Sworn in ceremony: traffc changes in city on May 20th Karnataka CM : ಇಂದು ಸಿಎಂ ಪದಗ್ರಹಣ; ರಸ್ತೆ ಸಂಚಾರ ಬದಲಾವಣೆಯ ಫುಲ್‌ ಡಿಟೇಲ್ಸ್‌ ಇಲ್ಲಿದೆ - Vistara News

ಕರ್ನಾಟಕ

Karnataka CM : ಇಂದು ಸಿಎಂ ಪದಗ್ರಹಣ; ರಸ್ತೆ ಸಂಚಾರ ಬದಲಾವಣೆಯ ಫುಲ್‌ ಡಿಟೇಲ್ಸ್‌ ಇಲ್ಲಿದೆ

Karnataka CM: ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂ ಸುತ್ತಮುತ್ತ ಇಂದು ಸಂಚಾರ ಬದಲಾವಣೆ ಮಾಡಲಾಗಿದೆ.

VISTARANEWS.COM


on

Sworn in ceremony: traffc changes in city on May 20th
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Karnataka CM) ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ (Deputy Chief Minister) ಡಿ.ಕೆ. ಶಿವಕುಮಾರ್‌ ಅವರ ಪದಗ್ರಹಣ ಕಾರ್ಯಕ್ರಮ ಇಂದು (ಶನಿವಾರ, ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava stadium) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಕೆಲವೊಂದು ಸಂಚಾರ ಬದಲಾವಣೆಗಳನ್ನು ಮಾಡಲಾಗಿದೆ.

ಕಂಠೀರವ ಸ್ಟೇಡಿಯಂನ್ನು ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಈ ರಸ್ತೆಗಳಲ್ಲಿ ಸಂಚಾರ ಮಾಡಬೇಕಾದರೆ ಗಮನವಿಡಿ ಎಂದು ಸೂಚಿಸಲಾಗಿದೆ.

ಹಾಗಾದ್ರೆ ಯಾವ್ಯಾವ ಮಾರ್ಗದಲ್ಲಿ ಸಂಚಾರಕ್ಕೆ ಬ್ರೇಕ್?

1. ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್‌ ವೃತ್ತದ ಕಡೆಗೆ ತೆರಳುವ ವಾಹನಗಳನ್ನು ಪಟ್ಟಾ ಜಂಕ್ಷನ್‌ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗು ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ ತಿರುವು ಪಡೆದು ಕೆ.ಆರ್.ಸರ್ಕಲ್ ಮೂಲಕ ಸಂಚರಿಸಬಹುದು.

2.ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ರಸ್ತೆಯಲ್ಲಿ ಹೋಗುವವರು ಕಬ್ಬನ್ ರಸ್ತೆಯ ಮೂಲಕ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್ ಸೆಂಟರ್‌ ಕಡೆಗೆ ಸಂಚರಿಸಬಹುದು.

3. ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಪಾರ್ಕಿಂಗ್‌ ವ್ಯವಸ್ಥೆ ಎಲ್ಲೆಲ್ಲಿ?

1. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸೆಂಟ್ ಜೋಸೆಫ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
2. ಇತರೆ ವಾಹನಗಳನ್ನು ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗು ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಬಹುದು.
3.ಆರ್.ಆರ್.ಎಂ.ಆರ್ ರಸ್ತೆ ಹಾಗೂ ಕಸ್ತೂರ್ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.
4.ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರು ತಮ್ಮ ತಮ್ಮ ವಾಹನಗಳಿಂದ ಇಳಿದು ಕೆ.ಬಿ. ರಸ್ತೆ, ಆರ್.ಆರ್.ಎಂ.ಆರ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ಗಳ ಮೂಲಕ ನಡೆದು ಒಳಗೆ ಪ್ರವೇಶಿಸಬೇಕಾಗಿರುತ್ತದೆ ಹಾಗೂ ತಮ್ಮ ವಾಹನಗಳನ್ನು ಮೇಲ್ಕಂಡ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಲು ಮನವಿ ಮಾಡಲಾಗಿದೆ.
5.ಸಾರ್ವಜನಿಕರು ಕೆಜಿ ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ, ರಿಚ್ ಮಂಡ್ ಸರ್ಕಲ್ ಬಳಿ/ಕ್ವೀನ್ಸ್ ಸರ್ಕಲ್ ಬಳಿ ವಾಹನದಿಂದ ಇಳಿದು ತಮ್ಮ ವಾಹನಗಳನ್ನು ಅರಮನೆ ಮೈದಾನದಲ್ಲಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಸಮಾರಂಭಕ್ಕೆ ಹೋಗುವಾಗ ಈ ವಸ್ತುಗಳು ನಿಷೇಧ

1. ಸಮಾರಂಭ ಸ್ಥಳದಲ್ಲಿ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳನ್ನು ಬೆಂಕಿಪಟ್ಟಣ, ಲೈಟರ್, ಇತ್ಯಾದಿಗಳನ್ನು ಕೊಂಡೊಯ್ಯಬಾರದು.
2. ರಸ್ತೆ ಬಳಕೆದಾರರು ಸಂಚಾರ ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸಬೇಕು
3. ನಗರದ ಯಾವುದಾದರೂ ರಸ್ತೆಯಲ್ಲಿ ವಾಹನ ಕೆಟ್ಟು ನಿಂತಲ್ಲಿ ಅಥವಾ ಅಪಘಾತ ಸಂಭವಿಸಿದಲ್ಲಿ ಗಮನಿಸಿದ ಕೂಡಲೇ ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿಕೆ

ಸಿಇಟಿ ಪರೀಕ್ಷೆ ಬರೆಯುವವರು 8.30ರೊಳಗೆ ಪರೀಕ್ಷಾ ಕೇಂದ್ರ ತಲುಪಿ

1.ಮುಖ್ಯ ಕೆಲಸಗಳಿಗೆ ಹಾಗು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಇಚ್ಛಿಸುವವರು ಸಾಕಷ್ಟು ಮುಂಚೆಯೇ ಪ್ರಯಾಣವನ್ನು ಪ್ರಾರಂಭಿಸಲು ಪೊಲೀಸ್‌ ಇಲಾಖೆ ಮನವಿ ಮಾಡಿದೆ.
2. ಸಿಇಟಿ ಪರೀಕ್ಷೆಗೆ ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚನೆ ನೀಡಲಾಗಿದೆ.
3. ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.
4. ಮಧ್ಯಾಹ್ನದ ಸಿಇಟಿ ಪರೀಕ್ಷೆಗೆ ಸೆಂಟ್ ಜೋಸೆಫ್ ಪಿಯು ಇಂಡಿಯನ್ ಕಾಲೇಜು, ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಸೆಂಟ್ ಮಾರ್ಕ್ಸ್ ರಸ್ತೆ, ವಿಠಲ್ ಮಲ್ಯ ರಸ್ತೆ ಮೂಲಕ ಬಂದು ಯೂಬಿ ಸಿಟಿಯ ಮುಂಭಾಗದ ಗೇಟ್‌ನಿಂದ ಕಾಲೇಜಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
5.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಸೆಂಟ್ ಜೋಸೆಫ್ ಪಿಯು ಕಾಲೇಜಿನ ಅಧಿಕಾರಿಗಳು ಸೆಂಟ್ ಜೋಸೆಫ್ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ಉಟೋಪಚಾರವನ್ನು ಏರ್ಪಡಿಸಿರುತ್ತಾರೆ.

ಇದನ್ನೂ ಓದಿ: KCET 2023 : ಸಿಇಟಿಯಂದೇ ಪ್ರಮಾಣ; ಇದೇ ದಿನ ಬೇಕಿತ್ತಾ ಎಂದು ಪ್ರಶ್ನಿಸಿದ ಸಂತೋಷ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

State Education Policy: 2024-25ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಶಿಕ್ಷಣ ನೀತಿ ಆಯೋಗವು ನೀಡಿರುವ ಮಧ್ಯಂತರ ವರದಿಗಳ ಶಿಫಾರಸುಗಳ ಅನ್ವಯ ಪದವಿ ಅವಧಿ ಹಾಗೂ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

VISTARANEWS.COM


on

State Education Policy
Koo

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ (State Education Policy) ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ವರ್ಷಗಳ ಪದವಿಯನ್ನು ಕೈಬಿಟ್ಟು, ಈ ಹಿಂದೆ ಇದ್ದ ಮೂರು ವರ್ಷಗಳ ಪದವಿಯನ್ನೇ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಎನ್‌ಇಪಿ ರದ್ದು ಪಡಿಸುವುದಾಗಿ ಘೋಷಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರೊ. ಸುಖ್‌ದೇವ್‌ ಥೋರಟ್‌ ನೇತೃತ್ವದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಿತ್ತು. ಆಯೋಗವು ಇತ್ತೀಚೆಗೆ ಸಲ್ಲಿಸಿದ ಮಧ್ಯಂತರ ವರದಿಯ ಶಿಫಾರಸುಗಳ ಅನ್ವಯ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿದೆ.

ಆದೇಶದಲ್ಲಿ ಏನಿದೆ?

ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರೊ.ಸುಖದೇವ್ ಥೋರಟ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿರುತ್ತದೆ. ಈ ನೀತಿಯು ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ನೋಂದಣಿಯನ್ನು ವೃದ್ಧಿಸಲು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು, ಪ್ರತಿಯೊಬ್ಬರಿಗೂ ಗುಣಾತ್ಮಕ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಲು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜ್ಞಾನವನ್ನು ಸದೃಢಗೊಳಿಸಲು, ಶಾಲಾ ಹಾಗೂ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಲು ಮತ್ತು ಪ್ರಜಾಸತ್ತಾತ್ಮಕ ಮತ್ತು ನಾಗರೀಕ/ನೈತಿಕ ಮೌಲ್ಯಗಳನ್ನು ಬೆಳೆಸುವ ಗುರಿ ಹೊಂದಿದೆ.

ಇದನ್ನೂ ಓದಿ | Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಆಯೋಗವು ಆಗಸ್ಟ್ 2024ರಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದ್ದು, ಪ್ರಸ್ತುತ ಕೆಲವು ಶಿಫಾರಸುಗಳೊಂದಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಸರ್ಕಾರವು ಆಗಸ್ಟ್ 2021ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಆದೇಶವನ್ನು ಹೊರಡಿಸಿತ್ತು. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಸೂಚಿಸಿದೆ.

ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಸಂಯೋಜನೆ ಹಾಗೂ ಪ್ರವೇಶಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ಈ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. 2024-25ರ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕೆಳಕಂಡಂತೆ ಕೆಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಕಾಲಾವಧಿ ಮತ್ತು ಪಠ್ಯಕ್ರಮದಲ್ಲಿ ಪ್ರಸ್ತಾಪಿಸಲಾಗಿರುವ ಬದಲಾವಣೆಗಳು:

ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಉನ್ನತ ಶಿಕ್ಷಣದ ಪದವಿ ಕಾರ್ಯಕ್ರಮದಲ್ಲಿ ಮತ್ತು ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಹಾಗೂ ಸಂಯೋಜಿತ ಕಾಲೇಜುಗಳ ಪಠ್ಯಕ್ರಮದಲ್ಲಿ ಕೆಳಕಂಡ ಬದಲಾವಣೆಗಳನ್ನು ತರಲು ಉದ್ದೇಶಿಸಿದೆ.

1.ಪದವಿ ಕಾರ್ಯಕ್ರಮದ ಕಾಲಾವಧಿ: ಸ್ನಾತಕ ಪದವಿ ಕಾರ್ಯಕ್ರಮದ ಕಾಲಾವಧಿ ಕೇವಲ 3 ವರ್ಷಗಳು ಮಾತ್ರ ಆಗಿದ್ದು, ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಆಯ್ಕೆ ಇರುವುದಿಲ್ಲ. ಈ ಮೊದಲು ನಾಲ್ಕು ವರ್ಷದ ಪದವಿಯು ಆಯ್ಕೆಯಾಗಿತ್ತು.
2. ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಪಠ್ಯಕ್ರಮದ ಸ್ವರೂಪ: ಮೂರು ಬೇರೆಬೇರೆ ಪದವಿ ಪಠ್ಯಕ್ರಮದ ಚೌಕಟ್ಟುಗಳನ್ನು (CFW) ಪ್ರಸ್ತಾಪಿಸಿ ಅಂಗೀಕರಿಸಲಾಗಿದ್ದು, ಅವು ಈ ಕೆಳಗಿನಂತಿವೆ:

a. ಎಲ್ಲ 6 ಸೆಮಿಸ್ಮರ್‌ಗಳಲ್ಲಿ 3 ಮೇಜರ್‌ಗಳೊಡನೆ ಸಾಮಾನ್ಯ ಪದವಿ, ಅಥವಾ
b. 4ನೇ ಸೆಮಿಸ್ಟರ್ ವರೆಗೆ 3 ಮೇಜರ್ ಗಳು ಮತ್ತು 5 ಹಾಗೂ 6ನೇ ಸೆಮಿಸ್ಟರ್ ಗಳಲ್ಲಿ 1 Subject ನಲ್ಲಿ ವಿಶೇಷಜ್ಞತೆ (Specialization).
c. ಮೊದಲನೇ ಸೆಮಿಸ್ಟರ್ ನಿಂದ ಮೈನರ್ Subject ಗಳ ಜೊತೆಗೆ 1 Subject ನಲ್ಲಿ ವಿಶೇಷತೆ (Specialization) (ಉದಾ: ಬಿ.ಕಾಂ, ಬಿಬಿಎ, ಬಿಸಿಎ, ಬಿಎ/ಬಿಎಸ್ಸಿ) ಪಠ್ಯಕ್ರಮದ ವಿವರಗಳನ್ನು ಲಗತ್ತಿಸಲಾಗಿದೆ.

3.ಬಹು ಆಗಮನ/ನಿರ್ಗಮನ ಮೊದಲನೇ ವರ್ಷದ ನಂತರ ಸರ್ಟಿಫಿಕೇಟ್ ನೀಡುವ ಹಾಗೂ ಎರಡನೇ ವರ್ಷದ ನಂತರ ಡಿಪ್ಲೊಮಾ ನೀಡುವ (ಬಹು ಆಗಮನ/ನಿರ್ಗಮನು ಕುರಿತು, ಅಂತಿಮ ವರದಿ ಸಲ್ಲಿಕೆಯಾದ ನಂತರ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಈ ಹಂತದಲ್ಲಲ್ಲ.
4. ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ ಔದ್ಯಮಿಕ ಆಧಾರಿತ ಕೋರ್ಸ್‌ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ ಸ್ವಾಯತ್ತತೆಯನ್ನು ನೀಡುವುದನ್ನು 5. Apprenticeship-embedded degree courses ಸಹ ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ತಂಡಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ

ಈ ಬದಲಾವಣೆಗಳು 2021-22, 2022-23, 2023-24 ನೇ ವರ್ಷಗಳಲ್ಲಿ ಪ್ರವೇಶಾತಿ ಪಡೆದ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪದವಿ ಕಾರ್ಯಕ್ರಮಗಳಿಗೆ 2021-22, 2022-23 ಮತ್ತು 2023-24 ನೇ ಶೈಕ್ಷಣಿಕ ವರ್ಷಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಕಾಲಾವಧಿ ಹಾಗೂ ಪಠ್ಯಕ್ರಮದ ಕುರಿತು ಸದ್ಯಕ್ಕೆ ಜಾರಿಯಲ್ಲಿರುವ ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ-1), ದಿನಾಂಕ: 07-08-2021ರ ಅನುಸಾರವಾಗಿಯೇ ವಿದ್ಯಾಭ್ಯಾಸ ಮಾಡುತ್ತಾರೆ.

ಘೋಷಣೆ ಮಾಡಲ್ಪಟ್ಟಿರುವ ಬದಲಾವಣೆಗಳು ಶೈಕ್ಷಣಿಕ ವರ್ಷ 2024-25ರಿಂದ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇದನ್ನೂ ಓದಿ | Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

2024-25ನೇ ಸಾಲಿನ ಸಂಯೋಜನೆ ಮತ್ತು ಪ್ರವೇಶಾತಿ ಪ್ರಕ್ರಿಯೆಗಳು

ವಿಶ್ವವಿದ್ಯಾಲಯಗಳಿಗೆ ಸಂಯೋಜನಾ ಪ್ರಕ್ರಿಯೆ ಮತ್ತು ಪ್ರವೇಶಾತಿಗಳು ಈ ಕೂಡಲೇ ಪ್ರಾರಂಭಗೊಳ್ಳುತ್ತವೆ. ಸರ್ಕಾರದ ಆದೇಶದಂತೆ ಪ್ರವೇಶಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಕುರಿತು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಲಾಗಿದ್ದು, ಕಾಲೇಜುಗಳಿಗೆ ಸ್ಪಷ್ಟಿಕರಣ ಬೇಕಾದಲ್ಲಿ ತಮ್ಮ ಸಂಯೋಜಕ ವಿಶ್ವವಿದ್ಯಾಲಯಗಳನ್ನು ಕೇಳಬಹುದಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಸಂಯೋಜನಾ ಪ್ರಕ್ರಿಯೆಯು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ದಿನಾಂಕ 09.05.2024 ರಂದು UUCMS ತಂತ್ರಾಂಶದ ಮೂಲಕ ಪ್ರಾರಂಭವಾಗುತ್ತದೆ.

Continue Reading

ಕ್ರೈಂ

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Prajwal Revanna Case: ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

VISTARANEWS.COM


on

Prajwal Revanna Case Two additional SPPs appointed for SIT cases
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು (Special Public Prosecutors) ನೇಮಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Prajwal Revanna Case: ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಎಚ್‌.ಡಿ. ರೇವಣ್ಣ ನ್ಯಾಯಾದೀಶರ ಮುಂದೆ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

VISTARANEWS.COM


on

Prajwal Revanna Case HD Revanna sent to 7 day judicial custody
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ಚಿನ್ನದ ದರ

Gold Rate today: ಇದು ಚಿನ್ನದಂಥಾ ವಿಷಯ! ಬಂಗಾರದ ಬೆಲೆ ತುಸು ಇಳಿಕೆ; ಎಷ್ಟಿದೆ ಇಂದು?

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹10 ಹಾಗೂ ₹11 ಇಳಿಕೆಯಾಗಿವೆ. ವಾರಾಂತ್ಯದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿದ್ದವು. ನಿನ್ನೆ ಕೂಡ ದರ ಏರಿತ್ತು.

VISTARANEWS.COM


on

gold rate today tapasi
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹10 ಹಾಗೂ ₹11 ಇಳಿಕೆಯಾಗಿವೆ. ವಾರಾಂತ್ಯದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿದ್ದವು. ನಿನ್ನೆ ಕೂಡ ದರ ಏರಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,625ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,250 ಮತ್ತು ₹6,62,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,227 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,816 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,270 ಮತ್ತು ₹7,22,700 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,40072,420
ಮುಂಬಯಿ66,250 72,270
ಬೆಂಗಳೂರು66,250 72,270
ಚೆನ್ನೈ66,30072,330

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading
Advertisement
Fried Oil
ಆರೋಗ್ಯ2 mins ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

IPL 2024
ಕ್ರೀಡೆ13 mins ago

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

Akshaya Tritiya Jewellery
ಫ್ಯಾಷನ್32 mins ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Narendra Modi
ದೇಶ37 mins ago

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Apple New Products
ಗ್ಯಾಜೆಟ್ಸ್42 mins ago

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

State Education Policy
ಕರ್ನಾಟಕ44 mins ago

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

Actor Ravichandran female lead in ravichandrans premaloka 2
ಸ್ಯಾಂಡಲ್ ವುಡ್47 mins ago

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Prajwal Revanna Case Two additional SPPs appointed for SIT cases
ಕ್ರೈಂ51 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Paris Olympics 2024
ಕ್ರೀಡೆ1 hour ago

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Chicken Shawarma
ಪ್ರಮುಖ ಸುದ್ದಿ1 hour ago

Chicken Shawarma: ಬೀದಿ ಬದಿ ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು; ಚಿಕನ್‌ ಪ್ರಿಯರೇ ಎಚ್ಚರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ21 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ24 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌