Hondisi Bareyiri : ಒಟಿಟಿಯಲ್ಲಿ ಹೊಸ ದಾಖಲೆ ಬರೆದ ʼಹೊಂದಿಸಿ ಬರೆಯಿರಿʼ - Vistara News

ಸಿನಿಮಾ

Hondisi Bareyiri : ಒಟಿಟಿಯಲ್ಲಿ ಹೊಸ ದಾಖಲೆ ಬರೆದ ʼಹೊಂದಿಸಿ ಬರೆಯಿರಿʼ

ʼಹೊಂದಿಸಿ ಬರೆಯಿರಿʼ (Hondisi Bareyiri) ಚಿತ್ರ ಅಮೆಜಾನ್‌ ಒಟಿಟಿಯಲ್ಲಿ ದಾಖಲೆ ಸೃಷ್ಟಿಸಿದೆ. ಈ ವರ್ಷ ಅತಿಹೆಚ್ಚು ನಿಮಿಷಗಳ ಕಾಲ ವೀಕ್ಷಣೆ ಕಂಡ ಸಿನಿಮಾಗಳಲ್ಲಿ ಇದು ಒಂದಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಹಾಗೂ ಐಪಿಎಲ್ ಅಬ್ಬರ ಜೋರಾಗಿತ್ತು. ಆದಾಗಿಯೂ ʼಹೊಂದಿಸಿ ಬರೆಯಿರಿʼ (Hondisi Bareyiri) ಸಿನಿಮಾ ಅಮೆಜಾನ್ ಒಟಿಟಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಈ ವರ್ಷದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದುಕೊಂಡ ಸಿನಿಮಾವಾಗಿ ಇದು ಹೊರಹೊಮ್ಮಿದೆ.

ಸಿನಿರಸಿಕರಿಂದ ಭರಪೂರ ಮೆಚ್ಚುಗೆ ಪಡೆದು 50 ದಿನಗಳ ಸಂಭ್ರಮದಲ್ಲಿ ಈ ಚಿತ್ರ ಒಟಿಟಿಗೆ ಲಗ್ಗೆ ಇಟ್ಟಿತ್ತು. ಥಿಯೇಟರ್‌ನಲ್ಲಿ ʼಹೊಂದಿಸಿ ಬರೆಯಿರಿʼ ಸಿನಿಮಾ ನೋಡದವರು ಅಮೆಜಾನ್‌ನಲ್ಲಿ ಚಿತ್ರ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರ ಪರಿಣಾಮ ಈ ಚಿತ್ರ ಒಟಿಟಿಯಲ್ಲಿ ಬರೋಬ್ಬರಿ 5 ಕೋಟಿ ನಿಮಿಷಗಳ ಸ್ಟ್ರೀಮಿಂಗ್ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ. ಈ ವರ್ಷದಲ್ಲಿ ಅತಿ ಹೆಚ್ಚು ಸ್ಟ್ರೀಮಿಂಗ್ ಕಂಡಿರುವ ಹೆಗ್ಗಳಿಕೆಯೂ ಹೊಂದಿಸಿ ಬರೆಯಿರಿ ಚಿತ್ರದ ಪಾಲಾಗಿದೆ. ಅಮೆಜಾನ್‌ನಲ್ಲಿ ದೊಡ್ಡ ಹಿಟ್ ಕಂಡಿರುವ ಈ ಚಿತ್ರ ಇದೀಗ ಬ್ರಿಟನ್‌ ಹಾಗೂ ಅಮೆರಿಕದಲ್ಲೂ ಸ್ಟ್ರೀಮ್ ಆಗ್ತಿದ್ದು, ಅಲ್ಲಿರುವ ಚಿತ್ರಪ್ರೇಮಿಗಳು ಸಿನಿಮಾ ನೋಡಬಹುದಾಗಿದೆ.

ಇದನ್ನೂ ಓದಿ: Pushpa 2 Movie : ಪುಷ್ಪಾ 2 ಸಿನಿಮಾದಲ್ಲಿ ರಶ್ಮಿಕಾ ಸಾಯ್ತಾರಾ? ಶವದ ಫೋಟೊ ವೈರಲ್‌
ರಾಮೇನಹಳ್ಳಿ ಜಗನ್ನಾಥ್ ಅವರು ನಿರ್ದೇಶನದ ಜೊತೆಗೆ ತಮ್ಮ ಸ್ನೇಹಿತರ ಜೊತೆಗೂಡಿ ಸಂಡೇ ಸಿನಿಮಾಸ್ ಬ್ಯಾನರ್‌ನಡಿ ನಿರ್ಮಾಣ ಮಾಡಿರುವ ʼಹೊಂದಿಸಿ ಬರೆಯಿರಿʼ ಸಿನಿಮಾದಲ್ಲಿ ಪ್ರವೀಣ್ ತೇಜ್, ನವೀನ್ ಶಂಕರ್, ಶ್ರೀ ಮಹದೇವ್, ಅನಿರುದ್ಧ್ ಆಚಾರ್ಯ, ಭಾವನಾ ರಾವ್, ಐಶಾನಿ ಶೆಟ್ಟಿ, ಸಂಯುಕ್ತ ಹೊರ್ನಾಡ್, ಅರ್ಚನಾ ಜೋಯಿಸ್ ಸೇರಿದಂತೆ ಹಲವರು ನಟಿಸಿದ್ದಾರೆ. ಭಾವನೆಗಳ ಏರಿಳಿತ, ಕಾಲೇಜು ವಿದ್ಯಾರ್ಥಿಗಳ ಮಜವಾದ ಪಯಣ, ಪ್ರೀತಿ ಪ್ರೇಮ, ತುಂಟಾಟವನ್ನೇ ಇಟ್ಟುಕೊಂಡು ಹೆಣೆದ ಕಥೆ ʼಹೊಂದಿಸಿ ಬರೆಯಿರಿʼ ಚಿತ್ರವಾಗಿದೆ. ಇದು ಅಮೆಜಾನ್ ಒಟಿಟಿಯಲ್ಲಿ ಧಮಾಕ ಎಬ್ಬಿಸುತ್ತಿದೆ. ಪ್ರೊಫೆಸರ್ ಆಗಿದ್ದ ರಾಮೇನಹಳ್ಳಿ ಜಗನ್ನಾಥ್ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆಯಲ್ಲಿ ಗೆಲುವು ದಾಖಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
Koo

ಮೈಸೂರು: ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಜತೆಗೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

ಹತ್ಯೆಗೀಡಾದ ಯುವಕ.

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ದರ್ಶನ್‌ ಅವರು ಹಲವರೊಂದಿಗೆ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು. ಕೊಲೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ತಿಂಗಳ ಹಿಂದೆ ಹತ್ಯೆ ಮಾಡಲಾಗಿತ್ತು.

ಬೆಂಗಳೂರಿನ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ವ್ಯಕ್ತಿಯನ್ನು ಹತ್ಯೆ ಮಾಡಿ ರಾಜಕಾಲುವೆ ಬಳಿ ಬಿಸಾಡಲಾಗಿತ್ತು. ಶವವನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಶವ ರೇಣುಕಾಸ್ವಾಮಿ ಅವರದ್ದೇ ಎಂದು ಗುರುತಿಸಿದ್ದರು. ಇದಾದ ಬಳಿಕ ತನಿಖೆ ಕೈಗೊಂಡಿದ್ದರು. ತನಿಖೆ ನಡೆಸಿದ ಪೊಲೀಸರು ದರ್ಶನ್‌ ಅವರನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ದರ್ಶನ್‌ ಅವರ ಬೌನ್ಸರ್‌ಗಳನ್ನು ಕೂಡ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Continue Reading

ಸಿನಿಮಾ

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Shatrughan Sinha: ʼದಬಾಂಗ್‌ʼ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ ಸೋನಾಕ್ಷಿ ಸಿನ್ಹಾ ಸದ್ಯ ಹಸೆಮಣೆಗೇರುವ ಸಿದ್ಧತೆಯಲ್ಲಿದ್ದಾರೆ. ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ, ತಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳುವುದಾಗಿ ಹೇಳಿದ್ದಾರೆ.

VISTARANEWS.COM


on

Shatrughan Sinha
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ (Zaheer Iqbal) ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ (Shatrughan Sinha) ಅವರು, ʼʼಮದುವೆ ಬಗ್ಗೆ ಸೋನಾಕ್ಷಿ ತಮ್ಮ ಬಳಿ ಏನನ್ನೂ ಹೇಳಿಕೊಂಡಿಲ್ಲ. ಇಂದಿನ ಕಾಲದ ಮಕ್ಕಳು ಮದುವೆಗೆ ಒಪ್ಪಿಗೆ ಕೇಳುವುದಿಲ್ಲ. ಬದಲಿಗೆ ತಮ್ಮ ನಿರ್ಧಾರದ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ. ಒಂದು ವೇಳೆ ಅವಳು ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳಿ ಆಶೀರ್ವದಿಸುತ್ತೇನೆʼʼ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ʼʼನಾನೀಗ ದೆಹಲಿಯಲ್ಲಿದ್ದೇನೆ. ಚುನಾವಣಾ ಫಲಿತಾಂಶದ ನಂತರ ನಾನು ಇಲ್ಲಿಗೆ ಬಂದೆ. ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಪತ್ನಿ ಇಬ್ಬರೂ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ಎಂದಿಗೂ ನಾವು ಬಯಸುತ್ತೇವೆʼʼ ಎಂದು ಪ್ರತಿಕ್ರಿಯಿಸಿದ್ದಾರೆ.

ಸೋನಾಕ್ಷಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದೂ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼನಮ್ಮ ಮಗಳ ನಿರ್ಧಾರ ಯಾವತ್ತೂ ಸರಿಯಾಗಿರುತ್ತದೆ ಎನ್ನುವ ವಿಶ್ವಾಸವಿದೆ. ಅವಳು ಎಂದಿಗೂ ಸಂವಿಧಾನೇತರ ಅಥವಾ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅವಳು ಪ್ರಬುದ್ಧೆಯಾಗಿದ್ದು, ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾಳೆ. ನನ್ನ ಮಗಳ ಮದುವೆಯಲ್ಲಿ ಡ್ಯಾನ್ಸ್ ಮಾಡಲು ಇಷ್ಟಪಡುತ್ತೇನೆʼʼ ಎಂದು ಅವರು ತಿಳಿಸಿದ್ದಾರೆ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದೂ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸೋನಾಕ್ಷಿ 2010ರಲ್ಲಿ ಸಲ್ಮಾನ್‌ ಖಾನ್‌ ಅಭಿನಯದ ʻದಬಾಂಗ್‌ʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ. ಇತ್ತೀಚೆಗೆ ತೆರೆಕಂಡ ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಈ ಹಿಂದೆ ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಕೆಲವು ವರ್ಷಗಳ ಹಿಂದೆ ಹೊರ ಬಂದಿದ್ದರು. ಈ ಲೋಕಸಭಾ ಚುನಾವಣೆಯಲ್ಲಿ ಅವರು ಪಶ್ಚಿಮ ಬಂಗಾಳದ ಅಸೋಲ್‌ ಕ್ಷೇತ್ರದಿಂದ ಟಿಎಂಸಿಯಿಂದ ಸ್ಪರ್ಧಿಸಿ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುರೇಂದ್ರಜೀತ್ ಸಿಂಗ್ ಅಹ್ಲುವಾಲಿಯಾ ವಿರುದ್ಧ 59,564 ಮತಗಳ ಅಂತರದಿಂದ ಗೆದ್ದಿದ್ದಾರೆ.

Continue Reading

ಕರ್ನಾಟಕ

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Yuva Rajkumar: ಡಿವೋರ್ಸ್‌ ನೋಟಿಸ್‌ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗ ಆರೋಪಗಳು ಹೆಚ್ಚಾಗಿವೆ. ಈಗ ಶ್ರೀದೇವಿ ಭೈರಪ್ಪ ಅವರು ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್‌ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಹೌದು, ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಮರುತ್ತರ ನೀಡಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್‌ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ರಿಪ್ಲೈ

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Continue Reading

ಕರ್ನಾಟಕ

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar: ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಇದಾದ ಬಳಿಕ ಶ್ರೀದೇವಿ ಭೈರಪ್ಪ ಅವರು ಪ್ರತಿಕ್ರಿಯಿಸಿದ್ದು, ನನಗೆ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂದಿದ್ದಾರೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಅವರ ವಕೀಲರು ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅವರು ಹೇಗೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ. ಇದಕ್ಕೆ ಈಗ ಶ್ರೀದೇವಿ ಭೈರಪ್ಪ ಅವರು ಪ್ರತ್ಯುತ್ತರ ನೀಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು/ವಾಷಿಂಗ್ಟನ್:‌ ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ವಿಚ್ಛೇದನ ಪ್ರಕರಣವು ವಿವಿಧ ಆಯಾಮಗಳನ್ನು ಪಡೆಯುತ್ತಿದೆ. ಇದೊಂದು ವಿಚ್ಛೇದನ ಪ್ರಕರಣವಾಗದೆ ಯುವ ರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗುತ್ತಿದೆ. “ಶ್ರೀದೇವಿ ಭೈರಪ್ಪ ಅವರು ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಅವರ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದು, ಇದಕ್ಕೆ ಶ್ರೀದೇವಿ ಭೈರಪ್ಪ ಪ್ರತಿಕ್ರಿಯಿಸಿದ್ದಾರೆ. “ಸತ್ಯ ಹಾಗೂ ನ್ಯಾಯಕ್ಕೆ ಗೆಲುವಿದೆ ಎಂಬುದಾಗಿ ನಾನು ನಂಬಿದ್ದೇನೆ” ಎಂಬುದಾಗಿ ಇನ್‌ಸ್ಟಾಗ್ರಾಂನಲ್ಲಿ ಶ್ರೀದೇವಿ ಭೈರಪ್ಪ ಪೋಸ್ಟ್‌ ಮಾಡಿದ್ದಾರೆ.

“ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳುಮಟ್ಟದ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ. ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳುಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಹಾಗೂ ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತೇವೆ ಎಂದು ನಾನು ನಂಬಿದ್ದೇನೆ” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Continue Reading
Advertisement
Actor Darshan
ಪ್ರಮುಖ ಸುದ್ದಿ11 mins ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ20 mins ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ22 mins ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Gold Rate Today
ಪ್ರಮುಖ ಸುದ್ದಿ29 mins ago

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Virat Kohli
ಕ್ರೀಡೆ1 hour ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Cashless Health Claim
ಮನಿ ಗೈಡ್1 hour ago

Cashless Health Claim: ಸಂಪೂರ್ಣ ನಗದು ರಹಿತ ಆರೋಗ್ಯ ವಿಮೆ ಕ್ಲೈಮ್; ಆಗಸ್ಟ್ 1ರಿಂದ ಜಾರಿ

Shatrughan Sinha
ಸಿನಿಮಾ1 hour ago

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Amol Kale
ಪ್ರಮುಖ ಸುದ್ದಿ1 hour ago

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

T20 World Cup 2024
ಕ್ರಿಕೆಟ್2 hours ago

T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Narenda Modi
Lok Sabha Election 20242 hours ago

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌