ಎಂ.ಆರ್‌. ಸೀತಾರಾಮ್‌ಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದ ಡಿ.ಕೆ. ಶಿವಕುಮಾರ್ - Vistara News

ಅವಿಭಾಗೀಕೃತ

ಎಂ.ಆರ್‌. ಸೀತಾರಾಮ್‌ಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದ ಡಿ.ಕೆ. ಶಿವಕುಮಾರ್

ಅಗ್ನಿಪಥ್‌ ಯೋಜನೆ ಖಂಡಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟಿಸಲು ಕಾಂಗ್ರೆಸ್‌ ಸಜ್ಜು ಆಗುತ್ತಿದ್ದು, ಇದರ ಸಂಬಂಧ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

‌ ಡಿ.ಕೆ.ಶಿವಕುಮಾರ್ siddaramaiah
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ನಾಯಕರ ವರ್ತನೆಗೆ ಬೇಸತ್ತು ಶುಕ್ರವಾರ ಸಮಾವೇಶ ನಡೆಸಿರುವ ಮಾಜಿ ಸಚಿವ ಎಂ.ಆರ್‌. ಸೀತಾರಾಮ್‌ ಅವರ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌, ದೇವರು ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಎಂ.ಆರ್‌. ಸೀತಾರಾಮ್‌ ನಮ್ಮ ಪಕ್ಷದ ಹಿರಿಯ ನಾಯಕರು. ಅವರು ಶಾಸಕರಾಗಿ, ಮಂತ್ರಿಯಾಗಿ ಜತೆಗೆ ಸದನದಲ್ಲಿ ಆಡಳಿತ ಪಕ್ಷದ ನಾಯಕರಾಗಿದ್ದರು. ಪಕ್ಷ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಟ್ಟಿತ್ತು. ಆದರೆ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಕಳೆದ ಬಾರಿ ವಿಧಾನ ಪರಿಷತ್‌ನ 2 ಸ್ಥಾನಗಳ ಪೈಕಿ ಹಿರಿಯರಾದ ನಾಸಿರ್ ಹಾಗೂ ಬಿ.ಕೆ ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದ್ದೆವು. ಈ ಬಾರಿ ಜೈರಾಮ್ ರಮೇಶ್ ಅವರಿಗೆ ನೀಡಿದ್ದೇವೆ. ಇದರಲ್ಲಿ ಏನಾದರೂ ತಪ್ಪಿದ್ದರೆ ಹೇಳಲಿ ಎಂದರು.

ಅಸಮಾಧಾನಿತರ ಸಭೆ ಶಿಸ್ತು ಉಲ್ಲಂಘನೆ ಆಗುವುದಿಲ್ಲವೇ ಎಂಬುದಕ್ಕೆ ಉತ್ತರಿಸಿದ ಡಿ ಕೆ ಶಿವಕುಮಾರ್‌, ಆ ವಿಚಾರವಾಗಿ ಪಕ್ಷದ ಶಿಸ್ತು ಸಮಿತಿ ನೋಡಿಕೊಳ್ಳುತ್ತದೆ. ನಮ್ಮ ಪಕ್ಷ ಅವರನ್ನು ಗುರುತಿಸಿ ಶಾಸಕ, ಮಂತ್ರಿಯನ್ನಾಗಿ ಹಾಗೂ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಟ್ಟು ಒಳ್ಳೆಯದು ಮಾಡಲಿ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಹೆಸರು ಮಾಡಿದ್ದಾರೆ. ಬಿಜೆಪಿಯವರು ಯಾರನ್ನೂ ಬಿಡುವುದಿಲ್ಲ. ಬಿಜೆಪಿಯವರು ಯಾವ ರೀತಿ ಪ್ರಯತ್ನಿಸುತ್ತಿದ್ದಾರೆ, ಚಿಕ್ಕಬಳ್ಳಾಪುರದಿಂದ ಯಾರನ್ನು ಕಳುಹಿಸಿದ್ದರು ಎಂಬ ಮಾಹಿತಿ ನನ್ನ ಬಳಿ ಇದೆ. ಅವರದು ಬಹಳ ಗೌರವಯುತ ಕುಟುಂಬ ಅವರು ಈ ರೀತಿ ಮಾಡುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ | ಕೈ ಪಕ್ಷದಿಂದ ಒಂದು ಕಾಲು ಹೊರಗಿಟ್ಟ ಎಂ.ಆರ್‌. ಸೀತಾರಾಮ್‌: ಡಿಕೆಶಿ ವಿರುದ್ಧ ಆಕ್ರೋಶ

ಅಗ್ನಿಪಥ್‌ಗೆ ರಾಜ್ಯಾದ್ಯಂತ ವಿರೋಧ

ಅಗ್ನಿಪಥ್‌ ಯೋಜನೆಯಿಂದ ಯುವಕರಿಗೆ ದೊಡ್ಡ ಅನ್ಯಾಯವಾಗುತ್ತಿದ್ದು, ಪ್ರತಿಭಟನೆ ಮಾಡುವುದು ಅನಿವಾರ್ಯ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ಸೇರಿಸಿ ಈ ಅನ್ಯಾಯ ವಿಚಾರವನ್ನು ಜನರಿಗೆ ಮುಟ್ಟಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ | Agneepath | ನೀವೂ ʼಅಗ್ನಿಪಥ್‌ʼನಲ್ಲಿ ಸಾಗಿ ಸೇನೆ ಸೇರಬೇಕೇ? ನೇಮಕ ಹೇಗೆ ನಡೆಯುತ್ತದೆ ಗೊತ್ತೆ?

ಯೋಜನೆ ಕೈಬಿಡುವ ಚಿಂತನೆ ಇಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್‌, ಸರ್ಕಾರ ಏನಾದರೂ ಹೇಳಲಿ, ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. ನಮ್ಮ ಮಕ್ಕಳು ನಾಲ್ಕು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಂತರ ಬೇರೆಯವರಿಗೆ ಸೆಕ್ಯುರಿಟಿ ಗಾರ್ಡ್ ಆಗಲು ಬಿಡುವುದಿಲ್ಲ. ಬೇಕಿದ್ದರೆ ಬಿಜೆಪಿ ನಾಯಕರ ಮಕ್ಕಳು ಅಗ್ನಿಪಥ್‌ ಮೂಲಕ ಸೇನೆ ಸೇರಲಿ. ‌

ಅವರ ಮಕ್ಕಳು ಮಾತ್ರ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಆಗಬೇಕು, ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ? ಇದು ಸರಿಯಿಲ್ಲ. ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ, ಆದರೆ ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಲಿ. ಇಷ್ಟು ದಿನ ಹೇಗಿತ್ತೋ ಹಾಗೆಯೇ ನೇಮಕ ಮಾಡಲಿ. ಯೋಧರ ವೇತನ ಹಾಗೂ ಪಿಂಚಣಿಗೆ ಸಮಸ್ಯೆ ಇದ್ದರೆ, ಸರ್ಕಾರ ಬೇರೆ ವಿಚಾರಗಳಿಗೆ ಸೆಸ್ ಹಾಕುತ್ತಿರುವಂತೆ ಇದಕ್ಕೂ ಹಾಕಲಿ ಎಂದು ತಿಳಿಸಿದರು.

ಇದನ್ನೂ ಓದಿ | ಅಗ್ನಿಪಥ್‌ನಿಂದ ಭಾರತೀಯ ರೈಲ್ವೆಗಾದ ನಷ್ಟ ಎಷ್ಟು?; ದಶಕದಲ್ಲಿ ಇಷ್ಟು ಲಾಸ್‌ ಆಗಿರಲಿಲ್ಲ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Gali Janardana Reddy : ಗಣಿ ಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಮಡಿಲಿಗೆ, ಕಲ್ಯಾಣದಲ್ಲಿ ಲಾಭ ನಿರೀಕ್ಷೆ

Gali Janardhana Reddy : ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಲಾಭವಾಗುವ ನಿರೀಕ್ಷೆ ಇದೆ.

VISTARANEWS.COM


on

Gali Janarhana Reddy
Koo

ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ (Assembly Election 2023) ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya pragati Party) ಸ್ಥಾಪನೆ ಮಾ‌ಡಿ ಸಡ್ಡು ಹೊಡೆದಿದ್ದ ಗಾಲಿ ಜನಾರ್ದನ ರೆಡ್ಡಿ (Gali Janardana Reddy) ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ (Janardhana Reddy rejoins Congress). ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ ಚುನಾವಣೆಗೆ (Lok Sabha Election 2024) ಮುನ್ನ ಬಿಜೆಪಿಗೆ ಬಲ ತುಂಬಿದ್ದಾರೆ. ಅವರ ಮರು ಸೇರ್ಪಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್‌, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಭಾಗಿಯಾಗಿದ್ದಾರೆ. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ. ಅವರು ನಾಯಕರು ಮತ್ತು ಹಿಂಬಾಲಕರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಮಾಡಿದರು.

ಮೋದಿ ಅವರ ನಾಯಕತ್ವ ಮೆಚ್ಚಿ ಬಂದಿದ್ದಾರೆ ಎಂದ ವಿಜಯೇಂದ್ರ

ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಪಕ್ಷಕ್ಕೆ ಬಂದಿರುವುದು ಬಹಳ ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು, ತಾವೇ ಕಟ್ಟಿದ ಪಕ್ಷವನ್ನು ವಿಸರ್ಜನೆ ಮಾಡಿ ಬಿಜೆಪಿಯೊಂದಿಗೆ ವಿಲೀನ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಶಕ್ತಿ ಬಂದಂತಾಗಿದೆ. ಮೋದಿ ಅವರ ನಾಯಕತ್ವ ಮೆಚ್ಚಿ ಮರು ಸೇರ್ಪಡೆ ಆಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Gali Janarhana Reddy1
ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ʻʻಲೋಕಸಭೆಯಲ್ಲಿ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ದಿನೇದಿನೆ ಮೋದಿ ಅವರ ಪರ ವಾತಾವರಣ ಹೆಚ್ಚುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ‌ʼʼ ಎಂದು ಹೇಳಿದ್ದಾರೆ.

ಬೆಳಗ್ಗೆ ಹೋಗಿ ಮಧ್ಯಾಹ್ನ ಮರಳಿ ಬಂದ ಹಾಗೆ ಅನಿಸ್ತಿದೆ ಎಂದ Gali Janardana Reddy

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಿದ್ದೇನೆ. ನನ್ನ ಕಷ್ಟದ ಕಾಲದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲಾ ಕಾರ್ಯಕರ್ತರಿಗೂ ವಂದನೆ ಸಲ್ಲಿಸ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಗೆ ಸೇರ್ಪಡೆ ಆಗಿದ್ದೇವೆ ಎಂದು ಹೇಳಿದರು.

ʻʻದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ‌ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಅಂತ ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಬಿ.ಎಸ್‌. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ‌ ಆಗಿದ್ದಾಗ ಅವರ ಕ್ಯಾಬಿನೆಟ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರೋದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ, ಕೆಲಸ ಮಾಡುತ್ತೇವೆ ಎಂದು ಹೇಳಿದರು.

ʻʻಎಲ್ಲಾ ಏಳುಬೀಳುಗಳನ್ನು ನೋಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿರೋ ಖುಷಿ ಇದೆ. ಕೆಲವು ಕಾರಣದಿಂದ ಹೊರಗೆ ಹೋಗಿದ್ದೆ. 13 ವರ್ಷಗಳ ಬಳಿಕ ವಾಪಸ್ ಬಂದಿದ್ದೇನೆ ಅನಿಸುತ್ತಿಲ್ಲ. ಬೆಳಗ್ಗೆ ಹೋಗಿ, ಮಧ್ಯಾಹ್ನ ಬಂದಿದ್ದೇನೆ ಅನಿಸುತ್ತಿದೆʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

Gali Janardana Reddy ಅಜ್ಞಾತವಾಸ ಮುಗಿಸಿ ಮರಳಿದ ಶ್ರೀರಾಮ ಎಂದ ಶ್ರೀರಾಮುಲು

ಜನಾರ್ದನ ರೆಡ್ಡಿ ಅವರ ಪಕ್ಷ ಮರು ಸೇರ್ಪಡೆಯಿಂದ ಅವರ ಗೆಳೆಯ ಹಾಗೂ ಬಳ್ಳಾರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು, ಜನಾರ್ದನ ರೆಡ್ಡಿ ಅವರು ರಾಜಕೀಯ ಅಜ್ಞಾತವಾಸ ಮುಗಿಸಿ ಬಿಜೆಪಿಗೆ ವಾಪಸು ಬರ್ತಿದ್ದಾರೆ. ಅವರು ಬಿಜೆಪಿಗೆ ಬರುವುದರಿಂದ ರಾಜಕೀಯವಾಗಿ ನಮಗೆ ಲಾಭ ಆಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ನಮಗೆ ಲಾಭ ಆಗಲಿದೆ. ನಮಗೆ ಈ ಬೆಳವಣಿಗೆ ಹೆಚ್ಚು ಶಕ್ತಿ ತಂದಿದೆ. ರಾಷ್ಟ್ರೀಯ ನಾಯಕರು ರೆಡ್ಡಿ ಬಿಜೆಪಿಗೆ ಬರಲು ಕಾರಣರಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪಿಎಂ ಮಾಡಲು ಈ ನಿರ್ಧಾರ ಎಂದು ಹೇಳಿದರು ಶ್ರೀರಾಮುಲು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಬೆಳವಣಿಗೆ ಆಗಿದ್ದರೆ ಲಾಭ ಆಗುತ್ತಿತ್ತು. ಎಲ್ಲವೂ ರಾಷ್ಟ್ರೀಯ ನಾಯಕರ ಇಚ್ಛೆಯಂತೆ ಆಗುತ್ತಿದೆ ಎಂದು ಶ್ರೀರಾಮುಲು ಹೇಳಿದರು.

Gali Janardana Reddy ಸೇರ್ಪಡೆಯಿಂದ ಬಿಜೆಪಿಗೆ ಏನು ಲಾಭ?

ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರುವುದರಿಂದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಕಮಲ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ.

ಅದರಲ್ಲೂ ಮುಖ್ಯವಾಗಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರಿಗೆ ಸಾಕಷ್ಟು ಲಾಭವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಮತಗಳು ವಿಭಜನೆ ಆಗೋದು ತಪ್ಪಲಿದೆ.

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಪ್ರಭಾವಿ ನಾಯಕರ ಕೊರತೆಯನ್ನು ರೆಡ್ಡಿ ಸೇರ್ಪಡೆ ನೀಗಲಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ಅನಿವಾರ್ಯವಾದರೆ ರೆಡ್ಡಿ ತಂತ್ರಗಳು ಬಿಜೆಪಿಗೆ ಅನುಕೂಲವಾಗಲಿದೆ. ಯಾಕೆಂದರೆ, ಇಂಥ ತಂತ್ರಗಳನ್ನು ರೂಪಿಸುವಲ್ಲಿ ರೆಡ್ಡಿ ಅವರು ನಿಪುಣರಾಗಿದ್ದಾರೆ.

Continue Reading

ಬೆಂಗಳೂರು

Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

Arun Yogiraj : ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಒಂದು ಅಪರೂಪದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಎಂದೂ ಕಾಣದ ಮುಗ್ಧ ಮುಖದ ರಾಮ ಕಾಣಿಸುತ್ತಾನೆ.

VISTARANEWS.COM


on

Arun Yogiraj at work time
Koo

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ (Sri Rama Mandir) ವಿರಾಜಮಾನನಾಗಿರುವ ಶ್ರೀ ರಾಮ ಲಲ್ಲಾನ (Ram lalla) ಸುಂದರ ಮೂರ್ತಿಯನ್ನು ನಾವೆಲ್ಲರೂ ಕಣ್ತುಂಬಿಕೊಂಡಿದ್ದೇವೆ. ಕಳೆದ ಜನವರಿ 22ರಂದು ದೇವರ ಪ್ರಾಣಪ್ರತಿಷ್ಠೆ (Rama Pranaprathishte) ನಡೆದಿದ್ದು, ಅಂದು ಮೊದಲ ಬಾರಿಗೆ ಅಲಂಕೃತ ಶ್ರೀ ರಾಮನನ್ನು ನೋಡಿದ ಜನರು ಭಗವಂತನೇ ಧರೆಗಿಳಿದಂತೆ ಕಾಣುತ್ತಿದೆ ಎಂದು ಖುಷಿಪಟ್ಟಿದ್ದರು. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರ ಭಕ್ತಿ ಮತ್ತು ಕೈಚಳಕದಿಂದ ಮೂಡಿ ಸುಂದರ ಶಿಲ್ಪ ಕಲಾಕೃತಿಯನ್ನು ಕಳೆದ 33 ದಿನಗಳಲ್ಲಿ ಒಟ್ಟು ಒಂದು ಕೋಟಿ ಜನ ನೋಡಿ ಭಾವುಕರಾಗಿದ್ದಾರೆ. ಇದರ ನಡುವೆಯೇ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಇದುವರೆಗೂ ಯಾರೂ ನೋಡಿರದ ಅಪರೂಪದ ಚಿತ್ರವೊಂದನ್ನು ‌ ತೆರೆದಿಟ್ಟಿದ್ದಾರೆ.

ಇದು ಕೆಲಸ ಪ್ರಗತಿಯಲ್ಲಿದ್ದ ಕಾಲದ ಚಿತ್ರ. ನಮಗೆ ಮೂರ್ತಿಯ ಆಯ ಅಳತೆಗಳ ಬಗ್ಗೆ ಧೈರ್ಯದ ಭಾವನೆ ಇತ್ತು. ಆದರೆ, ರಾಮ್‌ ಲಲ್ಲಾನನ್ನು ನಮ್ಮ ಸೂಕ್ಷ್ಮ ಸ್ಪರ್ಶದಿಂದ ಮೂಡಿಸಿದಾಗ ಅಂತಿಮ ಫಲಿತಾಂಶ ಅದ್ಭುತವಾಗಿ ಮೂಡಿಬಂತು ಎಂದಿದ್ದಾರೆ ಅರುಣ್‌ ಯೋಗಿರಾಜ್‌.

ಟ್ವಿಟರ್‌ನಲ್ಲಿ ತಾವು‌ ಮೂರ್ತಿ ಕೆತ್ತನೆ ಮಾಡುತ್ತಿರುವ ಚಿತ್ರವನ್ನು ಪ್ರಕಟಿಸಿರುವ ಅವರು, ರಾಮನ ಮುದ್ದಾದ ಮುಖವನ್ನು ಕೈಯಲ್ಲಿ ಹಿಡಿದಿದ್ದಾರೆ.

ಈ ಚಿತ್ರವನ್ನು ಟ್ವಿಟರ್‌ನಲ್ಲಿ ಐದು ಲಕ್ಷದ 40 ಸಾವಿರ ಜನರು ವೀಕ್ಷಿಸಿದ್ದಾರೆ. ಅದ್ಭುತ ಕಲಾಕೃತಿ ಎಂದು ಹಾಡಿ ಹೊಗಳಿಸಿದ್ದಾರೆ. ಇದು ಮೈಸೂರು ಜಿಲ್ಲೆಯಲ್ಲಿ ಸಿಕ್ಕಿದ ಕೃಷ್ಣ ಶಿಲೆಯಲ್ಲಿ ಕೆತ್ತಿದ ಶಿಲ್ಪವಾಗಿದ್ದು, ಭಾರಿ ಜನಾಕರ್ಷಣೆಯನ್ನು ಪಡೆದಿದೆ.

ಇದನ್ನೂ ಓದಿ : Pandit Pacha Saab | ಶ್ರೀರಾಮ ಕೋಟಿ ಬರೆದಿದ್ದ ಮುಸ್ಲಿಂ ಪಂಡಿತ ವಿಧಿವಶ

ರಾಮ ಲಲ್ಲಾ, ರಾಮ ಜನ್ಮಭೂಮಿ ಚಿತ್ರವಿರುವ ನಾಣ್ಯ ಬಿಡುಗಡೆ

ಈ ನಡುವೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಮ ಲಲ್ಲಾ ಮತ್ತು ರಾಮ ಮಂದಿರದ ಚಿತ್ರವಿರುವ ನಾಣ್ಯವನ್ನು ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

BJP’s national convention: ಮುಂದಿನ 1,000 ವರ್ಷ ರಾಮರಾಜ್ಯ ಸ್ಥಾಪನೆಗೆ ರಾಮ ಮಂದಿರ ನಾಂದಿ; ಬಿಜೆಪಿ ನಿರ್ಣಯದಲ್ಲಿ ಪ್ರಶಂಸೆ

BJP’s national convention : ನರೇಂದ್ರ ಮೋದಿ ನಾಯಕತ್ವದಿಂದ ಭಾರತದಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆ ಉಳಿದಿದೆ ಎಂಬುದಾಗಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

BJP national Convention
Koo

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಭಾನುವಾರ ನಡೆದ ಬಿಜೆಪಿಯ ರಾಷ್ಟ್ರೀಯ ಸಮಾವೇಶ ಮಹತ್ವದ ನಿರ್ಣಯವನ್ನು (BJP’s national convention) ಅಂಗೀಕರಿಸಲಾಗಿದ್ದು , ಮಂದಿರವು ಮುಂದಿನ 1,000 ವರ್ಷಗಳವರೆಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಗೆ ನಾಂದಿ ಹಾಡಲಿದೆ ಎಂದು ಪ್ರತಿಪಾದಿಸಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆ ನಡೆದ ದೇವಾಲಯವು ರಾಷ್ಟ್ರೀಯ ಪ್ರಜ್ಞೆಯ ಪ್ರತೀಕವಾಗಿದೆ. “ವಿಕಸಿತ್​​ ಭಾರತ್” ನ ಅಗತ್ಯಗಳನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಭವ್ಯ ಮತ್ತು ದೈವಿಕ ದೇವಾಲಯ ನಿರ್ಮಿಸುವುದು ಐತಿಹಾಸಿಕ ಮತ್ತು ಅದ್ಭುತ ಸಾಧನೆಯಾಗಿದೆ. ಇದು ಮುಂದಿನ 1,000 ವರ್ಷಗಳ ಕಾಲ ಭಾರತದಲ್ಲಿ ‘ರಾಮರಾಜ್ಯ’ ಸ್ಥಾಪನೆಗೆ ಪೂರಕವಾಗಲಿದೆ. ಹೊಸ ಶಕೆಯ ಆರಂಭವಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಇದೇ ವೇಳೆ ರಾಮನ ಪ್ರತಿಷ್ಠಾಪನೆಯನ್ನು ಯಶಸ್ವಿ ನಡೆಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ನಿರ್ಣಯದಲ್ಲಿ ಅಭಿನಂದಿಸಲಾಗಿದೆ.

ರಾಮ ಮಂದಿರವು ಭಾರತದ ದೃಷ್ಟಿಕೋನ, ತತ್ವಶಾಸ್ತ್ರ ಮತ್ತು ಸನ್ಮಾರ್ಗದ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. “ಶ್ರೀ ರಾಮ್ ದೇವಾಲಯವು ನಿಜವಾಗಿಯೂ ರಾಷ್ಟ್ರೀಯ ಪ್ರಜ್ಞೆಯ ದೇವಾಲಯವಾಗಿದೆ” ಎಂದು ಅದು ಹೇಳಿದೆ. ಭಗವಾನ್ ಶ್ರೀ ರಾಮನ ದೈವಿಕ ಪ್ರತಿಷ್ಠಾಪನೆಯನ್ನು ನೋಡಿ ಪ್ರತಿಯೊಬ್ಬ ಭಾರತೀಯ ಸಂತೋಷ ಪಟ್ಟಿದ್ದಾನೆ ಎಂದು ಉಲ್ಲೇಖದಲ್ಲಿ ತಿಳಿಸಲಾಗಿದೆ. ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯ ಪ್ರತಿಯೊಂದು ಅಂಶದಲ್ಲೂ ಭಗವಾನ್ ರಾಮ, ಸೀತೆ ಮತ್ತು ರಾಮಾಯಣವಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ

ಭಾರತದ ಸಂವಿಧಾನದ ಮೂಲ ಪ್ರತಿಯಲ್ಲಿ, ಮೂಲಭೂತ ಹಕ್ಕುಗಳ ವಿಭಾಗದಲ್ಲಿ, ವಿಜಯದ ನಂತರ ಅಯೋಧ್ಯೆಗೆ ಮರಳಿದ ನಂತರ ಭಗವಾನ್ ಶ್ರೀ ರಾಮ, ತಾಯಿ ಸೀತಾ ಮತ್ತು ಲಕ್ಷ್ಮಣ ಜಿ ಅವರ ಚಿತ್ರವಿದೆ. ಭಗವಾನ್ ಶ್ರೀ ರಾಮ ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ ಎಂಬುದಕ್ಕೆ ಅದುವೇ ಪುರಾವೆ ಎಂದು ಅದು ಹೇಳಿದೆ. ಅದೇ ರೀತಿ ರಾಮರಾಜ್ಯದ ಕಲ್ಪನೆಯು ಮಹಾತ್ಮ ಗಾಂಧಿಯವರ ಹೃದಯದಲ್ಲಿಯೂ ಇತ್ತು’ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ರಾಮರಾಜ್ಯದ ಕಲ್ಪನೆಯೇ ನಿಜವಾದ ಪ್ರಜಾಪ್ರಭುತ್ವದ ಕಲ್ಪನೆ ಎಂದು ಗಾಂಧೀಜಿ ಹೇಳುತ್ತಿದ್ದರು. ಭಗವಾನ್ ಶ್ರೀ ರಾಮನ ಆದರ್ಶಗಳನ್ನು ಅನುಸರಿಸಿ, ಪ್ರಧಾನಿ ದೇಶದಲ್ಲಿ ಉತ್ತಮ ಆಡಳಿತವನ್ನು ಸ್ಥಾಪಿಸುವ ಮೂಲಕ ನಿಜವಾದ ಅರ್ಥದಲ್ಲಿ ರಾಮರಾಜ್ಯ’ದ ಸ್ಫೂರ್ತಿಯನ್ನು ಜಾರಿಗೆ ತಂದಿದ್ದಾರೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ ಗೆಲುವಿಗಾಗಿ ಕಾರ್ಯಕರ್ತರಿಗೆ 100 ದಿನಗಳ ಟಾಸ್ಕ್‌ ಕೊಟ್ಟ ಮೋದಿ!

ಭಗವಾನ್ ರಾಮನು ತನ್ನ ಮಾತುಗಳಲ್ಲಿ ಮತ್ತು ಆಲೋಚನೆಗಳಲ್ಲಿ ತುಂಬಿದ ಮೌಲ್ಯಗಳನ್ನು ಅನುಸರಿಸಲಾಗುತ್ತಿದೆ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮತ್ತು ‘ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್​ ಅದಕ್ಕೆ ಸ್ಫೂರ್ತಿ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೋದಿಯವರ ನಾಯಕತ್ವದಲ್ಲಿ, ಭಾರತದ ಏಕತೆ ಮತ್ತು ಒಗ್ಗಟ್ಟು ಸಾರ್ವಜನಿಕರ ಭಾಗವಹಿಸುವಿಕೆಯು ಹೆಚ್ಚಿದೆ. ಅವರು ತಮ್ಮ ನೀತಿಗಳು ರಾಷ್ಟ್ರದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ.. ಕಳೆದ 10 ವರ್ಷಗಳಲ್ಲಿ ಭಾರತೀಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಐತಿಹಾಸಿಕ ಹೆಮ್ಮೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಅದು ಹೇಳಿದೆ.

Continue Reading

ಅವಿಭಾಗೀಕೃತ

Karnataka Live News: ಚಾಮುಂಡೇಶ್ವರಿ ಆಶೀರ್ವಾದ ಪಡೆದ ಅಮಿತ್‌ ಶಾ; ಲೋಕಸಭೆಗೆ ರಣಕಹಳೆ ಊದಿದ ಚಾಣಕ್ಯ!

Karnataka Live News : ರಾಜಕೀಯ ವಿದ್ಯಮಾನ, ಸರ್ಕಾರದ ಪ್ರಮುಖ ನಿರ್ಧಾರ, ಅಪಘಾತ, ಅಪರಾಧ, ಹವಾಮಾನ, ಶೈಕ್ಷಣಿಕ, ಸಾಮಾಜಿಕ ಇತ್ಯಾದಿ ನಾಡಿನ ಪ್ರಮುಖ ಸಂಗತಿಗಳ ತ್ವರಿತ ಅಪ್‌ಡೇಟ್ಸ್ ಇಲ್ಲಿವೆ.

VISTARANEWS.COM


on

By

karnataka live news karnataka today news live vistara news feb 11th
Koo
Continue Reading
Advertisement
Road Accident in Vijayanagara
ಕ್ರೈಂ1 min ago

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

RCB Funny Memes
ಕ್ರೀಡೆ28 mins ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ31 mins ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

PM Narendra Modi
Lok Sabha Election 202440 mins ago

PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಬುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Murder Case
ಬೆಳಗಾವಿ41 mins ago

Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ

gold rate today kiara
ಚಿನ್ನದ ದರ58 mins ago

Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!

hotel oterra bomb hoax
ಕ್ರೈಂ1 hour ago

bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

T20 World Cup 2024
ಕ್ರೀಡೆ1 hour ago

T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

physical abuse & murder
ಕ್ರೈಂ2 hours ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

cylinder blast in Tumkur
ತುಮಕೂರು2 hours ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ8 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌