Savarkar Samagra-6: ಸಮಾಜ‌ ಕಟ್ಟುವುದು Thankless Job: ಬಿ.ಎಲ್. ಸಂತೋಷ್ - Vistara News

ಕರ್ನಾಟಕ

Savarkar Samagra-6: ಸಮಾಜ‌ ಕಟ್ಟುವುದು Thankless Job: ಬಿ.ಎಲ್. ಸಂತೋಷ್

Savarkar Samagra-6: ಬೆಂಗಳೂರಿನಲ್ಲಿ ಸಾವರ್ಕರ್ ಸಾಹಿತ್ಯ ಸಂಘದ ವತಿಯಿಂದ ಸಾವರ್ಕರ್ ಸಮಗ್ರ ಸಂಪುಟ-6 ಪುಸ್ತಕ ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ‌ ವಿ.ಡಿ. ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್ ಸೇರಿ ಹಲವರು ಭಾಗಿಯಾಗಿದ್ದರು.

VISTARANEWS.COM


on

Savarkar Samagra-6 book release in bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮಾಜವನ್ನು ಕಟ್ಟುವ ಕೆಲಸಕ್ಕೆ ಯಾವುದೇ ಧನ್ಯವಾದ, ಅಭಿನಂದನೆ ಸಿಗುವುದಿಲ್ಲ, ಇದು Thankless Job (ಕೃತಜ್ಞತೆಯಿಲ್ಲದ ಕೆಲಸ) ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್ ತಿಳಿಸಿದರು.

ಸಾವರ್ಕರ್ ಸಾಹಿತ್ಯ ಸಂಘದ ವತಿಯಿಂದ ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಆಯೋಜಿಸಿದ್ದ ಸಾವರ್ಕರ್ ಸಮಗ್ರ ಸಂಪುಟ-6 ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಲ್ಲರಿಗೂ ಒಪ್ಪಿಗೆ ಆಗುವ ಮಾರ್ಗವನ್ನು ಸಾವರ್ಕರ್ ಹೇಳಲಿಲ್ಲ. ಸಾವರ್ಕರ್ ರೀತಿ ಜೀವಿಸಬೇಕಾದರೆ ನಮ್ಮ ಬದುಕನ್ನು ಸುಟ್ಟುಕೊಳ್ಳಬೇಕಾಗುತ್ತದೆ. ಅದಕ್ಕಾಗಿಯೇ ಅನೇಕರು ಸಾವರ್ಕರರನ್ನು ಕಡೆಗಣಿಸಿದರು. ತಾವು ಸಾವರ್ಕರ್ ಅವರನ್ನು ಒಪ್ಪಿಕೊಂಡರೆ ಅವರ ರೀತಿಯೇ ಇರಬೇಕಾಗುತ್ತದೆ ಎಂದು ಅವರನ್ನು ತುಳಿಯುವ ಕೆಲಸವನ್ನು ಕಾಂಗ್ರೆಸ್ ಮಾಡಿತು. ಅನೇಕ ಅಯೋಗ್ಯರಿಗೆ ಸತ್ತ ನಂತರವಾದರೂ ಗೌರವ ಸಿಗುತ್ತದೆ. ಆದರೆ ಸಮಕಾಲೀನವಾಗಿ ಸಾವರ್ಕರರಿಗೆ ಆ ಗೌರವವೂ ಸಿಗಲಿಲ್ಲ ಎಂದು ಹೇಳಿದರು.

ಕ್ರಾಂತಿಕಾರಿಗಳನ್ನು, ದೇಶಭಕ್ತರನ್ನು ಒಂದು ಸಿದ್ಧಾಂತಕ್ಕೆ ಬ್ರ್ಯಾಂಡ್ ಮಾಡುವ ಕೆಲಸ ಮಾಡಲಾಗುತ್ತಿದೆ. ಆದರೆ, ಈ‌ ತಂತ್ರವನ್ನು ಶಾಶ್ವತವಾಗಿ ಮಾಡಲು ಸಾಧ್ಯವಿಲ್ಲ. ಭಾರತ ಬಂಜೆಯಲ್ಲ. ಸಾವರ್ಕರ್ ಅವರನ್ನು ಡಿಕ್ಟೇಟರ್, ಹಿಟ್ಲರ್ ಅನುಯಾಯಿ ಎಂದು ಬಿಂಬಿಸಲಾಯಿತು. ಅದೇ ಸಾವರ್ಕರರ ಜನ್ಮದಿನದಂದು, ಪ್ರಜಾಪ್ರಭುತ್ವದ ದೇಗುಲ ಎನ್ನುವ ಸಂಸತ್ ಭವನ ಉದ್ಘಾಟನೆ ಆಗುತ್ತಿರುವುದು ಇತಿಹಾಸವನ್ನು ಸರಿಪಡಿಸುವ ಕೆಲಸ. ಕರ್ತವ್ಯ ಪಥದಲ್ಲಿ ಏನೋ ಒಂದು ಗುರುತನ್ನು ತೆಗೆಸಿ ನೇತಾಜಿ ಸುಭಾಷ್‌ಚಂದ್ರ ಬೋಸ್ ಪ್ರತಿಮೆ ಸ್ಥಾಪಿಸಲಾಗಿದೆ, ಶಿವಾಜಿ‌ ಮಹಾರಾಜರ ನೌಕಾ ಗುರುತನ್ನು ನೌಕಾ ದಳಕ್ಕೆ ಸೇರಿಸಲಾಗಿದೆ ಎಂದು ತಿಳಿಸಿದರು.

Savarkar Samagra-6 book release

ಸಾವರ್ಕರ್ ತಮ್ಮ ಕಾರ್ಯಕ್ಕೆ ಯಾರಾದರೂ ಮೆಚ್ಚಿಕೊಳ್ಳಬೇಕು ಎಂದು ಯಾವಾಗಲೂ ಬಯಸಿರಲಿಲ್ಲ. ಅವರು ಸಮಾಜದ ಅನೇಕ ಕುರೀತಿಗಳನ್ನು ಟೀಕಿಸಿ, ಸುಧಾರಿಸಲು ಮುಂದಾದರು. ಇಂದು ಅನೇಕರು ಬಂಡಾಯ ಎಂದು ಬೋರ್ಡ್ ಹಾಕಿಕೊಳ್ಳುವವರಿಗಿಂತಲೂ ಹೆಚ್ಚಿನ ಬಂಡಾಯ ಸಾವರ್ಕರ್ ಮಾಡಿದ್ದರು. ಸಮಾಜದ ಅನೇಕ ಕುರೀತಿಗಳನ್ನು ಟೀಕಿಸಿ, ಸುಧಾರಿಸಲು ಸಾವರ್ಕರ್ ಮುಂದಾದರು. ಇಂದು ಅನೇಕರು ಬಂಡಾಯ ಎಂದು ಬೋರ್ಡ್ ಹಾಕಿಕೊಳ್ಳುವವರಿಗಿಂತಲೂ ಹೆಚ್ಚಿನ ಬಂಡಾಯ ಸಾವರ್ಕರ್ ಮಾಡಿದ್ದರು ಎಂದು ಹೇಳಿದರು.

ಸಾವರ್ಕರ್ ಜನ್ಮದಿನದಂದೇ ನೂತನ ಸಂಸತ್ ಭವನ ಉದ್ಘಾಟನೆ ಸಂತಸದ ವಿಚಾರ: ಸಾತ್ಯಕಿ ಸಾವರ್ಕರ್

ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ಮಾತನಾಡಿ, ಕರ್ನಾಟಕದಲ್ಲಿ ರಾಜಕೀಯ ವ್ಯವಸ್ಥೆ ಬದಲಾವಣೆ ಆಗುತ್ತಿದೆ. ಕೆಲವು ದೇಶವಿರೋಧಿಗಳು ಮುಂಚೂಣಿಗೆ ಬರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಸರ್ಕಾರದ ಕುರಿತು ಟೀಕಿಸಿದರು.

ಸಾವರ್ಕರ್ ಜನ್ಮದಿನದಂದೇ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸಂತಸದ ವಿಚಾರ ಹಾಗೂ ಸಾವರ್ಕರ್ ವಿರೋಧಿಗಳಿಗೆ ಕಪಾಳಮೋಕ್ಷ. ರಾಹುಲ್ ಗಾಂಧಿ ಅನೇಕ ಸುಳ್ಳುಗಳನ್ನು ಸಾವರ್ಕರ್ ಕುರಿತು ಹೇಳಿದ್ದಾರೆ. ಅದಕ್ಕಾಗಿ ರಾಹುಲ್‌ ಗಾಂಧಿ‌ ವಿರುದ್ಧ ಮಾನಹಾನಿಕರ ಪ್ರಕರಣ ದಾಖಲಿಸಿದ್ದೇನೆ ಎಂದು ಹೇಳಿದರು.

ಗೋಪಾಲಕೃಷ್ಣ ಗೋಖಲೆ ಅವರೊಂದಿಗಿನ ಭಿನ್ನಮತದಿಂದಾಗಿ ಅವರ ಮೇಲೆ ದಾಳಿ ನಡೆಸಲು ಹೋಗುತ್ತಿದ್ದವರನ್ನು ತಡೆದವರು ಸಾವರ್ಕರ್. ಮೊಹಮ್ಮದ್ ಅಲಿ ಜಿನ್ನಾ ಮೇಲೆ ದಾಳಿ ಮಾಡುವುದನ್ನು ವಿರೋಧಿಸಿ ಅವರು ಪತ್ರ ಬರೆದಿದ್ದರು. ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದಕ್ಕೆ ನಾಥೂರಾಮ್ ಗೋಡ್ಸೆಯನ್ನು ಖಂಡಿಸಿದ್ದರು ಎಂದು ತಿಳಿಸಿದರು.

ಸಾವರ್ಕರ್ ಅವರನ್ನು ಮಹಾಪುರುಷರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಈಗಾಗಲೇ ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಾಯ ಮಾಡಿದ್ದೇವೆ. ಇದರಿಂದ ಸಾವರ್ಕರ್ ವಿಚಾರಕ್ಕೆ ಬಹುದೊಡ್ಡ ಜಯ ಸಿಗುತ್ತದೆ. ಈಗ ಸ್ಥಿತಿ ಮತ್ತೆ 15-16ನೇ ಶತಮಾನದ ಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಲೇಖಕ, ಸಾವರ್ಕರ್ ಸಮಗ್ರದ ಪ್ರಧಾನ ಸಂಪಾದಕ ಡಾ. ಜಿ.ಬಿ. ಹರೀಶ ಮಾತನಾಡಿ, ಸಾವರ್ಕರ್ ಸಾಹಿತ್ಯವನ್ನು ನಿರ್ಲಕ್ಷಿಸಲು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಕಾರಣರಾದರು. ತಮ್ಮನ್ನು ತಾವು ವಿಜೃಂಭಿಸಿಕೊಳ್ಳಲು ಸಾವರ್ಕರ್‌ರನ್ನು ದಮನ ಮಾಡಿದರು. ರಾಜಕೀಯವಾಗಿಯೂ ನೆಹರದು ಅವರಿಗೆ ಸೆಡ್ಡು‌ ಹೊಡೆಯಬಲ್ಲವರಾಗಿದ್ದವರು ಸಾವರ್ಕರ್ ಮಾತ್ರ. ಭಾರತವು ಸೆಲ್ಯುಲರ್ ಇಂಡಿಯಾ ಎಂದು ಹೇಳುತ್ತಾರಾದರೂ ದೇಶದ ಪ್ರಮುಖ ಘಟನಾವಳಿಗಳ ಸಂದರ್ಭದಲ್ಲಿ ಕರ್ನಾಟಕದಲ್ಲಿ ಒಂದೂ ಕಾದಂಬರಿ ಬರಲಿಲ್ಲ. ರಾಮಜನ್ಮಭೂಮಿ ಹೋರಾಟದ ಸಂದರ್ಭದಲ್ಲಿ ಇಟ್ಟಿಗೆಗಿಂತ ಜೀವ ಪವಿತ್ರ ಎಂದು ಲಂಕೇಶ್ ಬರೆದರು. ಇಲ್ಲಿ ಮುಸ್ಲಿಂ ಜೀವವಷ್ಟೆ ಅಲ್ಲ, ಹಿಂದು ಜೀವವೂ ಮುಖ್ಯ ಎಂದು ತಿಳಿಸಿದರು.

ಲೇಖಕಿ ಹಾಗೂ 6ನೇ ಸಂಪುಟದ ಅನುವಾದಕಿ ಡಾ.‌ಎಸ್. ಆರ್.‌ ಲೀಲಾ ಮಾತನಾಡಿ, ಕೆಲವರು ಇತಿಹಾಸ ರಚನೆ ಮಾಡುತ್ತಾರೆ, ಕೆಲವರು ಇತಿಹಾಸ ನಿರ್ಮಿಸುತ್ತಾರೆ. ಆದರೆ ಇತಿಹಾಸವನ್ನು ನಿರ್ಮಿಸಿ, ರಚಿಸುವ ಕಾರ್ಯವನ್ನೂ ಮಾಡಿದವರು ವೀರ ಸಾವರ್ಕರ್. ಅಲೆಕ್ಸಾಂಡರ್‌ನಿಂದ ಬ್ರಿಟಿಷರವರೆಗಿನ ಸಂಪೂರ್ಣ ಇತಿಹಾಸವನ್ನು ಸಾವರ್ಕರ್ ಹಿಂದು ದೃಷ್ಟಿಯಲ್ಲಿ ಬರೆದರು. ಆದರೆ, ದೇಶವನ್ನು ಒಡೆಯಬೇಕು ಎಂಬ ಮನಸ್ಥಿತಿ ಇಂದೂ ಮುಂದುವರಿದಿದೆ ಎಂದಋು.

ಪಾಕಿಸ್ತಾನ ಪ್ರತ್ಯೇಕವಾದಾಗ, ಪಾಪ್ಯುಲೇಶನ್ ಎಕ್ಸ್‌ಚೇಂಜ್ ಆಗಿಬಿಡಲಿ ಎಂದು ಪ್ರಖರವಾಗಿ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಹೇಳಿದ್ದರು. ಆದರೆ, ಅದರತ್ತ ಯಾರೂ ಗಮನ‌ಕೊಡದ‌ ಕಾರಣಕ್ಕೆ ಇನ್ನೂ ನಾವು ಈ ವಿಷವರ್ತುಲದಲ್ಲಿ ಸಿಕ್ಕಿಕೊಂಡಿದ್ದೇವೆ. ಹೊರಗಿನ ಶತ್ರುಗಳಿಗಿಂತಲೂ ಒಳಗಿರುವವರೇ ಅತಿ ಅಪಾಯಕಾರಿ ಎನ್ನುವುದನ್ನು ತಿಳಿಯಬೇಕು ಎಂದು ಹೇಳಿದರು.

ದೇಶದ ವಿರುದ್ಧ ಅಸ್ತ್ರ ಎತ್ತುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒಬ್ಬರು ಹೇಳಿದ್ದಾರೆ. ಆದರೆ, ಈ ದೇಶವನ್ನು ದ್ವೇಷಿಸುವವರನ್ನು ಶಿಕ್ಷಿಸಲು ಆಗದೇ ಇರುವುದು ಬೇಸರ. ಈ‌ ದೇಶದಲ್ಲಿ ನಮ್ಮತನವನ್ನು ಉಳಿಸಿಕೊಳ್ಳಲು ಸಾವರ್ಕರ್ ವಿಚಾರಗಳು ಅನಿವಾರ್ಯ ಎಂದರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ : 81ರ ವಯಸ್ಸಿನಲ್ಲಿಯೂ ಕಲರಿ ಪಾಠ ಮಾಡುತ್ತಿದ್ದಾರೆ ಮೀನಾಕ್ಷಿ ಅಮ್ಮ!

ಮಿಥಿಕ್ ಸೊಸೈಟಿಯ ಗೌರವ ಕಾರ್ದರ್ಶಿ ವಿ.‌ನಾಗರಾಜ್ ಮಾತನಾಡಿ, ಈ ರೀತಿಯ ವ್ಯಕ್ತಿತ್ವ ನಮ್ಮ ನಡುವೆ ಬದುಕಿದ್ದರೇ ಎಂದು ಎನ್ನಿಸುವಷ್ಟು ಮಹಾನ್ ವ್ಯಕ್ತಿ ಸಾವರ್ಕರ್. ಆದರೆ, ಅವರ ವಿಚಾರಗಳನ್ನು ಹೊರಗೆ ಬರದಂತೆ ತಡೆಯಲಾಯಿತು. ಈಗ ಸಾವರ್ಕರ್ ವಿಚಾರಗಳು ಹೊರಬರುತ್ತಿವೆ ಎನ್ನುವುದು ಸಂತೋಷ. ಸಾವರ್ಕರ್ ಎಲ್ಲ‌ ವಿಚಾರಗಳನ್ನೂ ಆಳವಾಗಿ ಅಧ್ಯಯನ ಮಾಡಿ ಪ್ರಸ್ತುತಪಡಿಸಿದ್ದಾರೆ. ಈ ದೇಶದ ಜನಮಾನಸವನ್ನು ಎಚ್ಚರಿಸಬೇಕಾದರೆ, ಹಿಂದು ಸಮಾಜ ಹೇಡಿಯಲ್ಲ, ಸೋತ ಸಮಾಜವಲ್ಲ ಎನ್ನುವ ಜಾಗೃತಿ ಉಂಟುಮಾಡಬೇಕು ಎಂದು ಸಾವರ್ಕರ್ ತಿಳಿದಿದ್ದರು ಎಂಬುವುದಾಗಿ ಹೇಳಿದರು.

ಸತ್ವಹೀನವಾಗಿರುವ ಹಿಂದು ಸಮಾಜದ ಶೌರ್ಯವನ್ನು ಜಗತ್ತಿಗೆ ತಿಳಿಸುವುದೊಂದೇ ಪರಿಹಾರ ಎಂದು ಹೇಳಿದ ವಿವೇಕಾನಂದರು ಅದನ್ನೇ ವಿದೇಶದಲ್ಲಿ ಮಾಡಿದರು. ಅದೇ ಕಾರ್ಯವನ್ನು ಸಾವರ್ಕರ್ ಸಹ ಮಾಡಿದರು ಎಂದು ವಿ.‌ನಾಗರಾಜ್ ಹೇಳಿದರು.

ಸಾವರ್ಕರ್ ಸಾಹಿತ್ಯ ಸಂಘದ ಹರ್ಷ ಸಮೃದ್ಧ, ಲೇಖಕ ರೋಹಿತ್ ಚಕ್ರತೀರ್ಥ, ಪತ್ರಕರ್ತ ರಮೇಶ ದೊಡ್ಡಪುರ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ರಸ್ತೆಗಳು ಸೇರಿ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.

VISTARANEWS.COM


on

Bengaluru Rain
ಬೆಂಗಳೂರಿನ ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ನಗರದ ವಿವಿಧೆಡೆ ಸೋಮವಾರ ರಾತ್ರಿ ವರುಣ (Bengaluru Rain) ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ರಸ್ತೆಗಳು ಸೇರಿ ನಗರದ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡಬೇಕಾಯಿತು.

ಬೆಂಗಳೂರಿನ ಓಕಳೀಪುರಂ, ಮಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆ.ಆರ್.ಮಾರ್ಕೆಟ್, ಮತ್ತಿಕೆರೆ, ಕತ್ತರಿಗುಪ್ಪೆ, ಆನೇಕಲ್‌, ಎಲೆಕ್ಟ್ರಾನಿಕ್‌ ಸಿಟಿ ಸೇರಿ ವಿವಿಧೆಡೆ ಮಳೆ ಅಬ್ಬರಿಸಿದೆ. ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.

ಮೈಸೂರು ರಸ್ತೆಯ ಬ್ಯಾಟರಾಯನಪುರ, ಜೆಸಿ ನಗರದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಲ್ಲೇಶ್ವರ, ಬಸವನಗುಡಿ, ಕತ್ತರಿಗುಪ್ಪೆ ಸರ್ಕಲ್‌, ರಾಜಾಜಿನಗರ ಭಾಷ್ಯಂ ಸರ್ಕಲ್‌ ಬಳಿ ಸೇರಿದಂತೆ 16 ಕಡೆ ಮರಗಳು ನೆಲಕ್ಕುರುಳಿವೆ. ಅದೃಷ್ಟವಾಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಮಲ್ಲೇಶ್ವರದಲ್ಲಿ ಮರ ಬಿದ್ದಿರುವುದು

ರಾಜಾಜಿನಗರದಲ್ಲಿ ಮರ ನೆಲಕ್ಕುರುಳಿರುವುದು

ಬಾರಿ ಗಾಳಿ ಮಳೆಗೆ ಹಾರಿದ ಅಂಗಡಿಗಳ ಹೊದಿಕೆ, ಶೀಟ್‌ಗಳು

ಆನೇಕಲ್: ಬಾರಿ ಗಾಳಿ ಮಳೆಯಿಂದ ಹೂ ಮತ್ತು ಹಣ್ಣಿನ ಅಂಗಡಿಗಳ ಹೊದಿಕೆ ಮತ್ತು ಶೀಟ್‌ಗಳು ಹಾರಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆಯಿತು. ಚಂದಾಪುರ ಪುರಸಭೆ ಕಚೇರಿ ಮುಂದೆ ನೋಡ ನೋಡುತ್ತಿದ್ದಂತೆ ಅಂಗಡಿಗಳ ಶೀಟ್‌ಗಳು ಹಾರಿ ಹೋದವು. ಜತೆಗೆ ಹೂವು, ಹಣ್ಣು ನೀರುಪಾಲಾಗಿದ್ದರಿಂದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಧಾರಕಾರ ಮಳೆ ಸುರಿಯಿತು.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

ಶಿಕ್ಷಣ ಎಂದರೆ ಮಕ್ಕಳು ನಲಿಯುತ್ತ ಕಲಿಯುವುದು. ಆಡುತ್ತ, ನಲಿಯುತ್ತ, ಎಲ್ಲರೊಂದಿಗೆ ಬೆರೆಯುತ್ತ ಜ್ಞಾನವನ್ನು ವೃದ್ಧಿಸಿಕೊಳ್ಳುವುದು. ಆದರೆ, ಬದಲಾದ ಕಾಲಘಟ್ಟದಲ್ಲಿ ಮಕ್ಕಳು ಅಂಕಗಳ ಹಿಂದೆ ಓಡಬೇಕಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆ ಸಾಧಿಸುವ, ಮೊದಲ ರ‍್ಯಾಂಕ್‌ ಪಡೆಯುವ, ಆಟ ಬಿಟ್ಟು ಪಾಠದತ್ತ ಹೆಚ್ಚು ಗಮನ ಹರಿಸುವ, ಎಫರ್ಟ್‌ ಹೆಸರಲ್ಲಿ, ಅಂಕ ಸಾಧನೆ ಹೆಸರಲ್ಲಿ ಇನ್ನಿಲ್ಲದ ಒತ್ತಡ ಅವರ ಮೇಲಿದೆ. ಇಂತಹ ಸಮಸ್ಯೆಗಳ ಮಧ್ಯೆಯೇ, ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿರುವುದು ಮಕ್ಕಳ ಶೈಕ್ಷಣಿಕ ಏಳಿಗೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ, ಇ-ಮೇಲ್‌ ಮೂಲಕ ಬೆದರಿಕೆ ಹಾಕುವ, ಭಯವನ್ನು ಹುಟ್ಟಿಸುವ ‘ಭಯೋತ್ಪಾದಕರಿಗೆ’ ತಕ್ಕ ಶಾಸ್ತಿ ಆಗಬೇಕಿದೆ.

VISTARANEWS.COM


on

School Children
Koo

ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ (E-Mail) ಮೂಲಕ ಬೆದರಿಕೆ ಒಡ್ಡುವುದು, ಆ ಮೂಲಕ ಮಕ್ಕಳು, ಪೋಷಕರು, ಶಿಕ್ಷಕರು ಆತಂಕಕ್ಕೀಡಾಗುವುದು, ಇದರಿಂದ ಎಲ್ಲೆಡೆ ಇದು ಸುದ್ದಿಯಾಗುವಂತೆ ಮಾಡುವ ಹೀನಾತಿಹೀನ ಪ್ರಕರಣಗಳು ಇತ್ತೀಚೆಗೆ ಹೆಚ್ಚು ಸುದ್ದಿಯಾಗುತ್ತಿವೆ. ಸೋಮವಾರ (ಮೇ 6) ಅಹಮದಾಬಾದ್‌ನಲ್ಲಿ ಹಲವು ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ. ಇನ್ನು, ಮೇ 1ರಂದು ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ (NRC) ಸುಮಾರು 200ಕ್ಕೂ ಅಧಿಕ ಶಾಲೆಗಳಿಗೆ ಈ ರೀತಿಯ ಹುಸಿ ಬಾಂಬ್‌ ಬೆದರಿಕೆಯ ಮೇಲ್‌ಗಳನ್ನು (Hoax Bomb Threat) ಕಳುಹಿಸಲಾಗಿತ್ತು. ಸಹಜವಾಗಿಯೇ ಇದು ದೇಶಾದ್ಯಂತ ಸುದ್ದಿಯಾಯಿತು. ಶಾಲೆಗಳಿಂದ ಮಕ್ಕಳನ್ನು ಕೂಡಲೇ ಮನೆಗೆ ಕಳುಹಿಸಲಾಯಿತು. ಪೋಷಕರೂ ಶಾಲೆಗಳಿಗೆ ಓಡೋಡಿ ಬಂದು ಮಕ್ಕಳನ್ನು ಕರೆದುಕೊಂಡು ಹೋದರು. ಈಗಲೂ ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಆಗುತ್ತಿಲ್ಲ. ಕರೆಸಿಕೊಳ್ಳಲು ಶಿಕ್ಷಕರಿಗೂ ಧೈರ್ಯ ಸಾಲುತ್ತಿಲ್ಲ. ಒಟ್ಟಿನಲ್ಲಿ ಕಿಡಿಗೇಡಿಗಳು ಮಾಡುವ ಉಪದ್ವ್ಯಾಪದಿಂದ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಆತಂಕದಲ್ಲಿಯೇ ಮುಳುಗಿದ್ದಾರೆ. ಹಾಗಾಗಿ, ಇ-ಮೇಲ್‌ ಮೂಲಕ ಹುಸಿ ಬಾಂಬ್ ಬೆದರಿಕೆಯೊಡ್ಡುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಅನಾಮಧೇಯ ವ್ಯಕ್ತಿಗಳು ಮೇಲ್‌ ಮಾಡುವುದು, ತನಿಖೆ ಬಳಿಕ ಅದು ಹುಸಿ ಬಾಂಬ್‌ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸುವುದು, ಇಂತಹ ಪ್ರಕರಣಗಳು ದೇಶಾದ್ಯಂತ ನಡೆಯುತ್ತಿರುವುದರಿಂದ ಇದೊಂದು ದೊಡ್ಡ ವಿಷಯ ಅಲ್ಲ, ನಿರ್ಲಕ್ಷಿಸುವುದು ಒಳಿತು ಎಂದು ಎನಿಸಿದರು, ಹುಸಿ ಬೆದರಿಕೆಗಳು ಅತಿ ಹೆಚ್ಚು ಆತಂಕ ಸೃಷ್ಟಿಸುತ್ತಿವೆ, ಮಕ್ಕಳ ಜತೆಗೆ ಪೋಷಕರ ಮೇಲೂ ಪರಿಣಾಮ ಬೀರುತ್ತಿವೆ. ಆಧುನಿಕ ಕಾಲದಲ್ಲಿ ತಂತ್ರಜ್ಞಾನ ತುಂಬ ಮುಂದುವರಿದಿದೆ. ಸೈಬರ್‌ ಅಪರಾಧ ವಿಭಾಗವನ್ನೂ ತೆರೆಯಲಾಗಿದೆ. ಹಾಗಾಗಿ, ಸೈಬರ್‌ ಕ್ರೈಂ ಪೊಲೀಸರು ಇಂತಹ ಇ-ಮೇಲ್‌ ಕಡಿಗೇಡಿಗಳನ್ನು ಮಟ್ಟಹಾಕಬೇಕು. ಬೆಂಗಳೂರು, ಅಹಮದಾಬಾದ್‌, ದೆಹಲಿ ಎನ್ನದೆ, ದೇಶಾದ್ಯಂತ ಇಂತಹ ಪ್ರಕರಣಗಳನ್ನು ತಡೆಯಲು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೇಲ್ನೋಟಕ್ಕೆ ಬೇರೆ ದೇಶದ ವಿಪಿಎನ್‌ (VPN) ಬಳಸಿ ಇ-ಮೇಲ್‌ ಬೆದರಿಕೆ ಒಡ್ಡಲಾಗುತ್ತಿದೆ ಎಂಬುದು ಗೊತ್ತಾದರೂ, ಸುಧಾರಿತ ತಂತ್ರಜ್ಞಾನವನ್ನು ಬಳಸಿ ಉಪದ್ವ್ಯಾಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಹುಸಿ ಬಾಂಬ್‌ ಬೆದರಿಕೆ ಕರೆಗಳು ಹತ್ತಾರು ಪರಿಣಾಮಗಳನ್ನು ಬೀರುತ್ತಿವೆ. ನಗರಗಳಲ್ಲಿ ಮಕ್ಕಳು ಪ್ರಾಣ ಭಯದಲ್ಲಿಯೇ ಶಾಲೆಗಳಿಗೆ ತೆರಳುವಂತಾಗಿದೆ. ಪೋಷಕರಂತೂ ಜೀವ ಹಿಡಿದುಕೊಂಡು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಂತಾಗಿದೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಸುಮಾರು 48 ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಇದು ನೂರಾರು ಶಾಲೆಗಳಲ್ಲಿ ಆತಂಕ ಸೃಷ್ಟಿಸಿತ್ತು. ಎಷ್ಟೋ ದಿನಗಳವರೆಗೆ ಪೋಷಕರು ಮಕ್ಕಳನ್ನು ಶಾಲೆಗಳಿಗೇ ಕಳುಹಿಸರಲಿಲ್ಲ. ಶಾಲೆಗಳ ಆಡಳಿತ ಮಂಡಳಿಗಳೂ ಅಷ್ಟೇ, ಸುಮ್ಮನೆ ಅಪಾಯವನ್ನು ಮೇಲೆ ಎಳೆದುಕೊಳ್ಳುವುದು ಬೇಡ ಎಂದು ಮಕ್ಕಳನ್ನು ಹಲವು ದಿನಗಳವರೆಗೆ ಶಾಲೆಗೆ ಕರೆಸಿರಲಿಲ್ಲ. ಈಗ, ದೆಹಲಿ ಹಾಗೂ ಅಹಮದಾಬಾದ್‌ ಶಾಲೆಗಳು, ಮಕ್ಕಳು ಮತ್ತು ಪೋಷಕರ ಪರಿಸ್ಥಿತಿಯೂ ಇದರಿಂದ ಹೊರತಾಗಿಲ್ಲ.

ಮಕ್ಕಳಿಗೆ ಜೀವ ಭಯ, ಪೋಷಕರು ಹಾಗೂ ಶಿಕ್ಷಕರಿಗೆ ಆತಂಕ ಮಾತ್ರವಲ್ಲ, ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಮಕ್ಕಳ ಶೈಕ್ಷಣಿಕ ಏಳಿಗೆಯ ಮೇಲೆಯೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಪದೇಪದೆ ಬೆದರಿಕೆ ಒಡ್ಡಿದರೆ ಮಕ್ಕಳು ಶಾಲೆಗಳಿಗೆ ಹೋಗುವುದಿಲ್ಲ. ಇದರಿಂದ ಅವರು ಪಠ್ಯವನ್ನು ಸರಿಯಾಗಿ ಅಭ್ಯಾಸ ಮಾಡಲು ಆಗುವುದಿಲ್ಲ. ಇನ್ನು, ಎಳೆಯ ವಯಸ್ಸಿನಲ್ಲೇ ಅವರು ಆತಂಕದಲ್ಲಿ ಶಾಲೆಗೆ ಹೋದರೆ, ಅದು ಅವರ ಮನಸ್ಸಿನ ಮೇಲೆ ಅಗಾಧವಾದ ಪರಿಣಾಮ ಬೀರುತ್ತದೆ. ಈಗಾಗಲೇ ಅತಿಯಾದ ಹೋಮ್‌ ವರ್ಕ್‌, ಆಟ-ಪಾಠಗಳಿಗೆ ಕಡಿಮೆ ಸಮಯ ಸಿಗುತ್ತಿದೆ. ಅತಿಯಾದ ಸ್ಪರ್ಧೆಯಿಂದ ಮಕ್ಕಳು ಅಂಕಗಳ ಹಿಂದೆ ಓಡಬೇಕಾದ, ರ‍್ಯಾಂಕ್‌ ಪಡೆಯಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದಾರೆ. ಇದರಿಂದ ಮಕ್ಕಳು ನಾಲ್ಕೈದು ವರ್ಷದಿಂದಲೇ ಒತ್ತಡಕ್ಕೆ ಸಿಲುಕುತ್ತಿದ್ದಾರೆ.

ಅಷ್ಟಕ್ಕೂ ಶಿಕ್ಷಣ ಎಂದರೆ, ನಲಿಯುತ್ತ ಕಲಿಯುವುದಾಗಿದೆ. ಒತ್ತಡವಿಲ್ಲದೆ, ಆಡುತ್ತ, ನಲಿಯುತ್ತ, ಬೆರೆಯುತ್ತ ಜ್ಞಾನ ಸಂಪಾದಿಸುವುದಾಗಿದೆ. ಆದರೆ, ಈಗ ಬಾಂಬ್‌ ಬೆದರಿಕೆಯ ಆತಂಕವೂ ಮಕ್ಕಳಲ್ಲಿ ಮೂಡಿದರೆ, ಅದು ಸುದೀರ್ಘ ಅವಧಿಗೆ ಅವರನ್ನು ಕಾಡಲಿದೆ. ಶೈಕ್ಷಣಿಕ ಏಳಿಗೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಮಾನಸಿಕವಾಗಿಯೂ ಅವರು ಕುಗ್ಗಿಹೋಗಲಿದ್ದಾರೆ. ಇದರ ಮಧ್ಯೆಯೇ, ಹುಸಿ ಬಾಂಬ್‌ ಬೆದರಿಕೆ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರವು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ. ಆದರೆ, ಈ ಸಮಸ್ಯೆಗೊಂದು ಕ್ಷಿಪ್ರವಾಗಿ ಕಾಯಂ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಅದರಲ್ಲೂ, ಶೈಕ್ಷಣಿಕ ವಾತಾವರಣವನ್ನೇ ಹಾಳುತ್ತಿರುವ ‘ಇ-ಮೇಲ್‌ ಭಯೋತ್ಪಾದಕರಿಗೆ’ ಕಠಿಣ ಶಿಕ್ಷೆಯಾಗಬೇಕಿದೆ.

ಇದನ್ನೂ ಓದಿ: ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Continue Reading

ಕರ್ನಾಟಕ

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

Prajwal Revanna Case: ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಹೀಗಾಗಿ ನನ್ನ ವಿರುದ್ಧ ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ನನಗೂ ಮತ್ತು ಹಾಸನ ಪೆನ್ ಡ್ರೈವ್ ಪ್ರಕರಣಕ್ಕೂ (Prajwal Revanna Case) ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಆಪಾದಿಸಿದ್ದಾರೆ.

ಇದೇ ದೇವರಾಜೇಗೌಡ ಈ ಹಿಂದೆ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಅಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

ನಾನೀಗ ಬೆಂಗಳೂರಿಂದ ಹೊರಗೆ ಇದ್ದು, ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ವತಂತ್ರ ಮತ್ತು ನಿಷ್ಪಕ್ಷಪಾತದ ತನಿಖೆ: ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ.
ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು. ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

108 Ambulance: ಬಿಜೆಪಿ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ಸರಿಪಡಿಸಲು ಸಿಬ್ಬಂದಿ ಸಹಕರಿಸಬೇಕು. ಅನಗತ್ಯವಾಗಿ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೂ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

VISTARANEWS.COM


on

108 Ambulance
Koo

ಬೆಂಗಳೂರು: 108 ಆರೋಗ್ಯ ಕವಚದ ಆಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಅಂಬ್ಯುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನು ಸರ್ಕಾರ ನೀಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 108 ಅಂಬ್ಯುಲೆನ್ಸ್ ಯೋಜನೆ ಸುಗಮವಾಗಿ ನಡೆಸಲು ಆರ್ಥಿಕ ವರ್ಷ 2023-24ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 210.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸದರಿ ಅನುದಾನದಲ್ಲಿ ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ನಿಗದಿಯಾದ ರೂ. 162.40 ಕೋಟಿಗಳ ಪೂರ್ಣ ಅನುದಾನವನ್ನು ಸೇವಾದಾರರಿಗೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ 108-ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 260.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಬಿಡುಗಡೆಗೊಳಿಸಬೇಕಾಗಿರುತ್ತದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್‌.ಐ ಗ್ರೀನ್‌ ಹೆಲ್ತ್‌ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ 711 ಆಂಬ್ಯುಲೆನ್ಸ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಸೇವೆ ಒದಗಿಸಿದ್ದಲ್ಲಿ ಪ್ರತಿ ತ್ರೈಮಾಸಿಕಕ್ಕೆ ರೂ. 40.60 ಕೋಟಿಗಳಂತೆ ವಾರ್ಷಿಕ ರೂ. 162.40 ಕೋಟಿಗಳ ಅನುದಾನವು ಬಿಡುಗಡೆಗೊಳಿಸಲಾಗುವುದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

ವಿಪಕ್ಷಗಳ ನಾಯಕರು ಅನಗತ್ಯವಾಗಿ ಗ್ಯಾರಂಟಿ ಯೋಜನೆಯಿಂದ ಹಣಕಾಸಿನ ತೊಂದರೆಯಾಗಿದೆ ಎಂದು 108 ಆರೋಗ್ಯ ಕವಚ ಯೋಜನೆಗೆ ತಳುಕು ಹಾಕುವುದರಲ್ಲಿ ಯಾವುದೇ ಹುರುಳಿಲ್ಲ ಎಂದು‌ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠ ವೇತನದ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ ಶೇ.45 ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ಇದೀಗ 108 ಸಿಬ್ಬಂದಿಗಳು ಶೇ 45 ರಷ್ಟು ವೇತನ ಹೆಚ್ಚಳ ಮಾಡಿರುವುದನ್ನ ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ.

ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನು ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಆಂಬ್ಯುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ ಶೇ 45 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಈ ಬಗ್ಗೆ 108 ಸಿಬ್ಬಂದಿಯನ್ನು ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬದಲಾವಣೆ ಮಾಡಲು ಅವಕಾಶವಿಲ್ಲ ಎಂದು ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ನ್ಯಾಯಯುತವಾಗ ಕನಿಷ್ಢ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಜಿವಿಕೆ ಇಎಂಆರ್ ಸಂಸ್ಥೆ ಹಾಗೂ ಚಾಲಕರ ನಡುವಿನ ವೇತನ ಪಾವತಿ ಸಮಸ್ಯೆಗಳ ಬಗ್ಗೆಯೂ ಸಂಸ್ಥೆಯವರೊಂದಿಗೆ ಇಲಾಖೆ ಆಯುಕ್ತರು ಚರ್ಚಿಸಿ, ವೇತನ ಬಾಕಿ ಉಳಿಸಿಕೊಳ್ಳದಂತೆ ಆದೇಶಿಸಿದ್ದಾರೆ. ಇದಕ್ಕೂ ಮೀರಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧವಿದೆ. 108 ಆಂಬ್ಯುಲೆನ್ಸ್ ಸೇವೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಅನಿವಾರ್ಯವಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಬೇಕಾಗಲಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್‌ಗಳನ್ನು ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ‌ ಲೋಪಗಳನ್ನು ಸರಿಪಡಿಸುತ್ತಿರುವಾಗ ಸಿಬ್ಬಂದಿ ಸಹಕರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

Continue Reading
Advertisement
Bengaluru Rain
ಕರ್ನಾಟಕ18 mins ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ26 mins ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ37 mins ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ37 mins ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ46 mins ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ1 hour ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ1 hour ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ1 hour ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ2 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ2 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ5 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ6 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌