8ನೇ ಮಗುವಿಗೆ ಅಪ್ಪನಾಗ್ತಿದ್ದಾರೆ ಬ್ರಿಟನ್​ ಮಾಜಿ ಪ್ರಧಾನಿ, 58ವರ್ಷದ ಬೋರಿಸ್ ಜಾನ್ಸನ್ - Vistara News

ವಿದೇಶ

8ನೇ ಮಗುವಿಗೆ ಅಪ್ಪನಾಗ್ತಿದ್ದಾರೆ ಬ್ರಿಟನ್​ ಮಾಜಿ ಪ್ರಧಾನಿ, 58ವರ್ಷದ ಬೋರಿಸ್ ಜಾನ್ಸನ್

2019ರಲ್ಲಿಯೇ ಬ್ರಿಟನ್​ ಪ್ರಧಾನಿಯಾದ ಬೋರಿಸ್ ಜಾನ್ಸನ್​ 2021ರಲ್ಲಿ ಪ್ರಧಾನಿ ಹುದ್ದೆಯಲ್ಲಿ ಇರುವಾಗಲೇ ಕ್ಯಾರಿಯನ್ನು ಗುಟ್ಟಾಗಿ ವಿವಾಹವಾಗಿದ್ದರು. ಅಷ್ಟರಲ್ಲಿ ಕ್ಯಾರಿ ಒಂದು ಮಗು (ವಿಲ್ಫ್) ವಿಗೆ ಜನ್ಮ ನೀಡಿಯಾಗಿತ್ತು.

VISTARANEWS.COM


on

Former UK PM Boris Johnson to become father 8th Time
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್​ (Boris Johnson) ಅವರು ತಮ್ಮ 58ನೇ ವಯಸ್ಸಿನಲ್ಲಿ ಮತ್ತೊಮ್ಮೆ ‘ಅಪ್ಪ’ನಾಗುತ್ತಿದ್ದಾರೆ. ಅವರ ಪತ್ನಿ ಕ್ಯಾರಿ ಮೂರನೇ ಬಾರಿಗೆ ಗರ್ಭ ಧರಿಸಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಕ್ಯಾರಿ ಅವರು ಈ ಬಗ್ಗೆ ಒಂದು ಪೋಸ್ಟ್ ಹಾಕಿದ್ದಾರೆ.‘

ಕೆಲವೇ ವಾರಗಳಲ್ಲಿ ನಮ್ಮ ಟೀಮ್​ಗೆ ಇನ್ನೊಬ್ಬ ಸದಸ್ಯನ ಆಗಮನ ಆಗುತ್ತದೆ. ಕಳೆದ ಎಂಟು ತಿಂಗಳಿಂದ ನಾನು ಸಾಕಷ್ಟು ದಣಿದಿದ್ದೇನೆ. ಆದರೂ ಆಗಮಿಸಲಿರುವ ಚಿಕ್ಕ ಮಗುವನ್ನು ಯಾವಾಗ ಭೇಟಿಯಾಗುತ್ತೇನೋ ಎಂಬಂತಾಗಿದೆ. ವಿಲ್ಫ್​ (ಹಿರಿಯ ಮಗ) ತಾನು ಅಣ್ಣನಾಗುತ್ತಿರುವ ಬಗ್ಗೆ ಅತ್ಯಂತ ಉತ್ಸುಕನಾಗಿದ್ದಾನೆ ಮತ್ತು ಯಾವಾಗಲೂ ಅದರ ಬಗ್ಗೆಯೇ ಮಾತಾಡುತ್ತಿದ್ದಾನೆ. ರೋಮಿಗೆ ಈ ಬಗ್ಗೆ ಗೊತ್ತಿದೆಯಾ ಎಂದು ಕೇಳಬೇಡಿ, ಆಕೆಯೂ ಸ್ವಲ್ಪ ದಿನದಲ್ಲೇ ಅರ್ಥ ಮಾಡಿಕೊಳ್ಳುತ್ತಾಳೆ’ ಎಂದು ಬರೆದಿದ್ದಾರೆ. ಹಾಗೇ, ತಮ್ಮ ಇಬ್ಬರು ಮಕ್ಕಳಾದ ವಿಲ್ಫ್ ಮತ್ತು ರೋಮಿಯ ಕೈಗಳನ್ನು ತಾವು ಹಿಡಿದಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

ಬೋರಿಸ್​ ಜಾನ್ಸನ್​ ಮತ್ತು ಕ್ಯಾರಿ 2021ರಲ್ಲಿ ವಿವಾಹವಾಗಿದ್ದಾರೆ. ಬೋರಿಸ್ ಜಾನ್ಸನ್​​ಗೆ ಕ್ಯಾರಿ ಜಾನ್ಸನ್​ ಮೂರನೇ ಪತ್ನಿ. ಅಲ್ಲೆಗ್ರಾ ಮೊಸ್ಟಿನ್-ಓವನ್ ಎಂಬುವರನ್ನು 1987ರಲ್ಲಿ ವಿವಾಹವಾಗಿ, 1993ರವರೆಗೆ ಆಕೆಯೊಂದಿಗೆ ಇದ್ದರು. ಆದರೆ ಮಕ್ಕಳಾಗಿರಲಿಲ್ಲ. ಅದಾದ ಮೇಲೆ ಮರೀನಾ ವೀಲರ್ ಎಂಬುವರನ್ನು ಮದುವೆಯಾಗಿ 2020ರವರೆಗೆ ಸಂಸಾರ ಮಾಡಿದ್ದಾರೆ. ಒಟ್ಟು 4 ಮಕ್ಕಳನ್ನು ದಂಪತಿ ಹೊಂದಿದ್ದಾರೆ. ಹೀಗಿರುವಾಗಲೇ 2019ರಿಂದ ಅವರು ಕ್ಯಾರಿ ಸೈಮಂಡ್ಸ್​​ರೊಂದಿಗೆ ಸಂಬಂಧ ಹೊಂದಿದ್ದರು. 2020ರಲ್ಲಿ ಇದೇ ಕಾರಣಕ್ಕೆ ಎರಡನೇ ಪತ್ನಿಗೆ ವಿಚ್ಛೇದನ ನೀಡಿದ್ದರು.

ಇದನ್ನೂ ಓದಿ: ರಿಷಿ ಸುನಕ್‌ರನ್ನು ಪ್ರಧಾನಿಯಾಗಿ ಆರಿಸಲೇಬೇಡಿ: ಬೋರಿಸ್‌ ಜಾನ್ಸನ್‌ ಪ್ರಚಾರ!

2019ರಲ್ಲಿಯೇ ಬ್ರಿಟನ್​ ಪ್ರಧಾನಿಯಾದ ಬೋರಿಸ್ ಜಾನ್ಸನ್​ 2021ರಲ್ಲಿ ಪ್ರಧಾನಿ ಹುದ್ದೆಯಲ್ಲಿ ಇರುವಾಗಲೇ ಕ್ಯಾರಿಯನ್ನು ಗುಟ್ಟಾಗಿ ವಿವಾಹವಾಗಿದ್ದರು. ಅಷ್ಟರಲ್ಲಿ ಕ್ಯಾರಿ ಒಂದು ಮಗು (ವಿಲ್ಫ್) ವಿಗೆ ಜನ್ಮ ನೀಡಿಯಾಗಿತ್ತು. ಅಷ್ಟೇ ಅಲ್ಲದೆ, ಬ್ರಿಟನ್​ನಲ್ಲಿ 200ವರ್ಷಗಳಿಂದ ಈಚೆಗೆ ಹೀಗೆ ಪ್ರಧಾನಿ ಹುದ್ದೆಯಲ್ಲಿ ಇದ್ದಾಗಲೇ ಮದುವೆಯಾದವರು ಯಾರೂ ಇರಲಿಲ್ಲ. ಬಳಿಕ ಕ್ಯಾರಿ 2021ರಲ್ಲಿ ರೋಮಿಗೆ ಜನ್ಮ ನೀಡಿದ್ದಾರೆ. ಇದೀಗ ಬೋರಿಸ್ ಜಾನ್ಸನ್ ಪ್ರಧಾನಿ ಹುದ್ದೆ ತೊರೆದ ಬಳಿಕ ಇನ್ನೊಂದು ಮಗುವಿಗೆ ತಂದೆಯಾಗುತ್ತಿದ್ದಾರೆ. ಇಷ್ಟರ ಆಚೆ ಮಹಿಳೆಯೊಬ್ಬರೊಂದಿಗೆ ಇಟ್ಟುಕೊಂಡಿದ್ದ ಅಕ್ರಮ ಸಂಬಂಧದಿಂದ ಒಂದು ಮಗು ಹುಟ್ಟಿದೆ ಎಂದೂ ಬಿಬಿಸಿ ವರದಿ ಮಾಡಿದೆ. ಎರಡನೇ ಪತ್ನಿಯಿಂದ 4, ಮೂರನೇ ಪತ್ನಿಯಿಂದ ಎರಡು ಮತ್ತು ಅನೈತಿಕ ಸಂಬಂಧದಿಂದ ಒಂದು ಅಂದರೆ ಒಟ್ಟು ಏಳು ಮಕ್ಕಳಿಗೆ ತಂದೆಯಾಗಿ ಬೋರಿಸ್​ ಇದೀಗ 8ನೇ ಮಗುವಿನ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

ಇನ್ನು ಬೋರಿಸ್ ಜಾನ್ಸನ್​ ಅವರು ಬ್ರಿಟನ್​​ನಲ್ಲಿ ಜನರ ಮತ್ತು ಅವರದ್ದೇ ಸರ್ಕಾರದ ಜನಪ್ರತಿನಿಧಿಗಳ ವಿಶ್ವಾಸ ಕಳೆದುಕೊಂಡು ಹುದ್ದೆಯನ್ನು ತ್ಯಜಿಸಬೇಕಿತ್ತು. ಬೋರಿಸ್ ಕೆಳಗೆ ಇಳಿಯುತ್ತಿದ್ದಂತೆ ಭಾರತ ಮೂಲದ ರಿಷಿ ಸುನಕ್​ ಆ ಹುದ್ದೆಗೆ ಏರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

ಮೌಂಟ್ ಎವರೆಸ್ಟ್ ನಲ್ಲಿ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು,ಈ ಬಗ್ಗೆ ಭಾರತದ ಪರ್ವತಾರೋಹಿ ರಾಜನ್ ದ್ವಿವೇದಿ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video)ಆಗಿದೆ. ಅಲ್ಲೇಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ? ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Viral Video
Koo

ಮೌಂಟ್ ಎವರೆಸ್ಟ್ ನಲ್ಲಿ (Mount Everest) ಪರ್ವತಾರೋಹಿಗಳು (climber) ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಆರೋಹಿಗಳ ಉದ್ದನೆಯ ಸರತಿಯ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ (Instagram) ಭಾರತದ (indian) ಪರ್ವತಾರೋಹಿ ರಾಜನ್ ದ್ವಿವೇದಿ (Rajan Dwivedi) ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ.

ಮೌಂಟ್ ಎವರೆಸ್ಟ್ ನಲ್ಲಿ ಮಂಗಳವಾರ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಬ್ರಿಟಿಷ್ ಪರ್ವತಾರೋಹಿ ಮಾರ್ ಪ್ಯಾಟರ್ಸನ್ (39) ಮತ್ತು ನೇಪಾಳಿ ಶೆರ್ಪಾ ಪಾಸ್ತೆಂಜಿ (23) ಅವರು ಹಿಲರಿ ಹಂತವನ್ನು ಹತ್ತುವಾಗ ಕುಸಿದು ಬಿದ್ದಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಮೇ 20ರಂದು ರಾಜನ್ ದ್ವಿವೇದಿ ಅವರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋ ಅವರ ಹಿಂದೆ ಇರುವ ಆರೋಹಿಗಳ ಗುಂಪಿನ ಚಿತ್ರಣವನ್ನು ತೋರಿಸಿದೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದ್ವಿವೇದಿ ಅವರು ಮೌಂಟ್ ಎವರೆಸ್ಟ್ ಅನ್ನು ಏರುವಾಗ ಎದುರಾಗುವ ಸವಾಲುಗಳ ಬಗ್ಗೆ ಹೇಳಿದ್ದಾರೆ. ಒಂದೇ ಹಗ್ಗವನ್ನು ಹಿಡಿದುಕೊಂಡು ನಾವೆಲ್ಲ ಜೊತೆಯಾಗಿ ಸಾಗುತ್ತಿದ್ದೇವೆ. ಪರ್ವತ ಏರಲು, ಇಳಿಯಲು ಟ್ರಾಫಿಕ್ ತೊಂದರೆ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಹವಾಮಾನ. ಆರೋಹಿಗಳ ದೊಡ್ಡ ಸಾಲು ಬರುತ್ತಿರುವುದನ್ನು ನೋಡುವಾಗ ನನಗೆ ಕೆಳಗೆ ಬರುವುದು ಒಂದು ದುಃಸ್ವಪ್ನದಂತೆ ಕಂಡಿತ್ತು ಮತ್ತು ತೀವ್ರವಾಗಿ ದಣಿದಿದ್ದೆ ಎಂದು ಹೇಳಿದ್ದಾರೆ.


ದ್ವಿವೇದಿ ಆರೋಹಣದ ಮೂರು ನಿರ್ದಿಷ್ಟ ಪ್ರಯಾಸಕರ ವಿಭಾಗಗಳನ್ನು ಏರಿದ್ದಾರೆ. ಖುಂಬು ಐಸ್‌ಫಾಲ್ಸ್, ಕ್ಯಾಂಪ್ 3 ರಿಂದ ಕ್ಯಾಂಪ್ 4 ಕ್ಕೆ ಆರೋಹಣ. ಕ್ಯಾಂಪ್ 4 ರಿಂದ ಶಿಖರದ ಅಂತಿಮ ವಲಯ ಸಾವಿನ ವಲಯ ವೆಂದು ಪರಿಗಣಿಸಲ್ಪಟ್ಟಿದೆ. ಇಲ್ಲಿ ರಾತ್ರಿಯ ಸಮಯದಲ್ಲಿ ಹೆಪ್ಪುಗಟ್ಟಿದ ತಾಪಮಾನದ ನಡುವೆ ಪ್ರವಾಸ ಕೈಗೊಳ್ಳಲಾಗುತ್ತದೆ.

ಮೌಂಟ್ ಎವರೆಸ್ಟ್ ಏರುವುದು ಒಂದು ತಮಾಷೆಯ ಸಂಗತಿ ಅಲ್ಲ ಮತ್ತು ವಾಸ್ತವವಾಗಿ ಅದು ಗಂಭೀರ ಆರೋಹಣ ಎಂದು ದ್ವಿವೇದಿ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಶಿಖರದಿಂದ ಇಳಿಯುವುದು ಸವಾಲಿನ ಕಾರ್ಯವಾಗುತ್ತಿದೆ. ವಿಶೇಷವಾಗಿ ಹವಾಮಾನ ವೈಪರೀತ್ಯದ ನಡುವೆಯೂ ಹೆಚ್ಚಿನ ಸಂಖ್ಯೆಯ ಆರೋಹಿಗಳು ಮೇಲೆ ಏರುತ್ತಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಸುಮಾರು 500 ಆರೋಹಿಗಳು, ಹವ್ಯಾಸಿಗಳು ಮತ್ತು ಅನನುಭವಿಗಳು ಇದನ್ನು ಏರಲು ಪ್ರಯತ್ನಿಸುತ್ತಾರೆ. ಬಹುಶಃ 250- 300 ಮಂದಿ ಮಾತ್ರ ಯಶಸ್ವಿಯಾಗುತ್ತಾರೆ. ಅನೇಕರು ಗಾಯಗೊಂಡು ಪ್ರವಾಸವನ್ನು ಕೊನೆಗೊಳಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ದ್ವಿವೇದಿ ಹಂಚಿಕೊಂಡಿರುವ ವಿಡಿಯೋವು ಒಂದು ಹಗ್ಗದ ಸಾಲಿನಲ್ಲಿ ದೀರ್ಘ ಕಾಯುವಿಕೆ ಮತ್ತು ಟ್ರಾಫಿಕ್ ಅಪ್‌ಸ್ಟ್ರೀಮ್ ಮತ್ತು ಡೌನ್‌ಸ್ಟ್ರೀಮ್‌ನಲ್ಲಿ ಇಂಟರ್‌ಚೇಂಜ್‌ಗಳ ಮಾತುಕತೆಗಳನ್ನು ತೋರಿಸುತ್ತದೆ.

ಇದನ್ನೂ ಓದಿ: Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು


ಉದ್ದನೆಯ ಸರದಿಯ ಮತ್ತೊಂದು ವಿಡಿಯೋ ವನ್ನು ಹಂಚಿಕೊಂಡ ಮಾಸ್ಸಿಮೊ ಎಕ್ಸ್ ನಲ್ಲಿ ಟ್ರಾಫಿಕ್ ಜಾಮ್‌ಗಳ ಕಾರಣಗಳು, ತಾಪಮಾನದಲ್ಲಿ ತೀವ್ರ ಕುಸಿತ, ಹಗ್ಗಗಳನ್ನು ಸರಿಪಡಿಸಿದ ದಿನಾಂಕ ಮತ್ತು ನಿಧಾನ ಪ್ರಯಾಣ, ಅನನುಭವಿ ಆರೋಹಿಗಳ ಕುರಿತು ಹೇಳಿಕೊಂಡಿದ್ದಾರೆ.

ಅನೇಕ ಪರಿಸರವಾದಿಗಳು ಮತ್ತು ಆರೋಹಿಗಳು ಎವರೆಸ್ಟ್‌ನಲ್ಲಿ ಜನಸಂದಣಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರ್ವತದ ಮೇಲೆ ಅನೇಕ ಅಪಘಾತಗಳು ಮತ್ತು ಸಾವುಗಳ ಹೊರತಾಗಿಯೂ ನೂರಾರು ಜನರು ವಿಶ್ವದ ಅತಿ ಎತ್ತರದ ಶಿಖರವನ್ನು ಏರಲು ತಯಾರಾಗುತ್ತಾರೆ.

Continue Reading

ಕರ್ನಾಟಕ

Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

Prajwal Revanna Video: ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಇಂತಹ ಹತ್ತಾರು ಪ್ರಶ್ನೆಗಳು ನಿಮ್ಮ ಮನಸ್ಸಿನಲ್ಲೂ ಇರಬಹುದು. ಅವುಗಳನ್ನು ವಿಸ್ತಾರ ನ್ಯೂಸ್‌ ಕೇಳಿದೆ.

VISTARANEWS.COM


on

Prajwal Revanna Video
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರೀಗ ವಿಡಿಯೊದಲ್ಲಿ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದಾರೆ ಎನ್ನಲಾಗುವ ಪ್ರಜ್ವಲ್‌ ರೇವಣ್ಣ, ವಿಡಿಯೊ (Prajwal Revanna Video) ಬಿಡುಗಡೆ ಮಾಡಿದ್ದು, “ನಾನು ಮೇ 31ರಂದು ವಿಚಾರಣೆಗೆ ಹಾಜರಾಗುತ್ತೇನೆ. ನಾನು ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತಿದ್ದು, ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂದಿದ್ದಾರೆ. ಆದರೆ, ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಜನರ ಮನಸಲ್ಲಿರುವ ಇಂತಹ 10 ಪ್ರಶ್ನೆಗಳನ್ನು ‘ವಿಸ್ತಾರ ನ್ಯೂಸ್’‌ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿದೆ. ಅವು ಇಂತಿವೆ.

ವಿಸ್ತಾರ ನ್ಯೂಸ್‌ 10 ಪ್ರಶ್ನೆಗಳು

  1. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಾಗಿದೆ ಎಂದು ಹೇಳುತ್ತಿರುವ ನೀವು ಒಂದು ತಿಂಗಳಿಂದ ತಲೆಮರೆಸಿಕೊಂಡಿರುವುದು ಏಕೆ?
  2. ಯುಟ್ಯೂಬ್‌ ಮೂಲಕ ಪ್ರಕರಣ ಗೊತ್ತಾಗಿದೆ ಅಂತಿದ್ದೀರಿ, ಗೊತ್ತಾದ ಮೇಲೂ ವಿದೇಶದಲ್ಲೇ ಇರುವುದೇಕೆ? ಆಗಲೇ ಸ್ಪಷ್ಟನೆ ನೀಡಲಿಲ್ಲ ಏಕೆ?
  3. ಅಮಾಯಕರಾದ ನೀವು ಕಾಂಗ್ರೆಸ್‌ನ ನವೀನ್‌ ಗೌಡ ಸೇರಿ ಹಲವರ ವಿರುದ್ಧ ಕೇಸ್‌ ದಾಖಲಿಸಿದ್ದೇಕೆ?
  4. ನ್ಯಾಯಾಂಗದ ಮೇಲೆ ವಿಶ್ವಾಸ ಇದೆ ಎಂದು ಹೇಳುವ ನೀವು, ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗಲಿಲ್ಲ ಏಕೆ?
  5. ತಪ್ಪೇ ಮಾಡದ, ಸತ್ಯಸಂಧರಾದ ನೀವು ಒಂದು ತಿಂಗಳು ಮೊದಲೇ ಸ್ಟೇ ತಂದಿದ್ದು ಏಕೆ?
  6. ತಾತ, ತಂದೆ-ತಾಯಿ, ಚಿಕ್ಕಪ್ಪನ ಮೇಲೆ ಗೌರವ ಇರುವ ನೀವು, ಅವರು ವಾಪಸ್‌ ಬಾ ಎಂದರೂ ಏಕೆ ಬರಲಿಲ್ಲ?
  7. ವಿಚಾರಣೆ ಎದುರಿಸಿ, ದೋಷಮುಕ್ತರಾಗುವ ವಿಶ್ವಾಸ ಇರುವ ನೀವು ಎಸ್‌ಐಟಿಗೆ ಒಂದು ವಾರ ಕಾಲಾವಕಾಶ ಏಕೆ ಕೇಳಿದಿರಿ?
  8. ಒಂದು ವಾರ ಕಾಲಾವಕಾಶ ಕೇಳಿದ ಬಳಿಕವೂ ನಿಗದಿತ ದಿನಾಂಕದಂದು ಭಾರತಕ್ಕೆ ಏಕೆ ಬರಲಿಲ್ಲ? ಏಕೆ ವಿಚಾರಣೆ ಎದುರಿಸಲಿಲ್ಲ?
  9. ತಾತ, ತಂದೆ-ತಾಯಿ, ಕುಮಾರಣ್ಣನ ಮೇಲೆ ಗೌರವ ಹೊಂದಿರುವ ನೀವು, ಅವರ ಮಾತನ್ನು ಏಕೆ ಕೇಳಲಿಲ್ಲ?
  10. ವಿದೇಶದಲ್ಲಿದ್ದೇನೆ ಎಂದು ಹೇಳುವ ನೀವು ಏಕೆ ಯಾವ ದೇಶದಲ್ಲಿದ್ದೇನೆ ಎಂದು ಹೇಳುತ್ತಿಲ್ಲ?

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Continue Reading

ಕರ್ನಾಟಕ

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Prajwal Revanna Video: ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, ವಿದೇಶದಿಂದಲೇ ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಸಂಸದನ ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Continue Reading

ವಿದೇಶ

Landslide: ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ; ಜೀವಂತ ಸಮಾಧಿಯಾದವರ ಸಂಖ್ಯೆ 2000ಕ್ಕೆ ಏರಿಕೆ

Landslide: ಗುಡ್ಡಗಾಡು ಪ್ರದೇಶವಾಗಿರುವ ಎಂಗಾ ಪ್ರದೇಶದಲ್ಲಿ ಸಂಪೂರ್ಣವಾಗಿ ಭೂಕುಸಿತಕ್ಕೆ ತುತ್ತಾಗಿದೆ. ಸಾವಿನ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ. 150 ಮನೆಗಳು ಭೂಮಿಯಲ್ಲಿ ಹುದುಗಿಹೋಗಿವೆ. ಮಳೆಯ ನೀರು ಇನ್ನೂ ಹರಿಯುತ್ತಿರುವ ಕಾರಣ ಜನರ ರಕ್ಷಣೆಯು ಕಷ್ಟವಾಗುತ್ತಿದೆ. ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಶ್ವಸಂಸ್ಥೆಯು ಮಾಹಿತಿ ನೀಡಿದೆ.

VISTARANEWS.COM


on

Landslide
Koo

ಪೋರ್ಟ್‌ ಮೋರ್‌ಸ್ಬಿ: ಪಪುವಾ ನ್ಯೂಗಿನಿಯಾದಲ್ಲಿ (Papua New Guinea) ಕಂಡು ಕೇಳರಿಯದ ಭೂಕುಸಿತ (Landslide) ಸಂಭವಿಸಿದ್ದು, ಸಾವಿನ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ. ಸಾವಿರಾರು ಜನ ಗಾಯಗೊಂಡಿದ್ದು, ನೂರಾರು ಜನ ಭೂಮಿ ಅವಶೇಷಗಳ ಅಡಿಯಲ್ಲಿ ಹುದುಗಿಹೋಗಿವೆ. ಸಾವಿರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ. ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ. ಪಪುವಾ ನ್ಯೂಗಿನಿಯಾದಲ್ಲಿ ಇತ್ತೀಚಿನ ದಶಕಗಳಲ್ಲಿ ಸಂಭವಿಸಿದ ಭೀಕರ ದುರಂತ ಇದಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಂದರಲ್ಲಿ ಭೂಕುಸಿತ, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಎಂಗಾ ಪ್ರದೇಶದಲ್ಲಿ ಸಂಪೂರ್ಣವಾಗಿ ಭೂಕುಸಿತಕ್ಕೆ ತುತ್ತಾಗಿದೆ. ಸಾವಿನ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ. 150 ಮನೆಗಳು ಭೂಮಿಯಲ್ಲಿ ಹುದುಗಿಹೋಗಿವೆ. ಮಳೆಯ ನೀರು ಇನ್ನೂ ಹರಿಯುತ್ತಿರುವ ಕಾರಣ ಜನರ ರಕ್ಷಣೆಯು ಕಷ್ಟವಾಗುತ್ತಿದೆ. ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಶ್ವಸಂಸ್ಥೆಯು ಮಾಹಿತಿ ನೀಡಿದೆ.

ಶುಕ್ರವಾರದಿಂದಲೂ ಸಾಲು ಸಾಲು ಭೂಕುಸಿತ ಸಂಭವಿಸಿವೆ. ಶುಕ್ರವಾರವೇ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಇದಾದ ಬಳಿಕ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿ ಭಾನುವಾರದ ಹೊತ್ತಿಗೆ ಈ ಸಂಖ್ಯೆ 650ಕ್ಕೆ ಏರಿಕೆ ಆಗಿತ್ತು. ಸಂಬಂಧಿಕರನ್ನು ಕಳೆದುಕೊಂಡವರ ದುಃಖವು ಮುಗಿಲುಮುಟ್ಟಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮೃತರ ಸಂಬಂಧಿಕರು ಶವಗಳನ್ನು ಹೊರತೆಗೆಯಲು ಭೂಮಿ ಅಗೆಯುತ್ತಿದ್ದಾರೆ. ಇದರಿಂದಾಗಿ ಜನರನ್ನು ನಿಯಂತ್ರಿಸುವುದು ಕೂಡ ಸಿಬ್ಬಂದಿಗೆ ಕಷ್ಟವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅವಶೇಷಗಳ ಅಡಿಯಲ್ಲಿ ಯಾರಾದರೂ ಬದುಕಿದ್ದಾರೇನೋ ಎಂಬ ವಿಶ್ವಾಸದಿಂದ ಭೂಮಿಯನ್ನು ಅಗೆಯಲಾಗುತ್ತಿದೆ. ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಜನರು ಕೂಡ ಇದಕ್ಕೆ ಸಾಥ್‌ ನೀಡುತ್ತಿದ್ದಾರೆ. ಆದರೆ, ಗಾಯಾಳುಗಳ ಬದಲು ಶವಗಳನ್ನೇ ಹೊರ ತೆಗೆಯುವಂತಾಗಿದೆ. ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನಲ್ಲಿ 4 ಸಾವಿರ ಜನ ವಾಸವಿದ್ದರು. ದಿಢೀರನೆ ಭೂಕುಸಿತ ಉಂಟಾದ ಕಾರಣ ಇಡೀ ಗ್ರಾಮವೇ ನರಕಸದೃಶವಾಗಿದೆ ಎಂಬುದಾಗಿ ಮಾಧ್ಯಮಗಳ ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ:Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

ಈ ಭೀಕರ ಭೂಕುಸಿತ ಪ್ರವಾಹದೊಂದಾಗಿ ದೇಶದ ಆರ್ಥಿಕತೆ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಆಹಾರ ಪದಾರ್ಥಗಳಿಗೂ ಜನ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಇನ್ನು ಪೋರ್ಗೆರಾ ಮೈನಿಂಗ್‌ ಪ್ರದೇಶಕ್ಕೆ ಸಾಗುವ ಪ್ರಮುಖ ಹೆದ್ದಾರಿಯೂ ಸಂಪೂರ್ಣವಾಗಿ ಮುಚ್ಚಿದೆ. ಇನ್ನು ಸಂಕಷ್ಟದಲ್ಲಿರುವ ಪಪುವಾ ನ್ಯೂಗಿನಿಯಾಗೆ ಸಹಾಯ ಮಾಡುವಂತೆ ಮಿತ್ರ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ ನೀಡಿದೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ3 mins ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ29 mins ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ54 mins ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ1 hour ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ1 hour ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ1 hour ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ1 hour ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ1 hour ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ1 hour ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌