horoscope today read your daily horoscope predictions for may 1, 2023Horoscope Today : ಕಟಕ ರಾಶಿಯವರ ಕನಸು ಇಂದು ನನಸಾಗುತ್ತದೆ; ನಿಮ್ಮ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today : ಕಟಕ ರಾಶಿಯವರ ಕನಸು ಇಂದು ನನಸಾಗುತ್ತದೆ; ನಿಮ್ಮ ಭವಿಷ್ಯ ಹೀಗಿದೆ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಚತುರ್ದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

rashi bhavishya today in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (18-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ಚತುರ್ದಶಿ 21:42 ವಾರ: ಗುರುವಾರ
ನಕ್ಷತ್ರ: ಅಶ್ವಿನಿ 07:21 ಯೋಗ: ಸೌಭಾಗ್ಯ 19:35
ಕರಣ: ವಿಷ್ಟಿ (ಭದ್ರ) 10:02
ಅಮೃತಕಾಲ: ಮಧ್ಯರಾತ್ರಿ 02 ಗಂಟೆ 40 ನಿಮಿಷದಿಂದ ಬೆಳಗಿನ ಜಾವ 04 ಗಂಟೆ 16 ನಿಮಿಷದವರೆಗೆ.

ಸೂರ್ಯೋದಯ : 05:54 ಸೂರ್ಯಾಸ್ತ : 06:39

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ. ಆರೋಗ್ಯದಲ್ಲಿ ಉತ್ತಮ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿನ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸ್ವಲ್ಪ ಖರ್ಚಿನ ದಿನ. ಬಹುದಿನಗಳ ಕನಸು ನನಸಾಗುವ ಸಮಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸುವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ ಅವಶ್ಯಕ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ. ಉದ್ಯೋಗ ಆರೋಗ್ಯದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ. ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

IPL 2024: 11ನೇ ಓವರ್​ನಲ್ಲಿ ಕ್ಲಾಸೆನ್ ಔಟಾದಾಗ ಎಸ್ಆರ್​ಎಚ್​ 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತ್ತು. ಇನ್ನೂ ಒಂಬತ್ತು ಓವರ್​ಗಳು ಬಾಕಿ ಇರುವಾಗ ಮತ್ತು ಮಧ್ಯದಲ್ಲಿ ರಾಹುಲ್ ತ್ರಿಪಾಠಿ ಉತ್ತಮವಾಗಿ ಸೆಟ್ ಆಗಿರುವುದರಿಂದ, ಎಸ್ಆರ್​ಎಚ್​​ ಉತ್ತಮ ಮೊತ್ತ ದಾಖಲಿಸಲು ಸಜ್ಜಾಗಿತ್ತು. ಆದಾಗ್ಯೂ, 14 ನೇ ಓವರ್​ನಲ್ಲಿ ತ್ರಿಪಾಠಿ ಮತ್ತು ಅಬ್ದುಲ್ ಸಮದ್ ನಡುವಿನ ತಪ್ಪು ಸಂವಹನವು ವಿಕೆಟ್​ ಪತನಕ್ಕೆ ಕಾರಣವಾಯಿತು.

VISTARANEWS.COM


on

IPL 2024
Koo

ಅಹಮದಾಬಾದ್​​: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್​​ ಹೈದರಾಬಾದ್​ (Sunrisers Hyderabad) ತಂಡಗಳ ನಡುವಿನ ಐಪಿಎಲ್ 2024 ರ (IPL 2024) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ರನೌಟ್ ಆದ ವೇಳೆ ಎಸ್​ಆರ್​ಎಚ್​ ತಂಡದೊಳಗೆ ತಲ್ಲಣಗಳೇ ಉಂಟಾಯಿತು. ತಂಡದ ಮಾಲಕಿ ಕಾವ್ಯಾ ಮಾರನ್ ಸಿಟ್ಟಿಗೆದ್ದು ಕೂಗಾಡಿದರೆ, ರನ್​ಔಟ್​ ಆದ ರಾಹುಲ್ ತ್ರಿಪಾಠಿ ಕಣ್ಣೀರು ಹಾಕಿದರು. ತ್ರಿಪಾಠಿ ಔಟ್ ಆಗಿರುವುದು ಎಸ್​ಆರ್​ಎಚ್​ ತಂಡದ ಕುಸಿತಕ್ಕೆ ಕಾರಣವಾಯಿತು.

ಬಲಗೈ ಬ್ಯಾಟರ್​ ಹೋರಾಟದ ಅರ್ಧಶತಕವನ್ನು ಗಳಿಸಿದ್ದರು ಮತ್ತು 14 ನೇ ಓವರ್​ನಲ್ಲಿ ಅವರ ಭರವಸೆಗಳು ಭಗ್ನಗೊಳ್ಳುವ ಮೊದಲು ಎಸ್ಆರ್​​ಎಚ್​ ತಂಡವನ್ನು ದೊಡ್ಡ ಮೊತ್ತಕ್ಕೆ ಏರಿಸುವ ಗುರಿ ಹೊಂದಿದ್ದರು. ಮಿಚೆಲ್ ಸ್ಟಾರ್ಕ್ ಟ್ರಾವಿಸ್ ಹೆಡ್ ಅವರನ್ನು ಡಕ್ ಔಟ್ ಮಾಡಿದ ನಂತರ ರಾಹುಲ್ ತ್ರಿಪಾಠಿ ಮೊದಲ ಓವರ್​ನಲ್ಲಿ ಬ್ಯಾಟಿಂಗ್​ಗೆ ಇಳಿದಿದ್ದರು. ಎರಡನೇ ಓವರ್​ನಲ್ಲಿ ವೈಭವ್ ಅರೋರಾ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡುವ ಮೂಲಕ ಎಸ್ಆರ್​ಎಚ್​​ 2 ವಿಕೆಟ್ ನಷ್ಟಕ್ಕೆ 13 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು.

ಪವರ್ ಪ್ಲೇ ಅಂತ್ಯಗೊಳ್ಳುವ ಮುನ್ನ ಎಸ್ ಆರ್ ಎಚ್ ಇನ್ನೂ ಎರಡು ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಸ್ಟಾರ್ಕ್ ನಿತೀಶ್ ರೆಡ್ಡಿ ಮತ್ತು ಶಹಬಾಜ್ ಅಹ್ಮದ್ ಅವರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹೈದರಾಬಾದ್ ಮೂಲದ ತಂಡವನ್ನು 4 ವಿಕೆಟ್ ನಷ್ಟಕ್ಕೆ 39 ಕ್ಕೆ ಇಳಿಸಿದರು. ನಂತರ ರಾಹುಲ್ ತ್ರಿಪಾಠಿ ಮತ್ತು ಹೆನ್ರಿಚ್​ ಕ್ಲಾಸೆನ್ ಐದನೇ ವಿಕೆಟ್​ಗೆ 62 ರನ್​ಗಳನ್ನು ಸೇರಿಸುವ ಮೂಲಕ ಉತ್ತಮ ಮೊತ್ತಕ್ಕೆ ಅಡಿಪಾಯ ಹಾಕಿದರು.

11ನೇ ಓವರ್​ನಲ್ಲಿ ಕ್ಲಾಸೆನ್ ಔಟಾದಾಗ ಎಸ್ಆರ್​ಎಚ್​ 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತ್ತು. ಇನ್ನೂ ಒಂಬತ್ತು ಓವರ್​ಗಳು ಬಾಕಿ ಇರುವಾಗ ಮತ್ತು ಮಧ್ಯದಲ್ಲಿ ರಾಹುಲ್ ತ್ರಿಪಾಠಿ ಉತ್ತಮವಾಗಿ ಸೆಟ್ ಆಗಿರುವುದರಿಂದ, ಎಸ್ಆರ್​ಎಚ್​​ ಉತ್ತಮ ಮೊತ್ತ ದಾಖಲಿಸಲು ಸಜ್ಜಾಗಿತ್ತು. ಆದಾಗ್ಯೂ, 14 ನೇ ಓವರ್​ನಲ್ಲಿ ತ್ರಿಪಾಠಿ ಮತ್ತು ಅಬ್ದುಲ್ ಸಮದ್ ನಡುವಿನ ತಪ್ಪು ಸಂವಹನವು ವಿಕೆಟ್​ ಪತನಕ್ಕೆ ಕಾರಣವಾಯಿತು.

ಸುನಿಲ್ ನರೈನ್ ಎಸೆದ ಓವರ್​ನ ಎರಡನೇ ಎಸೆತದಲ್ಲಿ ಸಮದ್ ಆಂಡ್ರೆ ರಸೆಲ್ ಅವರ ಕಡೆಗೆ ಚೆಂಡನ್ನು ಹೊಡೆದರು. ಕೆಕೆಆರ್ ಆಲ್ರೌಂಡರ್ ಉತ್ತಮ ಡೈವಿಂಗ್ ಮಾಡಿ ಚೆಂಡು ತಡೆದರು. ತ್ರಿಪಾಠಿ ಚೆಂಡನ್ನು ನೋಡುತ್ತಿರುವಾಗ ಸಮದ್ ಏಕಾಂಗಿಯಾಗಿ ಹೊರಟರು. ರಸೆಲ್ ಎದ್ದು ನಿಂತು ವಿಕೆಟ್ ಕೀಪರ್ ರಹಮಾನುಲ್ಲಾ ಗುರ್ಬಾಜ್ ಗೆ ಚೆಂಡನ್ನು ಎಸೆದಾಗ ತ್ರಿಪಾಠಿ ಪಿಚ್ ನ ಮಧ್ಯದಲ್ಲಿ ಸಿಲುಕಿಕೊಂಡರು. ಎಸ್ ಆರ್ ಎಚ್ ಸಿಇಒ ಕಾವ್ಯಾ ಮಾರನ್ ಅವರು ತ್ರಿಪಾಠಿ ಅವರ ರನ್ ಔಟ್ ಅನ್ನು ನೋಡಿ ಕೋಪಗೊಂಡರು.

ಇದನ್ನೂ ಓದಿ: IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

ಬಲಗೈ ಬ್ಯಾಟ್ಸ್ಮನ್ ತಮ್ಮ ಮಾಜಿ ತಂಡದ ವಿರುದ್ಧ 35 ಎಸೆತಗಳಲ್ಲಿ 55 ರನ್ ಗಳಿಸಿದ ನಂತರ ನಿರ್ಗಮಿಸಿದರು. ಔಟಾದ ನಂತರ, ಬೇಸರಗೊಂಡ ರಾಹುಲ್ ಮೆಟ್ಟಿಲುಗಳ ಬಳಿ ಮೊಣಕಾಲಿನ ಮೇಲೆ ತಲೆಯಿಟ್ಟು ಕುಳಿತು, ತನ್ನ ವಜಾದ ಬಗ್ಗೆ ಅಳುತ್ತಿರುವುದು ಕಂಡುಬಂದಿದೆ.

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

IPL 2024: ಮುಂಬೈ ಇಂಡಿಯನ್ಸ್​ ದೊಡ್ಡ ಬಳಗವನ್ನು ಹೊಂದಿದೆ. ನಾನು ಆ ತಂಡಕ್ಕೆ ಆಡಿದ್ದೇನೆ. ಮ್ಯಾನೇಜ್ಮೆಂಟ್ ಉತ್ತಮವಾಗಿದೆ. ತಂಡವನ್ನು ಉತ್ತಮವಾಗಿ ನಡೆಸುತ್ತದೆ. ಆದರೆ ಈ ನಿರ್ಧಾರವು ಹಿನ್ನಡೆಯನ್ನುಂಟು ಮಾಡಿದೆ. ಬಹುಶಃ ಭವಿಷ್ಯವನ್ನು ಹುಡುಕುವ ಆಲೋಚನೆ ಇತ್ತು. ಅವರು ಒಗ್ಗಟ್ಟಾಗಿ ಕಾಣದ ಕಾರಣ ಅದು ತಂಡದೊಂದಿಗೆ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ತೋರುತ್ತದೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ ನೀರಸ ಪ್ರದರ್ಶನ ತೋರಿದೆ. ಆಡಿರುವ 14 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಐದು ಬಾರಿಯ ಚಾಂಪಿಯನ್ ತಂಡದ ನಿರಾಶಾದಾಯಕ ಪ್ರದರ್ಶನದ ಬಗ್ಗೆ ಜೋರು ಚರ್ಚೆಗಳು ನಡೆದಿವೆ. ಫ್ರಾಂಚೈಸಿಯ ಅಭಿಮಾನಿಗಳು ಮತ್ತು ಕೆಲವು ಪಂಡಿತರು ಎಂಐ ನಾಯಕ ಹಾರ್ದಿಕ್ ಪಾಂಡ್ಯ ಅವರ ಸಾಮಾನ್ಯ ನಾಯಕತ್ವದ ಕೌಶಲ್ಯಕ್ಕಾಗಿ ಅವರನ್ನು ಟೀಕಿಸಿದ್ದಾರೆ. ಅವರ ಹುಂಬತನದಿಂದಾಗಿ ತಂಡ ಸೋತಿದೆ ಎಂಬುದಾಗಿ ಎಲ್ಲರೂ ಹೇಳಿಕೆ ನೀಡಿದ್ದಾರೆ. ಇದೀಗ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಬೇರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಾಂಡ್ಯ ಬೆಂಬಲಕ್ಕೆ ನಿಂತ ಅವರು ಸೋಲಿಗೆ ರೋಹಿತ್​ ಶರ್ಮಾ ಕಾರಣ ಎಂದು ಹೇಳಿದ್ದಾರೆ.

ಐಪಿಎಲ್ 2024 ಕ್ಕೆ ಮುಂಚಿತವಾಗಿ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯಿಂದ ಮುಂಬೈ ಇಂಡಿಯನ್ಸ್ ದಾಖಲೆಯ ಒಪ್ಪಂದಕ್ಕೆ ಖರೀದಿಸಿತ್ತು. ನಂತರ, ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮುಂಬೈ ನಾಯಕನನ್ನಾಗಿ ಮಾಡಲಾಯಿತು. ಈ ವೇಳೆ ಅಭಿಮಾನಿಗಳಿಂದ ಕೆಟ್ಟ ಪ್ರತಿಕ್ರಿಯೆ ವ್ಯಕ್ತಗೊಂಡಿತು. ಈ ಕುರಿತ ಕೋಲಾಹಲ ಉಂಟಾಯಿತು. ಅದಕ್ಕೆ ತಕ್ಕ ಹಾಗೆ ತಂಡ ಕೆಟ್ಟದಾಗಿ ಸೋತಿತು. ಎಂಐ ಶಿಬಿರದ ಭಾಗವಾಗಿದ್ದ ಹರ್ಭಜನ್ ಸಿಂಗ್ ಈ ಕುರಿತು ಮಾತನಾಡಿದ್ದು, ಮುಂದಿನ ಋತುವಿನಲ್ಲಿ ಬಲವಾಗಿ ಪುಟಿದೇಳಲು ಪಾಂಡ್ಯ ಮತ್ತು ಮ್ಯಾನೇಜ್ಮೆಂಟ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ ಗೆಲುವಿನ ಕೆಚ್ಚು ತೋರಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದಾರೆ.

ಮುಂಬೈ ಇಂಡಿಯನ್ಸ್​ ದೊಡ್ಡ ಬಳಗವನ್ನು ಹೊಂದಿದೆ. ನಾನು ಆ ತಂಡಕ್ಕೆ ಆಡಿದ್ದೇನೆ. ಮ್ಯಾನೇಜ್ಮೆಂಟ್ ಉತ್ತಮವಾಗಿದೆ. ತಂಡವನ್ನು ಉತ್ತಮವಾಗಿ ನಡೆಸುತ್ತದೆ. ಆದರೆ ಈ ನಿರ್ಧಾರವು ಹಿನ್ನಡೆಯನ್ನುಂಟು ಮಾಡಿದೆ. ಬಹುಶಃ ಭವಿಷ್ಯವನ್ನು ಹುಡುಕುವ ಆಲೋಚನೆ ಇತ್ತು. ಅವರು ಒಗ್ಗಟ್ಟಾಗಿ ಕಾಣದ ಕಾರಣ ಅದು ತಂಡದೊಂದಿಗೆ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ತೋರುತ್ತದೆ. ಇಷ್ಟು ದೊಡ್ಡ ತಂಡವಾಗಿದ್ದು ನನ್ನ ಹಳೆಯ ತಂಡವು ಇಂತಹ ಕಳಪೆ ಫಲಿತಾಂಶಗಳನ್ನು ಎದುರಿಸುತ್ತಿರುವುದನ್ನು ನೋಡಿ ನನಗೆ ನೋವಾಗುತ್ತದೆ ಎಂದು ಹರ್ಭಜನ್ ಹೇಳಿದ್ದಾರೆ.

ಇದನ್ನೂ ಓದಿ: Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

ಬಹುಶಃ ನಿರ್ಧಾರದ ಸಮಯ ಸರಿಯಾಗಿರಲಿಲ್ಲ. ಒಂದು ವರ್ಷದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದರೆ ಉತ್ತಮವಾಗುತ್ತಿತ್ತು. ಇದು ಹಾರ್ದಿಕ್ ಅವರ ತಪ್ಪಲ್ಲ, ಅವರು ಜಿಟಿಯಲ್ಲಿ ನಿಜವಾಗಿಯೂ ಉತ್ತಮವಾಗಿ ನಾಯಕರಾಗಿದ್ದರು. ನಾಯಕ ಯಾರೇ ಆಗಿರಲಿ ಆಟಗಾರರನ್ನು ಒಗ್ಗಟ್ಟಾಗಿಡುವುದು ಹಿರಿಯ ಆಟಗಾರರ ಕರ್ತವ್ಯ. ಕ್ಯಾಪ್ಟನ್ ಗಳು ಬರುತ್ತಾರೆ ಮತ್ತು ಹೋಗುತ್ತಾರೆ. ಆದರೆ ಅವರು ಒಂದು ತಂಡದಂತೆ ಆಡಲಿಲ್ಲ, “ಎಂದು ಸಿಂಗ್ ಹೇಳಿದರು.

2024ರ ಟಿ20 ವಿಶ್ವಕಪ್ ಕಡೆಗೆ ಗಮನ

ಐಪಿಎಲ್ 2024 ತನ್ನ ಟೂರ್ನಿಯ ಅಂತ್ಯವನ್ನು ತಲುಪಿದ್ದು, ಪ್ಲೇಆಫ್ ಹಂತಗಳು ಸಮೀಪಿಸುತ್ತಿರುವುದರಿಂದ, ಗಮನವು ಶೀಘ್ರದಲ್ಲೇ ಐಸಿಸಿ ಟಿ 20 ವಿಶ್ವಕಪ್ 2024 ರತ್ತ ತಿರುಗುತ್ತದೆ. ಜೂನ್ 2ರಿಂದ ಟೂರ್ನಿ ಆರಂಭವಾಗಲಿದ್ದು, ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಪಾಂಡ್ಯ ಉಪನಾಯಕರಾಗಿದ್ದಾರೆ. ಶುಬ್ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಆಟಗಾರರು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರಿಂದ ಕೆಲವೊಂದು ಪ್ರಶ್ನೆಗಳು ಉಳಿದುಕೊಂಡಿವೆ.

Continue Reading

ದೇಶ

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Narendra Modi: ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ ಎಂಬುದಾಗಿ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜೂನ್‌ 1ರಂದು ವಾರಾಣಸಿಯಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆಯ (Lok Sabha Election 2024) 5 ಹಂತದ ಮತದಾನ ಮುಕ್ತಾಯವಾಗಿದೆ. ಇದರೊಂದಿಗೆ ದೇಶಾದ್ಯಂತ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯವಾದಂತಾಗಿದೆ. ಇನ್ನೂ ಎರಡು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ಎಲ್ಲ ಪಕ್ಷಗಳ ಪ್ರಮುಖ ನಾಯಕರು, ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ಮತದಾನ ಪ್ರಮಾಣ ಹೆಚ್ಚಿಸಲು ಮಹಿಳೆಯರಿಗೆ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. “ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸುವ ಮೂಲಕ ಮತದಾನ ಹೆಚ್ಚಿಸಿ” ಎಂದು ವಾರಾಣಸಿ (Varanasi) ಮಹಿಳೆಯರಿಗೆ ಮೋದಿ ಸಲಹೆ ನೀಡಿದ್ದಾರೆ.

“ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ. ಬೆಳಗ್ಗೆ 10 ಗಂಟೆಯೊಳಗೆ ಮತಗಟ್ಟೆಯ ಬಳಿ ಹೀಗೆ ಮಾಡಿದರೆ ಖಂಡಿತವಾಗಿಯೂ ಹೆಚ್ಚಿನ ಪ್ರಮಾಣದ ಮತದಾನ ದಾಖಲಾಗುತ್ತದೆ. ಪ್ರತಿಯೊಂದು ಮತಗಟ್ಟೆಗಳಲ್ಲೂ ಹೆಣ್ಣುಮಕ್ಕಳು ಹೀಗೆ ಮಾಡುವ ಮೂಲಕ ಮತದಾನದ ಜಾಗೃತಿ ಮೂಡಿಸಬೇಕು” ಎಂದು ವಾರಾಣಸಿಯಲ್ಲಿ ಮಹಿಳೆಯರಿಗೆ ಮೋದಿ ಕರೆ ನೀಡಿದ್ದಾರೆ.

ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ

ವಾರಾಣಸಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಅವರು ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. “ಇಂಡಿಯಾ ಒಕ್ಕೂಟವು ಎಂದಿಗೂ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ. ಅವರು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸಿದರು. ಇಂಡಿಯಾ ಒಕ್ಕೂಟದ ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೇ ಹೆಚ್ಚು ತೊಂದರೆಯಾಗುತ್ತದೆ. ಹೆಣ್ಣುಮಕ್ಕಳಿಗೆ ತೊಂದರೆಯಾದರೆ, ಹುಡುಗರು ಎಂದ ಮೇಲೆ ತಪ್ಪು ಮಾಡುತ್ತಾರೆ ಎಂದು ಹೇಳುತ್ತಾರೆ. ಆದರೆ, ಯೋಗಿ ಆದಿತ್ಯನಾಥ್‌ ಅವರು ಸಿಎಂ ಆದ ಮೇಲೆ ತಪ್ಪು ಮಾಡುವ ಹುಡುಗರಿಗೆ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದ ನಮ್ಮ ಸಹೋದರ-ಸಹೋದರಿಯರು ಸುರಕ್ಷಿತವಾಗಿದ್ದಾರೆ” ಎಂದರು.

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Continue Reading

ದೇಶ

ಐಎಎಸ್‌ ಆಫೀಸರ್‌ ಆಗಿರುವ ಮಾಜಿ ಪತ್ನಿಯಿಂದ ನನ್ನ ಮನೆಗೆ ವಿದ್ಯುತ್‌ ಕಟ್; ಇದು ಐಪಿಎಸ್‌ ಆಫೀಸರ್‌ ಅಳಲು!

ತಮಿಳುನಾಡಿನಲ್ಲಿ ಐಎಎಸ್‌ ಅಧಿಕಾರಿಯಾಗಿರುವ ಬೀಲಾ ವೆಂಕಟೇಶನ್‌ ಹಾಗೂ ಐಪಿಎಸ್‌ ಅಧಿಕಾರಿ ರಾಜೇಶ್‌ ದಾಸ್‌ ಅವರು ಮಾಜಿ ಪತಿ-ಪತ್ನಿಯಾಗಿದ್ದು, ಇವರು ವಿಚ್ಛೇದನದ ಬಳಿಕವೂ ಜಗಳ ಮುಂದುವರಿಸಿದ್ದಾರೆ. ಅಧಿಕಾರಿಗಳಿಬ್ಬರ ಜಗಳವು ಬೀದಿಗೆ ಬಂದಿರುವುದೇಕೆ? ಇವರ ಆರೋಪಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Tamil Nadu Officers
Koo

ಚೆನ್ನೈ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಇನ್ನು, ಮದುವೆಯಾದ ಬಳಿಕ, ಹೊಂದಾಣಿಕೆಯಾಗದೆ, ಉಂಡು ಮಲಗಿದ ಮೇಲೂ ಜಗಳ ಮುಂದುವರಿಯು ಕಾರಣದಿಂದ ವಿಚ್ಛೇದನ ಪಡೆದವರು ತಮ್ಮ ಮಾಡಿಗೆ ತಾವು ಇರುತ್ತಾರೆ. ಆದರೆ, ತಮಿಳುನಾಡಿನಲ್ಲಿ (Tamil Nadu) ಐಎಎಸ್‌ ಅಧಿಕಾರಿಯಾಗಿರುವ ಬೀಲಾ ವೆಂಕಟೇಶನ್‌ (Beela Venkatesan) ಹಾಗೂ ಐಪಿಎಸ್‌ ಅಧಿಕಾರಿ ರಾಜೇಶ್‌ ದಾಸ್‌ (Rajesh Das) ಅವರು ಮಾಜಿ ಪತಿ-ಪತ್ನಿಯಾಗಿದ್ದು, ಇವರು ವಿಚ್ಛೇದನದ ಬಳಿಕವೂ ಜಗಳ ಮುಂದುವರಿಸಿದ್ದಾರೆ. “ಐಎಎಸ್‌ ಅಧಿಕಾರಿಯಾಗಿರುವ ಮಾಜಿ ಪತ್ನಿಯು ನನ್ನ ಮನೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾಳೆ” ಎಂಬುದಾಗಿ ರಾಜೇಶ್‌ ದಾಸ್‌ ಆರೋಪಿಸಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

“ನಾನು ಮನೆಯಲ್ಲಿ ಇದ್ದಾಗಲೇ ಮೇ 20ರಂದು ಮನೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ತಮಿಳುನಾಡು ಉತ್ಪಾದನೆ ಮತ್ತು ವಿತರಣೆ ನಿಗಮದ (TANGEDCO) ಅಧಿಕಾರಿಗಳು ನನ್ನ ಅಭಿಪ್ರಾಯವನ್ನೂ ಪಡೆಯದೆ ವಿದ್ಯುತ್‌ ಕಡಿತಗೊಳಿಸಲಾಗಿದೆ. ನನ್ನ ಮನೆಯ ವಿದ್ಯುತ್‌ ಶುಲ್ಕವನ್ನು ಸರಿಯಾದ ಸಮಯಕ್ಕೆ ಪಾವತಿ ಮಾಡಲಾಗಿದೆ. ವಿದ್ಯುತ್‌ ಕಡಿತಗೊಳಿಸುವ ಕುರಿತು ಕೋರ್ಟ್‌ ಆದೇಶವೂ ಇಲ್ಲ. ಹೀಗಿದ್ದರೂ, ಇಂಧನ ಇಲಾಖೆ ಕಾರ್ಯದರ್ಶಿ ಆಗಿರುವ, ನನ್ನ ಮಾಜಿ ಪತ್ನಿ ಬೀಲಾ ವೆಂಕಟೇಶನ್‌ ಅವರೇ ವಿದ್ಯುತ್‌ ಕಡಿತಗೊಳಿಸಿದ್ದಾರೆ” ಎಂಬುದಾಗಿ ರಾಜೇಶ್‌ ದಾಸ್‌ ಅವರು ಆರೋಪಿಸಿದ್ದಾರೆ.

ವಿಚ್ಛೇದನಕ್ಕೂ ಮೊದಲು ರಾಜೇಶ್‌ ದಾಸ್ ಹಾಗೂ ಬೀಲಾ ವೆಂಕಟೇಶನ್.‌

ಬೀಲಾ ವೆಂಕಟೇಶನ್‌ ಪ್ರತಿಕ್ರಿಯೆ ಏನು?

ರಾಜೇಶ್‌ ದಾಸ್‌ ಅವರ ಆರೋಪಗಳಿಗೆ ಬೀಲಾ ವೆಂಕಟೇಶನ್‌ ಅವರು ಪ್ರತಿಕ್ರಿಯಿಸಿದ್ದು, ಅವರ ಆರೋಪಗಳನ್ನು ನಿರಾಕರಿಸಿದ್ದಾರೆ. “ಕಳೆದ ಮೂರು ತಿಂಗಳಿಂದ ಮನೆಯಲ್ಲಿ ಯಾರೂ ಇಲ್ಲ. ಆದರೆ, ನನ್ನ ಹೆಸರಿನಲ್ಲಿ ವಿದ್ಯುತ್‌ ಬಿಲ್‌ ಬರುತ್ತದೆ, ಆ ಜಾಗವೂ ನನ್ನ ಹೆಸರಲ್ಲೇ ಇದೆ. ಹಾಗಾಗಿ, ನಾನು ಅನವಶ್ಯಕವಾಗಿ ದುಡ್ಡು ವ್ಯಯಿಸಲು ಇಚ್ಛಿಸುವುದಿಲ್ಲ. ರಾಜೇಶ್‌ ದಾಸ್‌ ಅವರೇ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂಬ ಕುರಿತು ದಾಖಲೆ ಕೊಡಿ, ನೋಂದಣಿ ಬದಲಾಯಿಸಿಕೊಳ್ಳಿ ಎಂಬುದಾಗಿ ಮನವಿ ಮಾಡಿದರೂ ದಾಖಲೆ ಸಲ್ಲಿಸಿಲ್ಲ. ಅವರು ದಾಖಲೆ ನೀಡದ ಕಾರಣ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡಿದ್ದಾರೆ” ಎಂದಿದ್ದಾರೆ.

ತಮಿಳುನಾಡು ಮಾಜಿ ಡಿಜಿಪಿ ಆಗಿರುವ ರಾಜೇಶ್‌ ದಾಸ್‌ ಅವರು ತಮ್ಮ ಅಧೀನದಲ್ಲಿ ಕೆಲಸ ಮಾಡುವ ಮಹಿಳಾ ಐಪಿಎಸ್‌ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಅಪರಾಧಿ ಎಂದು ಅಧೀನ ನ್ಯಾಯಾಲಯವು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ಅವರು ಮದ್ರಾಸ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಇವರ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ನಿರಾಕರಿಸಿತ್ತು. ಆದರೆ, ಇವರ ಬಂಧನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಮೇ 17ರಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಇದನ್ನೂ ಓದಿ: Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Continue Reading
Advertisement
IPL 2024
ಕ್ರೀಡೆ4 mins ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ15 mins ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ18 mins ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Artificially ripened fruits
ಕರ್ನಾಟಕ18 mins ago

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Legal action if drought relief money is credited to farmers loans says Dr Sushila
ಯಾದಗಿರಿ19 mins ago

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Shree Bevinalamma Devi Jaladhi Mahotsav celebration in koratagere taluk
ತುಮಕೂರು22 mins ago

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

udupi Shree Bhandarakeri math annual award programme in bengaluru
ಕರ್ನಾಟಕ24 mins ago

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

5 foreign coins found in anjanadri temple hundi counting
ಕರ್ನಾಟಕ26 mins ago

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

IPL 2024
ಪ್ರಮುಖ ಸುದ್ದಿ44 mins ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Narendra Modi
ದೇಶ51 mins ago

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು9 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು11 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌