ವಿಸ್ತಾರ Money Guide| ದ್ವಿಚಕ್ರ ವಾಹನಕ್ಕೆ ಸೂಕ್ತ ಬಡ್ಡಿ ದರದ ಸಾಲ ಪಡೆಯೋದು ಹೇಗೆ? - Vistara News

ಪ್ರಮುಖ ಸುದ್ದಿ

ವಿಸ್ತಾರ Money Guide| ದ್ವಿಚಕ್ರ ವಾಹನಕ್ಕೆ ಸೂಕ್ತ ಬಡ್ಡಿ ದರದ ಸಾಲ ಪಡೆಯೋದು ಹೇಗೆ?

ಬೈಕ್‌ ಅಥವಾ ಸ್ಕೂಟರ್‌ ಪಡೆಯುವ ಸಂದರ್ಭದಲ್ಲಿ ಸಾಲ ಪಡೆಯುವುದು ಸಾಮಾನ್ಯ. ಆದರೆ ಕೆಳಕಂಡ ಟಿಪ್ಸ್‌ಗಳನ್ನು ಬಳಸುವ ಮೂಲಕ ಉತ್ತಮ ಬಡ್ಡಿ ದರದಲ್ಲಿ ಇಷ್ಟದ ದ್ವಿಚಕ್ರವಾಹನವನ್ನು ಖರೀದಿಸಬಹುದು.

VISTARANEWS.COM


on

bike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೀವು ಬೈಕ್‌ ಅಥವಾ ಸ್ಕೂಟರ್‌ ಅನ್ನು ಸಾಲದ ಮೂಲಕ ಖರೀದಿಸಿದರೆ ಒಂದೇ ಸಲ ಹೆಚ್ಚು ಹಣ ಹೊಂದಿಸಬೇಕಾಗುವುದಿಲ್ಲ. ಎರಡನೆಯದಾಗಿ ಹಣದ ಕೊರತೆ ಇದ್ದರೂ ಸಾಲ ಪಡೆಯಬಹುದು. ಆದರೆ ಸೂಕ್ತ ಬಡ್ಡಿ ದರದ ಸಾಲ ಪಡೆಯುವುದು ಹೇಗೆ ಎಂಬುದನ್ನು ನೋಡೋಣ.

ತೈಲ ದರಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಸಾರಿಗೆ ವೆಚ್ಚವನ್ನು ಉಳಿತಾಯ ಮಾಡಲು ದ್ವಿಚಕ್ರ ವಾಹನಗಳು ಸೂಕ್ತ. ಒಬ್ಬರೋ-ಇಬ್ಬರೋ ಸಂಚರಿಸುವಾಗ ಕಾರಿನ ಬದಲು ದ್ವಿಚಕ್ರ ವಾಹನ ಬಳಸಿದರೆ ಇಂಧನ ವೆಚ್ಚ ಉಳಿತಾಯವಾಗುತ್ತದೆ. ಯಾವುದೇ ಬೈಕ್‌ ಅಥವಾ ಸ್ಕೂಟರ್‌ ಅನ್ನು ಸಾಲದ ಮೂಲಕ ಖರೀದಿಸುವಾಗ ಕೆಳಕಂಡ ಅಂಶಗಳನ್ನು ಪಾಲಿಸಿದರೆ ಅತ್ಯುತ್ತಮ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು.

ನಿಮ್ಮ ಕ್ರೆಡಿಟ್‌ ಸ್ಕೋರ್‌ ಗಮನಿಸಿ

ದ್ವಿಚಕ್ರ ವಾಹನ ಸಾಲ ಪಡೆಯುವುದಕ್ಕೆ ಮೊದಲು ನಿಮ್ಮ ಕ್ರೆಡಿಟ್‌ ಸ್ಕೋರ್‌ ಅನ್ನು ಗಮನಿಸಿ ಎನ್ನುತ್ತಾರೆ ಬ್ಯಾಂಕ್‌ ಬಾಜಾರ್‌ ಡಾಟ್‌ಕಾಮ್‌ನ ಸಿಇಒ ಅದಿಲ್‌ ಶೆಟ್ಟಿ. ದ್ವಿಚಕ್ರ ವಾಹನ ಸಾಲ ಪಡೆಯಲು ಉತ್ತಮ ಕ್ರೆಡಿಟ್‌ ಸ್ಕೋರ್‌ ಅವಶ್ಯಕ. ನಿಮಗೆ ಸಾಲ ಕೊಡುವುದು ಸುರಕ್ಷಿತ ಎಂಬುದನ್ನು ಉತ್ತಮ ಸ್ಕೋರ್‌ ಖಾತರಿಪಡಿಸುತ್ತದೆ.

ಮತ್ತೊಂದು ಕಡೆ ನಿಮ್ಮ ಕ್ರೆಡಿಟ್‌ ಸ್ಕೋರ್‌ ಕಳಪೆಯಾಗಿದ್ದರೆ ಅಥವಾ ಕಡಿಮೆ ಆಗಿದ್ದರೆ ಬ್ಯಾಂಕ್‌ ಹೆಚ್ಚಿನ ಬಡ್ಡಿ ದರ ವಿಧಿಸುವ ಸಾಧ್ಯತೆ ಇದೆ. ನಿಮ್ಮ ಕ್ರೆಡಿಟ್‌ ಸ್ಕೋರ್‌ ೭೫೦ ಮತ್ತು ಅದಕ್ಕಿಂತ ಮೇಲಿದ್ದರೆ ಸುಲಭವಾಗಿ ದ್ವಿಚಕ್ರ ವಾಹನ ಸಾಲ ಪಡೆಯಬಹುದು. ಯಾವುದೇ ರಿಸ್ಕ್‌ ಪ್ರೀಮಿಯಂ ಇಲ್ಲದೆ, ನಿಯಮಿತ ಬಡ್ಡಿ ದರದಲ್ಲಿ ಬ್ಯಾಂಕ್‌ ಸಾಲ ಕೊಡಬಹುದು. ಆದ್ದರಿಂದ ಒಂದುವೇಳೆ ನಿಮ್ಮ ಕ್ರೆಡಿಟ್‌ ಸ್ಕೋರ್‌ ಕಡಿಮೆ ಆಗಿದ್ದರೆ, ಅದಕ್ಕೆ ಕಾರಣವನ್ನು ಕಂಡುಕೊಂಡು ಪರಿಹರಿಸಿ. ನಿಮ್ಮ ಕ್ರೆಡಿಟ್‌ ಸ್ಕೋರ್‌ ಹೆಚ್ಚಿದ ಬಳಿಕ ಸಾಲಕ್ಕೆ ಅರ್ಜಿ ಸಲ್ಲಿಸಿ.

ಬಡ್ಡಿ ದರಗಳನ್ನು ಹೋಲಿಸಿ

ದ್ವಿಚಕ್ರ ವಾಹಗಳ ಸಾಲಗಳ ಬಡ್ಡಿ ದರಗಳು ಮತ್ತು ಶುಲ್ಕಗಳು ಬ್ಯಾಂಕ್‌ಗಳಿಂದ ಬ್ಯಾಂಕ್‌ಗೆ ವಿಭಿನ್ನವಾಗಿರುತ್ತವೆ. ಆದ್ದರಿಂದ ಅವುಗಳನ್ನು ಹೋಲಿಸಿ ನೋಡಿ. ಬಡ್ಡಿ ದರ, ಸಂಸ್ಕರಣೆ ಶುಲ್ಕ, ಇತರ ಶುಲ್ಕಗಳನ್ನು, ದಂಡ, ಪ್ರೀ-ಪೇಮೆಂಟ್‌ ಶುಲ್ಕ, ಪ್ರಿ-ಕ್ಲೋಸರ್‌ ಶುಲ್ಕ, ವಿಳಂಬ ಪಾವತಿ ಶುಲ್ಕ ಇತ್ಯಾದಿಗಳನ್ನು ಹೋಲಿಸಿ.

ದ್ವಿಚಕ್ರ ವಾಹನ ಸಾಲದ ಬಡ್ಡಿ ದರಗಳು

ಬ್ಯಾಂಕ್‌ಗಳು‌ಬಡ್ಡಿ ದರ (%)
ಬಿಒಐ‌7.75
ಜೆ&ಕೆ ಬ್ಯಾಂಕ್9.35
ಪಿಎನ್‌ಬಿ9.55
ಪಂಜಾಬ್&ಸಿಂಧ್‌ ಬ್ಯಾಂಕ್9.70
ಎಕ್ಸಿಸ್‌ ಬ್ಯಾಂಕ್10.00
ಯೂನಿಯನ್‌ ಬ್ಯಾಂಕ್10.80
ಸೆಂಟ್ರಲ್‌ ಬ್ಯಾಂಕ್7.25
( ಜೂನ್ 20, 2022ಕ್ಕೆ ಅನ್ವಯಿಸುವಂತೆ‌ ಬ್ಯಾಂಕ್‌ ವೆಬ್‌ ಸೈಟ್‌ಗಳಲ್ಲಿ )( ವಾರ್ಷಿಕ ಬಡ್ಡಿ ದರ)

ಒಪ್ಪಂದಗಳನ್ನು ಪರಿಶೀಲಿಸಿ

ದ್ವಿಚಕ್ರ ವಾಹನ ಸಾಲಕ್ಕೆ ಸಂಬಂಧಿಸಿ ಬ್ಯಾಂಕ್‌ ಮತ್ತು ಉತ್ಪಾದಕ ಕಂಪನಿ ನಡುವಣ ಒಪ್ಪಂದ, ಬ್ಯಾಂಕ್‌ ಮತ್ತು ಎನ್‌ಬಿಎಫ್‌ಸಿ ನಡುವಣ ಒಪ್ಪಂದವನ್ನು ಪರಿಶೀಲಿಸಿ. ಏಕೆಂದರೆ ಕಂಪನಿಯು ಒಂದು ವೇಳೆ ನಿರ್ದಿಷ್ಟ ಬ್ಯಾಂಕ್‌ ಅಥವಾ ಎನ್‌ಬಿಎಫ್‌ಸಿ ಜತೆ ಒಪ್ಪಂದ ಮಾಡಿದ್ದರೆ, ಸಂಸ್ಕರಣ ಶುಲ್ಕ, ರಿಯಾಯಿತಿ ಬಡ್ಡಿ ದರ ಇತ್ಯಾದಿ ಅನುಕೂಲ ಸಿಗಬಹುದು.

ಬ್ಯಾಂಕ್‌ಗಳ ಆಫರ್‌ಗಳನ್ನು ಗಮನಿಸಿ

ಬಹುತೇಕ ಬ್ಯಾಂಕ್‌ಗಳು ಕಾಲಕಾಲಕ್ಕೆ ದ್ವಿಚಕ್ರ ವಾಹನ ಸಾಲಗಳಿಗೆ ಸಂಬಂಧಿಸಿ ವಿಶೇಷ ಆಫರ್‌ಗಳನ್ನು ನೀಡುತ್ತವೆ. ಉದಾಹರಣೆಗೆ ದೀಪಾವಳಿ ಮೊದಲಾದ ಹಬ್ಬಗಳು , ಹೊಸ ವರ್ಷ, ಸ್ವಾತಂತ್ರ್ಯ ದಿನಾಚರಣೆ ವೇಳೆ ಸಾಮಾನ್ಯವಾಗಿ ಆಫರ್‌ಗಳನ್ನು ಪ್ರಕಟಿಸುತ್ತವೆ. ಆಗ ರಿಯಾಯಿತಿ ಬಡ್ಡಿ ದರ ಪಡೆಯಬಹುದು. ಸಂಸ್ಕರಣ ಶುಲ್ಕ ಮನ್ನಾ ಸೌಲಭ್ಯ ಪಡೆದರೂ ಅಚ್ಚರಿ ಇಲ್ಲ.

ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ನೀಡುವ ಪ್ರಿ-ಅಪ್ರೂವ್ಡ್‌ ಟು-ವ್ಹೀಲರ್‌ ಸಾಲ ಸೌಲಭ್ಯಗಳನ್ನೂ ಗಮನಿಸಿ. Pre-approved ಸಾಲಗಳ ಪ್ರಕ್ರಿಯೆ ತ್ವರಿತವಾಗಿ ನಡೆಯುತ್ತದೆ. ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಇವುಗಳ ಬಗ್ಗೆ ಇ-ಮೇಲ್‌, ಎಸ್ಸೆಮ್ಮೆಸ್‌ ಮೂಲಕ ಮಾಹಿತಿ ಒದಗಿಸುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

PM Narendra Modi: ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

VISTARANEWS.COM


on

pm narendra modi resignation
Koo

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ (Resignation) ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ (Lok Sabha dissolvation) ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ (NDA) ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜೊತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಎನ್‌ಡಿಎಗೆ ತೆಲುಗುದೇಶಂ, ಜೆಡಿಯು ಬೆಂಬಲ

ಲೋಕಸಭಾ ಚುನಾವಣೆ (Election Results 2024)ಯ ಅಚ್ಚರಿಯ ಫಲಿತಾಂಶ ಹಲವು ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗಿದೆ. ಈಗಾಗಲೇ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಸಿದ್ಧತೆ ಆರಂಭವಾಗಿದೆ. ಇದೀಗ ಕಿಂಗ್‌ ಮೇಕರ್‌ ಆಗಿ ಹೊರ ಹೊಮ್ಮಿರುವ ತೆಲುಗು ದೇಶಂ ಪಕ್ಷ (TDP)ದ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದಾರೆ. ಎನ್‌ಡಿಎ ಜತೆಗೆ ಕೆಲಸ ಮಾಡಿದ್ದರಿಂದ ಗೆಲುವು ಸಾಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ ಸೇರುವ ವದಂತಿಯನ್ನು ತಳ್ಳಿ ಹಾಕಿರುವ ಟಿಡಿಪಿ, ಎನ್‌ಡಿಎಗೆ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಹೇಳಿದೆ. ಬುಧವಾರ ಸಂಜೆ ದೆಹಲಿಯಲ್ಲಿ ಆಯೋಜಿಸಿರುವ ಎನ್‌ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಭಾಗವಹಿಸಲಿದ್ದಾರೆ ಎಂದೂ ಟಿಡಿಪಿ ತಿಳಿಸಿದೆ. ಆಂಧ್ರ ಪ್ರದೇಶದ 25 ಸೀಟುಗಳ ಪೈಕಿ 21 ಸ್ಥಾನಗಳನ್ನು ಎನ್‌ಡಿಎ ಗೆದ್ದುಕೊಂಡಿದೆ. ಈ ಪೈಕಿ ಟಿಡಿಪಿ ಅತಿ ಹೆಚ್ಚಿನ 16 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು, ಮಿತ್ರ ಪಕ್ಷವಾದ ಜನಸೇನೆ 2 ಮತ್ತು ಬಿಜೆಪಿ 3 ಕಡೆ ಗೆದ್ದಿದೆ.

ಚಂದ್ರಬಾಬು ನಾಯ್ಡು ಹೇಳಿದ್ದೇನು?

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಚಂದ್ರಬಾಬು ನಾಯ್ಡು, “ಈ ದೇಶದಲ್ಲಿ ಹಲವಾರು ರಾಜಕೀಯ ಬದಲಾವಣೆಗಳನ್ನು ನೋಡಿದ್ದೇನೆ. ನಾವು ಎನ್‌ಡಿಎಯಲ್ಲಿದ್ದೇವೆ. ನಾನು ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲಕ್ಕೆ ಧನ್ಯವಾದಗಳು. ರಾಜಕೀಯದಲ್ಲಿ ಏರಿಳಿತಗಳು ಸಾಮಾನ್ಯ. ಇತಿಹಾಸದಲ್ಲಿ ಅನೇಕ ರಾಜಕೀಯ ನಾಯಕರು ಮತ್ತು ಪಕ್ಷಗಳನ್ನು ಜನರು ಸೋಲಿಸಿದ್ದಾರೆ. ಇದೊಂದು ಐತಿಹಾಸಿಕ ಚುನಾವಣೆ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಖಾತೆಗಳಿಗೆ ಬೇಡಿಕೆ?

ಇದೀಗ ಕಿಂಗ್‌ ಮೇಕರ್‌ ಆಗಿರುವ ಟಿಡಿಪಿ ಸರ್ಕಾರದಲ್ಲಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಖಾತೆಗಳ ಜತೆಗೆ ಸ್ಪೀಕರ್ ಹುದ್ದೆಯನ್ನು ಕೋರಬಹುದು ಎಂದು ಮೂಲಗಳು ತಿಳಿಸಿವೆ. ಜತೆಗೆ ಕೃಷಿ, ಜಲಶಕ್ತಿ, ಐಟಿ ಮತ್ತು ರಾಜ್ಯ ಹಣಕಾಸು ಖಾತೆಗಳಿಗೂ ಬೇಡಿಕೆ ಇಡುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಟಿಡಿಪಿ 5-6 ಖಾತೆಗಳಿಗಾಗಿ ಹಕ್ಕು ಮಂಡಿಸಲಿದೆ.

ಬೇಷರತ್ತು ಬೆಂಬಲ ಘೋಷಿಸಿದ ಜೆಡಿಯು

ಇತ್ತ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಕೂಡ ಎನ್‌ಡಿಎಗೆ ಬೇಷರತ್ತು ಬೆಂಬಲ ಸೂಚಿಸಿದೆ. ಜೆಡಿಯು ಮುಖಂಡ ಕೆ.ಸಿ.ತ್ಯಾಗಿ ಈ ಬಗ್ಗೆ ಮಾತನಾಡಿ, ಯಾವದೇ ಬೇಡಿಕೆ ಇಲ್ಲದೆ ಎನ್‌ಡಿಎಗೆ ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಎನ್‌ಡಿಎ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಈಗಾಗಲೇ ನಿತೀಶ್‌ ಕುಮಾರ್‌ ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕೆ.ಸಿ.ತ್ಯಾಗಿ, “ಎನ್‌ಡಿಎ ಸಭೆ ದೆಹಲಿಯಲ್ಲಿ ನಡೆಯಲಿದೆ. ಸಭೆಯಲ್ಲಿ ನಿತೀಶ್ ಕುಮಾರ್ ಭಾಗವಹಿಸುತ್ತಿದ್ದಾರೆ. ಈ ವೇಳೆ ಜೆಡಿಯು ಎನ್‌ಡಿಎಗೆ ಬೆಂಬಲ ನೀಡುವ ಮತ್ತು ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಬಗ್ಗೆ ಪತ್ರವನ್ನು ಸಲ್ಲಿಸಲಿದೆ. ʼಇಂಡಿಯಾʼ ಮೈತ್ರಿಕೂಟಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Continue Reading

ಪ್ರಮುಖ ಸುದ್ದಿ

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Uttarkashi Trekking Tragedy: ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಅಪಯಾಕ್ಕೆ ಸಿಲುಕಿದ್ದ 13 ಮಂದಿ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಎಂಟು ಮಂದಿಯನ್ನು ರಕ್ಷಿಸಲಾಗಿದೆ.

VISTARANEWS.COM


on

Uttarkashi Trekking Tragedy
Koo

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಸಹಸ್ತ್ರ ತಾಲ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದಾರರೆ. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ ನಾಲ್ವರು ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಪ್ರಸ್ತುತ ಕೆಲವರು ಈಗ ಕೊಹ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ. ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

Election Results 2024 : ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

VISTARANEWS.COM


on

Election Results 2024
Koo

ಬೆಂಗಳೂರು: ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಸರ್ಕಾರವನ್ನು ರಚಿಸಲಿದೆ. ನರೇಂದ್ರ ಮೋದಿ ಅವರು ಜೂನ್ 8ಕ್ಕೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ (Election Results 2024) ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿದೆ. ಎನ್​ಡಿಎ ಹಾಗೂ ಇಂಡಿ ಒಕ್ಕೂಟದ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿದ್ದು ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ. ಏತನ್ಮಧ್ಯೆ, ಈ ಬಾರಿ ಚುನಾವಣಾ ಫಲಿತಾಂಶ ಬದಲಾವಣೆಗೆ ಮುಸ್ಲಿಂ ಮತದಾರರೇ ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಇಂಡಿ ಒಕ್ಕೂಟ ಅದರಲ್ಲೂ ಕಾಂಗ್ರೆಸ್​ಗೆ ಮುಸ್ಲಿಂ ಮತದಾರರ ಸಾರಾಸಗಟಾಗಿ ಮತ ಹಾಕಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರ ಆಯ್ಕೆಯಾಗಿರವ ಪ್ರಮಾಣವೂ ಹೆಚ್ಚಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರಲ್ಲಿ 15 ಮಂದಿ ಆಯ್ಕೆಯಾಗಿದ್ದಾರೆ. 2019ರ ಚುನಾವಣೆಯಲ್ಲಿ 115 ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಸಹರಾನ್ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ 64,542 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೈರಾನಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಇಕ್ರಾ ಚೌಧರಿ ಅವರು ಬಿಜೆಪಿಯ ಪ್ರದೀಪ್ ಕುಮಾರ್ ಅವರನ್ನು 69,116 ಮತಗಳ ಅಂತರದಿಂದ ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು 3,38,087 ಮತಗಳ ಅಂತರದಿಂದ ಮಣಿಸಿದ್ದಾರೆ.

ಲಡಾಖ್​ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ 27,862 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ 4.7 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮೊಹಿಬುಲ್ಲಾ 4,81,503 ಮತಗಳನ್ನು ಪಡೆಯುವ ಮೂಲಕ ರಾಂಪುರ ಸ್ಥಾನವನ್ನು ಗೆದ್ದರೆ, ಸಂಭಾಲ್​​ನಲ್ಲಿ ಜಿಯಾ ಉರ್ ರೆಹಮಾನ್ 1.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್-ರಾಜೌರಿ ಕ್ಷೇತ್ರದಲ್ಲಿ ನ್ಯಾಷನಲ್ ಕಾನ್ಫರೆನ್ಸ್​ನ ಮಿಯಾನ್ ಅಲ್ತಾಫ್ ಅಹ್ಮದ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ 2,81,794 ಮತಗಳಿಂದ ಗೆದ್ದಿದ್ದಾರೆ. ಶ್ರೀನಗರದಲ್ಲಿ ಎನ್ಸಿ ಅಭ್ಯರ್ಥಿ ಅಗಾ ಸೈಯದ್ ರುಹುಲ್ಲಾ ಮೆಹ್ದಿ 3,56,866 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ:Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

ಪಶ್ಚಿಮ ಬಂಗಾಳದ ಬಹರಾಂಪುರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಯೂಸುಫ್ ಪಠಾಣ್ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಆರು ಬಾರಿಯ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 85,022 ಮತಗಳಿಂದ ಸೋಲಿಸಿದ್ದಾರೆ.

ಫಲಿತಾಂಶ ಏನಾಯಿತು?

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು 231 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ನೇತೃತ್ವದ ಎನ್ಡಿಎ 295 ಸ್ಥಾನಗಳನ್ನು ಗೆದ್ದಿದೆ. ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಚಿಸಲು ಮಿತ್ರಪಕ್ಷಗಳ ಬೆಂಬಲವನ್ನು ಅವಲಂಬಿಸಬೇಕಾಗುತ್ತದೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ 282 ಮತ್ತು 303 ಸ್ಥಾನಗಳನ್ನು ಗೆದ್ದಿತ್ತು. ಸರ್ಕಾರ ರಚಿಸಲು ಬೆಂಬಲವನ್ನು ಒಟ್ಟುಗೂಡಿಸುವ ಭರವಸೆಯಲ್ಲಿ ಭಾರತ ಬಣವು ಎನ್ಡಿಎ ಮಿತ್ರಪಕ್ಷಗಳೊಂದಿಗೆ ಮಾತುಕತೆಗಳನ್ನು ಕಳುಹಿಸುತ್ತಿದೆ ಎಂದು ವರದಿಯಾಗಿದೆ.

Continue Reading

ಪ್ರಮುಖ ಸುದ್ದಿ

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

‌Prajwal Revanna Case: ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿದೆ.

VISTARANEWS.COM


on

prajwal revanna case
Koo

ಬೆಂಗಳೂರು: ಅತ್ಯಾಚಾರ (Physical Abuse) ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ (‌Prajwal Revanna Case) ಪ್ರಕರಣದಲ್ಲಿ ಎಸ್‌ಐಟಿ (SIT) ತನಿಖೆ ತೀವ್ರಗೊಳಿಸಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಜ್ವಲ್‌ ಮನೆ ತಪಾಸಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಂಶಯಾಸ್ಪದ ಕಲೆಗಳುಳ್ಳ ಬೆಡ್‌ಶೀಟ್‌ ಪತ್ತೆಯಾಗಿದೆ.

ಮೇ 29ರಂದು ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆಯನ್ನು ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್‌ ಆಗಮನಕ್ಕೂ ಒಂದು ದಿನ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆಯಲ್ಲಿ ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದೆ. ಶೋಧದ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿದೆ.

ಸಿಂಗಲ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಮೇಲ್ವಾಸು ಕಂಡುಬಂದಿದೆ. ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಡಿಜೈನ್ ಉಳ್ಳ ವಾಲ್ ಪೇಪರ್ ತುಂಡು ದೊರೆತಿದೆ. ಸದ್ಯ ಎಸ್ಐಟಿ ಅಧಿಕಾರಿಗಳು ಈ ಸೊತ್ತುಗಳನ್ನ ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ. ಜಪ್ತಿಪಡಿಸಿದ ವಸ್ತುಗಳನ್ನು ತಜ್ಞರ ಪರೀಕ್ಷೆಗೆ ರವಾನಿಸಿದ್ದಾರೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ‌ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಮೊದಲ ಆರೋಪಿಯಾಗಿದ್ದು, ಜೈಲಿಗೆ ಹೋಗಿ ಈಗ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣದಲ್ಲಿ ಬೇಕಾಗಿರುವ ಭವಾನಿ ರೇವಣ್ಣ (Bhavani Revanna) ಇನ್ನೂ ಎಸ್‌ಐಟಿ ಕೈಗೆ ಸಿಕ್ಕಿಲ್ಲ.

ಪುರುಷತ್ವ ಪರೀಕ್ಷೆಗೆ ಕೋರ್ಟ್‌ ಸಮ್ಮತಿ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತನಿಖೆಗೆ ಅಸಹಕಾರ ನೀಡುತ್ತಿದ್ದರು. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Continue Reading
Advertisement
Govt Employees Association
ಕರ್ನಾಟಕ15 mins ago

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

pm narendra modi resignation
ಪ್ರಮುಖ ಸುದ್ದಿ22 mins ago

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

India vs Ireland
ಕ್ರೀಡೆ29 mins ago

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Uttarkashi Trekking Tragedy
ಪ್ರಮುಖ ಸುದ್ದಿ48 mins ago

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Election Results 2024
Lok Sabha Election 202458 mins ago

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024
ಪ್ರಮುಖ ಸುದ್ದಿ1 hour ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ1 hour ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Odisha Assembly election 2024
ದೇಶ2 hours ago

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Election results 2024
Lok Sabha Election 20242 hours ago

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Lakshmi Hebbalkar
ಪ್ರಮುಖ ಸುದ್ದಿ2 hours ago

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌