Kannada New Movie Rajaardhan new movie Hiranya shooting compleated Kannada New Movie : ‘ಬಿಚ್ಚುಗತ್ತಿ’ ಚಿತ್ರದಿಂದ ಗಮನ ಸೆಳೆದಿದ್ದ ರಾಜವರ್ಧನ್ ನಟನೆಯ ‘ಹಿರಣ್ಯ’ ಚಿತ್ರೀಕರಣ ಮುಕ್ತಾಯ - Vistara News

South Cinema

Kannada New Movie : ‘ಬಿಚ್ಚುಗತ್ತಿ’ ಚಿತ್ರದಿಂದ ಗಮನ ಸೆಳೆದಿದ್ದ ರಾಜವರ್ಧನ್ ನಟನೆಯ ‘ಹಿರಣ್ಯ’ ಚಿತ್ರೀಕರಣ ಮುಕ್ತಾಯ

Kannada New Movie: ಕಂಪ್ಲೀಟ್ ಆ್ಯಕ್ಷನ್ ಥ್ರಿಲ್ಲರ್ ಜತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kannada New Movie Rajaardhan new movie Hiranya shooting compleated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಸಾಲುಸಾಲು ಸಿನಿಮಾಗಳಲ್ಲಿ (Kannada New Movie) ಅಭಿನಯಿಸುತ್ತಿದ್ದಾರೆ. ರಾಜವರ್ಧನ್ ನಟನೆಯ ಬಹುನಿರೀಕ್ಷಿತ `ಹಿರಣ್ಯ’ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.

ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಕಿರು ಚಿತ್ರಗಳನ್ನು ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ. ರಾಜವರ್ಧನ್‌ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ.

ಕಂಪ್ಲೀಟ್ ಆ್ಯಕ್ಷನ್ ಥ್ರಿಲ್ಲರ್ ಜತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಡಿ ವಿಘ್ನೇಶ್ವರ ಯು ಹಾಗೂ ವಿಜಯ್‌ ಕುಮಾರ್‌ ಬಿ. ವಿ “ಹಿರಣ್ಯ’ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸಲಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನ ನಡೆಸುತ್ತಿದೆ.

ಇದನ್ನೂ ಓದಿ: Dingri Nagaraj | ʻಅಶ್ಲೀಲ ಮೆಸೇಜ್‌ ಕಳುಹಿಸಿ ಡಿಂಗ್ರಿ ನಾಗರಾಜ್‌ ಕುಚೇಷ್ಟೆ: ನಟಿ ರಾಣಿ ಮತ್ತೇನು ಹೇಳಿದರು?

ರಾಜವರ್ಧನ್ ಕೈಯಲ್ಲಿ ಈಗಾಗಲೇ ಪ್ರಣಯಂ, ಗಜರಾಮ ಸಿನಿಮಾಗಳಿವೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ. ಎ ಸಾರಥ್ಯದಲ್ಲಿ ʼಗಜರಾಮʼ ಮೂಡಿ ಬರುತ್ತಿದೆ. ‘ಬಿಚ್ಚುಗತ್ತಿ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗಮನಸೆಳೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Actor Dhanush: ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು.

VISTARANEWS.COM


on

Actor Dhanush unveils new poster from Ilaiyaraaja biopic
Koo

ಬೆಂಗಳೂರು: ಸಂಗೀತ ಮಾಂತ್ರಿಕ ಇಳಯರಾಜ ಮತ್ತು ಚಲನಚಿತ್ರ ನಿರ್ಮಾಪಕ ಮಣಿರತ್ನಂ ಅವರಿಗೆ ಇಂದು (ಜೂನ್ 2) ಜನುಮದಿನದ ಸಂಭ್ರಮ. ವಿಶೇಷ ಸಂದರ್ಭದಲ್ಲಿ, ನಟರಾದ ಕಮಲ್ ಹಾಸನ್ ಮತ್ತು ಧನುಷ್ ಶುಭ ಹಾರೈಸಿದರು. ಇಳಯರಾಜ 81ನೇ ವಂಸತಕ್ಕೆ ಕಾಲಿಟ್ಟಿದ್ದಾರೆ. ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು. ಕನ್ನಡದಲ್ಲೂ ಸಿನಿಮಾ ಬರಲಿದೆ.

ಇದೀಗ ಧನುಷ್ ತಮ್ಮ ಮುಂಬರುವ ಚಿತ್ರವಾದ ಇಳಯರಾಜ ಅವರ ಜೀವನಚರಿತ್ರೆಯ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಸಾವಿರಾರು ಜನರ ಮುಂದೆ ಹಾರ್ಮೋನಿಯಂ ಹಿಡಿದು ವೇದಿಕೆಯಲ್ಲಿ ನಿಂತಿರುವ ಪೋಸ್ಟರ್‌ ಹಂಚಿಕೊಂಡಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಮೇಷ್ಟ್ರೇ’ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಕಮಲ್ ಹಾಸನ್ ಎಕ್ಸ್‌ನಲ್ಲಿ ಇಳಯರಾಜ ಮತ್ತು ಮಣಿರತ್ನಂ ಜತೆಗಿರುವ ಫೋಟೊವನ್ನು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಡಬಲ್ ಹ್ಯಾಪಿನೆಸ್. ಸಂತೋಷವನ್ನು ಅಳೆಯಲು ಸಾಧ್ಯವೇ? ಇಂದು ನನ್ನ ದೊಡ್ಡಣ್ಣ ಹಾಗೂ ಚಿಕ್ಕಣ್ಣನ ಜನ್ಮದಿನವಾಗಿರುವುದರಿಂದ ಇದು ಸಂತೋಷದ ಕ್ಷಣವಾಗಿದೆ. ನನ್ನ ಪ್ರೀತಿಯ ಸಹೋದರ ಇಳಯರಾಜ ಅವರು ಸಂಗೀತದಲ್ಲಿ ಕಥೆಯನ್ನು ಹೇಳಲಿದ್ದಾರೆ. ನಿಮ್ಮಿಬ್ಬರಿಗೂ ಜನ್ಮದಿನದ ಶುಭಾಶಯಗಳು. ನಮ್ಮ ಮೂವರ ಪರಂಪರೆ ಶಾಶ್ವತವಾಗಿ ಮುಂದುವರಿಯಲಿ. ಹ್ಯಾಪಿ ಬರ್ತ್‌ಡೇ ಇಳಯರಾಜ ಮತ್ತು ಹ್ಯಾಪಿ ಬರ್ತ್‌ಡೇ ಮಣಿರತ್ನಂ. ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು.

ಚಿತ್ರವು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸೇರಿದಂತೆ ದೇಶಾದ್ಯಂತ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಇಷ್ಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ಸಾಕಾಗುವುದಿಲ್ಲ. ಇತರ ಹಲವು ಭಾರತೀಯ ಭಾಷೆಗಳಲ್ಲಿ ಬಿಡುಗಡೆಯಾಗಬೇಕು ಎಂದು ಕಮಲ್ ಹಾಸನ್ ಅಭಿಪ್ರಾಯಪಟ್ಟರು.

ಈ ಬಯೋಪಿಕ್‌ಗೆ ಇಳಯರಾಜ ಅವರೇ ಸ್ವತಃ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಚಿತ್ರಕ್ಕೆ ನೀರವ್ ಷಾ ಕ್ಯಾಮೆರಾ ನಿರ್ವಹಿಸುತ್ತಿದ್ದು, ಮುತ್ತುರಾಜ ನಿರ್ಮಾಣ ವಿನ್ಯಾಸವನ್ನು ನೋಡಿಕೊಳ್ಳುತ್ತಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕ ಮತ್ತು ಇತರ ವಿವರಗಳು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಇಳಯರಾಜ ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ. ಏಳು ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. 1,400 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. 20 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಸಂಗೀತವಾದ್ಯ ನೀಡಿದ್ದಾರೆ. ಭಾರತದ ಅದರಲ್ಲೂ ತಮಿಳಿನ ಜಾನಪದ ಸಂಗೀತವನ್ನು ಆಧರಿಸಿಯೇ ಹೆಚ್ಚಾಗಿ ಇವರು ಹಾಡು ಕಟ್ಟಿದ್ದಾರೆ. ಇದೀಗ ಇಳಯರಾಜ ಅವರ ಜೀವನ ಪ್ರಯಾಣದ ಕುರಿತಾದ ಚಿತ್ರ ಸೆಟ್ಟೇರಲು ಸಜ್ಜಾಗುತ್ತಿದೆ.

ಧನುಷ್ ಈಗಾಗಲೇ ʻಕುಬೇರʼ ಮತ್ತು ʻರಾಯನ್‌ʼ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ʻನಿಲವುಕು ಎನ್ಮೇಲ್ ಎನ್ನದಿ ಕೋಬಂʼ ಚಿತ್ರವನ್ನು ಸಹ ನಿರ್ದೇಶಿಸುತ್ತಿದ್ದಾರೆ.

Continue Reading

ಕಾಲಿವುಡ್

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Indian 2 Audio Launch: ಕಮಲ್ ಹಾಸನ್ ಅವರ ಪ್ರತಿಯೊಂದು ದೃಶ್ಯವೂ ಅಭಿಮಾನಿಗಳಿಗೆ ಟ್ರೀಟ್ ಆಗಿರುತ್ತದೆ ಎಂದು ನಿರ್ದೇಶಕ ಎಸ್.ಶಂಕರ್ ಹೇಳಿದರು. ಸಿನಿಮಾಗೆ ಅನಿರುದ್ಧ್ ರವಿಚಂದರ್ 6 ಉತ್ತಮ ಹಾಡುಗಳನ್ನು ನೀಡಿದ್ದಾರೆ ಎಂದರು. ಸದ್ಯ ರಜನಿಕಾಂತ್ ಜೊತೆಗಿನ ಮುಂಬರುವ ಚಿತ್ರದ ತಯಾರಿಯಲ್ಲಿ ಬ್ಯುಸಿಯಾಗಿರುವ ಲೋಕೇಶ್ ಕನಕರಾಜ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

VISTARANEWS.COM


on

Indian 2 Audio Launch Kamal Haasan Simbu Kajal Aggarwal
Koo

ಬೆಂಗಳೂರು: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ `ಇಂಡಿಯನ್ 2 (Indian 2 Audio Launch) ಬಿಡುಗಡೆಗೆ ಮುಂಚಿತವಾಗಿ, ಜೂನ್ 1ರಂದು ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಮೆಗಾ ಆಡಿಯೊ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ `ಇಂಡಿಯನ್ 2′ ಸಿನಿಮಾದ ಸಂಪೂರ್ಣ ತಾರಾ ಬಳಗ ಇತ್ತು.

ಕಮಲ್ ಹಾಸನ್ ಅವರ ಪ್ರತಿಯೊಂದು ದೃಶ್ಯವೂ ಅಭಿಮಾನಿಗಳಿಗೆ ಟ್ರೀಟ್ ಆಗಿರುತ್ತದೆ ಎಂದು ನಿರ್ದೇಶಕ ಎಸ್.ಶಂಕರ್ ಹೇಳಿದರು. ಸಿನಿಮಾಗೆ ಅನಿರುದ್ಧ್ ರವಿಚಂದರ್ 6 ಉತ್ತಮ ಹಾಡುಗಳನ್ನು ನೀಡಿದ್ದಾರೆ ಎಂದರು. ಸದ್ಯ ರಜನಿಕಾಂತ್ ಜೊತೆಗಿನ ಮುಂಬರುವ ಚಿತ್ರದ ತಯಾರಿಯಲ್ಲಿ ಬ್ಯುಸಿಯಾಗಿರುವ ಲೋಕೇಶ್ ಕನಕರಾಜ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಲೋಕೇಶ್ ಕನಕರಾಜ್ ಮಾತನಾಡಿ ʻʻಈ ಚಿತ್ರ ಘೋಷಣೆಯಾದಾಗಿನಿಂದ ಬಿಡುಗಡೆಗೆ ಕಾಯುತ್ತಿದ್ದೆ. ನಾನು ಕಮಲ್ ಸರ್, ಶಂಕರ್ ಸರ್ ಅಥವಾ ಅನಿರುದ್ಧ್ ಅವರನ್ನು ಭೇಟಿಯಾದಾಗಲೆಲ್ಲ, ನಾನು ಯಾವಾಗಲೂ ಅಪೆಡೇಟ್‌ ಕೇಳುತ್ತಲೇ ಇದ್ದೆʼʼಎಂದರು. ಕಾರ್ಯಕ್ರಮದಲ್ಲಿ ರಕುಲ್ ಪ್ರೀತ್ ಸಿಂಗ್ ಮತ್ತು ಕಾಜಲ್ ಅಗರ್ವಾಲ್ ಕೂಡ ಭಾಗವಹಿಸಿದ್ದರು. ಇಂಡಿಯನ್ 2 ಸಿನಿಮಾ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ವೇದಿಕೆಯಲ್ಲಿ ಪ್ರದರ್ಶನವನ್ನು ನೀಡಿದರು.

ಇದನ್ನೂ ಓದಿ: Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ.

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

Continue Reading

ಕಾಲಿವುಡ್

Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

Actor Suriya: ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

VISTARANEWS.COM


on

Actor Suriya visits temple ahead of Suriya 44
Koo

ಬೆಂಗಳೂರು: ನಟ ಸೂರ್ಯ (Actor Suriya) ಅವರು ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರೊಂದಿಗೆ ಮುದಿನ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಮುಂದಿನ ಸಿನಿಮಾಗೆ ತಾತ್ಕಾಲಿಕವಾಗಿ ‘ಸೂರ್ಯ 44’ ಎಂದು ಶಿರ್ಷಿಕೆ ಇಡಲಾಗಿದೆ. ನಟ ಶೀಘ್ರದಲ್ಲೇ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಚಿತ್ರದ ಚಿತ್ರೀಕರಣಕ್ಕೆ ಸೆಟ್‌ ಸಿದ್ಧಪಡಿಸಿದೆ ಎನ್ನಲಾಗಿದೆ. ಸೂರ್ಯ ಇತ್ತೀಚೆಗಷ್ಟೆ ‘ಕಂಗುವ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಆರಂಭಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿ ಪೂಜೆಯನ್ನು ಸಹ ಸೂರ್ಯ ಸಲ್ಲಿಸಿದ್ದಾರೆ.

ಇದೀಗ ನಟ ಸೂರ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿರುವ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಸೂರ್ಯ ಬಿಳಿ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಧೋತಿ ಮತ್ತು ಬಿಳಿ ಅಂಗಿಯಲ್ಲಿ ಕಂಡಿದ್ದಾರೆ.
‘ಚಿತ್ರದಲ್ಲಿ ಉರಿಯಾಡಿ ವಿಜಯ್ ಕುಮಾರ್ ಪ್ರತಿಸ್ಪರ್ಧಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ನಟರಾದ ಜಯರಾಮ್ ಮತ್ತು ಜೋಜು ಜಾರ್ಜ್ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದ ತಾರಾಗಣದ ಬಗ್ಗೆ ಅಧಿಕೃತ ಮಾಹಿತಿ ಚಿತ್ರತಂಡ ಹಂಚಿಕೊಂಡಿಲ್ಲ.

ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ: Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

ಸದ್ಯ ಸೂರ್ಯ ಅವರು ಶಿವ ನಿರ್ದೇಶನದ ‘ಕಂಗುವ’ ಚಿತ್ರದ ಬಿಡುಗಡೆಗಾಗಿ ಸೂರ್ಯ ಕಾಯುತ್ತಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Kiccha Sudeep: ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು.

VISTARANEWS.COM


on

Kichcha Sudeep joined hands with Sandesh
Koo

ಬೆಂಗಳೂರು: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ (kiccha sudeep) ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ “ಘೋಸ್ಟ್‌” ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಜತೆಗೆ ಕೈ ಜೋಡಿಸಿದ್ದಾರೆ ನಿರ್ಮಾಪಕ ಎನ್‌. ಸಂದೇಶ್‌.

ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು. ಇದೀಗ ಆ ಊಹೆ ನಿಜವಾಗಿದೆ. ಸಂದೇಶ್‌ ಪ್ರೊಡಕ್ಷನ್ಸ್‌ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಸೆಟ್ಟೇರಲಿದೆ.

ಇದನ್ನೂ ಓದಿ: Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

ಹಾಗಾದರೆ ಯಾವಾಗ ಶುರು?

ಸದ್ಯಕ್ಕೆ ಕಿಚ್ಚ ಸುದೀಪ್‌ ಸಂದೇಶ್‌ ಪ್ರೊಡಕ್ಷನ್ಸ್‌ ಅಡಿಯಲ್ಲಿ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಯಾವಾಗ ಶುರು, ನಿರ್ದೇಶಕರು ಯಾರು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಮಾಪಕರು ಘೋಷಣೆ ಮಾಡಲಿದ್ದಾರೆ. ಈ ನಡುವೆ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪ್ರಭುದೇವ ನಟನೆಯ “ವುಲ್ಫ್” ಸಿನಿಮಾ ರೆಡಿಯಾಗಿದೆ. ಸೃಜನ್‌ ಲೋಕೇಶ್‌ ಜತೆಗಿನ ಜಿಎಸ್‌ಟಿ ಚಿತ್ರದ ಶೂಟಿಂಗ್‌ ಕೆಲಸಗಳೂ ಮುಕ್ತಾಯವಾಗಿದ್ದು, ಬಿಡುಗಡೆಯ ಹೊಸ್ತಿಲಲ್ಲಿದೆ. ಇದರ ಜತೆಗೆ “ಘೋಸ್ಟ್‌ 2” ಅಥವಾ ಶಿವಣ್ಣನ ಜತೆಗಿನ “ದಳವಾಯಿ ಮುದ್ದಣ್ಣ”, “ಬೀರಬಲ್ 2” ಸಿನಿಮಾಗಳೂ ಸೆಟ್ಟೇರಲಿವೆ.

Continue Reading
Advertisement
MLC Election
ಕರ್ನಾಟಕ6 mins ago

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Actor Dhanush unveils new poster from Ilaiyaraaja biopic
ಕಾಲಿವುಡ್28 mins ago

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Murder Case
ಚಾಮರಾಜನಗರ28 mins ago

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Venkatesh Iyer Marriage
ಕ್ರೀಡೆ41 mins ago

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

West Bengal
ದೇಶ42 mins ago

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Electric shock Electronic City
ಬೆಂಗಳೂರು ಗ್ರಾಮಾಂತರ1 hour ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ1 hour ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್1 hour ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್1 hour ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 20242 hours ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು22 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌