ್ರದ ಮತ ಎಣಿಕೆಯು 14 ಟೇಬಲ್ ಗಳಲ್ಲಿ 18 ಸುತ್ತು ನಡೆಯಲಿದೆ.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಟ್ಟು 229046 ಸಂಖ್ಯೆಯಲ್ಲಿ ಮತದಾರರು ಇದ್ದು,ಈ ಬಾರಿ 172478 ಜನರು ಮತದಾನ ಮಾಡಿದ್ದಾರೆ. ರಾಯಚೂರು ಗ್ರಾಮೀಣ ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತು ನಡೆಯಲಿದೆ.

ಮಾನ್ವಿ‌ ವಿಧಾನಸಭಾ ಕ್ಷೇತ್ರ

ಮಾನ್ವಿ‌ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 233823 ಮತದಾರ ರು ಇದ್ದು,ಈ ಪೈಕಿ 156725 ಜನರು ಮತದಾನ ಮಾಡಿದ್ದಾರೆ. ಮಾನ್ವಿ ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತು ನಡೆಯಲಿದೆ.

ಸಿಂಧನೂರು ವಿಧಾನಸಭಾ ಕ್ಷೇತ್ರ

ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 239247 ಮತದಾರರು ಇದ್ದು,ಈ ಪೈಕಿ 174230 ಜನರು ಮತದಾನ ಮಾಡಿದ್ದಾರೆ. ಸಿಂಧನೂರು ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತು ಎಣಿಕೆ.

ಇದನ್ನೂ ಓದಿ: 30 ಸಾವಿರ ಸಂಬಳ ಪಡೆಯುವ ಸರ್ಕಾರಿ ಮಹಿಳಾ ಅಧಿಕಾರಿ, 7 ಕೋಟಿ ರೂ.ಆಸ್ತಿಗೆ ಒಡತಿ; ಬಂಗಲೆಯಲ್ಲಿ ಶೋಧ

ಮಸ್ಕಿ ವಿಧಾನಸಭಾ ಕ್ಷೇತ್ರ

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 211169 ಮತದಾರರು ಇದ್ದು,ಈ ಬಾರಿ 149956 ಜನರು ಮತದಾನ ಮಾಡಿದ್ದಾರೆ. ಮಸ್ಕಿ ಕ್ಷೇತ್ರದ ಮತ ಎಣಿಕೆ ಕಾರ್ಯವು 14 ಟೇಬಲ್ ಗಳಲ್ಲಿ 17 ಸುತ್ತು ಎಣಿಕೆ‌ ನಡೆಯಲಿದೆ ಎಂದರು.

ಒಟ್ಟು ಕ್ಷೇತ್ರಗಳಿಗೆ 134 ಸುತ್ತು ಮತ ಎಣಿಕೆ ನಡೆಯಲಿದ್ದು,ಮತ ಎಣಿಕೆ ಕಾರ್ಯಕ್ಕೆ 378 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ

ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾತನಾಡಿ, ಮತ ಎಣಿಕೆ ದಿನ‌ದಂದು ಜಿಲ್ಲೆಯಾದ್ಯಂತ ಪೊಲೀಸ್ ಫುಲ್ ಅಲರ್ಟ್ ಆಗಿರಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ. ಹೀಗಾಗಿ ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದರು.

ಮತ ಎಣಿಕೆ ಕೇಂದ್ರದ ಸುತ್ತ ಎಸ್ ಪಿ 01. ಡಿಎಸ್‌ಪಿ 02, ಸಿಪಿಐ 12, ಪಿಎಸ್‌ಐ 25, ಎಎಸ್‌ಐ 52, ಪಿಸಿ 350, ಹೋಮ್ ಗಾರ್ಡ್ 100, ಕೇಂದ್ರ ಸಶಸ್ತ್ರ ಪಡೆ 03, ಕೆಎಸ್‌ಆರ್‌ಪಿ ತುಕಡಿ 02, ಜಿಲ್ಲಾ ಸಶಸ್ತ್ರ ಮೀಸಲು ತುಕಡಿ 02 ಆಯೋಜಸಲಾಗಿದೆ.

ಇದನ್ನೂ ಓದಿ: KPSC Departmental Examination : ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ಮತ್ತೆ ಮುಂದೂಡಿದ ಕೆಪಿಎಸ್‌ಸಿ

ಇನ್ನೂ 07 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 10 ಕೇಂದ್ರ ಸಶಸ್ತ್ರ ಮೀಸಲು‌ ಪಡೆ. 8 ಕೆಎಸ್‌ಆರ್‌ಪಿ ತುಕಡಿ. 08 ಜಿಲ್ಲಾ ಸಶಸ್ತ್ರ ಮೀಸಲು ಪಡೆ. ಹೋಮ್‌ಗಾರ್ಡ್ 100 ಹಾಗೂ ಸಂಪೂರ್ಣ ಸಿವಿಲ್ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ಶಶಿಧರ್‌ ಕುರೇರ್‌ ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Ballari News: ಜೂ.12ರಂದು ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವ

Ballari News: ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಜೂ.12 ರಂದು ಸಂಜೆ 5 ಗಂಟೆಗೆ ಜರುಗಲಿದೆ. ಜೂ.5 ರಿಂದಲೇ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ.

VISTARANEWS.COM


on

Chellagurki Shri Yerrithathanavara Maharathotsava On 12th June
Koo

ಬಳ್ಳಾರಿ: ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಜೂ.12ರಂದು ಸಂಜೆ 5 ಗಂಟೆಗೆ ಜರುಗಲಿದ್ದು, ಜಾತ್ರಾ ಮಹೋತ್ಸವ ಅಂಗವಾಗಿ ಜೂ.5 ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು (Ballari News) ಆರಂಭವಾಗಿವೆ.

ಇದನ್ನೂ ಓದಿ: Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

ಜಾತ್ರಾ ಮಹೋತ್ಸವದ ಅಂಗವಾಗಿ ಜೂ.5ರಂದು ಬೆಳಿಗ್ಗೆ 6 ಗಂಟೆಯಿಂದಲೇ ನಂದಿ ಧ್ವಜಾರೋಹಣ ಮತ್ತು ಸಪ್ತಭಜನೆ ಕಾರ್ಯಕ್ರಮ ಆರಂಭವಾಗಿದೆ. ಜೂ.6ರಂದು ಸಂಜೆ ಬೆಳ್ಳಿ ರಥೋತ್ಸವ ಕಾರ್ಯಕ್ರಮ ನಡೆಯಿತು. ಮಂಗಳವಾರ ಬಸವ ಉತ್ಸವ ಕಾರ್ಯಕ್ರಮ ನಡೆಯಿತು. ಜೂ.12ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಸಪ್ತಭಜನೆ ಮುಕ್ತಾಯ ಕಾರ್ಯಕ್ರಮ ನಡೆಯಲಿದೆ.

ಶ್ರೀ ಎರ‍್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್ ಕಮಿಟಿಯ ಆವರಣದಲ್ಲಿ ಎರ‍್ರಿತಾತನವರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಉದ್ಘಾಟನೆ ಕಾರ್ಯಕ್ರಮ ಜೂ.12ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಉರವಕೊಂಡ ಗವಿಮಠ ಸಂಸ್ಥಾನದ ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ, ಮಳಿಗೆ ಉದ್ಘಾಟನೆ ಮಾಡಲಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಜೂ.12 ರಂದು ಸಂಜೆ 5 ಗಂಟೆಗೆ ಶ್ರೀ ಎರ‍್ರಿತಾತನವರ ಮಹಾರಥೋತ್ಸವ ನಡೆಯಲಿದೆ. ಅಂದು ರಾತ್ರಿ 7 ಗಂಟೆಗೆ ಕರ್ಪೂರದ ಆರತಿ ಕಾರ್ಯಕ್ರಮ ನಡೆಯಲಿದೆ. ಜೂ.13ರಂದು ಸಂಜೆ 7 ಗಂಟೆಗೆ ಹೂವಿನ ರಥೋತ್ಸವ ಕಾರ್ಯಕ್ರಮ ನಂತರ ಬಾಣೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಎರ‍್ರಿಸ್ವಾಮಿ ಜೀವಸಮಾಧಿ ಟ್ರಸ್ಟ್‌ನ ಅಧ್ಯಕ್ಷ ಬಾಳನಗೌಡ ಮತ್ತು ಶ್ರೀ ದಾಸೋಹ ಸೇವಾ ಸಂಘದ ಅಧ್ಯಕ್ಷ ಪಂಪನಗೌಡ ತಿಳಿಸಿದ್ದಾರೆ.

Continue Reading

ಕರ್ನಾಟಕ

Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

Fortis Hospital: ವೈರಲ್‌ ಜ್ವರದ ಬಳಿಕ ಎರಡೂ ಕಿವಿಗಳು ಶ್ರವಣದೋಷಕ್ಕೆ ಒಳಗಾಗಿದ್ದ ನೈಜೀರಿಯಾ ಮೂಲದ 23 ವರ್ಷದ ಯುವತಿಗೆ ಏಕಕಾಲದಲ್ಲೇ “ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ” ಮೂಲಕ ಯುವತಿಗೆ ಎರಡು ಶ್ರವಣ ಸಾಧನಗಳನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಅಳವಡಿಸಿದ್ದಾರೆ.

VISTARANEWS.COM


on

Fortis hospital Doctors Perform Successful Dual Cochlear Implant Surgery on Nigerian Young Woman
Koo

ಬೆಂಗಳೂರು: ವೈರಲ್‌ ಜ್ವರದ ಬಳಿಕ ಎರಡೂ ಕಿವಿಗಳ ಶ್ರವಣದೋಷಕ್ಕೆ ಒಳಗಾಗಿದ್ದ ನೈಜೀರಿಯಾ ಮೂಲದ 23 ವರ್ಷದ ಯುವತಿಗೆ ಏಕಕಾಲದಲ್ಲೇ “ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ” ಮೂಲಕ ಯುವತಿಗೆ ಎರಡು ಶ್ರವಣ ಸಾಧನಗಳನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರು ಯಶಸ್ವಿಯಾಗಿ ಅಳವಡಿಸಿದ್ದಾರೆ.

ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಹಿರಿಯ ಸಲಹೆಗಾರ ಡಾ.ಎಚ್.ಕೆ. ಸುಶೀನ್ ದತ್ ಹಾಗೂ ತಜ್ಞರ ಆರೈಕೆಯಲ್ಲಿ ಈ ಸಂಕೀರ್ಣ ಕಾರ್ಯವಿಧಾನವನ್ನು 9 ಗಂಟೆಗಳಲ್ಲಿ ಪೂರ್ಣಗೊಳಿಸಲಾಯಿತು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಈ ಕುರಿತು ಡಾ.ಎಚ್. ಕೆ. ಸುಶೀನ್ ದತ್ ಮಾತನಾಡಿ, 23 ವರ್ಷದ ನೈಜೀರಿಯಾ ಮೂಲದ ಲೀನಾ (ಹೆಸರು ಬದಲಿಸಲಾಗಿದೆ) ಗೆ ಮೂರು ವರ್ಷಗಳ ಹಿಂದೆ ಅತಿಯಾದ ವೈರಲ್‌ ಜ್ವರ ಕಾಣಿಸಿಕೊಂಡಿದೆ, ಈ ಜ್ವರದ ತೀವ್ರತೆಯಿಂದ ಕ್ರಮೇಣ ಅವರು ಮೊದಲು ಬಲಕಿವಿಯ ಕೇಳುವ ಶಕ್ತಿ ಕಳೆದುಕೊಂಡರು, ನಂತರ ಎಡ ಕಿವಿಯು ಶ್ರವಣವೂ ಹೋಯಿತು. ದೊಡ್ಡ ಶಬ್ಧವನ್ನೂ ಸಹ ಅವರು ಕೇಳಲು ಸಾಧ್ಯವಾಗದ ಸ್ಥಿತಿಗೆ ತಲುಪಿದರು.

ನಂತರ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದ ಬಳಿಕ ಅವರ ಕಿವುಡುತನದ ತೀವ್ರತೆ ಅರಿವಾಯಿತು. ಇವರಿಗೆ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ಮಾಡಲು ನಿರ್ಧರಿಸಿದೆವು. ಆದರೆ ಇವರಿಗೆ ಎರಡೂ ಕಿವಿಗಳಿಗೂ ಈ ಸರ್ಜರಿ ಅವಶ್ಯಕತೆ ಇತ್ತು, ಸಾಮಾನ್ಯವಾಗಿ ಈ ಸರ್ಜರಿಯನ್ನು ಒಮ್ಮೆಲೆ ಒಂದು ಕಿವಿಗೆ ಮಾತ್ರ ಮಾಡಲು ಸಾಧ್ಯ. ಆದರೆ, ನಮ್ಮ ತಂಡ ಏಕಕಾಲದಲ್ಲೇ ಎರಡೂ ಕಿವಿಗಳಿಗೂ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ಮಾಡಲು ನಿರ್ಧರಿಸಿದೆವು. ಇದಕ್ಕೆ ಸೂಕ್ತ ತಂತ್ರಜ್ಞಾನಗಳ ಬಳಕೆಯಿಂದ 9 ಗಂಟೆಗಳ ನಿರಂತರ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ರವಣ ಸಾಧನಗಳನ್ನು ಅಳಡಿಸಲಾಗಿದೆ.

ಇದನ್ನೂ ಓದಿ: Pralhad Joshi: ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ್‌ ಜೋಶಿ; ಲಕ್ಷ್ಮಿ ಪೂಜೆಯೊಂದಿಗೆ ಕಾರ್ಯಾರಂಭ

ಶಸ್ತ್ರಚಿಕಿತ್ಸೆಯ 5 ದಿನಗಳ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಅವರು ನೈಜೀರಿಯಾದಲ್ಲಿ ಶ್ರವಣೇಂದ್ರಿಯ ಮೌಖಿಕ ತರಬೇತಿಯನ್ನು ಪಡೆಯುತ್ತಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Actor Darshan: ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ನಟ ದರ್ಶನ್‌ ಸೇರಿ 13 ಆರೋಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder case) ಬಂಧನವಾಗಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ 14 ದಿನ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್‌ ಮೊಬೈಲ್‌ ಸೀಜ್‌ ಆಗಿದೆ, ದರ್ಶನ್‌ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.

ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಭಿಯೋಜಕ ಕೋರಿದರೆ, ದರ್ಶನ್‌ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್‌ ಕಣ್ಣೀರಿಟ್ಟಿದ್ದು ಕಂಡುಬಂತು.

ಹೀಗಾಗಿ ದರ್ಶನ್‌ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್‌ ಇನ್ನಿತರ ಟೆಸ್ಟ್‌ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ವೇಳೆ ಕೆಲ ವಸ್ತುಗಳನ್ನು ಎಫ್ಎಸ್ಎಲ್ ತಂಡ ಸಂಗ್ರಹಿಸಿದೆ. ವಸ್ತುಗಳನ್ನು ಸೀಜ್ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು

1.ನಟ ದರ್ಶನ್‌
2.ಪವಿತ್ರಾ ಗೌಡ
3.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
4.ಪ್ರದೋಶ್- ಹೋಟೆಲ್ ಉದ್ಯಮಿ
5.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
6.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
7.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
8.ಎಂ.ಲಕ್ಷ್ಮಣ್
9. ದೀಪಕ್ ಕುಮಾರ್
10.ಕಾರ್ತಿಕ್
11.ಆರ್.ನಾಗರಾಜ್, ದರ್ಶನ್ ಆಪ್ತ
12.ವಿ.ವಿನಯ್‌
13. ನಿಖಿಲ್‌ ನಾಯಕ್‌

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ | Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

ಇದನ್ನೂ ಓದಿ | Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 33 ವರ್ಷದ ಯುವಕ ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

Continue Reading

ಕರ್ನಾಟಕ

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Renuka Swamy Murder Case: ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ತೆರಳಿ ಹೋರಾಟ ನಡೆಸಲಿವೆ.

VISTARANEWS.COM


on

Renuka Swamy Murder Case
Koo

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣ (Renuka Swamy Murder Case) ಖಂಡಿಸಿ ನಾಳೆ (ಜೂನ್‌ 12) ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ತೀರ್ಮಾನಿಸಿವೆ. ನಗರದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ತೆರಳಿ ಪ್ರತಿಭಟನಾಕಾರರು ಹೋರಾಟ ನಡೆಸಲಿದ್ದು, ಈ ವೇಳೆ ಬೇಡ ಜಂಗಮ ಸಮುದಾಯದ ಮುಖಂಡರು, ವಿವಿಧ ಪಕ್ಷ, ಸಂಘಟನೆಗಳ ಪಕ್ಷಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಬೃಹತ್ ಪ್ರತಿಭಟನೆಯಲ್ಲಿ 1000ಕ್ಕೂ ಹೆಚ್ಚು ಜನರು ಭಾಗಿಯಾಗುವ ಸಾಧ್ಯತೆ ಇದೆ. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಿದ್ದಾರೆ.

ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧನವಾಗಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ತನಿಖೆ ಮಾಡುವುದು ಬೇಡ. ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

ಇದನ್ನೂ ಓದಿ | Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

ಮೃತನ ಕುಟುಂಬಸ್ಥರಿಗೆ ಭಾವನಾ ಬೆಳಗೆರೆ ಸಾಂತ್ವನ

ರೇಣುಕಾ ಸ್ವಾಮಿ ಮನೆಗೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕಿ ಭಾವನಾ ಬೆಳಗೆರೆ ಭೇಟಿ ನೀಡಿದ್ದರು. ಹಿರಿಯೂರು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಭಾವನಾ, ವಿಷಯ ತಿಳಿದು ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟರು. ಮೃತನ ಪತ್ನಿ ಸಹನಾಗೆ ಸಾಂತ್ವನ ಹೇಳಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಶವ ಎನ್ನುವುದು ತಿಳಿದು ಬಂದಿತ್ತು.

ಇದನ್ನೂ ಓದಿ | Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದಾಗ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ನಟ ದರ್ಶನ್‌, ಪವಿತ್ರಾ ಗೌಡ, ಕೆ. ಪವನ್, ಪ್ರದೋಶ್, ನಂದೀಶ್, ಕೇಶವಮೂರ್ತಿ, ರಾಘವೇಂದ್ರ, ಎಂ.ಲಕ್ಷ್ಮಣ್, ದೀಪಕ್ ಕುಮಾರ್, ಕಾರ್ತಿಕ್, ಆರ್.ನಾಗರಾಜ್, ವಿ.ವಿನಯ್‌, ನಿಖಿಲ್‌ ನಾಯಕ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ.

Continue Reading
Advertisement
Aishwarya Arjun
ಪ್ರಮುಖ ಸುದ್ದಿ19 mins ago

Aishwarya Arjun : ಚೆನ್ನೈನಲ್ಲಿ ವಿವಾಹವಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್​; ಇಲ್ಲಿವೆ ಚಿತ್ರಗಳು

Chellagurki Shri Yerrithathanavara Maharathotsava On 12th June
ಧಾರ್ಮಿಕ25 mins ago

Ballari News: ಜೂ.12ರಂದು ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವ

Fortis hospital Doctors Perform Successful Dual Cochlear Implant Surgery on Nigerian Young Woman
ಕರ್ನಾಟಕ27 mins ago

Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

Viral News
ವೈರಲ್ ನ್ಯೂಸ್31 mins ago

Viral News: ಕೊಳದಲ್ಲಿ ತೇಲುತ್ತಿದ್ದ ದೇಹ ಮೇಲೆತ್ತಲು ಹೋದ ಪೊಲೀಸರು! ಹೆಣ ನಡೆಯತೊಡಗಿತು!

YouTuber Dhruv Rathee
ವೈರಲ್ ನ್ಯೂಸ್47 mins ago

YouTuber Dhruv Rathee: ಧ್ರುವ ರಾಥಿಯ ಮೋದಿ ವಿರೋಧಿ ವಿಡಿಯೊ ಗೊತ್ತು; ಅವರ ಲವ್‌ ಸ್ಟೋರಿ ಗೊತ್ತಾ?

University Grants Commission
ಪ್ರಮುಖ ಸುದ್ದಿ1 hour ago

University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Actor Darshan
ಪ್ರಮುಖ ಸುದ್ದಿ1 hour ago

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Wedding Jewel Fashion
ಫ್ಯಾಷನ್2 hours ago

Wedding Jewel Fashion: ವೆಡ್ಡಿಂಗ್‌ ಜ್ಯುವೆಲ್‌ ಫ್ಯಾಷನ್‌ನಲ್ಲಿ ಮಹಿಳೆಯರನ್ನು ಸೆಳೆಯುತ್ತಿವೆ ಈ 3 ಟ್ರೆಡಿಷನಲ್‌ ಮಾಟಿಗಳು

EPF Account Rules
ಮನಿ-ಗೈಡ್2 hours ago

EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

Renu Desai Second Marriage
ಸಿನಿಮಾ2 hours ago

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ7 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ9 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌